Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು – Kannada News | Bengaluru–Tirupati Journey Ends in Tragedy After Highway Crash in Chittoor
ಚಿತ್ತೂರು, ಮಾರ್ಚ್ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….