IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ – Kannada News | IRCTC Coastal Karnataka Tour: Explore Udupi, Murudeshwar, Sringeri Package

ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಪ್ಯಾಕೇಜ್‌ಗಳನ್ನು ಸಹ ತಂದಿದೆ. ದೇಶಾದ್ಯಂತ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ಜನರು ಸುಲಭವಾಗಿ ಭೇಟಿ ಮಾಡಲು ಇದು ಕಡಿಮೆ ಬೆಲೆಯಲ್ಲಿ ಅನೇಕ ವಿಶೇಷ ಪ್ಯಾಕೇಜ್‌ಗಳನ್ನು ತರುತ್ತದೆ. ಇವುಗಳ ಮೂಲಕ, ನೀವು ಅಪರಿಚಿತ ಪ್ರವಾಸಿ ಸ್ಥಳಗಳಿಗೆ ಹೋಗಲು ಬಯಸಿದರೆ, ನೀವು ಯಾವುದೇ ಚಿಂತೆಯಿಲ್ಲದೆ ಹೋಗಿ ಹಿಂತಿರುಗಬಹುದು.

ಕಾಲಕಾಲಕ್ಕೆ ಪ್ರವಾಸಿಗರಿಗಾಗಿ ಹೊಸ ಪ್ಯಾಕೇಜ್‌ಗಳನ್ನು ತರುತ್ತಿರುವ IRCTC ಇತ್ತೀಚೆಗೆ ಮತ್ತೊಂದು ವಿಶೇಷ ಪ್ಯಾಕೇಜ್ ಅನ್ನು ಪರಿಚಯಿಸಿದೆ. ಅದು ಕರಾವಳಿ ಕರ್ನಾಟಕ ಪ್ಯಾಕೇಜ್ ಪ್ರವಾಸ. ಸಂಕ್ರಾಂತಿ ರಜಾದಿನಗಳಲ್ಲಿ ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಲು ಬಯಸುವವರಿಗೆ ಇದು ಉತ್ತಮ ಅವಕಾಶ.

ಈ ಪ್ಯಾಕೇಜ್ ಮೂಲಕ, ನೀವು ಕರ್ನಾಟಕದ ಆಧ್ಯಾತ್ಮಿಕ ಸ್ಥಳಗಳು ಮತ್ತು ನೈಸರ್ಗಿಕ ಸೌಂದರ್ಯವನ್ನು ಅನುಭವಿಸಬಹುದು. ಈ ಪ್ರವಾಸ ಪ್ಯಾಕೇಜ್ IRCTC ಪ್ರವಾಸೋದ್ಯಮ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದು 5 ರಾತ್ರಿಗಳು, 6 ದಿನಗಳ ಪ್ರವಾಸ ಪ್ಯಾಕೇಜ್ ಆಗಿದೆ. ನೀವು ಉಡುಪಿ, ಕೊಲ್ಲೂರು, ಶೃಂಗೇರಿ, ಮುರುಡೇಶ್ವರ ಮತ್ತು ಮಂಗಳೂರಿನ ಸುಂದರ ಸ್ಥಳಗಳಿಗೆ ಭೇಟಿ ನೀಡಬಹುದು. ಪ್ರಯಾಣವು ಹೈದರಾಬಾದ್‌ನಿಂದ ಪ್ರಾರಂಭವಾಗುತ್ತದೆ. ಈ ರೈಲು ಪ್ರತಿ ಮಂಗಳವಾರ ಕಾಚೆಗುಡ ರೈಲು ನಿಲ್ದಾಣದಿಂದ ಹೊರಡುತ್ತದೆ.

ಪ್ಯಾಕೇಜ್ ಬೆಲೆ:

ಸ್ಲೀಪರ್ ಕ್ಲಾಸ್‌ನಲ್ಲಿ, ಒಬ್ಬ ವ್ಯಕ್ತಿಗೆ ರೂ.38,600, ಡಬಲ್ ಶೇರಿಂಗ್‌ಗೆ 20,650 ರೂ., ಟ್ರಿಪಲ್ ಶೇರಿಂಗ್‌ಗೆ 15,970 ರೂ., ಹಾಸಿಗೆ ಇರುವ ಮಗುವಿಗೆ 9,100 ರೂ. ಮತ್ತು ಹಾಸಿಗೆ ಇಲ್ಲದ ಮಗುವಿಗೆ 7,720 ರೂ. ದರವಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಪ್ರಯಾಣದ ವಿವರಗಳು:

ಈ ರೈಲು ಮಂಗಳವಾರ ಬೆಳಿಗ್ಗೆ ಹೈದರಾಬಾದ್‌ನ ಕಾಚೆಗುಡ ರೈಲು ನಿಲ್ದಾಣದಿಂದ ಹೊರಟು ಬುಧವಾರ ಬೆಳಿಗ್ಗೆ 9.15 ಕ್ಕೆ ಮಂಗಳೂರಿಗೆ ತಲುಪಲಿದೆ. ಆ ದಿನ ಉಡುಪಿ ಮತ್ತು ಶ್ರೀ ಕೃಷ್ಣ ದೇವಾಲಯಕ್ಕೆ, ಗುರುವಾರ ಮೂಕಾಂಬಿಕಾ ದೇವಾಲಯ, ಮುರುಡೇಶ್ವರದ ಶಿವ ದೇವಾಲಯ ಮತ್ತು ಗೋಕರ್ಣಕ್ಕೆ ಭೇಟಿ ನೀಡಲಾಗುವುದು. ಶುಕ್ರವಾರ ಹೊರನಾಡಿನ ಅನ್ನಪೂರ್ಣ ದೇವಾಲಯ ಮತ್ತು ಶೃಂಗೇರಿ ಶಾರದಾಂಬಾ ದೇವಾಲಯಕ್ಕೆ ಭೇಟಿ . ಶನಿವಾರ ಮಂಗಳಾದೇವಿ ದೇವಾಲಯ, ಕದ್ರಿ ಮಂಜುನಾಥ ದೇವಾಲಯ, ತಣ್ಣೀರುಬಾವಿ ಬೀಚ್ ಮತ್ತು ಮಂಗಳೂರಿನ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಲಿದೆ. ಭಾನುವಾರ ರೈಲು ಕಾಚೆಗುಡಕ್ಕೆ ಹಿಂತಿರುಗುತ್ತದೆ. ಆದ್ದರಿಂದ, ನೀವು ಕರ್ನಾಟಕದ ಕರಾವಳಿ ಪ್ರದೇಶವನ್ನು ಅನ್ವೇಷಿಸಲು ಬಯಸಿದರೆ, ಈ ಪ್ಯಾಕೇಜ್ ನಿಮಗೆ ಸೂಕ್ತ ಆಯ್ಕೆಯಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:35 pm, Fri, 19 December 25

Source link

Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ – Kannada News | Ernakulam Incident: Video Shows Woman With Infant Allegedly Slapped by Police Officer

ಕೊಚ್ಚಿ, ಡಿಸೆಂಬರ್ 19: ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಬಂದಿದ್ದರು. ಅದನ್ನು ಪ್ರಶ್ನೆ ಮಾಡಲು ಬಂದಿದ್ದ ಮಹಿಳೆಗೆ ಎಚ್​ಎಸ್​ಒ ಪ್ರತಾಪ್ ಚಂದ್ರನ್ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ 2024ರಲ್ಲಿ ನಡೆದಿದ್ದರೂ ವಿಡಿಯೋ ಈಗ ವೈರಲ್ ಆಗಿದೆ. ಅವರನ್ನು ಈಗ ಆಲಪ್ಪುಳ ಜಿಲ್ಲೆಯ ಅರೂರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ವೀಡಿಯೊ ಕಾಣಿಸಿಕೊಂಡ ಸ್ವಲ್ಪ ಸಮಯದ ನಂತರ, ಮುಖ್ಯಮಂತ್ರಿ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿದರು. ವಿಡಿಯೋದಲ್ಲಿರುವ ಮಹಿಳೆಯನ್ನು ಎನ್.ಜೆ. ಶೈಮೋಲ್ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಬೆನ್ ಜೋ ಅವರು ಘಟನೆಯ ನಂತರ ಪತ್ರಿಕಾಗೋಷ್ಠಿ ನಡೆಸಿ, ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಹಲ್ಲೆ ನಡೆಸಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಎರ್ನಾಕುಲಂ ಉತ್ತರ ರೈಲ್ವೆ ನಿಲ್ದಾಣದ ಬಳಿ ನಡೆಸುತ್ತಿರುವ ಪ್ರವಾಸಿ ಮಂದಿರದ ಮುಂದೆ ಕಳ್ಳತನದ ಆರೋಪ ಹೊತ್ತಿರುವ ಇಬ್ಬರು ಯುವಕರನ್ನು ಬಲವಂತವಾಗಿ ಬಂಧಿಸಿದ್ದನ್ನು ಚಿತ್ರೀಕರಿಸಿದ್ದಕ್ಕಾಗಿ ಶ್ರೀ ಜೋ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣದಲ್ಲಿ ಮೂರನೇ ಆರೋಪಿಯನ್ನಾಗಿ ಮಾಡಲಾಗಿತ್ತು. ತನ್ನ ಪತಿಯ ಬಗ್ಗೆ ವಿಚಾರಿಸಲು ತನ್ನ ಮಗುವಿನೊಂದಿಗೆ ಠಾಣೆಗೆ ಹೋದಾಗ ಶೈಮೋಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ? – Kannada News | Know what happens if government prints more money

ಯಾರನ್ನ ನೋಡಿದರೂ ಸಾಲ, ಎಲ್ಲಿ ನೋಡಿದರೂ ಬೆಲೆ ಏರಿಕೆ, ಇದು ದುಬಾರಿ ದುನಿಯಾ ಅನಿಸುತ್ತದೆ. ಸರ್ಕಾರ ಬೇಕಾದಷ್ಟು ನೋಟುಗಳನ್ನು ಮುದ್ರಿಸಿ ಅಗತ್ಯ ಇದ್ದವರಿಗೆ ಹಂಚಬಹುದಲ್ಲ, ಸರ್ಕಾರದ ಸಾಲವನ್ನೂ ತೀರಿಸಬಹುದಲ್ಲ ಎಂದು ಕೆಲವರಿಗಾದರೂ ಅನಿಸಿರಬಹುದು. ವಾಸ್ತವದಲ್ಲಿ, ಹಾಗೆ ಮಾಡಲು ಸಾಧ್ಯ ಇಲ್ಲ. ಒಂದೊಮ್ಮೆ ಹಾಗೆ ಮಾಡಿದರೆ ತನ್ನ ಕುತ್ತಿಗೆ ತಾನೇ ಕುಯ್ದುಕೊಂಡಂತೆ. ವೆನಿಜುವೆಲಾ, ಜಿಂಬಾಬ್ವೆ ಇತ್ಯಾದಿ ಕೆಲವಾರು ದೇಶಗಳು ಹೀಗೆ ಮಾಡಲು ಹೋಗಿ ಈಗಲೂ ಒದ್ದಾಡುತ್ತಿವೆ. ಸಾಲದ ಸುಳಿಗೆ ಸಿಲುಕಿರುವ ಪಾಕಿಸ್ತಾನ (Pakistan), ಶ್ರೀಲಂಕಾದಂತಹ ದೇಶಗಳು ಈ ದುಸ್ಸಾಹಸಕ್ಕೆ ಕೈಹಾಕಿಲ್ಲ. ಹೀಗೆ ಕರೆನ್ಸಿ ನೋಟುಗಳನ್ನು ಮನಬಂದಂತೆ ಪ್ರಿಂಟ್ ಮಾಡಲು ಆಗುವುದಿಲ್ಲ. ಅದಕ್ಕೆ ಒಂದು ಕ್ರಮ, ನೀತಿ, ನಿಯಮ, ಕಟ್ಟುಪಾಡುಗಳು ಇರುತ್ತವೆ.

ಹೆಚ್ಚು ನೋಟುಗಳನ್ನು ಮುದ್ರಿಸಿದರೆ ಏನಾಗುತ್ತದೆ?

ಯಾವುದೇ ಅರ್ಥವ್ಯವಸ್ಥೆಯಲ್ಲಿ ಹಣದ ಹರಿವು ಸಮರ್ಪಕವಾಗಿರಬೇಕು. ತೀರಾ ಹೆಚ್ಚಿರಬಾರದು, ತೀರಾ ಕಡಿಮೆ ಇರಬಾರದು. ಸರಕುಗಳ ಉತ್ಪಾದನೆಯ ಮೌಲ್ಯ ಅಥವಾ ಜಿಡಿಪಿಗೆ ಅನುಗುಣವಾಗಿ ಹಣದ ಸರಬರಾಜು ಇರುತ್ತದೆ. ಇದರಲ್ಲಿ ಏರುಪೇರಾದರೆ ಆಗ ಸರಕುಗಳ ಮೌಲ್ಯದಲ್ಲಿ ವೈಪರೀತ್ಯಗಳು ಕಾಣಿಸುತ್ತವೆ. ಹೆಚ್ಚು ಹಣವನ್ನು ಅರ್ಥವ್ಯವಸ್ಥೆಗೆ ತೂರಿಬಿಟ್ಟಾಗ ಸರಕುಗಳ ಬೆಲೆ ಹೆಚ್ಚುತ್ತದೆ. ಇದರಿಂದ ಹಣದುಬ್ಬರ ಅಧಿಕಗೊಳ್ಳುತ್ತದೆ.

ಉದಾಹರಣೆಗೆ, ಒಂದು ದೇಶದಲ್ಲಿ 100 ತೆಂಗಿನಕಾಯಿ ಸರಕುಗಳ ಉತ್ಪಾದನೆ ಆಗುತ್ತಿದೆ ಎಂದಿಟ್ಟುಕೊಳ್ಳಿ. ಅದನ್ನು ಖರೀದಿಸಲು 100 ರೂಪಾಯಿಯು ಚಲಾವಣೆಯಲ್ಲಿರುತ್ತದೆ ಎಂದು ಭಾವಿಸೋಣ. ಒಂದು ಕಾಯಿಗೆ ಒಂದು ರೂ ಬೆಲೆ ಇರುತ್ತದೆ. ಈಗ ನೀವೇನಾದರೂ 200 ರೂ ಅನ್ನು ವ್ಯವಸ್ಥೆಗೆ ಸೇರಿಸಿದಾಗ ಒಂದು ಕಾಯಿಗೆ ಹೆಚ್ಚು ಹಣ ಕೊಡಲು ಸಿದ್ಧರಿರುತ್ತೀರಿ. ಆಗ ಕಾಯಿ ಬೆಲೆ ಹೆಚ್ಚಾಗುತ್ತದೆ.

ಇದನ್ನೂ ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ವೆನಿಜುವೆಲಾ, ಜಿಂಬಾಬ್ವೆ ಮೊದಲಾದ ಅನೇಕ ದೇಶಗಳು ಇಂಥ ಪ್ರಯೋಗಕ್ಕೆ ಕೈಹಾಕಿ ಸುಟ್ಟುಕೊಂಡಿವೆ. ಅಲ್ಲಿ ಒಂದು ರೊಟ್ಟಿ ಖರೀದಿಸಬೇಕೆಂದರೆ ಸಾವಿರಾರು ರುಪಾಯಿ ಕೊಡಬೇಕು. ಅಷ್ಟರಮಟ್ಟಿಗೆ ಹಣದ ಮೌಲ್ಯ ಕಡಿಮೆ ಆಗಿದೆ.

ಆರ್ಥಿಕತೆ ಬೆಳೆದಾಗ ಹೆಚ್ಚಿನ ಹಣ ಬಿಡುಗಡೆ ಆಗಬೇಕು…

ಆರ್ಥಿಕತೆ ಬೆಳೆದಂತೆ ಚಲಾವಣೆಯ ಹಣವನ್ನೂ ಹೆಚ್ಚಿಸಬೇಕು. ಇಲ್ಲದಿದ್ದರೆ ಹಣ ಕುಸಿತ ಅಥವಾ ಡೀಫ್ಲೇಶನ್ ಸ್ಥಿತಿ ನಿರ್ಮಾಣ ಆಗುತ್ತದೆ. ಉದಾಹರಣೆಗೆ, ಒಂದು ದೇಶದ ಜಿಡಿಪಿ ಹೆಚ್ಚುತ್ತಿರುತ್ತದೆ. ಅಂದರೆ ಉತ್ಪಾದನೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತದೆ. ಆರ್ಥಿಕತೆಗೆ ಒಂದಿಷ್ಟು ಹಣದುಬ್ಬರವೂ ಬೇಕು. ಬ್ಯುಸಿನೆಸ್​ಗಳು ಅಥವಾ ಉದ್ದಿಮೆಗಳು ತಮ್ಮ ಉತ್ಪನ್ನನ್ನು ಮಾರಿ ಲಾಭ ಗಳಿಸಬೇಕೆಂದರೆ ಹಣದುಬ್ಬರ ಅಥವಾ ಬೆಲೆ ಏರಿಕೆ ಅಗಲೇಬೇಕು. ಆದರೆ ಅದು ಮಿತಿಯಲ್ಲಿರಬೇಕು. ಹೀಗಾಗಿ, ಸರ್ಕಾರವು ಹಣದುಬ್ಬರಕ್ಕೆ ಟಾರ್ಗೆಟ್ ಫಿಕ್ಸ್ ಮಾಡುತ್ತದೆ. ಭಾರತ ಸರ್ಕಾರ ಸದ್ಯ ಶೇ. 4ರ ಹಣದುಬ್ಬರವನ್ನು ಟಾರ್ಗೆಟ್ ಆಗಿ ಮಾಡಿಕೊಂಡಿದೆ. ಅಷ್ಟಿದ್ದರೆ ಆರ್ಥಿಕತೆಯು ಸಮತೋಲನದಿಂದ ಸಾಗುತ್ತದೆ ಎಂಬುದು ಭಾವನೆ. ಇದನ್ನು ತಜ್ಞರಿರುವ ಸಮಿತಿಗಳು ನಿರ್ಧರಿಸುತ್ತವೆ.

ಈಗ ಜಿಡಿಪಿ ಬೆಳೆದಾಗ ಅದರ ಜೊತೆಗೆ ಹಣದುಬ್ಬರವನ್ನೂ ಸೇರಿಸಿದಾಗ ಉತ್ಪನ್ನಗಳು ಹಾಗೂ ಅದರ ಬೆಲೆ ಏರುತ್ತವೆ. ಅದಕ್ಕೆ ಅನುಗುಣವಾಗಿ ಹಣವೂ ಚಲಾವಣೆಯಲ್ಲಿ ಇರಬೇಕು. ಆಗ ಸರ್ಕಾರವು ಹೊಸ ಹಣದ ಹರಿವನ್ನು ಸೇರಿಸಬೇಕು. ಅದೂ ಜಿಡಿಪಿ ಹೆಚ್ಚಳ, ಹಣದುಬ್ಬರ ಇವೆಲ್ಲವನ್ನೂ ಲೆಕ್ಕಾಚಾರ ಮಾಡಿಯೇ ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕಾಗುತ್ತದೆ.

ಇದನ್ನೂ ಓದಿ: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು?

ಹಣ ಹೆಚ್ಚಿಸಬೇಕಾದರೆ ನೋಟು ಪ್ರಿಂಟ್ ಮಾಡಬೇಕೆಂದೇನಿಲ್ಲ…

ಒಂದು ದೇಶದಲ್ಲಿರುವ ಹಣವೆಲ್ಲವೂ ಕರೆನ್ಸಿ ರೂಪದಲ್ಲೇ ಇರಬೇಕೆಂದೇನಿಲ್ಲ. ಎಲೆಕ್ಟ್ರಾನಿಕ್ ರೂಪದಲ್ಲೂ ಇರುತ್ತದೆ. ಜನರ ಕ್ಯಾಷ್ ವಹಿವಾಟಿಗೆ ಅನುಕೂಲವಾಗಲೆಂದು ನೋಟುಗಳನ್ನು ಪ್ರಿಂಟ್ ಮಾಡಲಾಗುತ್ತದೆ. ಅರ್ಥ ವ್ಯವಸ್ಥೆಗೆ ಹೆಚ್ಚು ಹಣದ ಅಗತ್ಯ ಇದ್ದಾಗ ಸರ್ಕಾರ (ಆರ್​ಬಿಐ) ಬೇರೆ ಬೇರೆ ವಿಧಾನಗಳಲ್ಲಿ ಹಣವನ್ನು ಹರಿಸುತ್ತದೆ. ಅದರಲ್ಲಿ ಒಂದು ವಿಧಾನವು ಆರ್​ಬಿಐನ ಓಪನ್ ಮಾರ್ಕೆಟ್ ಅಪರೇಷನ್ಸ್. ಈ ವಿಧಾನದಲ್ಲಿ ಸರ್ಕಾರಿ ಬಾಂಡ್​ಗಳನ್ನು ಆರ್​ಬಿಐ ಖರೀದಿಸುವ ಮೂಲಕ ಹಣವನ್ನು ಬಿಡುಗಡೆ ಮಾಡುತ್ತದೆ. ಇದು ಡಿಜಿಟಲ್ ಹಣವೇ ಆಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ – Kannada News | Surendra Dani Centenary: Hubballi Celebrates Kannada Journalism Icon’s Legacy

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ

ಹುಬ್ಬಳ್ಳಿ, ಡಿಸೆಂಬರ್ 19: ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಯೇಸ್ಸಾರ್ ಪ್ರಶಸ್ತಿ ಪುರಸ್ಕೃತ ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಇದೇ ತಿಂಗಳು 27ರಂದು ಹುಬ್ಬಳ್ಳಿಯ (Hubli) ಸವಾಯಿ ಗಂಧರ್ವ ಹಾಲ್​ನಲ್ಲಿ ನಡೆಯಲಿದೆ.  ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಸಮಿತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯ ಅದ್ವೈತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ತೀರ್ಥರು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮ ಅಧ್ಯಕ್ಷತೆಯನ್ನು ಖ್ಯಾತ ವೈದ್ಯ ಡಾ. ಎಂ ಎಂ ಜೋಶಿ ವಹಿಸಲಿದ್ದಾರೆ.

ಸುರೇಂದ್ರ ದಾನಿ ಕುರಿತ ಸ್ಮರಣೆ ಸಂಚಿಕೆ ಬಿಡುಗಡೆ

ಈ ವೇಳೆ ಎರಡು ಪ್ರತ್ಯೇಕ ಗೋಷ್ಠಿಗಳು ನಡೆಯಲಿದ್ದು, ಶ್ರೀನಿವಾಸ ವಾಡಪ್ಪಿ, ಭಾರತಿ ಜೋಶಿ, ಶ್ರೀಕೃಷ್ಣ ಸಂಪಗಾಂವಕರ್ ಮತ್ತು ಎನ್ ಎಸ್ ನಾಡಿಗೇರ ವಿಷಯ ಮಂಡಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ಮನೋಜ ಪಾಟೀಲ್, ಅರುಣಕುಮಾರ ಹಬ್ಬು, ವಿಶ್ವನಾಥ್ ಕುಲಕರ್ಣಿ, ಮೋಹನ್ ಹೆಗಡೆ, ಬಂಡು ಕುಲಕರ್ಣಿ, ಮಲ್ಲಿಕಾರ್ಜುನ ಸಿದ್ದಣ್ಣವರ್, ಪ್ರಕಾಶ್ ಶೇಟ್ ಮತ್ತು ಹಿರಿಯ ನ್ಯಾಯವಾದಿ ಸುಧೀಂದ್ರ ದೇಶಪಾಂಡೆ ಭಾಗವಹಿಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಧಾರವಾಡದ ಗೀತಾ ಆಲೂರು, ಬೆಂಗಳೂರಿನ ಸುಜ್ಞಾನ ದಾನಿ ಮತ್ತು ಸಂಗಡಿಗರು ಲಘು ಸಂಗೀತ ಪ್ರಸ್ತುತ ಪಡಿಸಲಿದ್ದಾರೆ.

ಸುರೇಂದ್ರ ದಾನಿ ಕುರಿತ ಸ್ಮರಣೆ ಸಂಚಿಕೆ ಬಿಡುಗಡೆ ಆಗಲಿದ್ದು, ಸಚಿವ ಎಚ್ ಕೆ ಪಾಟೀಲ್, ಸಂಸದ ಜಗದೀಶ್ ಶೆಟ್ಟರ್, ಮಾಜಿ ಸಂಸದ ಐ ಜಿ ಸನದಿ, ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಉದ್ಯಮಿಗಳಾದ ಕೇಶವರಾಯ ದೇಸಾಯಿ, ಗೋವಿಂದ ಜೋಶಿ, ಹಿರಿಯ ಪತ್ರಕರ್ತ ಬಾಬು ಕೃಷ್ಣಮೂರ್ತಿ, ನಾರಾಯಣ ಡ ಗಳಘಿ, ಪತ್ರಿಕೋದ್ಯಮ ಉಪನ್ಯಾಸಕ ಡಾ. ಜೆ ಎಂ ಚಂದುನವರ ಉಪಸ್ಥಿತರಿರಲಿದ್ದಾರೆ.

ಮೊಹರೆ ಹನುಮಂತ ರಾಯರಿಂದ ಪತ್ರಿಕೋದ್ಯಮಕ್ಕೆ ಪರಿಚಯ

ಸುರೇಂದ್ರ ದಾನಿ ಪತ್ರಿಕಾಲೋಕದಲ್ಲಿ ಅಂದಿನ ಕಾಲದ ಪ್ರಸಿದ್ಧ ಹೆಸರು. ಇಂದಿನ ಕನ್ನಡ ಪತ್ರಿಕೋದ್ಯಮದ ಹಲವಾರು ಹಿರಿಯ ಪತ್ರಕರ್ತರು ಮತ್ತು ಅಗ್ರ ಲೇಖಕರು ದಾನಿಯವರ ಶಿಷ್ಯರು ಎಂದು ಅಭಿಮಾನದಿಂದ ಹೇಳುತ್ತಾರೆ. ಸುರೇಂದ್ರ ದಾನಿ 1925ರ ಆಗಸ್ಟ್ 17ರಂದು ಧಾರವಾಡದಲ್ಲಿ ಜನಿಸಿದರು. ತಂದೆ ಭೀಮರಾವ್. ತಾಯಿ ಗಂಗಾಬಾಯಿ. ಸುರೇಂದ್ರ ದಾನಿ ಅವರ ಪ್ರಾರಂಭಿಕ ಶಿಕ್ಷಣ ಧಾರವಾಡ, ಬಾಗಲಕೋಟೆ, ಬಿಜಾಪುರಗಳಲ್ಲಿ ನಡೆಯಿತು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಅರ್ಥಶಾಸ್ತ್ರದಲ್ಲಿ ಬಿ.ಎ. ಪದವಿ ಪಡೆದರು.

ಸುರೇಂದ್ರ ದಾನಿ ಅವರಿಗೆ ಬ್ರಿಟಿಷರ ಗುಲಾಮಗಿರಿಯೊಳಗೆ ನೌಕರಿ ಮಾಡಬಾರದೆಂಬ ಹಠವಿತ್ತು. ಅನಿರೀಕ್ಷಿತವಾಗಿ ಮೊಹರೆ ಹನುಮಂತ ರಾಯರು ಕರೆದುಕೊಟ್ಟ ಉದ್ಯೋಗದಿಂದ ಪತ್ರಿಕೋದ್ಯಮ ಸೇರಿದರು. ಇದಕ್ಕೆಲ್ಲಾ ಗಾಂಧೀಜಿಯವರ ‘ಹರಿಜನ’ ಪತ್ರಿಕೆಯ ಪ್ರೇರಣೆಯೂ ಇತ್ತು. ಸುರೇಂದ್ರ ದಾನಿ ಅವರು 1947ರಲ್ಲಿ ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ವರದಿಗಾರರಾಗಿ ನೇಮಕಗೊಂಡರು. ನಂತರ ಉಪಸಂಪಾದಕರ ಹುದ್ದೆಗೆ ಏರಿದರು. ಬೆಂಗಳೂರಿನಲ್ಲಿ ಸಂಯುಕ್ತ ಕರ್ನಾಟಕ ಆವೃತ್ತಿ ಪ್ರಾರಂಭವಾದಾಗ ವರ್ಗವಾಯಿತು. ಅಲ್ಲಿ ಸಂಪಾದಕೀಯ ಲೇಖಕರೂ, ಸಾಪ್ತಾಹಿಕ ವಿಭಾಗದ ಸಂಪಾದಕರೂ ಆದರು. ಮತ್ತೆ ಹುಬ್ಬಳ್ಳಿಯಲ್ಲಿ ಸ್ಥಾನಿಕ ಸಂಪಾದಕರ ಹುದ್ದೆಗೆ ಹಿಂದಿರುಗಿದರು. ಹುಬ್ಬಳ್ಳಿ-ಬೆಂಗಳೂರು ಎರಡೂ ಮುದ್ರಣಗಳ ಸಂಪಾದಕರಾಗಿ ಹೊಣೆ ಹೊತ್ತರು. 1983ರಲ್ಲಿ ನಿವೃತ್ತರಾದರು.

ಪತ್ರಿಕೋದ್ಯಮದ ಜೊತೆ ಸಾಹಿತ್ಯ ರಚನೆ

ಸುರೇಂದ್ರ ದಾನಿ ನಿವೃತ್ತಿಯ ನಂತರವೂ ಒಂದೆಡೆ ಸುಮ್ಮನೆ ಕೂಡದ ಜೀವ. ಗುಲ್ಬರ್ಗಾದಿಂದ ಪ್ರಕಟವಾಗುತ್ತಿದ್ದ ‘ಕೇಸರಿಗರ್ಜನೆ’ ದಿನಪತ್ರಿಕೆಯ ಸಂಪಾದಕರಾಗಿ, ಹುಬ್ಬಳ್ಳಿಯ ‘ಖಾದಿಜಗತ್ತು’ ಪತ್ರಿಕೆಯ ಸಂಪಾದಕರಾಗಿ, ‘ಪರಿವಾರ’ ದ್ವೈಮಾಸಿಕ ಪತ್ರಿಕೆಯ ಸಂಪಾದಕರಾಗಿ, ‘ಸುರಾಜ್ಯಪಥ’ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿ ಹೀಗೆ, ನಿರಂತರವಾಗಿ ಒಂದಿಲ್ಲೊಂದು ಜವಾಬ್ದಾರಿ ಹೊತ್ತು ನಡೆದಿದ್ದಾರೆ. ಪತ್ರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಸ್ಮರಣ ಸಂಚಿಕೆಗಳ ಸಂಪಾದಕತ್ವವನ್ನೂ ಅವರು ನಿರ್ವಹಿಸಿದ್ದರು.

ಸುರೇಂದ್ರ ದಾನಿ ಅವರು ‘ಪತ್ರಕರ್ತನ’ ಜವಾಬ್ದಾರಿಗಳ ನಡುವೆಯೂ ಸಾಹಿತ್ಯ ಕೃತಿಗಳ ರಚನೆಗಳಲ್ಲಿ ತೊಡಗಿದ್ದರು. ಕೌಜಲಗಿ ಹನುಮಂತ ರಾಯರು, ಮೊಹರೆ ಹನುಮಂತರಾಯರು, ಅಮೆರಿಕದ ಪುಲಿಟ್ಜರ್ ಪಾರಿತೋಷಕ ಸ್ಥಾಪಕ ಜೋಸೆಫ್ ಪುಲಿಟ್ಜರ್ ಕುರಿತು ಕನ್ನಡಾನುವಾದದ ಕೃತಿ ಸೇರಿದಂತೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಜೀವನ ಚರಿತ್ರೆಗಳು, ಪತ್ರಿಕಾ ಪ್ರಬಂಧಗಳು ಎಂಬುದು ಇವರ ಪ್ರಬಂಧ ಸಂಗ್ರಹ. ಸ್ವಯಂ ಸೇವಕರ ನೆನಪುಗಳು, ಸ್ವಾತಂತ್ರ್ಯಸೇನಾನಿ, ಸಾಧನೆ-ಸವಾಲು, ಧಾರವಾಡ ಜಿಲ್ಲಾ ಸ್ವಾತಂತ್ರ್ಯ ಸಂಗ್ರಾಮ, ವ್ಯಾಸಸೃಷ್ಟಿ – ಕುಮಾರವ್ಯಾಸ ದೃಷ್ಟಿ ಮುಂತಾದವು ಅವರ ಇನ್ನಿತರ ವೈವಿಧ್ಯಮಯ ಬರಹಗಳಲ್ಲಿ ಕೆಲವು.

ಸುರೇಂದ್ರ ದಾನಿಗೆ ಸಂದ ಪ್ರಶಸ್ತಿಗಳು

ಸುರೇಂದ್ರ ದಾನಿ ಅವರು ಮೊಹರೆ ಹನುಮಂತರಾವ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ, ಹುಬ್ಬಳ್ಳಿಯ ಕುಮಾರವ್ಯಾಸ ಸೇವಾ ಸಂಘದ ಗೌರವ ಕಾರ‍್ಯದರ್ಶಿ, ಗಾಂಧೀ ವಿಚಾರವೇದಿಕೆ ಸ್ಥಾಪಕ ಅಧ್ಯಕ್ಷ, ಗಮಕ ಸಂಗೀತೋತ್ಸವಗಳ ರೂವಾರಿ ಕೂಡ. ಹೀಗೆ ಹಲವು ರೀತಿಯಲ್ಲಿ ಸದಾ ಕ್ರಿಯಾಶೀಲರಾಗಿದ್ದರು. ಕುಮಾರವ್ಯಾಸ ಕೃತಿಯ ಬಗ್ಗೆ ಅವರಿಗೆ ವಿಶೇಷ ಆಸಕ್ತಿ ಇದ್ದು, ಭಾರತ ವಾಚನ ವ್ಯಾಖ್ಯಾನ ನಿಪುಣರಾಗಿದ್ದರು.

ಸುರೇಂದ್ರ ದಾನಿ ಅವರಿಗೆ ಕರ್ನಾಟಕ ಪತ್ರಿಕಾ ಅಕಾಡಮಿ ಪ್ರಶಸ್ತಿ, ಖಾದ್ರಿ ಶಾಮಣ್ಣ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಚ್.ಆರ್. ಕುಲಕರ್ಣಿ ಸ್ಮಾರಕ ಪತ್ರಿಕಾ ಪ್ರಶಸ್ತಿ, ಜಗನ್ನಾಥರಾವ್ ಟಂಕಸಾಲಿ ಸ್ಮಾರಕ ಪತ್ರಿಕಾ ಪ್ರಶಸ್ತಿ, ಕರ್ನಾಟಕ ಗಮಕ ಕಲಾಪರಿಷತ್ತಿನ ಗಮಕ ವ್ಯಾಖ್ಯಾನ ಪ್ರಶಸ್ತಿ, ಟಿಎಸ್ಸಾರ್ ಪತ್ರಿಕಾ ಪ್ರಶಸ್ತಿಗಳೂ ಸೇರಿ ಅನೇಕ ಗೌರವಗಳು ಸಂದಿದ್ದವು. ಸುರೇಂದ್ರ ದಾನಿ ಅವರು 2010ರ ಮಾರ್ಚ್ 28ರಂದು ವೈಕುಂಠವಾಸಿಗಳಾದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 12:15 pm, Fri, 19 December 25

Source link

ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ – Kannada News | Good News for Farmers as CM Siddaramaiah Announces Hike in Milk Incentive to Rs 7 per Litre

ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ – Kannada News | Assault on Child in Tyagarajanagar, Bengaluru; Accused Arrested

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ರಂಜನ್​​ನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್: ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ – Kannada News | No Relief for Actress Ranya Rao in Gold Smuggling Case as High Court Dismisses Habeas Corpus Plea

ಬೆಂಗಳೂರು, ಡಿಸೆಂಬರ್ 19: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao), ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ.

ಬಂಧನ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಮೂವರು ಆರೋಪಿಗಳ ಬಂಧನ ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ, ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಮೂಲಕ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ಸಿಗದಂತಾಗಿದೆ. ಪ್ರಕರಣದ ತನಿಖೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಹಿನ್ನೆಲೆ

2025 ರ ಮಾರ್ಚ್ 3 ರಂದು ದುಬೈನಿಂದ ಬೆಂಗಳೂರಿಗೆ ಬಂದ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದೊಂದಿಗೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಡಿಆರ್‌ಐ ತನಿಖೆಯಲ್ಲಿ ರನ್ಯಾ ರಾವ್ ಮತ್ತು ಸಹ-ಆರೋಪಿಗಳು ಒಟ್ಟು 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಡಿಆರ್‌ಐ ಸುಮಾರು 250 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿ, 102 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಿದೆ. ಜಾರಿ ನಿರ್ದೇಶನಾಲಯವು 34 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ.

ಇದನ್ನೂ ಓದಿ: ಅಕ್ರಮ ಚಿನ್ನ ಸಾಗಣೆ ಕೇಸ್: ನಟಿ ರನ್ಯಾ ರಾವ್​ಗೆ 102.55 ಕೋಟಿ ರೂಪಾಯಿ ದಂಡ

ಈ ಪ್ರಕರಣದಲ್ಲಿ ಹೋಟೆಲ್ ಉದ್ಯಮಿ ತರುಣ್ ಕೊಂಡರಾಜು ಹಾಗೂ ಆಭರಣ ವ್ಯಾಪಾರಿಗಳಾದ ಸಾಹಿಲ್ ಮತ್ತು ಭರತ್ ಜೈನ್ ಸಹ-ಆರೋಪಿಗಳಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು – Kannada News | Chaitra Kundapura’s Bigg Boss Emotional Drama: Sulli Tag and Viral Crying

ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್​ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್​ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ.

ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್​ ಅಲ್ಲಿ ಅನೇಕ ಬಾರಿ ಅತ್ತಿದ್ದು ಇದೆ. ಈ ಸಂದರ್ಭದಲ್ಲಿ ಅವರು ದೇವರಿಗೆ ದೀಪ ಹಚ್ಚಿ ಕುಂಕುಮವನ್ನು ಹಣೆಗೆ ಇಟ್ಟುಕೊಳ್ಳುತ್ತಿದ್ದರು. ಅವರು ಬಂದು ಕೆಲ ವಾರ ಕಳೆದಿದ್ದರು ಈ ರೀತಿ ಎಂದಿಗೂ ಮಾಡಿರಲಿಲ್ಲ. ಆದರೆ, ಈ ವಾರ ಅವರು ಆ ರೀತಿ ನಡೆದುಕೊಂಡಿದ್ದಾರೆ. ಇದಕ್ಕೆ ಕಾರಣ ಆಗಿದ್ದು ರಜತ್ ಅವರ ಮಾತು.

ರಜತ್ ಅವರು ಈ ವಾರ ಚೈತ್ರಾ ಕುಂದಾಪುರ ಜೊತೆ ಜಗಳ ಆಡಿದರು. ಆಟದ ಮಧ್ಯೆ ಅವರನ್ನು ಸುಳ್ಳಿ ಎಂದು ಕರೆದರು. ಕಳೆದ ಸೀಸನ್​ ಅಲ್ಲಿ ಅನೇಕರು ಚೈತ್ರಾ ಅವರನ್ನು ಸುಳ್ಳಿ ಎಂದು ಕರೆದಿದ್ದು ಇದೆ. ಈ ಬಾರಿಯೂ ಅದೇ ಟ್ಯಾಗ್​ನಿಂದ ಚೈತ್ರಾನ ಕರೆದಿದ್ದಕ್ಕೆ ಅವರಿಗೆ ಬೇಸರ ಆಗಿದೆ. ಅವರು ಗಳಗಳನೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್

ಗಿಲ್ಲಿ ಹಾಗೂ ರಜತ್ ಅವರು ಸೋಫಾ ಏರಿಯಾದಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಅವರು ದೇವರ ಎದುರು ಬಂದು ಕಣ್ಣೀರು ಹಾಕಿದ್ದಾರೆ. ಕುಂಕುಮ ಹಚ್ಚಿಕೊಳ್ಳುವಾಗ ಅವರು ಗಿಲ್ಲಿ ಹಾಗೂ ರಜತ್ ಕಡೆ ನೋಡಿದ್ದಾರೆ. ಅವರು ತಮ್ಮನ್ನೇ ನೋಡುತ್ತಿದ್ದಾರೆ ಎಂಬುದನ್ನು ಚೈತ್ರಾ ಖಚಿತ ಮಾಡಿಕೊಂಡಂತಿತ್ತು. ಈ ವಿಷಯವನ್ನು ರಾಶಿಕಾ ಕೂಡ ದೊಡ್ಮನೆಯಲ್ಲಿ ಚರ್ಚೆ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೆಣ್ಣು ಮಗಳಿಗೆ ಅಪ್ಪನಾದೆ ಎನ್ನುವ ತಂದೆಯ ಖುಷಿಯ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

Positive fan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆಸ್ಪತ್ರೆಯ ಚಿತ್ರಣ ಕಾಣಬಹುದು. ನವಜಾತ ಶಿಶುವನ್ನು ಎತ್ತಿಕೊಂಡು ಮಹಿಳೆಯೂ ಖುಷಿಯಿಂದಲೇ ಬರುತ್ತಿರುವುದನ್ನು ನೋಡಬಹುದು. ಆ ಮಹಿಳೆಯ ಸುತ್ತಲಿದ್ದ ಮಹಿಳೆಯರು ಕೂಡ ಖುಷಿಯಿಂದಲೇ ಡ್ಯಾನ್ಸ್ ಮಾಡುತ್ತಿದ್ದಾರೆ. ಇತ್ತ ತಂದೆಯೂ ಹೆಣ್ಣು ಮಗು ಹುಟ್ಟಿತು ಎನ್ನುವ ಖುಷಿಗೆ ಆಸ್ಪತ್ರೆಯಲ್ಲೇ ಕುಣಿದಾಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ವೃತ್ತಿ ಜೀವನದ ಒತ್ತಡಕ್ಕೆ ಮಣಿದು ತಂದೆಗೆ ಕರೆ ಮಾಡಿದ ಯುವತಿ, ಮುಂದೇನಾಯ್ತು ನೋಡಿ

ಈ ವಿಡಿಯೋ ಎಂಟು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇಂದು ನಾನು ನೋಡಿದ ಅತ್ಯುತ್ತಮ ವಿಷಯ ಎಂದಿದ್ದಾರೆ. ಮತ್ತೊಬ್ಬರು, ಜೀವನದಲ್ಲಿ ಗೆದ್ದಂತಹ ಅನುಭವ, ಅವರ ನಗುವೇ ಎಲ್ಲಾ ಹೇಳುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರ ಮಗಳ ಆಗಮನವನ್ನು ಎಲ್ಲರಿಗೂ ಸಂಭ್ರನಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು! – Kannada News | Cricket Gets Green Signal at Chinnaswamy Stadium: Bengaluru Police Issue 17 Point Safety Guidelines

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್

ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ, ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲು ಸಜ್ಜಾಗಿದ್ದಾರೆ.

ಗೃಹ ಇಲಾಖೆ ಸಿದ್ಧಪಡಿಸಿರುವ ಈ ಷರತ್ತುಗಳ ಕುರಿತು ಕೆಎಸ್​​ಸಿಎ ಪದಾಧಿಕಾರಿಗಳು ಗೃಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಕೆಎಸ್​​ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ತಂಡ ಗೃಹ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಿದೆ. ಪೊಲೀಸ್ ಕಮಿಷನರ್ ಅವರು ನ್ಯಾ. ಮೈಕಲ್ ಡಿ‌ ಕುನ್ಹಾ ಸಮಿತಿ ವರದಿಯ ಶಿಫಾರಸುಗಳನ್ನು ಆಧರಿಸಿ, ಕಾಲ್ತುಳಿತದಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಈ 17 ಷರತ್ತುಗಳನ್ನು ವಿಧಿಸಿದ್ದಾರೆ. ಕೆಎಸ್​​ಸಿಎ ಈ ಷರತ್ತುಗಳನ್ನು ಈಡೇರಿಸಿದ ತಕ್ಷಣವೇ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದು ಎಂದು ತಿಳಿದುಬಂದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ವೇಳೆಗೆ ಎಲ್ಲವರೂ ಸರಿಯಾಗುವ ನಿರೀಕ್ಷೆ ಇದೆ.

17 ಅಂಶಗಳ ಮಾರ್ಗಸೂಚಿ ಬಿಡುಗಡೆ: ಏನೇನಿವೆ?

ಮಾರ್ಗಸೂಚಿಗಳಲ್ಲಿನ ಪ್ರಮುಖ ಅಂಶಗಳೆಂದರೆ, ಸ್ಟೇಡಿಯಂ ಒಳಗೆ ಮತ್ತು ಹೊರಗೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಗಳ ಸುಧಾರಣೆ. ಪ್ರಸ್ತುತ, ಟಿಕೆಟ್ ವಿತರಣೆ ಮತ್ತು ಪ್ರೇಕ್ಷಕರ ಕ್ಯೂಗಳು ಫುಟ್​ಪಾತ್​​​ಗಳ ಮೇಲೆ ನಡೆಯುತ್ತಿದ್ದು, ಇದು ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತದೆ. ಇದನ್ನು ತಪ್ಪಿಸಲು ಪ್ರತ್ಯೇಕ ಸ್ಥಳಗಳನ್ನು ಗುರುತಿಸಬೇಕು. ಸಾರ್ವಜನಿಕರ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು. ಹಾಗೆಯೇ, ಸ್ಟೇಡಿಯಂನ ಎಲ್ಲಾ ಗೇಟ್‌ಗಳನ್ನು ಕನಿಷ್ಠ ಆರು ಅಡಿ ಅಗಲಕ್ಕೆ ವಿಸ್ತರಿಸಬೇಕು. ಸದ್ಯದ ಕಿಕ್ಕಿರಿದ ಗೇಟ್‌ಗಳು ಮತ್ತು ಅಸಮವಾದ ಪ್ರವೇಶ ಮಾರ್ಗಗಳು ಅಪಾಯವನ್ನುಂಟುಮಾಡುತ್ತವೆ.

ಇದಲ್ಲದೆ, ಅಗ್ನಿಶಾಮಕ ಸುರಕ್ಷತೆಗಾಗಿ ಪ್ರತ್ಯೇಕ ನಿರ್ಗಮನ ದ್ವಾರಗಳನ್ನು ಕಡ್ಡಾಯಗೊಳಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸ್ಟೇಡಿಯಂ ಒಳಗೆ ಪ್ರತ್ಯೇಕ ಸೌಲಭ್ಯಗಳನ್ನು ಒದಗಿಸಬೇಕು. ಸ್ಟೇಡಿಯಂ ಒಳಗೆ ಪ್ರವೇಶಿಸುವ ಪ್ರೇಕ್ಷಕರ ನೈಜ-ಸಮಯದ ಸಂಖ್ಯೆಯನ್ನು (ರಿಯಲ್ ಟೈಮ್ ಕೌಂಟ್) ನಿಖರವಾಗಿ ಇಟ್ಟುಕೊಳ್ಳುವ ವ್ಯವಸ್ಥೆ ಜಾರಿಗೆ ತರಬೇಕು. ಟಿಕೆಟ್‌ಗಳನ್ನು ಸ್ಟೇಡಿಯಂ ಒಳಗೆ ವಿತರಿಸಲು ಪ್ರತ್ಯೇಕ ಸ್ಥಳಗಳನ್ನು ಗೊತ್ತುಪಡಿಸಬೇಕು. ಸ್ಟೇಡಿಯಂ ಸುತ್ತಲಿನ ಪಾರ್ಕಿಂಗ್, ಪಿಕ್‌ಅಪ್ ಮತ್ತು ಡ್ರಾಪ್ ವ್ಯವಸ್ಥೆಗಳನ್ನು ಸುಧಾರಿಸಬೇಕು.

ಇದನ್ನೂ ಓದಿ: IPL 2026: ಕೊನೆಗೂ RCB ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

ಈ ಎಲ್ಲಾ ಬದಲಾವಣೆಗಳಿಗೆ ಗಣನೀಯ ಪ್ರಮಾಣದ ಕಾಮಗಾರಿಗಳನ್ನು ನಡೆಸಬೇಕಾದ ಅಗತ್ಯವಿದೆ. ಇವುಗಳನ್ನು ಪೂರ್ಣಗೊಳಿಸಲು ಸುಮಾರು ಎರಡು ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಒಮ್ಮೆ ಎಲ್ಲಾ ಕೆಲಸಗಳು ಪೂರ್ಣಗೊಂಡರೆ, ಬಹುಶಃ ಮಾರ್ಚ್ ತಿಂಗಳ ವೇಳೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಲ್ಲಾ ರೀತಿಯ ಕ್ರಿಕೆಟ್ ಪಂದ್ಯಾವಳಿಗಳನ್ನು ನಡೆಸಲು ಸಂಪೂರ್ಣ ಅವಕಾಶ ಸಿಗಲಿದೆ. ಇದು ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿಯಾಗಿದ್ದು, ಸುರಕ್ಷಿತ ವಾತಾವರಣದಲ್ಲಿ ಪಂದ್ಯಗಳನ್ನು ವೀಕ್ಷಿಸಲು ಅವಕಾಶ ದೊರೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:27 am, Fri, 19 December 25

Source link

Exit mobile version