ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿಸುದ್ದಿ: ದೇವಸ್ಥಾನದ ಹೊಸ ರೂಲ್ಸ್ ತಿಳಿದುಕೊಳ್ಳಿ – Kannada News | Mangaluru Kukke Subrahmanya darshan timings extended by one hour here Is Details
ದಕ್ಷಿಣ ಕನ್ನಡ, (ಮೇ 13): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (Kukke Subrahmanya Temple) ದೇವರ ದರ್ಶನ (Kukke Subrahmanya darshan) ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ (devotees) ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ….