Headlines

ಕುವೈತ್​​ನಲ್ಲಿರುವ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ

ಟೆಹ್ರಾನ್, ಮಾರ್ಚ್ 6: ಕುವೈತ್‌ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲಿನ ಇರಾನ್ ದಾಳಿ ಮುಂದುವರೆದಿದೆ. ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ (Iran) ಶಹೀದ್-136 ಡ್ರೋನ್‌ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್‌ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್‌ನ ನವೀಕರಿಸಿದ ಆವೃತ್ತಿಯಾದ ಇದು 2,000 ಕಿಮೀ ದಾಳಿಯ ವ್ಯಾಪ್ತಿಯನ್ನು ಹೊಂದಿದೆ. ಈ ಡ್ರೋನ್‌ಗಳು ನಿಖರವಾದ ದಾಳಿಗಳು ಮತ್ತು ಸಮೂಹ ಕಾರ್ಯಾಚರಣೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

ಟಿ20 ವಿಶ್ವಕಪ್ ಫೈನಲ್; ಅಹಮದಾಬಾದ್‌ನಲ್ಲಿ 10 ಸಾವಿರದಿಂದ ಮುಕ್ಕಾಲು ಲಕ್ಷಕ್ಕೇರಿದ ರೂಮ್​ ಬೆಲೆ

2023 ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಟೀಂ ಇಂಡಿಯಾ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಮತ್ತೊಂದು ಐಸಿಸಿ ಈವೆಂಟ್​ನ ಫೈನಲ್ ಆಡಲು ಸಜ್ಜಾಗಿದೆ. ಎಲ್ಲರಿಗೂ ತಿಳಿದಿರುವಂತೆ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 2026 ರ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣ ಫೈನಲ್ ಕಾಳಗಕ್ಕೆ ತಯಾರಾಗಿ ನಿಂತಿದೆ. ಅದರಲ್ಲೂ ಆತಿಥೇಯ ಭಾರತ ಫೈನಲ್​ ಪ್ರವೇಶಿಸಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ…

Read More

ಬೆಂಗಳೂರಿನ ನಂತರ ಎರಡನೇ ಐಟಿ ಹಬ್ ಆಗಿ ಮೈಸೂರು? ತಮ್ಮೂರಿಗೆ ಉಡುಗೊರೆ ಕೊಟ್ಟ ಸಿದ್ದು

ಬೆಂಗಳೂರು, ಮಾರ್ಚ್ 6: ಸಿದ್ದರಾಮಯ್ಯ ಅವರ ದಾಖಲೆಯ 2026ರ ಬಜೆಟ್​ನಲ್ಲಿ ಪ್ರಮುಖಾಂಶಗಳಲ್ಲಿ ಮೈಸೂರನ್ನು ಐಟಿ ಹಬ್ ಆಗಿ ರೂಪಿಸಲು ಯೋಜನೆಯೂ ಒಂದು. ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆ ಕಡಿಮೆ ಮಾಡಲು ಮತ್ತು ವಿಕೇಂದ್ರೀಕೃತ ಆರ್ಥಿಕತೆಗೆ ಉತ್ತೇಜನ ನೀಡಲು ಮೈಸೂರನ್ನು ರಾಜ್ಯದ ಎರಡನೇ ಐಟಿ ಹಬ್ ಆಗಿ ರೂಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. ಬೆಂಗಳೂರಿನಿಂದ ದಕ್ಷಿಣಕ್ಕೆ ಮೈಸೂರು 140 ಕಿಮೀ ದೂರದಲ್ಲಿದೆ. ಈಗಾಗಲೇ ಮೈಸೂರಿನಲ್ಲಿ ಸಾಕಷ್ಟು ಕೈಗಾರಿಕೆಗಳು ನೆಲಸಿವೆ. ಐಟಿ ಕಂಪನಿಗಳೂ ಬಹಳಷ್ಟಿವೆ. ಕಾಗ್ನೈಜೆಂಟ್ ಟೆಕ್ನಾಲಜೀಸ್, ಇನ್ಫೋಸಿಸ್ ಇತ್ಯಾದಿ 180-200…

Read More

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ (The Kerala Story) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ…….

Read More

ಮನೆಯೊಳಗೆ ಅಕ್ಕ-ತಂಗಿಯರ ನಿಗೂಢ ಸಾವು; ಹೆತ್ತಮ್ಮನೇ ಮುಖ್ಯ ಆರೋಪಿ!

ನವದೆಹಲಿ, ಮಾರ್ಚ್ 6: ದಕ್ಷಿಣ ದೆಹಲಿಯಲ್ಲಿ 33 ಮತ್ತು 28 ವರ್ಷ ವಯಸ್ಸಿನ ಇಬ್ಬರು ಸಹೋದರಿಯರು ನಿಗೂಢವಾಗಿ ಮೃತಪಟ್ಟಿದ್ದಾರೆ. ಗುರುವಾರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಮಾಲ್ವಿಯಾ ನಗರದ ಅವರ ಮನೆಯ ಬಾಗಿಲು ಒಡೆದು ನೋಡಿದ ನಂತರ ಅವರ 55 ವರ್ಷದ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ (Delhi Crime News) ಯತ್ನಿಸುವ ಮೊದಲು ತಾಯಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿರಬಹುದು ಎಂಬುದು ಪೊಲೀಸರ ಅನುಮಾನ. ಆದರೆ ಆ ಮಹಿಳೆಗೆ ಪ್ರಜ್ಞೆ ಬಂದ…

Read More

ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್​​: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ

ಬೆಂಗಳೂರು, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ (Budget) ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್​ ಬಗ್ಗೆ ಮದ್ಯ…

Read More

ತಿರುಪತಿಯಲ್ಲಿ ಜಾನ್ವಿ ಕಪೂರ್ ಹುಟ್ಟುಹಬ್ಬ: ಬರಿಗಾಲಲ್ಲಿ 3,550 ಮೆಟ್ಟಿಲು ಹತ್ತಿದ ನಟಿ

ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಇಂದು (ಮಾರ್ಚ್ 6) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಜಾನ್ವಿ ಆಗಮಿಸಿದ್ದರು. ಆದರೆ ಈ ಬಾರಿ ಅವರು ಕೇವಲ ದರ್ಶನ ಪಡೆಯುವುದಲ್ಲದೆ, ಬರೋಬ್ಬರಿ 3,550 ಮೆಟ್ಟಿಲುಗಳನ್ನು ಬರಿಗಾಲಿನಲ್ಲಿ ಹತ್ತುವ ಮೂಲಕ ತಮ್ಮ ಭಕ್ತಿಯನ್ನು ಮೆರೆದಿದ್ದಾರೆ. ತಿರುಪತಿ ಬೆಟ್ಟ ಹತ್ತುವಾಗ ಜಾನ್ವಿ ಅವರು ಬಿಳಿ ಬಣ್ಣದ ಫ್ಲೋರಲ್ ಕುರ್ತಾ ಧರಿಸಿದ್ದರು….

Read More

CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್  (Karnataka Budget 2026)  ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸದರೆ, ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲದ…

Read More

Samudrika Shastra: ಅಂಗೈಯ ಈ ಭಾಗದಲ್ಲಿ ಮಚ್ಚೆ ಇದ್ದರೆ, ನಿಮಗೆ ಎಂದಿಗೂ ಸಂಪತ್ತಿನ ಕೊರತೆ ಇರುವುದಿಲ್ಲ!

ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈ ಮತ್ತು ಮುಖದ ಮೇಲಿನ ಮಚ್ಚೆಗಳು ವ್ಯಕ್ತಿಯ ಅದೃಷ್ಟ, ಸಂಪತ್ತು ಮತ್ತು ಜೀವನದ ಯಶಸ್ಸಿನ ಪಥವನ್ನು ಸೂಚಿಸುತ್ತವೆ. ವಿಶೇಷವಾಗಿ ಅಂಗೈಯಲ್ಲಿರುವ ಮಚ್ಚೆಗಳು ಅಪಾರ ಐಶ್ವರ್ಯದ ಸಂಕೇತವೆಂದು ನಂಬಲಾಗಿದೆ. ಹಾಗಾದರೆ, ಈ ಮಚ್ಚೆಗಳು ವ್ಯಕ್ತಿಯ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅಂಗೈಯ ಮಧ್ಯಭಾಗದ ಮಚ್ಚೆ: ಅದೃಷ್ಟದ ಲಕ್ಷಣ: ಅಂಗೈಯ ಮಧ್ಯಭಾಗದಲ್ಲಿ ಮಚ್ಚೆ ಇರುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗಳು ಜೀವನದಲ್ಲಿ ಬಹಳ ಬೇಗನೆ ಆರ್ಥಿಕ ಸ್ಥಿರತೆಯನ್ನು ಮತ್ತು…

Read More

ಬಿಹಾರದಲ್ಲಿ ಶೀಘ್ರದಲ್ಲೇ ಬಿಜೆಪಿಗೆ ಸಿಎಂ ಸ್ಥಾನ; ಏಪ್ರಿಲ್ 10ರ ಬಳಿಕ ಅಂತಿಮ ನಿರ್ಧಾರ ಸಾಧ್ಯತೆ

ಪಾಟ್ನಾ, ಮಾರ್ಚ್ 6: ಬಿಹಾರದಲ್ಲಿ ಹೊಸ ರಾಜ್ಯ ಸರ್ಕಾರ ರಚನೆ ಕುರಿತು ಚರ್ಚೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಭದ್ರಪಡಿಸಿಕೊಳ್ಳಲು ಸಜ್ಜಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ತಕ್ಷಣ ರಾಜೀನಾಮೆ ನೀಡುವ ಸಾಧ್ಯತೆಯಿಲ್ಲ. ಏಪ್ರಿಲ್ 10ರವರೆಗೆ ಅವರು ಅಧಿಕಾರದಲ್ಲಿ ಮುಂದುವರಿಯಬಹುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ನಡುವೆ ರಾಜಕೀಯ ಪರಿವರ್ತನೆಯ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ನಂತರವೇ ಸಿಎಂ ಸ್ಥಾನದ ಬದಲಾವಣೆಯಾಗುವ…

Read More