ಕೋಲಾರ: ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು, ಸಿಸಿಟಿವಿಲಿ ಸೆರೆಯಾಯ್ತು ಖದೀಮರ ಕೈಚಳಕ – Kannada News | Kolar Crime: Thieves Steal 1 Lakh from Bike Box Near Bethamangala Police Station; Caught by Public
ಕೋಲಾರ, ಮೇ 14: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ…