ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್: ವಿಧಾನ ಪರಿಷತ್ನಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ – Kannada News | Over the last three years, 88 police personnel in Karnataka were linked to criminal acts
ಬೆಳಗಾವಿ, ಡಿಸೆಂಬರ್ 18: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್ಸೆಂಟರ್ನ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್ಗಳಲ್ಲಿಯೂ ಪೊಲೀಸ್ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಈ ನಡುವೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಬೆಚ್ಚಿಬೀಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನ ಜೆಡಿಎಸ್…