ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ !

ಮೈಸೂರು, ಮೇ 11: ಮೈಸೂರು ಆರ್​ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು.

ಒಂದನೇ ವಾಹನದ ಮುಂಭಾಗದ ಗಾಜು ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ತುರ್ತು ನಿರ್ಗಮನ ದ್ವಾರದ ಗಾಜು ಹ್ಯಾಮರ್‌ನಿಂದ ಹೊಡೆದರೂ ಒಡೆಯಲಿಲ್ಲ, ಇದರಿಂದಾಗಿ ಅಪಾಯದ ಸಂದರ್ಭದಲ್ಲಿ ಮಕ್ಕಳನ್ನು ಹೊರಗೆ ತರಲು ಸಾಧ್ಯವಿಲ್ಲ. ಅಲ್ಲದೆ, ವಾಹನಕ್ಕೆ ಎಂಟು ತಿಂಗಳ ಹಿಂದೆಯೇ ಎಫ್‌ಸಿ ಅವಧಿ ಮುಗಿದಿದ್ದು, ವಿಮೆ ಮತ್ತು ತೆರಿಗೆ ಪಾವತಿಯಾಗಿರಲಿಲ್ಲ. ಎರಡನೇ ವಾಹನದಲ್ಲಿ ಯಾವುದೇ ಶಾಲೆಯ ವಿವರಗಳು ಇರಲಿಲ್ಲ. ಮಕ್ಕಳ ಭದ್ರತೆ ದೃಷ್ಟಿಯಿಂದ ಇಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಎಆರ್​ಟಿಓ ರಾಜ್‌ಕುಮಾರ್ ತಿಳಿಸಿದ್ದಾರೆ. ಈಗಾಗಲೇ 138 ವಾಹನಗಳಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೃನಾಲ್ ಪಾಂಡ್ಯ ಅಲ್ಲೇ ಸಾಯಬೇಕಿತ್ತು… ಇದೆಂತಹ ನೀಚತನ..! – Kannada News | IPL 2026: S. Badrinath Under Fire for Toxic Comment on Krunal Pandya’s Injury

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಕಾಮೆಂಟರಿ ಬಾಕ್ಸ್‌ನಿಂದ ಬಂದ ಒಂದು ವಿವಾದಾತ್ಮಕ ಹೇಳಿಕೆಯಿಂದಾಗಿ ಸುದ್ದಿಯಲ್ಲಿದೆ. ಆರ್​ಸಿಬಿ ಆಟಗಾರ ಕೃನಾಲ್ ಪಾಂಡ್ಯ ಅವರ ಗಾಯದ ಬಗ್ಗೆ ತಮಾಷೆ ಮಾಡಿದ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದರಿನಾಥ್ ಅವರು ಈಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಘಟನೆಯ ವಿವರ:

ಮೇ 10 ರಂದು ನಡೆದ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಪರ ಬ್ಯಾಟಿಂಗ್ ಮಾಡುತ್ತಿದ್ದ ಕೃನಾಲ್ ಪಾಂಡ್ಯ ತೀವ್ರ ಕಾಲು ಸೆಳೆತದಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಎದುರಾಳಿ ತಂಡದ ವಿಕೆಟ್ ಕೀಪರ್ ರಯಾನ್ ರಿಕೆಲ್ಟನ್ ಅವರು ಕೃನಾಲ್ ಸಹಾಯಕ್ಕೆ ಧಾವಿಸಿ ಕ್ರೀಡಾ ಮನೋಭಾವ ಮೆರೆದಿದ್ದರು.

ಈ ದೃಶ್ಯಕ್ಕೆ ಕಾಮೆಂಟೇಟರ್ ಬದರಿನಾಥ್, ಸೆಳೆತ ಅಲ್ಲ, ಮುಂಬೈ ಇಂಡಿಯನ್ಸ್ ತಂಡವರು ನೀ ಅಲ್ಲೇ ಸಾಯಿ ಎಂದರೂ ಪರವಾಗಿಲ್ಲ ಎಂಬಾರ್ಥದಲ್ಲಿ ಕಾಮೆಂಟ್ರಿ ಮಾಡಿದ್ದಾರೆ. ಈ ಆಕ್ಷೇಪಾರ್ಹ ಕಾಮೆಂಟ್ರಿ ಇದೀಗ ವಿವಾದಕ್ಕೆ ಕಾರಣವಾಗಿದೆ.

ಅಭಿಮಾನಿಗಳ ಆಕ್ರೋಶ:

ಈ ಕಾಮೆಂಟ್ರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬದರಿನಾಥ್ ವಿರುದ್ಧ ಟೀಕೆಗಳ ಸುರಿಮಳೆಯೇ ಹರಿದುಬಂದಿದೆ. “ಒಬ್ಬ ಕ್ರೀಡಾಪಟುವಾಗಿ ಮತ್ತೊಬ್ಬ ಆಟಗಾರನ ನೋವಿನ ಬಗ್ಗೆ ಇಷ್ಟು ಕೀಳಾಗಿ ಮಾತನಾಡುವುದು ಸರಿಯಲ್ಲ” ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ ಒಬ್ಬ ಆಟಗಾರನನ್ನು ಅಲ್ಲೇ ಸಾಯಬೇಕಿತ್ತು ಎಂದೇಳುವ ನೀನೆಷ್ಟು ನೀಚ ಎಂದು ಸಿಎಸ್​ಕೆ ತಂಡದ ಮಾಜಿ ಆಟಗಾರನನ್ನು ಕ್ರಿಕೆಟ್ ಪ್ರೇಮಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದರ ಜೊತೆಗೆ  ಇನ್ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟ್ಟರ್) ನಲ್ಲಿ ಅನೇಕರು ಬಿಸಿಸಿಐ ಮತ್ತು ಸ್ಟಾರ್ ಸ್ಪೋರ್ಟ್ಸ್ ಸಂಸ್ಥೆಗಳನ್ನು ಟ್ಯಾಗ್ ಮಾಡಿ, ಇಂತಹ “ಟಾಕ್ಸಿಕ್” ಕಾಮೆಂಟೇಟರ್‌ಗಳನ್ನು ಪ್ಯಾನಲ್‌ನಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ.

ಅಂದಹಾಗೆ ಕ್ರೀಡೆ ಎಂಬುದು ಕೇವಲ ಗೆಲುವು-ಸೋಲಿನಾಟವಲ್ಲ, ಅದು ಪರಸ್ಪರ ಗೌರವ ಮತ್ತು ಮಾನವೀಯತೆಯ ಪ್ರತೀಕ. ಕಾಮೆಂಟರಿ ಬಾಕ್ಸ್‌ನಲ್ಲಿ ಕುಳಿತು ಪಂದ್ಯವನ್ನು ವಿಶ್ಲೇಷಿಸುವ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಆಟಗಾರನೊಬ್ಬನ ದೈಹಿಕ ನೋವನ್ನು ಕಂಡು ಇಂತಹ ಅಮಾನವೀಯ ಹೇಳಿಕೆ ನೀಡುವುದು ಕ್ರೀಡಾ ಸ್ಫೂರ್ತಿಗೆ ಎಸಗಿದ ದ್ರೋಹ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​​ ವಿರುದ್ಧ ‘ಅಸಭ್ಯ’ವಾಗಿ ಸಂಭ್ರಮಿಸಿದ ಟಿಮ್ ಡೇವಿಡ್

ಎಸ್​. ಬದರಿನಾಥ್ ಅವರ ಈ ಮಾತುಗಳು ಕೇವಲ ಅವರ ವ್ಯಕ್ತಿತ್ವವನ್ನು ಕುಗ್ಗಿಸುವುದಲ್ಲದೆ, ಕ್ರೀಡಾ ಪ್ರಸಾರ ಲೋಕಕ್ಕೇ ಒಂದು ಕಪ್ಪು ಚುಕ್ಕೆಯಾಗಿದೆ. ಇಂತಹ ವಿಷಕಾರಿ ಮಾತುಗಳಿಗೆ ಕಡಿವಾಣ ಬೀಳದಿದ್ದರೆ, ಕಾಮೆಂಟರಿ ಬಾಕ್ಸ್‌ಗಳು ಕ್ರೀಡಾ ವಿಶ್ಲೇಷಣೆಯ ಬದಲಿಗೆ ಕೇವಲ ‘ಅಸಹ್ಯದ ಅಡ್ಡೆ’ಗಳಾಗಿ ಬದಲಾಗುವುದರಲ್ಲಿ ಸಂಶಯವಿಲ್ಲ.”

Source link

2 ಸರಣಿಗೆ ಆಸ್ಟ್ರೇಲಿಯಾದ 3 ತಂಡಗಳು ಪ್ರಕಟ – Kannada News | Australia Squad For Pakistan and Bangladesh Series

ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಐಪಿಎಲ್​ ಅಂತ್ಯದ ವೇಳೆಗೆ ಶುರುವಾಗುವ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್, ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಹೊರಗುಳಿದಿದ್ದಾರೆ. ಅಂದರೆ ಈ ಮೂವರು ಐಪಿಎಲ್​ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇವರಲ್ಲದೆ ಇನ್ನೂ ಕೆಲ ಪ್ರಮುಖ ಆಟಗಾರರು ಐಪಿಎಲ್ ಮುಗಿದ ಬಳಿಕವಷ್ಟೇ ಈ ಸರಣಿಗಾಗಿ ತೆರಳಲಿದ್ದಾರೆ. ಅವರೆಂದರೆ…

  • ಟ್ರಾವಿಸ್ ಹೆಡ್ (SRH): ಐಪಿಎಲ್ ಪ್ಲೇಆಫ್‌ ಹಂತದಲ್ಲಿ ಇರುವುದರಿಂದ, ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಂಡು ನಂತರ ತಂಡವನ್ನು ಸೇರಿಕೊಳ್ಳಲಿದ್ದಾರೆ.
  • ಮಿಚೆಲ್ ಮಾರ್ಷ್ (LSG): ಆಸ್ಟ್ರೇಲಿಯಾ ತಂಡದ ನಾಯಕರಾಗಿ ಆಯ್ಕೆಯಾಗಿರುವ ಮಾರ್ಷ, ಐಪಿಎಲ್​ನ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಪಾಕಿಸ್ತಾನಕ್ಕೆ ತೆರಳಲಿದ್ದಾರೆ.
  • ಕೂಪರ್ ಕೊನೊಲಿ, ಕ್ಸೇವಿಯರ್ ಬಾರ್ಟ್ಲೆಟ್, ಬೆನ್ ಡ್ವಾರ್ಶುಯಿಸ್ (PBKS): ಈ ಆಟಗಾರರು ಐಪಿಎಲ್ ಪ್ಲೇಆಫ್ ಮುಗಿದ ನಂತರವಷ್ಟೇ ತಂಡಕ್ಕೆ ಲಭ್ಯವಾಗಲಿದ್ದಾರೆ.
  • ಮ್ಯಾಥ್ಯೂ ಶಾರ್ಟ್ (CSK): ಆರಂಭಿಕ ಪಂದ್ಯಗಳ ನಂತರವಷ್ಟೇ ಶಾರ್ಟ್​ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಳ್ಳಲಿದ್ದಾರೆ.
  • ಕ್ಯಾಮರೋನ್ ಗ್ರೀನ್ (KKR): ಕೆಕೆಆರ್ ತಂಡದ ಲೀಗ್ ಹಂತದ ಪಂದ್ಯಗಳ ಬಳಿಕ ಕ್ಯಾಮರೋನ್ ಗ್ರೀನ್ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಯುವ ಆಟಗಾರರ ಎಂಟ್ರಿ:

ಎರಡು ಸರಣಿಗಳಿಗಾಗಿ ಆಯ್ಕೆಯಾದ ಆಸ್ಟ್ರೇಲಿಯಾ ತಂಡಕ್ಕೆ ಅಂಡರ್-19 ಟೀಮ್​ ನಾಯಕ ಒಲಿವರ್ ಪೀಕ್, ಆಲ್‌ರೌಂಡರ್ ಲಿಯಾಂ ಸ್ಕಾಟ್ ಮತ್ತು ಜೋಯಲ್ ಡೇವಿಸ್ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಸುಮಾರು ಏಳು ವರ್ಷಗಳ ನಂತರ ವೇಗಿ ಬಿಲ್ಲಿ ಸ್ಟಾನ್ಲೇಕ್ ತಂಡಕ್ಕೆ ಮರಳಿರುವುದು ವಿಶೇಷ.

ಬಾಂಗ್ಲಾದೇಶ್ ಸರಣಿಗೆ ಆಸ್ಟ್ರೇಲಿಯಾ ತಂಡಗಳು:

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಅಲೆಕ್ಸ್ ಕ್ಯಾರಿ, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಬೆನ್  ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುನ್ಹೆಮನ್, ಮಾರ್ನಸ್ ಲ್ಯಾಬುಶೇನ್, ಮ್ಯಾಟ್ ರೆನ್ಶಾ, ತನ್ವೀರ್ ಸಂಘ, ಲಿಯಾಮ್ ಸ್ಕಾಟ್, ಆ್ಯಡಂ ಝಂಪಾ.

ಆಸ್ಟ್ರೇಲಿಯಾದ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಟಿಮ್ ಡೇವಿಡ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಜೋಯಲ್ ಡೇವಿಸ್, ಆರೋನ್ ಹಾರ್ಡಿ, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮ್ಯಾಟ್ ಕುನ್ಹೆಮನ್, ರಿಲೇ ಮೆರೆಡಿತ್, ಜೋಶ್ ಫಿಲಿಪ್, ಮ್ಯಾಟ್ ರೆನ್ಶಾ, ಆ್ಯಡಂ ಝಂಪಾ.

ಇದನ್ನೂ ಓದಿ: IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ!

ಪಾಕಿಸ್ತಾನ್ ಸರಣಿಗೆ ಆಸ್ಟ್ರೇಲಿಯಾದ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಸ್, ಮ್ಯಾಟ್ ಕುನ್ಹೆಮನ್, ಮಾರ್ನಸ್ ಲ್ಯಾಬುಶೇನ್, ರಿಲೆ ಮೆರೆಡಿತ್. ಓಲಿ ಪೀಕ್, ಮ್ಯಾಟ್ ರೆನ್ಶಾ, ತನ್ವೀರ್ ಸಂಘ, ಲಿಯಾಮ್ ಸ್ಕಾಟ್, ಮ್ಯಾಥ್ಯೂ ಶಾರ್ಟ್, ಬಿಲ್ಲಿ ಸ್ಟಾನ್ಲೇಕ್, ಆ್ಯಡಂ ಝಂಪಾ.

Published On – 12:41 pm, Mon, 11 May 26

Source link

2.5 ಕೋಟಿ ರೂ. ಮೌಲ್ಯದ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಅಂಜನಾದ್ರಿ ದೇಣಿಗೆಯಲ್ಲಿ ಮಹಾ ಗೋಲ್‌ಮಾಲ್? – Kannada News | Anjanadri Temple Donation Row: DC Issues Notice to Businessman Over Gold Plated Ornaments

2.50 ಕೋಟಿ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ!

ಕೊಪ್ಪಳ, ಮೇ 11: ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಅದ್ದೂರಿಯಾಗಿ ದೇಣಿಗೆ ನೀಡಿದ್ದ ಹೈದರಾಬಾದ್ ಮೂಲದ ಉದ್ಯಮಿ ಮಹೇಶ ರೆಡ್ಡಿ ಅವರಿಗೆ ಈಗ ಜಿಲ್ಲಾಡಳಿತ ಶಾಕ್ ನೀಡಿದೆ. ಅವರು ನೀಡಿದ್ದ ಆಭರಣಗಳ ಖಚಿತತೆ ಮತ್ತು ಮೌಲ್ಯದ ಬಗ್ಗೆ ಬಿಲ್ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಮುಖ್ಯಾಂಶಗಳು

  • ಅಂಜನಾದ್ರಿ ಹನುಮನಿಗೆ ನೀಡಿದ 2.50 ಕೋಟಿ ಆಭರಣ ಬರೀ ತಾಮ್ರದ ಲೇಪನ.
  • ಕೇವಲ 28 ಗ್ರಾಂ ಬಂಗಾರ ಪತ್ತೆ; ಉದ್ಯಮಿ ಮಹೇಶ ರೆಡ್ಡಿಗೆ ನೋಟಿಸ್.
  • ಅಧಿಕೃತ ಬಿಲ್ ಇಲ್ಲದೆ ಆಭರಣಗಳನ್ನು ಖಜಾನೆಗೆ ಜಮೆ ಮಾಡದ ಜಿಲ್ಲಾಡಳಿತ.

ಏನಾಗಿತ್ತು?

ಕಳೆದ ಮೇ 8ರಂದು ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ಅವರು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ದಂಪತಿಗಳ ಸಮ್ಮುಖದಲ್ಲಿ ದೇವಸ್ಥಾನಕ್ಕೆ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆಯನ್ನು ಅರ್ಪಿಸಿದ್ದರು. ಈ ಆಭರಣಗಳ ಮೌಲ್ಯ ಸುಮಾರು 2.50 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ತಿರುಪತಿ ಮಾದರಿಯಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿಪಡಿಸುವ ಆಶಯದೊಂದಿಗೆ ಈ ಬೃಹತ್ ದೇಣಿಗೆ ನೀಡಲಾಗಿದೆ ಎಂದು ಅಂದು ಸಂಭ್ರಮಿಸಲಾಗಿತ್ತು.

ತಪಾಸಣೆ ವೇಳೆ ಬಯಲಾದ ಸತ್ಯ

ಉದ್ಯಮಿ ಮಹೇಶ ರೆಡ್ಡಿ ಅವರ ಮನವಿಯ ಮೇರೆಗೆ ಎರಡು ದಿನಗಳ ಕಾಲ ಈ ಆಭರಣಗಳನ್ನು ಆಂಜನೇಯನ ಅಲಂಕಾರಕ್ಕೆ ಬಳಸಲಾಗಿತ್ತು. ಆದರೆ, ಇವುಗಳನ್ನು ಅಧಿಕೃತವಾಗಿ ದೇವಸ್ಥಾನದ ಖಜಾನೆಗೆ ಜಮೆ ಮಾಡಿಕೊಳ್ಳುವ ಮೊದಲು ಜಿಲ್ಲಾಡಳಿತವು ಪರಿಶೀಲನೆ ನಡೆಸಿದಾಗ ಅಚ್ಚರಿಯ ವಿಷಯವೊಂದು ಬೆಳಕಿಗೆ ಬಂದಿದೆ.

2.50 ಕೋಟಿ ಮೌಲ್ಯದ ಚಿನ್ನ ಎಂದು ಹೇಳಲಾದ ಆಭರಣಗಳಲ್ಲಿ ಕೇವಲ 28 ಗ್ರಾಂ ಬಂಗಾರ ಮಾತ್ರ ಪತ್ತೆಯಾಗಿದೆ. ಇವು ಸಂಪೂರ್ಣ ಬಂಗಾರದ ಆಭರಣಗಳಲ್ಲ, ಬದಲಿಗೆ ತಾಮ್ರದ ಮೇಲೆ ಬಂಗಾರದ ಲೇಪನ (Gold Plated) ಮಾಡಲಾದ ಆಭರಣಗಳು ಎಂಬುದು ತಪಾಸಣೆಯಲ್ಲಿ ದೃಢಪಟ್ಟಿದೆ.

ಇದನ್ನೂ ಓದಿ ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ದಾಖಲೆ ಸಲ್ಲಿಸಲು ನೋಟಿಸ್

ಅಧಿಕೃತ ಬಿಲ್ ಅಥವಾ ದಾಖಲೆಗಳಿಲ್ಲದೆ ಇವುಗಳನ್ನು ಸರ್ಕಾರಿ ಖಜಾನೆಗೆ ಸೇರಿಸಿಕೊಳ್ಳಲು ಜಿಲ್ಲಾಡಳಿತ ನಿರಾಕರಿಸಿದೆ. ದಾನ ನೀಡಿರುವ ಆಭರಣಗಳ ನಿಖರ ಮೌಲ್ಯ ಮತ್ತು ಚಿನ್ನದ ಪ್ರಮಾಣವನ್ನು ದೃಢೀಕರಿಸುವ ಅಧಿಕೃತ ಬಿಲ್ ನೀಡುವಂತೆ ಮಹೇಶ ರೆಡ್ಡಿ ಅವರಿಗೆ ಸೂಚಿಸಲಾಗಿದೆ. ಇದುವರೆಗೆ ಉದ್ಯಮಿಯಿಂದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲದ ಕಾರಣ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿಂದೆ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೂ ಅಪಾರ ಪ್ರಮಾಣದ ಚಿನ್ನ ದೇಣಿಗೆ ನೀಡಿದ್ದ ಮಹೇಶ ರೆಡ್ಡಿ ಅವರು, ಅಂಜನಾದ್ರಿಯಲ್ಲಿ ಇಂತಹ ವಿವಾದಕ್ಕೆ ಸಿಲುಕಿರುವುದು ಈಗ ಭಕ್ತರಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಶಂಕಿತರ ಪತ್ತೆಗೆ ನೆರವಾದ ‘UPI’ ಪೇಮೆಂಟ್ – Kannada News | Suvendu Adhikari’s PA murder case, UPI payment led police to nab 3 suspects

ಚಂದ್ರನಾಥ್ ರಥ್ ಮತ್ತು ಸುವೇಂದು ಅಧಿಕಾರಿ ಚಿತ್ರImage Credit source: ANI

ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕಳೆದ ಬುಧವಾರ (ಮೇ 6) ರಾತ್ರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ವಿಶಾಲ್ ಶ್ರೀವಾಸ್ತವ, ರಾಜ್ ಸಿಂಗ್ ಮತ್ತು ಮಯಂಕ್ ಮಿಶ್ರಾ ಎನ್ನುವ ಶಂಕಿತರನ್ನು ಬಂಧಿಸಿದ್ದಾರೆ. ಈ ಹೈ ಪ್ರೊಫೈಲ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಆರೋಪಿಗಳು ಬಳಸಿದ ವಾಹನವನ್ನು ಪತ್ತೆಹಚ್ಚಲು ಮುಂದಾದಾಗ ಮಹತ್ವದ ಸುಳಿವು ಲಭ್ಯವಾಗಿದೆ.

ಕೋಲ್ಕತ್ತಾದ ಮಧ್ಯಾಮಗ್ರಾಮ್ ಸಮೀಪದ ಜೆಸೋರ್ ರಸ್ತೆಯಲ್ಲಿ ಚಂದ್ರನಾಥ್ ಅವರು ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿತ್ತು. ಕೊಲೆಗಡುಕರು ಬಳಸಿದ್ದ ಸಿಲ್ವರ್ ಬಣ್ಣದ ನಿಸ್ಸಾನ್ ಮೈಕ್ರಾ (Nissan Micra) ಕಾರು ಕೋಲ್ಕತ್ತಾ ಸಮೀಪದ ಬಾಲಿ ಟೋಲ್ ಪ್ಲಾಜಾವನ್ನು ಹಾದುಹೋಗಿತ್ತು. ಅಲ್ಲಿ ಕಾರಿನಲ್ಲಿದ್ದವರು ಯುಪಿಐ (UPI) ಮೂಲಕ ಟೋಲ್ ಹಣ ಪಾವತಿಸಿದ್ದರು. ಈ ಡಿಜಿಟಲ್ ಹಣ ವರ್ಗಾವಣೆಯ ದಾಖಲೆಗಳನ್ನು ಪರಿಶೀಲಿಸಿದ ಪೊಲೀಸರಿಗೆ, ಆ ಹಣ ಯಾರ ಖಾತೆಯಿಂದ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಯುಪಿಐ ಪಾವತಿಯ ಸಮಯ ಮತ್ತು ಟೋಲ್ ಗೇಟ್‌ನ ಸಿಸಿಟಿವಿ ದೃಶ್ಯಗಳನ್ನು ಹೋಲಿಕೆ ಮಾಡಿದಾಗ ಆರೋಪಿಗಳ ಚಲನವಲನ ಸ್ಪಷ್ಟವಾಗಿದೆ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ಯುಪಿ ಮತ್ತು ಬಿಹಾರ ಕನೆಕ್ಷನ್

ಕಾರಿನ ನಂಬರ್ ಪ್ಲೇಟ್ ಆಧರಿಸಿ ತನಿಖೆ ನಡೆಸಿದಾಗ, ಅದು ಸಿಲಿಗುರಿಯ ವ್ಯಕ್ತಿಯೊಬ್ಬರ ಹೆಸರಿನಲ್ಲಿರುವುದು ತಿಳಿದುಬಂದಿದೆ. ಆ ವ್ಯಕ್ತಿ ಕಾರನ್ನು ಮಾರಾಟಕ್ಕಿಟ್ಟಾಗ ಉತ್ತರ ಪ್ರದೇಶದ (UP) ಕೆಲವು ವ್ಯಕ್ತಿಗಳು ಸಂಪರ್ಕಿಸಿದ್ದರು. ಸದ್ಯ ಪೊಲೀಸರ ತಂಡಗಳು ಯುಪಿ ಮತ್ತು ಬಿಹಾರಕ್ಕೆ ಧಾವಿಸಿದ್ದು, ಈ ಕೊಲೆಯನ್ನು ವೃತ್ತಿಪರ ಶೂಟರ್‌ಗಳ ಮೂಲಕ ಮಾಡಿಸಲಾಗಿದೆ ಎಂದು ಶಂಕಿಸಲಾಗಿದೆ.

ಚಂದ್ರನಾಥ್ ಕೊಲೆ ನಡೆದ ರೀತಿ

ಚಂದ್ರನಾಥ್ ರಥ್ ಅವರು ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಮೈಕ್ರಾ ಕಾರಿನ ಮೂಲಕ ಅವರ ದಾರಿ ತಡೆಯಲಾಗಿತ್ತು. ನಂತರ ನಾಲ್ಕು ಮೋಟಾರ್ ಸೈಕಲ್‌ಗಳಲ್ಲಿ ಬಂದ ಎಂಟು ಮಂದಿ ಸಶಸ್ತ್ರಧಾರಿಗಳು ಅತಿ ಸಮೀಪದಿಂದ ಎಂಟು ಸುತ್ತು ಗುಂಡು ಹಾರಿಸಿದ್ದರು. ಚಂದ್ರನಾಥ್ ಅವರ ಎದೆ ಮತ್ತು ತಲೆಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ

ಈ ಕೊಲೆಯನ್ನು ಬಿಜೆಪಿಯು “ರಾಜಕೀಯ ಪ್ರೇರಿತ ಸಂಚು” ಎಂದು ಕರೆದಿದ್ದು, ತೃಣಮೂಲ ಕಾಂಗ್ರೆಸ್ (TMC) ಮೇಲೆ ಆರೋಪ ಮಾಡಿದೆ. ಆದರೆ ಟಿಎಂಸಿ ಈ ಆರೋಪವನ್ನು ತಳ್ಳಿಹಾಕಿದ್ದು, ನ್ಯಾಯಾಲಯದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಸದ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಪ್ರಮುಖ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ! – Kannada News | Jamkhandi Jail Incident: Inmates Assault Jailer V.D. Kumbar, Causes Fracture

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ

ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ ಗ್ಯಾಂಗ್‌ನ ಸದಸ್ಯರ ನಡುವೆ ಜೈಲಿನಲ್ಲಿ ಗಲಾಟೆ ಆರಂಭವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಜಗಳ ಬಿಡಿಸಲು ಜೈಲರ್ ವಿ.ಡಿ. ಕುಂಬಾರ ಅವರು ಮಧ್ಯಪ್ರವೇಶಿಸಿದ್ದರು. ಈ ವೇಳೆ ಕೆರಳಿದ ಕೈದಿಗಳು ಜೈಲರ್ ಮೇಲೆಯೇ ಎರಗಿ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ!

ಹಲ್ಲೆ ನಡೆಸಿದ ಆರೋಪಿಗಳನ್ನು ಜಾಕೀರ್ ಹುಸೇನ್ ಮಕಾಂದಾರ್‌, ಫಯಾಜ್ ಮಕಾಂದಾರ್, ಅಶೋಕ ನಾಯ್ಕೊಡಿ, ಅರ್ಫಾತ್ ತಾಳಿಕೋಟಿ ಎಂದು ಗುರುತಿಸಲಾಗಿದೆ. ಜೈಲರ್ ಅವರ ಮೇಲೆ ಗುಂಪು ದಾಳಿ ನಡೆಸಿದ ಕೈದಿಗಳು ಅವರನ್ನು ಮನಬಂದಂತೆ ಥಳಿಸಿದ್ದಾರೆ. ಸದ್ಯ ಗಾಯಾಳು ಜೈಲರ್ ಜಮಖಂಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದ ಸುದದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶೇಷ ದಿನದ ಸೀರೆಗೆ ‘ಪ್ರೀತಿ’ಯ ಕ್ಯಾಪ್ಶನ್ ಕೊಟ್ಟ ತ್ರಿಷಾ ಕೃಷ್ಣನ್ – Kannada News | Trisha Post her Saree Photos And Says Love Is Louder

ತಿಳಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದ ತ್ರಿಷಾ, ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು. ಇದೀಗ ಅದೇ ಸುಂದರ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಅವರು, ‘The love is always louder’ (ಪ್ರೀತಿಯ ಧ್ವನಿ ಯಾವಾಗಲೂ ದೊಡ್ಡದಾಗಿರುತ್ತದೆ) ಎಂಬ ಕ್ಯಾಪ್ಶನ್ ನೀಡಿದ್ದಾರೆ.

Source link

Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 11th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,213 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,945 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,410 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,213 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,945 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,945 ರೂ
  • ಚೆನ್ನೈ: 14,100 ರೂ
  • ಮುಂಬೈ: 13,945 ರೂ
  • ದೆಹಲಿ: 13,960 ರೂ
  • ಕೋಲ್ಕತಾ: 13,945 ರೂ
  • ಕೇರಳ: 13,945 ರೂ
  • ಅಹ್ಮದಾಬಾದ್: 13,950 ರೂ
  • ಜೈಪುರ್: 13,960 ರೂ
  • ಲಕ್ನೋ: 13,960 ರೂ
  • ಭುವನೇಶ್ವರ್: 13,945 ರೂ

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 567 ರಿಂಗಿಟ್ (13,735 ರುಪಾಯಿ)
  • ದುಬೈ: 526.25 ಡಿರಾಮ್ (13,637 ರುಪಾಯಿ)
  • ಅಮೆರಿಕ: 147.50 ಡಾಲರ್ (14,038 ರುಪಾಯಿ)
  • ಸಿಂಗಾಪುರ: 185.20 ಸಿಂಗಾಪುರ್ ಡಾಲರ್ (13,883 ರುಪಾಯಿ)
  • ಕತಾರ್: 523 ಕತಾರಿ ರಿಯಾಲ್ (13,654 ರೂ)
  • ಸೌದಿ ಅರೇಬಿಯಾ: 535 ಸೌದಿ ರಿಯಾಲ್ (13,572 ರುಪಾಯಿ)
  • ಓಮನ್: 55.80 ಒಮಾನಿ ರಿಯಾಲ್ (13,793 ರುಪಾಯಿ)
  • ಕುವೇತ್: 43.28 ಕುವೇತಿ ದಿನಾರ್ (13,449 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 285 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 285 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ.

ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಡಾ. ವಾಣಿ ರೆಡ್ಡಿ ಅವರು ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ದೇಹದಲ್ಲಿ ಸೋಂಕು (Infection) ಹರಡಿ ಚಿಕಿತ್ಸೆ ಫಲಿಸದೆ ನರ್ಮದಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!

ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ. ಶಸ್ತ್ರಚಿಕಿತ್ಸೆಯ ವೇಳೆ ಕರಳು ಕತ್ತರಿಸಿರುವುದನ್ನು ಮರೆಮಾಚಲಾಗಿತ್ತು. ಈಗ ನರ್ಮದಾ ಸಾವಿಗೆ ಕಾರಣರಾದ ಡಾ. ವಾಣಿ ರೆಡ್ಡಿ ಮತ್ತು ಡಾ. ನಾರಾಯಣಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಟಿವಿ9 ಗೆ ಪ್ರತಿಕ್ರಿಯಿಸಿರುವ ಡಾ. ವಾಣಿ ರೆಡ್ಡಿ, “ನರ್ಮದಾ ಅವರ ಸಣ್ಣ ಕರಳು ಅಂಟಿಕೊಂಡಿತ್ತು, ಅದನ್ನು ಬಿಡಿಸುವಾಗ ಸ್ವಲ್ಪ ಹಾನಿಯಾಗಿತ್ತು (Damage). ಹಿರಿಯ ವೈದ್ಯ ಡಾ. ನಾರಾಯಣಸ್ವಾಮಿ ಮೂಲಕ ಕೂಡಲೇ ಚಿಕಿತ್ಸೆ ಕೊಡಿಸಲಾಗಿತ್ತು. ಮೂರು ದಿನದ ಹಿಂದೆ ಅವರು ಗುಣಮುಖರಾಗಿ ಮನೆಗೆ ಹೋಗಿದ್ದರು. ಮನೆಯಲ್ಲಿ ಏನಾಯಿತೋ ಗೊತ್ತಿಲ್ಲ, ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ” ಎಂದು ಹೇಳಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಆಗ್ರಹ ಕೇಳಿಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ ಅಂಪೈರ್ ನೀಡಿದ ತೀರ್ಪು.

ಈ ಪಂದ್ಯದ 17ನೇ 2ನೇ ಎಸೆತವನ್ನು ಕೃನಾಲ್ ಪಾಂಡ್ಯ ಸಿಕ್ಸರ್​ನತ್ತ ಬಾರಿಸಿದ್ದರು. ಆದರೆ ಚೆಂಡು ಬೌಂಡರಿ ಲೈನ್ ದಾಟುವ ಮುನ್ನ ನಮನ್ ಧೀರ್ ಹಿಡಿದಿದ್ದರು. ಅಲ್ಲದೆ ಅದನ್ನು ರಿಲೇ ಕ್ಯಾಚ್​ಗಾಗಿ ತಿಲಕ್ ವರ್ಮಾರತ್ತ ಎಸೆದಿದ್ದರು. ಆದರೆ ಈ ಕ್ಯಾಚ್ ಅನ್ನು ತಿಲಕ್ ವರ್ಮಾ ಹಿಡಿದಿರಲಿಲ್ಲ.

ಅಷ್ಟೇ ಅಲ್ಲದೆ ಕಾಲು ಬೌಂಡರಿ ಲೈನ್​ಗೆ ತಾಗಿದೆ ಎಂದು ನಮನ್ ಧೀರ್ ಜೊತೆ ಹೇಳುತ್ತಿರುವುದನ್ನು ಗಮನಿಸಿದ ಕೃನಾಲ್ ಪಾಂಡ್ಯ ಸಿಕ್ಸ್ ಆಗಿದೆ ಎಂದು ರನ್ ಓಡಿರಲಿಲ್ಲ. ಆದರೆ ಮೂರನೇ ಅಂಪೈರ್ ಪರಿಶೀಲನೆ ವೇಳೆ ನಮನ್ ಧೀರ್ ಕಾಲು ಬೌಂಡರಿ ಗೆರೆಗೆ ತಾಗಿರಲಿಲ್ಲ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು ‘ಎಡವಟ್ಟು’

ಹೀಗಾಗಿ ಮೂರನೇ ಅಂಪೈರ್ ಸಿಕ್ಸ್ ನೀಡಿರಲಿಲ್ಲ. ಇತ್ತ ರನ್ ಓಡದ ಕಾರಣ ಡಾಟ್ ಬಾಲ್ ಆಯಿತು. ಆದರೆ ಅಂಪೈರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಡಗೌಟ್ ಬಳಿ ನಾಲ್ಕನೇ ಅಂಪೈರ್ ಜೊತೆ ತೀವ್ರ ವಾಗ್ವಾದಕ್ಕಿಳಿದರು.

ಶಿಕ್ಷೆಗೆ ಕಾರಣವೇನು?

ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸುವಾಗ ಆ್ಯಂಡಿ ಫ್ಲವರ್  ಅವರು ಬಳಸಿದ ಕೆಲವು ‘ಅಸಭ್ಯ ಪದಗಳು’ ಮೈದಾನದ ಮೈಕ್ರೋಫೋನ್‌ನಲ್ಲಿ ಸೆರೆಯಾಗಿದ್ದವು. ಇದು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ರ (ಪಂದ್ಯದ ಅವಧಿಯಲ್ಲಿ ಅಸಭ್ಯ ಭಾಷೆಯ ಬಳಕೆ) ಅಡಿಯಲ್ಲಿ ‘ಲೆವೆಲ್ 1’ ಅಪರಾಧವೆಂದು ಪರಿಗಣಿಸಲಾಗಿದೆ.

ಅದರಂತೆ  ಮ್ಯಾಚ್ ರೆಫರಿ ಅಮಿತ್ ಶರ್ಮಾ ಅವರು ವಿಧಿಸಿದ ಈ ದಂಡವನ್ನು ಫ್ಲವರ್ ಒಪ್ಪಿಕೊಂಡಿದ್ದಾರೆ. ಅದರಂತೆ ಇದೀಗ ಆ್ಯಂಡಿ ಫ್ಲವರ್​ಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.

Source link

Exit mobile version