Headlines

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ – Kannada News | Mantralaya Vaikuntha Ekadashi: Grand Celebrations at Venkateshwara swamy temple

ರಾಯಚೂರು, ಡಿಸೆಂಬರ್ 30: ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಶ್ರೀಮಠ ಹಾಗೂ ದೇವಸ್ಥಾನವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿದ ಈ ದೇವಾಲಯಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ತುಳಸಿ ಅರ್ಚನೆ, ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಮಂಗಳಾರತಿ ಸಲ್ಲಿಸಿದರು. ನಂತರ ಪವಿತ್ರ ವೈಕುಂಠ ದ್ವಾರವನ್ನು ಉದ್ಘಾಟಿಸಿ…

Read More

ಹುಬ್ಬಳ್ಳಿಯ ಮಾಲ್​ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್ – Kannada News | Hubballi Sukhasagara Mall Fire: Short Circuit Causes Lakhs in Damage

ಹುಬ್ಬಳ್ಳಿ, ಜನವರಿ 23: ಅದು ನಗರದ ಪ್ರಮುಖ ವ್ಯಾಪಾರ ಏರಿಯಾ. ಆದರೆ ರಾತ್ರಿ ಸಮಯದಲ್ಲಿ ನಾಲ್ಕು ಅಂತಸ್ತಿನ ಮಾಲ್​ನಲ್ಲಿ (Mall) ಹೊತ್ತಿಕೊಂಡ ಬೆಂಕಿ (Fire) ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣ ಮಾಡಿತ್ತು. ಮಾಲ್​ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದರೆ, ಮತ್ತೊಂದೆಡೆ ಸುತ್ತಮುತ್ತಲಿನ ವಸತಿ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಲು ಆರಂಭಿಸಿತ್ತು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ನಡೆದದ್ದೇನು? ಮರಾಠ ಗಲ್ಲಿಯಲ್ಲಿರುವ ಸುಪ್ರಸಿದ್ಧ ಸುಖಸಾಗರ ಮಾಲ್​ನಲ್ಲಿ ಕಳೆದ ರಾತ್ರಿ 12 ಗಂಟೆ ಸಮಯಕ್ಕೆ…

Read More

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Yantra India Recruitment 2026: ಯಂತ್ರ ಇಂಡಿಯಾ ಲಿಮಿಟೆಡ್‌ನಲ್ಲಿ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ – Kannada News | Yantra India Apprentice Recruitment 2026: 3979 Government Trade Opportunities

ಸರ್ಕಾರಿ ವಲಯದಲ್ಲಿ ತಾಂತ್ರಿಕ ತರಬೇತಿ ಹಾಗೂ ಉದ್ಯೋಗದ ಅವಕಾಶವನ್ನು ಹುಡುಕುತ್ತಿರುವ ಯುವಜನರಿಗೆ ಖುಷಿಯ ಸುದ್ದಿ ಇಲ್ಲಿದೆ. ಯಂತ್ರ ಇಂಡಿಯಾ ಲಿಮಿಟೆಡ್ (YIL) 2026ರ ಸಾಲಿಗೆ ಟ್ರೇಡ್ ಅಪ್ರೆಂಟಿಸ್‌ಶಿಪ್ ನೇಮಕಾತಿಯನ್ನು ಘೋಷಿಸಿದೆ. ಈ ನೇಮಕಾತಿ ಮೂಲಕ ದೇಶಾದ್ಯಂತ ಇರುವ ಶಸ್ತ್ರಾಸ್ತ್ರ ಉಪಕರಣ ಕಾರ್ಖಾನೆಗಳಲ್ಲಿ ಒಟ್ಟು 3,979 ಅಪ್ರೆಂಟಿಸ್‌ಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಐಟಿಐ ಉತ್ತೀರ್ಣರು ಹಾಗೂ ಐಟಿಐ ಅಲ್ಲದ ಅಭ್ಯರ್ಥಿಗಳಿಗೂ ಈ ಅವಕಾಶ ಲಭ್ಯವಿದೆ. ಈ ನೇಮಕಾತಿ 59ನೇ ಬ್ಯಾಚ್ ಅಡಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳಿಗೆ 1961ರ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಕೌಶಲ್ಯ ಆಧಾರಿತ…

Read More

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ! – Kannada News | Lokayukta Arrests FDA Caught Red Handed Taking Bribe

ಕಲಬುರಗಿ, ಜನವರಿ 18:  ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ (Bribe) ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ…

Read More

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More

ವರದಕ್ಷಿಣೆಗಾಗಿ ಗರ್ಭಿಣಿಯನ್ನು ಕೊಂದು ರಹಸ್ಯವಾಗಿ ಅತ್ತೆ-ಮಾವನಿಂದ ಅಂತ್ಯ ಸಂಸ್ಕಾರ – Kannada News | Rajasthan: Pregnant Woman Killed for Dowry, In laws Attempt Secret Cremation

ಜೈಪುರ, ಜನವರಿ 05: ದೇಶ ಎಷ್ಟೇ ಮುಂದುವರೆದಿದ್ದರೂ, ಜನರು ಎಷ್ಟೇ ಶಿಕ್ಷಣ ಪಡೆದಿದ್ದರೂ ಸಮಾಜದಲ್ಲಿ ವರದಕ್ಷಿಣೆ(Dowry) ಎಂಬುದು ಪಿಡುಗಾಗಿಯೇ ಉಳಿದಿದೆ. ಇನ್ನೂ ಕೂಡ ವರದಕ್ಷಿಣೆಗಾಗಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಂತಿಲ್ಲ. ರಾಜಸ್ಥಾನದ ಧೋಲ್ಪುರದಲ್ಲಿ ವರದಕ್ಷಿಣೆ ತಂದಿಲ್ಲವೆಂದು ನಾಲ್ಕು ತಿಂಗಳ ಗರ್ಭಿಣಿಯನ್ನೇ ಅತೆತ-ಮಾವ ಕೊಲೆ ಮಾಡಿ ರಹಸ್ಯವಾಗಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆ ವರದಿಯಾಗಿದೆ. ಆರೋಪಿ ಕುಟುಂಬ ಸದಸ್ಯರು ಆಕೆಯ ಪೋಷಕರಿಗೆ ತಿಳಿಸದೆ ಆಕೆಯ ಶವವನ್ನು ಅಂತ್ಯಸಂಸ್ಕಾರ ಮಾಡಿ ಗ್ರಾಮದಿಂದ ಪರಾರಿಯಾಗಿದ್ದಾರೆ. 24 ವರ್ಷದ ಗುಡಿಯಾ ಎಂಬ…

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್​,! – Kannada News | Lakkundi Gram panchayat Announces site to Ritti family who handed over the Gold treasure

ಗದಗ, (ಜನವರಿ 22): ಲಕ್ಕುಂಡಿ (Lakkundi) ಗ್ರಾಮದಲ್ಲಿ ಮನೆ ಪಾಯಾ ಅಗೆಯುವ ವೇಳೆ ಸಿಕ್ಕ ಚಿನ್ನದ ನಿಧಿಯನ್ನು (Gold Treasure) ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ (Ritti family) ಕೊನೆಗೂ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ. ಹೌದು..ರಿತ್ತಿ ಕುಟುಂಬ 30*40 ಸೈಟ್‌ ನೀಡುವುದಾಗಿ ಲಕ್ಕುಂಡಿ ಗ್ರಾಮ ಪಂಚಾಯತ್‌ ಘೋಷಣೆ ಮಾಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ‌ ಪಂಚಾಯತಿಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು,   ಇದೇ ವೇಳೆ ನಿಧಿಯನ್ನು ಹಸ್ತಾಂತರ ಮಾಡಿದ ರಿತ್ತಿ ಕುಟುಂಬದ ಸದಸ್ಯರನ್ನು ಸನ್ಮಾನ ಮಾಡಲಾಯಿತು. ಇನ್ನು…

Read More