ಸಂಕಷ್ಟದಲ್ಲಿ ಹೋಟೆಲ್ ಉದ್ಯಮ: ಜಿಎಸ್ಟಿ ವಿನಾಯಿತಿ ಕೋರಿ ನಿರ್ಮಲಾ ಸೀತಾರಾಮನ್ ಮೊರೆ ಹೋದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ – Kannada News | Bengaluru Hotel Association Urges Nirmala Sitharaman to Reduce GST on Restaurants and Hotel Rooms
ಬೆಂಗಳೂರು, ಮೇ 12: ಹೆಚ್ಚುತ್ತಿರುವ ಕಚ್ಚಾ ವಸ್ತುಗಳ (ಗ್ಯಾಸ್, ತರಕಾರಿ ಮತ್ತಿತರ ವಸ್ತುಗಳು) ಬೆಲೆ ಮತ್ತು ನಿರ್ವಹಣಾ ವೆಚ್ಚದಿಂದ ಕಂಗಾಲಾಗಿರುವ ಬೆಂಗಳೂರಿನ ಹೋಟೆಲ್ ಉದ್ಯಮವು ಈಗ ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಹೋಟೆಲ್ ಕೊಠಡಿಗಳು ಮತ್ತು ರೆಸ್ಟೋರೆಂಟ್ ಸೇವೆಗಳ ಮೇಲಿನ ಜಿಎಸ್ಟಿ (GST) ದರವನ್ನು ತರ್ಕಬದ್ಧಗೊಳಿಸುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಮಾಡಿದೆ. ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಸೌಲಭ್ಯದ ಕೊರತೆಯಿಂದಾಗಿ ಹೋಟೆಲ್ ಉದ್ಯಮವು…