Headlines

ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

ಹಾಸನ, ಏಪ್ರಿಲ್ 13: ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದೆ. ಒಂದು ಬಾರಿ ಓಡಿಹೋಗಲು ಯತ್ನಿಸಿದ್ದಾಗ ಪೋಷಕರ ದೂರಿನ ಮೇರೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಮನವೊಲಿಸಿ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು ಎಂಬುದು ತಿಳಿದುಬಂದಿದೆ. ಆದರೆ, ನಂತರ ಅಲ್ಲಿಂದಲೂ ಹೇಗೋ ತಪ್ಪಿಸಿಕೊಂಡ ಆಕೆ, ಪ್ರಿಯಕರನ ಜತೆ ಓಡಿಹೋಗಿ ಕಾರಿನಲ್ಲೇ ಮದುವೆಯಾಗಿದ್ದಾರೆ!…

Read More

ಬೆಂಗಳೂರಿನ ಗೌರಿಯಿಂದ ಆಮೀರ್ ಮನಸ್ಸಿಗೆ ಸಿಕ್ಕಿತು ಶಾಂತಿ 

ಬಾಲಿವುಡ್‌ನಲ್ಲಿ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಆಮಿರ್ ಖಾನ್ ತಮ್ಮ ವೃತ್ತಿಪರ ಜೀವನದಲ್ಲಿ ಮಾತ್ರವಲ್ಲದೆ ವೈಯಕ್ತಿಕ ಜೀವನದಲ್ಲೂ ಅನೇಕ ತಿರುವುಗಳನ್ನು ಕಂಡಿದ್ದಾರೆ. ಎರಡು ವಿವಾಹಗಳು ಮತ್ತು ಎರಡು ವಿಚ್ಛೇದನಗಳು ಅವರ ಜೀವನದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿವೆ. ಅವರ ಮೊದಲ ಪತ್ನಿ ರೀನಾ ದತ್ತಾ ಮತ್ತು ನಂತರ ಕಿರಣ್ ರಾವ್ ಅವರೊಂದಿಗೆ ವಿಚ್ಛೇದನ ಪಡೆದರೂ, ಅವರು ಇಬ್ಬರೊಂದಿಗೂ ಸ್ನೇಹ ಸಂಬಂಧವನ್ನು ಉಳಿಸಿಕೊಂಡಿದ್ದಾರೆ ಎಂಬುದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಆದಾಗ್ಯೂ, ಇತ್ತೀಚೆಗೆ, ಗೌರಿ ಸ್ಪ್ರಾಟ್ ಎಂಬ ಬೆಂಗಳೂರು ಮಹಿಳೆ…

Read More

ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ

ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ – Kannada News | CM Siddaramaiah will be Announce 56 thousand Jobs appointment This Budget Says Minister Santosh lad In Dharwad

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ…

Read More

ಬೆಂಗಳೂರು: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ! – Kannada News | Bengaluru Mahindra Showroom Test Drive Blunder: Drunk Driver Crashes into 4 Vehicles, Injures Pedestrian in Mahadevapura

ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂImage Credit source: tv9 ಬೆಂಗಳೂರು, ಏಪ್ರಿಲ್ 17: ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಟೆಸ್ಟ್ ಡ್ರೈವ್ ವೇಳೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ (Bangalore) ಮಹದೇವಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿಗೆ ಕಾರು ಚಲಾಯಿಸಲು ನೀಡಿದ್ದೇ ಈ ಅನಾಹುತಕ್ಕೆ ಕಾರಣವಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆಂಗಳೂರಿನ ಮಹದೇವಪುರದ ವಿಜ್ಞೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಕುಡಿದು ಬಂದು ಟೆಸ್ಟ್ ಡ್ರೈವ್​ಗೆ…

Read More

ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ – Kannada News | Andhra Pradesh: Wife, Lover Suffocates Husband, Gruesome Post Murder Acts Emerge

ಗುಂಟೂರು, ಜನವರಿ 23: ಮಹಿಳೆಯೊಬ್ಬರು ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆ(Murder)ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಸಂಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು. ಪತಿಗಾಗಿ ಬಿರಿಯಾನಿ ಸಿದ್ಧಪಡಿಸಿದ್ದಳು, ಅದರೊಳಗೆ ನಿದ್ರೆ ಮಾತ್ರೆಯ ಪುಡಿಯನ್ನು ಬೆರೆಸಿದ್ದಳು, ಪತಿ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರನನ್ನು ಮನೆಗೆ ಕರೆದಿದ್ದಾಳೆ. ನಂತರ ಇಬ್ಬರೂ ಸೇರ ಮಲಗಿದ್ದ ವ್ಯಕ್ತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಗುಂಟೂರಿನ ಚಿಲುವೂರು ಗ್ರಾಮದಲ್ಲಿ ಈ ವಿಚಿತ್ರ…

Read More

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು…

Read More

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ – Kannada News | Pregnant Women Parking Goes Viral: Bengaluru Nexus Mall’s Thoughtful Concept

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Read More

Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ? – Kannada News | Viral Video Shows Plume Near Burj Khalifa as Gulf Tensions Escalate

ದುಬೈ, ಮಾರ್ಚ್​ 01: ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವರದಿಯಾದ ಕೂಡಲೇ ದೂರದ ವೀಡಿಯೊದಲ್ಲಿ ಕಪ್ಪು ಹೊಗೆ ಏರುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ದುಬೈನ ಪ್ರತಿಷ್ಠಿತ ಗಗನಚುಂಬಿ ಕಟ್ಟಡವು ದಾಳಿಗೆ ಗುರಿಯಾಗಿತ್ತೇ ಮತ್ತು ಅದಕ್ಕೆ ಯಾವುದೇ ಹಾನಿಯಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ದುಬೈನ ಹೃದಯಭಾಗದಲ್ಲಿರುವ 828 ಮೀಟರ್ ಎತ್ತರದಲ್ಲಿರುವ ಬುರ್ಜ್ ಖಲೀಫಾ…

Read More

ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?

ಬಾಲಿವುಡ್​​ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…

Read More