ಬಿಡದಿ ಟೌನ್‌ಶಿಪ್ ವಿರೋಧಿಸಿ ಪ್ರತಿಭಟನೆ: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಮೆಗಾ ಕೌಂಟರ್ – Kannada News | Bidadi Township Row: DK Shivakumar’s Mega Counter to Opposition
ಬೆಂಗಳೂರು, ಆಗಸ್ಟ್ 09: ‘ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ (Bidadi Township Project) ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಮಾಹಿತಿ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ: ಸಿಎಂ ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ‘ಗ್ರೇಟರ್ ಬೆಂಗಳೂರು ಅಭಿವೃದ್ಧಿ…