ಕರ್ನಾಟಕ ಹವಾಮಾನ ವರದಿ: ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts

ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ!

ಬೆಂಗಳೂರು, ಮೇ 10: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ಕೊಡಗು ಸೇರಿದಂತೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಹಾವೇರಿ, ಗದಗ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ಚಾಮರಾಜನಗರ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 9, 10ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 10, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಧನಿಷ್ಠ ನಕ್ಷತ್ರ, ಬ್ರಹ್ಮ ಯೋಗ, ಕೌಲವ ಕರಣಗಳ ವಿವರಗಳನ್ನು ನೀಡಲಾಗಿದೆ.

ಇದು ಕಾಲಭೈರವ ಜಯಂತಿ ಮತ್ತು ಕಾಲಾಷ್ಟಮಿ ಇರುವ ಪವಿತ್ರ ದಿನವಾಗಿದೆ. ಅಷ್ಟೇ ಅಲ್ಲದೆ, ಇದು ತಾಯಂದಿರ ದಿನವೂ ಆಗಿದ್ದು, ಎಲ್ಲ ತಾಯಂದಿರಿಗೆ ಶುಭಾಶಯಗಳನ್ನು ಕೋರಲಾಗಿದೆ. ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | D Sudhakar Passes Away: Remembering the Political Journey of Karnataka Minister and Chitradurga Leader

ಸಚಿವ ಡಿ. ಸುಧಾಕರ್Image Credit source: tv9

ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು, ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಿದ್ದರು.

ಮುಖ್ಯಾಂಶಗಳು

  • 2004ರಲ್ಲಿ ಚಳ್ಳಕೆರೆಯಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದ ಡಿ. ಸುಧಾಕರ್.
  • 2008ರಲ್ಲಿ ಪಕ್ಷೇತರರಾಗಿ ಗೆದ್ದು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಮೊದಲ ಬಾರಿಗೆ ಸಚಿವ ಸ್ಥಾನ ಪಡೆದಿದ್ದರು.
  • ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಜಿಲ್ಲೆಯ ಪ್ರಭಾವಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ರಾಜಕೀಯ ಪಯಣದ ಆರಂಭ ಮತ್ತು ಏಳಿಗೆ

1961ರಲ್ಲಿ ಜನಿಸಿದ ಡಿ. ಸುಧಾಕರ್, ಬಿ.ಕಾಂ ಪದವಿ ಮುಗಿಸಿ ತಂದೆಯವರ ಕೃಷಿ ಮತ್ತು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯದ ಪಟ್ಟುಗಳನ್ನು ಕಲಿತ ಇವರು, 2004ರಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಗೆಲುವು ಸಾಧಿಸಿದರು. ಕ್ಷೇತ್ರ ಮೀಸಲಾತಿ ಬದಲಾದಾಗ ಹಿರಿಯೂರಿಗೆ ಶಿಫ್ಟ್ ಆದ ಸುಧಾಕರ್, 2008ರಲ್ಲಿ ಅಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಅಚ್ಚರಿಯ ಜಯ ದಾಖಲಿಸಿದ್ದರು. ಅಂದು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ ಇವರು ಯಡಿಯೂರಪ್ಪ ಸಂಪುಟದಲ್ಲಿ ಸಮಾಜ ಕಲ್ಯಾಣ, ಮುಜರಾಯಿ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು.

ಕೋರ್ಟ್​ ಮೆಟ್ಟಿಲೇರಿ ಶಾಸಕ ಸ್ಥಾನ ಉಳಿಸಿಕೊಂಡಿದ್ದ ಸುಧಾಕರ್!

2010ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಂಡಾಯ ಎದ್ದ 16 ಶಾಸಕರಲ್ಲಿ ಸುಧಾಕರ್ ಕೂಡ ಒಬ್ಬರಾಗಿದ್ದರು. ಅಂದು ಸ್ಪೀಕರ್ ಅವರಿಂದ ಅನರ್ಹಗೊಂಡರೂ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಿ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಂಡ ಚತುರ ಇವರು. 2013ರಲ್ಲಿ ಮತ್ತೆ ಕಾಂಗ್ರೆಸ್ ಸೇರಿ ಹಿರಿಯೂರಿನಿಂದ ಗೆದ್ದರು. 2018ರಲ್ಲಿ ಸೋಲು ಕಂಡಿದ್ದರೂ ಛಲ ಬಿಡದ ಸುಧಾಕರ್, 2023ರ ಚುನಾವಣೆಯಲ್ಲಿ ಮತ್ತೆ ಭರ್ಜರಿ ಜಯ ಸಾಧಿಸಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಸಕ್ರಿಯರಾಗಿದ್ದರು.

ರೈತಪರ ನಿಲುವು ಮತ್ತು ಸರಳ ವ್ಯಕ್ತಿತ್ವ

ಸಚಿವ ಡಿ. ಸುಧಾಕರ್ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿದವರಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲ ಬಂದಾಗ ಹಿರಿಯೂರಿನ ಕೆರೆಗಳ ಸುತ್ತಮುತ್ತ ಸ್ವತಃ ಮೇವು ಬೆಳೆಸಿ ರೈತರ ಜಾನುವಾರುಗಳಿಗೆ ಹಂಚಿದ ಅವರ ಕಾರ್ಯ ಇಂದಿಗೂ ಜನರ ಮನಸ್ಸಿನಲ್ಲಿದೆ. ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿರುವ ಸುಧಾಕರ್ ಅವರ ರಾಜಕೀಯ ಚತುರತೆ ಮತ್ತು ಜನಸೇವೆ ಜಿಲ್ಲೆಯ ಇತಿಹಾಸದಲ್ಲಿ ಸದಾ ನೆನಪಿನಲ್ಲುಳಿಯಲಿದೆ.

ಇದನ್ನೂ ಓದಿ: ಸಚಿವ ಡಿ. ಸುಧಾಕರ್ ನಿಧನ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶ್ವ ದಾಖಲೆಗಳನ್ನೇ ಧೂಳೀಪಟ ಮಾಡಿದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Creates New World Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರಿಸುವ ಮೂಲಕ ವೈಭವ್ ಸೂರ್ಯವಂಶಿ (Vaibhav Sooryavanshi ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಸಿಕ್ಸರ್​ ಸಿಡಿಸಿಯೇ ಇದೀಗ ವೈಭವ್ ಸೂರ್ಯವಂಶಿ ಎರಡು ಭರ್ಜರಿ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ. (PC: IPL)

Source link

ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ – Kannada News | Salman Khan shares Bandar Teaser ft Raj B Shetty Bobby Deol directed by Anurag Kashyap

Salman Khan, Raj B. Shetty

ಕನ್ನಡದ ಖ್ಯಾತ ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಈಗ ಬಾಲಿವುಡ್ ಕದ ತಟ್ಟಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ‘ಬಂದರ್’ (Bandar) ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರಿಗೆ ಒಂದು ಪಾತ್ರವಿದೆ. ಈ ಚಿತ್ರದಲ್ಲಿ ಹೀರೋ ಆಗಿ ಬಾಬಿ ಡಿಯೋಲ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್ ಖಾನ್ (Salman Khan) ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಟೀಸರ್ ಹಂಚಿಕೊಂಡಿದ್ದಾರೆ. ಆ ಮೂಲಕ ಸಿನಿಮಾ ಮೇಲಿನ ಹೈಪ್ ಹೆಚ್ಚಲು ಕಾರಣರಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ರಾಜ್ ಬಿ. ಶೆಟ್ಟಿ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಈಗ ಹಿಂದಿ ಪ್ರೇಕ್ಷಕರಿಗೆ ಅವರ ಪ್ರತಿಭೆಯ ದರ್ಶನ ಆಗುವ ಸಮಯ ಬಂದಿದೆ. ‘ಬಂದರ್’ ಟೀಸರ್​ನಲ್ಲಿ ರಾಜ್ ಬಿ. ಶೆಟ್ಟಿ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಆಗಿಲ್ಲ. ಕೇವಲ ಒಂದು ಶಾಟ್​​ನಲ್ಲಿ ಮಾತ್ರ ಅವರು ಕಾಣಿಸಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಜನರು ಅವರ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ.

ಈ ಸಿನಿಮಾಗೆ ಅನುರಾಗ್ ಕಶ್ಯಪ್ ಅವರು ನಿರ್ದೇಶನ ಮಾಡಿರುವ ಕಾರಣದಿಂದ ನಿರೀಕ್ಷೆ ಜಾಸ್ತಿ ಆಗಿದೆ. ರಾಜ್ ಬಿ. ಶೆಟ್ಟಿ ಬಗ್ಗೆ ಅನುರಾಗ್ ಕಶ್ಯಪ್ ಅವರಿಗೆ ವಿಶೇಷ ಗೌರವ ಇದೆ. ಈ ಮೊದಲು ರಾಜ್ ಬಿ. ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾವನ್ನು ನೋಡಿ ಅನುರಾಗ್ ಕಶ್ಯಪ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

‘ಬಂದರ್’ ಸಿನಿಮಾ ಟೀಸರ್​:

ಅನುರಾಗ್ ಕಶ್ಯಪ್ ಹಾಗೂ ರಾಜ್ ಬಿ. ಶೆಟ್ಟಿ ಅವರ ನಡುವೆ ಉತ್ತಮ ಸ್ನೇಹ ಮೂಡಿದೆ. ಆ ಕಾರಣದಿಂದಲೇ ‘ಬಂದರ್’ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇದು ಅತಿಥಿ ಪಾತ್ರ ಆಗಿದ್ದರೂ ಕೂಡ ಅವರ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ಅದರಲ್ಲೂ ಸಲ್ಮಾನ್ ಖಾನ್ ಅವರು ಟೀಸರ್ ಬಗ್ಗೆ ಪೋಸ್ಟ್ ಮಾಡಿದ ಬಳಿಕ ಹೈಪ್ ಜಾಸ್ತಿ ಆಗಿದೆ.

ಇದನ್ನೂ ಓದಿ: ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

ಜೂನ್ 5ರಂದು ‘ಬಂದರ್’ ಸಿನಿಮಾ ಬಿಡುಗಡೆ ಆಗಲಿದೆ. ನಟ ಬಾಬಿ ಡಿಯೋಲ್ ಅವರಿಗೆ ಈ ಸಿನಿಮಾ ಮೂಲಕ ಮತ್ತೊಂದು ಸಕ್ಸಸ್ ಸಿಗುವ ನಿರೀಕ್ಷೆ ಇದೆ. ಅದೇ ರೀತಿ, ರಾಜ್ ಬಿ. ಶೆಟ್ಟಿ ಅವರಿಗೆ ಬಾಲಿವುಡ್​ನಲ್ಲಿ ಜನಪ್ರಿಯತೆ ಹೆಚ್ಚಲಿದೆ ಎಂಬ ಭರವಸೆ ಅವರ ಅಭಿಮಾನಿಗಳಿಗೆ ಇದೆ. ಸದ್ಯಕ್ಕೆ ಈ ಸಿನಿಮಾದ ಟೀಸರ್ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ? – Kannada News | The Significance of Sprinkling Water Outside Your Home Each Morning

ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನೀರು ಮಾನವನ ಜೀವ ರಕ್ಷಕವಾಗಿದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಮನುಷ್ಯ ನೀರನ್ನು ಅವಲಂಬಿಸಿರುತ್ತಾನೆ. ಪಂಚಭೂತಗಳಲ್ಲಿ ಪ್ರಮುಖವಾದ ನೀರು, ಶುದ್ಧಿ ಕಾರ್ಯಗಳಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ. ಮನೆಯ ಮುಂದೆ ಬೆಳಗಿನ ಜಾವ ನೀರನ್ನು ಚಿಮುಕಿಸುವುದು ಕೇವಲ ಒಂದು ಆಚರಣೆಯಲ್ಲ, ಬದಲಿಗೆ ಆಳವಾದ ಮಹತ್ವವನ್ನು ಹೊಂದಿದೆ.

ವೈಜ್ಞಾನಿಕವಾಗಿ, ನೀರು ಚಿಮುಕಿಸುವುದರಿಂದ ಧೂಳು ನಿವಾರಣೆಯಾಗಿ ಶುದ್ಧ ವಾತಾವರಣ ಸೃಷ್ಟಿಯಾಗುತ್ತದೆ, ತಂಪು ಇರುತ್ತದೆ ಮತ್ತು ಕ್ರಿಮಿಕೀಟಗಳು ದೂರವಾಗುತ್ತವೆ. ಆಧ್ಯಾತ್ಮಿಕವಾಗಿ ಮತ್ತು ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಆಚರಣೆಯು ನಕಾರಾತ್ಮಕ ಶಕ್ತಿಗಳನ್ನು ದೂರಮಾಡಿ, ದುಷ್ಟ ಗ್ರಹಗಳ ಪ್ರಭಾವವನ್ನು ತಡೆಯುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿ, ಅದೃಷ್ಟ ಮತ್ತು ನೆಮ್ಮದಿಯನ್ನು ತರುತ್ತದೆ ಎಂಬ ನಂಬಿಕೆಯಿದೆ. ಮನೆಯ ಸ್ತ್ರೀಯರು ಈ ಕಾರ್ಯವನ್ನು ಮಾಡುವುದರಿಂದ ಕುಟುಂಬಕ್ಕೆ ಶ್ರೇಯಸ್ಸು, ಮನಸ್ಸಿಗೆ ಶಾಂತಿ ದೊರೆಯುತ್ತದೆ. ಇದು ಕೇವಲ ನಂಬಿಕೆಯಲ್ಲ, ನಮ್ಮ ಪರಂಪರೆಯ ಭಾಗವಾಗಿದೆ ಎಂದು ಗುರೂಜಿ ವಿವರಿಸಿದ್ದಾರೆ.

 

 

 

Source link

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಮುಖ್ಯಾಂಶಗಳು

  • ಪ್ರಧಾನಿ ಭೇಟಿ ಹಿನ್ನೆಲೆ ಬೆಂಗಳೂರು-ಕನಕಪುರ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಬದಲಾವಣೆ.
  • ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬದಲಿ ರಸ್ತೆ ಬಳಸಲು ಪೊಲೀಸರ ಸೂಚನೆ.
  • ಆಶ್ರಮದಲ್ಲಿ ಹೊಸ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ ಮೋದಿ.

ಕನಕಪುರ ರಸ್ತೆ ಸಂಚರಿಸುವವರಿಗೆ ಪರ್ಯಾಯ ಮಾರ್ಗ

ಬೆಂಗಳೂರಿನಿಂದ ಕನಕಪುರದ ಕಡೆಗೆ ಸಂಚರಿಸುವ ವಾಹನಗಳು ಬೆಂಗಳೂರು-ಕೆಂಗೇರಿ-ಬಿಡದಿ-ರಾಮನಗರ ಮೂಲಕ ಕನಕಪುರ ತಲುಪಲು ಸೂಚಿಸಲಾಗಿದೆ. ಅದೇ ರೀತಿ ಕನಕಪುರದಿಂದ ಬೆಂಗಳೂರಿಗೆ ಬರುವ ವಾಹನಗಳು ಕನಕಪುರ-ಹಾರೋಹಳ್ಳಿ-ಕಗ್ಗಲಿಪುರ ರಸ್ತೆ-ಬನ್ನೇರುಘಟ್ಟ ಮಾರ್ಗವಾಗಿ ನಗರ ಪ್ರವೇಶಿಸಬೇಕಿದೆ.

ನೈಸ್ ರಸ್ತೆಯಲ್ಲೂ ಸಂಚಾರ ನಿರ್ಬಂಧ

ನೈಸ್ ರಸ್ತೆಯಲ್ಲೂ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ಸಂಚಾರ ನಿರ್ಬಂಧವಿರಲಿದ್ದು, ತುಮಕೂರು ರಸ್ತೆಯಿಂದ ಕನಕಪುರ ಕಡೆ ಹೋಗುವವರು ಸಿಎಂಟಿಐ ಜಂಕ್ಷನ್ ಬಳಿ ಬಲ ತಿರುವು ಪಡೆದು ಡಾ. ರಾಜ್‌ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಂಚರಿಸಬೇಕು.

ಆರ್ಟ್ ಆಫ್ ಲಿವಿಂಗ್‌ನಲ್ಲಿ ಮೋದಿ ಕಾರ್ಯಕ್ರಮ

ಬೆಳಗ್ಗೆ 11 ಗಂಟೆಗೆ ಹೆಚ್‌ಎಎಲ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಊದಿಪಾಳ್ಯ ಗ್ರಾಮದ ಬಳಿ ಇರುವ ಆಶ್ರಮಕ್ಕೆ ಮೋದಿ ಆಗಮಿಸಲಿದ್ದಾರೆ. ಆಶ್ರಮದ 45ನೇ ವರ್ಷಾಚರಣೆ ಮತ್ತು ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ರ ವರೆಗೆ ಆಶ್ರಮದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ

ಪ್ರಧಾನಿ ಆಗಮನದ ಹಿನ್ನೆಲೆ ಹೆಚ್‌ಎಎಲ್ ಗೇಟ್ ನಂ. 30ರ ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ಹಾಗೂ ಪಾರ್ಕಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ ಎಸ್.ಎಂ.ವಿ ಕಾಲೇಜು ಮೈದಾನ ಹಾಗೂ ಹೆಚ್‌ಎಎಲ್ ಬಸ್ ಯಾರ್ಡ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:48 am, Sun, 10 May 26

Source link

Minister D. Sudhakar Passes Away: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ! – Kannada News | Karnataka Minister D. Sudhakar Passes Away at 65 in Bengaluru’s KIMS Hospital

ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ!

ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.

ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ.

ವೃಷಭ ರಾಶಿ:

ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು ಅರಿತು, ಯಾರಿಗಾದರೂ ಮಾತು ನೀಡಿ. ಕುಟುಂಬ ವ್ಯವಸ್ಥೆ ಸರಿಯಾಗಲು ಕೆಲವನ್ನು ಬಿಟ್ಟುಕೊಡಬೇಕಾದೀತು. ನಿಮ್ಮ ಮನಸ್ಸಿಗೆ ಹಿಡಿಸದ ವಿಚಾರಗಳ ಚರ್ಚೆಯಿಂದ ನೀವು ದೂರ ಇರುವಿರಿ. ನಿಮಗಿಂತ ಭಿನ್ನವಾದ ವ್ಯಕ್ತಿಗಳ ಬಗ್ಗೆ ಯೋಚಿಸದೇ ನಿಮ್ಮ ನಿಲುವೇ ಸರಿಯಂತೆ ವರ್ತಿಸುವಿರಿ.

ಮಿಥುನ ರಾಶಿ:

ಮೂಲಸ್ಥಾನದಿಂದ ದೂರ ಹೋಗುವ ಸಾಧ್ಯತೆ ಇದೆ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡಲಿದೆ. ಹಿಂದಿನ ಹೂಡಿಕೆಗಳು ಬಹಳ ಆದಾಯವು ಸಿಗಲಿದೆ. ಸಾಲವನ್ನು ಹಿಂಪಡೆಯಲು ಇಂದು ತಿರುಗಾಟ ಮಾಡುವಿರಿ.

ಕರ್ಕಾಟಕ ರಾಶಿ:

ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಯಾರಿಗೂ ಹೇಳಿಕೊಳ್ಳಲು ಸಾಧ್ಯವಾಗದಂಥ ಮಾನಸಿಕ ತೊಳಲಾಟಕ್ಕೆ ಸಿಲುಕಿಕೊಳ್ಳುತ್ತೀರಿ. ಶತ್ರುಗಳಿಂದ ನಿಮಗೆ ಸಿಗಬೇಕಾದುದು ಸಿಗಲಿದೆ. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮನ್ನಣೆ ಸಿಗುವುದು. ಸಂಗಾತಿಯನ್ನು ನೀವು ಮರೆತು ವ್ಯವಹರಿಸುವಿರಿ. ಯಂತ್ರಗಳ ವಿಚಾರದಲ್ಲಿ ನಿಮಗೆ ಹೆಚ್ಚಿನ ಆಸಕ್ತಿ ಇರುವುದು.

ಸಿಂಹ ರಾಶಿ:

ಇಂದು ನಿಮ್ಮಿಂದ ಆದ ಸಹಾಯವನ್ನು ಮಾಡಲಿದ್ದೀರಿ. ಸೋದರಿಯರ ಜತೆಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಾರ್ಗದರ್ಶನದ ಕೊರತೆಯಿಂದ ನಿಮ್ಮ ದಿಕ್ಕು ತಪ್ಪಲಿದೆ. ಚರ್ಮದ ಸಮಸ್ಯೆ ಇರುವವರು ಆಹಾರ ಸೇವನೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು.

ಕನ್ಯಾ ರಾಶಿ:

ಇಂದಿನ ನಿಮ್ಮ ಕೆಲಸವು ಶಿಸ್ತಿನಿಂದ ಇದ್ದರೂ ನಿಮ್ಮ ಜೊತೆಗಾರರು ಅದನ್ನು ಮೂದಲಿಸಲಿದ್ದಾರೆ. ಪರಸ್ಪರ ಸಂವಹನದಿಂದ ಮಾನಸಿಕ ಭಿಮ್ನತೆ ದೂರಾಗಬಹುದು. ಸ್ವಾರ್ಥದ ಹಣೆಪಟ್ಟಿ ನಿಮ್ಮ ಹೆಸರಿಗೆ ಬೀಳಬಹುದು. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಅದನ್ನು ಸರಿಯಾಗಿ ಮುಂದುವರಿಸುವುದು ನಿಮ್ಮ ಕೈಯಲ್ಲಿದೆ. ಯಾರ ಮೇಲೂ ಆಪಾದನೆ ಬೇಡ. ಸಂತಾನ ಬಗ್ಗೆ ಕುಟುಂಬದಿಂದ ಒತ್ತಡ ಬರಬಹುದು.

ತುಲಾ ರಾಶಿ:

ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ವಿಫಲತೆಯನ್ನು ನಕಾರಾತ್ಮಕವಾಗಿ ಸ್ವೀಕರಿಸುವುದು ಬೇಡ. ಯಾವುದೇ ಸಾಲಕ್ಕೆ ಪ್ರಯತ್ನಿಸಿದ್ದಲ್ಲಿ ಅದು ದೊರೆಯುವ ಸಾಧ್ಯತೆಗಳು ಗೋಚರಿಸುತ್ತವೆ. ತೀರಾ ಆಪ್ತರಿಗೆ ಸಹಾಯದ ಅಗತ್ಯ ಬೀಳುತ್ತದೆ. ಹಣಕಾಸು ನಿರ್ವಹಣೆ ಮತ್ತು ಸಕಾರಾತ್ಮಕ ಕ್ರಮಗಳು ಏಳಿಗೆಗೆ ದಾರಿ ಮಾಡಿಕೊಡುತ್ತದೆ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ.

ವೃಶ್ಚಿಕ ರಾಶಿ:

ನಿಮ್ಮ ಸಾಮರ್ಥ್ಯದಿಂದ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮಾತಿನ ಮೂಲಕ ಇತರರನ್ನು ಮೋಡಿ ಮಾಡಲಿದ್ದೀರಿ. ಯಾರನ್ನೂ ಮಟ್ಟಹಾಕುವ ಕೆಲಸಕ್ಕಿಂತ ನಿಮ್ಮ ಬೆಳವಣಿಗೆಯ ಬಗ್ಗೆ ಒತ್ತು ಇರಲಿ. ಗೊತ್ತಿರಬೇಕಾದ ಎಷ್ಟೋ ವಿಚಾರಗಳು ಗೊತ್ತಲ್ಲವೆಂದು ಬೇಸರ ಪಡಬೇಕಾಗಿಬರಬಹುದು. ನಿಮ್ಮ ಕೆಲಸವಾಗಲು ಯಾರನ್ನಾದರೂ ದೂರ ಮಾಡುವಿರಿ. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು.

ಧನು ರಾಶಿ:

ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ಹಿಂದೆ ಸಹಾಯ ಮಾಡಿದ ವ್ಯಕ್ತಿಗಳು ಈಗ ನಿಮ್ಮ ನೆರವಿಗೆ ಬರಲಿದ್ದಾರೆ. ನಿಮ್ಮ ಶಕ್ತಿಯ ಪ್ರದರ್ಶನವನ್ನು ಇಂದು ಮಾಡುವಿರಿ. ಹಗಲಿರುಳು ದುಡಿಯುವ ನಿಮ್ಮ ಗುಣ ಮೇಲಧಿಕಾರಿಗಳ ಗಮನಕ್ಕೆ ಬಂದು, ಮೆಚ್ಚುಗೆಯ ಮಾತುಗಳನ್ನಾಡಲಿದ್ದಾರೆ. ಇಂದು ನಿಮ್ಮ ಶತ್ರುಗಳು ಅಸಮಾಧಾನಗೊಳ್ಳುವರು. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ.

ಮಕರ ರಾಶಿ:

ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ಎಲ್ಲವೂ ಸರಿಯಾಗಿ ಇರಬೇಕು ಎಂಬ ಪ್ರಯತ್ನ ಸರಿ. ಆದರೆ ಅದಕ್ಕಾಗಿ ಎಲ್ಲರನ್ನೂ ದೂಷಿಸುವುದು ಉತ್ತಮ ನಾಯಕತ್ವವಾಗದು. ವಿಷಾದದ ವಾತಾವರಣದಿಂದ ಹೊರಬರಲು ಕಷ್ಟವಾಗುವುದು. ಏನನ್ನೂ ಹೇಳದೇ ನಿಮ್ಮಷ್ಟಕ್ಕೆ ಗಮನಿಸಿ. ಇಂದು ಅನಗತ್ಯ ವಸ್ತುಗಳಿಗಾಗಿ ವ್ಯರ್ಥವಾಗಿ ಖರ್ಚಾಗಬಹುದು. ಅದನ್ನು ತಪ್ಪಿಸಿಕೊಳ್ಳುವುದು ಉತ್ತಮ.

ಕುಂಭ ರಾಶಿ:

ಇಂದು ನಿರುದ್ಯೋಗಿಗಳ ದುಃಖ ದೂರಾಗಲಿದೆ. ಸರ್ಕಾರಿ ಕಾಗದ ಪತ್ರಗಳನ್ನು ಯಾರಿಗೆ ತೋರಿಸುವ ಮುನ್ನ ಒಮ್ಮೆ ಅದರಲ್ಲಿರುವ ಅಂಶಗಳನ್ನು ಕೇಳುತ್ತಿರುವ ವ್ಯಕ್ತಿಗಳ ಹಿನ್ನೆಲೆ ತಿಳಿದುಕೊಳ್ಳಿ. ನಿಮ್ಮ ಅತ್ಯುತ್ಸಾಹದಿಂದ ಮಹತ್ತರ ಮಾಹಿತಿಗಳು ಅಪಾತ್ರರಿಗೆ ಹಂಚಿಕೆಯಾಗಲಿದೆ. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ಯಾರೂ ಇರದ ಪ್ರದೇಶದಲ್ಲಿ ನೀವೇ ದೊಡ್ಡವರಾಗುವಿರಿ. ಎಂದೋ ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ.

ಮೀನ ರಾಶಿ:

ಹೊಸ ಯೋಜನೆಗಳಲ್ಲಿ ವಿಘ್ನ ಕಂಡುಬರುತ್ತಿದೆ. ನಿಶ್ಚಿತ ಆದಾಯದಲ್ಲಿ ಗಣನೀಯ ಇಳಿಕೆಯಾಗಿ, ಚಿಂತೆಗೆ ಕಾರಣವಾಗುತ್ತದೆ. ಅಲಂಕಾರಕ್ಕೆ ಸಮಯವನ್ನು ಕೊಡುವಿರಿ. ದೇವಾಲಯದ ಪಾರುಪತ್ತೆದಾರರಿಗೆ ಹೊಸ ಸವಾಲುಗಳು ಎದುರಾಗಲಿವೆ. ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ದ್ವಂದ್ವ ಎದುರಾಗುವುದು. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಸರ್ಕಾರದ ಕಡೆಯಿಂದ ಆಗುವ ನಿಮ್ಮ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ತೈತಿಲ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:07 – 18:42, ಯಮಗಂಡ ಕಾಲ 12:21 – 13:56, ಗುಳಿಕ ಕಾಲ 15:31 – 17:07

-ಲೋಹಿತ ಹೆಬ್ಬಾರ್ – 8762924271 (what’s app only)

Source link

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡು 152 ರನ್​ಗಳಿಗೆ ಆಲೌಟ್ ಆಗುವ ಮೂಲಕ 77 ರನ್​ಗಳ ಹೀನಾಯ ಸೋಲು ಅನುಭವಿಸಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಿಂದಲೇ ಆಕ್ರಮಣಕಾರಿ ಧೋರಣೆ ಅನುಸರಿಸಿತು. ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ರಾಜಸ್ಥಾನ ಬೌಲರ್‌ಗಳ ಮೇಲೆ ಒತ್ತಡ ಹೇರಿ ಮೊದಲ ವಿಕೆಟ್‌ಗೆ 118 ರನ್‌ಗಳ ಅದ್ಭುತ ಪಾಲುದಾರಿಕೆಯನ್ನು ಹಂಚಿಕೊಂಡರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ತ್ವರಿತ ರನ್ ಗಳಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು.

ಶುಭ್​ಮನ್ ಗಿಲ್ ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಇತ್ತ ಸಾಯಿ ಸುದರ್ಶನ್ ಕೂಡ 36 ಎಸೆತಗಳಲ್ಲಿ 55 ರನ್​ಗಳ ಕೊಡುಗೆ ನೀಡಿದರು. ಆದಾಗ್ಯೂ ಜೋಸ್ ಬಟ್ಲರ್ ಮಧ್ಯಮ ಕ್ರಮಾಂಕದಲ್ಲಿ ಹೆಚ್ಚಿನ ಪರಿಣಾಮ ಬೀರದೆ 10 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು. ಅಂತಿಮ ಓವರ್‌ಗಳಲ್ಲಿ ಅಬ್ಬರಿಸಿದ ವಾಷಿಂಗ್ಟನ್ ಸುಂದರ್ ಕೇವಲ 20 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡ ಅಜೇಯ 37 ರನ್ ಗಳಿಸಿದರು. ರಾಹುಲ್ ತೆವಾಟಿಯಾ ಕೂಡ ನಾಲ್ಕು ಎಸೆತಗಳಲ್ಲಿ 14 ರನ್‌ಗಳ ತ್ವರಿತ ಇನ್ನಿಂಗ್ಸ್ ಆಡಿದರು. ರಾಜಸ್ಥಾನ್ ರಾಯಲ್ಸ್ ಪರ ಬ್ರಿಜೇಶ್ ಶರ್ಮಾ ಎರಡು ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಯಶ್ ರಾಜ್ ಪುಂಜಾ ತಲಾ ಒಂದು ವಿಕೆಟ್ ಪಡೆದರು.

ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೂಡ ಅಬ್ಬರದ ಆರಂಭ ಪಡೆಯಿತು. ಎಂದಿನಂತೆ ವೈಭವ್ ಸೂರ್ಯವಂಶಿ ಬೌಂಡರಿಗಳ ಮಳೆಗರೆದರು. ಆದರೆ ವೈಭವ್ ಆರ್ಭಟಕ್ಕೆ ಸಿರಾಜ್ ಬ್ರೇಕ್ ಹಾಕಿದರು. ವೈಭವ್ 16 ಎಸೆತಗಳಲ್ಲಿ 36 ರನ್ ಬಾರಿಸಿ ಔಟಾದರು. ಈ ವಿಕೆಟ್ ಪತನದ ಬಳಿಕ ರಾಜಸ್ಥಾನ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ನಾಯಕ ಜೈಸ್ವಾಲ್​ 3 ರನ್​ಗೆ ಔಟಾದರೆ, ಜುರೇಲ್ 24, ಹೆಟ್ಮಾಯರ್ 6, ಫೆರೆರಾ 4, ಶುಭಂ ದುಬೆ 15 ರನ್​ಗೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ರಾಜಸ್ಥಾನದ ಸೋಲು ಖಚಿತವಾಯಿತು.

Published On – 11:11 pm, Sat, 9 May 26

Source link

Exit mobile version