ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ? ಜಾರಕಿಹೊಳಿ ಏನಂದ್ರು ನೋಡಿ

ಬೆಂಗಳೂರು, ಮೇ 29: ಸಿದ್ದರಾಮಯ್ಯ ಬೆನ್ನಿಗೆ ಅವರ ಆಪ್ತರು ಚೂರಿ ಹಾಕಿದ ಆರೋಪಗಳಿಗೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ನ ಪೂರ್ವ ನಿರ್ಧರಿತ ಒಪ್ಪಂದದಂತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಇದು ಯಾವುದೇ ರೀತಿಯ ಆಂತರಿಕ ರಾಜಕೀಯ ಸಂಘರ್ಷದ ಪ್ರಶ್ನೆಯೇ ಅಲ್ಲ ಎಂದು ಜಾರಕಿಹೊಳಿ ದೃಢಪಡಿಸಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆದಿರುವ ವರದಿಗಳನ್ನು, ಆರೋಪಗಳನ್ನು ಸುಳ್ಳು ಎಂದು ಜಾರಕಿಹೊಳಿ ತಳ್ಳಿಹಾಕಿದರು. ಅಂತಹ ಯಾವುದೇ ಸಹಿ ಹೈಕಮಾಂಡ್‌ಗೆ ತಲುಪಿಲ್ಲ ಅಥವಾ ಅದರ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದರು. ಇದು ಯಾರೋ ವಾಟ್ಸ್‌ಆ್ಯಪ್ ಅಥವಾ ಟ್ವೀಟರ್‌ನಲ್ಲಿ ಹರಿಬಿಟ್ಟ ಸುಳ್ಳು ಸುದ್ದಿ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅನುಪಸ್ಥಿತಿ ಕಾಂಗ್ರೆಸ್‌ಗೆ ಕಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ರಾಜ್ಯ ರಾಜಕಾರಣದಲ್ಲಿಯೇ ಇರಲಿದ್ದಾರೆ ಎಂದರು. 2028ರಲ್ಲಿ ಪಕ್ಷವನ್ನು ಗೆಲ್ಲಿಸಲು ಕೆಲಸ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟ ರಚನೆಯಾದ ನಂತರ ಅವರ ಅನುಭವವನ್ನು ಪಕ್ಷವು ಸೂಕ್ತ ಸಮಯದಲ್ಲಿ ಬಳಸಿಕೊಳ್ಳಲಿದೆ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೂರ್ಯ ನಟನೆಯ ಹಿಟ್ ಸಿನಿಮಾಕ್ಕೆ ‘ಕಾಂತಾರ’, ‘ಸಪ್ತ ಸಾಗರದಾಚೆ’ ಸ್ಪೂರ್ತಿ

ಸೂರ್ಯ (Suriya) ಹಾಗೂ ತ್ರಿಷಾ (Trisha Krishnan) ನಟಿಸಿ ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿರುವ ‘ಕರುಪ್ಪು’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ದೊಡ್ಡ ಹಿಟ್ ಆಗಿದೆ. ಸತತ ಸೋಲು ಕಾಣುತ್ತಿದ್ದ ಸೂರ್ಯಗೆ ಮತ್ತೆ ಮರು ಜೀವ ನೀಡಿದೆ ಈ ಸಿನಿಮಾ. ಬಾಕ್ಸ್ ಆಫೀಸ್​​ನಲ್ಲಿ ಈಗಾಗಲೇ 200 ಕೋಟಿಗೂ ಹೆಚ್ಚು ಮೊತ್ತ ಗಳಿಸಿದ್ದು, ಭರ್ಜರಿ ಗಳಿಕೆಯನ್ನು ಮುಂದುವರೆಸಿದೆ. ಭಿನ್ನ ಕತೆಯುಳ್ಳ ಈ ಸಿನಿಮಾಕ್ಕೆ ಕನ್ನಡದ ಎರಡು ಸೂಪರ್ ಹಿಟ್ ಸಿನಿಮಾಗಳು ಸ್ಪೂರ್ತಿಯಂತೆ. ಈ ಬಗ್ಗೆ ಖುದ್ದು ಸಿನಿಮಾದ ನಿರ್ದೇಶಕ ಬಾಲಾಜಿ ಹೇಳಿಕೊಂಡಿದ್ದಾರೆ.

ಹಾಲಿವುಡ್ ರಿಪೋರ್ಟರ್ ಯೂಟ್ಯೂಬ್ ಚಾನೆಲ್​​ಗೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಬಾಲಾಜಿ, ‘ನಾನು ಮೊದಲು ಸಿನಿಮಾಕ್ಕೆ ಒಂದು ಕ್ಲೈಮ್ಯಾಕ್ಸ್ ಬರೆದಿದ್ದೆ ಆದರೆ ಆ ಕ್ಲೈಮ್ಯಾಕ್ಸ್ ನನಗೆ ಇಷ್ಟವಾಗಿರಲಿಲ್ಲ. ನನಗೆ ಏನು ಮಾಡುವುದು ಎಂದು ತೋಚದೆ ಸುಮ್ಮನಾಗಿದ್ದೆ. ಆಗ ಒಮ್ಮೆ ನನ್ನ ಗೆಳೆಯ ಅಮೆರಿಕದಿಂದ ಬಂದ, ನಾನೂ ಹಾಗೂ ಅವನು ಚೆನ್ನೈನ ಮಲ್ಟಿಪ್ಲೆಕ್ಸ್​ ಒಂದರಲ್ಲಿ ಸಿನಿಮಾ ನೋಡಲು ಹೋದೆವು. ಅದು ‘ಕಾಂತಾರ ಚಾಪ್ಟರ್ 1’ ಆಗಿತ್ತು. ಆ ಸಿನಿಮಾ ನೋಡುವಾಗ ಕ್ಲೈಮ್ಯಾಕ್ಸ್ ವೇಳೆ ಸಿನಿಮಾ ನೋಡುತ್ತಿದ್ದ ಪ್ರೇಕ್ಷಕರು ಮಂತ್ರಮುಗ್ಧರಾದಂತೆ ನನಗೆ ಭಾಸಾಯ್ತು. ಅದೂ ಮಲ್ಟಿಪ್ಲೆಕ್ಸ್​​ನಲ್ಲಿ’ ಎಂದು ಅವರು ವಿವರಿಸಿದ್ದಾರೆ.

‘ಆಗ ನನಗೆ ಆ ಐಡಿಯಾ ಅನ್ನು ‘ಕರುಪ್ಪು’ ಸಿನಿಮಾಕ್ಕೆ ಬಳಸಬೇಕು ಎನಿಸಿತು. ಏಕೆಂದರೆ ನಾನು ಕರುಪ್ಪು ಸ್ವಾಮಿಯ ಬಗ್ಗೆ ಸಿನಿಮಾ ಮಾಡುತ್ತಿದ್ದೇನೆ. ಆ ಸ್ವಾಮಿಯ ಅಗಾಧತೆ ತೋರಿಸಬೇಕು ಎಂದರೆ ಅದು ಗ್ರ್ಯಾಂಡ್ ಇರಬೇಕು ಎನಿಸಿತು. ಹಾಗಾಗಿ ನಾನು ‘ಕಾಂತಾರ’ದ ದೃಶ್ಯವನ್ನು ಸ್ಪೂರ್ತಿಯಾಗಿಟ್ಟುಕೊಂಡು ‘ಕರುಪ್ಪು’ ಸಿನಿಮಾದ ಕ್ಲೈಮ್ಯಾಕ್ಸ್ ಡಿಸೈನ್ ಮಾಡಿದೆ’ ಎಂದಿದ್ದಾರೆ ಬಾಲಾಜಿ.

ಇದನ್ನೂ ಓದಿ:ಇಳಯರಾಜಾ ಬಗ್ಗೆ ವ್ಯಂಗ್ಯ: ಕ್ಷಮೆಯಾಚಿಸಿದ ‘ಕರುಪ್ಪು’ ಚಿತ್ರತಂಡ

‘ಹಾಗೆಯೇ ನಾನು ಸಿನಿಮಾದ ಒಂದು ಬಿಟ್ ಅನ್ನು ಕನ್ನಡದ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಿಂದ ತೆಗೆದುಕೊಂಡೆ. ನಾನು ನಿರ್ದೇಶಕ ಹೇಮಂತ್ ರಾವ್ ಅವರಿಗೆ ಕರೆ ಮಾಡಿ ತಾವು ಹೀಗೆ ಸಿನಿಮಾದಿಂದ ಒಂದು ಐಡಿಯಾವನ್ನು ತೆಗೆದುಕೊಂಡು ಬಳಸಿಕೊಳ್ಳುತ್ತಿರುವುದಾಗಿ ಹೇಳಿದೆ. ಅದಕ್ಕೆ ಅವರು ಬಹಳ ಖುಷಿಯಿಂದ ಒಪ್ಪಿಗೆ ನೀಡಿದರು’ ಎಂದು ಬಾಲಾಜಿ ಹೇಳಿದ್ದಾರೆ.

ತಾವು ಜಿಮ್ ಕ್ಯಾರಿಯ ಹಾಲಿವುಡ್ ಸಿನಿಮಾದ ಒಂದು ಸೀನ್​ ಇಂದಲೂ ಸ್ಪೂರ್ತಿ ಪಡೆದು ಒಂದು ದೃಶ್ಯವನ್ನು ಸ್ಪೂರ್ತಿಯಾಗಿ ತೆಗೆದುಕೊಂಡಿರುವುದಾಗಿಯೂ ಬಾಲಾಜಿ ಹೇಳಿದ್ದಾರೆ. ಹೇಮಂತ್ ರಾವ್ ಮತ್ತು ರಿಷಬ್ ಅವರನ್ನು ಕೇಳಿ ಅನುಮತಿ ಪಡೆಯುವ ಅವಕಾಶ ಇತ್ತು ಹಾಗಾಗಿ ನಾನು ಪಡೆದುಕೊಂಡೆ ಎಂದು ಸಹ ಬಾಲಾಜಿ ಹೇಳಿದ್ದಾರೆ. ‘ಕರುಪ್ಪು’ ಸಿನಿಮಾವು ಕರುಪ್ಪು ಸ್ವಾಮಿ ದೇವರು ಸಾಮಾಜಿಕ ವಿಷಯದ ಬಗ್ಗೆ ಹೋರಾಡುವ ಕತೆಯನ್ನು ಒಳಗೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

GT vs RR: ಗೆದ್ದ ಇತಿಹಾಸವೇ ಇಲ್ಲ: ಹಿಸ್ಟರಿ ಬದಲಿಸುತ್ತಾ, ಮರುಕಳಿಸುತ್ತಾ?

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2026) ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 31 ರಂದು ನಡೆಯಲಿರುವ ಐಪಿಎಲ್​ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡದ ಐಪಿಎಲ್ ಅಭಿಯಾನ ಅಂತ್ಯಗೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಗೆಲ್ಲಲು ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವುದು ದಿಟ.

ಗೆದ್ದ ಇತಿಹಾಸವೇ ಇಲ್ಲ!

ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್​ನ ಪ್ಲೇಆಫ್​ ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದ ಇತಿಹಾಸವೇ ಇಲ್ಲ. ಅಂದರೆ ಎರಡು ಬಾರಿ ಮುಖಾಮುಖಿಯಾದಾಗಲೂ ಆರ್​ಆರ್ ವಿರುದ್ಧ ಗೆಲ್ಲುವಲ್ಲಿ ಗುಜರಾತ್ ಟೈಟಾನ್ಸ್ ತಂಡ ಯಶಸ್ವಿಯಾಗಿದೆ.

  • 2022ರ ಕ್ವಾಲಿಫೈಯರ್ 1: ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.
  • 2022 ಫೈನಲ್: ಐಪಿಎಲ್​ 2022ರ ಮೊದಲ ಕ್ವಾಲಿಫೈಯರ್​ನಲ್ಲಿ ಸೋತಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ಮೂಲಕ ಫೈನಲ್​ಗೇರಿತ್ತು. ಆದರೆ ಫೈನಲ್​ನಲ್ಲೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 7 ವಿಕೆಟ್​ಗಳ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡವು ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು.

ಬದಲಿಸುತ್ತಾ ಹಿಸ್ಟರಿ?

ಗುಜರಾತ್ ಟೈಟಾನ್ಸ್ ವಿರುದ್ಧ ಪ್ಲೇಆಫ್​ ಹಂತದಲ್ಲಿ 2 ಬಾರಿ ಸೋತಿರುವ ರಾಜಸ್ಥಾನ್ ರಾಯಲ್ಸ್ ಈ ಬಾರಿ ಹಿಸ್ಟರಿ ಬದಲಿಸುತ್ತಾ? ಎಂಬುದೇ ಕುತೂಹಲ. ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸತತ 6 ಪಂದ್ಯಗಳಲ್ಲಿ ಸೋತಿದ್ದ ರಾಜಸ್ಥಾನ್ ರಾಯಲ್ಸ್ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ದ್ವಿತೀಯ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಅರ್ಹತೆಯೊಂದಿಗೆ ಇದೀಗ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಅತ್ತ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲಿನ ಸರಪಳಿ ಕಳಚಿರುವ ರಾಜಸ್ಥಾನ್ ರಾಯಲ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ ಕೂಡ ಗೆಲ್ಲಲಿದೆಯಾ ಎಂಬುದೇ ಸದ್ಯ ಕುತೂಹಲ.

ಮರುಕಳಿಸುತ್ತಾ ಇತಿಹಾಸ?

ಅತ್ತ ರಾಜಸ್ಥಾನ್ ರಾಯಲ್ಸ್ ಹಿಸ್ಟರಿ ಬದಲಿಸಲು ಪ್ಲ್ಯಾನ್ ರೂಪಿಸುತ್ತಿದ್ದರೆ, ಇತ್ತ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ನಲ್ಲಿ ಆರ್​ಆರ್​ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಲು ಯೋಜನೆ ಸಿದ್ಧಪಡಿಸುತ್ತಿದ್ದಾರೆ. ಅಂದರೆ 2022ರ ಕ್ವಾಲಿಫೈಯರ್​ ಪಂದ್ಯದ ಫಲಿತಾಂಶವನ್ನೇ ಮರು ಸೃಷ್ಟಿಸಲು ಗುಜರಾತ್ ಟೈಟಾನ್ಸ್ ಪ್ಲ್ಯಾನ್ ರೂಪಿಸಿಕೊಂಡಿದೆ.

ಇದನ್ನೂ ಓದಿ: AB de Villiers: ವೈಭವ್​ನ ನೋಡಿದಾಗ ನನಗೆ ಆ ಬ್ಯಾಟರ್​ ನೆನಪಾಗ್ತಾರೆ!

ಈ ಪ್ಲ್ಯಾನ್​ಗೆ ಮರು ಪ್ಲ್ಯಾನ್ ರೂಪಿಸಿ ರಾಜಸ್ಥಾನ್ ರಾಯಲ್ಸ್ ಫೈನಲ್​ಗೇರಲಿದೆಯಾ? ಅಥವಾ ಗುಜರಾತ್ ಟೈಟಾನ್ಸ್ ಮೂರನೇ ಬಾರಿ ಫೈನಲ್​ಗೆ ಎಂಟ್ರಿ ಕೊಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Source link

ನಮ್ಮ ದೊಡ್ಡ ಸಿಂಹಗಳಿಗೆ ಅಭಿನಂದನೆಗಳು: ವಿಜಯ ಮಲ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಳೂರು (RCB) ತಂಡ ಫೈನಲ್​ಗೇರಿದೆ. ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 92 ರನ್​ಗಳ ಅಮೋಘ ಗೆಲುವು ದಾಖಲಿಸಿರುವ ಆರ್​ಸಿಬಿ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಹೀಗೆ ಐತಿಹಾಸಿಕ ಸಾಧನೆ ಮಾಡಿರುವ ಆರ್​ಸಿಬಿ ತಂಡವನ್ನು ಅಭಿನಂದಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾಲೀಕರಾದ ವಿಜಯ ಮಲ್ಯ ಟ್ವೀಟ್ ಮಾಡಿದ್ದಾರೆ.

“ಧರ್ಮಶಾಲಾದಲ್ಲಿ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ನಮ್ಮ ದೊಡ್ಡ ಸಿಂಹಗಳಿಗೆ ಹಾರ್ದಿಕ ಅಭಿನಂದನೆಗಳು. ಬೆಂಗಳೂರಿನ ಸಿಂಹಗಳಂತೆ ನೀವು ಜೋರಾಗಿ ಗರ್ಜಿಸಿದ್ದೀರಿ. ಹಾಲಿ ಚಾಂಪಿಯನ್ಸ್ ಆಗಿ ಮತ್ತೊಮ್ಮೆ ಐಪಿಎಲ್ ಫೈನಲ್‌ಗೆ ಲಗ್ಗೆ ಇಟ್ಟಿದ್ದೀರಿ,” ಎಂದು ವಿಜಯ ಮಲ್ಯ ಎಕ್ಸ್​ ಖಾತೆಯಲ್ಲಿಬರೆದುಕೊಂಡಿದ್ದಾರೆ.

ವಿಜಯ ಮಲ್ಯ ಅವರ ಈ ಟ್ವೀಟ್ ಭಾರೀ ವೈರಲ್ ಆಗಿದ್ದು, ಆರೆ್​ಸಿಬಿ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತದೆ. ಅಂದಹಾಗೆ ವಿಜಯ್ ಮಲ್ಯ ಆರ್​ಸಿಬಿ ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.

ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದಾದ ಬಳಿಕ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿತ್ತು, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಬಿರ್ಲಾ ಒಕ್ಕೂಟ ಖರೀದಿಸಿದೆ.

ಫೈನಲ್ ಪಂದ್ಯ ಯಾವಾಗ?

ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯವು ಮೇ 31 ರಂದು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ಅಥವಾ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ. ಅಂದರೆ ಮೇ 29 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ.

ಇದನ್ನೂ ಓದಿ: IPL 2026: ಆರೆಂಜ್ ಕ್ಯಾಪ್​ಗಾಗಿ ನಾಲ್ವರ ನಡುವೆ ನೇರ ಪೈಪೋಟಿ

ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೇರಿದರೆ, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.

Source link

‘ಪೆದ್ದಿ’ ಚಿತ್ರಕ್ಕೆ ಸರ್ಕಾರದಿಂದ ಬಂಪರ್ ಆಫರ್: ಟಿಕೆಟ್ ದರ ಹೆಚ್ಚಳ, ಪ್ರೀಮಿಯರ್ ಶೋಗಳಿಗೆ ಗ್ರೀನ್ ಸಿಗ್ನಲ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಬುಚ್ಚಿ ಬಾಬು ಸನಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ (Peddi Movie) ಈಗಾಗಲೇ ಚಿತ್ರರಂಗದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹಳ್ಳಿಯ ಯುವಕನ ಪಾತ್ರದಲ್ಲಿ ರಾಮ್ ಚರಣ್ ಕಣ್ಮನ ಸೆಳೆಯುತ್ತಿದ್ದರೆ, ಅವರಿಗೆ ಜೋಡಿಯಾಗಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಸಿನಿಮಾದ ಟ್ರೈಲರ್‌ನಲ್ಲಿ ಚರಣ್ ಅವರ ಖಡಕ್ ನಟನೆ ಮತ್ತು ಆಕ್ಷನ್ ದೃಶ್ಯಗಳು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಆಕಾಶಕ್ಕೆ ಮುಟ್ಟಿಸಿವೆ. ಈಗ ಸಿನಿಮಾಗೆ ಒಂದು ಗುಡ್ ನ್ಯೂಸ್ ಕೂಡ ಸಿಕ್ಕಿದೆ.

ಬುಚ್ಚಿ ಬಾಬು ಸನಾ ಅವರು ಹಲವು ವರ್ಷಗಳ ಸುದೀರ್ಘ ಗ್ಯಾಪ್ ನಂತರ ನಿರ್ದೇಶಿಸುತ್ತಿರುವ ಚಿತ್ರ ಇದಾಗಿರುವುದರಿಂದ ಹಾಗೂ ಚರಣ್ ಅವರ ಮಾಸ್ ಲುಕ್ ಸಖತ್ ಹೈಪ್ ಕ್ರಿಯೇಟ್ ಮಾಡಿರುವುದರಿಂದ ಸಿನಿಪ್ರೇಕ್ಷಕರು ಜೂನ್ 4 ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿಕೊಂಡಿರುವ ‘ಪೆದ್ದಿ’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುವುದು ಗ್ಯಾರಂಟಿ ಎನ್ನಲಾಗುತ್ತಿದೆ.

ಮೆಗಾ ಅಭಿಮಾನಿಗಳಿಗೆ ಆಂಧ್ರ ಪ್ರದೇಶ ಸರ್ಕಾರದ ಬಂಪರ್ ಸುದ್ದಿ!

ಚಿತ್ರದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಆಂಧ್ರ ಪ್ರದೇಶ (AP) ಸರ್ಕಾರ ಮೆಗಾ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ‘ಪೆದ್ದಿ’ ಚಿತ್ರದ ವಿಶೇಷ ಪ್ರದರ್ಶನ ಹಾಗೂ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ.

ವಿಶೇಷ ಪ್ರೀಮಿಯರ್ ಶೋಗಳು: ಚಿತ್ರ ಬಿಡುಗಡೆಯಾಗುವ ಮುನ್ನಾ ದಿನವೇ, ಅಂದರೆ ಜೂನ್ 3 ರಂದು ರಾತ್ರಿ 8 ಗಂಟೆಯಿಂದಲೇ ವಿಶೇಷ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸಲು ಸರ್ಕಾರ ಅನುಮತಿ ನೀಡಿದೆ.

ದಿನಕ್ಕೆ 5 ಪ್ರದರ್ಶನ: ಸಿನಿಮಾ ಬಿಡುಗಡೆಯಾದ ಮೊದಲ ವಾರದವರೆಗೆ ಪ್ರತಿದಿನ 5 ಶೋಗಳನ್ನು ಪ್ರದರ್ಶಿಸಲು ಥಿಯೇಟರ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಟಿಕೆಟ್ ದರ ಹೆಚ್ಚಳ: ಸರ್ಕಾರದ ಆದೇಶದಂತೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ 100 ರೂ. ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ 125 ರೂ. ವರೆಗೆ ಟಿಕೆಟ್ ದರವನ್ನು ಹೆಚ್ಚಿಸಿಕೊಳ್ಳಬಹುದು.

ಪ್ರೀಮಿಯರ್ ಶೋ ದರ: ಜೂನ್ 3 ರಂದು ನಡೆಯಲಿರುವ ವಿಶೇಷ ಪ್ರೀಮಿಯರ್ ಶೋಗಳ ಟಿಕೆಟ್ ದರವನ್ನು ಗರಿಷ್ಠ 600 ರೂ. ಎಂದು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ‘ಪೆದ್ದಿ’ ಸಿನಿಮಾದಲ್ಲಿ ನೆಗೆಟಿವ್ ಶೇಡ್ ಪಾತ್ರ? ಶಿವಣ್ಣ ಹೇಳಿದ್ದಿಷ್ಟು

ಸರ್ಕಾರದ ಈ ನಿರ್ಧಾರದಿಂದ ಮೆಗಾ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಜೂನ್ 4 ರಂದು ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಯಾವ ರೀತಿಯ ಹೊಸ ದಾಖಲೆಗಳನ್ನು ಬರೆಯಲಿದೆ ಎಂಬುದನ್ನು ನೋಡಲು ಚಿತ್ರರಂಗ ಕಾಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Job Opportunity: ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನಾಳೆ ನೇರ ಸಂದರ್ಶನ!

ಮಂಗಳೂರಿನಲ್ಲಿ ಉದ್ಯೋಗಾವಕಾಶImage Credit source: Pinterest

ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಕರ್ನಾಟಕ ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದಕ್ಷಿಣ ಕನ್ನಡ ಜಿಲ್ಲೆ) ಜಂಟಿಯಾಗಿ “ನೇರ ಸಂದರ್ಶನ” (Walk-in Interview) ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರತಿಷ್ಠಿತ ‘ವಿ.ಆರ್.ಎನ್ ಇನ್ನೋಟೆಕ್’ (VRN Innotech) ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಖಾಲಿ ಇರುವ ಹುದ್ದೆಗಳು ಮತ್ತು ಅಗತ್ಯವಿರುವ ಶೈಕ್ಷಣಿಕ ಅರ್ಹತೆ:

ಈ ಉದ್ಯೋಗ ಮೇಳದಲ್ಲಿ ಪ್ರಮುಖವಾಗಿ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ (Customer Support Executive) ಮತ್ತು ಟೆಲಿಕಾಲರ್ (Telicaller) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Any Degree) ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಭಾಷಾ ಪ್ರಾವೀಣ್ಯತೆಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳಿಗೆ ಮಲಯಾಳಂ, ಹಿಂದಿ, ಇಂಗ್ಲಿಷ್ ಅಥವಾ ತಮಿಳು ಭಾಷೆಗಳಲ್ಲಿ ಯಾವುದಾದರೂ ಒಂದು ಅಥವಾ ಹೆಚ್ಚಿನ ಭಾಷೆಗಳ ಜ್ಞಾನವಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಸಂದರ್ಶನ ನಡೆಯುವ ದಿನಾಂಕ, ಸಮಯ ಮತ್ತು ಸ್ಥಳದ ವಿವರಗಳು:

ಈ ನೇರ ಸಂದರ್ಶನವನ್ನು ಮೇ 30 ರಂದು (ಶನಿವಾರ) ಆಯೋಜಿಸಲಾಗಿದೆ. ಸಂದರ್ಶನವು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 01:00 ಗಂಟೆಯವರೆಗೆ ಮಾತ್ರ ನಡೆಯಲಿದ್ದು, ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಹಾಜರಾಗಬೇಕಿರುತ್ತದೆ.

ಸಂದರ್ಶನ ನಡೆಯುವ ನಿಖರ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ: 04, ನೆಲಮಹಡಿ, ಪ್ರಜಾ ಸೌಧ, ಜಿಲ್ಲಾಡಳಿತ ಭವನ ಕಟ್ಟಡ, ಪಡೀಲ್, ಮಂಗಳೂರು – 575 007.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು ಮತ್ತು ಸಂಪರ್ಕ ಮಾಹಿತಿ:

ಈ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನು ಒಳಗೊಂಡ ಅಪ್ಡೇಟೆಡ್ ಬಯೋಡೇಟಾ (Resume/CV) ದೊಂದಿಗೆ ನೇರವಾಗಿ ಸಂದರ್ಶನ ಸ್ಥಳಕ್ಕೆ ಬರಬೇಕಾಗಿ ವಿನಂತಿಸಲಾಗಿದೆ. ಅತ್ಯಂತ ಪ್ರಮುಖ ವಿಷಯವೆಂದರೆ, ಈ ಉದ್ಯೋಗ ಸಂದರ್ಶನ ಕಾರ್ಯಕ್ರಮವು ಸಂಪೂರ್ಣವಾಗಿ ಉಚಿತವಾಗಿದ್ದು, ಅಭ್ಯರ್ಥಿಗಳು ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಈ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಂದೇಹಗಳಿದ್ದಲ್ಲಿ ಅಭ್ಯರ್ಥಿಗಳು ಅಧಿಕೃತ ದೂರವಾಣಿ ಸಂಖ್ಯೆ 0824 2457139 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: 30 ಸೆಕೆಂಡುಗಳಲ್ಲಿ ಹಲವರಿಗೆ ಕಚ್ಚಿದ ಬೀದಿ ನಾಯಿ

ಬೀದಿ ನಾಯಿಯೊಂದು ಕೇವಲ 30 ಸೆಕೆಂಡುಗಳ ಅವಧಿಯಲ್ಲಿ ರಸ್ತೆಯಲ್ಲಿದ್ದ ಹಲವು ಯುವಕರ ಮೇಲೆ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿರುವ ಭೀಕರ ಘಟನೆ ನಡೆದಿದೆ. ನಾಯಿಯ ಆಕ್ರಮಣಕಾರಿ ದಾಳಿಯಿಂದ ದಿಕ್ಕೆಟ್ಟ ಯುವಕರು ಪ್ರಾಣಭಯದಿಂದ ಓಡಿದ್ದಾರೆ. ಈ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಎಷ್ಟೇ ಓಡಿದರೂ, ಕುರ್ಚಿಯಲ್ಲಿ ಹೊಡೆದರೂ ಕೂಡ ನಾಯಿ ಬಿಡದೆ ಒಬ್ಬರಾದ ಮೇಲೆ ಒಬ್ಬರಿಗೆ ಕಚ್ಚಿದೆ. ಘಟನೆ ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಿಲ್ಲ. ಯುವಕರು ಮಾತನಾಡುತ್ತಾ ಕುಳಿತಿರುವಾಗ ಹಿಂದಿನಿಂದ ನಾಯಿ ದಾಳಿ ಮಾಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಮೆರಿಕನಲ್ಲಿ ‘ಪೆದ್ದಿ’ ಟಿಕೆಟ್ ದರ ಹಾಲಿವುಡ್ ಸಿನಿಮಾಗಳಿಗೂ ಹೆಚ್ಚು: ಅಭಿಮಾನಿಗಳ ಬೇಸರ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಭಾರತದ ಸಿನಿಮಾಗಳಿಗೆ ವಿಶೇಷವಾಗಿ ತೆಲುಗು ಸಿನಿಮಾಗಳಿಗೆ ಭಾರತದಲ್ಲಿ ಇರುವಷ್ಟೆ ಬೇಡಿಕೆ ಅಮೆರಿಕದಲ್ಲೂ ಇದೆ. ಅದರಲ್ಲೂ ಉತ್ತರ ಅಮೆರಿಕನಲ್ಲಿ ತೆಲುಗು ಸಿನಿಮಾಗಳು ಭರ್ಜರಿ ಗಳಿಕೆ ಮಾಡುತ್ತವೆ. ಇದೇ ಕಾರಣಕ್ಕೆ ‘ಪೆದ್ದಿ’ ಸಿನಿಮಾವನ್ನು ಅಮೆರಿಕದಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗುತ್ತಿದೆ. ಆದರೆ ‘ಪೆದ್ದಿ’ ಸಿನಿಮಾಕ್ಕೆ ನಿಗದಿಪಡಿಸಿರುವ ಟಿಕೆಟ್ ದರಗಳು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಿನಿಮಾ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ.

‘ಪೆದ್ದಿ’ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಈಗಾಗಲೇ ಅಮೆರಿಕದಲ್ಲಿ ಆರಂಭವಾಗಿದೆ. ಆದರೆ ಸಿನಿಮಾದ ಟಿಕೆಟ್ ದರಗಳು ಸಿನಿಮಾ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ. ಬಹು ನಿರೀಕ್ಷಿತ ಹಾಲಿವುಡ್ ಸಿನಿಮಾದ ಟಿಕೆಟ್ ದರಕ್ಕಿಂತಲೂ ಹೆಚ್ಚಿನ ದರವನ್ನು ‘ಪೆದ್ದಿ’ ಸಿನಿಮಾಕ್ಕೆ ಅಮೆರಿಕದಲ್ಲಿ ನಿಗದಿ ಪಡಿಸಲಾಗಿದೆ. ‘ಪೆದ್ದಿ’ ಸಿನಿಮಾದ ಪ್ರೀಮಿಯರ್ ಶೋಗೆ 20 ರಿಂದ 25 ಡಾಲರ್ ನಿಗದಿ ಪಡಿಸಲಾಗಿದೆ. (ರೂಪಾಯಿ ಲೆಕ್ಕದಲ್ಲಿ 2000 ಇಂದ 2350ರವರೆಗೆ). ‘ಪೆದ್ದಿ’ ಸಿನಿಮಾದ ಮೊದಲ ವಾರದ ಟಿಕೆಟ್ ದರ 18 ರಿಂದ 20 ಡಾಲರ್ ಇದೆ. ಇದು ಬಲು ದುಬಾರಿ ಮೊತ್ತ.

‘ಪೆದ್ದಿ’ ಸಿನಿಮಾದ ಸ್ಪೆಷಲ್ ಥಿಯೇಟರ್ (ಡಿ-ಬಾಕ್ಸ್) ಬೆಲೆ 42 ಡಾಲರ್ ಇವೆ. ಅಂದರೆ ಭಾರತೀಯ ರೂಪಾಯಿ ಲೆಕ್ಕದಲ್ಲಿ ಸುಮಾರು 5000 ರೂಪಾಯಿಗಳು. ಹಾಲಿವುಡ್​​ನ ಈ ವರ್ಷದ ಬಲು ನಿರೀಕ್ಷಿತ ಸಿನಿಮಾ, ಕ್ರಿಸ್ಟೊಫರ್ ನೋಲನ್ ನಿರ್ದೇಶನದ ‘ಒಡೆಸ್ಸಿ’ ಸಿನಿಮಾದ ಟಿಕೆಟ್ ದರವೇ 30 ಡಾಲರ್ ಇದೆ. ಅದೂ ಐಮ್ಯಾಕ್ಸ್​​ನಲ್ಲಿ. ಬಲು ನಿರೀಕ್ಷಿತ ಹಾಲಿವುಡ್ ಸಿನಿಮಾವನ್ನೂ ಸಹ ಮೀರಿಸಿದೆ ‘ಪೆದ್ದಿ’ ಟಿಕೆಟ್ ದರದಲ್ಲಿ.

ಇದನ್ನೂ ಓದಿ:ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು?

‘ಪೆದ್ದಿ’ ಸಿನಿಮಾದ ಟಿಕೆಟ್ ದರಗಳ ಬಗ್ಗೆ ಅಮೆರಿಕದ ಭಾರತೀಯ ಸಿನಿಮಾ ಪ್ರೇಮಿಗಳು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹಂಚಿಕೊಳ್ಳುತ್ತಿದ್ದಾರೆ. ‘ಧುರಂಧರ್ 1’ ಮತ್ತು ‘ಧುರಂಧರ್ 2’ ಎರಡೂ ಸಿನಿಮಾಗಳ ಒಟ್ಟು ಟಿಕೆಟ್ ದರಕ್ಕಿಂತಲೂ ‘ಪೆದ್ದಿ’ ಸಿನಿಮಾದ ಟಿಕೆಟ್ ದರ ಹೆಚ್ಚಿದೆ ಎಂದು ಕೆಲವರು ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರತದಲ್ಲಿ ‘ಪೆದ್ದಿ’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇನ್ನೂ ಪ್ರಾರಂಭ ಆಗಿಲ್ಲ. ಆದರೆ ಇಲ್ಲಿಯೂ ಸಹ ಟಿಕೆಟ್​​ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವುದು ಖಾತ್ರಿ ಎಂಬಂತಾಗಿದೆ.

ಬೆಂಗಳೂರು, ಮುಂಬೈ ಸೇರಿದಂತೆ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋಗಳನ್ನು ಚಿತ್ರತಂಡ ಆಯೋಜಿಸುತ್ತಿದ್ದು, ಈ ಪ್ರೀಮಿಯರ್ ಶೋಗಳಿಗೆ ಸಾಮಾನ್ಯ ಶೋನ ಎರಡು ಪಟ್ಟು ಹೆಚ್ಚು ಟಿಕೆಟ್ ಬೆಲೆ ನಿಗದಿ ಪಡಿಸಲಿದೆಯಂತೆ ಚಿತ್ರತಂಡ. ಬೆಂಗಳೂರಿನಲ್ಲಿ ಸಹಜವಾಗಿಯೇ ಪರಭಾಷೆ ಸಿನಿಮಾಗಳ ಟಿಕೆಟ್ ದರಗಳು ಬಲು ದುಬಾರಿ ಆಗಿರುತ್ತವೆ. ‘ಪೆದ್ದಿ’ ಸಿನಿಮಾಕ್ಕೆ ಟಿಕೆಟ್ ದರ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 1:33 pm, Fri, 29 May 26

Source link

BSNL Recruitment 2026: ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ

ಬಿಎಸ್‌ಎನ್‌ಎಲ್‌ ಉದ್ಯೋಗ
Image Credit source: Pinterest

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ನೇರ ನೇಮಕಾತಿ (Direct Recruitment) ಯೋಜನೆಯಡಿ ಖಾಲಿ ಇರುವ ಜೂನಿಯರ್ ಟೆಲಿಕಾಂ ಅಧಿಕಾರಿ (JTO – Telecom) ಕೇಡರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಮತ್ತು ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ವೃತ್ತವಾರು ಹಂಚಿಕೆ:

ಈ ನೂತನ ಅಧಿಸೂಚನೆಯ ಅಡಿಯಲ್ಲಿ ದೇಶಾದ್ಯಂತ ಒಟ್ಟು 100 ಜೂನಿಯರ್ ಟೆಲಿಕಾಂ ಅಧಿಕಾರಿ (JTO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿವಿಧ ವಲಯಗಳ ಆಧಾರದ ಮೇಲೆ ಈ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಭಾರತದಾದ್ಯಂತ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ವಿಸ್ತರಣೆಯ ಭಾಗವಾಗಿ ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾಗುವ ವೃತ್ತಿಪರರಿಗೆ ಸಂಸ್ಥೆಯ ತಾಂತ್ರಿಕ ವಿಭಾಗಗಳನ್ನು ಮುನ್ನಡೆಸುವ ಜವಾಬ್ದಾರಿ ಸಿಗಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಸಡಿಲಿಕೆ ವಿವರ:

ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ (B.E) / ಬಿ.ಟೆಕ್ (B.Tech) ಪದವಿ ಮುಗಿಸಿರಬೇಕು ಅಥವಾ ಎಂಎಸ್‌ಸಿ (M.Sc), ಎಂಟೆಕ್ (M.Tech) ಉತ್ತೀರ್ಣರಾಗಿರಬೇಕು. ಇನ್ನು ಅಭ್ಯರ್ಥಿಗಳ ವಯಸ್ಸು ಜುಲೈ 3, 2026 ರ ಅನ್ವಯ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ, ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷಗಳು, ಎಸ್‌ಸಿ/ಎಸ್‌ಟಿ (SC/ST) ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ವಿಕಲಚೇತನ (PwBD) ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ವಿಧಾನ:

ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜುಲೈ 3, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕದ ಭಾಗವಾಗಿ ಸಾಮಾನ್ಯ (General), ಒಬಿಸಿ ಮತ್ತು ಇಡಬ್ಲ್ಯೂಎಸ್ (EWS) ವರ್ಗದ ಅಭ್ಯರ್ಥಿಗಳು 2,000ರೂ. ಪಾವತಿಸಬೇಕಾಗುತ್ತದೆ. ಅದೇ ರೀತಿ ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರಿಯಾಯಿತಿ ಇದ್ದು, ತಲಾ 1,000ರೂ. ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಲಿಖಿತ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆಯ (Medical Exam) ಆಧಾರದ ಮೇಲೆ ಮಾಡಲಾಗುತ್ತದೆ. ಪ್ರಮುಖವಾಗಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400 ರಿಂದ 40,500 ರೂ. ರ ಶ್ರೇಣಿಯಲ್ಲಿ ಆಕರ್ಷಕ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಬಿಎಸ್‌ಎನ್‌ಎಲ್ ಜೆಟಿಒ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರ ಈ ಕೆಳಗಿನಂತಿದೆ:

  • ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: ಜೂನ್ 4, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 3, 2026
  • ಅರ್ಜಿ ಪರಿಷ್ಕರಣೆ (Correction Window) ದಿನಾಂಕ: ಜುಲೈ 4 ರಿಂದ ಜುಲೈ 11, 2026
  • ಲಿಖಿತ ಪರೀಕ್ಷೆ ನಡೆಯುವ ಅಂದಾಜು ಸಮಯ: ಆಗಸ್ಟ್ 2026

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 1:40 pm, Fri, 29 May 26

Source link

ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?

ಬೆಂಗಳೂರು, ಮೇ.29: ನೂತನ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಮಾಜಿ ಸಚಿವರ ಪೈಕಿ 16 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದ್ದು, 13 ಮಂದಿ ಮತ್ತೆ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಕೆ.ಹೆಚ್. ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಲ್ ಮತ್ತು ದಿನೇಶ್ ಗುಂಡುರಾವ್ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ, ನಾಲ್ಕು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಸೃಷ್ಟಿಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ತೀವ್ರಗೊಂಡಿದೆ. ಡಿಸಿಎಂ ಸ್ಥಾನ ಪಡೆಯಲು ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ ಶುರುವಾಗಿದೆ. ಸಮುದಾಯದ ಶಾಸಕರ ಬೆಂಬಲ ಪಡೆಯಲು ನಾಯಕರು ಯೋಜನೆ ರೂಪಿಸುತ್ತಿದ್ದಾರೆ. ಲಿಂಗಾಯತ ಶಾಸಕರ ಜೊತೆಗೆ ಈಶ್ವರ್ ಖಂಡ್ರೆ ಅವರು ಭೋಜನಕೂಟ ಆಯೋಜಿಸಿ ಡಿಸಿಎಂ ಸ್ಥಾನಕ್ಕೆ ಬೆಂಬಲ ಕೋರಿದ್ದಾರೆ. ಎಂ.ಬಿ. ಪಾಟೀಲ್ ಸಹ ಇದೇ ರೀತಿ ಲಿಂಗಾಯತ ಶಾಸಕರನ್ನು ಸಂಪರ್ಕಿಸಿ ತಮ್ಮ ಪರ ಲಾಬಿ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version