ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ, ಮನೆಯಿಂದಲ್ಲೇ ಕೆಲಸ ಮಾಡಿ: ಪ್ರಧಾನಿ ಮೋದಿ ನೀಡಿದ ‘ಆರ್ಥಿಕ ಶಿಸ್ತಿನ’ ಕರೆ! – Kannada News | Foreign Exchange Conservation: PM Modi Urges Citizens to Halt Gold Purchase and Save Fuel

ಹೈದರಾಬಾದ್‌, ಮೇ.11: ಜಿಲ್ಲೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಅವರು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ವಿದೇಶಿ ಪ್ರಯಾಣವನ್ನು ತಪ್ಪಿಸಿ, ಸಾಧ್ಯವಾದಷ್ಟು ಮೆಟ್ರೋ ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಿದ್ದಾರೆ. ವಿದ್ಯುತ್ ವಾಹನಗಳ ಬಳಕೆಗೆ ಉತ್ತೇಜನ ನೀಡಿದ್ದು, ಮನೆಯಿಂದಲೇ ಕೆಲಸ ಮಾಡುವ, ಆನ್‌ಲೈನ್ ಸಭೆಗಳನ್ನು ನಡೆಸುವ ಮೂಲಕ ವೆಚ್ಚಗಳನ್ನು ಕಡಿಮೆಗೊಳಿಸುವಂತೆ ಮಧ್ಯಮ ವರ್ಗದ ಜನರಿಗೆ ಕರೆ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವ ಮೂಲಕ ದೇಶದ ವಿದೇಶಿ ವಿನಿಮಯವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮೋದಿ ಒತ್ತಿ ಹೇಳಿದ್ದಾರೆ. ಅಡುಗೆ ಎಣ್ಣೆ ಬಳಕೆಯ ತಗ್ಗಿಸುವಿಕೆಯು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಸಿದ್ದಾರೆ. ದೇಶದ ಆರ್ಥಿಕ ಸ್ಥಿರತೆಗೆ ಈ ಕ್ರಮಗಳು ಸಹಕಾರಿ ಆಗಲಿವೆ ಎಂದು ಅವರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ಗೆಲುವಿಗೆ ಕಾರಣವಾದ 4 ಎಸೆತಗಳು..!

ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಮ್ಯಾಚ್​ನಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಆರ್​ಸಿಬಿ ತಂಡದ ಈ ಗೆಲುವಿಗೆ ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಎಷ್ಟು ಕಾರಣರೋ,  ಮುಂಬೈ ಇಂಡಿಯನ್ಸ್ ತಂಡದ ಸೋಲಿಗೆ​ ರಾಜ್​ ಬಾವ ಕೂಡ ಅಷ್ಟೇ ಕಾರಣರು.

ಏಕೆಂದರೆ ಈ ಮ್ಯಾಚ್​ನ ಅಂತಿಮ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ 15 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ರಾಜ್​ ಬಾವ ಬರೋಬ್ಬರಿ 10 ಎಸೆತಗಳನ್ನು ಎಸೆದಿದ್ದರು. ಅಂದರೆ ಹೆಚ್ಚುವರಿ ಮೂರು ಎಸೆತಗಳೇ ಮುಂಬೈ ಇಂಡಿಯನ್ಸ್ ಪಾಲಿಗೆ ಮುಳುವಾಯಿತು.

ರಾಜ್​ ಬಾವ ಕೊನೆಯ ಓವರ್​:

ಮೊದಲ ಎಸೆತವನ್ನು ವೈಡ್ ಎಸೆದಿದ್ದ ರಾಜ್ ಬಾವ, ಮರು ಎಸೆತದಲ್ಲಿ ನೋ ಬಾಲ್ ಮಾಡಿದರು. ಪರಿಣಾಮ ಆರ್​ಸಿಬಿ ತಂಡಕ್ಕೆ 2 ರನ್​ಗಳು ಸಿಕ್ಕವು. ಇನ್ನು ಫ್ರಿಹಿಟ್ ಎಸೆತದಲ್ಲಿ ಒಂದು ರನ್ ನೀಡಿದರು.

ಇದಾದ ಬಳಿಕ ಮತ್ತೊಂದು ವೈಡ್ ಎಸೆದರು. ಇದರಿಂದ ಎಕ್ಸ್​ಟ್ರಾ ಇನ್ನೊಂದು ರನ್ ಸಿಕ್ಕಿತು. ಆ ಬಳಿಕ ರೊಮಾರಿಯೊ ಶೆಫರ್ಡ್ ವಿಕೆಟ್ ಪಡೆದರು. ಆದರೆ ಆ ಬಳಿಕ ಭುವನೇಶ್ವರ್ ಕುಮಾರ್​​ಗೆ ಬಾನ್ಸರ್ ಎಸೆಯಲು ಹೋಗಿ ಮತ್ತೊಂದು ವೈಡ್ ನೀಡಿದರು. ಮರು ಎಸೆತದಲ್ಲಿ ಭುವಿ ಸಿಕ್ಸ್ ಸಿಡಿಸಿದರು. ಇನ್ನು 5ನೇ ಎಸೆತದಲ್ಲಿ ಒಂದು ರನ್ ಕಲೆಹಾಕುವ ಮೂಲಕ ರಾಸಿಖ್ ದಾರ್​ಗೆ ಸ್ಟ್ರೈಕ್ ನೀಡಿದರು.

ಅದರಂತೆ ಅಂತಿಮ ಎಸೆತದಲ್ಲಿ ಆರ್​ಸಿಬಿ ತಂಡಕ್ಕೆ 2 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ರಾಸಿಖ್ ನೀಡಿದ ಕ್ಯಾಚ್ ಕೈಚೆಲ್ಲುವ ಮೂಲಕ ರಾಜ್ ಬಾವ 2 ರನ್​ ಬಿಟ್ಟು ಕೊಟ್ಟರು. ಈ ಮೂಲಕ ಆರ್​ಸಿಬಿ ತಂಡ ಕೊನೆಯ ಓವರ್​ನಲ್ಲಿ ರೋಚಕ ಗೆಲುವು ದಾಖಲಿಸಿತು.

ಅಂದರೆ ಇಲ್ಲಿ ರಾಜ್​ ಬಾವ ಕೊನೆಯ ಓವರ್​ನಲ್ಲಿ ಮೂರು ವೈಡ್ ಹಾಗೂ ಒಂದು ನೋ ಬಾಲ್ ಎಸೆಯುವ ಮೂಲಕ ಒಟ್ಟು 10 ಎಸೆತಗಳನ್ನು ಎಸೆದಿದ್ದರು. ಈ ಹೆಚ್ಚುವರಿ 4 ಎಸೆತಗಳ ಮೂಲಕ ಆರ್​ಸಿಬಿ  5 ರನ್​ಗಳನ್ನು ಕಲೆಹಾಕಿದ್ದರು. ಅಂದರೆ ರಾಜ್​ ಬಾವ ಎಸೆದ ಹೆಚ್ಚುವರಿ ಎಸೆತಗಳೇ ಆರ್​ಸಿಬಿ ಗೆಲುವಿಗೆ ಕಾರಣವಾಯ್ತು ಎಂದರೆ ತಪ್ಪಾಗಲಾರದು.

 

 

Source link

“ನಾವು ಯಾವಾಗ ಇರ್ತೀವೋ ಗೊತ್ತಿಲ್ಲ..”: ಸಾವಿನ ಬಗ್ಗೆ ಸುಳಿವು ನೀಡಿದ್ದ ಸಚಿವ ಸುಧಾಕರ್ – Kannada News | Minister D. Sudhakar’s Last Speech Goes Viral: “Life is Like a Bulb, It May Switch Off Anytime

ಚಿತ್ರದುರ್ಗ ಮೇ.11: ಕರ್ನಾಟಕ ಸರ್ಕಾರದ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ನಂತರ, ಅವರು ಇತ್ತೀಚೆಗೆ ಶಾರದಾ ಆಶ್ರಮದ ಭೂಮಿಪೂಜೆ ವೇಳೆ ಆಡಿದ್ದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಜೀವನದ ಕ್ಷಣಿಕತೆಯ ಬಗ್ಗೆ ಅವರು ಆಡಿದ್ದ ಈ ಮಾತುಗಳು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿವೆ. “ನಾವು ಇವತ್ತು ಇರ್ತೀವೋ ಇಲ್ಲವೋ ಗೊತ್ತಿಲ್ಲ. ನಮ್ಮ ಜೀವನ ಒಂದು ರೀತಿ ಬಲ್ಬ್ ಇದ್ದಂತೆ, ಯಾವಾಗ ಸ್ವಿಚ್ ಆಫ್ ಆಗುತ್ತೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಜೀವನದ ಅನಿಶ್ಚಿತತೆಯನ್ನು ವಿವರಿಸಿದ್ದರು. “ಇದ್ದಷ್ಟು ದಿನ ಧಾರ್ಮಿಕವಾಗಿ, ಭಗವಂತನ ಸ್ಮರಣೆಯಲ್ಲಿ ಕಳೆಯಬೇಕು. ಒಬ್ಬೊಬ್ಬರದ್ದು ಒಂದೊಂದು ನಂಬಿಕೆ ಇರುತ್ತದೆ. ಕೆಲವರು ಕಾಯಕವೇ ಕೈಲಾಸ ಎನ್ನುತ್ತಾರೆ, ಮತ್ತೆ ಕೆಲವರು ಪರೋಪಕಾರವೇ ಭಗವಂತನ ಸೇವೆ ಎನ್ನುತ್ತಾರೆ” ಎಂದು ಅವರು ಕಿವಿಮಾತು ಹೇಳಿದ್ದರು. ಇಡೀ ಭಾಷಣದಲ್ಲಿ ಅವರು ಪರೋಪಕಾರ ಮತ್ತು ಸಮಾಜ ಸೇವೆಯ ಮಹತ್ವದ ಬಗ್ಗೆ ಒತ್ತಿ ಹೇಳಿದ್ದರು. ಸಚಿವ ಸುಧಾಕರ್ ಅವರು ಈ ಮಾತುಗಳನ್ನು ಆಡುವಾಗ ತಮಗೆ ಸಾವಿನ ಮುನ್ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಈಗ ಸಾರ್ವಜನಿಕರಲ್ಲಿ ಮೂಡಿದೆ. ಅವರ ಈ ವೈರಲ್ ವಿಡಿಯೋ ಕಂಡು ಚಿತ್ರದುರ್ಗದ ಜನತೆ ಹಾಗೂ ಅವರ ಬೆಂಬಲಿಗರು ಕಂಬನಿ ಮಿಡಿಯುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ! – Kannada News | Security Breach: Explosives Found on PM Modi’s Route Near Art of Living in Bengaluru

ರಾಮನಗರ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು (Explosive) ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9ಗೆ ಲಭ್ಯವಾಗಿದೆ.

ಮುಖ್ಯಾಂಶಗಳು

  • ಮೋದಿ ಬರುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿ ಆತಂಕ.
  •  ಪೊಲೀಸ್ ಪೇದೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ; ಬಾಂಬ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ.
  •  ಪ್ರಕರಣ ಭೇದಿಸಲು ಆರು ವಿಶೇಷ ತಂಡಗಳ ರಚನೆ; ಕ್ವಾರಿಗಳ ಮೇಲೆ ಪೊಲೀಸರ ಕಣ್ಣು.

ಏನಾಗಿತ್ತು?

ನಿನ್ನೆ (ಮೇ 10) ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು. ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಈ ಬಾಕ್ಸ್ ಅನ್ನು ಗಮನಿಸಿದ್ದರು.

ಬಾಕ್ಸ್‌ನಲ್ಲಿ ಏನಿತ್ತು?

ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ (Bomb Squad) ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಮ್ಯಾಚ್ ಬಾಕ್ಸ್ ಹಾಗೂ ಎರಡು ಬ್ಯಾಟರಿಗಳು ಕಂಡುಬಂದಿದ್ದವು. ಆರೋಪಿಯು ಸ್ಫೋಟಕಗಳನ್ನು ಬಾಕ್ಸ್‌ನಲ್ಲಿಟ್ಟು ಸುತ್ತಲೂ ಟೇಪ್ ಅಂಟಿಸಿದ್ದನು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಸಂಪೂರ್ಣ ಭದ್ರತೆ ಖಚಿತವಾದ ನಂತರವಷ್ಟೇ ಪ್ರಧಾನಿ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಇದನ್ನೂ ಓದಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆ ಬಗ್ಗೆ ಕೇಂದ್ರ ವಲಯ ಡಿಐಜಿ ಮಾಹಿತಿ

ತನಿಖೆಯ ಹಾದಿ

ಈ ಗಂಭೀರ ಪ್ರಕರಣವನ್ನು ಭೇದಿಸಲು ಕಗ್ಗಲಿಪುರ ಠಾಣೆ ಪೊಲೀಸರು ಆರು ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುವುದರ ಜೊತೆಗೆ, ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದ ಕ್ವಾರಿಗಳಲ್ಲಿ ಬಳಕೆಯಾಗುವ ಜಿಲೆಟಿನ್ ಕಡ್ಡಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೋದಿ ಸಂಚಾರಕ್ಕೂ ಹಿಂದಿನ ದಿನವೇ ಬಾಂಬ್ ಸ್ಕ್ವಾಡ್ ತಪಾಸಣೆ ನಡೆದಿತ್ತಾದರೂ ಬೆಳಗಿನ ಜಾವ ಈ ಬಾಕ್ಸ್ ಅನ್ನು ಅಲ್ಲಿ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕೇಂದ್ರ ವಲಯದ ಡಿಐಜಿ ಗಿರೀಶ್ ಅವರು ಈ ಬಗ್ಗೆ ಮಾಹಿತಿ ನೀಡಿ, ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ. ನಿನ್ನೆ ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:14 am, Mon, 11 May 26

Source link

Suryakumar Yadav: ನಮ್ಮ ಸೋಲಿಗೆ ಇಂದೊಂದೇ ಕಾರಣ! – Kannada News | Suryakumar yadav post match interview After RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 20ನೇ ಓವರ್​ನ ಕೊನೆಯ ಎಸೆತದಲ್ಲಿ ಚೇಸ್ ಮಾಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್,  ನಮ್ಮ ಸೋಲಿಗೆ ಬ್ಯಾಟಿಂಗ್ ವಿಭಾಗದ ಹಿನ್ನಡೆಯೇ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ಸ್ಕೋರ್‌ನಲ್ಲಿ 10 ರಿಂದ 15 ರನ್ ಕಡಿಮೆಯಾದವು ಎಂದು ನನಗೆ ಅನ್ನಿಸಿತು. ಸರಿಯಾದ ಸಮಯದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿದ್ದು ನಮಗೆ ಹೊಡೆತ ನೀಡಿತು. ಆದರೆ ನಮನ್ ಧೀರ್ ಮತ್ತು ತಿಲಕ್ ವರ್ಮಾ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರು ಈ ಪಿಚ್‌ನಲ್ಲಿ ಆಡಿದ ರೀತಿ ನೋಡಿದರೆ, ಅವರು ಬೇರೆಯದೇ ಟ್ರ್ಯಾಕ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆನೋ ಎಂಬಂತಿತ್ತು,” ಎಂದು ಸೂರ್ಯಕುಮಾರ್ ಯಾದವ್ ಯುವ ಬ್ಯಾಟರ್‌ಗಳನ್ನು ಶ್ಲಾಘಿಸಿದರು.

ಇನ್ನು ಪಂದ್ಯದ ಕೊನೆಯ ಓವರ್‌ನಲ್ಲಿ 15 ರನ್‌ಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ಯುವ ಆಲ್ ರೌಂಡರ್ ರಾಜ್ ಬಾವಾಗೆ ನೀಡಲಾಗಿತ್ತು. ಈ ಬಗ್ಗೆ ಮಾತನಾಡಿದ ಸೂರ್ಯ, “ರಾಜ್ ಕಳೆದ ವರ್ಷದಿಂದ ಮತ್ತು ಈ ಸೀಸನ್ ಪೂರ್ತಿ ಕೊನೆಯ ಓವರ್‌ಗಳ ಅಭ್ಯಾಸವನ್ನು ಚೆನ್ನಾಗಿ ಮಾಡಿದ್ದಾರೆ. ಅವರು ಈ ವರ್ಷ ಸಂಪೂರ್ಣ ಭಿನ್ನ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಕೊನೆಯ ಓವರ್‌ನಲ್ಲಿ ಅವರು ಗೆಲುವಿನ ಹತ್ತಿರ ತಂದಿದ್ದರು. ಅವರ ಶ್ರಮದ ಬಗ್ಗೆ ನಮಗೆ ಹೆಮ್ಮೆಯಿದೆ,” ಎಂದರು.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​​ ವಿರುದ್ಧ ‘ಅಸಭ್ಯ’ವಾಗಿ ಸಂಭ್ರಮಿಸಿದ ಟಿಮ್ ಡೇವಿಡ್

ಇದೇ ವೇಳೆ ಪಂದ್ಯದ ನಡುವೆ ತಿಲಕ್ ವರ್ಮಾ ಮತ್ತು ನಮನ್ ಧೀರ್ ನಡುವೆ ಕ್ಯಾಚ್ ಪಡೆಯುವಾಗ ನಡೆದ ಗೊಂದಲದ ಬಗ್ಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, “ಇವೆಲ್ಲ ಆಟದ ಭಾಗ. ಅಭ್ಯಾಸದ ಸಮಯದಲ್ಲಿ ನಾವು ಇವುಗಳ ಬಗ್ಗೆ ಗಮನ ಹರಿಸುತ್ತೇವೆ. ಆದರೆ ಅಂತಿಮವಾಗಿ ತಿಲಕ್ ಆ ಅದ್ಭುತ ಕ್ಯಾಚ್ ಹಿಡಿದ ರೀತಿ ಅವರ ವಿಶೇಷತೆಯನ್ನು ತೋರಿಸುತ್ತದೆ,” ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್​ ತಂಡಕ್ಕೆ ಹೊಸ ಅನುಭವ ಮತ್ತು ನುಂಗಲಾರದ ತುತ್ತಾಗಿದೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಸೂರ್ಯಕುಮಾರ್, “ನಾವು ಈ ಸ್ಥಾನದಲ್ಲಿ ಇರಲು ಬಯಸುವುದಿಲ್ಲ. ಇದು ಜೀರ್ಣಿಸಿಕೊಳ್ಳಲು ಕಷ್ಟವಾದ ವಿಷಯ. ಆದರೆ ಈ ಸೀಸನ್ ನಮಗೆ ಸಾಕಷ್ಟು ಪಾಠಗಳನ್ನು ಕಲಿಸಿದೆ. ಕ್ರಿಕೆಟ್ ಮೇಲಿನ ಪ್ರೀತಿಗಾಗಿ ನಾವು ಮುಂದಿನ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತೇವೆ ಮತ್ತು ಮುಂದಿನ ವರ್ಷ ಬಲಿಷ್ಠವಾಗಿ ಹಿಂತಿರುಗುತ್ತೇವೆ,” ಎಂದು ಅಭಿಮಾನಿಗಳಿಗೆ ಭರವಸೆ ನೀಡಿದರು.

Source link

ಲೈವ್​​​ನಲ್ಲೇ ಕಣ್ಣೀರು ಹಾಕಿದ ಕಿಯಾರಾ ಅಡ್ವಾಣಿ – Kannada News | Kiara Advani Gets Emotional About Her Post Pregnancy Journey and the Importance of Self Love

ತಾಯಿಯಾದ ನಂತರದ ಜರ್ನಿ ಬಗ್ಗೆ ಕಿಯಾರಾ ರಾಜ್ ಶಮಾನಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ‘ನಾವು ಜೀವನಪೂರ್ತಿ ಇತರರಿಗಾಗಿ ಬದುಕುತ್ತೇವೆ, ಆದರೆ ನಮ್ಮೊಂದಿಗೆ ನಾವು ಹೊಂದಿರಬೇಕಾದ ಸಂಬಂಧವನ್ನು ಮರೆತುಬಿಡುತ್ತೇವೆ. ಈಗ ನಾನು ಅಂತಿಮವಾಗಿ ನನಗಾಗಿ ಸಮಯ ಮೀಸಲಿಡುವುದನ್ನು ಕಲಿಯುತ್ತಿದ್ದೇನೆ’ ಎಂದು ಕಿಯಾರಾ ಕಣ್ಣೀರು ಹಾಕಿದ್ದಾರೆ.  ಈ ಬದಲಾವಣೆಯು ಅವರ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದೆಂದು ಅವರು ಹೇಳಿಕೊಂಡಿದ್ದಾರೆ. 2025ರ ಜುಲೈ 15ರಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದರು. ಸರಾಯ ಎಂದು ಮಗುವಿಗೆ ಹೆಸರು ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಟಾಕ್ಸಿಕ್’ ಶೂಟಿಂಗ್ ವೇಳೆ ವ್ಯಾನ್ ಅಲ್ಲಿ ಕುಳಿತು ಹೊಟ್ಟೆಯಲ್ಲಿರೋ ಮಗು ಜೊತೆ ಮಾತನಾಡುತ್ತಿದ್ದ ಕಿಯಾರಾ – Kannada News | Kiara Advani’s Motherhood Journey: Filming ‘Toxic’ Pregnant, Emotional Battles and Sidharth’s Support

ಬಾಲಿವುಡ್ ಸುಂದರಿ ಕಿಯಾರಾ ಅಡ್ವಾಣಿ ಈಗ ಕೇವಲ ನಟಿಯಲ್ಲ, ಅವರು ತಾಯಿ ಕೂಡ ಹೌದು. ಕಳೆದ ವರ್ಷ ಜುಲೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಕಿಯಾರಾ ಬಣ್ಣದ ಲೋಕದಿಂದ ತುಸು ದೂರವಿದ್ದರು. ಇದೀಗ ತಾಯ್ತನದ ನಂತರದ ತಮ್ಮ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅವರು, ಆ ನೋವು ಮತ್ತು ಸವಾಲುಗಳನ್ನು ನೆನೆದು ಸಂದರ್ಶನದ ವೇಳೆ ಕಣ್ಣೀರಿಟ್ಟಿದ್ದಾರೆ.

1. ಟಾಕ್ಸಿಕ್ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಕಿಯಾರಾ

2. ಪ್ರೆಗ್ನೆಂಟ್ ಆಗಿಯೇ ಶೂಟ್ ಮಾಡಿದ್ದ ಕಿಯಾರಾ

3. ಆ ದಿನಗಳನ್ನು ನೆನೆದ ನಟಿ 

ರಾಜ್ ಶಮಾನಿ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಕಿಯಾರಾ, ‘ತಾಯಿ ಆಗುವ ಮೊದಲು ಮತ್ತು ನಂತರದ ಬದುಕಿನಲ್ಲಿ ನಾನು ಸಂಪೂರ್ಣವಾಗಿ ಬೇರೆಯೇ ವ್ಯಕ್ತಿಯಾಗಿದ್ದೇನೆ. ಇದೊಂದು ದೊಡ್ಡ ಅಸ್ಮಿತತೆಯ ಬದಲಾವಣೆ. ಆರಂಭದಲ್ಲಿ ಈ ಬದಲಾವಣೆಯನ್ನು ಒಪ್ಪಿಕೊಳ್ಳುವುದು ನನಗೆ ಕಷ್ಟವಾಗಿತ್ತು’ ಎಂದು ಭಾವುಕರಾದರು. ಮಗು ಜನಿಸಿದ ನಂತರದ ಆರು ತಿಂಗಳು ತಮಗೆ ತಾವೇ ಸಮಯ ನೀಡಲು ಸಾಧ್ಯವಾಗದೆ ಅನುಭವಿಸಿದ ಮಾನಸಿಕ ತುಮುಲಗಳನ್ನು ಅವರು ಈ ವೇಳೆ ಬಿಚ್ಚಿಟ್ಟರು.

ಕಿಯಾರಾ ಅವರು ಗರ್ಭಿಣಿಯಾಗಿದ್ದ ಸಂದರ್ಭದಲ್ಲೇ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು ಎನ್ನುವುದು ವಿಶೇಷ. ಸುಮಾರು ಏಳು ತಿಂಗಳ ಗರ್ಭಿಣಿಯಾಗಿದ್ದಾಗಲೂ ಅವರು ಕಠಿಣ ಸಾಹಸ ದೃಶ್ಯಗಳಲ್ಲಿ ಭಾಗವಹಿಸಿದ್ದರು. ಈ ವಿಷಯ ಕೇವಲ ನಿರ್ದೇಶಕ ಮತ್ತು ನಿರ್ಮಾಪಕರಿಗೆ ಮಾತ್ರ ತಿಳಿದಿತ್ತು. ‘ಶೂಟಿಂಗ್ ವೇಳೆ ವ್ಯಾನ್ ಒಳಗೆ ಹೋಗಿ ಹೊಟ್ಟೆಯಲ್ಲಿದ್ದ ಮಗುವಿನ ಜೊತೆ ಮಾತನಾಡುತ್ತಿದ್ದೆ. ಅಮ್ಮ ಕೇವಲ ನಟನೆ ಮಾಡುತ್ತಿದ್ದಾಳೆ ಮಗು, ಇದು ನಿಜವಲ್ಲ ಎಂದು ಮಗುವನ್ನು ಸಮಾಧಾನಪಡಿಸುತ್ತಿದ್ದೆ’ ಎಂದು ಆ ದಿನಗಳನ್ನು ನೆನೆದರು.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದ ಬೋಲ್ಡ್ ದೃಶ್ಯಕ್ಕೆ ಕಿಯಾರಾ ಕಿರಿಕ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ನಟಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕಿಯಾರಾ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆಗಿನ ಆಪ್ತ ದೃಶ್ಯಗಳನ್ನು ಕತ್ತರಿಸುವಂತೆ ಕೇಳಿಕೊಂಡಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದರ ಬಗ್ಗೆ ಮಾತನಾಡಿದ ಅವರು, ‘ಇವೆಲ್ಲವೂ ಕೇವಲ ಅಸಂಬದ್ಧ ಮಾತುಗಳು’ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ತಮ್ಮ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಅವರ ಬಗ್ಗೆ ಹೆಮ್ಮೆಯಿಂದ ಮಾತನಾಡಿದ ಕಿಯಾರಾ, ‘ಅವರು ಓರ್ವ ಜವಾಬ್ದಾರಿಯುತ ತಂದೆ. ಮಗುವಿನ ವಿಷಯದಲ್ಲಿ ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:48 am, Mon, 11 May 26

Source link

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! – Kannada News | Belagavi Farmer’s Son Basavaraj Kempawad Secures AIR 1 in UPSC IFS Exam

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ!

ಬೆಳಗಾವಿ, ಮೇ 11: ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದಲ್ಲಿ ರೈತನ ಮಗನಾದ ಬಸವರಾಜ್ ಧರೇಪ್ಪ ಕೆಂಪವಾಡ UPSC ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದು, ಇಡೀ ರಾಜ್ಯಕ್ಕೆ, ವಿಶೇಕ್ಷವಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಶುಕ್ರವಾರ ಪ್ರಕಟವಾದ ಫಲಿತಾಂಶದಲ್ಲಿ ಬಸವರಾಜ್ ಈ ಮಹೋನ್ನತ ಸಾಧನೆ ಮಾಡಿದ್ದಾರೆ. ಒಬ್ಬ ಸಾಮಾನ್ಯ ರೈತನ ಮಗನಾಗಿ, ಗ್ರಾಮೀಣ ಹಿನ್ನೆಲೆಯಿಂದ ಬಂದು ಈ ಸಾಧನೆ ಮಾಡಿರುವುದು ಇಂದು ಸಾವಿರಾರು ಯುವಕರಿಗೆ ಸ್ಫೂರ್ತಿಯಾಗಿದೆ. ಮಗನ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಇಡೀ ಸವದಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಗ್ರಾಮಸ್ಥರು ಹಾಗೂ ಸಂಬಂಧಿಕರು ಬಸವರಾಜ್ ಅವರ ಮನೆಗೆ ಧಾವಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮುಖ್ಯಾಂಶಗಳು

  • ಅಥಣಿ ತಾಲ್ಲೂಕಿನ ರೈತನ ಮಗ ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ.
  •  ಯಾವುದೇ ಕೋಚಿಂಗ್ ಪಡೆಯದೆ ಎರಡನೇ ಪ್ರಯತ್ನದಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬಸವರಾಜ್.
  •  ಬಡತನ ಮೀರಿ ಓದಿದ ಪ್ರತಿಭೆಯಿಂದ ನಾಡಿಗೆ ಸಂದ ಗೌರವ.

ಪರಿಶ್ರಮದ ಹಾದಿ

ಬಸವರಾಜ್ ತನ್ನ ಪ್ರಾಥಮಿಕ ಶಿಕ್ಷಣ ಸವದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೂರೈಸಿದ್ದು, ಬಳಿಕ ಅಥಣಿಯಲ್ಲಿ ಮುಂದಿನ ವಿದ್ಯಾಭ್ಯಾಸ ಮುಗಿಸಿದ್ದ. ಶಿರಸಿಯಲ್ಲಿ ಪದವಿ ಮುಗಿಸಿ, ಯುಪಿಎಸ್​ಸಿ ಕನಸು ಹೊತ್ತು ಬೆಂಗಳೂರಿಗೆ ತೆರಳಿದ್ದ. ವಿಶೇಷವೆಂದರೆ, ಯಾವುದೇ ಪ್ರತಿಷ್ಠಿತ ಕೋಚಿಂಗ್ ಸೆಂಟರ್‌ಗಳ ನೆರವಿಲ್ಲದೆ, ಸ್ವಂತ ಪರಿಶ್ರಮದಿಂದ ಬಸವರಾಜ್ ತನ್ನ ಎರಡನೇ ಪ್ರಯತ್ನದಲ್ಲೇ ಅಖಿಲ ಭಾರತ ಮಟ್ಟದ ಅಗ್ರಸ್ಥಾನಕ್ಕೇರಿದ್ದಾನೆ.

ಗುರಿ ತಲುಪಲು ಛಲವಿದ್ದರೆ ಬಡತನ ಅಡ್ಡಿಯಾಗದು

ಈ ಕುರಿತು ಸಂತಸ ಹಂಚಿಕೊಂಡ ಬಸವರಾಜ್, ನಾನು ಗ್ರಾಮೀಣ ಭಾಗದವನು. ಮೊರಾರ್ಜಿ ಶಾಲೆಯಲ್ಲಿ ಓದಿದವನು. ಗುರಿ ತಲುಪುವ ಛಲವಿದ್ದರೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ನನ್ನ ಸಾಧನೆಯೇ ಸಾಕ್ಷಿ. ಈ ಹಂತ ತಲುಪಿದ್ದು ನನಗೆ ಅಪಾರ ಹೆಮ್ಮೆ ತಂದಿದೆ ಎಂದು ಖುಷಿಯಿಂದ ಹೇಳಿಕೊಂಡಿದ್ದಾನೆ.

ತಂದೆ ಧರೇಪ್ಪ ಕೆಂಪವಾಡ ಮಾತನಾಡಿ, ನಾವು ಸಣ್ಣ ರೈತ ಕುಟುಂಬದವರು. ಆರ್ಥಿಕ ಮುಗ್ಗಟ್ಟಿದ್ದರೂ ಮಕ್ಕಳ ಶಿಕ್ಷಣಕ್ಕೆ ಎಂದೂ ಕೊರತೆ ಮಾಡಲಿಲ್ಲ. ಗುತ್ತಿಗೆ ಆಧಾರದ ಮೇಲೆ ಜಮೀನು ಪಡೆದು ಕಷ್ಟಪಟ್ಟು ಮಗನನ್ನು ಓದಿಸಿದೆ. ಇಂದು ಅವನ ಸಾಧನೆಯಿಂದ ನಮ್ಮ ಬದುಕು ಸಾರ್ಥಕವಾಯಿತು” ಎಂದು ಭಾವುಕರಾಗಿ ನುಡಿದಿದ್ದಾರೆ. ರೈತ ಕುಟುಂಬದ ಕುಡಿಯೊಬ್ಬ ಈ ಮಟ್ಟಕ್ಕೆ ಬೆಳೆದದ್ದು ಕೇವಲ ಸವದಿ ಗ್ರಾಮಕ್ಕೆ ಮಾತ್ರವಲ್ಲದೆ ಇಡೀ ನಾಡಿಗೆ ಹೆಮ್ಮೆಯ ವಿಷಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಂಬೈ ಇಂಡಿಯನ್ಸ್​​ಗೆ ಮಧ್ಯ ಬೆರಳು ತೋರಿಸಿದ ಟಿಮ್ ಡೇವಿಡ್ – Kannada News | RCB vs MI: Tim David shows middle finger

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ ಅಶ್ಲೀಲವಾಗಿ ಸಂಭ್ರಮಿಸಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿಕೊಂಡು. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್​ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 15 ರನ್​ಗಳು ಬೇಕಿತ್ತು. ಅದರಂತೆ ಅಂತಿಮ ಎಸೆತದಲ್ಲಿ 2 ರನ್​ಗಳ ಅವಶ್ಯಕತೆ ಙಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಸಿಖ್ ದಾರ್ ರೋಚಕ ಗೆಲುವು ತಂದು ಕೊಟ್ಟಿದ್ದರು. ಇತ್ತ ಆರ್​ಸಿಬಿ ಗೆಲ್ಲುತ್ತಿದ್ದಂತೆ ಡಗೌಟ್​ನಲ್ಲಿದ್ದ ಟಿಮ್ ಡೇವಿಡ್ ಮುಂಬೈ ಇಂಡಿಯನ್ಸ್​ ತಂಡವನ್ನು ಗುರಿಯಾಗಿಸಿ ಮಧ್ಯ ಬೆರಳು ತೋರಿಸಿ ಅಸಭ್ಯವಾಗಿ ಸಂಭ್ರಮಿಸಿದ್ದಾರೆ.

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟಿಮ್ ಡೇವಿಡ್ ವಿರುದ್ಧ ಮ್ಯಾಚ್ ರೆಫರಿ ಕ್ರಮ ಜರುಗಿಸುವ ಸಾಧ್ಯತೆಯಿದೆ. ಏಕೆಂದರೆ ಕ್ರಿಕೆಟ್ ಆಟದಲ್ಲಿ ಇಂತಹ ಸನ್ನೆಗಳನ್ನು ಮಾಡುವುದು ‘ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್’ (ICC) ನ ನೀತಿ ಸಂಹಿತೆಯ ಅಡಿಯಲ್ಲಿ ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ.

ಈ ಅಪರಾಧದ ಪ್ರಕಾರ: ಮಧ್ಯದ ಬೆರಳು ತೋರಿಸುವುದು ಅಸಭ್ಯ, ಆಕ್ಷೇಪಾರ್ಹ ಮತ್ತು ಅವಮಾನಕರ ಸನ್ನೆಗಳ ವರ್ಗಕ್ಕೆ ಸೇರುತ್ತದೆ. ಇದು ಸಾಮಾನ್ಯವಾಗಿ ಐಸಿಸಿ ನೀತಿ ಸಂಹಿತೆಯ ಹಂತ 1 (Level 1) ಅಥವಾ ಹಂತ 2 (Level 2) ಉಲ್ಲಂಘನೆಯಾಗಿದೆ.

    • ದಂಡ ಮತ್ತು ಶಿಕ್ಷೆ: ಇಂತಹ ವರ್ತನೆ ತೋರಿದ ಆಟಗಾರರಿಗೆ ಮ್ಯಾಚ್ ರೆಫರಿಗಳು ಅವರ ಪಂದ್ಯದ ಸಂಭಾವನೆಯಲ್ಲಿ  ಶೇ. 50 ರಿಂದ ಶೇ. 100 ರಷ್ಟು ದಂಡ ವಿಧಿಸಬಹುದು. ಜೊತೆಗೆ, ಅವರ ಖಾತೆಗೆ ಡೆಮೆರಿಟ್ ಅಂಕಗಳನ್ನು ಸೇರಿಸಲಾಗುತ್ತದೆ. ಪದೇ ಪದೇ ಇಂತಹ ತಪ್ಪುಗಳನ್ನು ಮಾಡಿದರೆ ಪಂದ್ಯಗಳಿಂದ ನಿಷೇಧವನ್ನು ಎದುರಿಸಬೇಕಾಗುತ್ತದೆ.
    • ಪೂರ್ವ ನಿದರ್ಶನಗಳು:  2012ರಲ್ಲಿ ಸಿಡ್ನಿ ಕ್ರೀಡಾಂಗಣದಲ್ಲಿ ಅಭಿಮಾನಿಗಳತ್ತ ಮಧ್ಯದ ಬೆರಳು ತೋರಿಸಿದ್ದಕ್ಕಾಗಿ ಕೊಹ್ಲಿ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ. 50 ರಷ್ಟು ದಂಡ ವಿಧಿಸಲಾಗಿತ್ತು.
    • ಇತ್ತೀಚಿನ ವಿವಾದಗಳು: ಟ್ರಾವಿಸ್ ಹೆಡ್ ಮತ್ತು ಗೌತಮ್ ಗಂಭೀರ್ ಅವರಂತಹ ಆಟಗಾರರು ಕೂಡ ಇಂತಹ ಸನ್ನೆಗಳ ಕಾರಣದಿಂದ ಟೀಕೆಗೆ ಗುರಿಯಾಗಿದ್ದಾರೆ.
    • ಕ್ರಿಕೆಟ್‌ನ ಆತ್ಮಾಭಿಮಾನ: ಕ್ರಿಕೆಟ್ ಅನ್ನು ‘ಸಂಭಾವಿತರ ಆಟ’ಎಂದು ಕರೆಯಲಾಗುತ್ತದೆ. ಯಾವುದೇ ಆಟಗಾರ ಮೈದಾನದಲ್ಲಿ ಎದುರಾಳಿ ಆಟಗಾರರನ್ನಾಗಲಿ ಅಥವಾ ಪ್ರೇಕ್ಷಕರನ್ನಾಗಲಿ ಅವಮಾನಿಸುವಂತಹ ವರ್ತನೆ ಮಾಡಬಾರದು ಎಂಬುದು ಇಲ್ಲಿನ ಪ್ರಮುಖ ನಿಯಮ.

ಆದರೆ ಇದೀಗ ಗೆಲುವಿನ ಬೆನ್ನಲ್ಲೇ ಮೈಮರೆಯುವ ಮೂಲಕ ಟಿಮ್ ಡೇವಿಡ್ ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ 50 ರಷ್ಟು ಅಥವಾ ಶೇ 100 ರಷ್ಟು ದಂಡ ವಿಧಿಸುವ ಸಾಧ್ಯತೆ ಇದೆ.

Source link

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ: ಟ್ರಂಪ್-ಕ್ಸಿ ಜಿನ್‌ಪಿಂಗ್ ಮಹತ್ವದ ಮಾತುಕತೆ! – Kannada News | US China Summit: Trump & Xi Jinping Discuss Trade, Taiwan and Middle East Crisis

ಬೀಜಿಂಗ್, ಮೇ.11: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರ ಪ್ರಕಟಿಸಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಅಮೆರಿಕ ಅಧ್ಯಕ್ಷರೊಬ್ಬರು ಚೀನಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಈ ಭೇಟಿಯು ಅತ್ಯಂತ ನಿರ್ಣಾಯಕ ಸಮಯದಲ್ಲಿ ನಡೆಯುತ್ತಿದೆ. ಪ್ರಸ್ತುತ ಅಮೆರಿಕ-ಇಸ್ರೇಲ್-ಇರಾನ್ ನಡುವೆ ಸುದೀರ್ಘ ಯುದ್ಧ ನಡೆಯುತ್ತಿದ್ದು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಜಾಗತಿಕ ಇಂಧನ ಬಿಕ್ಕಟ್ಟು ಎದುರಾಗಿದೆ. ಇದರೊಂದಿಗೆ ತೈವಾನ್ ವಿಚಾರವಾಗಿ ಅಮೆರಿಕ ಮತ್ತು ಚೀನಾ ನಡುವೆ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಬುಧವಾರದಂದು ಟ್ರಂಪ್ ಬೀಜಿಂಗ್ ತಲುಪಲಿದ್ದಾರೆ. ಗುರುವಾರ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ, ಸ್ವಾಗತ ಸಮಾರಂಭ ಮತ್ತು ‘ಟೆಂಪಲ್ ಆಫ್ ಹೆವನ್’ ಭೇಟಿ ಇರಲಿದೆ. ನಂತರ ಸರ್ಕಾರಿ ಔತಣಕೂಟ ನಡೆಯಲಿದೆ. ಶುಕ್ರವಾರದಂದು ಉಭಯ ನಾಯಕರು ಕಾರ್ಯನಿರತ ಮಧ್ಯಾಹ್ನದ ಊಟ ಮತ್ತು ಚಹಾ ಕೂಟದಲ್ಲಿ ಮತ್ತೊಮ್ಮೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಅಮೆರಿಕಕ್ಕೆ ಇರಾನ್‌ನಿಂದ ‘ಸರ್ಪ್ರೈಸ್ ಅಟ್ಯಾಕ್’ ಎಚ್ಚರಿಕೆ: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ

ಟ್ರಂಪ್ ಭೇಟಿಗೂ ಮುನ್ನ, ಮೇ 12 ಮತ್ತು 13 ರಂದು ದಕ್ಷಿಣ ಕೊರಿಯಾದಲ್ಲಿ ಚೀನಾದ ಉಪ-ಪ್ರೀಮಿಯರ್ ಹೆ ಲಿಫೆಂಗ್ ಮತ್ತು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ನಡುವೆ ಅಂತಿಮ ಹಂತದ ವ್ಯಾಪಾರ ಮಾತುಕತೆ ನಡೆಯಲಿದೆ. ಅಮೆರಿಕ ವಿಧಿಸಿರುವ ಸುಂಕಗಳ (Tariffs) ಕುರಿತು ಈ ಭೇಟಿಯಲ್ಲಿ ಒಂದು ಪ್ರಮುಖ ವ್ಯಾಪಾರ ಒಪ್ಪಂದವಾಗುವ ನಿರೀಕ್ಷೆಯಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:32 am, Mon, 11 May 26

Source link

Exit mobile version