ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 2026ರ ಸೀಸನ್‌ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಐಪಿಎಲ್ ಹಬ್ಬ ಶುರುವಾಗಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.
ಫುಕೆಟ್, ಮಾರ್ಚ್ 11: ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿತು. ಇದರ ಪರಿಣಾಮವಾಗಿ ಅದರ ನೋಸ್ ಗೇರ್‌ಗೆ ಭಾರೀ ಹಾನಿಯಾಗಿದೆ. ಈ ಘಟನೆಯ ನಂತರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಲವು ಗಂಟೆಗಳ ಕಾಲ ರನ್‌ವೇಯನ್ನು ಮುಚ್ಚಲಾಯಿತು. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಏರ್ ಇಂಡಿಯಾ ವಿಮಾನವು ಲ್ಯಾಂಡಿಂಗ್ ಮಾಡುವಾಗ ಸಮಸ್ಯೆ ಅನುಭವಿಸಿತು. ವಿಮಾನದ ಮುಂಭಾಗದ ಚಕ್ರ ಮುರಿದು ವಿಮಾನವು ರನ್‌ವೇ ಉದ್ದಕ್ಕೂ ಜಾರಿತು ಎಂದು ಮೂಲಗಳು ತಿಳಿಸಿವೆ. ಇದರ ಫೋಟೋಗಳು, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ. ತುರ್ತು ಪ್ರತಿಕ್ರಿಯೆ ತಂಡಗಳು ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಆ ಪ್ರದೇಶವನ್ನು ಸುರಕ್ಷಿತಗೊಳಿಸಲು ಮತ್ತು ವಿಮಾನದಲ್ಲಿದ್ದವರ ಸುರಕ್ಷತೆಗಾಗಿ ಕೂಡಲೆ ಸ್ಥಳಕ್ಕೆ ಧಾವಿಸಿದರು.
@airindia@AirIndiaX@ndtv@aajtak
I was filming our landing on Air India Express flight IX 938 from Hyderabad to Phuket when we hit the runway really hard. It was such a bad landing that you could actually smell something burning inside the plane. I think it’s with front wheel. pic.twitter.com/IaFgjqy3Na
“ಮಾರ್ಚ್ 11ರಂದು ಹೈದರಾಬಾದ್‌ನಿಂದ ಫುಕೆಟ್‌ಗೆ ಹೋಗುವ ವಿಮಾನವು ಸಮಸ್ಯೆಯನ್ನು ಅನುಭವಿಸಿತು. ಫುಕೆಟ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನದ ನೋಸ್ ವೀಲ್ (ಮುಂಭಾಗದ ಚಕ್ರ) ಸಮಸ್ಯೆ ಅನುಭವಿಸಿತು” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Phuket International Airport has been closed.
An Air India Express flight from Hyderabad made a hard landing damaging the aircraft’s nose landing gear.
The airport is now closed to traffic.
“We confirm that our Hyderabad-Phuket flight on 11 March experienced an issue with the… pic.twitter.com/GhoJ5zIWHJ
ಈ ವಿಮಾನದಲ್ಲಿ 131 ಪ್ರಯಾಣಿಕರು, ಇಬ್ಬರು ಮಕ್ಕಳು ಮತ್ತು 7 ಸಿಬ್ಬಂದಿ ಇದ್ದರು. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ ವಿಮಾನವು ಹಾರ್ಡ್ ಲ್ಯಾಂಡಿಂಗ್ ಮಾಡಿರುವುದರಿಂದ ನೋಸ್ ವೀಲ್‌ಗೆ ಹಾನಿಯಾಗಿದೆ ಎಂದು ಕಂಡುಬಂದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ತುಮಕೂರು, (ಮಾರ್ಚ್ 11): ನಗರದ ಇಸ್ರಾ ಶಾದಿ ಮಹಲ್ ಬಳಿ ನಡೆದಿದ್ದ ನಜರಾಬಾದ್ ಮುಬಾರಕ್ ಕೊಲೆ ಇಡೀ ತುಮಕೂರನ್ನೇ (Tumakuru) ಬೆಚ್ಚಿ ಬೀಳಿಸಿದ್ದು, ಇದೀಗ ಈ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮರಳೂರು ದಿಣ್ಣೆಯ ಮುಬಾರಕ್ ಎನ್ನುವಾತ ಮಾತನಾಡುವ ನೆಪದಲ್ಲಿ ನಜರಾಬಾದ್ ಮುಬಾರಕ್ ನನ್ನು ಕರೆದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇನ್ನು ಘಟನೆ ನಡೆದ 24 ಗಂಟೆಯೊಳಗೆ ಹಂತಕ ಮರಳೂರು ದಿಣ್ಣೆಯ ಮುಬಾರಕ್ ನನ್ನು ಬಂಧಿಸುವಲ್ಲಿ ಪೊಲೀಸರು ಸಹ ಯಶಸ್ವಿಯಾಗಿದ್ದು, ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದಿದ್ದಾನೆ ಎನ್ನುವುದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಆದ್ರೆ, ಮೃತನ ಕುಟುಂಬಸ್ಥರು , ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ.
ಹೌದು.. ಆರಂಭದಲ್ಲಿ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿತ್ತು. ಕೊಲೆಯಾದ ನಜರಾಬಾದ್ ಮುಬಾರಕ್, ಮರಳೂರು ದಿಣ್ಣೆಯ ಮುಬಾರಕ್ ಬಳಿ ಹಣ ಪಡೆದಿದ್ದ. ವಾಪಾಸ್ ನೀಡದಕ್ಕೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿತ್ತು. ಆದ್ರೆ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ತಿಲಕ್ ಪಾರ್ಕ್ ಪೊಲೀಸರು, ಆರೋಪಿ ಬಂಧಿಸಿ ವಿಚಾರಣೆ ನಡೆಸಿದಾಗ ವಾಮಾಚಾರದ ಕಥೆ ಬಿಚ್ಚಿಟ್ಟಿದ್ದಾನೆ.
ಮರಳೂರು ದಿಣ್ಣೆ ಮುಬಾರಕ್ ತಂದೆ ತಾಯಿ ನಡುವೆ ಕಳೆದ ಕೆಲ ವರ್ಷಗಳ ಹಿಂದೆ ಗಲಾಟೆಯಾಗಿತ್ತಂತೆ. ಈ ವೇಳೆ ತಂದೆ ತಾಯಿಯನ್ನು ಕೊಂದು ಜೈಲಿಗೆ ಹೋಗಿದ್ದ. ಇದರಿಂದ ಬೇಸರದಲ್ಲಿದ್ದ ಮರಳೂರು ದಿಣ್ಣೆ ಮುಬಾರಕ್ ನಿಗೆ ನಜರಾಬಾದ್ ನ ಮುಬಾರಕ್ ಸಾಂತ್ವಾನ ಹೇಳಿದ್ದ. ಆ ನಂತರ ಕಷ್ಟಗಳೆಲ್ಲ ದೂರವಾಗುತ್ತೆ ಎಂದು ಮರಳೂರು ದಿಣ್ಣೆ ಮುಬಾರಕ್ ನನ್ನು ದರ್ಗಾಗೆ ಕರೆದೊಯ್ದು ನಿಂಬೆಹಣ್ಣು ನೀಡಿ ಜ್ಯೂಸ್ ಮಾಡಿ ಕುಡಿಯುವಂತೆ ಹೇಳಿದ್ದನಂತೆ. ಅದಾದ ಬಳಿಕ ಒಂದೆರೆಡು ಬಾರಿ ಇದೇ ರೀತಿ ಕೆಲ ಪ್ರಕ್ರಿಯೆ ಮಾಡಿಸಿದ್ದ, ಇದರಿಂದ ಮರಳೂರು ದಿಣ್ಣೆ ಮಾನಸಿಕವಾಗಿದ್ದ. ಅಲ್ಲದೇ ಭೂತದ ಅನುಭವ ಆಗುತಿತ್ತಂತೆ. ರಾತ್ರಿ ನಿದ್ದೆ ಮಾಡುವಾಗ ದೆವ್ವ ಬಂದಂತಾಗುತಿತ್ತಂತೆ. ಇದರಿಂದ ಅನುಮಾನಗೊಂಡು ಮರಳೂರು ದಿಣ್ಣೆ ಮುಬಾರಕ್, ನನಗೆ ವಾಮಾಚಾರ ಮಾಡಿಸಿದ್ದಿಯಾ. ಸರಿ ಮಾಡು ಎಂದು ನಜರಾಬಾದ್ ಮುಬಾರಕ್ ಗೆ ಹೇಳಿದ್ದ.
ಆದ್ರೆ, ಇದಕ್ಕೆ ನಜರಾಬಾದ್ ಮುಬಾರಕ್ ಕ್ಯಾರೇ ಎಂದಿಲ್ಲ. ಇದರಿಂದ ಆಕ್ರೋಶಗೊಂಡ ಮರಳೂರು ದಿಣ್ಣೆ ಮುಬಾರಕ್, ನಜರಾಬಾದ್ ಮುಬಾರಕ್ ನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಆದ್ರೆ, ಇದನ್ನು ಮೃತ ನಜರಾಬಾದ್ ನ ಮುಬಾರಕ್ ಕುಟುಂಬ ಅಲ್ಲಗೆಳೆದಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಹೀಗಾಗಿ ಗೊಂದಲ ಸೃಷ್ಟಿಯಾಗಿದ್ದು, ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಆತ ಹೇಳುತ್ತಿರುವ ಸಂಗತಿ ನಿಜವೋ ಅಥವಾ ಮೃತನ ಕುಟುಂಬಸ್ಥರು ಹೇಳುವುದು ಸರಿಯೋ ಎನ್ನುವುದು ತನಿಖೆಯಲ್ಲ ಕೊಲೆಯ ಅಸಲಿ ಕಾರಣ ತಿಳಿದು ಬರಲಿದೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಸಿನಿಮಾದ ಪ್ರತಿ ಪಾತ್ರಗಳು ಕೂಡ ಕೌತುಕ ಮೂಡಿಸಿವೆ. ಶಿವರಾಜ್ಕುಮಾರ್, ಡಾಲಿ ಧನಂಜಯ, ಪ್ರಿಯಾಂಕಾ ಮೋಹನ್, ಅದಿತಿ ಬಾಲನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಅದಿತಿ ಬಾಲನ್ (Aditi Balan) ಅವರು ಏಜೆಂಟ್ ಕಾವೇರಿ ಎಂಬ ಪಾತ್ರ ಮಾಡುತ್ತಿದ್ದಾರೆ ಎಂಬ ಚಿತ್ರತಂಡ ಮಾಹಿತಿ ನೀಡಿದೆ. ಈ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಈ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರು ಏಜೆಂಟ್ ಪ್ರಕಾಶ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಈ ಪಾತ್ರವನ್ನು ‘ಆಪರೇಷನ್ ಡೈಮಂಡ್ ರಾಕೆಟ್’ ಸಿನಿಮಾದ ಅಣ್ಣಾವ್ರ ಪಾತ್ರಕ್ಕೆ ಜನರು ಹೋಲಿಸುತ್ತಿದ್ದಾರೆ. ಡಾಲಿ ಧನಂಜಯ ಅವರು ಏಜೆಂಟ್ ಶಂಕರ್ ಆಗಿ ನಟಿಸುತ್ತಿದ್ದಾರೆ. ಈಗ ತಮಿಳಿನ ನಟಿ ಅದಿತಿ ಬಾಲನ್ ಅವರು ಏಜೆಂಟ್ ಕಾವೇರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಚಿತ್ರತಂಡ ತಿಳಿಸಿದೆ.
ತಮಿಳುನಾಡಿನ ರಾಜ್ಯ ಪ್ರಶಸ್ತಿ ಪಡೆದಿರುವ ಅದಿತಿ ಬಾಲನ್ ಅವರು ಈ ಸಿನಿಮಾದಲ್ಲಿ ನಟಿಸಿರುವುದರಿಂದ ನಿರೀಕ್ಷೆ ಮೂಡಿದೆ. ‘ಅರುವಿ’ ಸಿನಿಮಾದ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ‘ಕ್ಯಾಪ್ಟನ್ ಮಿಲ್ಲರ್’, ‘ಪಡವೆಟ್ಟು’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಗೆ ಐದನೇ ಹಂತದ ಚಿತ್ರೀಕರಣ ಮಗಿದಿದೆ. ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಕಾಲಿಡುತ್ತಿದೆ. ಈ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ಅವರು ‘ವೈಶಾಖ್ ಜೆ. ಫಿಲ್ಮ್ಸ್’ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಚರಣ್ ರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.
ವಿಶ್ವಾಸ್ ಕಶ್ಯಪ್ ಅವರ ಪ್ರೊಡಕ್ಷನ್ ವಿನ್ಯಾಸ ಇರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಗೆ ಇಂಚರಾ ಸುರೇಶ್ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಮತ್ತು ಥ್ರಿಲ್ಲರ್ ಕಹಾನಿ ಇರಲಿದ್ದು, ಪ್ರೇಕ್ಷಕರಿಗೆ ಭಿನ್ನವಾದ ಅನುಭವ ಸಿಗಲಿದೆ ಎಂದು ಚಿತ್ರತಂಡ ಹೇಳಿದೆ. ಇದೇ ವರ್ಷ ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ಹಾಕಿಕೊಳ್ಳಲಾಗಿದೆ. ತೆಲುಗಿನಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆ.
ಕೊಲ್ಕತ್ತಾ, ಮಾರ್ಚ್ 11: ಪಶ್ಚಿಮ ಬಂಗಾಳದ ಪೂರ್ವ ಬರ್ದ್ವಾನ್‌ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್‌ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ (Kolkata) ಹೋಗುವ ಲೇನ್ ಅನ್ನು ಮುಚ್ಚಲಾಯಿತು. ಈ ಜನನಿಬಿಡ ಎಕ್ಸ್‌ಪ್ರೆಸ್‌ವೇಯಲ್ಲಿ ಹಠಾತ್ ಕುಸಿತವು ಪಾದಚಾರಿಗಳನ್ನು ಭಯಭೀತಗೊಳಿಸಿತು. ಸುದ್ದಿ ತಿಳಿದ ನಂತರ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಚಾಮರಾಜನಗರ, ಮಾರ್ಚ್ 11: ಮಧ್ಯಪ್ರಾಚ್ಯದ ಕದನ (Middle East conflict) ಇಡೀ ವಿಶ್ವಕ್ಕೆ ತಲೆನೋವು ತಂದೊಡ್ಡಿದೆ. ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದೆ. ಇತ್ತ ಮಾದಪ್ಪನಿಗೂ (Male Mahadeshwara Hills) ಯುದ್ಧದ ಕಾರ್ಮೋಡ ಕವಿದಿದ್ದು, ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ.
ದಾಸೋಹ, ಲಾಡು ತಯಾರಿಕೆ ಸ್ಥಗಿತ ಸಾಧ್ಯತೆ
ಏಳು ಮಲೆ ಎಪ್ಪತ್ತೇಳು ಮಲೆ ಒಡೆಯ. ಕಲಿಯುಗದ ಕಲ್ಪತರು ಬೇಡಿದನ್ನ ಕರುಣಿಸುವ ಮಾಯ್ಕಾರ ಈ ಮಾದಪ್ಪ. ಈ ಮಾದಪ್ಪನಿಗೆ ಇದೀಗ ಇರಾನ್-ಇಸ್ರೇಲ್ ಯುದ್ದದ ಬಿಸಿ ತಟ್ಟಿದೆ. ದಿನನಿತ್ಯ ಸಾವಿರಾರು ಭಕ್ತರು ಅನ್ನದಾಸೋಹದ ಮೂಲಕ ಪ್ರಸಾದವನ್ನ ಸ್ವಿಕರಿಸುತ್ತಾರೆ. ಅದೇ ರೀತಿ ಲಾಡು ಪ್ರಸಾದ ತಯಾರಿಕೆಗೆ ಒಂದು ದಿನಕ್ಕೆ ಬರೋಬ್ಬರಿ 12ಕ್ಕೂ ಹೆಚ್ಚು ಸಿಲಿಂಡರ್ಗಳನ್ನು ಬಳಸಲಾಗುತ್ತಿದೆ. ಒಂದು ವಾರದವರೆಗೆ ದಾಸೋಹಕ್ಕೆ ಯಾವುದೇ ಸಮಸ್ಯೆಯಿಲ್ಲ. ಆದರೆ ಇದು ಹೀಗೆ ಮುಂದುವರೆದರೆ ಮಾದಪ್ಪನ ಬೆಟ್ಟದಲ್ಲಿ ಅನ್ನದಾಸೋಹಕ್ಕೆ ಹಾಗೂ ಲಾಡು ಪ್ರಸಾದಕ್ಕೆ ಬ್ರೇಕ್ ಬೀಳಲಿದೆ.
ಪ್ರತಿ ವರ್ಷ 3 ಬಾರಿ ಮಾದಪ್ಪನ ಬೆಟ್ಟದಲ್ಲಿ ಬೃಹತ್ ಜಾತ್ರಾಮಹೋತ್ಸವ ನಡೆಯುತ್ತದೆ. ಈ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರ್ತಾರೆ. ಲಕ್ಷಾಂತರ ಲಾಡು ಪ್ರಸಾದ ಮಾರಾಟವಾದರೆ, ಅನ್ನದಾಸೋಹಕ್ಕೆ ಆಗಮಿಸಿ ಪ್ರಸಾದ ಸೇವಿಸುತ್ತಾರೆ. ಜಾತ್ರೆಯ ವೇಳೆ ಕೇವಲ ದಾಸೋಹಕ್ಕೆ ಒಂದು ದಿನಕ್ಕೆ 12 ರಿಂದ 15 ಸಿಲಿಂಡರ್ ಬೇಕಾಗುತ್ತೆ. 2.50 ಲಕ್ಷ ಲಾಡು ತಯಾರಿ ಮಾಡಲು 20 ಕ್ಕೂ ಹೆಚ್ಚು ಸಿಲಿಂಡರ್ ಒಂದು ದಿನಕ್ಕೆ ಬಳಕ್ಕೆ ಮಾಡಲಾಗುತ್ತೆ. ಗ್ಯಾಸ್ ಸಿಲಿಂಡರ್ ಅಭಾವ ಹೀಗೆ ಮುಂದುವರೆದರೆ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಲಾಡು ಪ್ರಸಾದ ಹಾಗೂ ಅನ್ನದಾಸೋಹ ಅಲಭ್ಯವಾಗುವ ಸಾಧ್ಯತೆ ಹೆಚ್ಚಾಗಿದ್ದು, ಈಗಾಗಲೇ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ಜಿಲ್ಲಾಡಳಿತಕ್ಕೆ ಮಾಹಿತಿ ರವಾನಿಸಿರುವುದಾಗಿ ಹೇಳಿದ್ದಾರೆ.
ಕುಂಭಮೇಳದಲ್ಲಿ ರುದ್ರಾಕ್ಷ ಮಾಲೆ ಮಾರುತ್ತಿದ್ದ ಯುವತಿ ಮೊನಲಿಸಾ ಭೊಸ್ಲೆಯ (Monalisa) ಒಂದೇ ಒಂದು ಚಿತ್ರ ವೈರಲ್ ಆಗಿ ಆಕೆಯ ಅದೃಷ್ಟವೇ ಬದಲಾಗಿ ಹೋಯ್ತು. ಯಾವ ಮಟ್ಟಿಗೆ ಚಿತ್ರ ವೈರಲ್ ಆಯ್ತೆಂದರೆ ಅದೊಂದು ಚಿತ್ರದಿಂದಾಗಿ ಮೊನಲಿಸಾ ಭೋಸ್ಲೆಗೆ ಮಾಡೆಲಿಂಗ್ ಮಾತ್ರವಲ್ಲದೆ ಸಿನಿಮಾ ಅವಕಾಶಗಳು ಸಹ ಅರಸಿ ಬಂದಿದ್ದು, ಇದೀಗ ಮೊನಲಿಸಾ ಬೋಸ್ಲೆ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ಮೊನಲಿಸಾ ಭೋಸ್ಲೆ, ಕೇರಳದಲ್ಲಿ ತಮ್ಮ ಬಾಯ್ಫ್ರೆಂಡ್ ಜೊತೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮೊನಿಸಲಾ ಭೋಸ್ಲೆ ಪ್ರಸ್ತುತ ಸಿನಿಮಾ ಒಂದರ ಚಿತ್ರೀಕರಣಕ್ಕಾಗಿ ಕೇರಳಕ್ಕೆ ಬಂದಿದ್ದರು. ಆದರೆ ಇದೀಗ ಅವರು ತಿರುವನಂತಪುರದ ಥಂಪನೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ತಮ್ಮ ಪೋಷಕರ ವಿರುದ್ಧವೇ ದೂರು ನೀಡಿದ್ದಾರೆ. ತಮ್ಮ ಪೋಷಕರು ತಮಗೆ ಬಲವಂತದ ಮದುವೆ ಮಾಡಲು ಯತ್ನಿಸುತ್ತಿದ್ದು, ಈ ಬಲವಂತದ ಮದುವೆಯಿಂದ ತಮಗೆ ರಕ್ಷಣೆ ಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಮೂಲತಃ ಮಧ್ಯಪ್ರದೇಶದ ಇಂದೋರ್‌ನವರಾದ ಮೊನಾಲಿಸಾ ಭೋಂಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಪ್ರೀತಿಸಿದ್ದು, ಅವರೊಟ್ಟಿಗೆ ಮದುವೆ ಆಗುವುದಾಗಿ ಹೇಳಿದ್ದಾರೆ. ಆದರೆ ಅವರ ಪೋಷಕರು ಮೋನಸಿಲಾಗೆ ಬೇರೆ ಮದುವೆ ಮಾಡಲು ನಿರ್ಧರಿಸಿದ್ದು, ತಾವು ನೋಡಿದ ವರನೊಡನೆ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾರಂತೆ. ಇದೇ ಕಾರಣಕ್ಕೆ ಅವರು ತಮ್ಮ ಬಾಯ್ಫ್ರೆಂಡ್ ಜೊತೆಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಮೊನಾಲಿಸಾ ಮತ್ತು ಮಹಾರಾಷ್ಟ್ರ ಮೂಲದ ಫರ್ಮಾನ್ ಖಾನ್ ಕಳೆದ ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದಾರೆ. ಇವರ ಅಂತರ್ಧರ್ಮೀಯ ವಿವಾಹಕ್ಕೆ ಮೊನಾಲಿಸಾ ಅವರ ತಂದೆ ವಿಜಯ್ ಸಿಂಗ್ ಭೋಂಸ್ಲೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ . ಪೊಲೀಸರ ಮುಂದೆ ದೂರು ನೀಡಿರುವ ಮೊನಲಿಸಾ, ತಮಗೆ ಯಾವುದೇ ದೈಹಿಕ ಹಿಂಸೆ ನಡೆದಿಲ್ಲವಾದರೂ, ಮಾನಸಿಕವಾಗಿ ಒತ್ತಡ ಹೇರುತ್ತಿರುವುದರಿಂದ ತಮಗೆ ರಕ್ಷಣೆ ಬೇಕೆಂದು ಅವರು ಕೇಳಿಕೊಂಡಿದ್ದಾರೆ.
ಮೊನಾಲಿಸಾ ಅವರ ದೂರನ್ನು ಸ್ವೀಕರಿಸಿರುವ ಪೊಲೀಸರು, ಆಕೆ ವಯಸ್ಕಳಾಗಿರುವುದರಿಂದ ತನ್ನ ಜೀವನದ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಅವಳಿಗೆ ಇದೆ ಎಂದು ತಿಳಿಸಿದ್ದಾರೆ. ಪೊಲೀಸರು ಆಕೆಯ ತಂದೆಯನ್ನು ಕರೆಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಪ್ರೇಮಿಗಳಿಗೆ ಕೇರಳದ ಸ್ಥಳೀಯ ರಾಜಕೀಯ ನಾಯಕರು ಬೆಂಬಲ ನೀಡಿದ್ದಾರೆ. ಇಂದು ಸಂಜೆ ಕೇರಳದ ವಿಝಿಂಜಂನಲ್ಲಿರುವ ಒಂದು ದೇವಸ್ಥಾನದಲ್ಲಿ ಇವರು ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಮಾರಂಭದಲ್ಲಿ ಕೆಲವು ಪ್ರಮುಖ ರಾಜಕಾರಣಿಗಳು ಕೂಡ ಭಾಗವಹಿಸುವ ಸಾಧ್ಯತೆ ಇದೆ.
ಕುಂಭಮೇಳದಲ್ಲಿ ವೈರಲ್ ಆದ ನಂತರ ಮೊನಾಲಿಸಾಗೆ ಹಲವು ಸಿನಿಮಾಗಳ ಅವಕಾಶ ಬಂದಿತ್ತು. ಸದ್ಯ ಅವರು ‘ನಾಗಮ್ಮ’ ಎಂಬ ಮಲಯಾಳಂ ಸಿನಿಮಾ ಹಾಗೂ ‘ಲೈಫ್’ ಎಂಬ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರು, ಮಾರ್ಚ್ 11: ರಾಜ್ಯದ ಪೊಲೀಸ್ ಸಿಬ್ಬಂದಿಗೆ ಕಳೆದ ತಿಂಗಳಿನ ಸಂಬಳ ಇನ್ನೂ ಆಗಿಲ್ಲ ಎಂಬ ವಿಚಾರವಾಗಿ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿರುವ ನಡುವೆ ಮತ್ತೊಂದು ಆಘಾತಕಾರಿ ಸುದ್ದಿ ವರದಿಯಾಗಿದೆ. ಈಗಾಗಲೇ ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಕರ್ನಾಟಕದ ಸರ್ಕಾರಿ ಶಾಲೆಗಳ ಸುಮಾರು 51,000 ಅತಿಥಿ ಶಿಕ್ಷಕರಿಗೆ (Guest Teachers) 2025ರ ನವೆಂಬರ್‌ನಿಂದ ಇಂದಿನವರೆಗೆ ವೇತನ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಾತನಾಡಿರುವ ಬೆಂಗಳೂರು ಲಿಂಕ್ ರೋಡ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿ ಸುರೇಖಾ, ನಮ್ಮ ಬೋಧನಾ ಅನುಭವದ ಆಧಾರದ ಮೇಲೆ ನಮಗೆ ತಿಂಗಳಿಗೆ 10,000ರಿಂದ 12,000 ವರೆಗೆ ವೇತನ ನೀಡಲಾಗುತ್ತದೆ. ಆದರೆ ನವೆಂಬರ್‌ನಿಂದ ಇಂದಿನವರೆಗೆ ನಮಗೆ ವೇತನ ಸಿಕ್ಕಿಲ್ಲ. ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘವು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.
ಯಲಹಂಕದ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಬ್ಬ ಶಿಕ್ಷಕರು ಮಾತನಾಡಿ, ನಾವು 12 ತಿಂಗಳು ಕೆಲಸ ಮಾಡಿದರೂ ನಮಗೆ 10 ತಿಂಗಳಷ್ಟೇ ವೇತನ ನೀಡಲಾಗುತ್ತದೆ. ಮಾರ್ಚ್ 31ರಂದು ನಮ್ಮ ಒಪ್ಪಂದ ಅವಧಿ ಮುಗಿಯುತ್ತದೆ. ನಂತರ ಶಾಲೆ ಹಾಗೂ ಇಲಾಖೆಯ ನಿರ್ಧಾರಕ್ಕೆ ಅನುಗುಣವಾಗಿ ನಮ್ಮ ಒಪ್ಪಂದವನ್ನು ನವೀಕರಿಸುವುದೋ ಅಥವಾ ಇಲ್ಲವೋ ಎಂಬುದು ತೀರ್ಮಾನವಾಗುತ್ತದೆ. ಸರ್ಕಾರ ಕನಿಷ್ಠ ನಮ್ಮ ಕಡಿಮೆ ವೇತನವನ್ನಾದರೂ ಸಮಯಕ್ಕೆ ಸರಿಯಾಗಿ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ನಡುವೆ ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯ ವಿ.ಪಿ. ಅವರು ಅತಿಥಿ ಶಿಕ್ಷಕರ ವೇತನ ಪಾವತಿಗಾಗಿ ತಕ್ಷಣವೇ ನಿಧಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣದಲ್ಲಿ ಅತಿಥಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಮೂರು ತಿಂಗಳಿಗೂ ಹೆಚ್ಚು ಕಾಲ ವೇತನ ಸಿಗದಿದ್ದರೆ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಇದರಿಂದ ಬೋಧನೆಯ ಗುಣಮಟ್ಟಕ್ಕೂ ಪರಿಣಾಮ ಬೀಳಬಹುದು ಮತ್ತು ಮಕ್ಕಳ ಕಲಿಕೆಯ ಮಟ್ಟವೂ ಕುಸಿಯಬಹುದು ಎಂದು ಅವರು ಎಚ್ಚರಿಸಿರೋದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾಕ್ಕೆ ಸಖತ್ ಹೈಪ್ ದೊರೆತಿದೆ. ಮಾರ್ಚ್ 18ರಂದು ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳನ್ನು ದೇಶದ ಹಲವು ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದ್ದು, ಪ್ರೀಮಿಯರ್ ಶೋ ಟಿಕೆಟ್ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸಹ ಅಡ್ವಾನ್ಸ್ ಬುಕಿಂಗ್ ಜೋರಾಗಿ ಆಗುತ್ತಿದ್ದು, ಈ ವರೆಗೆ ಸುಮಾರು 3.50 ಲಕ್ಷ ಟಿಕೆಟ್ಗಳು ಮಾರಾಟವಾಗಿವೆ.
‘ಧುರಂಧರ್ 2’ ಸಿನಿಮಾದ ಪೇಯ್ಡ್ ಪ್ರೀಮಿಯರ್ಗೆ 3.50 ಲಕ್ಷಕ್ಕೂ ಹೆಚ್ಚು ಟಿಕೆಟ್ಗಳು ಮಾರ್ಚ್ 10ರ ವೇಳೆಗೆ ಮಾರಾಟವಾಗಿದ್ದು, ಇದರ ಒಟ್ಟು ಮೌಲ್ಯ ಸುಮಾರು 20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ರಣವೀರ್ ಸಿಂಗ್ ಅವರ ವೃತ್ತಿಜೀವನದಲ್ಲೇ ಇದು ಅತ್ಯಂತ ವೇಗವಾಗಿ ಟಿಕೆಟ್ ಮಾರಾಟವಾಗುತ್ತಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಪ್ರೀಮಿಯರ್ ಶೋಗೆ ಇನ್ನೂ ಒಂದು ವಾರ ಬಾಕಿ ಇದ್ದು, ಈ ಸಂಖ್ಯೆ ದುಪ್ಪಟ್ಟಾಗುವ ದಟ್ಟ ಸಾಧ್ಯತೆ ಇದೆ. ಕೇವಲ ಪೇಯ್ಡ್ ಪ್ರೀಮಿಯರ್ನಿಂದಲೇ ‘ಧುರಂಧರ್ 2’ ಸಿನಿಮಾಕ್ಕೆ 40 ರಿಂದ 50 ಕೋಟಿ ಕಲೆಕ್ಷನ್ ಆಗುವ ಸಾಧ್ಯತೆ ಇದೆ.
ಮುಂಬೈ, ದೆಹಲಿ ಬೆಂಗಳೂರು, ಹೈದರಾಬಾದ್ ಅಂಥಹ ಪ್ರಮುಖ ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ಗಳು ಭರ್ಜರಿಯಾಗಿ ಮಾರಾಟ ಆಗುತ್ತಿವೆ. ಮುಂಬೈ, ಬೆಂಗಳೂರು ಮತ್ತು ದೆಹಲಿಯಲ್ಲಂತೂ ಟಿಕೆಟ್ ಬೆಲೆ ಗಗನಕ್ಕೇರಿವೆ. ಮುಂಬೈನಲ್ಲಿ ಗರಿಷ್ಟ ಟಿಕೆಟ್ ಬೆಲೆ 3100 ರೂಪಾಯಿಗಳಿವೆ. ಬೆಂಗಳೂರಿನಲ್ಲಿ 2200 ರೂಪಾಯಿಗಳಿವೆ. ದೆಹಲಿಯಲ್ಲಿಯೂ ಸಹ ಸರಿ ಸುಮಾರಿ ಇಷ್ಟೇ ಮೊತ್ತಕ್ಕೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕೆ ಭರ್ಜರಿ ಕಲೆಕ್ಷನ್ ಆಗುತ್ತಿದೆ.
ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾದ ಮೊದಲ ಭಾಗದ ಯಶಸ್ಸಿನ ನಂತರ, ಅದರ ಮುಂದುವರಿದ ಭಾಗವಾದ ‘ಧುರಂಧರ್ 2’ ಮೇಲೆ ಅಭಿಮಾನಿಗಳಲ್ಲಿ ಭಾರಿ ಕುತೂಹಲವಿದೆ. ಇದೇ ಕಾರಣಕ್ಕೆ ಸಿನಿಮಾದ ಪೇಯ್ಡ್ ಪ್ರೀಮಿಯರ್ಗಳು ಹೌಸ್ಫುಲ್ ಆಗುತ್ತಿವೆ. ಸಿನಿಮಾದ ರಿಲೀಸ್ ದಿನವೂ ಸಹ ಸಿನಿಮಾಕ್ಕೆ ಭರ್ಜರಿ ಕಲೆಕ್ಷನ್ ಆಗುವ ಸಾಧ್ಯತೆ ದಟ್ಟವಾಗಿದ್ದು, ಮೊದಲ ದಿನವೇ 100 ಕೋಟಿಗೂ ಹೆಚ್ಚಿನ ಗಳಿಕೆ ಆಗುವ ನಿರೀಕ್ಷೆ ಇದೆ.
ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾನಲ್ಲಿ ಅಕ್ಷಯ್ ಖನ್ನ, ಸಂಜಯ್ ದತ್, ಮಾಧವನ್, ಅರ್ಜುನ್ ರಾಮ್ಪಾಲ್ ಸೇರಿದಂತೆ ಹಲವು ಪ್ರಮುಖ ನಟರುಗಳು ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧರ್.
ನವದೆಹಲಿ, ಮಾರ್ಚ್ 11: ದೇಶೀಯ LPG ಸಿಲಿಂಡರ್ (LPG cylinder) ರೀಫಿಲ್ಲಿಂಗ್ ಕಾಯ್ದಿರಿಸಲು ಕನಿಷ್ಠ ಕಾಯುವ ಅವಧಿಯನ್ನು ಸರ್ಕಾರ 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಿದೆ. ಹೀಗಾಗಿ, ನೀವು ಒಮ್ಮೆ ಸಿಲಿಂಡರ್ ಬುಕ್ ಮಾಡಿದರೆ 25 ದಿನಗಳು ಕಳೆಯುವವರೆಗೆ ಇನ್ನೊಂದು ಸಿಲಿಂಡರ್ ಬುಕ್ ಮಾಡುವಂತಿಲ್ಲ. ಅಡುಗೆ ಅನಿಲ ಕೊರತೆಯ ಬಗ್ಗೆ ದೇಶಾದ್ಯಂತ ಭಯ ಆವರಿಸಿದೆ. ಆತಂಕಗೊಂಡ ಗ್ರಾಹಕರಿಂದ ಗ್ಯಾಸ್ ಏಜೆನ್ಸಿಗಳಿಗೆ ಕರೆಗಳು ಮತ್ತು ಸಿಲಿಂಡರ್‌ಗಳಿಗಾಗಿ ಬಹು ವಿನಂತಿಗಳು ಬರುತ್ತಿವೆ.
ಜನರು ಮುಗಿಬಿದ್ದು ಗ್ಯಾಸ್ ಬುಕ್ ಮಾಡಲು ಕರೆ ಮಾಡುತ್ತಾ ಇರುವುದರಿಂದ ಸರ್ವರ್ ಬ್ಯುಸಿ ಆಗಿದೆ. ಗ್ರಾಹಕರು ಸಾವಧಾನವಾಗಿ ನಿಮ್ಮ ಸಿಲಿಂಡರ್ ಬುಕ್ ಮಾಡಿಕೊಳ್ಳಿ. ಗೃಹಬಳಕೆ ಸಿಲಿಂಡರ್ ಬಗ್ಗೆ ಸದ್ಯಕ್ಕೆ ಆತಂಕ ಬೇಡ. ಬೇಕಾದಷ್ಟು ಸ್ಟಾಕ್ ಬರುತ್ತಿದೆ. ಆದರೆ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ದೇಶೀಯ ಎಲ್‌ಪಿಜಿ ಸಿಲಿಂಡರ್ ಬುಕಿಂಗ್‌ಗಳ ನಡುವೆ ಕನಿಷ್ಠ 25 ದಿನಗಳ ಅಂತರವನ್ನು ಕಡ್ಡಾಯಗೊಳಿಸಿದೆ ಎಂದು ದೃಢಪಡಿಸಿದೆ. ಇರಾನ್‌ನಲ್ಲಿನ ಯುದ್ಧದಿಂದಾಗಿ ಇಂಧನ ಬಿಕ್ಕಟ್ಟಿನ ಸಾಧ್ಯತೆ ಇರುವುದರಿಂದ ದೇಶೀಯ ಬಳಕೆಗಾಗಿ ಎಲ್‌ಪಿಜಿ ರೀಫಿಲ್ಲಿಂಗ್ ಪಡೆಯಲು ಕಾಯುವ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇರಾನ್ ಹರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ತೈಲ ಬೆಲೆಗಳಲ್ಲಿ ಏರಿಕೆಯಾಗುವ ಬಗ್ಗೆ ಕಳವಳ ಹೆಚ್ಚಾಗಿದೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ಗಳು ಯುಎಸ್, ಇಸ್ರೇಲ್, ಯುರೋಪ್ ಮತ್ತು ಅವರ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳ ಹಡಗುಗಳಿಗೆ ಮಾತ್ರ ಜಲಸಂಧಿಯನ್ನು ಮುಚ್ಚಲಾಗುತ್ತದೆ ಎಂದು ಹೇಳಿದ್ದರೂ ಸಹ ಆತಂಕವಿನ್ನೂ ಕಡಿಮೆಯಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ