Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು
ಮೇಷ ರಾಶಿ: ಇಂದು ಕಂಡ ಕನಸುಗಳು ಗಾಢವಾಗಿ ನಿಮ್ಮ ಮೇಲೆ ಪರಿಣಾಮ ಬೀರುವುದು. ನೀವಾಗಿಯೇ ನಿಮ್ಮ ಸ್ಥಾನವನ್ನು ಹೇಳಿ, ಮುಗ್ಗರಿಸುವಿರಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಸಮಾನ ಚಿಂತನಶೀಲರ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಗ್ರಾಹಕರಿಗೆ ನಿಮ್ಮ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ ಉಂಟಾದ ನೋವಿನಿಂದ…