IPL 2026: ಅಕ್ಷರ್ ಪಟೇಲ್​ಗೆ 12 ಲಕ್ಷ ರೂ. ದಂಡ! – Kannada News | Axar Patel Fined 12 Lakh for Slow Over Rate Against PBKS

IPL 2026: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿ ಜಯ ಸಾಧಿಸಿದೆ. ಆದರೆ, ತಂಡದ ಗೆಲುವಿನ ಸಂತೋಷದ ನಡುವೆಯೇ ನಾಯಕ ಅಕ್ಷರ್ ಪಟೇಲ್‌ಗೆ (Axar Patel) ಐಪಿಎಲ್ ಆಡಳಿತ ಮಂಡಳಿಯು ಭಾರಿ ಮೊತ್ತದ ದಂಡ ವಿಧಿಸಿ ಶಾಕ್ ನೀಡಿದೆ.

12 ಲಕ್ಷ ರೂಪಾಯಿ ದಂಡ:

ಪಂದ್ಯದ ವೇಳೆ ನಿಗದಿತ ಸಮಯಕ್ಕೆ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ (Slow Over-rate) ಅಕ್ಷರ್ ಪಟೇಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಇದು ಈ ಸೀಸನ್‌ನಲ್ಲಿ ಡೆಲ್ಲಿ ತಂಡದ ಮೊದಲ ತಪ್ಪಾಗಿದೆ, ಆದ್ದರಿಂದ ಕೇವಲ ನಾಯಕನಿಗೆ ಮಾತ್ರ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಪಾಕ್ ಆಟಗಾರನ ಕಳ್ಳಾಟ ಬಯಲು..!

ಐಪಿಎಲ್ ಸ್ಲೋಓವರ್​ ರೇಟ್ ನಿಯಮ:

  • ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.
  • ಈ ತಪ್ಪು ಮಾಡಿದ ಅಂದರೆ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ತಂಡದ ನಾಯಕನಿಗೆ ಪಂದ್ಯದ ಬಳಿಕ 12 ಲಕ್ಷ ರೂ., ದಂಡ ವಿಧಿಸಲಾಗುತ್ತದೆ.
  • ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ
  • ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.


ಇನ್ನು ನಾಯಕ ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್‌ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.

Source link

ಸಿನಿಮಾಗೂ ಮೊದಲೇ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಮಾಡಿದ ಚಿತ್ರತಂಡ – Kannada News | Thiklu Rama Kannada novel released movie shooting in progress

ಟೈಟಲ್ ಕಾರಣದಿಂದ ಸುದ್ದಿಯಾದ ‘ತಿಕ್ಲು ರಾಮ’ (Thiklu Rama) ಸಿನಿಮಾದಲ್ಲಿ ಪರಿಸರಕ್ಕೆ ಸಂಬಂಧಿಸಿದ ಕಥೆ ಇರಲಿದೆ. ಇದು ಹೃದಯಸ್ಪರ್ಶಿ ಕಥೆ ಎಂದು ಚಿತ್ರತಂಡ ಹೇಳಿದೆ. ಇದು ಡಾ. ನಟರಾಜ ಅವರು ಬರೆದ ‘ತಿಕ್ಲು ರಾಮ’ ಕಾದಂಬರಿ ಆಧಾರಿತ ಸಿನಿಮಾ. ಈಗಾಗಲೇ ಈ ಸಿನಿಮಾಗೆ ಶೇಕಡ 40 ಭಾಗ ಶೂಟಿಂಗ್ ಮುಗಿದಿದೆ. ಈಗ ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ‘ತಿಕ್ಲು ರಾಮ’ ಕಾದಂಬರಿ (Kannada Novel) ಬಿಡುಗಡೆ ಸಮಾರಂಭ ನಡೆಯಿತು. ಈ ವೇಳೆ ಚಿತ್ರತಂಡದವರು ಹಾಜರಿದ್ದರು.

ಬೆಂಗಳೂರಿನ ಖಾಸಗಿ ಮಾಲ್​​ನಲ್ಲಿ ಕಾದಂಬರಿ ಬಿಡುಗಡೆ ಸಮಾರಂಭ ಮಾಡಲಾಯಿತು. ಹಿರಿಯ ಗೀತಸಾಹಿತಿ ಡಾ. ದೊಡ್ಡರಂಗೇಗೌಡ, ನಟ-ನಿರ್ದೇಶಕ ಕೆ. ಸುಚೇಂದ್ರ ಪ್ರಸಾದ್, ಸಾಹಿತಿ ಮತ್ತು ನಿರ್ದೇಶಕ ಬಿ. ಶಿವಾನಂದ, ಡಾ. ಭರತ್ ಮುಂತಾದವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ‘ತಿಕ್ಲು ರಾಮ’ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

ಈ ಸಿನಿಮಾಗೆ ಮಂಜು ಕವಿ ಅವರು ನಿರ್ದೇಶನ ಮಾಡುತ್ತಿದ್​ದಾರೆ. ಡಾ. ರಾಜವೀರ್ ಅವರು ನಾಯಕನಾಗಿ ನಟಿಸುತ್ತಿದ್ದಾರೆ. ಕರಿಷ್ಮ-ಶ್ರ್ಯಾವ್ಯ ಕಂಬೈನ್ಸ್ ಬ್ಯಾನರ್ ಮೂಲಕ ಶ್ರುತಿ ಜಿ.ಬಿ. ಮತ್ತು ಕೋಮಲ ನಟರಾಜು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸುಚೇಂದ್ರ ಪಸ್ರಾದ್, ಜಹಾಂಗೀರ್, ಚೈತ್ರಾ ರಾಮ್, ಗಿರೀಶ್, ವಿನೋದ್ ಪವಿತ್ರಾ, ನಿಖಿತಾ ಸ್ವಾಮಿ, ಶ್ರಾವ್ಯ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ವೇಳೆ ನಿರ್ದೇಶಕ ಮಂಜು ಕವಿ ಮಾತನಾಡಿದರು. ‘ಪುಸ್ತಕವನ್ನು ಪ್ರತಿಯೊಬ್ಬರು ಓದಬೇಕು. ಓದುವುದರಿಂದ ಖಂಡಿತ ಒಂದಷ್ಟು ಜನರು ಬದಲಾವಣೆ ಆಗ್ತಾರೆ. ಪರಿಸರದ ಬಗ್ಗೆ ಯಾವ ರೀತಿ ಕಾಳಜಿ ವಹಿಸಬೇಕು? ಪ್ರಕೃತಿ ನಮಗೆ ಏನೆಲ್ಲ ಕೊಟ್ಟಿದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ವರ್ಣನೆ ಮಾಡಲಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ?

ಸುಚೇಂದ್ರ ಪ್ರಸಾದ್ ಅವರು ಈ ಸಿನಿಮಾದಲ್ಲಿ ಶಾಸಕರಾಗಿ ಬಣ್ಣ ಹಚ್ಚುತ್ತಿದ್ದಾರೆ. ‘ಪುಸ್ತಕದಲ್ಲಿ ಗ್ರಾಮೀಣ ಸೊಗಡು ಇದೆ. ಓದುಗರಲ್ಲಿ ಪರಿಸರ ಕಾಳಜಿ ಬಗ್ಗೆ ಆಸಕ್ತಿ ತರಿಸುವಂತಿದೆ. ಇಂತಹ ಕೃತಿಗಳು ನಿರಂತವಾಗಿ ಹೊರಬರಲಿ’ ಎಂದು ಅವರು ಹೇಳಿದರು. ‘ತಿಕ್ಲು ರಾಮ ಕಾದಂಬರಿ ಚೆನ್ನಾಗಿದೆ. ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಸಾಧನೆಗೆ ದೊಡ್ಡಗೌಡರ ಸಲಾಂ! – Kannada News | Deve Gowda Hails CM Joseph Vijay’s Rise: A New Era for Tamil Nadu Politics

ಹಾಸನ, ಮೇ.12: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ನಟ, ಟಿವಿಕೆ (TVK) ನಾಯಕ ಜೋಸೆಫ್ ವಿಜಯ್ ಅವರ ಸಾಧನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹಾಡಿ ಹೊಗಳಿದ್ದಾರೆ. ವಿಜಯ್ ಅವರು ತಮಿಳುನಾಡಿನ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಯನ್ನು ಮೀರಿಸಿ ಬೆಳೆದಿರುವುದು ಸಾಮಾನ್ಯ ಸುದಿಯೇನಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೆ.ಕಾಮರಾಜ್, ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾ ಅವರಂತಹ ಮಹಾನ್ ನಾಯಕರ ಪ್ರಭಾವವನ್ನು ಮೀರಿ ವಿಜಯ್ ಇಂದು ತಮಿಳುನಾಡಿನ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. “ವಿಜಯ್ ಎಲ್ಲೇ ಹೋದರೂ 40 ರಿಂದ 50 ಲಕ್ಷ ಜನರು ಸೇರುತ್ತಾರೆ. ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಈ ಎತ್ತರಕ್ಕೆ ಬೆಳೆದಿರುವುದು ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿ” ಎಂದು ಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ತಮಿಳುನಾಡು ಮತ್ತು ಕರ್ನಾಟಕದ ನಡುವೆ ಹಲವು ಸಮಸ್ಯೆಗಳಿವೆ (ಕಾವೇರಿ ವಿಚಾರ). ವಿಜಯ್ ಅವರೊಂದಿಗೆ ಕುಳಿತು ಮಾತನಾಡುವ ಮೂಲಕ ಆ ಸಮಸ್ಯೆಗಳನ್ನು ಬಗೆಹರಿಸುವ ಕಾಲ ಬರಬಹುದು” ಎಂದು ಅವರು ಆಶಾವಾದ ವ್ಯಕ್ತಪಡಿಸಿದರು. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಬಿಟ್ಟು ಟಿವಿಕೆಗೆ ಬೆಂಬಲ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಟಿಕೆಟ್ ಹಂಚಿಕೆ ವೇಳೆ ಸ್ಟಾಲಿನ್ ಮತ್ತು ಕಾಂಗ್ರೆಸ್ ನಡುವೆ ವ್ಯತ್ಯಾಸ ಬಂದಿರಬಹುದು, ಅದು ಅವರ ವೈಯಕ್ತಿಕ ವಿಚಾರ. ಸ್ಟಾಲಿನ್ ಏನು ಮಾಡಿದರು ಎಂದು ಚರ್ಚಿಸುವುದರಲ್ಲಿ ಈಗ ಅರ್ಥವಿಲ್ಲ” ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲಿಸಿದ್ದಕ್ಕೆ ಎಎಂಎಂಕೆಯಿಂದ ಶಾಸಕ ಕಾಮರಾಜ್​ ಉಚ್ಛಾಟನೆ – Kannada News | AMMK Leader TTV Dhinakaran expelled S Kamaraj for Supporting CM Vijays TVK

ಚೆನ್ನೈ, ಮೇ 12: ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೆತ್ರ ಕಳಗಂ (ಎಎಂಎಂಕೆ) ಇಂದು ತಮಿಳುನಾಡು ವಿಧಾನಸಭೆಯ ತಮ್ಮ ಪಕ್ಷದ ಏಕೈಕ ಶಾಸಕ ಎಸ್. ಕಾಮರಾಜ್ ಅವರನ್ನು ಉಚ್ಚಾಟನೆ ಮಾಡಿದೆ. ಎಐಎಡಿಎಂಕೆಯ ಒಂದು ಬಣ ಟಿವಿಕೆಗೆ ಬೆಂಬಲ ಘೋಷಿಸುತ್ತಿದ್ದಂತೆ ಎಎಂಎಂಕೆ ಶಾಸಕ ಕಾಮರಾಜ್ ಕೂಡ ಮುಖ್ಯಮಂತ್ರಿ ವಿಜಯ್ ಮತ್ತು ಅವರ ಪಕ್ಷವಾದ ಟಿವಿಕೆಯನ್ನು ಸದನದಲ್ಲಿ ಏಕಪಕ್ಷೀಯವಾಗಿ ಬೆಂಬಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ತಮಿಳುನಾಡು ವಿಧಾನಸಭೆಯಲ್ಲಿ ತಮಿಳುನಾಡು ವಿಕ್ಟರಿ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ನಂತರ, ಎಸ್. ಕಾಮರಾಜ್ ಅವರನ್ನು ಪಕ್ಷದ ಮೂಲ ಸದಸ್ಯತ್ವ ಮತ್ತು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಲಾಗಿದೆ ಎಂದು ಎಎಂಎಂಕೆ ಘೋಷಿಸಿದೆ. ಮೇ 9ರಂದು ಎಎಂಎಂಕೆ ಶಾಸಕ ಎಸ್. ಕಾಮರಾಜ್ ಅವರು ಟಿವಿಕೆ ಸರ್ಕಾರ ರಚಿಸಲು ಬೆಂಬಲ ವ್ಯಕ್ತಪಡಿಸಿ, ಬೆಂಬಲ ಪತ್ರವನ್ನು ಸಹ ನೀಡಿದ್ದರು. ಆದರೆ, ಅದೇ ದಿನ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿದ್ದ ಎಎಂಎಂಕೆ ಪಕ್ಷದ ನಾಯಕ ಟಿಟಿವಿ ದಿನಕರನ್, ತಮ್ಮ ಪಕ್ಷದ ಶಾಸಕ ಎಸ್. ಕಾಮರಾಜ್ ಅವರು ಟಿವಿಕೆಯನ್ನು ಬೆಂಬಲಿಸುವ ಪತ್ರವನ್ನು ನೀಡಿಲ್ಲ, ನಕಲಿ ಪತ್ರವನ್ನು ರಾಜ್ಯಪಾಲರಿಗೆ ನೀಡಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಎಸ್. ಕಾಮರಾಜ್ ಕಾಣೆಯಾಗಿದ್ದಾರೆ ಎಂದು ಅವರು ದೂರು ನೀಡಿದ್ದರು.

ಇದನ್ನೂ ಓದಿ: 2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿ​ಗೆ 30 ಶಾಸಕರ ಬೆಂಬಲ

ಇದರ ಬೆನ್ನಲ್ಲೇ, ಟಿವಿಕೆ ಪಕ್ಷವು ತಮ್ಮನ್ನು ಬೆಂಬಲಿಸಿ ಪತ್ರಕ್ಕೆ ಸಹಿ ಹಾಕಿರುವ ಎಸ್. ಕಾಮರಾಜ್ ಅವರ ವೀಡಿಯೊವನ್ನು ಬಿಡುಗಡೆ ಮಾಡುವ ಮೂಲಕ ಕೋಲಾಹಲ ಸೃಷ್ಟಿಸಿತ್ತು. ಆದರೆ, ದಿನಕರನ್ ಅದು ಕೂಡ ನಕಲಿ ವಿಡಿಯೋ, ಎಐನಿಂದ ರಚಿಸಲಾದ ವಿಡಿಯೋ ಎಂದು ಆರೋಪಿಸಿದ್ದರು. ಇದೆಲ್ಲದರ ನಡುವೆ ಇಂದು ಶಾಸಕ ಕಾಮರಾಜ್ ಬಹಿರಂಗವಾಗಿ ವಿಧಾನಸಭೆಯಲ್ಲಿ ಟಿವಿಕೆಗೆ ಬೆಂಬಲ ಘೋಷಿಸಿದ್ದರಿಂದ ದಿನಕರನ್​ಗೆ ಭಾರೀ ಮುಖಭಂಗವಾಗಿದೆ. ತಾನು ಟಿವಿಕೆ ವಿರುದ್ಧ ಮಾಡಿದ ಆರೋಪಗಳು ಸುಳ್ಳೆಂದು ಬಹಿರಂಗವಾದ್ದರಿಂದ ಕೋಪಗೊಂಡ ಅವರು ಕಾಮರಾಜ್ ಅವರನ್ನು ತಮ್ಮ ಪಕ್ಷದಿಂದಲೇ ಉಚ್ಛಾಟನೆ ಮಾಡಿದ್ದಾರೆ. ಇದರ ನಂತರ ಮಾತನಾಡಿದ ಎಸ್. ಕಾಮರಾಜ್, ಪಕ್ಷದ ನಾಯಕತ್ವದ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ

ಈ ಮಧ್ಯೆ, ಎಐಎಡಿಎಂಕೆ ಪಕ್ಷ ಎಡಪ್ಪಾಡಿ ಪಳನಿಸ್ವಾಮಿ ಬಣ ಮತ್ತು ಸಿವಿ ಷಣ್ಮುಗಂ ಬಣ ಎಂದು 2 ಬಣಗಳಾಗಿ ವಿಭಜನೆಯಾಗಿದೆ. ಸಿವಿ ಷಣ್ಮುಗಂ ನೇತೃತ್ವದ 30 ಶಾಸಕರು ಟಿವಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಳಿದ 15 ಶಾಸಕರು ಟಿವಿಕೆ ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ್ದು, ಟಿವಿಕೆ ಪರವಾಗಿ ಮತ ಚಲಾಯಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತರಕಾರಿ ಮಾರುವ ವೇಷದಲ್ಲಿ ಬಂದು ಮನೆಗಳಿಗೆ ಕನ್ನ: ಕದ್ದ ವಸ್ತು ಮಾರಿ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಗ್ಯಾಂಗ್​​ ಅರೆಸ್ಟ್​​ – Kannada News | Belagavi Police Bust Interstate House Theft Gang Posing as Vegetable Vendors

ಜಪ್ತಿಮಾಡಲಾದ ವಸ್ತುಗಳ ಜೊತೆ ಪೊಲೀಸರುImage Credit source: Tv9 Kannada

ಬೆಳಗಾವಿ, ಮೇ 12: ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸಿ ಬಳಿಕ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಖತರ್ನಾಕ್​​ ಕಳ್ಳರ ಗ್ಯಾಂಗ್​​ನ ಬೆಳಗಾವಿ ಪೊಲೀಸರು ಭೇದಿಸಿದ್ದಾರೆ. ಪ್ರತ್ಯೇಕ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು,  ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರೆಂಬುದು ತಿಳಿದುಬಂದಿದೆ.

ಕಳ್ಳತನಕ್ಕೂ ಪೂರ್ವದಲ್ಲಿ ಏರಿಯಾಗಳಲ್ಲಿ ತರಕಾರಿ ಮಾರುವವರ ವೇಷದಲ್ಲಿ ಓಡಾಟ ನಡೆಸುತ್ತಿದ್ದ ಆರೋಪಿಗಳು, ಈ ವೇಳೆ ಬೀಗ ಹಾಕಿದ ಮನೆಗನ್ನ ಗುರುತಿಸುತ್ತಿದ್ದರು. ಬಳಿಕ ರಾತ್ರಿ ಗ್ಯಾಂಗ್ ಕಟ್ಟಿಕೊಂಡು ಬಂದು ಮನೆ ಬೀಗ ಮುರಿದು ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದರು. ಈ ಕುರಿತು ಎಪಿಎಂಸಿ ಹಾಗೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದಕ್ಕಾಗಿ ಎರಡು ತಂಡ ರಚನೆ ಮಾಡಿ ಫೀಲ್ಡ್​​ಗೆ ಇಳಿದಿದ್ದರು. ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಮಹಾರಾಷ್ಟ್ರ ಮೂಲದ ದೇವೇಂದ್ರ ವಾಘಮೋರೆ, ಸಚಿನ್ ಗೌಳಿ, ಕಪಿಲ್ ಜಾಧವ್​​ರನ್ನು ಅರೆಸ್ಟ್​​ ಮಾಡಿ, ಅವರಿಂದ 4.71 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಾಗ್ರಿ, ಎರಡು ಬೈಕ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ

ಇನ್ನು ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಖತರ್ನಾಕ್ ಗ್ಯಾಂಗ್​​ನ ಕಿಂಗ್​​ಪಿನ್​​ ಅನ್ನೇ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಉತ್ತರ ಪ್ರದೇಶ ಮೂಲದ ಮಿಂಟು ವಿಶ್ವಾಸ್ ಬಂಧಿತ ಆರೋಪಿಯಾಗಿದ್ದು, ಈತನಿಂದ 44 ಲಕ್ಷ 86 ಸಾವಿರ ರೂಪಾಯಿ ಮೌಲ್ಯದ 290ಗ್ರಾಂ ಚಿನ್ನ ಹಾಗೂ ಬೈಕ್ ವಶಕ್ಕೆ ಪಡೆಯಲಾಗುದೆ. ಈ ಎರಡೂ ಗ್ಯಾಂಗ್ ಶಿವಮೊಗ್ಗ, ಕಲಬುರ್ಗಿ ಪೊಲೀಸರು ಸೇರಿದಂತೆ ಗೋವಾ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯ ಪ್ರದೇಶದ ಪೊಲೀಸರಿಗೆ ಬೇಕಾಗಿದ್ದವರು ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಕಳ್ಳತನ ಮಾಡಿದ್ದನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಗೋವಾಗೆ ತೆರಳಿ ಕೆಸಿನೋಗಳಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಖದೀಮರೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಮನೆಗಳ್ಳತನ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಅಲರ್ಟ್​​ ಆದ ಜಿಲ್ಲಾ ಪೊಲೀಸರು ಯಾರೇ ಮನೆಗೆ ಬೀಗ ಹಾಕಿ ದೂರದ ಊರಿಗೆ ತೆರಳುವವರಿದ್ದರೂ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು. ಅವರು ಮನೆಗೆ ವಾಪಾಸ್ ಆಗುವವರೆಗೂ ಪೊಲೀಸರು ಆ ಮನೆ ಮೇಲೆ ನಿಗಾ ಇಡುವ ಜೊತೆಗೆ, ನಿರಂತರವಾಗಿ ಗಸ್ತು ವ್ಯವಸ್ಥೆ ಕೂಡ ಮಾಡುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ – Kannada News | NEET Exam Row: Student Breaks Down Over NEET Exam Cancellation After Paper Leak

ಬೆಂಗಳೂರು, ಮೇ 12: ಮೇ3 ರಂದು ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಲ್ಲಿ ನೀಟ್ ಪರೀಕ್ಷೆಯನ್ನೇ NTA ರದ್ದು ಮಾಡಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇತ್ತ ರಾಜ್ಯದಿಂದ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾನಾಡಿರುವ ವಿದ್ಯಾರ್ಥಿನಿ ಮಾನ್ಯತಾ, ಎರಡು ವರ್ಷದಿಂದ ಕಷ್ಟ ಪಟ್ಟು ಪರೀಕ್ಷೆ ಬರೆದಿದ್ದೇವೆ. ಈ ಬಾರಿ ಪರೀಕ್ಷೆ ಚೆನ್ನಾಗಿ ಆಗಿದೆ. ಒಳ್ಳೆಯ ರ‍್ಯಾಂಕ್ ಬರುವ ಸಾಧ್ಯತೆ ಇತ್ತು. ಸರ್ಕಾರಿ ಕಾಲೇಜ್ ಅಥವಾ ಖಾಸಗಿಯಲ್ಲಿ ಮೆಡಿಕಲ್ ಸೀಟ್ ಸಿಗುವ ಸಾಧ್ಯತೆ ಇತ್ತು. ಆದರೆ ಇದೀಗ ಪರೀಕ್ಷೆ ರದ್ದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಬೆಂಗಳೂರು ಬಲು ದುಬಾರಿ; 1.3 ಲಕ್ಷ ರೂ ತಿಂಗಳ ಖರ್ಚು ಎಂದ ದಂಪತಿ – Kannada News | Couple reveals their monthly expenses in Bengaluru

ಬೆಂಗಳೂರು, ಮೇ 12: ಬೆಂಗಳೂರು (Bengaluru) ಅಂದ್ರೆ ದುಬಾರಿ ಅನ್ನೋದು ಅನೇಕರ ಅಭಿಪ್ರಾಯ. ಇನ್ನೊಂದೆಡೆ ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಈ ನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದು ಕಷ್ಟ. ಹೀಗಿರುವಾಗ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ದಂಪತಿ ತಿಂಗಳಿಗೆ ಸುಮಾರು 1.3 ಲಕ್ಷ ರೂ. ಖರ್ಚು ಮಾಡುತ್ತಿದ್ದು, ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ. ದಂಪತಿ ಮಾಡಿದ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

ಬೆಂಗಳೂರಿನಲ್ಲಿ ಉತ್ಪನ್ನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ರಾಧಿಕಾ ಹಾಗೂ ಏಕಾನ್ಶ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ದಂಪತಿ ಪ್ರತಿ ತಿಂಗಳು ತಮ್ಮ ಅಪಾರ್ಟ್‌ಮೆಂಟ್‌ಗೆ 56 ಸಾವಿರ ರೂ ಬಾಡಿಗೆ ಕಟ್ಟಿರುತ್ತಿರುವುದಾಗಿ ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಮನೆಗೆಲಸದವರಿಗೆ ಹಾಗೂ ಅಡುಗೆಯವರಿಗೆ ಸುಮಾರು 10,000 ರೂ ಖರ್ಚು ಮಾಡುತ್ತೇವೆ. ನಾವಿಬ್ಬರೂ ಪೂರ್ಣ ಸಮಯ ಕೆಲಸ ಮಾಡುವುದರಿಂದ ನಾವು ಮಾಡುವ ಅತ್ಯುತ್ತಮ ವೆಚ್ಚ. ದಿನಸಿ ಸಾಮಗ್ರಿಗಳಿಗೆ ಪ್ರತಿ ತಿಂಗಳು 15,000 ರೂ, ವಿದ್ಯುತ್ ಹಾಗೂ ಇಂಟರ್ನೆಟ್‌ ಗೆ 15,000 ರೂ ಹಣ ವ್ಯಯಿಸಬೇಕಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ನಾನು ಕಚೇರಿಗೆ ಹೋಗುವುದರಿಂದ ಟ್ರಾವೆಲ್, ಪೆಟ್ರೋಲ್ ಹಾಗೂ ಇನ್ನಿತ್ತರ ಖರ್ಚುಗಳಿಗೆ ತಿಂಗಳಿಗೆ 6,000 ರೂ ಎತ್ತಿಡಬೇಕಾಗುತ್ತದೆ. ಹೊರಗೆ ಊಟದ ಖರ್ಚು ಮತ್ತು ಫುಡ್ ಆರ್ಡರ್ ಗೆ 2000 ರೂ ಬೇಕು. ಇನ್ನು ಉಳಿದಂತೆ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್‌ನಂತಹ ಪ್ಲಾಟ್‌ಫಾರ್ಮ್‌ಗಳನ್ನು ಒಳಗೊಂಡಂತೆ ಚಂದಾದಾರಿಕೆಗಳು ತಿಂಗಳಿಗೆ 3,000 ರೂ ರಷ್ಟಿವೆ. ಅದರ ಜೊತೆಗೆ, ಶಾಪಿಂಗ್, ವೈಯಕ್ತಿಕ ವೆಚ್ಚಗಳು ಮತ್ತು ಯೋಜಿತವಲ್ಲದ ಖರೀದಿಗಳಿಗಾಗಿ 15,000 ರೂ ಖರ್ಚು ಆಗುತ್ತದೆ. ತಮ್ಮ ಮಾಸಿಕ ವೆಚ್ಚಗಳು ಸುಮಾರು 1.3 ಲಕ್ಷ ರೂ ತಲುಪುತ್ತವೆ ಎಂದಿದ್ದಾರೆ. ಗಂಭೀರವಾಗಿ ಹೇಳಬೇಕೆಂದರೆ, ಈ ಬೆಂಗಳೂರು ಉತ್ತಮ ಹಣ ಗಳಿಸಬಹುದಾದ ಸ್ಥಳವಾಗಿದ್ದು, ತಿಂಗಳ ಅಂತ್ಯದ ವೇಳೆಗೆ ಇನ್ನೂ ದಿವಾಳಿಯಾಗಿರುವಂತೆ ಭಾಸವಾಗುತ್ತದೆ ಎಂದು ವಿವರಿಸಿರುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಯೋಗ್ಯ ಜೀವನಕ್ಕೆ ತಿಂಗಳಿಗೆ 51,000 ರೂ ಬೇಕೇ ಬೇಕು; ಅಮೆಜಾನ್ ಉದ್ಯೋಗಿ ಹೀಗೆಂದಿದ್ದೇಕೆ?

ಈ ವಿಡಿಯೋ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ನೀವು ಹೈ ಎಂಡ್ ಅಪಾರ್ಟ್‌ಮೆಂಟ್‌ನಲ್ಲಿ ಉಳಿಯಲು ಆಯ್ಕೆ ಮಾಡಿಕೊಂಡರೆ ಮಾತ್ರ ಬಾಡಿಗೆ ಹೆಚ್ಚಾಗಿರುತ್ತದೆ. ಬೆಂಗಳೂರಿನಲ್ಲಿ ಬಾಡಿಗೆ ನೀವು ವಾಸಿಸುವ ಸ್ಥಳವನ್ನು ಅವಲಂಬಿಸಿರುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಇದೊಂದು ನಿಷ್ಪ್ರಯೋಜಕ ವಿಡಿಯೋ. ನಾವಿಬ್ಬರೂ ಕೆಲಸ ಮಾಡುತ್ತಿದ್ದೇವೆ ಮತ್ತು ಇಬ್ಬರು ಮಕ್ಕಳನ್ನು ಹೊಂದಿದ್ದೇವೆ ಮತ್ತು ಇದರಲ್ಲಿ ಅರ್ಧವನ್ನು ಖರ್ಚು ಮಾಡುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬೆಂಗಳೂರಿನಲ್ಲಿ ಬದುಕೋದು ಹೇಳಿದ್ದಷ್ಟು ಸುಲಭವಲ್ಲ, ಆದರೆ ಖರ್ಚಿಗೆ ಲಗಾಮು ಹಾಕಿದ್ರೆ ಒಳ್ಳೆಯದು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:36 pm, Tue, 12 May 26

Source link

ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ? ನಾಯಕತ್ವ ಬದಲಾವಣೆ ಮತ್ತು ಸಂಪುಟ ವಿಸ್ತರಣೆ – Kannada News | Leadership, Local Governance, and Economic Debates in Karnataka

ಬೆಂಗಳೂರು, ಮೇ.12: ಕರ್ನಾಟಕ ರಾಜಕೀಯದಲ್ಲಿ ಪ್ರಸ್ತುತ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಮತ್ತು ಪಕ್ಷದೊಳಗಿನ ಗೊಂದಲಗಳ ಕುರಿತು ಚರ್ಚೆ ಮುಂದುವರಿದಿದೆ. ಕೇರಳದ ಸಮಸ್ಯೆಗಳ ನಂತರ ಹೈಕಮಾಂಡ್ ರಾಜ್ಯದ ವಿಚಾರಗಳ ಬಗ್ಗೆ ಗಮನಹರಿಸುವ ವಿಶ್ವಾಸವಿದೆ. ಮೇ ತಿಂಗಳೊಳಗೆ ಈ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವ ನಿರೀಕ್ಷೆಯಿದೆ. ಕೆ.ಎನ್. ರಾಜಣ್ಣ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದಾಗ, ನಾಯಕತ್ವ ಮತ್ತು ಸಂಪುಟ ವಿಸ್ತರಣೆಯ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದರೂ, ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ತಯಾರಿಯ ಕಾರಣ ನೀಡಿ ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದೆ. ಈ ಕುರಿತು ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಐದು ಪಾಲಿಕೆಗಳ ರಚನೆಯ ನಿರ್ಧಾರ ಅಂತಿಮ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಅವರ ಚಿನ್ನ, ತೈಲ ಮತ್ತು ಪೆಟ್ರೋಲ್ ಬಳಕೆಯನ್ನು ಮಿತಿಗೊಳಿಸುವಂತೆ ನೀಡಿದ ಹೇಳಿಕೆಗೆ ರಾಜಕೀಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಶ್ರೀಮಂತರ ಪಕ್ಷವಾಗಿದ್ದು, ಕಾಂಗ್ರೆಸ್ ಬಡವರ ಪರ ಪಕ್ಷ ಎಂದು ಹೇಳಿಕೆ ನೀಡಲಾಗಿದೆ. ಶ್ರೀಮಂತರು ಚಿನ್ನ ಮತ್ತು ವಾಹನಗಳನ್ನು ಹೆಚ್ಚು ಬಳಸುವುದರಿಂದ ಪ್ರಧಾನಿ ತಮ್ಮ ಪಕ್ಷದವರನ್ನೇ ತ್ಯಾಗ ಮಾಡುವಂತೆ ಕೇಳಬೇಕು ಎಂದು ಮನವಿ ಮಾಡಲಾಗಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಲಾಜಿಲ್ಲದೇ ‘ಏಕ್ ದಿನ್’ ಸಿನಿಮಾದ ಸೋಲು ಒಪ್ಪಿಕೊಂಡ ಆಮಿರ್ ಖಾನ್ ಪುತ್ರ ಜುನೈದ್ ಖಾನ್ – Kannada News | Junaid Khan reveals Aamir Khan upset over Ek Din Box Office failure Sai Pallavi Hindi Film

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಟನೆಯ ಎರಡನೇ ಸಿನಿಮಾ ‘ಏಕ್ ದಿನ್’ (Ek Din) ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾ ಮೇಲೆ ಅವರಿಗೆ ಬಹಳ ನಿರೀಕ್ಷೆ ಇತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಮಕಾಡೆ ಮಲಗಿದೆ. ‘ಏಕ್ ದಿನ್’ ಚಿತ್ರದ ಸೋಲು ಸ್ವತಃ ಜುನೈದ್‌ ಖಾನ್​ ಅವರಿಗಿಂತಲೂ ಅಮೀರ್ ಖಾನ್ ಅವರನ್ನೇ ಹೆಚ್ಚು ಕಾಡುತ್ತಿದೆ ಎಂಬ ವಿಷಯ ಈಗ ಹೊರಬಿದ್ದಿದೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜುನೈದ್ ಖಾನ್ (Junaid Khan) ಅವರು ಚಿತ್ರದ ವೈಫಲ್ಯದ ಬಗ್ಗೆ ಮಾತನಾಡಿದ್ದಾರೆ.

‘ಏಕ್ ದಿನ’ ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮಿಶ್ರ ಹಾಗೂ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ಮೇ 1ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ದಿನ ಕೇವಲ 1 ಕೋಟಿ ರೂಪಾಯಿ ಗಳಿಸಿತು. ನಂತರದ ದಿನಗಳಲ್ಲಿ ಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿತು. ವರದಿಗಳ ಪ್ರಕಾರ, 11 ದಿನಗಳಲ್ಲಿ ಈ ಚಿತ್ರವು ವಿಶ್ವದಾದ್ಯಂತ ಕೇವಲ 5.44 ಕೋಟಿ ರೂಪಾಯಿ ಮತ್ತು ಭಾರತದಲ್ಲಿ 4.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಿನಿಮಾವನ್ನು ನಿರ್ಮಾಣ ಮಾಡಿದ್ದ ಆಮಿರ್ ಖಾನ್ ಅವರಿಗೆ ಚಿತ್ರದ ಮೇಲೆ ಅಪಾರ ನಂಬಿಕೆ ಇತ್ತು. ಆದರೆ ಸಿನಿಮಾ ಸೋತಾಗ ಅವರು ತುಂಬಾ ಭಾವುಕರಾಗಿದ್ದಾರೆ ಎಂದು ಜುನೈದ್ ಹೇಳಿದ್ದಾರೆ. ಇದು ಸಾಯಿ ಪಲ್ಲವಿ ಅವರು ಬಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ಆಗಿದ್ದರೂ ಕೂಡ ಅಭಿಮಾನಿಗಳನ್ನು ಸೆಳೆಯುವಲ್ಲಿ ವಿಫಲ ಆಯಿತು. ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಕಲೆಕ್ಷನ್ ಆಯಿತು.

‘ನನ್ನ ತಂದೆ ಇನ್ನೂ ಆ ಸೋಲಿನ ನೋವಿನಲ್ಲಿದ್ದಾರೆ. ಇಷ್ಟು ವರ್ಷಗಳ ಅನುಭವದ ನಂತರವೂ ಚಿತ್ರದ ವೈಫಲ್ಯ ಅವರನ್ನು ತುಂಬಾ ಕಾಡುತ್ತದೆ. ಅವರು ಸಿನಿಮಾವನ್ನು ತುಂಬಾ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ. ವಿಶೇಷವಾಗಿ ಆ ಸಿನಿಮಾ ಅವರಿಗೆ ಇಷ್ಟವಾಗಿದ್ದರೆ ಅದರ ಸೋಲು ಅವರಿಗೆ ಅತಿಯಾಗಿ ನೋವು ನೀಡುತ್ತದೆ’ ಎಂದು ಜುನೈದ್ ವಿವರಿಸಿದ್ದಾರೆ.

ಇದನ್ನೂ ಓದಿ: ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್

ಜುನೈದ್ ಖಾನ್ ಅವರ ಮೊದಲ ಚಿತ್ರ ‘ಮಹಾರಾಜ್’ ಒಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಆದರೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅವರ ‘ಲವ್ಯಪ’ ಮತ್ತು ‘ಏಕ್ ದಿನ್’ ಸಿನಿಮಾಗಳು ಸತತವಾಗಿ ಸೋಲು ಕಂಡಿವೆ. ಮುಂದಿನ ದಿನಗಳಲ್ಲಿ ಜುನೈದ್ ‘ರಾಗಿಣಿ MMS 3’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಳ್ಳಾರಿ: ಜಿಂದಾಲ್‌ನಿಂದ ಕೋಟಿ ಕೋಟಿ ತೆರಿಗೆ ಬಾಕಿ; ವಸೂಲಿಗೆ ಸ್ಥಳೀಯ ಆಡಳಿತ ಸರ್ಕಸ್ – Kannada News | JSW Jindal’s 20 Cr Unpaid Tax Row: Ballari Gram Panchayats Demand Pending Dues Since 2018

ಬಳ್ಳಾರಿ, ಮೇ 12: ಸಂಡೂರು ತಾಲೂಕಿನ ತೋರಣಗಲ್ ಬಳಿ ಸ್ಥಾಪನೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿ JSW ಜಿಂದಾಲ್ (JSW Jindal), 2018ರಿಂದಲೂ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆಯನ್ನು (Tax) ಬಾಕಿ ಉಳಿಸಿಕೊಂಡಿದೆ. ತೋರಣಗಲ್ಲು, ವಡ್ಡು, ಬನ್ನಿಹಟ್ಟಿ ಗ್ರಾಮ ಪಂಚಾಯಿತಿಗಳಿಗೆ ಸರಿಸುಮಾರು 20 ಕೋಟಿ ರೂ.ಗೂ ಅಧಿಕ ತೆರಿಗೆ ಪಾವತಿಸದೆ ಜಿಂದಾಲ್ ಕಂಪನಿ ಗಪ್‌ಚುಪ್ ಕುಳಿತಿದೆ. ಹಲವು ಬಾರಿ ನೋಟಿಸ್ ನೀಡಿದರೂ ಕಂಪನಿ ಡೋಂಟ್ ಕೇರ್ ಧೋರಣೆ ತಾಳಿರುವುದು ಸ್ಥಳೀಯ ಆಡಳಿತ ಅಸಮಾಧಾನಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • 2018ರಿಂದ ಈವರಗೆ ತೆರಿಗೆ ಬಾಕಿ ಉಳಿಸಿಕೊಂಡ ಜಿಂದಾಲ್ ಕಂಪನಿ
  • ತೆರಿಗೆ ವಸೂಲಿ ಮಾಡಲು ಸ್ಥಳೀಯ ಆಡಳಿತಗಳು ಸರ್ಕಸ್​​
  • ಜಿಂದಾಲ್ ವಿರುದ್ಧ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಕ್ರೋಶ

ಗ್ರಾಮ ಪಂಚಾಯತ್​ವಾರು ಬಾಕಿ ವಿವರ

  • ತೋರಣಗಲ್ಲು ಗ್ರಾಪಂ: 2018-19ರಿಂದ ಇಲ್ಲಿಯವರೆಗೆ 20,23,94,216 ರೂ
  • ಬನ್ನಿಹಟ್ಟಿ ಗ್ರಾಪಂ: 2024-25ರಿಂದ 2025-26ರವರೆಗೆ 60,53,036 ರೂ
  • ವಡ್ಡು ಗ್ರಾಪಂ: 2018-19ರಿಂದ 2025-26ರವರೆಗೆ ಕೋಟ್ಯಂತರ ರೂ ತೆರಿಗೆ ಪಾವತಿ ಬಾಕಿ ಇದೆ.

ತೋರಣಗಲ್ಲು, ವಡ್ಡು, ಬನ್ನಿಹಟ್ಟಿ ಗ್ರಾಮ ಪಂಚಾಯತ್​​ಗಳಿಗೆ ಪಾವತಿಸಬೇಕಿರುವ ತೆರಿಗೆಯ ವಸೂಲಿಗೆ ನೋಟಿಸ್ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಗದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ: ಸಾರ್ವಜನಿಕರು, ಸಿಬ್ಬಂದಿ ಮೊಬೈಲ್​​ ಟಾರ್ಚೇ ಇಲ್ಲಿ ಬೆಳಕು!

1994ರಲ್ಲಿ ವಿಜಯನಗರ ಸ್ಟೀಲ್ ಲಿಮಿಟೆಡ್ ಹೆಸರಲ್ಲಿ ಆರಂಭವಾದ ಜಿಂದಾಲ್, ಸಾವಿರಾರು ಎಕರೆಯಲ್ಲಿ ಕಬ್ಬಿಣ, ಸಿಮೆಂಟ್, ಪೇಂಟ್ ಸೇರಿ ಹಲವು ಉದ್ಯಮಗಳನ್ನು ನಡೆಸುತ್ತಿದೆ. ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಹೆಗ್ಗಳಿಕೆ ಇದ್ದರೂ, ತೆರಿಗೆ ವಸೂಲಿ ಮಾಡುವುದು ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗೆ ಸವಾಲಾಗಿದೆ.

ಜಿಂದಾಲ್ ಕಾರ್ಯವೈಖರಿ ಬಗ್ಗೆ ಸಿಎಂ ಮತ್ತು ಡಿಸಿಎಂ ಗಮನಕ್ಕೆ ತರುತ್ತೇನೆ ಎಂದ ಶಾಸಕ ಭರತ್ ರೆಡ್ಡಿ

ಇನ್ನು ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ, ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ, ಇದೀಗ ತೆರಿಗೆಯನ್ನೂ ಪಾವತಿಸುತ್ತಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. JSW ಕಾರ್ಯವೈಖರಿಯನ್ನು ಸಿಎಂ ಮತ್ತು ಡಿಸಿಎಂ ಗಮನಕ್ಕೆ ತರುತ್ತೇನೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version