Headlines

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು: ಅನಾರೋಗ್ಯದಿಂದ ಮೃತಪಟ್ಟ ‘ಶಿವಾನಿ’ – Kannada News | Bannerghatta Giraffe Shivani Dies: Illness Claims Popular Bengaluru Zoo Attraction

ಬೆಂಗಳೂರು, ಮೇ 08: ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಜಿರಾಫೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರೆಳೆದಿದ್ದು, ಅನಾರೋಗ್ಯದಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ ಎನ್ನಲಾಗಿದೆ. ಅಂತಿಮವಾಗಿ ಕರುಳು ಸುತ್ತಿಕೊಂಡು ರಕ್ತಪರಿಚಲನೆ ಆಗದೆ ಜಿರಾಫೆ ಮೃತಪಟ್ಟಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೆಣ್ಣು ಜಿರಾಫೆ ಸಾವು 3 ವರ್ಷ 10 ತಿಂಗಳ ಶಿವಾನಿ ಹೆಸರಿನ ಹೆಣ್ಣು ಜಿರಾಫೆ ಕೊನೆಯುಸಿರು ಕಳೆದ…

Read More

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…

Read More

ಚಾಮರಾಜನಗರ: ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ! ವಿಡಿಯೋ ಇಲ್ಲಿದೆ ನೋಡಿ – Kannada News | Viral Video: Monkey Visits Salon in Chamarajanagar for Hair Styling; Shakes Hands with Barber Before Leaving

ಚಾಮರಾಜನಗರ, ಮೇ 8: ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಗ್ರಾಮದಲ್ಲಿ ವಿಚಿತ್ರ ಹಾಗೂ ಅಚ್ಚರಿಯ ಘಟನೆಯೊಂದು ನಡೆದಿದೆ. ಇಲ್ಲಿನ ದೇವರಾಜ್ ಎಂಬುವವರ ಸಲೂನ್‌ಗೆ ಮಂಗವೊಂದು ಬಂದು, ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ದಿನನಿತ್ಯ ಸಲೂನ್ ಬಳಿ ಬರುತ್ತಿದ್ದ ಈ ಮಂಗ, ಒಳಗೆ ಬಂದು ಕನ್ನಡಿಯಲ್ಲಿ ತನ್ನನ್ನು ತಾನು ನೋಡಿಕೊಳ್ಳುತ್ತಿತ್ತು. ಎಷ್ಟೇ ಗದರಿಸಿದರೂ ಕ್ಷೌರಿಕನ ಕೆಲಸ ಮುಗಿಯುವ ವರೆಗೂ ಅಲ್ಲಿಂದ ಕದಲುತ್ತಿರಲಿಲ್ಲ. ಮಂಗನ ಈ ನಡೆ ಗಮನಿಸಿದ ಸಲೂನ್ ಮಾಲೀಕ ದೇವರಾಜ್, ಪ್ರೀತಿಯಿಂದ ಅದರ ತಲೆ…

Read More

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು! – Kannada News | Bird Flu Scare in Tumakuru: Over 54 Peacocks Dead; Chicken Lab Reports Negative

ತುಮಕೂರು, ಮೇ 08: ಜಿಲ್ಲೆಯಲ್ಲಿ ಹಕ್ಕಿ ಜ್ವರದ (Bird Flu) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ 44 ನವಿಲುಗಳು ಮತ್ತು 30 ಕೋಳಿಗಳು ಸಾವನ್ನಪ್ಪಿದ್ದವು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂದು ಲ್ಯಾಬ್ ವರದಿ ದೃಢಪಡಿಸಿತ್ತು. ಕೋಳಿಗಳ ಸಾವಿಗೆ ಸಂಬಂಧಿಸಿದಂತೆ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತಷ್ಟು ನವಿಲುಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಮುಖ್ಯಾಂಶಗಳು ತುಮಕೂರು ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 54ಕ್ಕೂ ಅಧಿಕ ನವಿಲುಗಳ…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಯಿತು ಸಮ್ಮರ್ ಸೇಲ್: ಸ್ಮಾರ್ಟ್‌ಫೋನ್‌ಗಳಿಂದ ಟಿವಿಗಳವರೆಗೆ ಎಲ್ಲವೂ ಅಗ್ಗ – Kannada News | Amazon Great Summer Sale Start platform offer huge discounts on smartphones and others

ಬೆಂಗಳೂರು (ಮೇ. 08): ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ (Amazon Summer Sale) ಇಂದಿನಿಂದ ಅಂದರೆ ಮೇ 8 ರಂದು ಎಲ್ಲಾ ಬಳಕೆದಾರರಿಗೆ ಪ್ರಾರಂಭವಾಗಿದೆ. ಪ್ರೈಮ್ ಸದಸ್ಯರಿಗೆ, ಈ ಸೇಲ್ ನಿನ್ನೆ, ಮೇ 7 ರಂದು ಲೈವ್ ಆಗಿತ್ತು. ಇ-ಕಾಮರ್ಸ್ ಕಂಪನಿಯು ಪ್ರೈಮ್ ಸದಸ್ಯರಿಗೆ ಆರಂಭಿಕ ಪ್ರವೇಶವನ್ನು ನೀಡುತ್ತದೆ. ವರ್ಷದ ಈ ಮೊದಲ ಪ್ರಮುಖ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್ ಟಿವಿಗಳವರೆಗೆ ಎಲ್ಲವೂ ರಿಯಾಯಿತಿಯಲ್ಲಿ ಲಭ್ಯವಿದೆ. ಮತ್ತೊಂದೆಡೆ ಫ್ಲಿಪ್‌ಕಾರ್ಟ್ ನಾಳೆಯಿಂದ, ಮೇ 9 ರಂದು ಹೊಸ ಸೇಲ್ ಅನ್ನು…

Read More

ದಳಪತಿ ವಿಜಯ್ ಜೀವನದಲ್ಲಿ ನಿಜವಾಯ್ತು ‘ಸರ್ಕಾರ್’ ಸಿನಿಮಾದ ದೃಶ್ಯ – Kannada News | Thalapathy Vijay’s CM Bid: DMK AIADMK Alliance to Block TVK in Tamil Nadu Politics?

ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಇತ್ತೀಚೆಗೆ ತಮಿಳುನಾಡು ರಾಜಕೀಯ ಸುದ್ದಿಯಲ್ಲಿದೆ. ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಮ್ (ಟಿವಿಕೆ) ಪಕ್ಷವು ಐತಿಹಾಸಿಕ ಗೆಲುವು ಸಾಧಿಸಿದೆ. ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಏರ್ಪಡಲಿದೆ ಎಂಬ ವದಂತಿಗಳಿವೆ. ಈ ಎರಡು ವಿರೋಧ ಪಕ್ಷಗಳ ನಡುವಿನ ಮೈತ್ರಿಯ ಸುದ್ದಿ ಎಷ್ಟು ನಿಜ ಎಂಬುದು ಸ್ಪಷ್ಟವಾಗಿಲ್ಲವಾದರೂ, ದಳಪತಿ ವಿಜಯ್ ಮುಖ್ಯಮಂತ್ರಿಯಾಗುವ ಪ್ರಯಾಣ ಸುಲಭವಲ್ಲ…

Read More

ಮಿತಿಮೀರಿದ ಆಟಗಾರರ ವರ್ತನೆ; ಶಿಸ್ತುಕ್ರಮದ ಎಚ್ಚರಿಕೆ ಕೊಟ್ಟ ಬಿಸಿಸಿಐ – Kannada News | IPL Discipline Crackdown: BCCI Warns Players and Owners on Misconduct Rules

ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಟಗಾರರಿಂದ ಪದೇ ಪದೇ ಶಿಸ್ತು ಉಲ್ಲಂಘನೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಆಟಗಾರರು ಮತ್ತು ಅಧಿಕಾರಿಗಳ ಕೊಠಡಿಗಳಿಗೆ ಅನಧಿಕೃತ ವ್ಯಕ್ತಿಗಳ ಭೇಟಿ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ‘ನಾವು ಸುಮ್ಮನೆ ಕುಳಿತಿಲ್ಲ, ನಿಯಮ ಮೀರಿದರೆ ಕಠಿಣ ಶಿಕ್ಷೆ ಖಚಿತ’ ಎಂದು ಎಚ್ಚರಿಸಿದ್ದಾರೆ. ಕೆಲವು ತಂಡಗಳ ಆಟಗಾರರು ಮತ್ತು ಫ್ರಾಂಚೈಸಿಗಳು ಬಿಸಿಸಿಐ ನಿಗದಿಪಡಿಸಿದ ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಮರೆತಿವೆ ಎಂಬ ಆರೋಪ ಕೇಳಿಬಂದಿದೆ….

Read More

ಕೋಲಾರ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು! – Kannada News | Theft in Kolar: Thieves Set House on Fire After Looting Cash and Jewelry in Mallasandra

ಕೋಲಾರ, ಮೇ 7: ಜಿಲ್ಲೆಯ ಕೋಲಾರ ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ತಡರಾತ್ರಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ಹಾಗೂ ನಗದನ್ನು ದೋಚಿ ನಂತರ ಕೃತ್ಯ ಬೆಳಕಿಗೆ ಬಾರದೇ ಇರಲು ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಗ್ರಾಮದ ಶಾರದಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಜೀವನೋಪಾಯಕ್ಕಾಗಿ ಟೀ ಅಂಗಡಿ ನಡೆಸುತ್ತಿದ್ದ ಈ ಬಡ ಕುಟುಂಬ ಇದೀಗ ಬೀದಿಗೆ ಬಿದ್ದಿದೆ. ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಾಕರ್ ಮುರಿದು ಅದರಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು…

Read More

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್ – Kannada News | Ballari SP Gunman Arrested for Extorting Money from Illegal Ration Rice Smugglers

ಬಳ್ಳಾರಿ, ಮೇ 08: ಜಿಲ್ಲೆಯಲ್ಲಿಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ (Ballary) ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಬಂಧನಕ್ಕೊಳಗಾಗಿರುವ ಘಟನೆ ಸಂಚಲನ ಮೂಡಿಸಿದೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ದೇವರಾಜ್ ಹಾಗೂ ಆತನ ಸಹಚರರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಮುಖ್ಯಾಂಶಗಳು ಬಳ್ಳಾರಿ ಎಸ್ಪಿ ಗನ್ ಮ್ಯಾನ್ ದೇವರಾಜ್ ಅಕ್ರಮ ಅಕ್ಕಿ ಸಾಗಾಣಿಕೆದಾರರಿಂದ ಹಣ ವಸೂಲಿ ಮಾಡಿದ ಆರೋಪದಡಿ ಬಂಧನ….

Read More

Age Gap in Marriage: ತಮಗಿಂತ ವಯಸ್ಸಿನಲ್ಲಿ ಹಿರಿಯ ಮಹಿಳೆಯನ್ನು ಪುರುಷರು ವಿವಾಹವಾಗಬಾರದೇ? – Kannada News | Age Gap in Marriage: A Spiritual and Cultural Perspective on Men Marrying Older Women

ವಿವಾಹವೆಂಬುದು ಮನುಷ್ಯನ ಜೀವನದ ಒಂದು ಪ್ರಮುಖ ಘಟ್ಟ. ಇದು ದೈವ ಸಂಕಲ್ಪವೂ ಹೌದು. ವಿವಾಹಗಳಲ್ಲಿ ಪ್ರೇಮ ವಿವಾಹ, ಅರೇಂಜ್ ಮ್ಯಾರೇಜ್​​ ಸಾಮಾನ್ಯವಾಗಿವೆ. ಆದರೆ, ವಯಸ್ಸಿಗೆ ಪ್ರಾಶಸ್ತ್ಯ ನೀಡಬೇಕೇ, ಕೊಡಬಾರದೇ ಎಂಬ ಪ್ರಶ್ನೆ ಸದಾ ಕಾಡುತ್ತದೆ. ಗಂಡು ತಮ್ಮಿಗಿಂತ ವಯಸ್ಸಿನಲ್ಲಿ ಹೆಚ್ಚಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ ಅಶುಭವೇ ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಎಲ್ಲ ಗೊಂದಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ….

Read More