Headlines

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ; ಕಾರ್ಮಿಕರ ಶೆಡ್‌ಗಳು ಭಸ್ಮ! ಸ್ಥಳಕ್ಕೆ ಸುಬುಧೇಂದ್ರ ತೀರ್ಥ ಶ್ರೀ ಭೇಟಿ – Kannada News | Mantralayam Srimath Fire: Worker Sheds Burned, Relief Promised After Cylinder Blast

ರಾಯಚೂರು, ಮೇ.13: ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಂತ್ರಾಲಯದ ನರಹರಿ ತೀರ್ಥ ವಸತಿ ಗೃಹಗಳ ಸಮೀಪ ನಿರ್ಮಾಣ ಕಾಮಗಾರಿಗಾಗಿ ಬಂದಿದ್ದ ಕಾರ್ಮಿಕರಿಗೆ ಶೆಡ್‌ಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬುಧವಾರ ಮಧ್ಯಾಹ್ನ ಅತಿಯಾದ ಬಿಸಿಲಿನ ತಾಪಕ್ಕೆ ಶೆಡ್‌ನಲ್ಲಿದ್ದ ಎರಡು-ಮೂರು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಇದರಿಂದಾಗಿ ಶೆಡ್‌ಗಳು ಹೊತ್ತಿ ಉರಿದಿದ್ದು, ಕಾರ್ಮಿಕರ ದವಸ-ಧಾನ್ಯ ಮತ್ತು ಇತರ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ…

Read More

ಇಂಧನ ಕಡಿಮೆ ಬಳಸಿ ಎನ್ನುತ್ತಿರೋದು ಮೋದಿ ಮಾತ್ರವಲ್ಲ, ವಿವಿಧ ದೇಶಗಳು ಜಾರಿಗೊಳಿಸಿರುವ ಸಂಗತಿಗಳೇ – Kannada News | Energy Saving Strategies: India & World’s Urgent Response to Global Fuel Crisis

ನವದೆಹಲಿ, ಮೇ 13: ಸದ್ಯದ ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂಧನ ಉಳಿತಾಯ ಮತ್ತು ಪ್ರಯಾಣದ ಮಿತಿಯ ಬಗ್ಗೆ ನೀಡಿದ ಕರೆ ವಿವಾದಾತ್ಮಕವಾಗಲಿ ಅಥವಾ ಅತಿಯಾದುದಾಗಲಿ ಅಲ್ಲ. ವಾಸ್ತವವಾಗಿ, ಇದು ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಅನುಸರಿಸುತ್ತಿರುವ ಅನಿವಾರ್ಯ ಕ್ರಮಗಳ ಭಾಗವಾಗಿದೆ. 2026ರ ತೈಲ ಬಿಕ್ಕಟ್ಟನ್ನು ಎದುರಿಸಲು ಇಂದು ವಿಶ್ವದ 40ಕ್ಕೂ ಹೆಚ್ಚು ದೇಶಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿವೆ. ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ನೀಡಿರುವ ಅಂಕಿ-ಅಂಶಗಳ ಪ್ರಕಾರ,…

Read More

ಟೀಮ್ ಇಂಡಿಯಾಗೆ ಅನುಭವಿ ವೇಗಿ ಕಂಬ್ಯಾಕ್ ಸಾಧ್ಯತೆ! – Kannada News | Bumrah to Rest, Shami to Return for Team India

ಐಪಿಎಲ್ 2026 ಮುಗಿದ ಬೆನ್ನಲ್ಲೇ ಜೂನ್ 6 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಬೌಲಿಂಗ್ ವಿಭಾಗವನ್ನು ಅಂತಿಮಗೊಳಿಸಲು ಬಿಸಿಸಿಐ (BCCI) ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮುಂದಿನ ಕೆಲವು ದಿನಗಳಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲು ಮಂಡಳಿ ಯೋಚಿಸುತ್ತಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಹಿರಿಯ ಬೌಲರ್ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಪುನರಾಗಮನದ…

Read More

ಬೆಳಗಾವಿ ಪಾಲಿಕೆಯಲ್ಲಿ ಗಡಿ ಸಮರ; ‘ಕರ್ನಾಟಕ ಪರ ಗೊತ್ತುವಳಿ’ ಮಂಡನೆ ವೇಳೆ ಎಂಇಎಸ್ ಸದಸ್ಯರ ಕಿರಿಕ್! – Kannada News | Belagavi City Corporation: Karnataka Resolution Sparks MES Clash and Border Row

ಬೆಳಗಾವಿ, ಮೇ.13: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಇಂದು (ಮೇ13) ಕನ್ನಡ ಮತ್ತು ಮರಾಠಿ ಸದಸ್ಯರ ನಡುವಿನ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿಯನ್ನು ಸ್ವೀಕರಿಸುವ ವಿಚಾರದಲ್ಲಿ ಎಂಇಎಸ್ (MES) ಮತ್ತು ಕನ್ನಡ ಪರ ಸದಸ್ಯರ ನಡುವೆ ಭಾರಿ ಗದ್ದಲ ಏರ್ಪಟ್ಟಿತು. ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪರ ಸದಸ್ಯ ರಮೇಶ್ ಸೊಂಟಕ್ಕಿ ಅವರು, “ಮಹಾಜನ್ ವರದಿ ಅಂತಿಮ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು…

Read More

Morning Ritual: ಬೆಳಗಿನ ಜಾವ ಹೊಸಿಲಿಗೆ ನೀರು ಚಿಮುಕಿಸುವುದು ಬರಿ ಸಂಪ್ರದಾಯವಲ್ಲ; ಇದರ ಹಿಂದಿದೆ ಅದ್ಭುತ ವೈಜ್ಞಾನಿಕ ರಹಸ್ಯ! – Kannada News | Morning Water Ritual: Benefits of Sprinkling Water at Home Entrance for Positivity

ಬೆಳಗಿನ ಜಾವ ಮನೆಯ ಮುಂದೆ ನೀರು ಚಿಮುಕಿಸುವುದುImage Credit source: gemini ai ಪಂಚಭೂತಗಳಲ್ಲಿ ನೀರು ಅತ್ಯಂತ ಪ್ರಮುಖವಾದ ಅಂಶವಾಗಿದೆ. ಆದರೆ, ಮನೆಯ ಮುಂದೆ ಬೆಳಗಿನ ಜಾವ ನೀರು ಚಿಮುಕಿಸುವುದು, ತೊಳೆಯುವುದು ಅಥವಾ ಸುರಿಯುವುದರ ಹಿಂದಿನ ಮಹತ್ವವೇನು ಎಂಬ ಪ್ರಶ್ನೆ ಅನೇಕರಿಗೆ ಮೂಡಬಹುದು. ಇದು ಕೇವಲ ಸಂಪ್ರದಾಯ ಅಥವಾ ಆಚರಣೆಯಲ್ಲ, ಇದರ ಹಿಂದೆ ವೈಜ್ಞಾನಿಕ, ಧಾರ್ಮಿಕ ಮತ್ತು ಜ್ಯೋತಿಷ್ಯಶಾಸ್ತ್ರದ ಆಧಾರವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ…

Read More

ಹುಬ್ಬಳ್ಳಿಯಲ್ಲಿ ಅರೆಬೆತ್ತಲೆ ಕಳ್ಳರ ಹಾವಳಿ, ಜೈನ ಮಂದಿರಗಳೇ ಟಾರ್ಗೆಟ್: ಚಡ್ಡಿ ಗ್ಯಾಂಗ್ ಕೃತ್ಯದ ಶಂಕೆ – Kannada News | Hubballi Jain Temple Theft: Chaddi Gang Suspected as 3kg Silver Ornaments Stolen in Hosur

ಹುಬ್ಬಳ್ಳಿಯಲ್ಲಿ ಕಳ್ಳರ ಹಾವಳಿImage Credit source: tv9 ಹುಬ್ಬಳ್ಳಿ, ಮೇ 13: ಹುಬ್ಬಳ್ಳಿ-ಧಾರವಾಡ (Hubballi Dharawad) ಅವಳಿ ನಗರದಲ್ಲಿ ಕಳೆದ ಕೆಲವು ತಿಂಗಳಿಂದ ಶಾಂತವಾಗಿದ್ದ ‘ಚಡ್ಡಿ ಗ್ಯಾಂಗ್ (Chaddi Gang)’ ಈಗ ಮತ್ತೆ ಸಕ್ರಿಯವಾಗಿರುವ ಆತಂಕ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಜೈನ ಮಂದಿರಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನಗಳು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಮಂಗಳವಾರ ರಾತ್ರಿ ಹುಬ್ಬಳ್ಳಿಯ ಹೊಸರು ಬಡಾವಣೆಯಲ್ಲಿರುವ ಜೈನ ಮಂದಿರಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಮುಖ್ಯಾಂಶಗಳು ಹುಬ್ಬಳ್ಳಿಯ…

Read More

ವಯನಾಡು ‘ಕೈ’ ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ರಾರಾಜಿಸಿದ ಪೋಸ್ಟರ್​​!

ತಿರುವನಂತಪುರಂ, ಮೇ 13: ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಹೊರಗೆ ಬುಧವಾರ ರಾಹುಲ್​​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧದ ಸಂದೇಶಗಳಿರುವ ಪೋಸ್ಟರ್‌ಗಳು ರಾರಾಜಿಸಿವೆ. ರಾಹುಲ್ ಮತ್ತು ಪ್ರಿಯಾಂಕಾ, ವಯನಾಡ್‌ನ್ನು ಮರೆತುಬಿಡಿ. ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಬರೆದಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್​​ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬರೆಯಲಾಗಿದೆ. ಮೂರನೇ ಪೋಸ್ಟರ್‌ನಲ್ಲಿ…

Read More

ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ – Kannada News | Dileep Raj’s brother talks about actor’s final rituals

ಕನ್ನಡ ಕಿರುತೆರೆ (Serial) ಮತ್ತು ಸಿನಿಮಾಗಳಲ್ಲಿ ಎರಡು ದಶಕಗಳಿಗೂ ಹೆಚ್ಚು ಸಮಯದಿಂದ ಸೇವೆ ಸಲ್ಲಿಸಿಕೊಂಡು ಬಂದಿದ್ದ ಖ್ಯಾತ ನಟ ದಿಲೀಪ್ ರಾಜ್ ಇಂದು (ಮೇ 13) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದು, ಸಿನಿಮಾ ಮತ್ತು ಕಿರುತೆರೆಯ ಅನೇಕ ಸೆಲೆಬ್ರಿಟಿಗಳು, ದಿಲೀಪ್ ಅವರ ಆಪ್ತ ಸ್ನೇಹಿತರು, ಕುಟುಂಬದವರು ಇಂದು ದಿಲೀಪ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆಗೆ ನೋವಿನಲ್ಲೇ ಮಾತನಾಡಿದ ದಿಲೀಪ್ ಅವರ ಅಣ್ಣ, ಈ ಸಂಕಷ್ಟದ ಕ್ಷಣದಲ್ಲಿ ಜೊತೆಗೆ ನಿಂತ…

Read More

ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು! – Kannada News | Massive Herd of 25 Elephants Crosses Road in Belur, Hassan: Coffee Crops Destroyed

ಹಾಸನ, ಮೇ 13: ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರಲಗದ್ದೆ ಮತ್ತು ನಾರ್ವೆ ರಸ್ತೆ ಮಾರ್ಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ 25ಕ್ಕೂ ಹೆಚ್ಚು ಆನೆಗಳ ಬೃಹತ್ ಹಿಂಡು ಪ್ರತ್ಯಕ್ಷವಾಗಿದ್ದು, ನಾಗರಿಕರಲ್ಲಿ ಭೀತಿ ಮೂಡಿಸಿದೆ. ಕಾಫಿ ತೋಟದಿಂದ ಮತ್ತೊಂದು ತೋಟಕ್ಕೆ ಗಜಪಡೆ ಪರೇಡ್ ನಡೆಸುತ್ತಿದ್ದು, ರಸ್ತೆ ದಾಟುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ. ಆನೆಗಳ ಸಂಚಾರದಿಂದಾಗಿ ಅಪಾರ ಪ್ರಮಾಣದ ಕಾಫಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸದ್ಯ ಆನೆಗಳು ಕಾಫಿ ತೋಟಗಳಲ್ಲೇ ಬೀಡು ಬಿಟ್ಟಿದ್ದು, ಇಟಿಎಫ್ (ETF) ಸಿಬ್ಬಂದಿ ಸ್ಥಳದಲ್ಲಿದ್ದು ಜನರಿಗೆ ಎಚ್ಚರಿಕೆ…

Read More

ಐಪಿಎಲ್ ಆಟಗಾರರಿಗೆ ಬಿಸಿಸಿಐ ವಾರ್ನಿಂಗ್: ಜಾರಿಯಾಯ್ತು ಕಟು ನಿಯಮ! – Kannada News | BCCI Enforces Strict Rules for IPL 2026

IPL 2026: ಐಪಿಎಲ್ 2026ರ ಟೂರ್ನಿಯಲ್ಲಿ ಆಟಗಾರರು ಮತ್ತು ಫ್ರಾಂಚೈಸಿಗಳ ನಡವಳಿಕೆಯಲ್ಲಿ ಶಿಸ್ತು ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. “ಈ ಬಾರಿಯ ಐಪಿಎಲ್‌ನಲ್ಲಿ ಸಾಕಷ್ಟು ಅಶಿಸ್ತು ಕಂಡುಬಂದಿದ್ದು, ಮಂಡಳಿಗೆ ಮುಜುಗರ ತರುವಂತಹ ಹಲವು ಘಟನೆಗಳು ನಡೆದಿವೆ. ಹೀಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಲು ನಾವು ನಿರ್ಬಂಧಿತರಾಗಿದ್ದೇವೆ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೊಸ ನಿಯಮ ಜಾರಿಗೆ ಕಾರಣಗಳೇನು? ಅನಧಿಕೃತ ವ್ಯಕ್ತಿಗಳ ಪ್ರವೇಶ: ಆಟಗಾರರ ಹೋಟೆಲ್ ಕೊಠಡಿಗಳು, ತಂಡದ ಬಸ್‌ಗಳು…

Read More