ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು – Kannada News | Chikkamagaluru: Hindu organizations Erupt Over Alleged Insult to Religious Sentiments by Tourists
ಪ್ರವಾಸಿಗರು, ಹಿಂದೂ ಸಂಘಟನೆಗಳಿಂದ ಡಿಸಿಗೆ ಮನವಿ ಚಿಕ್ಕಮಗಳೂರು, ಜನವರಿ 27: ಕಾಫಿನಾಡು ಚಿಕ್ಕಮಗಳೂರು (Chikkamagaluru) ಪ್ರವಾಸಿಗರ ಪ್ರಮುಖ ತಾಣಗಳಲ್ಲಿ ಒಂದು. ಅಚ್ಚ ಹಸಿರಿನಿಂದ ಕಂಗೊಳಿಸುವ ಪಶ್ಚಿಮ ಘಟ್ಟವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಹರಿದುಬರುತ್ತಾರೆ. ಸದ್ಯ ಇದೇ ಪ್ರವಾಸಿಗರಿಂದ (Tourists) ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಪ್ರವಾಸಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ಗೆ ಮನವಿ ಮಾಡಿದ್ದಾರೆ….