ಅವಮಾನಕರ ಸೋಲಿನ ಆಘಾತದಲ್ಲಿರುವ ಪ್ಯಾಟ್ ಕಮ್ಮಿನ್ಸ್‌ಗೆ ಮತ್ತೊಂದು ಶಾಕ್ ನೀಡಿದ ಬಿಸಿಸಿಐ – Kannada News | IPL 2026 Pat Cummins Fined ₹12 Lakh for SRH Slow Over Rate vs gt

ಗುಜರಾತ್ ಟೈಟಾನ್ಸ್ (GT) ವಿರುದ್ಧ ಎರಡಂಕಿ ಮೊತ್ತಕ್ಕೆ ಅಂದರೆ ಕೇವಲ 86 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಸೋಲಿನ ಅವಮಾನಕ್ಕೊಳಗಾಗಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ (pat cummins) ಇದೀಗ ಬಿಸಿಸಿಐ (BCCI) ಕೂಡ ಬಿಗ್ ಶಾಕ್ ನೀಡಿದೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್ ಮುಗಿಸದ ಸನ್​ರೈಸಸ್ ತಂಡದ ನಾಯಕ​ ಪ್ಯಾಟ್ ಕಮ್ಮಿನ್ಸ್‌ಗೆ ಪಂದ್ಯ ಶುಲ್ಕವನ್ನು ದಂಡವಾಗಿ ವಿಧಿಸಲಾಗಿದೆ. ಅಂದರೆ ಕಮ್ಮಿನ್ಸ್ 12 ಲಕ್ಷ ರೂ ದಂಡ ಕಟ್ಟಬೇಕಾಗಿದೆ. ಆದಾಗ್ಯೂ, ಐಪಿಎಲ್ 2026 ರಲ್ಲಿ ಕಮ್ಮಿನ್ಸ್​ಗೂ ಮೊದಲು ಹಲವು ತಂಡಗಳ ನಾಯಕರು ಈ ತಪ್ಪಗೆ ದಂಡ ತೆತ್ತಿದ್ದಾರೆ. ಅದರಲ್ಲೂ ಪಂಜಾಬ್ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್ ಅಯ್ಯರ್ ಈಗಾಗಲೇ ಎರಡು ಬಾರಿ ನಿಧಾನಗತಿಯ ಓವರ್ ದರ ಉಲ್ಲಂಘನೆಗಾಗಿ ದಂಡ ಕಟ್ಟಿದ್ದಾರೆ.

ಕಮ್ಮಿನ್ಸ್‌ಗೆ 12 ಲಕ್ಷ ರೂ. ದಂಡ

ಪ್ಯಾಟ್ ಕಮ್ಮಿನ್ಸ್ ಮೊದಲ ಬಾರಿಗೆ ಈ ಶಿಕ್ಷೆಗೆ ಗುರಿಯಾಗಿರುವುದರಿಂದ ಅವರಿಗೆ 12 ಲಕ್ಷ ರೂಪಾಯಿಗಳನ್ನು ದಂಡವಾಗಿ ವಿಧಿಸಲಾಗಿದೆ. ನಿಧಾನಗತಿಯ ಓವರ್ ದರ ಉಲ್ಲಂಘನೆಯು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಉಲ್ಲಂಘನೆಯಾಗಿದೆ, ಇದಕ್ಕಾಗಿ ಕನಿಷ್ಠ ದಂಡ 12 ಲಕ್ಷ ರೂಪಾಯಿಗಳಾಗಿದೆ. ಇನ್ನು ಈ ಶಿಕ್ಷೆಗೆ ಗುರಿಯಾದವರಲ್ಲಿ ಪ್ಯಾಟ್ ಕಮ್ಮಿನ್ಸ್​ಗೂ ಮೊದಲು ಶ್ರೇಯಸ್ ಅಯ್ಯರ್, ಶುಭ್​ಮನ್ ಗಿಲ್, ಅಜಿಂಕ್ಯ ರಹಾನೆ, ಹಾರ್ದಿಕ್ ಪಾಂಡ್ಯ, ರುತುರಾಜ್ ಗಾಯಕ್ವಾಡ್ ಮತ್ತು ಅಕ್ಷರ್ ಪಟೇಲ್ ಕೂಡ ಸೇರಿದ್ದಾರೆ.

ಸನ್‌ರೈಸರ್ಸ್​ಗೆ ಹೀನಾಯ ಸೋಲು

ಪಂದ್ಯದ ವಿಚಾರಕ್ಕೆ ಬರುವುದಾದರೆ.. ಮೇಲೆ ಹೇಳಿದಂತೆ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 82 ರನ್‌ಗಳ ಸೋಲು ಅನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ಸಾಯಿ ಸುದರ್ಶನ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಬಲಿಷ್ಠ ಇನ್ನಿಂಗ್ಸ್‌ನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 168 ರನ್ ಗಳಿಸಿತು. ಗುಜರಾತ್ ಪರ ಸುದರ್ಶನ್ 61 ರನ್ ಗಳಿಸಿದರೆ, ಸುಂದರ್ 52 ರನ್ ಗಳಿಸಿದರು.

IPL 2026: ಎಲ್ಲವೂ ಬಂದ್; ಬಿಸಿಸಿಐ ಎಚ್ಚೆರಿಕೆಯ ಬಳಿಕ ಎಚ್ಚೆತ್ತ ಫ್ರಾಂಚೈಸಿಗಳು

ಇದಕ್ಕೆ ಉತ್ತರವಾಗಿ 169 ರನ್​ಗಳ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್‌ನ ಅದ್ಭುತ ಬೌಲಿಂಗ್‌ನಿಂದ 86 ರನ್‌ಗಳಿಗೆ ಆಲೌಟ್ ಆಯಿತು. ಸನ್‌ರೈಸರ್ಸ್ ತಂಡವು 20 ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿ, ಕೇವಲ 14.5 ಓವರ್‌ಗಳಲ್ಲಿ ಆಲೌಟ್ ಆಯಿತು. ಗುಜರಾತ್ ಪರ ರಬಾಡ ಮತ್ತು ಹೋಲ್ಡರ್ ತಲಾ ಮೂರು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:10 pm, Wed, 13 May 26

Source link

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿಸುದ್ದಿ: ದೇವಸ್ಥಾನದ ಹೊಸ ರೂಲ್ಸ್ ತಿಳಿದುಕೊಳ್ಳಿ – Kannada News | Mangaluru Kukke Subrahmanya darshan timings extended by one hour here Is Details

ದಕ್ಷಿಣ ಕನ್ನಡ, (ಮೇ 13): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (Kukke Subrahmanya  Temple) ದೇವರ ದರ್ಶನ (Kukke Subrahmanya darshan) ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ (devotees) ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ದಿನ ಭಕ್ತರಿಗೆ ಮಧ್ಯಾಹ್ನ ಇನ್ನೊಂದು ಗಂಟೆ ಹೆಚ್ಚುವರಿ ದರ್ಶನದ ಅವಕಾಶ ದೊರಕಿದೆ. ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳಿಗಾಗಿ ಪ್ರತಿದಿನ ಭಕ್ತರ ದಟ್ಟಣೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ದರ್ಶನ ಸಮಯ ವಿಸ್ತರಣೆ ಮಹತ್ವದ ನಿರ್ಧಾರವಾಗಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1

ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಮಾತನಾಡಿ, ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಭಕ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಹೆಚ್ಚುವರಿ ಒಂದು ಗಂಟೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿರುವ ಹೊಸ ನಿರ್ಣಯದಂತೆ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಇದರೊಂದಿಗೆ ಭಕ್ತರಿಗೆ ಹೆಚ್ಚುವರಿ ಒಂದು ಗಂಟೆ ದರ್ಶನ ಸೌಲಭ್ಯ ದೊರೆಯಲಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಪ್ರತಿದಿನ ಬೆಳಗ್ಗೆ 6.30ರಿಂದ ಮಧ್ಯಾಹ್ನ 2.00ರವರೆಗೆ ಹಾಗೂ ಮಧ್ಯಾಹ್ನ 3.00ರಿಂದ ರಾತ್ರಿ 8.30ರವರೆಗೆ ಭಕ್ತರು ದೇವರ ದರ್ಶನ ಪಡೆಯಬಹುದು. ಇನ್ನು ಶ್ರೀ ದೇವರ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ ನಡೆಯುವ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಾವಧಿಗೆ ದರ್ಶನ ಸ್ಥಗಿತಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Tv9 Kannada News Live: ಹೇಳಿದಂತೆ ಗುಡ್​​ನ್ಯೂಸ್​​ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್​​ಗೆ ಕಸಿವಿಸಿ; ಈ ಹೊತ್ತಿನ ಟಾಪ್​​ 5 ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Karnataka DyCM DK Shivakumar Gives Good News For Bengalurians; Delay in Electing New Kerala CM Sparks Outrage

ಬೆಂಗಳೂರು, ಮೇ 13: ರಾಜಧಾನಿ ಬೆಂಗಳೂರು ನಿವಾಸಿಗರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಗ್​​ ನ್ಯೂಸ್​​ ಒಂದನ್ನು ನೀಡಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ (Property Ownership Drive) ಮಾಡುವುದಾಗಿ ಘೋಷಿಸಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಮೇ 16ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದು, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ. ನಗರದಲ್ಲಿ ಕೆಲವರು ಪ್ಲ್ಯಾನ್​ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತವರ ಅನುಕೂಲಕಕ್ಕಾಗಿ ಈ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದವರು ತಿಳಿಸಿದ್ದಾರೆ.

ರಾಹುಲ್​​-ಪ್ರಿಯಾಂಕಾ ವಿರುದ್ಧ ಪೋಸ್ಟರ್​​

ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಹೊರಗೆ ಬುಧವಾರ ರಾಹುಲ್​​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧದ ಸಂದೇಶಗಳಿರುವ ಪೋಸ್ಟರ್‌ಗಳು ರಾರಾಜಿಸಿವೆ. ವಿಧಾನಸಭೆ ಚುನಾವಣೆಯಲ್ಲಿ ಯುನೈಟೆಡ್ ಡೆಮೋಕ್ರೆಟಿಕ್​​ ಫ್ರಂಟ್​​ (ಯುಡಿಎಫ್​​) ಭರ್ಜರಿ ಗೆಲುವು ಸಾಧಿಸಿದ್ದರೂ, ಕೇರಳ ಮುಖ್ಯಮಂತ್ರಿಯ ಹೆಸರನ್ನು ಘೋಷಿಸುವಲ್ಲಿ ವಿಳಂಬವಾಗಿರುವುದರಿಂದ ಅಸಮಾಧಾನ ಹೆಚ್ಚಾಗಿದೆ. ರಾಹುಲ್ ಮತ್ತು ಪ್ರಿಯಾಂಕಾ, ವಯನಾಡ್‌ನ್ನು ಮರೆತುಬಿಡಿ. ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಬರೆದಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್​​ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬರೆಯಲಾಗಿದೆ. ಮೂರನೇ ಪೋಸ್ಟರ್‌ನಲ್ಲಿ ಇದು ಎಚ್ಚರಿಕೆ ಅಲ್ಲ. ಈ ತಪ್ಪಿಗಾಗಿ ಕೇರಳ ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ

ವಿವಾದಿತ ಆದೇಶ ಹಿಂಪಡೆದ ವಿಜಯ್​​

ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್​ ಹಿಂಪಡೆದಿದ್ದಾರೆ. ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಕೆ), ಕಮ್ಯೂನಿಷ್ಟ್​​ ಪಾರ್ಟಿ ಆಫ್​​ ಇಂಡಿಯಾ-ಮ್ಯಾಟ್ರಿಕ್ಸ್​​ (ಸಿಪಿಐಎಂ) ಹಾಗೂ ಕಮ್ಯೂನಿಷ್ಟ್​​ ಪಾರ್ಟಿ ಆಫ್​​ ಇಂಡಿಯಾ (ಸಿಪಿಐ) ಈ ಬಗ್ಗೆ ಟೀಕಿಸಿದ್ದವು. ಸರ್ಕಾರ ವೈಜ್ಞಾನಿಕ ಹಾಗೂ ತಾರ್ಕಿಕ ಚಿಂತನೆಗೆ ಆದ್ಯತೆ ನೀಡಬೇಕು, ಮೂಢನಂಬಿಕೆಗಳಿಗೆ ಅವಕಾಶ ಕೊಡಬಾರದು ಎಂಬ ಮಾತುಗಳು ಕೇಳಿಬಂದಿದ್ದವು.

ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಗಳ ತೀವ್ರ ಕೊರತೆ ಎದುರಾಗಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ತಾಲೂಕು ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಜ್ವರ, ನೆಗಡಿ ಮತ್ತು ಗ್ಯಾಸ್ಟ್ರಿಕ್ ಮಾತ್ರೆಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ಆಂಟಿಬಯೋಟಿಕ್ ಮಾತ್ರೆಗಳು ಲಭ್ಯವಿಲ್ಲ. ವೈದ್ಯರು ಬರೆದುಕೊಡುವ ಬಹುತೇಕ ಮದ್ದುಗಳು ಆಸ್ಪತ್ರೆಯ ಫಾರ್ಮಸಿಯಲ್ಲಿ ಸಿಗುತ್ತಿಲ್ಲ. ಹೀಗಾಗಿ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಗೆ ಹಣ ಒದಗಿಸುವ ಭರಾಟೆಯಲ್ಲಿ ಆರೋಗ್ಯ ಇಲಾಖೆಯ ಮೆಡಿಸಿನ್‌ಗಳಿಗೆ ಕತ್ತರಿ ಹಾಕಿದೆಯೇ ಎಂಬ ಅನುಮಾನವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

35 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ

ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ (21) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಎಂಬುದು ಗೊತ್ತಾಗಿದ್ದು, ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವ್ಯಾಸಂಗ ಮಅಡುತ್ತಿದ್ದಾಳೆ ಎಂಬುದು ತಿಳಿದುಬಂದಿದೆ. ಮಂಗಳವಾರ (ಮೇ 12) ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಲ್ಲು ಅರ್ಜುನ್ ‘ಆಸ್ತಿ’ ಎಂದವನಿಗೆ ಸರಿಯಾಗಿ ಝಾಡಿಸಿದ ನಟಿ – Kannada News | Seerat Kapoor slams troll who call her Allu Arjun’s property

ಸಿನಿಮಾರಂಗ (Cinema) ಪುರುಷ ಪ್ರಧಾನವಾದುದು, ಇಲ್ಲಿ ಮಹಿಳೆಯರು ವಿಶೇಷವಾಗಿ ನಾಯಕಿಯರು ತೀವ್ರ ಟೀಕೆ, ವಿಮರ್ಶೆ, ನಿಂದನೆ, ದೌರ್ಜನ್ಯಕ್ಕೆ ಒಳಗಾಗುತ್ತಾರೆ. ನಟಿಯರನ್ನು ಕೀಳಾಗಿ ನಡೆಸಿಕೊಂಡಿರುವ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಇವೆ. ಈ ಸಾಮಾಜಿಕ ಜಾಲತಾಣ ಬಂದ ಬಳಿಕವಂತೂ ನಟಿಯರ ಬಗ್ಗೆ ನಿಂದನೆ, ಕೀಳು ಹೇಳಿಕೆ ಇನ್ನಷ್ಟು ಹೆಚ್ಚಾಗಿದೆ. ಈ ಆನ್​​ಲೈನ್ ಕಿರುಕುಳದಿಂದ ಯಾವ ನಟಿಯರೂ ತಪ್ಪಿಸಿಕೊಳ್ಳಲಾಗಿಲ್ಲ. ಎಷ್ಟೋ ಮಂದಿ ನಟಿಯರು, ‘ಇದು ಸಾಮಾನ್ಯ’ ಎಂದು ಕೈತೊಳೆದು ಸುಮ್ಮನಾಗಿಬಿಟ್ಟಿದ್ದಾರೆ. ಆದರೆ ಕೆಲವರು ಮಾತ್ರ ಆನ್​​ಲೈನ್ ಕಿರುಕುಳದ ವಿರುದ್ಧ ಗಟ್ಟಿ ದನಿ ಎತ್ತುತ್ತಿದ್ದಾರೆ.

ನಟಿ ಸೀರತ್ ಕಪೂರ್ ಇಂಥಹಾ ಒಂದು ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಸೀರತ್ ಕಪೂರ್ ಗ್ಲಾಮರಸ್ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ. ಕೆಲ ದಿನಗಳ ಹಿಂದೆ ಸೀರತ್ ಅವರು ನಟ ಅಲ್ಲು ಅರ್ಜುನ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದರು. ಖಾಸಗಿ ವಿಮಾನದಲ್ಲಿ ಅಲ್ಲು ಅರ್ಜುನ್ ಪಕ್ಕ ಕೂತು ತೆಗೆಸಿಕೊಂಡಿರುವ ಚಿತ್ರ ಅದಾಗಿತ್ತು. ಚಿತ್ರದಲ್ಲಿ ಸೀರತ್ ಕಪೂರ್ ತುಸು ಹಾಟ್ ಆಗಿ ಕಾಣುತ್ತಿದ್ದರು. ಅಲ್ಲು ಅರ್ಜುನ್ ಎಂದಿನಂತೆ ಸ್ಟೈಲ್ ಆಗಿ ಸ್ಮೈಲ್ ಮಾಡುತ್ತಾ ಫೋಟೊಗೆ ಫೋಸು ನೀಡಿದ್ದರು.

ಆದರೆ ಈ ಚಿತ್ರಕ್ಕೆ ಹಲವರು ಹಲವು ರೀತಿಯ ಕಮೆಂಟ್​​ಗಳನ್ನು ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ‘ಸೀರತ್, ಅಲ್ಲು ಅರ್ಜುನ್​ರ ‘ಆಸ್ತಿ’ (ಪ್ರಾಪರ್ಟಿ)’ ಎಂದು ಕಮೆಂಟ್ ಮಾಡಿದ್ದ. ನೆಟ್ಟಿಗನ ಕಮೆಂಟಿನಿಂದ ಸಿಟ್ಟಿಗೆದ್ದ ನಟಿ, ಆತನಿಗೆ ಅಲ್ಲಿಯೇ ಉತ್ತರ ಕೊಟ್ಟಿದ್ದಾರೆ. ‘ಒಬ್ಬ ಮಹಿಳೆ ಯಾವುದೇ ವ್ಯಕ್ತಿಯ ಆಸ್ತಿ ಆಗಿರುವುದಿಲ್ಲ. ಆಕೆಗೆ ಅವಳದ್ದೇ ಆದ ವ್ಯಕ್ತಿತ್ವ ಇದೆ, ಅವಳದ್ದೇ ಆದ ಗುರುತು ಇದೆ. ಆಕೆ ಆಕೆಗಷ್ಟೇ ಸ್ವಂತ, ಬೇರೆ ಯಾರಿಗೂ ಅಲ್ಲ, ಮಹಿಳೆಯ ಘನತೆಯನ್ನು ಗೌರವಿಸಿ, ಆಕೆಯನ್ನು ವಸ್ತುವಿನಂತೆ ನೋಡಬೇಡಿ’ ಎಂದಿದ್ದಾರೆ.

ಇದನ್ನೂ ಓದಿ:ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ವಿಶೇಷ ಅನುಮತಿ ನೀಡಿದ ಸಿಎಂ ವಿಜಯ್

ಸೀರತ್ ಕಪೂರ್, ಪಂಜಾಬಿ ಮೂಲದವರಾದರೂ ತೆಲುಗಿನ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ರನ್ ರಾಜಾ ರನ್’, ‘ಟೈಗರ್’, ‘ಕೊಲಂಬಸ್’, ‘ರಾಜು ಗಾರಿ ಗದಿ’, ‘ಒಕ್ಕ ಕ್ಷಣಂ’, ‘ಮನಮೆ’, ‘ಉಷಾ ಪರಿಣಯಂ’ ಇನ್ನೂ ಕೆಲ ಸಿನಿಮಾಗಳಲ್ಲಿ ಸೀರತ್ ಅವರು ನಾಯಕಿಯಾಗಿ ನಟಿಸಿದ್ದಾರೆ. 2014 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಸೀರತ್ ಕಪೂರ್, ಈ ವರೆಗೆ ಕೇವಲ ಎರಡು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದು, 10ಕ್ಕೂ ಹೆಚ್ಚು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಧೋನಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಸಿಹಿ ಸುದ್ದಿ – Kannada News | Dhoni Injury Status: Will Thala Play Next CSK Match or His Last IPL 2026 Game?

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್ 2026 (IPL 2026) ರಲ್ಲಿ ಇದುವರೆಗೆ 11 ಪಂದ್ಯಗಳನ್ನು ಆಡಿದೆ. ಅಂದರೆ ಲೀಗ್ ಹಂತದಲ್ಲಿ ಎಲ್ಲೋ ಆರ್ಮಿಗೆ ಇನ್ನು ಉಳಿದಿರುವುದು ಕೇವಲ ಮೂರೇ ಮೂರು ಪಂದ್ಯಗಳು. ಈ ಮೂರು ಪಂದ್ಯಗಳನ್ನು ಗೆದ್ದರೂ ಸಿಎಸ್​ಕೆ ಪ್ಲೇಆಫ್​ಗೇರಬೇಕೆಂದರೆ ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗಿದೆ. ಇದೆಲ್ಲದರ ನಡುವೆ ಕೋಟ್ಯಾಂತರ ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ ಎಂದರೆ, ಧೋನಿ (MS Dhoni) ಯಾವಾಗ ಆಡುತ್ತಾರೆ? ಎಂಬುದು. ಪ್ರಸ್ತುತ ಧೋನಿ, ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿ ಇಲ್ಲಿಯವರೆಗೆ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಹೀಗಿರುವಾಗ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್​ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದಲ್ಲಾದರೂ ಧೋನಿ ಕಣಕ್ಕಿಳಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ವಾಸ್ತವವಾಗಿ ಐಪಿಎಲ್ ಆರಂಭಕ್ಕೂ ಮುನ್ನವೇ ಧೋನಿ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಧೋನಿ ಆರಂಭಿಕ ಕೆಲವು ಪಂದ್ಯಗಳನ್ನು ಆಡುವುದಿಲ್ಲ ಎಂದು ಫ್ರಾಂಚೈಸಿ ಹೇಳಿತ್ತು. ಆದರೀಗ ಲೀಗ್ ಹಂತ ಮುಗಿಯುವುದಕ್ಕೆ ಬಂದರೂ ಧೋನಿ ಆಡುವುದರ ಬಗ್ಗೆ ಸುಳಿವು ಸಿಕ್ಕಿಲ್ಲ. ಇದೀಗ ಧೋನಿ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿ ಸಿಕ್ಕಿದ್ದು, ಲಕ್ನೋ ವಿರುದ್ಧದ ಪಂದ್ಯಕ್ಕೆ ಧೋನಿ ತಂಡದೊಂದಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಇದೆ.

CSK CEO ಹೇಳಿದ್ದೇನು?

ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕ್ರಿಕ್‌ಬಜ್ ವರದಿ ಮಾಡಿದ್ದು, ಲಕ್ನೋಗೆ ಸಿಎಸ್​ಕೆ ತಂಡ ಪ್ರಯಾಣ ಮಾಡಲಿರುವ ಇಂಡಿಗೊ ವಿಮಾನದಲ್ಲಿ ಒಟ್ಟು 60 ಟಿಕೆಟ್‌ಗಳನ್ನು ಬುಕ್ ಮಾಡಲಾಗಿದೆ. ಈ 60 ಪ್ರಯಾಣಿಕರಲ್ಲಿ ಧೋನಿ ಕೂಡ ಸೇರಿದ್ದಾರೆ. ಅಂದರೆ ಧೋನಿ ತಂಡದೊಂದಿಗೆ ಲಕ್ನೋಗೆ ಪ್ರಯಾಣಿಸಲ್ಲಿದ್ದು, ಅಲ್ಲಿ ಅವರು ತಂಡದೊಂದಿಗೆ ಇರಲಿದ್ದಾರೆ. ಆದಾಗ್ಯೂ ಧೋನಿ ಈ ಪಂದ್ಯದಲ್ಲಿ ಆಡುತ್ತಾರಾ? ಅಥವಾ ಇಲ್ಲವಾ ಎಂಬುದು ಇನ್ನು ಖಚಿತವಾಗಿಲ್ಲ.

RCB vs MI: ಒಂದೇ ಪಂದ್ಯದಲ್ಲಿ ಒಟ್ಟಿಗೆ ಧೋನಿ ದಾಖಲೆ ಮುರಿದ ರೋಹಿತ್, ಕೊಹ್ಲಿ

ತವರಿನಲ್ಲಿ ಧೋನಿ ಕೊನೆ ಪಂದ್ಯ?

ಒಂದು ವೇಳೆ ಧೋನಿ ಲಕ್ನೋ ವಿರುದ್ಧವೂ ಕಣಕ್ಕಿಳಿಯದಿದ್ದರೆ, ಮೇ 18 ರಂದು ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಧೋನಿ ಆಡುವ ಸಾಧ್ಯತೆಗಳಿವೆ. ಏಕೆಂದರೆ ಸಿಎಸ್​ಕೆ ತನ್ನ ತವರು ನೆಲವಾದ ಎಂಎ ಚಿದಂಬರಂ ಮೈದಾನದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಬಳಿಕ ಸಿಎಸ್​ಕೆ ಈ ಆವೃತ್ತಿಯಲ್ಲಿ ಯಾವ ಪಂದ್ಯವನ್ನು ಇಲ್ಲಿ ಆಡುವುದಿಲ್ಲ. ಹೀಗಾಗಿ ನಿವೃತ್ತಿ ಅಂಚಿನಲ್ಲಿರುವ ಧೋನಿ, ಸಿಎಸ್​ಕೆಯ ತವರು ನೆಲದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿ ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:47 pm, Wed, 13 May 26

Source link

ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷಗಳ ಬಳಿಕ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್​​! – Kannada News | Kabaddi Craze Reunites Missing Mandya Boy With Family After 4 Years

ಕುಟುಂಬಸ್ಥರ ಜೊತೆ ಪತ್ತೆಯಾಗಿರುವ ಬಾಲಕImage Credit source: Tv9 Kannada

ಮಂಡ್ಯ, ಮೇ 13: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರೂ ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷ ಅಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ ಮಾಡುವಲ್ಲಿ ಮಹತ್ವದ ಪಾತ್ರವಹಿಸಿದೆ.

ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡರ 9ನೇ ತರಗತಿ ಓದುತ್ತಿದ್ದ ತಮ್ಮ ಪುತ್ರ ಕಿಶೋರ್​​ನನ್ನು ಮಂಡ್ಯ ತಾಲೂಕಿನ ತಂಗಳಗೆರೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಿಟ್ಟು ಹೋಗಿದ್ದರು. ಮತ್ತೆ 20 ದಿನ‌ ಬಿಟ್ಟು ಶಾಲೆಗೆ ಬಂದು ಮಗನನ್ನ ಊರಿಗೆ ಕರೆದುಕೊಂಡು ಹೋಗುತ್ತೇನೆ ಎಂದು ಅವರು ತಿಳಿಸಿದಾಗ, ಆತ 20 ದಿನದಿಂದ ಶಾಲೆಗೆ ಬಂದಿಲ್ಲ ಎಂಬ ಉತ್ತರ ಬಂದಿದೆ. ಈ ವೇಳೆ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ 2022ರ ಆಗಸ್ಟ್​​ 10ರಂದು ಬಾಲಕ ಶಾಲೆಗೆ ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಆದರೆ ಆತ ಸ್ಕೂಲ್​​ಗೆ ತೆರಳದ ಕಾರಣ ಹೋಗಿದ್ದೆಲ್ಲಿಗೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಹಡುಕಾಟ ನಡೆಸಿದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆ ಬಳಿಕ ಪೊಲೀಸರು ಈ ವಿಚಾರವಾಗಿ ಕಳೆದ ನಾಲ್ಕು ವರ್ಷದಿಂದ ಬಾಲಕನ ಹುಡುಕಾಟ ನಡೆಸುತ್ತಿದ್ದು, ಈ ವೇಳೆ ಬೆಂಗಳೂರಿನಲ್ಲಿ ಕಿಶೋರ್ ಪತ್ತೆಯಾಗಿದ್ದಾನೆ‌.

ಇದನ್ನೂ ಓದಿ: ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ; 14 ಎಫ್​​ಐಆರ್​​

ಅಷ್ಟಕ್ಕೂ ಕಿಶೋರ್​​ನನ್ನು ಯಾರೂ ಅಪಹರಣ ಮಾಡಿರಲಿಲ್ಲ. ಬದಲಿಗೆ ಓದಲು ಇಷ್ಟ ಇಲ್ಲದ ಕಾರಣ ಆತನೇ ಶಾಲೆ ಕಾಂಪೌಂಡ್ ಹಾರಿ ಹೋಗಿ ಬೆಂಗಳೂರು ಸೇರಿದ್ದ. ಹಲವೆಡೆ ಹೋಟೆಲ್​​ನಲ್ಲಿ ಕೆಲಸ ಮಾಡಿ ನಾಲ್ಕು ವರ್ಷ ಜೀವನ ಮಾಡಿದ್ದ‌ ಎಂಬುದು ಗೊತ್ತಾಗಿದೆ. ಕಬಡ್ಡಿ ಮೇಲೆ ವಿಶೇಷ ಆಸಕ್ತಿ ಹೊಂದಿದ್ದ ಕಿಶೋರ್​​ ಸ್ಥಳೀಯ ಯುವಕರೊಂದಿಗೆ ಲೋಕಲ್ ಟೂರ್ನಮೆಂಟ್ ಆಡುತ್ತಿದ್ದ ವೇಳೆ ಪರಿಚಯಸ್ಥರ ಕಣ್ಣಿಗೆ ಬಿದ್ದಿದ್ದಾನೆ. ಈ ಮಾಹಿತಿಯ ಆಧಾರದಲ್ಲಿ ಪೊಲೀಸರು ಕೊನೆಗೂ ಕಿಶೋರ್​​ನನ್ನು ಹುಡುಕಿ ಗ್ರಾಮಕ್ಕೆ ವಾಪಸ್​​ ಕರೆತಂದಿದ್ದಾರೆ ಎನ್ನಲಾಗಿದೆ. ಆ ಮೂಲಕ ಬಾಲಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಾಸ್ಟೆಲ್ ಮಾಲೀಕರಿಗೆ ಮಗ ಕಳುಹಿಸಿದ ಪೇಪರ್​ನಿಂದ ಬೆಳಕಿಗೆ ಬಂದಿತ್ತು ನೀಟ್ ಪೇಪರ್ ಸೋರಿಕೆ ಪ್ರಕರಣ – Kannada News | NEET Exam Paper Leak 2026, know how a guess paper helped this case to be uncovered

ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳುImage Credit source: PTI

ನವದೆಹಲಿ, ಮೇ 12: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ (Neet paper leak case) ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಸರ್ಕಾರವು ಮರುಪರೀಕ್ಷೆಗೆ ಆದೇಶಿಸಿದೆ. ಕಷ್ಟಪಟ್ಟು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಮತ್ತೊಮ್ಮೆ ಬರೆಯುವ ತಲೆನೋವು ಪಡೆದಿದ್ದಾರೆ. ಇದೇ ವೇಳೆ, ಗಂಭೀರವೆನಿಸಿರುವ ಈ ಪ್ರಕರಣ ಹೇಗೆ ಬೆಳಕಿಗೆ ಬಂತು ಎನ್ನುವ ವಿಚಾರ ಬಹಳ ಕುತೂಹಲ ಮೂಡಿಸಿದೆ. ಹಾಸ್ಟೆಲ್ ಮಾಲೀಕರಿಗೆ ಆತನ ಮಗ ಕಳುಹಿಸಿದ ಪೇಪರ್​ವೊಂದು ಈ ಪ್ರಕರಣ ಬೆಳಕಿಗೆ ಬರಲು ಕಾರಣವಾಗಿದೆ.

ರಾಜಸ್ಥಾನದ ಸೀಕರ್‌ನಲ್ಲಿ (Sikar) ಹಾಸ್ಟೆಲ್ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮಗ ಕೇರಳದಲ್ಲಿ ಎಂಬಿಬಿಎಸ್ ಓದುತ್ತಿರುತ್ತಾನೆ. ಮೇ 3ರಂದು ನಡೆಯಬೇಕಿದ್ದ ನೀಟ್ ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು, ಅಂದರೆ ಮೇ 2ರ ರಾತ್ರಿ 11 ಗಂಟೆಗೆ, ಈ ವಿದ್ಯಾರ್ಥಿಯು ತನ್ನ ತಂದೆಗೆ ವಾಟ್ಸಾಪ್ ಮೂಲಕ “ಗೆಸ್ ಪೇಪರ್” (ಅಂದಾಜು ಪ್ರಶ್ನೆ ಪತ್ರಿಕೆ) ಒಂದನ್ನು ಕಳುಹಿಸಿರುತ್ತಾನೆ. ತನ್ನ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಬಹುದು ಎಂಬುದು ಅವನ ಉದ್ದೇಶವಾಗಿತ್ತು.

ಮರುದಿನ ಪರೀಕ್ಷೆ ಮುಗಿದ ನಂತರ, ಹಾಸ್ಟೆಲ್ ಮಾಲೀಕರು ತಮಗೆ ಪರಿಚಿತರಿದ್ದ ರಸಾಯನಶಾಸ್ತ್ರ ಶಿಕ್ಷಕರೊಬ್ಬರಿಗೆ ಈ ಪೇಪರ್ ತೋರಿಸಿದರು. ಪರಿಶೀಲಿಸಿದಾಗ, ಅಸಲಿ ಪ್ರಶ್ನೆ ಪತ್ರಿಕೆಯಲ್ಲಿದ್ದ 204 ಪ್ರಶ್ನೆಗಳ ಪೈಕಿ 135 ಪ್ರಶ್ನೆಗಳು ಈ “ಗೆಸ್ ಪೇಪರ್”ನಲ್ಲಿ ಇದ್ದಂತೆಯೇ ಇರುವುದು ಕಂಡುಬಂದಿತು.

ಇದನ್ನೂ ಓದಿ: ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ

ಈ ವಿಷಯವನ್ನು ತಿಳಿದ ಹಾಸ್ಟೆಲ್ ಮಾಲೀಕರು ಮತ್ತು ಶಿಕ್ಷಕರು ಕೂಡಲೇ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದರು. ಆದರೆ, ಸಿಕರ್ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದರು. ಪರೀಕ್ಷೆ ಮುಗಿದ ನಂತರ ದೂರು ನೀಡುತ್ತಿರುವುದರಿಂದ ನಿಮ್ಮ ಉದ್ದೇಶವೇ ಸರಿಯಿಲ್ಲ ಎಂದು ಪೊಲೀಸರು ಅವರನ್ನು ವಾಪಸ್ ಕಳುಹಿಸಿದ್ದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಇಮೇಲೆ ಕಳುಹಿಸಿದಾಗ ಸಿಕ್ಕಿತು ಟ್ವಿಸ್ಟ್

ಪೊಲೀಸರಿಂದ ಸ್ಪಂದನೆ ಸಿಗದಿದ್ದಾಗ, ಅವರು ನೇರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಇಮೇಲ್ ಮಾಡಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ NTA, ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡಕ್ಕೆ (SOG) ತನಿಖೆ ನಡೆಸಲು ಸೂಚಿಸಿತು.

ತನಿಖೆಯ ವೇಳೆ ಈ ಜಾಲವು ಹರಿಯಾಣ, ಬಿಹಾರ ಮತ್ತು ಮಹಾರಾಷ್ಟ್ರದವರೆಗೂ ಹರಡಿರುವುದು ಪತ್ತೆಯಾಯಿತು. ನಾಸಿಕ್‌ನ ಶುಭಂ ಖೈರ್ನಾರ್ ಎಂಬ ವಿದ್ಯಾರ್ಥಿಯಿಂದ ಈ ಪತ್ರಿಕೆ ಸೋರಿಕೆಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಈ ಗಂಭೀರ ಲೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು NEET UG 2026 ಪರೀಕ್ಷೆಯನ್ನು ರದ್ದುಗೊಳಿಸಿದೆ. ಈಗ ಈ ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐ (CBI) ವಹಿಸಿಕೊಂಡಿದೆ. ಪರೀಕ್ಷೆಯನ್ನು ಶೀಘ್ರದಲ್ಲೇ ಮರುನಡೆಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಪರೀಕ್ಷೆ ಮತ್ತೆ ನಡೆಸುವ ನಿರ್ಧಾರದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ. ಕೆಲವರು ಮರುಪರೀಕ್ಷೆಗಳನ್ನು ಸ್ವಾಗತಿಸಿದ್ದಾರೆ. ಇನ್ನೂ ಕೆಲವರು, ಮರುಪರೀಕ್ಷೆಯಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Mangaluru Job Fair: ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; ಮಂಗಳೂರಿನಲ್ಲಿ ನೇರ ಸಂದರ್ಶನ – Kannada News | Mangaluru Job Fair 2026: Direct Interviews for Expert College and Mandovi Motors

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಿರುದ್ಯೋಗಿಗಳಿಗೆ ಸುವರ್ಣಾವಕಾಶವೊಂದು ಇಲ್ಲಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಪ್ರತಿಷ್ಠಿತ ಸಂಸ್ಥೆಗಳಾದ ಎಕ್ಸ್‌ಪರ್ಟ್ ಕಾಲೇಜು ಮತ್ತು ಮಾಂಡೋವಿ ಮೋಟಾರ್ಸ್ ಸಹಯೋಗದೊಂದಿಗೆ “ನೇರ ಸಂದರ್ಶನ” ಕಾರ್ಯಕ್ರಮವನ್ನು ಆಯೋಜಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

ಲಭ್ಯವಿರುವ ಹುದ್ದೆಗಳು ಮತ್ತು ಅರ್ಹತೆ:

ಈ ಸಂದರ್ಶನದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಕ್ಸ್‌ಪರ್ಟ್ ಕಾಲೇಜಿನಲ್ಲಿ ‘ಫಿಸಿಕ್ಸ್ ಲ್ಯಾಬ್ ಇನ್‌ಸ್ಟ್ರಕ್ಟರ್’ ಹುದ್ದೆಗೆ ಬಿ.ಎಸ್ಸಿ (ಫಿಸಿಕ್ಸ್) ಪದವೀಧರರು ಬೇಕಾಗಿದ್ದಾರೆ. ಅದೇ ರೀತಿ, ಮಾಂಡೋವಿ ಮೋಟಾರ್ಸ್ ಕಂಪನಿಯಲ್ಲಿ ‘ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್’ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಅಥವಾ ಯಾವುದೇ ಪದವಿ ಹೊಂದಿರುವ ಮತ್ತು ವಾಹನ ಚಾಲನಾ ಪರವಾನಗಿ (Driving License) ಇರುವ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಸಂದರ್ಶನದ ಸಮಯ ಮತ್ತು ಸ್ಥಳದ ಮಾಹಿತಿ:

ಆಸಕ್ತ ಅಭ್ಯರ್ಥಿಗಳು ದಿನಾಂಕ 16-05-2026 ರಂದು ನಡೆಯುವ ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನವು ಅಂದು ಬೆಳಿಗ್ಗೆ 10:00 ಗಂಟೆಯಿಂದ ಆರಂಭವಾಗಿ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದ ಕಟ್ಟಡದಲ್ಲಿರುವ ‘ಪ್ರಜಾ ಸೌಧ’ದ ನೆಲಮಹಡಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ (ಕೊಠಡಿ ಸಂಖ್ಯೆ: 04) ಹಾಜರಾಗಬೇಕು. ಈ ನೇಮಕಾತಿ ಕುರಿತು ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಅಭ್ಯರ್ಥಿಗಳು ಕಚೇರಿಯ ದೂರವಾಣಿ ಸಂಖ್ಯೆ 0824 2457139 ಅನ್ನು ಸಂಪರ್ಕಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:28 pm, Wed, 13 May 26

Source link

ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ – Kannada News | West Bengal CM Suvendu Adhikari to retain Bhabanipur seat announces resignation For Nandigram

ಕೊಲ್ಕತ್ತಾ, ಮೇ 13: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಭವಾನಿಪುರ ವಿಧಾನಸಭಾ ಸ್ಥಾನದ ಶಾಸಕನಾಗಿ ಉಳಿಯುವುದಾಗಿ ಘೋಷಿಸಿದ್ದಾರೆ. ಅವರು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವು ದಿನಗಳ ನಂತರ ಅವರ ಈ ನಿರ್ಧಾರ ಹೊರಬಿದ್ದಿದೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಭವಾನಿಪುರ ಮತ್ತು ನಂದಿಗ್ರಾಮ ಎರಡೂ ಸ್ಥಾನಗಳನ್ನು ಗೆದ್ದ ಅವರು ಇಂದು ಭವಾನಿಪುರದಿಂದ ಶಾಸಕರಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

“ಉಪಚುನಾವಣೆಯಲ್ಲಿ ನಂದಿಗ್ರಾಮದಿಂದ ಬೇರೆಯವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಆದರೆ ಅಲ್ಲಿನ ಜನರು ನನ್ನ ಅನುಪಸ್ಥಿತಿಯನ್ನು ಅನುಭವಿಸಲು ನಾನು ಬಿಡುವುದಿಲ್ಲ. ರಾಜ್ಯದ ಉಳಿದ ಭಾಗಗಳ ಜೊತೆಗೆ ನಂದಿಗ್ರಾಮದ ಜನರಿಗೆ ನಾನು ನೀಡಿದ ಎಲ್ಲಾ ಅಭಿವೃದ್ಧಿ ಭರವಸೆಗಳನ್ನು ಈಡೇರಿಸುತ್ತೇನೆ” ಎಂದು ಸಿಎಂ ಸುವೇಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: West Bengal CM: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಬಂದ ಮೊದಲ ದಿನದಂದು ಸುವೇಂದು ಅಧಿಕಾರಿ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ಸದನದ ಪ್ರವೇಶದ್ವಾರದಲ್ಲಿ ಮಂಡಿಯೂರಿ ವಿಧಾನಸಭೆ ಪ್ರವೇಶಿಸುವ ಮೊದಲು ತಮ್ಮ ಹಣೆಯನ್ನು ನೆಲಕ್ಕೆ ಮುಟ್ಟಿಸಿ ನಮಸ್ಕರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Retail Inflation: ಏಪ್ರಿಲ್​ನಲ್ಲಿ ರೀಟೇಲ್ ಹಣದುಬ್ಬರ ಶೇ. 3.48ಕ್ಕೆ ಏರಿಕೆ; ಮಾರ್ಚ್​ಗಿಂತ ತುಸು ಹೆಚ್ಚಳ – Kannada News | Retail Inflation in 2026 April rises to 3.48pc from 3.40pc in March

ನವದೆಹಲಿ, ಮೇ 13: ಭಾರತದ ಚಿಲ್ಲರೆ ಹಣದುಬ್ಬರ (Retail Inflation) 2026ರ ಏಪ್ರಿಲ್​ನಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಸ್ವಲ್ಪ ಹೆಚ್ಚಿನ ಹೊರೆಯಾಗಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ (Ministry of Statistics and Programme Implementation) ಸಚಿವಾಲಯ ನಿನ್ನೆ ಮಂಗಳವಾರ (ಮೇ 12) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇ. 3.40 ರಷ್ಟಿದ್ದ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ. 3.48 ಕ್ಕೆ ತಲುಪಿದೆ.

ಆಹಾರ ಪದಾರ್ಥಗಳ ಬೆಲೆ ಏರಿಕೆ ದರವು ಶೇ. 3.87 ರಿಂದ ಶೇ. 4.20 ಕ್ಕೆ ಹೆಚ್ಚಿದೆ. ಟೊಮೆಟೊ ಹಣದುಬ್ಬರವು ಶೇ. 35.28 ರಷ್ಟು ದಾಖಲಾಗಿದ್ದು, ಅಡುಗೆ ಮನೆಯ ಬಜೆಟ್ ಮೇಲೆ ಪರಿಣಾಮ ಬೀರಿದೆ. ಬೆಳ್ಳಿ ಆಭರಣಗಳ ಬೆಲೆಯಲ್ಲಿ ಶೇ. 144.34 ರಷ್ಟು ಭಾರಿ ಏರಿಕೆಯಾಗಿದೆ. ಚಿನ್ನ, ವಜ್ರ ಮತ್ತು ಪ್ಲಾಟಿನಂ ಆಭರಣಗಳ ಬೆಲೆ ಕೂಡ ಶೇ. 40.72 ರಷ್ಟು ಹೆಚ್ಚಾಗಿದೆ. ಕೊಬ್ಬರಿ (ಶೇ. 44.55) ಮತ್ತು ಹೂಕೋಸು (ಶೇ. 25.58) ಬೆಲೆಗಳೂ ಗಣನೀಯವಾಗಿ ಏರಿವೆ.

ಇದನ್ನೂ ಓದಿ: ಈವರೆಗೆ ಇದ್ದದ್ದು ಕಷ್ಟ ಅಲ್ಲ, ಮುಂದೆ ಕಾದೈತಾ ದೊಡ್ಡ ಸಂಕಷ್ಟ? ಉದಯ್ ಕೋಟಕ್ ಕೊಟ್ಟಿದ್ದಾರೆ ದೊಡ್ಡ ಎಚ್ಚರಿಕೆ

ಬೆಲೆ ಇಳಿಕೆಯಾದ ವಸ್ತುಗಳು: ಆಲೂಗಡ್ಡೆ (-23.69%) ಮತ್ತು ಈರುಳ್ಳಿ (-17.67%) ಬೆಲೆಗಳಲ್ಲಿ ಇಳಿಕೆ ಕಂಡುಬಂದಿರುವುದು ಗ್ರಾಹಕರಿಗೆ ಸ್ವಲ್ಪ ಸಮಾಧಾನ ತಂದಿದೆ. ಅಲ್ಲದೆ ಮೋಟಾರ್ ಕಾರ್, ಜೀಪ್ ಮತ್ತು ಏರ್ ಕಂಡೀಷನರ್ ಬೆಲೆಗಳೂ ತುಸು ಕಡಿಮೆಯಾಗಿವೆ. ಇದರಿಂದ ಒಟ್ಟಾರೆ ಹಣದುಬ್ಬರ ತೀರಾ ಹೆಚ್ಚದಂತೆ ನಿಯಂತ್ರಣದಲ್ಲಿರಲು ಸಾಧ್ಯವಾಗಿದೆ.

ಗ್ರಾಮೀಣ vs ನಗರ: ಗ್ರಾಮೀಣ ಭಾಗದಲ್ಲಿ ಹಣದುಬ್ಬರ ಶೇ. 3.74 ರಷ್ಟಿದ್ದರೆ, ನಗರ ಪ್ರದೇಶಗಳಲ್ಲಿ ಇದು ಶೇ. 3.16 ರಷ್ಟಿದೆ.

ತರಕಾರಿಗಳಲ್ಲಿ ಟೊಮೆಟೊ ಮತ್ತು ಹೂಕೋಸು ಹಾಗೂ ಅಮೂಲ್ಯ ಲೋಹಗಳ ಬೆಲೆ ಏರಿಕೆಯು ಏಪ್ರಿಲ್ ತಿಂಗಳ ಹಣದುಬ್ಬರ ಹೆಚ್ಚಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನೂ ಓದಿ: I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ

ಆರ್​ಬಿಐ ಗುರಿಯೊಳಗೆಯೇ ಇರುವ ಹಣದುಬ್ಬರ

ಹಣದುಬ್ಬರವು ಶೇ. 4ರಷ್ಟು ಇರಬೇಕೆಂದು ಸರ್ಕಾರವು ಆರ್ಬಿಐಗೆ ಗುರಿ ನೀಡಿದೆ. ಈ ಗುರಿ ಈಡೇರಿಸುವ ನಿಟ್ಟಿನಲ್ಲಿ ಆರ್​ಬಿಐ ಹಣದುಬ್ಬರ ತಾಳಿಕೆ ಮಿಡಿಯಾಗಿ ಶೇ. 2ರಿಂದ 4 ಅನ್ನು ನಿಗದಿ ಮಾಡಿದೆ. ಹಣದುಬ್ಬರವು ಈ ವ್ಯಾಪ್ತಿಯೊಳಗೆ ಇರಿಸುವ ಗುರಿ ಆರ್​ಬಿಐನದ್ದು. ಈಗ್ಗೆ ಹಲವು ತಿಂಗಳುಗಳಿಂದ ಹಣದುಬ್ಬರು ಆರ್​ಬಿಐನ ತಾಳಿಕೆ ವ್ಯಾಪ್ತಿಯೊಳಗೆಯೇ ಇರುವುದು ಗಮನಾರ್ಹ.

ಆದರೆ, ಮೇ ತಿಂಗಳಲ್ಲಿ ಚಿನ್ನ, ಇಂಧನ ಇತ್ಯಾದಿ ಬೆಲೆಗಳು ಅಧಿಕಗೊಳ್ಳುವುದರಿಂದ ಹಣದುಬ್ಬರ ಶೇ. 4 ಅನ್ನು ದಾಟಿ ಹೋಗುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version