ತಂದೆ ಜಾಗ ನೀಡಿದ್ದ ಆಸ್ಪತ್ರೆಯಲ್ಲೇ ಮಗನ ದುರಂತ ಅಂತ್ಯ: ಅಷ್ಟಕ್ಕೂ ಆಗಿದ್ದೇನು? – Kannada News | Son Dies in Hospital Built on Land Donated by His Father Amid Ambulance Delay in Tumakuru
ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೆ ವ್ಯಕ್ತಿ ಸಾವು ತುಮಕೂರು, ಜನವರಿ 18: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದ ಕಾರಣ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ. ಸೈಯ್ಯದ್ ಅಕ್ರಮ್(42) ಮೃತ ದುರ್ದೈವಿಯಾಗಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ನಮಗಾದ ತೊಂದರೆ ಮತ್ಯಾರಿಗೂ ಆಗಬಾರದು ಎಂದು ಅಲವತ್ತುಕೊಂಡಿದ್ದಾರೆ. 1 ಗಂಟೆ ಕಾದರೂ…