ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ – Kannada News | Shakti Scheme Revision: Karnataka Govt to Issue Smart Cards with Voter ID Mandatory to Stop Misuse by Other State Women
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ…