40,000 ಕೋಟಿ ರೂ. ಬ್ಯಾಂಕ್ ವಂಚನೆ ಆರೋಪ! ಆರ್‌ಕಾಮ್ ಮತ್ತು ರಿಲಯನ್ಸ್ ಇನ್ಫ್ರಾ ವಿರುದ್ಧ ಇಡಿ ಚಾರ್ಜ್‌ಶೀಟ್ – Kannada News | Anil Ambani’s RCom and Reliance Infra Hit by ED Chargesheet in Rs 40,000 Crore Bank Fraud

ನವದೆಹಲಿ, ಆಗಸ್ಟ್ 10: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರೂಪ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಭಾರಿ ಬಿಗ್ ಶಾಕ್ ನೀಡಿದೆ. ಸುಮಾರು 40,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (RCom) ಮತ್ತು ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಇಡಿ ಶನಿವಾರ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಎರಡು ಪ್ರತ್ಯೇಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ. ಈ ವಂಚನೆ ಪ್ರಕರಣದಲ್ಲಿ ಅನಿಲ್ ಅಂಬಾನಿ (Anil ambani) ಅವರ ಒಡೆತನದ ಎರಡು ಸಂಸ್ಥೆಗಳು ಸೇರಿದಂತೆ ಗೌತಮ್ ದೋಷಿ, ಸತೀಶ್ ಸೇಥ್ ಮತ್ತು ಅಮಿತಾಭ್ ಜುಂಜುನ್‌ವಾಲಾ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

40,186 ಕೋಟಿ ರೂ. ಸಾರ್ವಜನಿಕ ಹಣ ದುರುಪಯೋಗ

ಆರ್‌ಕಾಮ್ ವಿರುದ್ಧ ಸಲ್ಲಿಕೆಯಾಗಿರುವ ಚಾರ್ಜ್‌ಶೀಟ್‌ನಲ್ಲಿ, ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಒಕ್ಕೂಟಕ್ಕೆ ಸಂಸ್ಥೆಯು ಬಾಕಿ ಉಳಿಸಿಕೊಂಡಿರುವ ಮತ್ತು ಸುಸ್ತಿದಾರರಾಗಿರುವ ಒಟ್ಟು 40,186 ಕೋಟಿ ರೂಪಾಯಿಗಳನ್ನು ‘ಅಪರಾಧದ ಆದಾಯ’ (Proceeds of Crime) ಎಂದು ಇಡಿ ಅಂದಾಜಿಸಿದೆ. 1 ಬಿಲಿಯನ್ ಡಾಲರ್ ಮೌಲ್ಯದ ಎಫ್‌ಸಿಸಿಬಿ (FCCB) ನಿಧಿಯ ಬಳಕೆಯ ಬಗ್ಗೆ ಸುಳ್ಳು ಪ್ರಮಾಣಪತ್ರಗಳನ್ನು ಸೃಷ್ಟಿಸಿ, ಹಣವನ್ನು ಬೇರೆಡೆಗೆ ವರ್ಗಾಯಿಸುವಲ್ಲಿ ಮತ್ತು ಮರೆಮಾಚುವಲ್ಲಿ ಆರೋಪಿಗಳು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಉಲ್ಲೇಖಿಸಿದೆ.

ಈ ಹಿನ್ನೆಲೆಯಲ್ಲಿ, ಅನಿಲ್ ಅಂಬಾನಿ ಅವರ ಆಸ್ತಿಗಳು ಸೇರಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕರಿಗೆ ಸೇರಿದ ಈಗಾಗಲೇ ಜಪ್ತಿ ಮಾಡಲಾಗಿರುವ ರೂ. 8,078 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನ್ಯಾಯಾಲಯದ ಅನುಮತಿ ಕೋರಿದೆ.

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಹಣ ಲೂಟಿ

ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ ಮತ್ತೊಂದು ಚಾರ್ಜ್‌ಶೀಟ್‌ನಲ್ಲಿ ಭೀಕರ ವಂಚನೆಯ ಜಾಲ ಬಯಲಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಂಜೂರು ಮಾಡಿದ್ದ ನಾಲ್ಕು ಪ್ರಮುಖ ಟೋಲ್ ರಸ್ತೆ ಯೋಜನೆಗಳಾದ ತಿರುಚಿ-ಕರೂರ್, ತಿರುಚಿ-ದಿಂಡಿಗಲ್, ಸೇಲಂ-ಉಳುಂದೂರ್‌ಪೇಟೆ ಮತ್ತು ಜೈಪುರ-ರೀಂಗಸ್ ಯೋಜನೆಗಳ ಸಾರ್ವಜನಿಕ ಹಣವನ್ನು ವ್ಯವಸ್ಥಿತವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಬ್ಯಾಂಕ್ ಸಾಲಗಳು ಮತ್ತು NHAI ಅನುದಾನದ ಮೂಲಕ ಬಂದಿದ್ದ ಹಣದಲ್ಲಿ ಸುಮಾರು 187 ಕೋಟಿ ರೂಪಾಯಿಗಳನ್ನು 2010ರ ಸೆಪ್ಟೆಂಬರ್-ಅಕ್ಟೋಬರ್ ಅವಧಿಯಲ್ಲಿ ನಕಲಿ ಉಪ-ಗುತ್ತಿಗೆ (Sub-contracting) ಕೆಲಸಗಳ ಹೆಸರಿನಲ್ಲಿ ಬೇರೆಡೆಗೆ ವರ್ಗಾಯಿಸಲಾಗಿತ್ತು. ಈ ವರ್ಗಾವಣೆಯನ್ನು ಅಸಲಿ ವೆಚ್ಚ ಎಂದು ಬಿಂಬಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿತ್ತು. ತದನಂತರ ಈ ಹಣವನ್ನು ಶೆಲ್ ಕಂಪನಿಗಳು ಮತ್ತು ವಜ್ರದ ವ್ಯಾಪಾರಿಗಳ ಮೂಲಕ ಅಕ್ರಮವಾಗಿ ಚಲಾವಣೆ ಮಾಡಲಾಗಿದೆ ಎಂದು ಇಡಿ ಚಾರ್ಜ್‌ಶೀಟ್‌ನಲ್ಲಿ ವಿವರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:40 am, Mon, 10 August 26

Source link

ಕೇಂದ್ರ ಸರ್ಕಾರದ ಕೈಯಲ್ಲಿ ಭಾರತ vs ಬಾಂಗ್ಲಾ ಸರಣಿ ಭವಿಷ್ಯ! – Kannada News | BCCI Seeks Govt Clearance for Bangladesh Tour

ಮುಂಬರುವ ಬಾಂಗ್ಲಾದೇಶf ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕೇಂದ್ರ ಸರ್ಕಾರದ ಅನುಮತಿ ಕೇಳಲು ಮುಂದಾಗಿದೆ. ಉಭಯ ದೇಶಗಳ ನಡುವಿನ ಇತ್ತೀಚಿನ ರಾಜಕೀಯ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ಕ್ರಿಕೆಟ್ ಸಂಬಂಧದಲ್ಲಿ ಏರುಪೇರಾಗಿದೆ. ಈ ಸೂಕ್ಷ್ಮ ಸನ್ನಿವೇಶದಲ್ಲಿ, ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದರೆ ಮಾತ್ರ ಟೀಮ್ ಇಂಡಿಯಾ ಬಾಂಗ್ಲಾದೇಶಕ್ಕೆ ಪ್ರಯಾಣಿಸಲಿದೆ. ಹೀಗಾಗಿ ಬಿಸಿಸಿಐನ ಈ ನಡೆ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ರಾಜತಾಂತ್ರಿಕ ಉದ್ವಿಗ್ನತೆ:

ಕಳೆದ ಕೆಲವು ತಿಂಗಳುಗಳಿಂದ ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳ ನಡುವೆ ತೀವ್ರ ಭಿನ್ನಾಭಿಪ್ರಾಯಗಳು ಮೂಡಿವೆ. ಮೂಲತಃ ಈ ಸರಣಿಯು 2025ರ ಆಗಸ್ಟ್‌ನಲ್ಲಿ ನಡೆಯಬೇಕಿತ್ತು. ಆದರೆ ಬಾಂಗ್ಲಾದೇಶದಲ್ಲಿದ್ದ ರಾಜಕೀಯ ಅಸ್ಥಿರತೆ ಮತ್ತು ಭದ್ರತಾ ಆತಂಕಗಳಿಂದಾಗಿ ಇದನ್ನು ಮುಂದೂಡಲಾಗಿತ್ತು.

ಇತ್ತೀಚೆಗೆ ಐಪಿಎಲ್‌ನ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಸೂಚಿಸಿದ ನಂತರ ವಿವಾದ ಮತ್ತಷ್ಟು ಉಲ್ಬಣಿಸಿತು. ಇದಕ್ಕೆ ಪ್ರತಿಯಾಗಿ, ಬಾಂಗ್ಲಾದೇಶ್ ಸರ್ಕಾರವು ಭಾರತದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್‌ಗೆ ತನ್ನ ತಂಡವನ್ನು ಕಳುಹಿಸಲು ನಿರಾಕರಿಸಿತು.

ಆ ಬಳಿಕ ಬಾಂಗ್ಲಾದೇಶ್​ ತಂಡದ ಸ್ಥಾನದಲ್ಲಿ ಐಸಿಸಿ ಸ್ಕಾಟ್‌ಲ್ಯಾಂಡ್ ತಂಡವನ್ನು ಸೇರಿಸಿತು. ಇದರ ಬೆನ್ನಲ್ಲೇ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ಸಹ ಅನಿರ್ದಿಷ್ಟಾವಧಿಗೆ ನಿಷೇಧಿಸಲಾಗಿತ್ತು.

ಇದೀಗ ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಪ್ರಸ್ತಾವಿತ ವೈಟ್-ಬಾಲ್ ಕ್ರಿಕೆಟ್ ಸರಣಿಯನ್ನು ಸೆಪ್ಟೆಂಬರ್ 2026 ರಲ್ಲಿ ನಡೆಸಲು ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ (BCB) ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ. ಈ ಹಿನ್ನಲೆಯಲ್ಲಿ ಸರಣಿಯಲ್ಲಿ ಭಾಗವಹಿಸಲು ಬಿಸಿಸಿಐ ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ.

ಒಂದು ವೇಳೆ ಭಾರತ ಸರ್ಕಾರವು ಈ ಪ್ರವಾಸಕ್ಕೆ ಹಸಿರು ನಿಶಾನೆ ತೋರಿದರೆ, ಬಿಸಿಸಿಐ ತನ್ನ ಸ್ವದೇಶಿ ಕ್ರಿಕೆಟ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಬಾಂಗ್ಲಾ ಪ್ರವಾಸಕ್ಕೆ ಜಾಗ ಮಾಡಿಕೊಡಲು ಅಫ್ಘಾನಿಸ್ತಾನ್ ವಿರುದ್ಧ ನಿಗದಿಯಾಗಿರುವ ಟಿ20 ಸರಣಿಯನ್ನು ಮುಂದೂಡುವ ಸಾಧ್ಯತೆಯಿದೆ. ಆದರೆ, ಸರ್ಕಾರ ಅನುಮತಿ ನಿರಾಕರಿಸಿದರೆ ಈ ಪ್ರವಾಸ ಸಂಪೂರ್ಣವಾಗಿ ರದ್ದಾಗಲಿದೆ.

ಎಷ್ಟು ಪಂದ್ಯಗಳ ಸರಣಿ?

ಬಾಂಗ್ಲಾದೇಶ್​ ಪ್ರವಾಸದಲ್ಲಿ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿಗಾಗಿ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ 2026ರ ಆಗಸ್ಟ್ 29 ರಿಂದ ಸೆಪ್ಟೆಂಬರ್ 15 ರವರೆಗಿನ ದಿನಾಂಕವನ್ನು ನಿಗದಿಪಡಿಸಿದೆ.

ಏಕದಿನ ಸರಣಿ ವೇಳಾಪಟ್ಟಿ:

  • ಸೆಪ್ಟೆಂಬರ್ 1, 2026: ಮೊದಲನೇ ಏಕದಿನ ಪಂದ್ಯ
  • ಸೆಪ್ಟೆಂಬರ್ 3, 2026: ಎರಡನೇ ಏಕದಿನ ಪಂದ್ಯ
  • ಸೆಪ್ಟೆಂಬರ್ 6, 2026: ಮೂರನೇ ಏಕದಿನ ಪಂದ್ಯ

ಟಿ20 ಸರಣಿ ವೇಳಾಪಟ್ಟಿ:

  • ಸೆಪ್ಟೆಂಬರ್ 9, 2026: ಮೊದಲನೇ ಟಿ20 ಪಂದ್ಯ
  • ಸೆಪ್ಟೆಂಬರ್ 12, 2026: ಎರಡನೇ ಟಿ20 ಪಂದ್ಯ
  • ಸೆಪ್ಟೆಂಬರ್ 13, 2026: ಮೂರನೇ ಟಿ20 ಪಂದ್ಯ

ಒಟ್ಟಾರೆಯಾಗಿ ಹೇಳುವುದಾದರೆ, ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಈ ಪ್ರಸ್ತಾವಿತ ಸರಣಿಯು ಕೇವಲ ಕ್ರೀಡಾ ಮೈದಾನಕ್ಕೆ ಸೀಮಿತವಾಗಿರದೆ, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಮತ್ತು ಭದ್ರತಾ ಸನ್ನಿವೇಶಗಳ ಪರೀಕ್ಷೆಯಾಗಿದೆ. ಕಳೆದ ಕೆಲವು ಸಮಯದಿಂದ ಉಂಟಾಗಿರುವ ಉದ್ವಿಗ್ನತೆಯ ನಡುವೆಯೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಹೊಸ ಚಿಂತೆ: NCA ಸೇರಿದ 13 ಆಟಗಾರರು!

ಆದರೆ, ಟೀಮ್ ಇಂಡಿಯಾ ಬಾಂಗ್ಲಾ ಮಣ್ಣಿಗೆ ಕಾಲಿಡಬೇಕೇ ಬೇಡವೇ ಎಂಬ ಸಂಪೂರ್ಣ ನಿಯಂತ್ರಣ ಈಗ ಭಾರತ ಸರ್ಕಾರದ ಕೈಯಲ್ಲಿದೆ. ಕೇಂದ್ರ ಸರ್ಕಾರದ ಭದ್ರತಾ ಹಸಿರು ನಿಶಾನೆ ಸಿಕ್ಕರೆ ಮಾತ್ರ ಈ ಸರಣಿ ನಡೆಯಲಿದೆ.

Source link

Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ – Kannada News | Karnataka Weather Forecast: Rain Likely Across Coastal and Interior Districts on August 10 11

ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಭಾನುವಾರ ಸುರಿದ ಮಳೆImage Credit source: tv9

ಬೆಂಗಳೂರು, ಆಗಸ್ಟ್ 10: ಕರ್ನಾಟಕದಲ್ಲಿ ತಡವಾಗಿ ಚುರುಕಾಗಿರುವ ಮುಂಗಾರು ಮಳೆ (Monsoon Rain) ಸದ್ಯ ಕಳೆದ ಕೆಲವು ದಿನಗಳಿಂದ ಚುರುಕಾಗಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆಯನ್ನು (Weather Forecast) ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಕರಾವಳಿಯಲ್ಲಿ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಬಹುತೇಕ ಕಡೆ ಮಳೆಯಾಗಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆಗಸ್ಟ್ 11ರಂದು ಹೇಗಿರಲಿದೆ ಮಳೆ?

ಆಗಸ್ಟ್ 11ರಂದು ಕೂಡ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆ

ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 6 ಸೆಂ.ಮೀ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿ, ಇತರ ನಗರಗಳ ಸ್ಥಿತಿ ಹೇಗಿದೆ?

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ಕರಾವಳಿಯಲ್ಲಿ ಬಹುತೇಕ ಕಡೆ, ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಟ್ರೇಲರ್ ನೋಡಿ ಕಿಯಾರಾ ಅಡ್ವಾಣಿ ನಟನೆ ಹೊಗಳಿದ ಪತಿ ಸಿದ್ದಾರ್ಥ್ – Kannada News | Sidharth Malhotra Praises Kiara Advani’s Performance in Yash Starrer Toxic Trailer One of Your Bests

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ನಯನತಾರಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ಪ್ರಮುಖ ನಟಿಯರ ದಂಡೇ ಇದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಟ್ರೇಲರ್ ನೋಡಿ ಪತ್ನಿಯ ಅಭಿನಯಕ್ಕೆ ಜೈ ಎಂದಿದ್ದಾರೆ.

ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಟ್ರೇಲರ್ ಶೇರ್ ಮಾಡಿದ್ದಾರೆ. ಕಿಯಾರಾ ಅವರ ಶ್ರಮ ಹಾಗೂ ಶ್ರದ್ಧೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಕಿಯಾರಾ ವೃತ್ತಿಜೀವನದಲ್ಲೇ ಅತ್ಯುತ್ತಮ ಚಿತ್ರವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನಿರ್ದೇಶಕಿ ಗೀತು ಮೋಹನ್ ದಾಸ್ ಮತ್ತು ನಟ ಯಶ್ ತಂಡಕ್ಕೆ ಶುಭ ಹಾರೈಸಿದ್ದಾರೆ. ದೊಡ್ಡ ಪರದೆ ಮೇಲೆ ಆಗಸ್ಟ್ 26ರಂದು ಸಿನಿಮಾ ನೋಡಲು ಕಾತರದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಿದ್ದಾರ್ಥ್ ಯಾವುದೇ ಪೋಸ್ಟ್ ಮಾಡಿರಲಿಲ್ಲ. ಕಿಯಾರಾ ಬೋಲ್ಡ್ ಅವತಾರ ಕಂಡು ಅವರು ಸುಮ್ಮನಾಗಿರಬಹುದು ಎಂದು ಅನೇಕರು ಹಹೇಳಿದ್ದು ಇದೆ. ಆದರೆ, ಈಗ ಅವರ ಪೋಸ್ಟ್ ಎಲ್ಲಾ ಟ್ರೋಲರ್​​ಗಳ ಬಾಯಿ ಮುಚ್ಚಿಸಿದೆ.

ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಕಿಯಾರಾ ಕೂಡ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ನಾದಿಯಾ ಪಾತ್ರ ಮಾಡಲು ಗೀತು ಮತ್ತು ಯಶ್ ಅವಕಾಶ ನೀಡಿದರು. ನನ್ನ ಮೇಲಿಟ್ಟ ನಂಬಿಕೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು. ‘ಟಾಕ್ಸಿಕ್’ ಸಿನಿಮಾ ನನ್ನ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲಿದೆ. ಈ ಚಿತ್ರದ ನಂತರ ನನ್ನ ಕೆರಿಯರ್‌ನಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಒಬ್ಬ ನಟಿಯಾಗಿ ಈ ಪಾತ್ರ ನನಗೆ ತುಂಬಾ ವಿಶೇಷವಾಗಿದೆ ಎಂದು ಕಿಯಾರಾ ಹರ್ಷ ವ್ಯಕ್ತಪಡಿಸಿದರು.

ಮಗಳ ಜನನದ ನಂತರ ಕಿಯಾರಾ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. 2025 ರಲ್ಲಿ ಸಿದ್ಧಾರ್ಥ್ ಹಾಗೂ ಕಿಯಾರಾಗೆ ಸರಾಯಾ ಎಂಬ ಹೆಣ್ಣು ಮಗು ಜನಿಸಿತ್ತು. ಸುದೀರ್ಘ ಬ್ರೇಕ್ ನಂತರ ಕಿಯಾರಾ ಈ ಬಿಗ್ ಪ್ರಾಜೆಕ್ಟ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಈ ಸಿನಿಮಾದ ಮೇಲೆ ಅಪಾರ ನಿರೀಕ್ಷೆಗಳು ಮೂಡಿವೆ. ಕಿಯಾರಾ ಅವರ ಹೊಸ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು? 

‘ಟಾಕ್ಸಿಕ್’ ಗೀತು ಮೋಹನ್ ದಾಸ್ ನಿರ್ದೇಶನದ ಪ್ಯಾನ್ ಇಂಡಿಯಾ ಆಕ್ಷನ್ ಥ್ರಿಲ್ಲರ್ ಆಗಿದೆ. ಈ ಸಿನಿಮಾವನ್ನು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಶೂಟ್ ಮಾಡಲಾಗಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಮಾಡಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ – Kannada News | Karnataka Cabinet Portfolio Sharing: DK Shivakumar Meets Mallikarjun Kharge in Delhi

ಭಾನುವಾರ ರಾತ್ರಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ ಸಿಎಂ ಡಿಕೆ ಶಿವಕುಮಾರ್Image Credit source: tv9

ನವದೆಹಲಿ, ಆಗಸ್ಟ್ 10: ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಕಾಂಗ್ರೆಸ್ (Congress) ಹೈಕಮಾಂಡ್ ಇನ್ನೂ ಗ್ರೀನ್‌ಸಿಗ್ನಲ್ ನೀಡಿಲ್ಲ. ಖಾತೆ ಹಂಚಿಕೆ ಕಗ್ಗಂಟಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಡರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅಸಮಾಧಾನ ತಣಿಸುವುದು ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ಸಿಎಂ ಡಿಕೆಶಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಖಾತೆ ಹಂಚಿಕೆ ಪೂರ್ಣಗೊಳಿಸುವ ಒತ್ತಡವೂ ಹೆಚ್ಚಾಗಿದೆ.

ಭಾನುವಾರ ರಾತ್ರಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸುಮಾರು 11 ಗಂಟೆ ವೇಳೆಗೆ ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಖರ್ಗೆ ಭೇಟಿ ಬಳಿಕ ಮಾತನಾಡಿದ ಸಿಎಂ, ಖಾತೆ ಹಂಚಿಕೆ ಕುರಿತು ಏನು ಮಾಡಬೇಕೆಂದು ಹೈಕಮಾಂಡ್ ತಿಳಿಸುತ್ತದೆ ಎಂದು ಹೇಳಿದರು.

ಖಾತೆ ಹಂಚಿಕೆ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ದೆಹಲಿಯಲ್ಲಿ ನಾನು ಎಷ್ಟು ದಿನ ಇದ್ದೆ, ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಎಷ್ಟು ದಿನ ಇದ್ದರು ಎಂದು ಡಿಕೆಶಿ ಮರುಪ್ರಶ್ನಿಸಿದರು. ಈಗಾಗಲೇ ಸಚಿವರು ಮೂರು ದಿನಗಳ ಕಾಲ ಪ್ರವಾಸ ನಡೆಸಿ ಬರ ಪರಿಸ್ಥಿತಿ ಕುರಿತು ಅಧ್ಯಯನ ಮಾಡಿ ವರದಿ ನೀಡಿದ್ದಾರೆ. ಸಚಿವರು ಉತ್ತಮ ಕೆಲಸ ಮಾಡಿದ್ದಾರೆ ಎಂದೂ ಹೇಳಿದರು.

ಅಗತ್ಯಬಿದ್ದರೆ ಎಲ್ಲ ಖಾತೆಗಳಿಗೂ ನಾನೇ ಉತ್ತರಿಸುತ್ತೇನೆ

ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದರೂ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದರು. ಅಗತ್ಯಬಿದ್ದರೆ ಅಧಿವೇಶನದಲ್ಲಿ ಎಲ್ಲ ಖಾತೆಗಳ ಬಗ್ಗೆಯೂ ತಾನೊಬ್ಬನೇ ಉತ್ತರಿಸುವುದಾಗಿ ಹೇಳಿದರು.

ನಾಳೆಯೇ ಖಾತೆ ಹಂಚಿಕೆ ಮಾಡಬೇಕೆಂದೇನೂ ಇಲ್ಲ. ಅಧಿವೇಶನ ನಡೆಯುವಾಗ ಆಯಾ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಮಾತನಾಡಲು ಸೂಚಿಸುತ್ತೇನೆ ಎಂದು ಡಿಕೆಶಿ ತಿಳಿಸಿದರು. ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ಭರ್ತಿ ಮಾಡುವ ವಿಚಾರದಲ್ಲಿ ತುರ್ತು ಇಲ್ಲ ಎಂದೂ ಸ್ಪಷ್ಟಪಡಿಸಿದರು.

ಎರಡು-ಮೂರು ಮಂದಿ ಸಚಿವರ ಬದಲಾವಣೆಗೆ ಚಿಂತನೆ?

ಇದರ ನಡುವೆ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅತೃಪ್ತಿ ಇನ್ನೂ ಶಮನವಾಗದ ಹಿನ್ನೆಲೆಯಲ್ಲಿ ಎರಡು-ಮೂರು ಮಂದಿ ಸಚಿವರ ಬದಲಾವಣೆಯ ಸಾಧ್ಯತೆಯೂ ಚರ್ಚೆಯಲ್ಲಿದೆ ಎನ್ನಲಾಗಿದೆ. ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಲು ಕೆಲ ಸಚಿವರನ್ನು ಬದಲಾಯಿಸುವ ಬಗ್ಗೆ ರಾಹುಲ್ ಗಾಂಧಿ ಅವರ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಲ್ಲದೆ, ಈಗಾಗಲೇ ಹಂಚಿಕೆಯಾಗಿರುವ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ವಿಚಾರವೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಎಲ್ಲ ವಿಚಾರಗಳಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ, ಇಂದು ಸಂಜೆಯೇ ಖಾತೆ ಹಂಚಿಕೆ ಹಾಗೂ ಬದಲಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ದೆಹಲಿಗೆ ತೆರಳುವ ಮುನ್ನ ಡಿ.ಕೆ. ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದರು.

ಸಮಾಜ ಕಲ್ಯಾಣ ಖಾತೆಗೆ ತಂಗಡಗಿ, ಮುನಿಯಪ್ಪ ಪೈಪೋಟಿ

ಇನ್ನು ಸಮಾಜ ಕಲ್ಯಾಣ ಇಲಾಖೆ ಖಾತೆಗಾಗಿ ಸಚಿವ ಶಿವರಾಜ್ ತಂಗಡಗಿ ಮತ್ತು ಕೆ.ಎಚ್. ಮುನಿಯಪ್ಪ ನಡುವೆ ಪೈಪೋಟಿ ನಡೆದಿದೆ ಎನ್ನಲಾಗಿದೆ. ತಂಗಡಗಿ ನಿನ್ನೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮತ್ತೊಂದೆಡೆ, ಹಾಲಿ ಆಹಾರ ಇಲಾಖೆಯ ಬಗ್ಗೆ ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ ಹೊಂದಿದ್ದು, ಸಮಾಜ ಕಲ್ಯಾಣ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಮುನಿಯಪ್ಪ ಕೂಡ ಖರ್ಗೆ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್

ಬೆಳಗ್ಗೆ ದೆಹಲಿಯಿಂದ ವಾಪಸ್ ಆಗುತ್ತಿರುವ ಡಿಕೆ ಶಿವಕುಮಾರ್, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆಯಲಿರುವ ‘ಸಾಧನೆಯ ಸಂಭ್ರಮ’ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಖಾತೆ ಹಂಚಿಕೆಯ ಪಟ್ಟಿಯೊಂದಿಗೆ ಬೆಂಗಳೂರಿಗೆ ವಾಪಸ್ ಆಗುತ್ತಾರಾ ಎಂಬ ಕುತೂಹಲ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿ, ಇತರ ನಗರಗಳ ಸ್ಥಿತಿ ಹೇಗಿದೆ? – Kannada News | Karnataka AQI Today: Bengaluru and Major Cities Air Quality Report

ಕರ್ನಾಟಕದ ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ.

ಬೆಂಗಳೂರು, ಆಗಸ್ಟ್ 10: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣ ಮಟ್ಟದಲ್ಲಿದ್ದು, ನಾಗರಿಕರು ನಿರಾಳವಾಗಿ ಉಸಿರಾಡುವಂತಿದೆ. ಮುಂಗಾರು ಮಳೆಯ ಸಕ್ರಿಯತೆಯಿಂದಾಗಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ.

ಬೆಂಗಳೂರಿನಲ್ಲಿ ‘ಸಾಧಾರಣ’ ವಾಯು ಗುಣಮಟ್ಟ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 54 ರಿಂದ 60 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದು ‘ಸಾಧಾರಣ’ (Moderate) ವಲಯಕ್ಕೆ ಸೇರುತ್ತದೆ. ನಗರದ ಕೆಲವು ಪ್ರಮುಖ ಪ್ರದೇಶಗಳ ವಿವರ ಹೀಗಿದೆ.
ಯಲಹಂಕ: ಇಲ್ಲಿ AQI ಮಟ್ಟ 52 ರಷ್ಟಿದ್ದು, ಅತ್ಯಂತ ಶುದ್ಧವಾದ ಗಾಳಿ ಇದೆ.
ಬಿಟಿಎಂ ಲೇಔಟ್ ಮತ್ತು ಬಸವನಗುಡಿ: ಈ ಭಾಗಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿದ್ದರೂ AQI 65 ರಿಂದ 69 ರ ಆಸುಪಾಸಿನಲ್ಲಿದೆ.
ಕುಂದಲಹಳ್ಳಿ ಮತ್ತು ಐಟಿ ವಲಯ: ಇಲ್ಲಿ ವಾಯು ಸೂಚ್ಯಂಕ 55 ರಷ್ಟಿದ್ದು, ಗಾಳಿಯಲ್ಲಿನ ಮಾಲಿನ್ಯಕಾರಕ ಕಣಗಳಾದ PM2.5 ಮತ್ತು PM10 ಪ್ರಮಾಣ ನಿಯಂತ್ರಣದಲ್ಲಿದೆ.

ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಉಸಿರಾಟದ ತೊಂದರೆ ಇರುವವರು ಹೊರತುಪಡಿಸಿ, ಸಾಮಾನ್ಯ ಜನರಿಗೆ ಯಾವುದೇ ಆರೋಗ್ಯದ ಅಪಾಯವಿಲ್ಲ ಎಂದು ವರದಿಗಳು ತಿಳಿಸಿವೆ.

ರಾಜ್ಯದ ಇತರ ನಗರಗಳ ವಾಯು ಗುಣಮಟ್ಟ ಹೇಗಿದೆ?

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಇತರ ಪ್ರಮುಖ ನಗರಗಳಲ್ಲೂ ಇಂದು ಪರಿಸರ ಪೂರಕ ವಾತಾವರಣವಿದೆ. ಕೈಗಾರಿಕಾ ಪ್ರದೇಶಗಳಾದ ಜಿಗಣಿ ಮತ್ತು ಕೊಪ್ಪಳದ ತಮಕಾದಲ್ಲಿ AQI 61 ರಷ್ಟಿದೆ. ಉಳಿದಂತೆ ಉತ್ತರ ಕರ್ನಾಟಕದ ಪ್ರಮುಖ ನಗರಗಳಾದ ರಾಯಚೂರು (AQI 58)ಮತ್ತು ಕಲಬುರಗಿ (AQI 58) ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಬೆಂಗಳೂರಿಗೆ ಹೊಂದಿಕೊಂಡಂತಿರುವ ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ 57 ರಷ್ಟು ದಾಖಲಾಗಿದ್ದು, ಅತ್ಯಂತ ಆರೋಗ್ಯಕರ ವಾತಾವರಣ ಸೃಷ್ಟಿಯಾಗಿದೆ.

ಪರಿಸರ ತಜ್ಞರ ಪ್ರಕಾರ, ಆಗಸ್ಟ್ ತಿಂಗಳಿನಲ್ಲಿ ಸುರಿಯುತ್ತಿರುವ ನಿರಂತರ ಮಳೆ ಮತ್ತು ಬೀಸುತ್ತಿರುವ ವೇಗದ ಗಾಳಿಯು ವಾತಾವರಣದಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಿದೆ. ಇದರಿಂದಾಗಿ ರಾಜ್ಯದ ಬಹುತೇಕ ನಗರಗಳು ಹಸಿರು ಮತ್ತು ಸುರಕ್ಷಿತ ವಲಯದಲ್ಲಿ ಮುಂದುವರಿದಿವೆ. ಆದಾಗ್ಯೂ, ದ್ವಿಚಕ್ರ ವಾಹನ ಸವಾರರು ಧೂಳಿನಿಂದ ರಕ್ಷಣೆ ಪಡೆಯಲು ಮಾಸ್ಕ್ ಧರಿಸುವುದು ಸೂಕ್ತ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Papamashini Dwadashi 2026: Horoscope for All 12 Zodiac Signs

ಇಂದು 2026ರ ಆಗಸ್ಟ್ 10ರ ಸೋಮವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ದ್ವಾದಶಿ, ಆರ್ದ್ರಾ ನಕ್ಷತ್ರ ಇದ್ದು ರಾಹುಕಾಲವು ಬೆಳಗ್ಗೆ 7:40 ರಿಂದ 9:15 ರವರೆಗೆ ಇರಲಿದೆ. ಶುಭಕಾಲವು 9:15 ರಿಂದ 10:50 ರವರೆಗೆ ಇದೆ. ಈ ದಿನವು ಸೋಮ ಪ್ರದೋಷ ಮತ್ತು ಪಾಪನಾಶಿನಿ ದ್ವಾದಶಿ ಎಂದು ಗುರುತಿಸಲ್ಪಟ್ಟಿದೆ. ಸಂಧ್ಯಾಕಾಲದಲ್ಲಿ ಶಿವನ ನಾಮ ಜಪ, ದರ್ಶನ ಮತ್ತು ಅಭಿಷೇಕವನ್ನು ಮಾಡುವುದರಿಂದ ಅನೇಕ ಸಂಕಟಗಳಿಂದ ಮುಕ್ತಿ ಪಡೆಯಬಹುದಾಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆರ್ದ್ರಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಒಪ್ಪಂದಕ್ಕೆ ಒತ್ತಾಯ ಮಾಡಬೇಕಾಗುವುದು – Kannada News | Daily Horoscope for August 10, 2026: Astrology Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸಿದ್ಧಿ, ಕರಣ : ಗರಜ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:42 – 09:16, ಯಮಗಂಡ ಕಾಲ 10:51 – 12:25, ಗುಳಿಕ ಕಾಲ 13:59 – 15:33

ಮೇಷ ರಾಶಿ: ಅವಸರದಿಂದ ಇಂದಿನ ಕಾರ್ಯಗಳನ್ನು ಮಾಡಬೇಕಾಗಬಹುದು. ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ವಿದೇಶೀ ವಸ್ತುಗಳ ಮೇಲೆ ವ್ಯಾಮೋಹ ಬರಬಹುದು. ಹೊಸ ವ್ಯವಹಾರವನ್ನು ಮಾಡಲು ಉತ್ಸಾಹ ಕಡಿಮೆ‌ ಆಗಲಿದೆ. ಮಾನಸಿಕ ಏಕಾಗ್ರತೆಯನ್ನು ಸಾಧಿಸುವುದು ಕಷ್ಟವಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು.

ವೃಷಭ ರಾಶಿ: ನಿಮ್ಮವರ ಬಗ್ಗೆ ನಿಮಗೆ ಬಹಳ ಕಾಳಜಿ ಇರಲಿದೆ. ನಿಮಗೆ ಉಂಟಾದ ತೊಂದರೆಯನ್ನು ಮರೆತು ನೀವು ಮೊದಲಿನಂತೆ ಆಗುವಿರಿ. ವಿದ್ಯಾಭ್ಯಾಸಕ್ಕೆ ಬೇಕಾದ ವಾತಾವರಣ ಸಿಗದೇ ಕಷ್ಟವಾದೀತು. ಮನೆಗೆ ಅವಶ್ಯಕವಿರುವ ವಸ್ತುಗಳನ್ನು ನೀವು ಖರೀದಿಸುವಿರಿ. ಧನನಷ್ಟವೆಂಬ ಭಾವವೂ ನಿಮ್ಮೊಳಗೆ ಅವ್ಯಕ್ತವಾಗಿ ಇರಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ತೊಡಗಿಸಲು ಪ್ರಯತ್ನಶೀಲರಾಗುವಿರಿ. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನಿಮಗೆ ಯಾರಾದರೂ ಸುಳ್ಳುಹೇಳಬಹುದು.

ಮಿಥುನ ರಾಶಿ: ಯಾರಾದರೂ ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಭವಿಷ್ಯದ ಬಗ್ಗೆ ನಿಮಗೆ ಸರಿಯಾದ ಕಲ್ಪನೆ ಸಿಗದೇಹೋಗಬಹುದು. ಸಂಗಾತಿಯ ಮನವೊಲಿಸಲು ಸತತ ಪ್ರಯತ್ನ ಮಾಡುವಿರಿ.‌ ನಿಮ್ಮ ಇಚ್ಛಾಶಕ್ತಿಯಿಂದ ಬೇಕಾದುದನ್ನು ನೀವು ಪಡೆದುಕೊಳ್ಳುವಿರಿ. ಸಿಗಬೇಕಾದವರ ಭೇಟಿಯು ಬಹಳ ವಿಳಂಬವಾದೀತು. ಬರಬೇಕಾದ ಹಣದ ಬಗ್ಗೆ ತಿಳಿದಿರಲಿ. ಸಂಗಾತಿಯ ಸಹಕಾರ ನಿಮಗೆ ಸಿಗದೇ ಕಷ್ಟವಾಗುವುದು. ಇಂದು ನಿಮಗೆ ಆಹಾರದಿಂದ ತೊಂದರೆಯಾದೀತು.

ಕರ್ಕಾಟಕ ರಾಶಿ: ನಿಮ್ಮ ವರ್ತನೆಯಿಂದ ಅಧಿಕಾರವು ತಪ್ಪಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ವಿಶ್ರಾಂತಿ ಇಲ್ಲದೇ ಮಾಡುವ ಕೆಲಸವು ನಿಮಗೆ ಆಯಾಸವನ್ನು ತಂದುಕೊಟ್ಟೀತು. ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ. ಸಾಧಿಸಲು ಅವಕಾಶಗಳು ಹಲವಿದ್ದರೂ ಸಾಗಿಸುವ ಬಗ್ಗೆ ನಿಮಗೆ ಪೂರ್ಣ ಕಲ್ಪನೆ ಇರದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು.

ಸಿಂಹ ರಾಶಿ: ಸಂಬಂಧದಿಂದ ಭೂಮಿಯ ಲಾಭವು ಆಗುವುದಾದರೂ ಅದನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ನಿಮ್ಮ ಪ್ರತಿಷ್ಠೆಯನ್ನು ತೋರಿಸುಬಿರಿ. ನಿಮಗೆ ಆತ್ಮವಿಶ್ವಾಸವೇ ಇಡೀ ದಿನದ ಕೆಲಸವನ್ನು ಸುಲಲಿತವಾಗಿ ಮುಗಿಸಿಕೊಡುವುದು. ವಿದೇಶ ಪ್ರವಾಸವನ್ನು ಕಾರ್ಯ ನಿಮಿತ್ತ ಮಾಡುವಿರಿ. ಒಂಟಿತನ ಭಯವು ನಿಮ್ಮನ್ನು ಕಾಡಬಹುದು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ.

ಕನ್ಯಾ ರಾಶಿ: ಇಂದು ನಿಮಗೆ ಯಾರಿಂದಲಾದರೂ ಯೋಗ್ಯ ಸಂಗಾತಿಯ ಮಾಹಿತಿಗಳು ಸಿಗುವುದು. ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವುದನ್ನು ತಪ್ಪಿಸಿ. ಸ್ಫೂರ್ತಿದಾಯಕ ಸಂಗತಿಗಳು ನಿಮ್ಮನ್ನು ಇನ್ನಷ್ಟು ಬಲಗೊಳಿಸುವುವು. ಇಂದಿನ ಸಮಯವನ್ನು ಸುಮ್ಮನೇ ವ್ಯರ್ಥವಾಗಿ ಕಳೆಯುವಿರಿ. ಸೃಜನಾತ್ಮಕ ಚಟುವಟಿಕೆಗಳ ಬಗ್ಗೆ ನೀವಿಂದು ಹೆಚ್ಚು ಗಮನಕೊಡುವಿರಿ. ಪಿತ್ತ ಮತ್ತು ಕಫಗಳ ಸಂಬಂಧದಿಂದ ರೋಗಗಳು ಬರಬಹುದು.

ತುಲಾ ರಾಶಿ: ನಿಮ್ಮ ಎಂದಿನ ಬಿಮ್ಮನ್ನು ಬಿಡಬೇಕಾಗಬಹುದು. ನೀವು ಇಂದು ಇಚ್ಛಿಸಿದವರಿಗೆ ದಾನವನ್ನು ಕೊಡುವಿರಿ. ನಿಮ್ಮ‌ ನಿಯಮಗಳನ್ನು ಬಿಟ್ಟು ನೀವು ಹೋಗಲಾರಿರಿ. ಸಹೋದ್ಯೋಗಿಗಳು ನಿಮ್ಮ ನಕಾರಾತ್ಮಕ ಆಲೋಚನೆ ಉಳ್ಳವರಾಗುವರು. ಕೃಷಿ ಕಾರ್ಯಕ್ಕೆ ಸೂಕ್ತ ಸಮಯವಾಗಿದ್ದು, ಬಿಡುವು ಮಾಡಿಕೊಳ್ಳುವಿರಿ. ನೀವು ಹಣ ಸಂಪಾದನೆಗೆ ಆರಿಸಿಕೊಂಡ‌ ಮಾರ್ಗವು ಸರಿಯೆನಿಸದೇ ಇರಬಹುದು. ನಿಮ್ಮ ಅಮೂಲ್ಯ ವಸ್ತುಗಳು ನಷ್ಟವಾಗಬಹುದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ: ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಹೊಸತನವನ್ನು ನೀವು ರೂಡಿಸಿಕೊಳ್ಳುವ ಹಂಬಲವನ್ನು ಆಪ್ತರ‌ ಜೊತೆ ಹಂಚಿಕೊಳ್ಳುವಿರಿ. ದೂರವಾಣಿ ಕರೆಗಳಿಂದ ಆಯಾಸವಾಗಲಿದೆ. ಕೇಳಿದವರಿಗೆ ಹಣವನ್ನು ನೀಡುವಿರಿ. ಸಂಪತ್ತಿನ ಹಿಂದೆ ನೀವು ಓಡಬೇಕಾಗಿಲ್ಲ.‌ ನಿಮ್ಮ ಕೆಲಸವೇ ಸಂಪತ್ತು ಬರುವಂತೆ ಮಾಡುವುದು. ಎಲ್ಲರನ್ನೂ ಆತ್ಮೀಯವಾಗಿ ಕಾಣುವಿರಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ.

ಧನು ರಾಶಿ: ನೀವು ಪರರ ತಪ್ಪಿನಿಂದ ಕಲಿಯುವುದು ಉತ್ತಮ. ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ಧಾರ್ಮಿಕ ಆಚರಣೆಯಿಂದ ಶ್ರೇಯಸ್ಸು ಪ್ರಾಪ್ತಿ. ನಿಮ್ಮನ್ನು ದ್ವೇಷಿಸಲು ಕಾರಣವಿಲ್ಲದಿದ್ದರೂ ದ್ವೇಷಿಸುವರು. ಕರ್ತವ್ಯದಲ್ಲಿ ಲೋಪವಾಗುವ ಸಾಧ್ಯತೆ ಇದೆ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ.

ಮಕರ ರಾಶಿ: ಇಂದು ನಿಮ್ಮ ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ಸಹೋದರರಿಂದ‌ ನಿಮಗೆ ಬೇಕಾದ ಸಂಪತ್ತು ಸಿಗಲಿದೆ. ಸಮಯಕ್ಕೆ ಬೆಲೆ ಕೊಡಬೇಕಾದೀತು. ಮನೆಯಲ್ಲಿ ಧಾರ್ಮಿಕ ಕಾರ್ಯವನ್ನು ನೀವು ಇಂದು ಮಾಡಿಸುವಿರಿ. ಇಂದು ನೀವು ಉದ್ಯೋಗದಿಂದ ಸ್ವಲ್ಪ ವಿಶ್ರಾಂತಿ ಪಡೆಯುವಿರಿ. ವೈವಾಹಿಕ ಸಂಬಂಧಗಳನ್ನು ಬಂಧುಗಳಲ್ಲಿ ಬೆಳೆಸುವಿರಿ. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ.

ಕುಂಭ ರಾಶಿ: ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಕಡಿಮೆ ಶ್ರಮದಿಂದ ಹೆಚ್ಚು ಗಳಿಸುವ ಬಗ್ಗೆ ಚಿಂತಿಸುವಿರಿ. ‌ಯಾರನ್ನೂ ದ್ವೇಷಿಸುವ ಮನಃಸ್ಥಿತಿಯನ್ನು ಬೆಳೆಸಿಕೊಳ್ಳುವುದು ಬೇಡ.‌ ಸ್ಥಾನಮಾನದ ಬಗ್ಗೆ ಹೆಮ್ಮೆ ಇರುವುದು. ನಿರ್ಮಾಣದವರಿಗೆ ಒತ್ತಡ ಹೆಚ್ಚಾಗುವುದು. ನಿಮ್ಮ ಕಾರ್ಯಗಳು ಇಂದು ಮುಕ್ತಾಯಗೊಳ್ಳಬಹುದು. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ.

ಮೀನ ರಾಶಿ: ಇಂದು ನೀವೊಬ್ಬರೇ ಯತ್ನಿಸಿದರೂ ಕಾರ್ಯದಲ್ಲಿ ಜಯವು ಸಿಗುವುದು. ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ನಿಮ್ಮ ಜವಾಬ್ದಾರಿಯು ಮುಕ್ತಾಯ ಆಗಬಹುದು. ಹೊರಗಿನಿಂದ ಕಣ್ಣಿಗೆ ತೊಂದರೆ ಬರಲಿದೆ. ತಂದೆಯಿಂದ ಸಂಪತ್ತನ್ನು ಅಪೇಕ್ಷಿಸುವಿರಿ. ಸಂದರ್ಭೋಚಿತ ನಿಮ್ಮ ವರ್ತನೆಯು ಅಪಾರ್ಥವನ್ನು ಕೊಡಬಹುದು. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು.

ಲೋಹಿತ್ ಹೆಬ್ಬಾರ್-8762924271 (what’s app only)

Source link

IND vs PAK: ಒಂದೇ ತಿಂಗಳಲ್ಲಿ ಭಾರತ- ಪಾಕ್ ನಡುವೆ ಎರಡೆರಡು ಪಂದ್ಯಗಳು..! – Kannada News | Women’s T20 Asia Cup 2026: India vs Pakistan Set for Two Epic September Clashes

ಕ್ರಿಕೆಟ್ ಅಭಿಮಾನಿಗಳಿಗೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಲ್ಲಿ ರಸದೌತಣ ಸಿಗಲಿದೆ. ಏಕೆಂದರೆ ಈ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ  (India vs Pakistan) ಕ್ರಿಕೆಟ್ ತಂಡಗಳ ನಡುವೆ ಎರಡೆರಡು ಪಂದ್ಯಗಳು ನಡೆಯಲಿವೆ. ಅಪರೂಪಕ್ಕೊಮ್ಮೆ ಪಂದ್ಯವನ್ನಾಡುವ ಈ ಉಭಯ ದೇಶಗಳ ತಂಡಗಳ ಮುಖಾಮುಖಿಗಾಗಿ ಅಭಿಮಾನಿಗಳು ಕಾದುಕುಳಿತಿದ್ದಾರೆ. ಪ್ರಸ್ತುತ 2026 ರ ಮಹಿಳಾ ಟಿ20 ಏಷ್ಯಾಕಪ್​ನ Women’s T20 Asia Cup 2026() ವೇಳಾಪಟ್ಟಿ ಬಿಡುಗಡೆಯಾಗಿದ್ದು ಈ ಮೆಗಾ ಟೂರ್ನಮೆಂಟ್​ನಲ್ಲಿ ಎರಡೂ ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳಿವೆ.

ಸೆಪ್ಟೆಂಬರ್ 5 ರಂದು ಮೊದಲ ಪಂದ್ಯ

ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಪಂದ್ಯ ಸೆಪ್ಟೆಂಬರ್ 5 ರಂದು ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಮಹಿಳಾ ಟಿ20 ಏಷ್ಯಾಕಪ್ ಟೂರ್ನಮೆಂಟ್ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ಎಲ್ಲಾ ಪಂದ್ಯಗಳನ್ನು ಆಯೋಜಿಸಲಿದೆ. ಭಾರತ ಮತ್ತು ಪಾಕಿಸ್ತಾನದ ಜೊತೆಗೆ, ಥೈಲ್ಯಾಂಡ್ ಮತ್ತು ಹಾಂಗ್ ಕಾಂಗ್ ಗುಂಪು ಎ ನಲ್ಲಿ ಸ್ಥಾನ ಪಡೆದಿವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಲೀಗ್ ಹಂತದ ಪಂದ್ಯ ಸೆಪ್ಟೆಂಬರ್ 5 ರಂದು ನಡೆಯಲಿದೆ.

ಎರಡನೇ ಮುಖಾಮುಖಿಗೆ ಅವಕಾಶವಿದೆ

ಈ ಟೂರ್ನಮೆಂಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎರಡನೇ ಪಂದ್ಯ ಖಚಿತವಾಗಿಲ್ಲದಿದ್ದರೂ, ಎರಡೂ ತಂಡಗಳ ಪ್ರದರ್ಶನ ನೋಡಿದರೆ ಅದು ಬಹುತೇಕ ಖಚಿತವಾಗಿದೆ. ಟೂರ್ನಮೆಂಟ್ ನಿಯಮಗಳ ಪ್ರಕಾರ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ನಾಕೌಟ್ ಹಂತಕ್ಕೆ ಮುನ್ನಡೆಯುತ್ತವೆ. ಭಾರತ ಮತ್ತು ಪಾಕಿಸ್ತಾನ ಕೂಡ ತಮ್ಮ ಗುಂಪುಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಸೆಮಿಫೈನಲ್‌ಗೆ ಅರ್ಹತೆ ಪಡೆದರೆ, ಎರಡೂ ತಂಡಗಳ ನಡುವೆ ಮತ್ತೊಂದು ಪಂದ್ಯ ನಡೆಯುವ ಸಾಧ್ಯತೆಯಿದೆ.

ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಮುಖಾಮುಖಿ

ಸೆಮಿಫೈನಲ್ ಪಂದ್ಯಗಳು ಸೆಪ್ಟೆಂಬರ್ 10 ಮತ್ತು 11 ರಂದು ನಡೆಯಲಿದ್ದು, ಪ್ರಶಸ್ತಿ ಪಂದ್ಯ ಸೆಪ್ಟೆಂಬರ್ 13 ರಂದು ನಡೆಯಲಿದೆ. ಗುಂಪು ಹಂತದ ಫಲಿತಾಂಶಗಳು ಮತ್ತು ಪಾಯಿಂಟ್ ಟೇಬಲ್‌ನಲ್ಲಿರುವ ಸ್ಥಾನಗಳ ಆಧಾರದ ಮೇಲೆ ಸೆಮಿಫೈನಲ್ ಸಮೀಕರಣಗಳು ಬದಲಾಗುತ್ತವೆ. ಎರಡೂ ತಂಡಗಳು ಪ್ರತ್ಯೇಕ ಸೆಮಿಫೈನಲ್‌ಗಳನ್ನು ಗೆದ್ದರೆ, ಸೆಪ್ಟೆಂಬರ್ 13 ರಂದು ನಡೆಯುವ ಫೈನಲ್‌ನಲ್ಲಿ ಪರಸ್ಪರ ಎದುರಾಗಲಿವೆ. ಅಥವಾ ಸೆಮಿಫೈನಲ್‌ನಲ್ಲಿ ನೇರ ಹಣಾಹಣಿ ನಡೆಯುವ ಸಾಧ್ಯತೆಯಿದೆ. ಇದರರ್ಥ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಬಾರಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್

ಟೂರ್ನಿಯಲ್ಲಿ ಟೀಂ ಇಂಡಿಯಾ ಪ್ರಾಬಲ್ಯ

ಮಹಿಳಾ ಏಷ್ಯಾಕಪ್ ಇತಿಹಾಸದಲ್ಲಿ ಭಾರತ ತಂಡ ಅತ್ಯಂತ ಯಶಸ್ವಿ ತಂಡವಾಗಿದೆ. ಇದುವರೆಗೆ ಏಳು ಬಾರಿ ಟೂರ್ನಿಯನ್ನು ಗೆದ್ದಿರುವ ಟೀಂ ಇಂಡಿಯಾ ಈ ಬಾರಿಯೂ ಹಾಟ್ ಫೇವರಿಟ್ ಆಗಿ ಟೂರ್ನಿಗೆ ಪ್ರವೇಶಿಸುತ್ತಿದೆ. ಸೆಪ್ಟೆಂಬರ್ 5 ರಂದು ನಡೆಯಲಿರುವ ಮೊದಲ ಪಂದ್ಯವನ್ನು ಗೆದ್ದು ಸುಲಭವಾಗಿ ನಾಕೌಟ್ ಹಂತವನ್ನು ತಲುಪುವ ಭರವಸೆಯಲ್ಲಿದೆ. ಈ ಹಿಂದೆಯೂ ಪಾಕಿಸ್ತಾನ ವಿರುದ್ಧ ಭಾರತ ತಂಡ ಉತ್ತಮ ದಾಖಲೆಯನ್ನು ಹೊಂದಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯಗಳಲ್ಲಿ ಭಾರತೀಯ ಆಟಗಾರ್ತಿಯರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿwse

Source link

ಬೀದರ್‌ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು – Kannada News | Tragic Incident: Two Month Old Infant Found Dead in Well

ಪ್ರಾತಿನಿಧಿಕ ಚಿತ್ರImage Credit source: Getty images

ಬೀದರ್‌, ಆಗಸ್ಟ್​​ 09: ಬೀದರ್‌ (bidar) ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಎರಡು ತಿಂಗಳ ಹಸುಗೂಸನ್ನ (baby) ಕಿರಾತಕರು ಬಾವಿಗೆ ಬಿಸಾಡಿದ್ದ ಘಟನೆ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಡೆದಿದ್ದೇನು?

ನಿನ್ನೆ ರಾತ್ರಿಯಿಂದ ಮಗು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿದ್ದರು. ಆದರೆ ಇಂದು ಸಾಯಂಕಾಲ ಗ್ರಾಮದ ಬಾವಿಯಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್​​ಗೆ ಬೈಕ್ ಸವಾರರಿಬ್ಬರು ಸಾವು

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಗುವಿನ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಜಮೀನಿನಲ್ಲಿ ಕುರಿ ಮೇಯಿಸುವಾಗ ಹಾವು ಕಚ್ಚಿ ಕುರಿಗಾಹಿ ಸಾವು

ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ 28 ವರ್ಷದ ಯುವ ಕುರಿಗಾಹಿ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ನಡೆದಿದೆ. ನೆಗಳೂರು ಗ್ರಾಮದ ನಾಗರಾಜ್ ಕರಿಗಾರ (28) ಮೃತ ಯುವಕ. ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಉತ್ತಮ ಭವಿಷ್ಯ ರೂಪಿಸಿಕೊಳ್ಳುವಷ್ಟರಲ್ಲೇ ಯುವಕ ಸಾವು

ಮೃತ ನಾಗರಾಜ್ ಕಳೆದ ವಾರವಷ್ಟೇ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಯ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಶೇ. 75 ಕ್ಕೂ ಹೆಚ್ಚು ಅಂಕ ಗಳಿಸುವ ಮೂಲಕ ಉತ್ತೀರ್ಣರಾಗುವ ಭರವಸೆಯಲ್ಲಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು?

ಪೊಲೀಸ್ ಇಲಾಖೆಗೆ ಸೇರಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಕನಸು ಕಾಣುತ್ತಿದ್ದ ಯುವಕ, ಫಲಿತಾಂಶ ಬರುವ ಮುನ್ನವೇ ಇಹಲೋಕ ತ್ಯಜಿಸಿದ್ದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಶೋಕಾವೃತ ವಾತಾವರಣ ನಿರ್ಮಿಸಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version