ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್ – Kannada News | Supreme Court Stays Recounting Process in Sringeri Assembly Constituency Case, Jeevraj Reaction
ಬೆಂಗಳೂರು, ಮೇ 12: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ…