‘ಬಾಸ್’ ಸಿನಿಮಾ ವಿಷಯ ಚರ್ಚೆ ಹುಟ್ಟುಹಾಕಿದೆ. ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಹೀರೋ ಓರ್ವ ಕೊಲೆ ಕೇಸ್ನಲ್ಲಿ ಸಿಕ್ಕಿ ಬೀಳೋ ಕಥೆ ಇದು. ಇದನ್ನು ನೋಡಿದ ಅನೇಕರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣವೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರಿಸಿರೋ ನಿರ್ದೇಶಕರು ‘ಇದು ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್’ ಎಂದು ಹೇಳಿದ್ದಾರೆ. ಟ್ರೇಲರ್ ರಿಲೀಸ್ ಆದ ಬಳಿಕ ಎಲ್ಲ ವಿಷಯ ಗೊತ್ತಾಗಲಿದೆ ಎಂದು ಅವರು ಹೇಳಿದ್ದಾರೆ.
ಮಳೆ ನಿಂತರೂ ಹನಿ ನಿಂತಿಲ್ಲ ಎಂಬಂತೆ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಚರ್ಚೆ ಮುಂದುವರೆದಿದೆ. ಮಾರ್ಚ್ 8 ರಂದು ಅಹಮದಾಬಾದ್ನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 255 ರನ್ಗಳು. 256 ರನ್ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್ಗಳ ವಿಜಯದೊಂದಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಹೀಗೆ ಭಾರತ ತಂಡ ಅಮೋಘ ಗೆಲುವು ದಾಖಲಿಸಿದರೂ, ಅದು ನ್ಯೂಝಿಲೆಂಡ್ ತಂಡ ನೀಡಿದ ಉಡುಗೊರೆ ಎಂದು ಅಣಕಿಸಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್.
ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ತೆಗೆದುಕೊಂಡ ಕೆಲ ಅಚ್ಚರಿಯ ನಿರ್ಧಾರಗಳಿಂದಲೇ ಭಾರತ ಚಾಂಪಿಯನ್ ಆಗಿದೆ.
ಏಕೆಂದರೆ ಸ್ಪಿನ್ ವಿರುದ್ಧ ತಿಣುಕಾಡುವ ಅಭಿಷೇಕ್ ಶರ್ಮಾಗೆ ಆಫ್-ಸ್ಪಿನ್ನರ್ನಿಂದ ಕೈಯಿಂದ ಬೌಲಿಂಗ್ ಮಾಡಿಸುವ ಬದಲು ಸ್ಯಾಂಟ್ನರ್ ವೇಗಿ ಜೇಕಬ್ ಡಫಿಗೆ ಬೌಲಿಂಗ್ ಮಾಡಿಸಿದ್ದರು. ಇಂದೆಂತಹ ಸ್ಟ್ರಾಟಜಿ ಎಂಬುದೇ ಅರ್ಥವಾಗಿಲ್ಲ ಎಂದು ಅಮಿರ್ ಕಿವೀಸ್ ನಾಯಕನ ನಡೆಯನ್ನು ಪ್ರಶ್ನಿಸಿದ್ದಾರೆ.
ಅಷ್ಟೇ ಅಲ್ಲದೆ ಸೆಮಿಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೋಲ್ ಮೆಕಾಂಕಿಯನ್ನು ಕೈಬಿಟ್ಟಿದ್ದಕ್ಕೂ ಮೊಹಮ್ಮದ್ ಅಇರ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
85,000 ಪ್ರೇಕ್ಷಕರ ಸಮ್ಮುಖದಲ್ಲಿ ನ್ಯೂಝಿಲೆಂಡ್ ಆಟಗಾರರು ಮೊದಲು ಮಾನಸಿಕವಾಗಿ ಸೋತರು. ಆ ಬಳಿಕ ಸಡಿಲವಾದ ಬೌಲಿಂಗ್ ಮೂಲಕ ಭಾರತಕ್ಕೆ ಹೆಚ್ಚಿನ ರನ್ ಬಿಟ್ಟುಕೊಟ್ಟರು.
ಇದು ಒಂದಾರ್ಥದಲ್ಲಿ ಟೀಮ್ ಇಂಡಿಯಾದ ಭರ್ಜರಿ ಗೆಲುವಲ್ಲ. ಬದಲಾಗಿ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಭಾರತಕ್ಕೆ ಪ್ರಶಸ್ತಿಯನ್ನು ತಟ್ಟೆಯಲ್ಲಿ ಇಟ್ಟು “ಉಡುಗೊರೆ”ಯಾಗಿ ನೀಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇದಕ್ಕೂ ಮುನ್ನ ಮೊಹಮ್ಮದ್ ಅಮಿರ್, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸಲ್ಲ ಎಂದು ಭವಿಷ್ಯ ನುಡಿದಿದ್ದರು. ಇದಾದ ಬಳಿಕ ಫೈನಲ್ನಲ್ಲಿ ಭಾರತ ತಂಡ ಸೋಲಲಿದೆ ಎಂದಿದ್ದರು.
ಬೆಂಗಳೂರು, ಮಾರ್ಚ್ 10: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 161ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 151 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2026 ರಿಂದ ಹೆಚ್ಚುವರಿ 10 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ.
ಈ ಹಿಂದೆಯೇ ಐಪಿಎಲ್ ಪಂದ್ಯಗಳ ಹೆಚ್ಚಳದ ಬಗ್ಗೆ ಬಿಸಿಸಿಐ ಚರ್ಚಿಸಿತ್ತು. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿತ್ತು. ಅಲ್ಲದೆ 2027 ರಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94 ಕ್ಕೇರಿಸಲು ಚಿಂತಿಸಲಾಗಿತ್ತು.
ಆದರೆ ಈ ಯೋಜನೆಯು ಐಪಿಎಲ್ 2025 ರಲ್ಲಿ ಕಾರ್ಯಗತವಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಆಟಗಾರರ ವಿಂಡೋ. ಅಂದರೆ ಪಂದ್ಯಗಳ ಹೆಚ್ಚಳದಿಂದಾಗಿ ವಿದೇಶಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿದ್ದವು. ಆದರೆ ಈ ಬಾರಿ 84 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದೆ ಎಂದು ದ ಫಿನಾನ್ಷಿಯಲ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಅದರಂತೆ ಐಪಿಎಲ್ 2026 ರಲ್ಲಿ ಒಟ್ಟು 84 ಪಂದ್ಯಗಳನ್ನು ಆಯೋಜಿಸಲಿದ್ದಾರೆ. ಅಂದರೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚುವರಿ 10 ಪಂದ್ಯಗಳಿರಲಿದೆ. ಇದಕ್ಕೂ ಮುನ್ನ 74 ಪಂದ್ಯಗಳನ್ನು ಆಯೋಜಿಸಲಾಗುತ್ತಿತ್ತು. ಇದೀಗ 84 ಪಂದ್ಯಗಳ ಟೂರ್ನಿ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ.
ಅಷ್ಟೇ ಅಲ್ಲದೆ 2027 ರಿಂದ ಐಪಿಎಲ್ ಅನ್ನು ಲೀಗ್ ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಅಂದರೆ ಇಲ್ಲಿ ಪ್ರತಿ ತಂಡಗಳು 18 ಪಂದ್ಯಗಳನ್ನಾಡಲಿದೆ. 9 ಪಂದ್ಯಗಳು ಹೋಮ್ ಗ್ರೌಂಡ್ನಲ್ಲಿ ನಡೆದರೆ, ಉಳಿದ 9 ಪಂದ್ಯಗಳು ಅವೇ ಮೈದಾನದಲ್ಲಿ ಜರುಗಲಿದೆ. ಈ ಮೂಲಕ ಲೀಗ್ ಹಂತದಲ್ಲಿ ಪ್ರತಿ ತಂಡಗಳು 18 ಪಂದ್ಯಗಳನ್ನಾಡಲಿದೆ.
ಒಟ್ಟಿನಲ್ಲಿ ಐಪಿಎಲ್ ಸೀಸನ್-19 ರಲ್ಲಿ 84 ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಪ್ರೇಕ್ಷಕರಿಗೆ ದೊರೆಯಲಿದೆ. ಅಲ್ಲದೆ ಮರುವರ್ಷವೇ, ಅಂದರೆ 2027 ರಿಂದ 94 ಪಂದ್ಯಗಳಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಸಾಕ್ಷಿಯಾಗುವುದು ಬಹುತೇಕ ಖಚಿತವಾಗಿದೆ.
ಪಂದ್ಯಗಳ ಹೆಚ್ಚಳವೇಕೆ? ಐಪಿಎಲ್ ಮಾಧ್ಯಮ ಹಕ್ಕುಗಳ ಒಪ್ಪಂದದ ಪ್ರಕಾರ ಬಿಸಿಸಿಐ ಐಪಿಎಲ್ ಸೀಸನ್-18 ಮತ್ತು 19 ರಲ್ಲಿ 84 ಪಂದ್ಯಗಳನ್ನು ಆಯೋಜಿಸುವುದಾಗಿ ತಿಳಿಸಿತ್ತು. ಆದರೆ ಕಳೆದ ಬಾರಿ ಆಟಗಾರರ ಅಲಭ್ಯತೆಯ ಕಾರಣ 84 ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಇದೀಗ ಮತ್ತೊಮ್ಮೆ ಪಂದ್ಯಗಳ ಸಂಖ್ಯೆ ಹೆಚ್ಚಳ ಮಾಡಬೇಕೆಂಬ ಬೇಡಿಕೆಯನ್ನು ಐಪಿಎಲ್ ಪ್ರಸಾರಕ ಸಂಸ್ಥೆಗಳು ಮುಂದಿಟ್ಟಿವೆ. ಹೀಗಾಗಿ ಐಪಿಎಲ್ 2026 ರಲ್ಲಿ 84 ಪಂದ್ಯಗಳು ನಡೆಯುವುದು ಬಹುತೇಕ ಖಚಿತ ಎನ್ನಬಹುದು.
ನಟಿ ಮಲೈಕಾ ಅರೋರಾ ತಮ್ಮ ಖಾಸಗಿ ಜೀವನಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ . ಕಳೆದ ಕೆಲವು ದಿನಗಳಿಂದ, ಮಲೈಕಾ ವಜ್ರದ ವ್ಯಾಪಾರಿ ಹರ್ಷ್ ಮೆಹ್ತಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ರೋಮ್‌ನಲ್ಲಿರುವ ಅವರಿಬ್ಬರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈಗ ಮಲೈಕಾ ತಮ್ಮ ಖಾಸಗಿ ಜೀವನಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಇಬ್ಬರೂ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇಬ್ಬರು ಒಟ್ಟಿಗೆ ನೃತ್ಯ ಮಾಡುವುದನ್ನು ನೋಡಿದ ನಂತರ, ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗಳು ಶುರುವಾಗಿವೆ.
ಮಲೈಕಾ ಅರೋರಾ ಭಾನುವಾರ ಸಂಜೆ ತಮ್ಮ ಹೊಸ ರೆಸ್ಟೋರೆಂಟ್‌ನ ಲಾಂಚ್ ಪಾರ್ಟಿಯನ್ನು ಆಯೋಜಿಸಿದ್ದರು , ಇದರಲ್ಲಿ ಅನೇಕ ಜನರು ಭಾಗವಹಿಸಿದ್ದರು. ಪಾರ್ಟಿಯಿಂದ ಮಲೈಕಾ ಅವರ ಹಲವಾರು ವೀಡಿಯೊಗಳು ಸಹ ಹೊರಬಂದಿವೆ. ಅದರಲ್ಲಿ ಅವರು ಒಬ್ಬ ಪುರುಷನೊಂದಿಗೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದು. ಅತ್ಯಂತ ಮುಖ್ಯವಾದ ವಿಷಯವೆಂದರೆ ಆ ವ್ಯಕ್ತಿ ಹರ್ಷ್ ಅಲ್ಲ. ಇದು ಚರ್ಚೆಗಳನ್ನು ಹುಟ್ಟುಹಾಕಿದೆ.
ವಿಡಿಯೋದಲ್ಲಿ ಮಲೈಕಾ ಜೊತೆ ಕಾಣಿಸಿಕೊಂಡ ವ್ಯಕ್ತಿ ಬೇರೆ ಯಾರೂ ಅಲ್ಲ, ಸ್ಪ್ಲಿಟ್ಸ್‌ವಿಲ್ಲಾ ಸ್ಪರ್ಧಿ ಸೊರಾಬ್ ಬೇಡಿ… ಅವರ ಕೆಮಿಸ್ಟ್ರಿ ನೋಡಿ, ಜನರು ಸೊರಾಬ್ ಮಲೈಕಾಳ ಗೆಳೆಯನೇ ಎಂದು ಊಹಿಸಲು ಪ್ರಾರಂಭಿಸಿದರು. ಆದರೆ ಸತ್ಯ ಬೇರೆಯೇ ಇದೆ. ವಾಸ್ತವವಾಗಿ, ಸೊರಾಬ್ ಮತ್ತು ಮಲೈಕಾ ಪ್ರೀತಿ ಮಾಡುತ್ತಿಲ್ಲ.
ಮಲೈಕಾ ಅವರ ಹೊಸ ರೆಸ್ಟೋರೆಂಟ್ “ಸ್ವೀನಿ ಬಾಂಬೆ” ಯ ಲಾಂಚ್ ಪಾರ್ಟಿಯಲ್ಲಿ ಸೊರಾಬ್ ಭಾಗವಹಿಸಿದ್ದರು. ಸೊರಾಬ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪಾರ್ಟಿಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಮಲೈಕಾ ಅವರನ್ನು ಅಭಿನಂದಿಸಿದರು. ಇದರಿಂದ, ಇಬ್ಬರೂ ಕೇವಲ ಸ್ನೇಹಿತರು ಎಂಬುದು ಸ್ಪಷ್ಟವಾಗಿದೆ.
ಮಲೈಕಾ ಗೆಳೆಯ ಹರ್ಷ್ ಮೆಹ್ತಾ ಕೂಡ ಪಾರ್ಟಿಯಲ್ಲಿದ್ದರು.. ಮಲೈಕಾ ಮತ್ತು ಹರ್ಷ್ ಒಟ್ಟಿಗೆ ಮನೆಯಿಂದ ಹೊರಟರು ಮತ್ತು ಒಂದೇ ಕಾರಿನಲ್ಲಿ ಕುಳಿತಿರುವುದು ಕಂಡುಬಂದಿದೆ. ಮಲೈಕಾ ಮತ್ತು ಹರ್ಷ್ ನಡುವೆ 19 ವರ್ಷಗಳ ವಯಸ್ಸಿನ ಅಂತರವಿದೆ. ಮಲೈಕಾಗೆ 52 ವರ್ಷ, ಹರ್ಷ್‌ಗೆ 33 ವರ್ಷ.
ಬೆಂಗಳೂರು, ಮಾರ್ಚ್ 10: ಕರ್ನಾಟಕದ (Karnataka) ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.
ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.
ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರಕ್ಕೆ ಕಾರಣವೇನು?
ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜೇಷ್ಠಾತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.
ವೈದ್ಯರ ಬೇಡಿಕೆಗಳ ಈಡೇರಿಕೆಗೆ ನಡೆದ 7 ಸಭೆ ವಿಫಲ
ವೈದ್ಯರ ಬೇಡಿಕೆಗಳನ್ನು ಚರ್ಚಿಸಲು ಆರೋಗ್ಯ ಇಲಾಖೆ ಇದುವರೆಗೆ ಏಳು ಸಭೆಗಳನ್ನು ನಡೆಸಿದೆ. ಮಾರ್ಚ್ 2ರಂದು ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯೂ ಫಲಪ್ರದವಾಗಲಿಲ್ಲ. ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಸಂಘದ ನಾಯಕರು ತಿಳಿಸಿದ್ದಾರೆ.
ಮಾರ್ಚ್ 16 ರಿಂದ ತೀವ್ರ ಸ್ವರೂಪದ ಹೋರಾಟ
ಮುಷ್ಕರದ ಭಾಗವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಈ ಸಂಬಂಧವಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ್ ಮೇಟಿ ಅವರ ನೇತೃತ್ವದಲ್ಲಿ ವೈದ್ಯರು ಈಗಾಗಲೇ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಸರ್ಕಾರಿ ವೈದ್ಯರ ಮುಷ್ಕರದಿಂದ ರಾಜ್ಯದ ಆರೋಗ್ಯ ಸೇವೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದ್ದು, ವಿಶೇಷವಾಗಿ ಬಡ ರೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಸಾಯಿ ಪಲ್ಲವಿಯವರು (Sai Pallavi) ಇಂದು ಬೇಡಿಕೆಯ ನಟಿ ಎನಿಸಿಕೊಂರುವುದ ಗೊತ್ತೇ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಾಕಿ ಮಾಡುತ್ತಿರುವ ಸಿನಿಮಾ ಇದು ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಅಂತಹ ಸಿನಿಮಾದಲ್ಲಿ ಇವರಿಗೆ ಅವಕಾಶ ಸಿಕ್ಕಿದೆ ಎಂದರೆ ಇವರ ಟ್ಯಾಲೆಂಟ್ ಏನು ಎಂಬುದನ್ನು ನೀವು ತಿಳಿದುಕೊಳ್ಳಬಹುದು. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ ಮತ್ತು ರಂಭಾ ಅವರು ಸಾಯಿ ಪಲ್ಲವಿ ಬಗ್ಗೆ ಅವರು ಅಂದೇ ಹೊಗಳಿದ್ದರು. ಅದು ಈಗ ನಿಜವಾಗಿದೆ.
ಸಾಯಿ ಪಲ್ಲವಿ ಅವರು ಎಲ್ಲಾ ಹೀರೋಯಿನ್ಗಳಂತೆ ಅಂತೆ ಅಲ್ಲ. ಅವರು ಎಲ್ಲರಿಗಿಂತ ಭಿನ್ನ ಎಂದೇ ಹೇಳಬಹುದು. ಏಕೆಂದರೆ ಅವರು ಎಂದಿಗೂ ಮೇಕಪ್ ಹಾಕಲ್ಲ. ಬಿಕಿನಿ ಅಥವಾ ಹಾಟ್ ಡ್ರೆಸ್ ಹಾಕಲ್ಲ. ಈ ಕಾರಣಕ್ಕೆ ಇರಬಹುದು ಅವರಿಗೆ ಸೀತೆಯ ಪಾತ್ರ ಸಿಕ್ಕಿದೆ. ಈ ಮೊದಲು ಅವರು ಕೆಲವು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ವಿಡಿಯೋ ಇದಾಗಿದೆ.
ಸಾಯಿ ಪಲ್ಲವಿ ಅವರು ನಟಿ ಮಾತ್ರ ಅಲ್ಲ ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ಅವರು ಈ ಮೊದಲು ಇಟಿವಿಯ ರಿಯಾಲಿಟಿ ಶೋಗೆ ಬಂದಿದ್ದರು. ಆ ಶೋನಲ್ಲಿ ರಂಭಾ ಅವರು ಜಡ್ಜ್ ಆಗಿದ್ದರು. ಅವರು ಸಾಯಿ ಪಲ್ಲವಿ ಅವರ ಕಲೆಯನ್ನು ಆಗಲೇ ಗುರುತಿಸಿದ್ದರು ಮತ್ತು ಅವರು ಅಂದು ಸಾಯಿ ಪಲ್ಲವಿ ಅವರ ಬಗ್ಗೆ ಮೆಚ್ಚುಗೆ ಹೊರಹಾಕಿದ್ದರು. ಅವರ ಕಲೆಯನ್ನು ಅಂದೇ ಗುರುತಿಸಿದ್ದರು ಎಂದೇ ಹೇಳಬಹುದು. ಆ ಸಂದರ್ಭದ ವಿಡಿಯೋ ಗಮನ ಸೆಳೆಯುತ್ತಿದೆ.
‘ಸಾಯಿ ಪಲ್ಲವಿ, ಕೊಂಚ ತಿರುಗಿ, ಐಶ್ವರ್ಯಾ ರೈ ರೀತಿ ಇದೀರಾ. ಎರಡಕ್ಕೆ ತಿರುಗಿ, ಮಾಧುರಿ ರೀತಿ ಇದೀರಾ. ಡ್ಯಾನ್ಸ್ ಸರೋಜ್ ಖಾನ್ ರೀತಿ ಇದೀರಾ. ಸೂಪರ್ ಆಗಿದೀರಾ’ ಎಂದು ರಂಭಾ ಅವರು ಹೇಳಿದ್ದರು. ಅದು ನಿಜವಾಗಿದೆ ಎಂದು ಅನೇಕರು ಹೇಳಿದ್ದರು. ಸಾಯಿ ಪಲ್ಲವಿ ಅವರು ವಿವಿಧ ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಅವರ ಪಾತ್ರವು ನೈಸರ್ಗಿಕವಾಗಿ ಇರುತ್ತದೆ. ಈ ಕಾರಣದಿಂದಲೇ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ.
ಬೆಂಗಳೂರು, ಮಾರ್ಚ್ 10: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.
ಎಲ್ಲೆಲ್ಲಿ ಒಣ ಹವೆ?
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಮಾರ್ಚ್ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ
ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 10, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಸಪ್ತಮಿ, ಅನುರಾಧ ನಕ್ಷತ್ರ, ವೃಷಿಣ ಯೋಗ ಮತ್ತು ಭದ್ರಕರಣವನ್ನು ಹೊಂದಿದೆ.
ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 12:30 ರವರೆಗೆ ಇರುತ್ತದೆ. ಈ ಮಂಗಳವಾರ ಸುಬ್ರಹ್ಮಣ್ಯ, ಕುಜ ಮತ್ತು ಹನುಮಂತನ ಲಹರಿಗಳು ಇವೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುತ್ತಾನೆ. ಈ ದಿನ ಜನ್ಮದಿನ ಅಥವಾ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಗುರೂಜಿಯವರು ಶುಭ ಹಾರೈಸಿದ್ದಾರೆ.
ರಶ್ಮಿಕಾ ಮಂದಣ್ಣ (Rashmika Mandanna) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ವಿಜಯ್ ದೇವರಕೊಂಡ ಅವರನ್ನು ವಿವಾಹ ಆಗುವ ಮೂಲಕ ಅವರು ಎಲ್ಲರ ಗಮನ ಸೆಳೆದರು. ಈಗ ರಶ್ಮಿಕಾ-ವಿಜಯ್ ನಟನೆಯಿಂದ ಒಂದು ಬ್ರೇಕ್ ಪಡೆದುಕೊಂಡಿದ್ದು, ಹಾಯಾಗಿ ಸುತ್ತಾಡುತ್ತಿದ್ದಾರೆ. ಈ ಮಧ್ಯೆ ರಶ್ಮಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದು ಸಂದೇಶ ನೀಡಿದ್ದಾರೆ. ‘ನಿಮ್ಮನ್ನು ಸ್ವತಂತ್ರ್ಯಗೊಳಿಸುವ ಪ್ರೀತಿ ಹುಡುಕಿಕೊಳ್ಳಿ’ ಎಂದು ಅವರು ಹೇಳಿದ್ದಾರೆ.
ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅದ್ದೂರಿಯಾಗಿ ವಿವಾಹ ಆದರು. ಮದುವೆ ಬಳಿಕ ವಿಜಯ್ ಹುಟ್ಟೂರಿನಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಹೈದರಾಬಾದ್ನಲ್ಲಿಯೂ ಆರತಕ್ಷತೆ ಮಾಡಲಾಯಿತು. ಈಗ ರಶ್ಮಿಕಾಗೋಸ್ಕರ ಪ್ರೀತಿಯ ಸಂದೇಶವನ್ನು ಒಬ್ಬರು ಬರೆದುಕೊಂಡಿದ್ದರು. ಇದು ರಶ್ಮಿಕಾ ಅವರನ್ನು ಭಾವನಾತ್ಮಕವಾಗಿಸಿತು.
ಧಾಮಿನಿ ಎಂಬುವವರು ರಶ್ಮಿಕಾ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದರು. ಈ ಟ್ವೀಟ್ನ ರಶ್ಮಿಕಾ ರೀಟ್ವೀಟ್ ಮಾಡಿದ್ದಾರೆ. ‘ಇಷ್ಟು ದಿನ ನನ್ನ ಬಗ್ಗೆ ಬರೆದದ್ದನ್ನು ಓದಿ ನಾನು ಇಷ್ಟೊಂದು ಭಾವನಾತ್ಮಕವಾಗಿ ವರ್ತಿಸಿಲ್ಲ. ನಾನು ಹೇಳಲು ಬಯಸುವುದು ಬಹಳಷ್ಟಿದೆ. ಆದರೆ ನಾನು ಹೇಳೋದು ತುಂಬಾ ಕಡಿಮೆ. ನಾನು ನನ್ನದೇ ಆದ ಜಾಗವನ್ನು ಹುಡುಕುತ್ತಿದ್ದೆ. ಅದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅದನ್ನು ಗುರುತಿಸಿದ್ದಕ್ಕಾಗಿ ಧನ್ಯವಾದಗಳು. ಪ್ರೀತಿಯ ಬಗ್ಗೆ ನಾನು ಹೇಳುವುದು ಇಷ್ಟೇ, ‘ನಿಮ್ಮನ್ನು ಮುಕ್ತಗೊಳಿಸುವ ಅಥವಾ ಸ್ವತಂತ್ರಗೊಳಿಸುವ ಪ್ರೀತಿಯನ್ನು ಕಂಡುಕೊಳ್ಳಿ’ ಎಂದು ಅವರು ಬರೆದುಕೊಂಡಿದ್ದಾರೆ.
I have never become so emotional reading something written about me this much in a long long time..
There is so much I want to say but so little I can say.
I am finding my own room and that’s a journey I am so grateful for..
Thankyou for recognising it..