ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ – Kannada News | How Maternal Depression Affects Baby’s Brain
ಗರ್ಭಾವಸ್ಥೆಯಲ್ಲಿರುವಾಗ ಮಾನಸಿಕ ಒತ್ತಡ ಮತ್ತು ಖಿನ್ನತೆ ಉಂಟಾದಲ್ಲಿ, ಅದು ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ಇದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಾರ, ಗರ್ಭಾವಸ್ಥೆಯಲ್ಲಿ ಖಿನ್ನತೆಯು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಎಡಿಎಚ್‌ಡಿಯಿಂದ ಹಿಡಿದು ಆಟಿಸಂ ವರೆಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ನಿರಂತರ ಮಾನಸಿಕ ಒತ್ತಡವು ದೇಹದಲ್ಲಿನ ಹಾರ್ಮೋನ್ ಮಟ್ಟಕ್ಕೆ ಅಡ್ಡಿಯಾಗುತ್ತದೆ. ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ….