GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ಕೇಂದ್ರಕ್ಕಿಂತ ರಾಜ್ಯದ ಬೆಳವಣಿಗೆ ಉತ್ತಮ ಎಂದ ಸಿದ್ದು
ಬೆಂಗಳೂರು, ಮಾರ್ಚ್ 06: ಜಿಎಸ್‌ಟಿ ಹಣ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026-27ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿದ್ದೇನೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ. ಕೆಲ ರಾಜ್ಯಗಳು ಇನ್ನೂ ಚೇತರಿಸಿಕೊಂಡಿಲ್ಲ, ಮೈನಸ್ ಗ್ರೋತ್‌ನಲ್ಲಿದ್ದಾವೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ನಂಬರ್ ಒನ್ ಸ್ಥಾನದಲ್ಲಿದೆ ಎಂದು…