ಪ್ಲೇ-ಆಫ್ ರೇಸ್‌ನಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್; ಸೋಲಿಗೆ ಅಯ್ಯರ್ ದೂರಿದ್ದು ಯಾರನ್ನ? – Kannada News | PBKS Playoff Hopes Dim: Iyer Blames Poor Bowling After Delhi Capitals Defeat
ಧರ್ಮಶಾಲಾದಲ್ಲಿ ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋತಿದೆ. ಆರಂಭದಲ್ಲಿ ಒಂದೇ ಒಂದು ಸೋಲನ್ನು ಕಾಣದೆ ನಾಗಾಲೋಟ ಮುಂದುವರಿಸಿದ್ದ ಈ ತಂಡ ಈಗ ಸತತ ನಾಲ್ಕನೇ ಸೋಲನ್ನು ಕಂಡಿದೆ. ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ತಂಡದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಮಾತನಾಡಿದ ಅವರು, ಸೋಲಿಗೆ ತಂಡದ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ಪ್ರದರ್ಶನವೇ ನೇರ ಕಾರಣ ಎಂದು ಮುಚ್ಚುಮರೆಯಿಲ್ಲದೆ ಒಪ್ಪಿಕೊಂಡಿದ್ದಾರೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್, ಪ್ರಿಯಾಂಶ್…