WPL 2026: 8 ವಿಕೆಟ್ಗಳಿಂದ ಗೆದ್ದು ನೇರವಾಗಿ ಫೈನಲ್ಗೆ ಎಂಟ್ರಿಕೊಟ್ಟ ಆರ್ಸಿಬಿ
ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ಅದು ಆಗಲಿಲ್ಲ….