ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ – Kannada News | NTA terminated 47 officials in major overhaul amid NEET paper leak protests
ನವದೆಹಲಿ, ಜುಲೈ 24: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಇದರ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಬೃಹತ್ ಕಾರ್ಯಾಚರಣೆ ನಡೆಸಿದ್ದು, ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಎನ್ಟಿಎಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಇನ್ನೂ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು…