ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು: ಮಗಳು ಗುಣಮುಖಳಾಗ್ತಾಳೆಂಬ ಆಸೆಯಲ್ಲಿದ್ದ ಪೋಷಕರಿಗೆ ಆಘಾತ – Kannada News | Shivamogga: Teen’s Suspicious Death at Rehab Center Sparks Negligence Probe

ಶಿವಮೊಗ್ಗ, ಮೇ 08: ನಗರದ ಪ್ರಸಿದ್ಧ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಒಂದೇ ದಿನಕ್ಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರದ ಈಸೂರಿನ ನಿವಾಸಿ ನೇಹಾ (17) ಮೃತ ಯುವತಿಯಾಗಿದ್ದು, ಮಗಳ ಹುಷಾರಾಗಿ ಮನೆಗೆ ಬರುತ್ತಾಳೆಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೀಗ ಆಘಾತ ಉಂಟಾಗಿದೆ. ಯುವತಿಯ ಸಾವಿನ ಹಿಂದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ತಿಂಗಳ ಹಿಂದೆ ಕಾಲೇಜಿಗೆ ಹೋಗುವಾಗ ಹಾವು ನೋಡಿ ನೇಹಾ ಬೆಚ್ಚಿಬಿದ್ದಿದ್ದಳು. ಓದುವ ವಿಚಾರದಲ್ಲಿಯೂ ಮಂಕಾಗಿದ್ದ ಈಕೆ ಒಮ್ಮೆ ಬ್ಲೇಡ್​​ನಿಂದ ಕೈ ಸಹ ಕೊಯ್ದುಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕೂಡ  ಬರೆದಿರಲಿಲ್ಲ. 3 ದಿನಗಳ ಹಿಂದೆಯೂ ಯುವತಿಯನ್ನು ಖಾಸಗಿ ನರ್ಸಿಂಗ್ ಹೋಂಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ಈ ನಡುವೆ ಶಿವಮೊಗ್ಗದ ಮಾನಸಧಾರ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರದದವರು ನೇಹಾಳನ್ನು ಬೇಸಿಗೆ ಶಿಬಿರಕ್ಕೆ ಸೇರಿಸಿದರೆ ಗುಣಮುಖರಾಗುತ್ತಾಳೆ ಎಂದಿದ್ದರಂತೆ. ಹೀಗಾಗಿ ಮೊನ್ನೆ ಮಧ್ಯಾಹ್ನ 3 ಗಂಟೆಗೆ ಪುನರ್ ವಸತಿ ಕೇಂದ್ರಕ್ಕೆ ನೇಹಾಳನ್ನ ಕರೆತಂದು ಪೋಷಕರು ಸೇರಿಸಿದ್ದರು. ಆದರೆ ನಿನ್ನೆ ಮಧ್ಯಾಹ್ನದ ಹೊತ್ತಿಗೆ ಪುನರ್ವಸತಿ ಕೇಂದ್ರದ ಕಡೆಯಿಂದ ನೇಹಾ ಪೋಷಕರಿಗೆ ಸಾವರ್ ಲೈನ್ ರಸ್ತೆಯಲ್ಲಿರುವ ಖಾಸಗಿ ನರ್ಸಿಂಗ್​​ ಹೋಂಗೆ ಬನ್ನಿ. ನೇಹಾ ಮತ್ತೆ ಕೈ ಕೊಯ್ದುಕೊಂಡಿದ್ದಾಳೆ ಎಂಬ ಮಾಹಿತಿ ಬಂದಿದೆ. ಕುಟುಂಬ ನರ್ಸಿಂಗ್ ಹೋಂಗೆ ಬಂದ ವೇಳೆ ಆಕೆ ಮೃತಳಾಗಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್!

ಸಂಪೂರ್ಣ ಜವಾಬ್ದಾರಿ ನಮ್ಮದೇ ಎಂದು ಪುನರ್ ವಸತಿ ಕೇಂದ್ರಕ್ಕೆ ಸೇರಿಸಿಕೊಂಡಿದ್ದ ವೈದ್ಯರು ಇಂತಹ ಘಟನೆ ನಡೆದ್ರೂ ಪೊಲೀಸರಿಗೆ ಮಾಹಿತಿ ನೀಡದೇ ಖಾಸಗಿ ಆಸ್ಪತ್ರೆಗೆ ಆಕೆಯನ್ನು ಕರೆತಂದಿದ್ದಾರೆ. ಬೇಸಿಗೆ ಶಿಬಿರದಲ್ಲಿ ಸಮಾನ ಮನಸ್ಕರರೊಂದಿಗೆ ನೇಹಾಳನ್ನ ಬಿಡಲಾಗುವುದು ಎಂದಿದ್ದ ಆಸ್ಪತ್ರೆಯವರು ಮಾನಸಿಕ ರೋಗಿಗಳ ಜೊತೆ ಆಕೆಯನ್ನು ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಅಲ್ಲದೆ ಪುನರ್​​ ವಸತಿ ಕೇಂದ್ರದ ಕೊಠಡಿಯಲ್ಲಿಯೇ ನೇಹಾ ವೇಲ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ ಪುನರ್ ವಸತಿ ಕೇಂದ್ರಕ್ಕೆ ಸೇರಿದ ಒಂದೇ ದಿನದಲ್ಲಿ ನೇಹಾ ಪ್ರಾಣಬಿಟ್ಟಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:14 pm, Fri, 8 May 26

Source link

ಯಶ್ ಸಖತ್ ಐಡಿಯಾ, ಬಿಜಿಎಂಐ ಗೇಮಿನಲ್ಲಿ ‘ಟಾಕ್ಸಿಕ್’ ರಾಯ – Kannada News | Yash features in Indian famous game BGMI 4.4 update

ಯಶ್ (Yash) ಸಿನಿಮಾಗಳನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ಮಾಡುವ ಜೊತೆಗೆ ಅದರ ಪ್ರಚಾರವನ್ನೂ ಸಹ ಭಿನ್ನವಾಗಿ ಮಾಡುತ್ತಾ ಬಂದಿದ್ದಾರೆ. ಪ್ರತಿ ಬಾರಿ ಹೊಸ ಹೊಸ ಆಡಿಯೆನ್ಸ್ ಅನ್ನು ತಲುಪುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಕೆಲವೇ ವಾರಗಳಲ್ಲಿ ಬಿಡುಗಡೆ ಆಗಲಿದೆ. ಜೂನ್ 04 ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾವನ್ನು ಪ್ರಚಾರದ ಕಾರಣಕ್ಕೆಂದೇ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದೀಗ ಯಶ್ ಅವರು ಹೊಸ ರೀತಿಯ ಆಡಿಯೆನ್ಸ್ ಅನ್ನು ತಲುಪಲು ಗೇಮ್ ಒಂದರ ಜೊತೆಗೆ ಒಪ್ಪಂದ ಮಾಡಿಕೊಂಡಂತಿದ್ದಾರೆ. ಯಶ್ ಅವರು ಇದೀಗ ಭಾರತದ ಜನಪ್ರಿಯ ಗೇಮ್ ಆಗಿರುವ ಬಿಜಿಎಂಐನಲ್ಲಿ (BGMI) ಕಾಣಿಸಿಕೊಳ್ಳಲಿದ್ದಾರೆ.

‘ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ’ ಗೇಮ್ ಭಾರತದಲ್ಲಿ 25 ಕೋಟಿಗೂ ಹೆಚ್ಚು ಡೌನ್​​ಲೋಡ್ ಕಂಡಿರುವ ಗೇಮಾಗಿದೆ. ಬಿಜಿಎಂಐ ತನ್ನ ಮುಂದಿನ 4.4 ಅಪ್‌ಡೇಟ್‌ ಅನ್ನು ಶೀಘ್ರವೇ ಹೊರತರಲಿದೆ.  ಈ ಅಪ್​​ಡೇಟ್​​ನಲ್ಲಿ ಅಡಕವಾಗಿರುವ ಹೊಸ ಫೀಚರ್ ಕುರಿತಾಗಿ ಸುದ್ದಿ ಈಗಾಗಲೇ ಲೀಕ್ ಆಗಿದ್ದು, ಹೊಸ ಆವೃತ್ತಿಯಲ್ಲಿ ಯಶ್ ಅವರು ಸಹ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ‘ಟಾಕ್ಸಿಕ್’ ಸಿನಿಮಾಕ್ಕೆ ಸಂಬಂಧಿಸಿದ ಕೆಲವು ವಿಷಯಗಳು ಸಹ ಗೇಮಿನಲ್ಲಿ ಇರಲಿವೆ. ಪ್ರಸ್ತುತ ಹರಿದಾಡುತ್ತಿರುವ ಮಾಹಿತಿಯಂತೆ, BGMI ನ 4.4 ಅಪ್‌ಡೇಟ್‌ನಲ್ಲಿ ಯಶ್ ಅವರ ‘ಟಾಕ್ಸಿಕ್’ ಚಲನಚಿತ್ರದ ಥೀಮ್ ಆಧಾರಿತ ವಿಶೇಷ ಸ್ಕಿನ್‌ಗಳು ಮತ್ತು ಔಟ್‌ಫಿಟ್‌ಗಳು ಲಭ್ಯವಿರಲಿವೆ. ಯಶ್ ಅವರ ವಿಶಿಷ್ಟ ಶೈಲಿಯ ಹೇರ್‌ಸ್ಟೈಲ್, ಉಡುಪು ಮತ್ತು ಆಕ್ಷನ್ ಮ್ಯಾನರಿಸಂಗಳನ್ನು ಗೇಮ್‌ನಲ್ಲಿ ಅಳವಡಿಸಲಾಗಿದೆಯಂತೆ.

ಇದನ್ನೂ ಓದಿ:‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್

ಈ ಹಿಂದಿನ ಅಪ್‌ಡೇಟ್‌ಗಳಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ, ಶಾರುಖ್ ಖಾನ್ ಅವರ ಧ್ವನಿ ಕೇಳುತ್ತಿತ್ತು. ಹೊಸ ಆವೃತ್ತಿಯಲ್ಲಿ ಯಶ್ ಅವರ ಖಡಕ್ ಧ್ವನಿ ಸಹ ಇರಲಿದೆ. ‘ಎನಿಮೀಸ್ ಅಹೆಡ್’, ‘ಫಾಲೋ ಮಿ’ ಇನ್ನಿತರೆ ಗೇಮ್ ಕಮಾಂಡ್​​ಗಳು ಯಶ್ ಅವರ ಖಡಕ್ ಧ್ವನಿಯಲ್ಲಿ ಕೇಳಬಹುದಾಗಿದೆ. ಯಶ್ ಅಭಿಮಾನಿಗಳಿಗಂತೂ ಇದು ಹಬ್ಬವೇ ಸರಿ. ಬಿಜಿಎಂಐ ಹೊಸ ಅಪ್​​ಡೇಟ್​​ನ ಗೇಮ್ ಆಡುವವರು ವಿಶೇಷ ‘ಟಾಕ್ಸಿಕ್’ ಕ್ರೇಟ್‌ಗಳನ್ನು ಅನ್‌ಲಾಕ್ ಮಾಡಬಹುದು. ಇದರಲ್ಲಿ ಚಿತ್ರದ ಪೋಸ್ಟರ್‌ಗಳಲ್ಲಿ ಕಾಣಿಸಿಕೊಂಡಿರುವ ರೀತಿಯ ಗನ್‌ ಸ್ಕಿನ್‌ಗಳು ಮತ್ತು ಡ್ರೆಸ್‌ಗಳು ಇರಲಿವೆ. ಗೇಮ್​ ಜೊತೆಗೆ ಯಶ್ ಅವರ ಸಹಯೋಗವನ್ನು ಸೆಲೆಬ್ರೇಟ್ ಮಾಡಲು ಗೇಮ್‌ನಲ್ಲಿ ಸಣ್ಣ ಪುಟ್ಟ ಮಿಷನ್‌ಗಳನ್ನು ನೀಡಲಾಗುತ್ತದೆ. ಈ ಮಿಷನ್‌ಗಳನ್ನು ಪೂರ್ಣಗೊಳಿಸಿದರೆ ಉಚಿತವಾಗಿ ಯಶ್ ಸಂಬಂಧಿತ ರಿವಾರ್ಡ್‌ಗಳನ್ನು ಪಡೆಯಬಹುದಾಗಿರುತ್ತದೆ.

ಸಾಮಾನ್ಯವಾಗಿ BGMI ದೊಡ್ಡ ಬಾಲಿವುಡ್ ನಟರು ಅಥವಾ ಕ್ರೀಡಾಪಟುಗಳೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತದೆ. ಆದರೆ ಈಗ ದಕ್ಷಿಣ ಭಾರತದ, ವಿಶೇಷವಾಗಿ ಕನ್ನಡದ ನಟನೊಬ್ಬನ ಚಿತ್ರದೊಂದಿಗೆ ಜಾಗತಿಕ ಮಟ್ಟದ ಗೇಮ್ ಕೈಜೋಡಿಸುತ್ತಿರುವುದು ಯಶ್ ಅವರ ಜಾಗತಿಕ ಜನಪ್ರಿಯತೆಯನ್ನು ತೋರಿಸುತ್ತದೆ. ಇದು ‘ಟಾಕ್ಸಿಕ್’ ಚಿತ್ರದ ಪ್ರಚಾರಕ್ಕೆ ಭರ್ಜರಿ ವೇದಿಕೆ ಒದಗಿಸಲಿದೆ. ವರದಿಯ ಪ್ರಕಾರ, BGMI 4.4 ಅಪ್‌ಡೇಟ್ ಮುಂದಿನ ಕೆಲವು ವಾರಗಳಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಗೇಮರ್‌ಗಳು ಪ್ಲೇ ಸ್ಟೋರ್ ಅಥವಾ ಆಪ್ ಸ್ಟೋರ್ ಮೂಲಕ ಈ ಅಪ್‌ಡೇಟ್ ಪಡೆದ ನಂತರ ‘ಟಾಕ್ಸಿಕ್’ ಥೀಮ್ ಅನ್ನು ಆನಂದಿಸಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್ – Kannada News | Tamil Nadu Elections Vijays TVK secures majority to form government as VCK, CPM and CPI extends support

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ (TVK) ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. ಇದೀಗ ಆ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ನಟ-ರಾಜಕಾರಣಿ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.

ಟಿವಿಕೆಗೆ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸುವ ಮೂಲಕ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಂತಾಗಿದೆ. ಶೀಘ್ರದಲ್ಲೇ ವಿಜಯ್ ಬಹುಮತದ ಬೆಂಬಲದ ಪತ್ರದೊಂದಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನವನ್ನು ಅಂತಿಮಗೊಳಿಸಲಿದ್ದಾರೆ.

ಇದನ್ನೂ ಓದಿ: ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು

ವಿಜಯ್ ಇಂದು ಸಂಜೆ 6 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಆಗ ವಿಜಯ್ ಮತ್ತೆ ಹಕ್ಕು ಮಂಡಿಸುವ ನಿರೀಕ್ಷೆಯಿದೆ. ಈ ವಾರ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಬಗ್ಗೆ ರಾಜ್ಯಪಾಲರೊಂದಿಗೆ ಅವರ ಮೂರನೇ ಸಭೆ ಇದಾಗಿದೆ.

234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರೊಂದಿಗೆ ಬೆಂಬಲವನ್ನು ನೀಡಿದೆ. ತಲಾ ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ ಮತ್ತು ಸಿಪಿಐ(ಎಂ) ಸಹ ಇಂದಿನ ಸಭೆಗಳ ನಂತರ ಟಿವಿಕೆಯನ್ನು ಬೆಂಬಲಿಸಿವೆ. ಇಬ್ಬರು ಶಾಸಕರನ್ನು ಹೊಂದಿರುವ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕೂಡ ವಿಜಯ್ ಅವರನ್ನು ಬೆಂಬಲಿಸಲು ಒಪ್ಪಿಕೊಂಡಿದೆ. ಇದರಿಂದ ಟಿವಿಕೆಗೆ ಅಗತ್ಯವಾದ 118 ಸ್ಥಾನಗಳ ಮ್ಯಾಜಿಕ್ ನಂಬರ್ ಸಿಗುವುದರಿಂದಾಗಿ ವಿಜಯ್ ಪಟ್ಟಾಭಿಷೇಕ ಖಚಿತವಾದಂತಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:58 pm, Fri, 8 May 26

Source link

IPL 2026: ನಾಮಕಾವಸ್ತೆಗೆ ತಂಡದಲ್ಲಿರುವ ಇವರಿಬ್ಬರೇ ಆರ್​ಸಿಬಿ ಪಾಲಿನ ವಿಲನ್ಸ್ – Kannada News | RCB Batting Woes: Jacob Bethell and Jitesh Sharma’s Poor Form Hurting IPL 2026 Campaign

2026 ರ ಐಪಿಎಲ್ ಅನ್ನು ಅಬ್ಬರದಿಂದ ಆರಂಭಿಸಿದ್ದ ಆರ್​ಸಿಬಿ ಮೊದಲಾರ್ಧ ಮುಗಿದ ಬಳಿಕ ಅದ್ಯಾಕೋ ಅಳಿತಪ್ಪಿದಂತೆ ಕಾಣುತ್ತಿದ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್​ಸಿಬಿ ಇದೀಗ ಆ ಸ್ಥಾನವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿ ಕೆಲವರ ಪ್ರದರ್ಶನ. ನಿರ್ಣಾಯಕ ಹಂತದಲ್ಲಿ ಕೆಲವರಿಂದ ನಿರೀಕ್ಷಿತ ಪ್ರದರ್ಶನ ಬರದಿರುವುದು ತಂಡವನ್ನು ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಬ್ಯಾಟಿಂಗ್‌ ವಿಭಾಗದಲ್ಲಿ ಆರ್​ಸಿಬಿ ಯಾರ ಮೇಲೆ ಹೆಚ್ಚಿನ ಭರವಸೆ ಇಟ್ಟಿತ್ತೋ, ಆ ಆಟಗಾರರೇ ಆರ್​ಸಿಬಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ. ಅಂತಹ ಆಟಗಾರರಲ್ಲಿ ಆರ್​ಸಿಬಿಯ ಪ್ರಸ್ತುತ ಆರಂಭಿಕ ಆಟಗಾರ ಜೆಕೋಬ್ ಬೆಥೆಲ್ ಹಾಗೂ ತಂಡದ ಉಪನಾಯಕ ಜಿತೇಶ್ ಶರ್ಮಾ.

ವಾಸ್ತವವಾಗಿ ಲಕ್ನೋ ಸೂಪರ್‌ಜೈಂಟ್ಸ್ ನೀಡಿದ್ದ 213 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆರ್​​ಸಿಬಿ 9 ರನ್‌ಗಳಿಂದ ಸೋತಿತು. ಇದು ಆರ್​​ಸಿಬಿಗೆ ನಾಲ್ಕನೇ ಸೋಲಾದರೆ ಸತತ ಎರಡನೇ ಸೋಲಾಗಿತ್ತು. ಈ ಆವೃತ್ತಿಯಲ್ಲಿ ಆರ್​ಸಿಬಿ ತಂಡವು ಗುರಿ ಬೆನ್ನಟ್ಟುವಾಗ ಸೋತ ಮೊದಲ ಪಂದ್ಯ ಇದಾಗಿದೆ. ಇದಕ್ಕೆ ಕಾರಣ ತಂಡದ ಟಾಪ್ ಆರ್ಡರ್ ಕೈಕೊಟ್ಟಿದ್ದು. ಈ ಪಂದ್ಯದಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರೆ, ಆರಂಭಿಕ ಜೆಕೋಬ್ ಬೆಥೆಲ್ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬಂದ ಜಿತೇಶ್ ಶರ್ಮಾ ಎಂದಿನಂತೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಇವರಿಬ್ಬರ ಈ ಕಳಪೆ ಪ್ರದರ್ಶನ ತಂಡಕ್ಕೆ ಹೊರಯಾಯಿತು.

ಸಾಲ್ಟ್ ಸ್ಥಾನ ತುಂಬಲು ಬೆಥೆಲ್ ವಿಫಲ

ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಬೆಥೆಲ್ ಹಾಗೂ ಜಿತೇಶ್ ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಮೊದಲು ಬೆಥೆಲ್ ಬಗ್ಗೆ ನೋಡುವುದಾದರೆ.. ಕಳೆದ ಆವೃತ್ತಿಯಿಂದ ಆರ್​ಸಿಬಿ ತಂಡದಲ್ಲಿರುವ ಬೆಥೆಲ್​ಗೆ, ಫಿಲ್ ಸಾಲ್ಟ್, ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್‌ರಂತಹ ವಿದೇಶಿ ಆಟಗಾರರ ಉಪಸ್ಥಿತಿಯಿಂದಾಗಿ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಈಗ, ಸಾಲ್ಟ್‌ ಗಾಯಗೊಂಡಿರುವುದರಿಂದ, ಬೆಥೆಲ್​ಗೆ ಅವಕಾಶಗಳ ಮೇಲೆ ಅವಕಾಶ ಸಿಗುತ್ತಿದೆ. ಆದರೆ ಭೆಥೆಲ್ ಮಾತ್ರ ಪ್ರಭಾವ ಬೀರಲು ವಿಫಲವಾಗಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ 43 ರನ್‌ಗಳನ್ನು ಗಳಿಸಿದ್ದಾರೆ, ಕೇವಲ 10.75 ಸರಾಸರಿಯೊಂದಿಗೆ.

ಜಿತೇಶ್ ಆಟ ಸಪ್ಪೆ

ಮತ್ತೊಂದೆಡೆ, ಜಿತೇಶ್ ಶರ್ಮಾ ಒಬ್ಬ ಅದ್ಭುತ ವಿಕೆಟ್ ಕೀಪರ್ ಎಂದು ಸಾಬೀತಾಗಿದ್ದರೂ, ಈ ಆವೃತ್ತಿಯಲ್ಲಿ ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕಳೆದ ಆವೃತ್ತಿಯಲ್ಲಿ ಕೆಲವು ಪ್ರಬಲ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ಜಿತೇಶ್ ಆರ್‌ಸಿಬಿಯ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಆದಾಗ್ಯೂ, ಈ ಸೀಸನ್​ನಲ್ಲಿ, ಜಿತೇಶ್ ಅವರ ಬ್ಯಾಟಿಂಗ್ ದುರಂತವಾಗಿದೆ. ಆಡಿರುವ ಎಂಟು ಇನ್ನಿಂಗ್ಸ್‌ಗಳಲ್ಲಿ 8.00 ಸರಾಸರಿಯಲ್ಲಿ ಕೇವಲ 64 ರನ್‌ಗಳಿಸಿದ್ದಾರೆ. ಈ ಐಪಿಎಲ್‌ನಲ್ಲಿ ಆಡುವ ಎಲ್ಲಾ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳಲ್ಲಿ ಇದು ಅತ್ಯಂತ ಕೆಟ್ಟ ಸರಾಸರಿಯಾಗಿದೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಆರ್‌ಸಿಬಿಗೆ ಗಮನಾರ್ಹ ಕೊಡುಗೆ ನೀಡುವಲ್ಲಿ ವಿಫಲರಾಗಿದ್ದು ತಂಡವನ್ನು ಸೋಲಿನ ದವಡೆಗೆ ತಳ್ಳಿದೆ. ಇವರಿಬ್ಬರು ಫಾರ್ಮ್​ ಕಂಡುಕೊಳ್ಳದಿದ್ದರೆ, ಸತತ 2ನೇ ಬಾರಿಗೆ ಟ್ರೋಫಿ ಗೆಲ್ಲಬೇಕೆನ್ನುವ ಆರ್​ಸಿಬಿ ಕನಸು ಕನಸಾಗೇ ಉಳಿಯಲಿದೆ.

Published On – 4:58 pm, Fri, 8 May 26

Source link

RRB Recruitment 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | RRB ALP Recruitment 2026: 11,127 Assistant Loco Pilot Jobs Announced! Apply Now!

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿImage Credit source: Ai generated

ಭಾರತೀಯ ರೈಲ್ವೆಯಲ್ಲಿ ಕೆಲಸ ಪಡೆಯುವ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (Assistant Loco Pilot – ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ರೈಲ್ವೆ ಇಲಾಖೆಯ ಈ ಬೃಹತ್ ನೇಮಕಾತಿಯು ತಾಂತ್ರಿಕ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ.

ಪ್ರಮುಖ ದಿನಾಂಕ ಮತ್ತು ಹುದ್ದೆಗಳ ವಿವರ:

ರೈಲ್ವೆ ಮಂಡಳಿಯ ಅಧಿಕೃತ ಪ್ರಕಟಣೆಯ ಪ್ರಕಾರ, ಒಟ್ಟು 11,127 ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮೇ 15 ರಿಂದ ಆರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 14ರ ವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಇದರೊಂದಿಗೆ ಸಂಬಂಧಿತ ಟ್ರೇಡ್‌ಗಳಾದ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಮುಂತಾದವುಗಳಲ್ಲಿ ITI (ಐಟಿಐ) ಪೂರ್ಣಗೊಳಿಸಿರಬೇಕು. ತಾಂತ್ರಿಕ ಶಿಕ್ಷಣ ಪಡೆದವರಿಗೆ ಹೆಚ್ಚಿನ ಆದ್ಯತೆ ಇದ್ದು, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಥವಾ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಪದವಿ (B.E/B.Tech) ಪಡೆದವರು ಸಹ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷಗಳ ಒಳಗಿರಬೇಕು ಹಾಗೂ ನಿಯಮದಂತೆ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.

ಆಯ್ಕೆ ಪ್ರಕ್ರಿಯೆಯ ಹಂತಗಳು:

ಲೋಕೋ ಪೈಲಟ್ ಹುದ್ದೆಯು ಅತ್ಯಂತ ಜವಾಬ್ದಾರಿಯುತ ಕೆಲಸವಾಗಿರುವುದರಿಂದ, ಅಭ್ಯರ್ಥಿಗಳನ್ನು ಐದು ಕಠಿಣ ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು (CBT-1 ಮತ್ತು CBT-2) ನಡೆಯಲಿವೆ. ನಂತರ ಅಭ್ಯರ್ಥಿಗಳ ಮಾನಸಿಕ ಸಾಮರ್ಥ್ಯವನ್ನು ಅಳೆಯಲು CBAT (ಆಪ್ಟಿಟ್ಯೂಡ್ ಟೆಸ್ಟ್) ನಡೆಸಲಾಗುತ್ತದೆ. ಇವುಗಳಲ್ಲಿ ಉತ್ತೀರ್ಣರಾದವರಿಗೆ ದಾಖಲೆಗಳ ಪರಿಶೀಲನೆ ಹಾಗೂ ಅಂತಿಮವಾಗಿ ಅತ್ಯಂತ ಕಟ್ಟುನಿಟ್ಟಾದ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ವಿಶೇಷವಾಗಿ ಲೋಕೋ ಪೈಲಟ್ ಆಗಲು ದೃಷ್ಟಿ ಸಾಮರ್ಥ್ಯವು ‘A-1’ ಗುಣಮಟ್ಟದಲ್ಲಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಆಕರ್ಷಕ ವೇತನ ಮತ್ತು ಭತ್ಯೆಗಳು:

ರೈಲ್ವೆಯಲ್ಲಿ ಆಯ್ಕೆಯಾದ ಸಹಾಯಕ ಲೋಕೋ ಪೈಲಟ್‌ಗಳಿಗೆ ಅತ್ಯುತ್ತಮ ವೇತನ ಶ್ರೇಣಿಯನ್ನು ನೀಡಲಾಗುತ್ತದೆ. ಆರಂಭಿಕವಾಗಿ ರೂ. 19,900 ಮೂಲ ವೇತನದೊಂದಿಗೆ ತುಟ್ಟಿಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA) ಮತ್ತು ರೈಲು ಚಲಾಯಿಸುವ ಸಮಯದ ಆಧಾರದ ಮೇಲೆ ನೀಡಲಾಗುವ ‘ರನ್ನಿಂಗ್ ಭತ್ಯೆ’ ಸೇರಿ ಮಾಸಿಕ ರೂ. 35,000 ರಿಂದ ರೂ. 45,000 ವರೆಗೆ ವೇತನ ದೊರೆಯಲಿದೆ. ಇದರೊಂದಿಗೆ ರೈಲ್ವೆ ಇಲಾಖೆಯ ಎಲ್ಲಾ ವೈದ್ಯಕೀಯ ಮತ್ತು ಪ್ರಯಾಣ ಸೌಲಭ್ಯಗಳು ಲಭ್ಯವಿರುತ್ತವೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಆಯಾ ವಲಯದ ಅಧಿಕೃತ ರೈಲ್ವೆ ನೇಮಕಾತಿ ಮಂಡಳಿಯ (RRB) ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪರೀಕ್ಷೆಯು ತಾಂತ್ರಿಕ ಮತ್ತು ಸಾಮಾನ್ಯ ಸಾಮರ್ಥ್ಯವನ್ನು ಆಧರಿಸಿರುವುದರಿಂದ, ಅಭ್ಯರ್ಥಿಗಳು ಈಗಿನಿಂದಲೇ ಪಠ್ಯಕ್ರಮದ ಪ್ರಕಾರ ತಯಾರಿಯನ್ನು ಆರಂಭಿಸುವುದು ಉತ್ತಮ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:18 pm, Fri, 8 May 26

Source link

ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ವಿಳಂಬ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿಚಾರ್ಜ್ – Kannada News | Bihar teacher recruitment protest Police uses lathicharge on TRE 4 aspirants

ಪಾಟ್ನಾ, ಮೇ 8: ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ (TRE) ಬರೆದ ಅಭ್ಯರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಇದರಿಂದ ಬಿಹಾರದಲ್ಲಿ (Bihar) ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಶಿಕ್ಷಕರ ನೇಮಕಾತಿ ಪರೀಕ್ಷೆ 4.0 ರ ಅಧಿಸೂಚನೆ ವಿಳಂಬವಾದ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರ ಪರಿಣಾಮವಾಗಿ, ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲು ಆಕಾಂಕ್ಷಿಗಳು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿದ್ದರು.

ಏಪ್ರಿಲ್ ಕಳೆದು ಮೇ ಎರಡನೇ ವಾರ ಪ್ರಾರಂಭವಾದರೂ ಪೋರ್ಟಲ್‌ನಲ್ಲಿ ಯಾವುದೇ ಅಧಿಕೃತ ನೇಮಕಾತಿ ಅಧಿಸೂಚನೆ ಇಲ್ಲ. ಇದರಿಂದ ಸಾವಿರಾರು ಅಭ್ಯರ್ಥಿಗಳು ಸೇರಿದ್ದ ಪಾಟ್ನಾ ಕಾಲೇಜು ಆವರಣದಲ್ಲಿ ಪ್ರತಿಭಟನೆ ಆರಂಭವಾಯಿತು. ಅಲ್ಲಿಂದ ಬಕರ್‌ಗಂಜ್ ಮತ್ತು ಮಚುವಾ ಟೋಲಿ ಮೂಲಕ ಪ್ರತಿಭಟನಾ ಮೆರವಣಿಗೆ ನಡೆದು, ನಂತರ ಜೆಪಿ ಗೋಲಂಬರ್ ಕಡೆಗೆ ಸಾಗಿತು.

ಇದನ್ನೂ ಓದಿ: ಬಿಹಾರ ರಾಜಕೀಯದಲ್ಲಿ ಹೊಸ ಪರ್ವ: ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ

ಶಿಕ್ಷಕರ ನೇಮಕಾತಿ ಪರೀಕ್ಷೆ (TRE) 4.0ರ ಅಧಿಕೃತ ಅಧಿಸೂಚನೆ ಪ್ರಕಟಣೆಯಲ್ಲಿ ವಿಳಂಬದ ನಂತರ ಶುಕ್ರವಾರ ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಮಾಹಿತಿಯನ್ನು ಸಕಾಲಿಕವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅಭ್ಯರ್ಥಿಗಳು ಒಟ್ಟುಗೂಡಿದರು. ಇದರಿಂದ ಜನಸಮೂಹವನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಬಳಸಿದರು. ಈ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಮಧ್ಯಪ್ರವೇಶಿಸಿದರು. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಲಾಠಿಚಾರ್ಜ್ ಮಾಡಿದಾಗ, ಅನೇಕ ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಓಡಿಹೋಗಲು ಪ್ರಾರಂಭಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿಗೆ ಟಿಎಂಸಿಗೆ ಬೆಂಬಲಿಗರಿಂದ ಮುತ್ತಿಗೆ; ಮತಗಟ್ಟೆ ಬಳಿ ಲಾಠಿ ಚಾರ್ಜ್

ಬಿಹಾರ ಸಾರ್ವಜನಿಕ ಸೇವಾ ಆಯೋಗದ (ಬಿಪಿಎಸ್‌ಸಿ) ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಸೇರಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು? – Kannada News | Kannada actor Vajrang acted in Jana Nayagan with Vijay, he shares his experience

ದಳಪತಿ ವಿಜಯ್ (Thalapathy Vijay) ಇದೀಗ ತಮಿಳುನಾಡು ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ಎರಡೇ ವರ್ಷದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ವಿಜಯ್ ಅವರೊಟ್ಟಿಗೆ ಕೆಲವು ಕನ್ನಡದ ನಟರು ಆಗೊಮ್ಮೆ, ಈಗೊಮ್ಮೆ ನಟಿಸಿದ್ದಿದೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ನಲ್ಲಿ ಕನ್ನಡದ ನಟ ವಜ್ರಾಂಗ್ ನಟಿಸಿದ್ದಾರೆ. ಇದೀಗ ವಜ್ರಾಂಗ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ವಿಜಯ್ ಜೊತೆಗೆ ಸಿನಿಮಾನಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಸ್ತಿಗಾಗಿ ಮಕ್ಕಳನ್ನ ಕೊಂದ್ರು, ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ – Kannada News | KR Nagar Brother Murder: A woman Says give Rs crore Asset To Orphanage

ಮೈಸೂರು, (ಮೇ 08): ಕೆ.ಆರ್ ನಗರದ (KR Nagar) ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು, ಹಳೇ ವೈಷಮ್ಯ ಹಾಗೂ ಆಸ್ತಿ ವಿಚಾರಕ್ಕೆ ಸಹೋದರರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ಕೊಲೆಯಾದ ಸಹೋದರರ ತಾಯಿ ಪ್ರತಿಕ್ರಿಯಿಸಿದ್ದು,ಐದು ಕೋಟಿ ರೂಪಾಯಿ ಆಸ್ತಿಗಾಗಿ ಮಕ್ಕಳನ್ನ ಕೊಂದಿದ್ದಾರೆ. ಕೊಲೆಗಾರರಿಗೆ ಸೂಕ್ತ ಶಿಕ್ಷೆಯಾಗಬೇಕು. ಇನ್ನು ಎಲ್ಲಾ ಆಸ್ತಿ ಅನಾಥಾಶ್ರಮಕ್ಕೆ ಬರೆಯುತ್ತೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ – Kannada News | Namma Metro Service Disruption May 10: Bengaluru Purple Line Timings Affected

ಬೆಂಗಳೂರು, ಮೇ 08: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ವಿನಂತಿಸಿಕೊಂಡಿದೆ.

  • ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
  • ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಸಂಚಾರ ತಾತ್ಕಾಲಿಕ ಸ್ಥಗಿತ
  • ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡ ಬಿಎಂಆರ್​​ಸಿಎಲ್​​

ಇದನ್ನೂ ಓದಿ: ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ; 15 ನಿಮಿಷ ನಿಂತಲ್ಲೇ ನಿಂತ ರೈಲುಗಳು

ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ಎ ವರೆಗೆ ಸ್ಥಗಿತಗೊಳ್ಳಲಿದೆ.

ಆದಾಗ್ಯೂ, ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ, ಕೆಳಕಂಡ ಮಾರ್ಗಗಳಲ್ಲಿ ಎಂದಿನ ಸಂಚರಿಸಲಿವೆ.

  • ಚಲ್ಲಘಟ್ಟ – ವಿಜಯನಗರ
  • ಎಂ.ಜಿ. ರಸ್ತೆ – ವೈಟ್‌ಫೀಲ್ಡ್ (ಕಾಡುಗೋಡಿ)
  • ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
  • ಆರ್.ವಿ. ರಸ್ತೆ – ಬೊಮ್ಮಸಂದ್ರ

ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಧುರಂಧರ್ 2’ ಒಟಿಟಿ ಬಿಡುಗಡೆ ದಿನಾಂಕ ನಿಗದಿ, ಇದೆ ಟ್ವಿಸ್ಟ್ – Kannada News | Dhurandhar 2 movie to be streaming on Netflix and Jio Hotstar on May 15

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ ದಿ ರಿವೇಂಜ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಸಿನಿಮಾ 1700 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾದ ಬಗ್ಗೆ ಸ್ವತಃ ನರೇಂದ್ರ ಮೋದಿ ಮೆಚ್ಚಿ ಮಾತನಾಡಿದ್ದಾರೆ. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದ್ದು, ಒಟಿಟಿ ಸ್ಟ್ರೀಮಿಂಗ್​​ನ ದಿನಾಂಕ ನಿಗದಿ ಆಗಿದೆ. ‘ಧುರಂದರ್ 2’ ಸಿನಿಮಾವನ್ನು ಒಟಿಟಿಯಲ್ಲಿ ವೀಕ್ಷಿಸುವವರಿಗೆ ಸಣ್ಣ ಸರ್ಪ್ರೈಸ್ ಸಹ ಕಾದಿದೆ.

ಈ ಹಿಂದೆ ವರದಿ ಮಾಡಿದಂತೆ ‘ಧುರಂಧರ್ 2: ದಿ ರಿವೇಂಜ್’ ಸಿನಿಮಾ ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ. ಮೇ 15 ರಂದು ‘ಧುರಂಧರ್ 2’ ಸಿನಿಮಾವು ಜಿಯೋ ಹಾಟ್​​ಸ್ಟಾರ್ ಮತ್ತು ನೆಟ್​​ಫ್ಲಿಕ್ಸ್​​ಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ‘ಧುರಂಧರ್: ದಿ ರಿವೇಂಜ್’ ಸಿನಿಮಾವು ಒಟಿಟಿಯಲ್ಲಿ ‘ಧುರಂಧರ್: ದಿ ರಿವೇಂಜ್’ ಸಿನಿಮಾಕ್ಕೆ ‘ರಾ ಆಂಡ್ ಅನ್​​ದೇಕಾ’ (ಹಸಿ-ಬಿಸಿ ಮತ್ತು ಹಿಂದೆ ನೋಡದ್ದು) ಎಂಬ ಅಡಿಬರಹ ಸಹ ನೀಡಲಾಗಿದೆ.

‘ಧುರಂಧರ್ 2’ ಸಿನಿಮಾವನ್ನು ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಹಿಂದಿ ಸೇರಿದಂತೆ ಇತರೆ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದೆ. ಭಾರತದ ಹೊರತಾಗಿ ಬೇರೆ ದೇಶದವರು ‘ನೆಟ್​​ಫ್ಲಿಕ್ಸ್​’ನಲ್ಲಿ ವೀಕ್ಷಿಸಬಹುದಾಗಿದೆ. ಎರಡೂ ಒಟಿಟಿಗಳಲ್ಲಿ ಒಂದೇ ಕಾಪಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಚಿತ್ರಮಂದಿರದಲ್ಲಿ ಇಲ್ಲದ ಕೆಲವು ಹೆಚ್ಚುವರಿ ದೃಶ್ಯಗಳನ್ನು ಒಟಿಟಿಯಲ್ಲಿ ಸೇರಿಸಲಾಗಿದೆ. ಚಿತ್ರಮಂದಿರಕ್ಕಿಂತಲೂ ಮೂರು ನಿಮಿಷ ಹೆಚ್ಚಿನ ಸಮಯದ ದೃಶ್ಯಗಳು ಒಟಿಟಿಯಲ್ಲಿ ಇರಲಿವೆ.

ಇದನ್ನೂ ಓದಿ:ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?

‘ಆರ್​​ಆರ್​​ಆರ್’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳು ಒಂದಕ್ಕಿಂತಲೂ ಹೆಚ್ಚು ಒಟಿಟಿಗಳಲ್ಲಿ ಬಿಡುಗಡೆ ಆಗಿದ್ದವು. ಇದೀಗ ‘ಧುರಂಧರ್ 2’ ಸಿನಿಮಾ ಸಹ ಅದೇ ಹಾದಿ ಹಿಡಿದಿದೆ. ಆದರೆ ಇದೇ ಸಿನಿಮಾದ ಮೊದಲ ಭಾಗ ಕೇವಲ ನೆಟ್​ಫ್ಲಿಕ್ಸ್​ನಲ್ಲಿ ಮಾತ್ರವೇ ತೆರೆ ಕಂಡಿತ್ತು. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾವು ಭಾರತೀಯ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿದೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಅಕ್ಷಯ್ ಖನ್ನಾ, ಆರ್ ಮಾಧವನ್, ಅರ್ಜುನ್ ರಾಮ್​​ಪಾಲ್, ಸಂಜಯ್ ದತ್ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version