RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ – Kannada News | Will Phil Salt play RCB vs KKR in Raipur?

ರಾಯ್​ಪುರ್​ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ.

Source link

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Rain Update: Heatwave Alert in Coastal region, Thunderstorm in South

ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ!

ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather)  ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ಕರಾವಳಿಯಲ್ಲಿ ಹೀಟ್​ವೇವ್ ಆತಂಕ

ಎಲ್ಲೆಲ್ಲಿ ಮಳೆ?

ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 13, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಏಕಾದಶಿ, ವಿಷ್ಕಂಭ ಯೋಗ, ಬಾಲವ ಕರಣ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸ್ಥಾನದ ಆಧಾರದ ಮೇಲೆ ಭವಿಷ್ಯವನ್ನು ನೀಡಲಾಗಿದೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯ ಉತ್ತರಾಭಾದ್ರ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ರಾಹುಕಾಲ ಮಧ್ಯಾಹ್ನ 12:15 ರಿಂದ 1:50 ರವರೆಗೆ ಇರುತ್ತದೆ. ಆದರೆ ಶುಭಕಾರ್ಯಗಳಿಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:15 ರವರೆಗೆ ಲಭ್ಯವಿದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಧ್ವನಿ ಇಲ್ಲ? ‘ಏಕ್ ದಿನ್’ ಸೋಲಿನ ಬಳಿಕ ನಟಿಗೆ ಮತ್ತೊಂದು ಹಿನ್ನಡೆ – Kannada News | Sai Pallavi Ramayana dubbing controversy Hindi accent criticism after Ek Din

ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಸೀತಾ ಪಾತ್ರಧಾರಿ ಸಾಯಿ ಪಲ್ಲವಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಸಾಯಿ ಪಲ್ಲವಿ (Sai Pallavi) ಅವರ ಹಿಂದಿ ಉಚ್ಚಾರಣೆಯ ಬಗ್ಗೆ ಕೇಳಿಬರುತ್ತಿರುವ ಟೀಕೆಗಳ ಹಿನ್ನೆಲೆಯಲ್ಲಿ, ಚಿತ್ರತಂಡವು ಅವರ ಪಾತ್ರಕ್ಕೆ ಬೇರೆಯವರಿಂದ ಡಬ್ ಮಾಡಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇದರಿಂದ ಹಿಂದಿ ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರಿಗೆ ಕೊಂಚ ಹಿನ್ನಡೆ ಆದಂತೆ ಆಗಲಿದೆ. ಅಲ್ಲದೇ, ಅವರ ಅಭಿಮಾನಿಗಳಿಗೆ ಖಂಡಿತಾ ಬೇಸರ ಆಗಲಿದೆ.

ಸಾಯಿ ಪಲ್ಲವಿ ಅಭಿನಯದ ‘ಏಕ್ ದಿನ್’ ಚಿತ್ರದ ಪ್ರಚಾರದ ವೇಳೆ ಅವರ ಹಿಂದಿ ಉಚ್ಚಾರಣೆಯಲ್ಲಿ ತಮಿಳು ಶೈಲಿ ಎದ್ದು ಕಾಣುತ್ತಿತ್ತು. ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ನೆಟ್ಟಿಗರು ಸಾಯಿ ಪಲ್ಲವಿ ಅವರನ್ನು ಟ್ರೋಲ್ ಮಾಡಲು ಶುರು ಮಾಡಿದ್ದರು. ‘ಹಿಂದಿಯ ಮೂಲ ಪದಗಳನ್ನೇ ಸರಿಯಾಗಿ ಉಚ್ಚರಿಸಲು ಬಾರದ ನಟಿಯನ್ನು ಸೀತಾ ಮಾತೆಯ ಪಾತ್ರಕ್ಕೆ ಆಯ್ಕೆ ಮಾಡಿದ್ದೇಕೆ?’ ಎಂದು ಹಲವರು ಪ್ರಶ್ನಿಸಿದ್ದರು.

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಒಂದು ಸಾಂಸ್ಕೃತಿಕ ಮಹತ್ವವಿರುವ ಚಿತ್ರವಾಗಿದೆ. ಇದರಲ್ಲಿ ಭಾಷೆ ಅತ್ಯಂತ ಶುದ್ಧವಾಗಿ ಮತ್ತು ಸ್ಪಷ್ಟವಾಗಿರಬೇಕು ಎಂಬುದು ತಂಡದ ಆಶಯ. ‘ಏಕ್ ದಿನ್’ ಚಿತ್ರದಲ್ಲಿ ಸಾಯಿ ಪಲ್ಲವಿ ಅವರ ಪಾತ್ರವು ತಮಿಳು ಹಿನ್ನೆಲೆಯದ್ದಾಗಿದ್ದರಿಂದ ಅಲ್ಲಿನ ಉಚ್ಚಾರಣೆ ಹೊಂದಿಕೆಯಾಗಿತ್ತು. ಆದರೆ ‘ರಾಮಾಯಣ’ ಸಿನಿಮಾದಲ್ಲಿ ಸೀತಾ ದೇವಿಯ ಪಾತ್ರಕ್ಕೆ ಅತ್ಯಂತ ಪರಿಷ್ಕೃತ ಹಿಂದಿ ಬೇಕಿರುವುದರಿಂದ, ವೃತ್ತಿಪರ ಡಬ್ಬಿಂಗ್ ಕಲಾವಿದರಿಂದ ಧ್ವನಿ ಕೊಡಿಸಲು ನಿರ್ಮಾಪಕರು ಚಿಂತಿಸುತ್ತಿದ್ದಾರೆ ಎಂದು ವರದಿ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ಪರವಾಗಿ ಕೆಲವರು ಬ್ಯಾಟಿಂಗ್ ಮಾಡುತ್ತಿದ್ದರೆ, ಇನ್ನು ಕೆಲವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ‘ಸಾಯಿ ಪಲ್ಲವಿ ಅವರ ನಟನೆ ಅದ್ಭುತವಾಗಿದೆ, ಭಾಷೆಯೊಂದೇ ಅಡೆತಡೆಯಾಗಬಾರದು’ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ‘ಇಷ್ಟು ದೊಡ್ಡ ಚಿತ್ರಕ್ಕೆ ಭಾಷೆಯ ಮೇಲೆ ಹಿಡಿತವಿರುವ ನಟಿಯನ್ನು ಆಯ್ಕೆ ಮಾಡಬೇಕಿತ್ತು’ ಎಂದು ಟೀಕಾಕಾರರು ವಾದಿಸುತ್ತಿದ್ದಾರೆ.

ಇದನ್ನೂ ಓದಿ: ಚೇತರಿಕೆ ಕಾಣದ ಸಾಯಿ ಪಲ್ಲವಿ ಸಿನಿಮಾ; ನಿರ್ಮಾಪಕ ಆಮಿರ್​ಗೆ ನಷ್ಟ?

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ಶ್ರೀರಾಮನಾಗಿ ನಟಿಸುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ರಾವಣನಾಗಿ ಅಭಿನಯಿಸುತ್ತಿದ್ದಾರೆ. ಸನ್ನಿ ಡಿಯೋಲ್ ಅವರಿಗೆ ಹನುಮಂತನ ಪಾತ್ರ ನೀಡಲಾಗಿದೆ. ರವಿ ದುಬೆ ಅವರು ಲಕ್ಷ್ಮಣನಾಗಿ ಕಾಣಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ಸಮಯದಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ ಗೊತ್ತಾ? – Kannada News | Money Mindset: Worrying Constantly about Money can lead you to negativity

ಹಗಲು ರಾತ್ರಿ ಹಣದ ಚಿಂತೆ ಮಾಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಣವು ಜೀವನಕ್ಕೆ ಅವಶ್ಯಕವಾದರೂ, ಅದರ ಅತಿಯಾದ ಚಿಂತೆ ವ್ಯಕ್ತಿಯ ಬದುಕಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಶಾಸ್ತ್ರಗಳು “ಅತಿ ಸರ್ವತ್ರ ವರ್ಜಯೇತ್” ಎಂದು ಹೇಳುತ್ತವೆ, ಅಂದರೆ ಯಾವುದೇ ವಿಷಯದಲ್ಲಿ ಅತಿರೇಕ ಸಲ್ಲದು. ಬೆಳಗ್ಗಿನಿಂದ ಸಾಯಂಕಾಲದವರೆಗೆ ಕೇವಲ ಹಣ, ಹಣ ಎಂದು ಚಿಂತಿಸುವುದು ಜ್ಯೋತಿಷ್ಯದ ಪ್ರಕಾರ ದೋಷಗಳಿಗೆ ಕಾರಣವಾಗುತ್ತದೆ.

ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ, ಅರ್ಥವು ಧರ್ಮದ ನಂತರ ಬರುತ್ತದೆ. ಧರ್ಮದಿಂದ ಹಣ ಸಂಪಾದಿಸಿ, ಆ ಆಸೆಯಿಂದ ಮೋಕ್ಷದೆಡೆ ಸಾಗಬೇಕು. ಆದರೆ, ಹಣದ ಅತಿಯಾದ ವ್ಯಾಮೋಹವು ಸುಖ ಸಂತೋಷಗಳಿಗೆ ದೂರ ಮಾಡಿ, ಸಂಬಂಧಗಳನ್ನು ಹಾಳು ಮಾಡುತ್ತದೆ ಮತ್ತು ದೈವಬಲವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ದೇಹದ ಅಂಗಾಂಗ ವೈಫಲ್ಯದಂತಹ ಆರೋಗ್ಯ ಸಮಸ್ಯೆಗಳಿಗೂ ಇದು ಕಾರಣವಾಗಬಹುದು ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

RCB vs KKR ಪಂದ್ಯಕ್ಕೆ 5 ಆಟಗಾರರು ಅಲಭ್ಯ!

Source link

ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ – Kannada News | Belagavi, Bagalkote, Mangaluru Hit by Severe Storms: Uprooted Trees, Power Cuts and Traffic Disruption

ಬೆಳಗಾವಿ, ಮೇ 13: ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ರಭಸಕ್ಕೆ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಸಂಚಾರಕ್ಕೆ ತೀವ್ರ ಅಡ್ದಿಯಾಗಿದೆ. ರಸ್ತೆಗಳ ಮೇಲೆ ಬಿದ್ದ ಮರಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಬಾಗಲಕೋಟೆಯ ಬಾದಾಮಿಯಲ್ಲೂ ಇದೇ ರೀತಿಯ ಸನ್ನಿವೇಶವಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಾಗಲಕೋಟೆ-ಬಾದಾಮಿ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಮಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಬೈಕುಗಳನ್ನು ರಸ್ತೆ ಬದಿ ನಿಲ್ಲಿಸಿ ನಡೆದುಕೊಂಡು ಹೋಗಬೇಕಾಯಿತು. ಕಾರವಾರ ಮತ್ತು ಹುಬ್ಬಳ್ಳಿಯಲ್ಲೂ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಿಂದಾದ ಹಾನಿಯು ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟುಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿ, ಚಿಕ್ಕಮಗಳೂರು ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ – Kannada News | Heavy Rain Havoc in Karnataka: Trees Uprooted, Power Lines Damaged and Crop Loss Reported Across Districts

ಚಿಕ್ಕಮಗಳೂರಿನಲ್ಲಿ ಮಳೆImage Credit source: tv9

ಬೆಂಗಳೂರು, ಮೇ 13: ಕರ್ನಾಟಕದ (Karnataka) ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಬಿರುಗಾಳಿ ಸಹಿತ ಸುರಿದ ಮಳೆ ಅಪಾರ ಹಾನಿ ಉಂಟುಮಾಡಿದೆ. ಬೆಳಗಾವಿ, ಚಿಕ್ಕಮಗಳೂರು, ಬಾಗಲಕೋಟೆ ಮತ್ತು ಹಾವೇರಿ ಸೇರಿದಂತೆ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗಾವಿ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ ಸಹಿತ ಸುರಿದ ವರ್ಷಧಾರೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಬಿರುಗಾಳಿ ಮಳೆಗೆ ಬೃಹತ್ ಮರಗಳು ರಸ್ತೆಗೆ ಉರುಳಿ ವಾಹನ ಸಂಚಾರ ಸ್ಥಗಿತಗೊಂಡಿದೆ.
  • ಚಿಕ್ಕಮಗಳೂರಿನಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ.
  • ಹಾವೇರಿ ಮತ್ತು ದಾವಣಗೆರೆಯಲ್ಲಿ ನೂರಾರು ಅಡಕೆ ಮತ್ತು ಬಾಳೆ ಮರಗಳು ನಾಶವಾಗಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ರಾಜ್ಯಾದ್ಯಂತ ಮಳೆ ಅವಾಂತರ

ಬೆಳಗಾವಿ ಜಿಲ್ಲೆಯ ಕಕ್ಕೇರಿ ಗ್ರಾಮದಲ್ಲಿ ರಸ್ತೆ ಬದಿಯ ಬೃಹತ್ ಮರವೊಂದು ನೆಲಕ್ಕುರುಳಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ರಸ್ತೆಯಲ್ಲೂ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು, ನಂತರ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ತೆರವುಗೊಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ವಿದ್ಯುತ್ ತಂತಿಗಳು ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಕಳಸ ಮತ್ತು ಕೊಪ್ಪ ತಾಲೂಕುಗಳಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಬಾರ್ಗಲ್ ಗ್ರಾಮವೊಂದರಲ್ಲೇ 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಬಾಗಲಕೋಟೆಯ ಬಾದಾಮಿಯಲ್ಲೂ ಧಾರಾಕಾರ ಮಳೆಗೆ ಮರಗಳು ಉರುಳಿ ಸಂಚಾರ ಅಸ್ತವ್ಯಸ್ತವಾಗಿತ್ತು.

ಕಂಗಾಲಾದ ಅನ್ನದಾತ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿಯಲ್ಲಿ 200ಕ್ಕೂ ಹೆಚ್ಚು ಅಡಕೆ ಮರಗಳು ನಾಶವಾಗಿದ್ದು, ಕೋಳಿ ಶೆಡ್ ಕುಸಿದು ಬಿದ್ದಿದೆ. ಇದರಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದ್ದು, ಸಂತ್ರಸ್ತರು ಸರ್ಕಾರದ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ!

ದಾವಣಗೆರೆಯ ಕೆರೆಯಾಗಲಹಳ್ಳಿಯಲ್ಲೂ ಬಾಳೆ ಮತ್ತು ಅಡಕೆ ತೋಟಗಳು ನಾಶವಾಗಿದ್ದು, ಶಾಸಕ ಬಸವಂತಪ್ಪ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಾರ್ಯ ವೈಫಲ್ಯ, ಅತಿಯಾದ ಹತಾಶೆ – Kannada News | Horoscope May 13 Wednesday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ಪ್ರಾಮಾಣಿಕತೆ ಇತರರ ಗಮನ ಸೆಳೆಯುತ್ತದೆ. ಕೆಲಸದಲ್ಲಿ ಚಿಕ್ಕ ವಿಳಂಬ ಸಂಭವಿಸಬಹುದು, ತಾಳ್ಮೆಯಿಂದಿರಿ. ನಿಮ್ಮ ಯೋಜನೆಗಳಿಗೆ ಪೂರಕವಾದ ಅವಕಾಶಗಳು ಎದುರಾಗಬಹುದು. ಮನೆಯ ಕೆಲಸವನ್ನು ಬೇರೆಯವರಿಗೆ ಹೇಳಿದರೂ ನೀವೇ ಮಾಡಬೇಕಾಗುವುದು. ಇಂದು ಹೊಸ ಕಲಿಕೆಯ ಹಂಬಲವಿರಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ.

ವೃಷಭ ರಾಶಿ:

ಆದಷ್ಟು ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ. ಹಣಕಾಸು ಪರಿಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಆದರ್ಶಗಳ ಬಗ್ಗೆ ಯೋಚನೆ ಮಾಡುವ ದಿನ. ಸ್ನೇಹಿತರಿಂದ ಪ್ರೇರಣಾ ಮಾತುಗಳು ಸಿಗಬಹುದು. ವ್ಯವಸ್ಥೆ ಸರಿಯಾಗಲು ಎಲ್ಲ ಪ್ರಯೋಗವನ್ನೂ ಮಾಡಿ ಬತ್ತಳಿಕೆ ಖಾಲಿ ಮಾಡಿಕೊಳ್ಳುವಿರಿ. ಬದಲಾವಣೆಯ ಶಕ್ತಿ ಇವತ್ತು ನಿಮ್ಮ ಪಕ್ಕದಲ್ಲಿದೆ. ಉದ್ವೇಗಕ್ಕೆ ಒಳಗಾಗದೇ ಕಾರ್ಯಗಳನ್ನು ನಿರ್ವಹಿಸಿ. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ.

ಮಿಥುನ ರಾಶಿ:

ಇಂದು ಅನಿರೀಕ್ಷಿತವಾಗಿ ಅಮೂಲ್ಯವಾದ ವಸ್ತುವೊಂದು ಸಿಗಲಿದೆ. ಆದಾಯ ಅಧಿಕ ಹಾಗೂ ಹಣವನ್ನು ಪಡೆಯಲು ಕಷ್ಟಪಡುವಿರಿ. ಆರ್ಥಿಕವಾಗಿ ಸ್ವಲ್ಪ ಕಿರಿಕಿರಿ ಉಂಟಾಗಬಹುದು, ತಾಳ್ಮೆ ಇರಲಿ. ಇಂದು ನಿಮ್ಮ ಮಾತುಗಳು ಪರಿಣಾಮಕಾರಿ ಆಗಬಲ್ಲವು ಜವಾಬ್ದಾರಿಯಿಂದ ಮಾತನಾಡಿ. ಕೆಲವರಿಂದ ಭೀತಿಯಾಗುವುದು. ಗೊಂದಲವನ್ನು ನೀವು ಮೀರುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು.

ಕರ್ಕಾಟಕ ರಾಶಿ:

ನಿಮ್ಮ ಮೇಲೆ ಉಂಟಾದ ಅಪನಂಬಿಕೆಯನ್ನು ದೂರಮಾಡಿಕೊಳ್ಳಲು ಪ್ರಯತ್ನಿಸುವಿರಿ. ತಾಳ್ಮೆಯ ಪರೀಕ್ಷೆ ಇಂದಾಗನಹುದು. ಕೆಲಸದ ಒತ್ತಡ ಹೆಚ್ಚಾಗಿ ತೋರುತ್ತಾದರೂ, ನೀವು ಅದನ್ನು ಶ್ರದ್ಧೆಯಿಂದ ನಿಭಾಯಿಸಬಹುದು. ಹಣಕಾಸು ವಿಚಾರದಲ್ಲಿ ಚುರುಕಾಗಿ ಯೋಚಿಸಿ. ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ಯಾವಿದೇ ವ್ಯವಸ್ಥೆಯಲ್ಲಿ ಮುಂದುವರಿಯಲು ಇಷ್ಟವಾಗದು. ವ್ಯಂಗ್ಯ ಮಾತುಗಳನ್ನು ಆಡಿ ಯಾರಿಂದಲೂ ಏನನ್ನೂ ನಿರೀಕ್ಷಿಸಲಾಗದು.

ಸಿಂಹ ರಾಶಿ:

ಕೆಲಸದಲ್ಲಿ ನಿಮ್ಮ ಶ್ರಮ ಗುರುತಿಸಲ್ಪಡುತ್ತದೆ. ಹಣಕಾಸು ಸ್ಥಿತಿ ಸ್ಥಿರವಾಗಿರುತ್ತದೆ. ನಿಮ್ಮ ಗೆಲವು ತೃಪ್ತಿದಾಯಕವಾಗಿರದು. ಕುಟುಂಬದೊಂದಿಗಿನ ಸಂಬಂಧ ಬಲವಾಗುತ್ತದೆ. ಆತ್ಮವಿಶ್ವಾಸದಿಂದ ಮಾತನಾಡಿ. ಅದು ನಿಮಗೆ ಮುನ್ನಡೆಯಲು ಮಾರ್ಗವಾಗುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಬರುತ್ತದೆ. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಯಾರ ಮೇಲೇ ರೇಗದೇ ಇರುವುದು ನಿಮಗೆ ಇಷ್ಟವಾದೀತು.

ಕನ್ಯಾ ರಾಶಿ :

ವಿದ್ಯಾರ್ಥಿಗಳಿಗೆ ಗೊಂದಲವಿರಲಿದೆ. ಹೊಸ ಉದ್ಯೋಗಕ್ಕೆ ಸೇರುವವರಿಗೆ ಅವಕಾಶಗಳು ಸಿಗಲಿವೆ. ಬಂಧುಗಳು ನಿಮ್ಮನ್ನು ಬೇಸರಿಸುವರು. ಆತ್ಮವಿಶ್ವಾಸ ಹೆಚ್ಚಾಗಲು ಕೆಲವು ಸಣ್ಣ ಜವಾಬ್ದಾರಿಗಳನ್ನು ಹೊರಬೇಗುತ್ತದೆ. ಹಳೆ ಯೋಜನೆಯ ವ್ಯವಹಾರವನ್ನು ಮುಗಿಸಿಕೊಳ್ಳುವಿರಿ. ಮನಸ್ಸಿನಲ್ಲಿ ಹಳೆಯ ನೆನಪುಗಳು ಬರುವ ಸಾಧ್ಯ. ಮಕ್ಕಳ ಅನಾರೋಗ್ಯದಿಂದ ನೀವು ಆತಂಕಕ್ಕೆ ಒಳಗಾಗುವಿರಿ. ವಿದೇಶೀ ವ್ಯಾಪಾರದಲ್ಲಿ ಅನಿಶ್ಚಿತತೆ ನಿಮ್ಮನ್ನು ಕಾಡಬಹುದು.

ತುಲಾ ರಾಶಿ:

ಪಾಲುದಾರಿಕೆಯಲ್ಲಿ ಉಂಟಾಗುವ ಕಲಹವನ್ನು ಆರಂಭದಲ್ಲಿಯೇ ನಿಲ್ಲಿಸಿ. ಯೋಜನೆಗಳು ನಿಧಾನವಾಗಿಯೇ ಮುಂದುವರಿಯಿಲಿ. ಗಡಿಬಿಡಿಯನ್ನು ಮಾಡಿಕೊಳ್ಳುವುದು ಬೇಡ. ಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ. ಹಣಕಾಸಿನಲ್ಲಿ ನಿರೀಕ್ಷೆಗಿಂತ ಹೆಚ್ಚು ಖರ್ಚು ಆಗಬಹುದು. ಹಳೆಯ ಸ್ನೇಹಿತನಿಂದ ಸಿಹಿ ಸುದ್ದಿ ಬರುತ್ತದೆ. ಸ್ತ್ರೀಯರು ಆಭರಣಗಳನ್ನು ಜತನದಿಂದ ಕಾಪಾಡಿಕೊಳ್ಳಿ. ಚರಾಸ್ತಿಯು ಬೇಜವಾಬ್ದಾರಿಯಿಂದ ಅನ್ಯರ ಪಾಲಾಗಬಹುದು.

ವೃಶ್ಚಿಕ ರಾಶಿ:

ನೂತನ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಯಂತ್ರಗಳಿಂದ ನಿಮಗೆ ನೋವಾಗುವ ಸಾಧ್ಯತೆ ಇದೆ. ದೂರದ ಪ್ರದೇಶಗಳಿಗೆ ಹೋಗಿ ನಿರಾಸೆ ಆಗಬಹುದು. ಮಾತಿನ ಪರಿಣಾಮ ಇಂದು ಹೆಚ್ಚಾಗಬಹುದು. ಜವಾಬ್ದಾರಿಯುತವಾಗಿ ಮಾತನಾಡಿ. ಉತ್ಸಾಹದಿಂದ ಕೆಲಸಗಳನ್ನು ಆರಂಭಿಸಿ. ನಿಮ್ಮ ಸಂಗಾತಿಯ ಮೇಲೆ ಕಛೇರಿಯಲ್ಲಿ ಆದ ವೈಮನಸ್ಯದಿಂದ ಮುನಿಸಿಕೊಳ್ಳಬಹುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಿ.

ಧನು ರಾಶಿ:

ಹಿಂದುಳಿದ ಕಾರ್ಯಗಳು ಪ್ರಗತಿಯನ್ನು ಕಾಣುವುವು. ಲಾಭವನ್ನು ಪಡೆಯಲು ನೂತನ ಯೋಜನೆಯನ್ನು ಮಾಡುವಿರಿ. ಆರ್ಥಿಕ ವಿಚಾರದಲ್ಲಿ ಬೌದ್ಧಿಕ ಸಮತೋಲನ ಅಗತ್ಯ. ಸೃಜನಾತ್ಮಕ ಕೆಲಸಗಳಲ್ಲಿ ನಿರತರಾಗಬಹುದು. ಇಂದು ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಅಲ್ಪ ಧನವನ್ನು ಕಳೆದುಕೊಳ್ಳುವಿರಿ. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು.

ಮಕರ ರಾಶಿ:

ನಿಮ್ಮ ನಡುವೆ ಪರಸ್ಪರ ಕಾಳಜಿಯು ಗೊತ್ತಾಗುವ ಸಾಧ್ಯತೆ ಇದೆ. ದುಃಖಗಳನ್ನು ಬಿಟ್ಟು ಹೊಸ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ. ಈ ದಿನ ಮನಸ್ಸು ಲಘುವಾಗುತ್ತದೆ. ಅನಾವಶ್ಯಕ ಖರ್ಚು ತಪ್ಪಿಸಿಕೊಳ್ಳಿ. ನಿರ್ಧಾರ ತೆಗೆದುಕೊಳ್ಳುವ ಮೊದಲು ಶಾಂತವಾಗಿ ಯೋಚಿಸಿ. ಸ್ನೇಹಿತನೊಂದಿಗೆ ಕಲಹವಾಗುವ ಸಾಧ್ಯತೆ ಇದೆ, ತಾಳ್ಮೆ ಇರಲಿ. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ.

ಕುಂಭ ರಾಶಿ:

ಹಣಕಾಸು ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ. ಕೆಲಸದ ಒತ್ತಡ ಕಡಿಮೆಯಾಗಬಹುದು. ಹೊಸ ಗುರಿಗಳ ಬಗ್ಗೆ ಯೋಚಿಸಲು ಶುಭ ಸಮಯ. ಅವಕಾಶಗನ್ನು ಯಾರಿಗೂ ಬಿಟ್ಟುಕೊಡದೇ ನೀವೇ ಅನುಭವಿಸಿ. ಭೂಮಿಯನ್ನು ಕಳೆದುಕೊಳ್ಳುವ ಸಂದರ್ಭ ಬರುವುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು.

ಮೀನ ರಾಶಿ:

ಅಂದುಕೊಂಡ ಕೆಲಸಗಳು ಸುಗಮವಾಗಿ ಸಾಗಲಿ‌ ಎಂದು ದೇವರಲ್ಲಿ ಪ್ರಾರ್ಥಿಸಿ. ದೂರದ ಊರಿಗೆ ಕಾರ್ಯದ ಕಾರಣ ಪ್ರಯಾಣ ಮಾಡುವ ಸಂಭವವಿದೆ. ಉದ್ಯೋಗವನ್ನು ಕರಗತ ಮಾಡಿಕೊಂಡು ಲೀಲಾಜಾಲವಾಗಿ ಮಾಡಿ ಮುಗಿಸುವಿರಿ. ಮಕ್ಕಳು ನಿಮಗೆ ಶುಭವಾರ್ತೆಯನ್ನು ಕೇಳಿಸುವರು‌. ದಾಂಪತ್ಯದ ಸುಖಜೀವನವು ಅನುಭವಕ್ಕೆ ಬರಲಿದೆ. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಇಂದಿನ ಬಹುಪಾಲು ಸಮಯವನ್ನು ಬೇರೆ ಯಾವುದೋ ಚಿಂತನೆಯಲ್ಲಿ ಕಳೆಯುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:31 – 13:56, ಯಮಗಂಡ ಕಾಲ 07:34 – 09:10, ಗುಳಿಕ ಕಾಲ 10:45 – 12:21

-ಲೋಹಿತ ಹೆಬ್ಬಾರ್ – 8762924271 (what’s app only)

Source link

IPL 2026: ಟೈಟಾನ್ಸ್ ಮುಂದೆ ಮಕಾಡೆ ಮಲಗಿದ ಸನ್​ರೈಸರ್ಸ್​ – Kannada News | IPL 2026: GT vs SRH Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ.

ಇದಾಗ್ಯೂ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 42 ಎಸೆತಗಳಲ್ಲಿ 61 ರನ್​ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ 33 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್ ಕಲೆಹಾಕಿತು.

169 ರನ್​​ಗಳ ಗುರಿ:

169 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಮೊದಲ ಓವರ್​ನಲ್ಲೇ ಟ್ರಾವಿಡ್ ಹೆಡ್ (0) ವಿಕೆಟ್ ಕಬಳಿಸಿ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಕಗಿಸೊ ರಬಾಡ ಎಸೆತಗಳಲ್ಲಿ ಅಭಿಷೇಕ್ ಶರ್ಮಾ (6) ಹಾಗೂ ಇಶಾನ್ ಕಿಶನ್ (11) ಔಟಾದರು. ಈ ಆಘಾತದಿಂದ ಪಾರಾಗುವ ಮುನ್ನ ಸ್ಮರಣ್ ರವಿಚಂದ್ರನ್ (9) ಹಾಗೂ ಸಲೀಲ್ ಅರೋರಾ (16) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಹೆನ್ರಿಕ್ ಕ್ಲಾಸೆನ್ ಕೂಡ ವಿಕೆಟ್ ಕೈಚೆಲ್ಲಿದರು.

ಆ ಬಳಿಕ ಬಂದ ನಿತೀಶ್ ಕುಮಾರ್ ರೆಡ್ಡಿ 2 ರನ್​ಗಳಿಸಿ ಔಟಾದರೆ, ಪ್ಯಾಟ್ ಕಮಿನ್ಸ್ 19 ರನ್​ಗಳಿಸಿ ಇನಿಂಗ್ಸ್ ಕೊನೆಗೊಳಿಸಿದರು. ಪರಿಣಾಮ ಸನ್​ರೈಸರ್ಸ್ ಹೈದರಾಬಾದ್ ತಂಡವು 14.5 ಓವರ್​ಗಳಲ್ಲಿ ಕೇವಲ 86 ರನ್​ಗಳಿಗೆ ಆಲೌಟ್ ಆಗಿದೆ.

ಇದನ್ನೂ ಓದಿ: ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ

ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 82 ರನ್​ಗಳ ಭರ್ಜರಿ ಜಯ ಸಾಧಿಸಿ ಮತ್ತೆರಡು ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಈ ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದ್ದು, 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ಸಲೀಲ್ ಅರೋರಾ, ನಿತೀಶ್ ಕುಮಾರ್ ರೆಡ್ಡಿ, ಸ್ಮರಣ್ ರವಿಚಂದ್ರನ್, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಈಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ನಿಶಾಂತ್ ಸಿಂಧು, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್.

Source link

Exit mobile version