ಕ್ರಿಕೆಟಿಗ ಸೂರ್ಯ ಹಾಗೂ ದೇವಿಶಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನನ – Kannada News | Suryakumar yadav and devisha shetty Welcomes Baby Girl
2026 ರ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್ಗೆ ಈ ಸೀಸನ್ ಅಂದುಕೊಂಡಂತೆ ನಡೆದಿಲ್ಲ. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಸೂರ್ಯಕುಮಾರ್ ರನ್ ಬರ ಎದುರಿಸುತ್ತಿದ್ದಾರೆ. ಹೀಗಾಗಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಸೂರ್ಯಕುಮಾರ್ಗೆ ವೈಯಕ್ತಿಕ ಬದುಕಿನಲ್ಲಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅವರ ಮಡದಿ ದೇವಿಶಾ ಶೆಟ್ಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸ್ವತಃ ಈ ವಿಚಾರವನ್ನು ಸೂರ್ಯಕುಮಾರ್ ಯಾದವ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ….