07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ.

ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು?

ಸೋಮವಾರ (ಮೇ 25) ಹಾರ್ದಿಕ್ ಪಾಂಡ್ಯ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಲ್ಯಾಪ್ ಟಾಪ್, ಮೊಬೈಲ್ ಇತ್ತು. ಆ ಮೊಬೈಲ್ ಸ್ಕ್ರೀನ್ ಮೇಲೆ ಸಮಯ 07:07 ಎಂದು ತೋರಿಸಲಾಗಿತ್ತು. ಕ್ರಿಕೆಟ್ ಲೋಕದಲ್ಲಿ ‘7’ ಎಂದರೆ ಅದು ಎಂ.ಎಸ್. ಧೋನಿ. ಧೋನಿ.

ಹೀಗಾಗಿ, ಹಾರ್ದಿಕ್ ಪಾಂಡ್ಯ ಬೇಕೆಂದೇ ಧೋನಿ ಅವರ ನಂಬರ್ ಇರುವ ಸಮಯದ ಫೋಟೋ ಹಾಕಿ, ತಾವು CSK ಸೇರುವ ಬಗ್ಗೆ ಸುಳಿವು ನೀಡಿದ್ದಾರೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಲಾರಂಭಿಸಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಈ ಬಾರಿಯ ಐಪಿಎಲ್​ ನಡುವೆ  ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್​ಗೆ ಟ್ರೇಡ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಪಾಂಡ್ಯ ಹಂಚಿಕೊಂಡಿರುವ ಪೋಸ್ಟ್​ನಿಂದಾಗಿ ಈ ಸುದ್ದಿಯು ಮಹತ್ವ ಪಡೆದುಕೊಂಡಿದೆ.

;

ಮುಂಬೈ ನಾಯಕನ ಮೇಲೆ ಸಿಎಸ್​ಕೆ ಕಣ್ಣು?

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಳೆದ ಎರಡು ಸೀಸನ್​ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಹೀಗಾಗಿಯೇ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕೈ ಬಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇದರ ನಡುವೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಮೈದಾನದಲ್ಲಿ ಸುದೀರ್ಘ ಚರ್ಚೆ ನಡೆಸುತ್ತಿರುವುದು ಕಂಡುಬಂದಿತ್ತು.

ಈ ಮಾತುಕತೆ ಬೆನ್ನಲ್ಲೇ ಸಿಎಸ್​ಕೆ ರುತುರಾಜ್ ಗಾಯಕ್ವಾಡ್ ಅಥವಾ ಶಿವಂ ದುಬೆಯನ್ನು ನೀಡಿ ಹಾರ್ದಿಕ್ ಪಾಂಡ್ಯರನ್ನು ಟ್ರೇಡ್ ಮಾಡಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿತ್ತು. ಇದೀಗ ಹಾರ್ದಿಕ್ ಪಾಂಡ್ಯ ಹಂಚಿಕೊಂಡ ಒಂದೇ ಒಂದು ಪೋಸ್ಟ್​ನಿಂದ ಈ ಸುದ್ದಿಗಳು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: RCB ಪರ ಇನಿಂಗ್ಸ್ ಆರಂಭಿಸುವವರು ಯಾರು?

ಇದಾಗ್ಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಡೆಯಿಂದಾಗಲಿ, ಅಥವಾ ಚೆನ್ನೈ ಸೂಪರ್ ಕಿಂಗ್ಸ್ ಕಡೆಯಿಂದಾಗಲಿ ಈ ಟ್ರೇಡಿಂಗ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿ ಕೊಡುವ ಬಗ್ಗೆ ಖಚಿತತೆ ಸಿಗಲು ಮತ್ತೊಂದಷ್ಟು ದಿನಗಳವರೆಗೆ ಕಾಯಲೇಬೇಕಾಗುತ್ತದೆ.

Source link

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI ಇಂದು 55 ರಿಂದ 69ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದು ಸಾಧಾರಣ ಎಂದು ಹೇಳಲಾಗಿದೆ. ಮಳೆಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು PM2.5 ಮತ್ತು PM10 ಇದೆ. ಹೆಬ್ಬಾಳ ಮತ್ತು ಜಯನಗರದಲ್ಲಿ ವಾಯು ಗುಣಮಟ್ಟ ಉತ್ತಮವಾಗಿದ್ದರೆ, ಸಿಲ್ಕ್ ಬೋರ್ಡ್‌ನಂತಹ ದಟ್ಟ ಟ್ರಾಫಿಕ್ ವಲಯಗಳಲ್ಲಿ ಮಾತ್ರ ಕೊಂಚ ಹೆಚ್ಚಿನ ಮಾಲಿನ್ಯ ಕಂಡುಬಂದಿದೆ.

ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಮಡಿಕೇರಿ ಜಿಲ್ಲೆಗಳಲ್ಲಿ ಇಂದು ವಾಯು ಗುಣಮಟ್ಟವು ‘Good’ (ಉತ್ತಮ – 50ಕ್ಕಿಂತ ಕಡಿಮೆ) ವಲಯದಲ್ಲಿದೆ. ಇಲ್ಲಿ ನಿರಂತರ ಗಾಳಿ ಮತ್ತು ಮಳೆಯ ಮುನ್ಸೂಚನೆ ಇರುವುದರಿಂದ ವಾತಾವರಣವು ಕಂಪ್ಲೀಟ್ ಫ್ರೆಶ್ ಆಗಿದೆ. ಶ್ವಾಸಕೋಶದ ತೊಂದರೆ ಇರುವವರು ಹಾಗೂ ಹಿರಿಯ ನಾಗರಿಕರು ಮುಕ್ತವಾಗಿ ಹೊರಗೆ ಓಡಾಡಬಹುದು.

ಇದನ್ನೂ ಓದಿ: ರಾಜ್ಯದ ಜನತೆಗೆ ಸಿಕ್ತು ಬಿಸಿಲಿನಿಂದ ಬಿಗ್ ರಿಲೀಫ್!; ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು? – Kannada News | Salman Khan’s Instagram Account Vanishes and Reappears: The Mysterious 30 Minute Disappearance

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan), ಸದಾ ಸಿನಿಮಾಗಳ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಹೊಸ ಸಿನಿಮಾ ‘ಮಾತೃಭೂಮಿ’ ಹಾಗೂ ಇತ್ತೀಚಿನ ಪಾಪರಾಜಿ ವಿವಾದಗಳಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಪಾಪರಾಜಿಗಳ ವರ್ತನೆಗೆ ತೀವ್ರ ಕೋಪ ವ್ಯಕ್ತಪಡಿಸಿದ್ದ ನಟ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಕೆಲವು ನಿಗೂಢ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು.

ಅಭಿಮಾನಿಗಳು ಇನ್‌ಸ್ಟಾಗ್ರಾಮ್‌ನಲ್ಲಿ ಸಲ್ಮಾನ್ ಖಾನ್ ಅವರ ಪ್ರೊಫೈಲ್ ಹುಡುಕಿದಾಗ, ಅವರ ಅಧಿಕೃತ ಖಾತೆ ಯಾರಿಗೂ ಕಾಣಿಸಲಿಲ್ಲ. ಬದಲಿಗೆ ‘ಕ್ಷಮಿಸಿ, ಈ ಪುಟ ಲಭ್ಯವಿಲ್ಲ’ ಎಂಬ ಸಂದೇಶವೊಂದು ಪರದೆಯ ಮೇಲೆ ಮೂಡಿಬರುತ್ತಿತ್ತು. ಇದನ್ನು ನೋಡಿದ ತಕ್ಷಣವೇ ಸಲ್ಮಾನ್ ಅಭಿಮಾನಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಭಾಯಿಜಾನ್ ಅವರ ಇನ್‌ಸ್ಟಾಗ್ರಾಮ್ ಖಾತೆಯನ್ನು ಯಾರಾದರೂ ಹ್ಯಾಕ್ ಮಾಡಿದ್ದಾರೋ? ಅಥವಾ ಅವರೇ ಅದನ್ನು ಪರ್ಮನೆಂಟ್ ಆಗಿ ಡಿಲೀಟ್ ಮಾಡಿದ್ದಾರೋ? ಇಲ್ಲವೇ ಸದ್ಯದ ವಿವಾದಗಳಿಂದ ಬೇಸತ್ತು ಕೆಲವು ದಿನಗಳ ಮಟ್ಟಿಗೆ ತಾವೇ ಅಕೌಂಟ್ ಅನ್ನು ಡೀಆಕ್ಟಿವೇಟ್ (ನಿಷ್ಕ್ರಿಯ) ಮಾಡಿಕೊಂಡಿದ್ದಾರೋ? ಎಂಬ ಗೊಂದಲದಲ್ಲಿ ಮುಳುಗಿದ್ದರು.

ಸಲ್ಮಾನ್ ಖಾನ್ ಅವರ ಇನ್‌ಸ್ಟಾಗ್ರಾಮ್ ಖಾತೆ ಮಾಯವಾಗುತ್ತಿದ್ದಂತೆಯೇ, ಅದಕ್ಕೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳು ಮತ್ತು ಅಭಿಮಾನಿಗಳ ಆತಂಕದ ಪ್ರತಿಕ್ರಿಯೆಗಳು ಇಡೀ ಇಂಟರ್ನೆಟ್‌ನಲ್ಲಿ ಕಾಳ್ಗಿಚ್ಚಿನಂತೆ ಹರಡಿದವು. ಇದರಿಂದ ಕಂಗಾಲಾದ ನಟನ ಕೋಟ್ಯಂತರ ಅಭಿಮಾನಿಗಳು ವೇದಿಕೆಯಲ್ಲಿ ಭಾಯಿಜಾನ್ ಅಕೌಂಟ್ ಬಗ್ಗೆಯೇ ನಿರಂತರವಾಗಿ ಚರ್ಚೆ ಆರಂಭಿಸಿದರು. ಪ್ರಾರ್ಥನೆಗಳ ಮೂಲಕ ಅವರ ಖಾತೆಗೆ ಏನೂ ಆಗಿರಬಾರದು ಎಂದು ಆಶಿಸಿದರು. ಖಾತೆ ಕಣ್ಮರೆಯಾದ ಕೇವಲ 30 ನಿಮಿಷಗಳಲ್ಲೇ ಸಲ್ಮಾನ್ ಅವರ ಇನ್‌ಸ್ಟಾಗ್ರಾಮ್ ಖಾತೆ ಮತ್ತೆ ಯಥಾಸ್ಥಿತಿಗೆ ಮರಳಿತು. ಇದು ಅಭಿಮಾನಿಗಳಿಗೆ ನಿರಾಳತೆ ತಂದರೂ, ಅಚ್ಚರಿ ಮೂಡಿಸಿದೆ.

ಇನ್‌ಸ್ಟಾಗ್ರಾಮ್ ಖಾತೆ ದಿಢೀರ್ ಮಾಯವಾಗಿ, ಅರ್ಧ ಗಂಟೆಯಲ್ಲೇ ವಾಪಸ್ ಬಂದ ಈ ಇಡೀ ಹೈಡ್ರಾಮಾ ಬಗ್ಗೆ ನಟ ಸಲ್ಮಾನ್ ಖಾನ್ ಆಗಲಿ ಅಥವಾ ಅವರ ಪಿಆರ್ (PR) ತಂಡವಾಗಲಿ ಈವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಹಾಗಾಗಿ, ಇನ್‌ಸ್ಟಾಗ್ರಾಮ್‌ನಲ್ಲಿ ಉಂಟಾದ ಯಾವುದಾದರೂ ತಾಂತ್ರಿಕ ದೋಷದಿಂದ ಹೀಗಾಯಿತೇ? ಅಥವಾ ಸಲ್ಮಾನ್ ಅವರೇ ಸ್ವತಃ ಅಕೌಂಟ್ ಕ್ಲೋಸ್ ಮಾಡಿದ್ದರೇ? ಅಥವಾ ಬೇರೆ ಯಾರಾದರೂ ಅವರ ಖಾತೆಯನ್ನು ಹ್ಯಾಕ್ ಮಾಡಲು ಪ್ರಯತ್ನಿಸಿದಾಗ ಇನ್‌ಸ್ಟಾಗ್ರಾಮ್ ಭದ್ರತಾ ಕಾರಣಗಳಿಗಾಗಿ ಅದನ್ನು ಬ್ಲಾಕ್ ಮಾಡಿತ್ತೇ? ಎಂಬ ಅಸಲಿ ಸತ್ಯ ಇನ್ನು ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: ಆಸ್ಪತ್ರೆ ಎದುರು ಗಲಾಟೆ; ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ರಾಜಿ ಮಾಡಿಕೊಂಡ ಪಾಪರಾಜಿಗಳು

ಇಲ್ಲಿ ಗಮನಿಸಬೇಕಾದ ಪ್ರಮುಖ ವಿಷಯವೆಂದರೆ, ಸಲ್ಮಾನ್ ಖಾನ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 72 ಮಿಲಿಯನ್‌ಗಿಂತಲೂ 7.2 ಕೋಟಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಅವರು ನಿಯಮಿತವಾಗಿ ತಮ್ಮ ಮುಂಬರುವ ಚಿತ್ರಗಳ ಅಪ್‌ಡೇಟ್‌ಗಳು, ಜಿಮ್ ಫಿಟ್‌ನೆಸ್ ವಿಡಿಯೋಗಳು ಮತ್ತು ಕುಟುಂಬದ ಜೊತೆಗಿನ ಸುಂದರ ಕ್ಷಣಗಳನ್ನು ಈ ವೇದಿಕೆಯ ಮೂಲಕವೇ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇಂತಹ ಪ್ರಭಾವಿ ಖಾತೆ ದಿಢೀರ್ ಕಣ್ಮರೆಯಾಗಿರುವುದು ಸದ್ಯ ಬಾಲಿವುಡ್ ಅಂಗಳದಲ್ಲಿ ದೊಡ್ಡ ಇಂಟರೆಸ್ಟಿಂಗ್ ಸುದ್ದಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ – Kannada News | Belagavi Road Accident: Parents and 9 Month Old Baby Killed on the Spot as Wrong Side Goods Auto Rams Bike in Rayabag

ಅಪಘಾತದ ತೀವ್ರತೆಗೆ ಗೂಡ್ಸ್ ಆಟೋ ಪಲ್ಟಿಯಾಗಿರುವುದುImage Credit source: tv9

ಬೆಳಗಾವಿ, ಮೇ 26: ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ರಾಂಗ್ ಸೈಡ್​ನಲ್ಲಿ ಬಂದ ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಕಂದಮ್ಮ ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಒಂಬತ್ತು ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗುವಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮುಖ್ಯಾಂಶಗಳು

  • ಬೈಕ್‌ಗೆ ಗೂಡ್ಸ್ ಆಟೋ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು.
  • ಬೊಮ್ಮನಾಳ ಗ್ರಾಮದಿಂದ ರಾಯಬಾಗಕ್ಕೆ ತೆರಳುವ ರಸ್ತೆಯಲ್ಲಿ ಘಟನೆ.
  • ಆಟೋ ಚಾಲಕನ ಬೇಜವಾಬ್ದಾರಿಯೇ ದುರಂತಕ್ಕೆ ಕಾರಣ.

ಗ್ರಾಮದಲ್ಲಿ ಸೂತಕದ ಛಾಯೆ

ಮಹಾಂತೇಶ್ ಮಾನೆ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ಬೈಕ್‌ನಲ್ಲಿ ರಾಯಬಾಗ ಪಟ್ಟಣಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಮತ್ತು ರಾಂಗ್ ಸೈಡ್‌ನಲ್ಲಿ ಬಂದ ಗೂಡ್ಸ್ ಆಟೋ ಚಾಲಕ ಬೈಕ್‌ಗೆ ನೇರವಾಗಿ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಆಟೋ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ ಮೂವರು ಅಸುನೀಗಿರುವುದಕ್ಕೆ ಬೊಮ್ಮನಾಳ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ

ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆಟೋ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾನು ಮಗಳನ್ನು ಕಳೆದುಕೊಂಡಿದ್ದೇನೆ, ಮಮತಾ ಅಧಿಕಾರವನ್ನು, ಆರ್​ಜಿ ಕರ್ ಸಂತ್ರಸ್ತೆಯ ತಾಯಿಯ ಭಾವುಕ ಮಾತು – Kannada News | Mamata Defeat: RG Kar Victim’s Mother Calls It Justice’s First Step

ಕೋಲ್ಕತ್ತಾ, ಮೇ 26: ಪಶ್ಚಿಮ ಬಂಗಾಳ(West Bengal)ದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರ ಪತನಗೊಂಡು, ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಇದರ ಬೆನ್ನಲ್ಲೇ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದ ವೈದ್ಯೆಯ ತಾಯಿ ಹಾಗೂ ಪ್ರಸ್ತುತ ಪಾಣಿಹಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ನಬನ್ನಾದ 14ನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಭೇಟಿಯಾದ ನಂತರ ರತ್ನಾ ದೇಬ್ನಾಥ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರಾಮಾಣಿಕತೆಯ ಶಕ್ತಿ ಅಪಾರವಾಗಿದೆ. ಅನ್ಯಾಯದ ವಿರುದ್ಧ ತಾಳ್ಮೆಯಿಂದ ಹೋರಾಡುವುದು ಮಾತ್ರ ನಮಗೆ ಅಗತ್ಯವಾಗಿತ್ತು ಎಂದು ಬರೆದಿರುವ ಅವರು, ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ಚುನಾವಣಾ ಸೋಲನ್ನು ತಮ್ಮ ಮಗಳ ಸಾವಿಗೆ ಹೋಲಿಸಿದ್ದಾರೆ.

ರತ್ನಾ ದೇಬ್ನಾಥ್ ಅವರ ವರ್ಷದ ಮಗಳು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆಯಾಗಿದ್ದರು. 2024ರ ಆಗಸ್ಟ್ 8 ಮತ್ತು 9ರ ಮಧ್ಯರಾತ್ರಿ ಆಸ್ಪತ್ರೆಯ ಸೆಮಿನಾರ್ ಕೋಣೆಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಯು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಮತ್ತಷ್ಟು ಓದಿ: ಸುವೇಂದು ಆಪ್ತ ಸಹಾಯಕ ಚಂದ್ರನಾಥ್ ರಥ್ ಕೊಲೆಯಾಗಿದ್ದು ಹೇಗೆ? ಭೀಕರ ಕೃತ್ಯದ ವಿವರ ಇಲ್ಲಿದೆ

ಹಿಂದಿನ ಟಿಎಂಸಿ ಸರ್ಕಾರ ಮತ್ತು ಕೋಲ್ಕತ್ತಾ ಪೊಲೀಸರು ಆರೋಪಿಗಳನ್ನು ರಕ್ಷಿಸಲು ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಮೊದಲಿನಿಂದಲೂ ಆರೋಪಿಸುತ್ತಾ ಬಂದಿದ್ದಾರೆ. ಕೋಲ್ಕತ್ತಾ ಹೈಕೋರ್ಟ್​ ನಿರ್ದೇಶನದಂತೆ ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದರ ತನಿಖೆ ನಡೆಸುತ್ತಿದ್ದು, ಕಳೆದ ವಾರವಷ್ಟೇ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಅಧಿಕಾರಕ್ಕೆ ಬಂದ ತಕ್ಷಣವೇ ಆ್ಯಕ್ಷನ್‌ಗೆ ಇಳಿದಿರುವ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಆರ್‌ಜಿ ಕರ್ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಹಾಗೂ ಪ್ರಮುಖ ಹುದ್ದೆಗಳಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿಗಳಾದ ವಿನೀತ್ ಗೋಯಲ್, ಇಂದಿರಾ ಮುಖರ್ಜಿ ಮತ್ತು ಅಭಿಷೇಕ್ ಗುಪ್ತಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಅಲ್ಲದೆ, ಈ ಮೂವರ ವಿರುದ್ಧ ಇಲಾಖಾ ವಿಚಾರಣೆಗೂ ಆದೇಶಿಸಿದ್ದಾರೆ.

ನಾನು ಇಂದು ಶಾಸಕಿಯಾಗಿರಬಹುದು, ಆದರೆ ನನ್ನ ಜೀವನದ ಎಲ್ಲಾ ಸಂತೋಷಗಳು ಮಗಳೊಂದಿಗೆ ಹೋಗಿವೆ. ನನ್ನ ಏಕೈಕ ಉದ್ದೇಶ ನನ್ನ ಮಗಳಿಗೆ ನ್ಯಾಯ ಸಿಗುವುದಾಗಿದೆ. ಈ ಹಿಂದೆ ತನಿಖಾಧಿಕಾರಿಗಳಿಗೆ ನೀಡಿದ್ದ ಪ್ರಮುಖ ಶಂಕಿತರ ಹೆಸರುಗಳ ಪಟ್ಟಿಯನ್ನು ಈಗ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೂ ಸಲ್ಲಿಸಿದ್ದೇನೆ ಎಂದು ರತ್ನಾ ದೇಬ್ನಾಥ್ ಭಾವುಕರಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ – Kannada News | India’s First Integrated 108 Ambulance Command Centre Launched in Bengaluru by CM Siddaramaiah

ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ ಲೋಕಾರ್ಪಣೆImage Credit source: Karnataka Govt

ಬೆಂಗಳೂರು, ಮೇ 26: ಸಾರ್ವಜನಿಕರಿಗೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಗಳು ಅತ್ಯಂತ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ. ಆ್ಯಂಬುಲೆನ್ಸ್ (Ambulance) ಸಿಗದೆ ರೋಗಿಗಳು ಪರದಾಡುವ ಸ್ಥಿತಿಗೆ ಮುಕ್ತಿಹಾಡಲು ಮುಂದಾಗಿರುವ ಕರ್ನಾಟಕ ಸರ್ಕಾರ, 108 ಆರೋಗ್ಯ ಕವಚ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದೆ. ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ, ದೇಶದಲ್ಲೇ ಪ್ರಥಮ ಮಾದರಿಯ ‘ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ರೂಂ’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 25ರ ಸೋಮವಾರದಂದು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ‘ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭವಾಗಿರುವ ಈ ವ್ಯವಸ್ಥೆಯು ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದೆ.

ಮುಖ್ಯಾಂಶಗಳು

  • ಒಂದೇ ಸೂರಿನಡಿ ಲಭ್ಯವಾಗಲಿವೆ ರಾಜ್ಯದ ಎಲ್ಲಾ ಪ್ರಮುಖ ತುರ್ತು ಸಹಾಯವಾಣಿಗಳು.
  • ಎಲ್ಲ ಭಾಗ್ಯಗಳಿಗಿಂತ ಜನರ ಆರೋಗ್ಯ ಭಾಗ್ಯವೇ ನಮಗೆ ಅತಿ ಮುಖ್ಯ ಎಂದ ಸಿಎಂ.
  • ಬಜೆಟ್ ಭರವಸೆಯಂತೆ ಸರ್ಕಾರದಿಂದಲೇ ಜವಾಬ್ದಾರಿ ಹೊತ್ತು ಹೈಟೆಕ್ ಕೇಂದ್ರ ಸ್ಥಾಪನೆ.

ತ್ವರಿತ ಮತ್ತು ವಿಶ್ವಾಸಾರ್ಹ ತುರ್ತು ಸೇವೆ

ಈ ನೂತನ ಕಮಾಂಡ್ ಸೆಂಟರ್ ಸಾರ್ವಜನಿಕರತುರ್ತು ಅಗತ್ಯಗಳಿಗೆ ಒಂದೇ ಕಂಟ್ರೋಲ್ ರೂಂ ಮೂಲಕ ತಕ್ಷಣ ಸ್ಪಂದಿಸಲಿದೆ. ಗಂಭೀರ ಹಾಗೂ ಸಾಮಾನ್ಯ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಮತ್ತು ಬೇಸಿಕ್ ಲೈಫ್ ಸಪೋರ್ಟ್ (BLS) ಆ್ಯಂಬುಲೆನ್ಸ್ ಕಾರ್ಯಾಚರಣೆಯನ್ನು ಇದು ನಿಯಂತ್ರಿಸಲಿದೆ. ಅಪಘಾತದ ಪ್ರಕರಣಗಳು, ಗರ್ಭಿಣಿಯರ ಆರೈಕೆ ಮತ್ತು ತೀವ್ರ ನಿಗಾ ಅಗತ್ಯವಿರುವ ರೋಗಿಗಳನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಉನ್ನತ ಆರೋಗ್ಯ ಸಂಸ್ಥೆಗೆ ಸುರಕ್ಷಿತವಾಗಿ ರವಾನಿಸಲು ಈ ತಂತ್ರಜ್ಞಾನ ಸಹಕಾರಿಯಾಗಲಿದೆ.

ಸಿದ್ದರಾಮಯ್ಯರಿಂದ ಲೋಕಾರ್ಪಣೆ

ಇದನ್ನೂ ಓದಿ: ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

ಈ ಹಿಂದೆ ತಾಂತ್ರಿಕ ಅಡಚಣೆಗಳಿಂದಾಗಿ 108 ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಸುಧಾರಿಸುವಂತೆ ಸಿಎಂ ನೀಡಿದ್ದ ಖಡಕ್ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆ ಸ್ವತಃ ಜವಾಬ್ದಾರಿ ಹೊತ್ತು ಈ ಹೈಟೆಕ್ ಕೇಂದ್ರವನ್ನು ಸಿದ್ಧಪಡಿಸಿದೆ. ಅತ್ಯಾಧುನಿಕ ಜಿಪಿಎಸ್ ಮತ್ತು ಡಿಜಿಟಲ್ ನೆಟ್‌ವರ್ಕ್ ಹೊಂದಿರುವ ಈ ಹೊಸ ಕಂಟ್ರೋಲ್ ರೂಂ, ಸಾರ್ವಜನಿಕರ ಕರೆ ಬಂದ ತಕ್ಷಣ ಹತ್ತಿರದ ಆ್ಯಂಬುಲೆನ್ಸ್ ಅನ್ನು ಸ್ಥಳಕ್ಕೆ ರವಾನಿಸುವ ಮೂಲಕ ಅಮೂಲ್ಯ ಪ್ರಾಣಗಳನ್ನು ಉಳಿಸಲು ನೆರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:23 am, Tue, 26 May 26

Source link

ಆರ್​​ಆರ್​ ವಿರುದ್ಧ ಕೇಸ್ ಹಾಕಿದ ಅರ್ಜುನ್ ಕಪೂರ್? ಪೋಸ್ಟ್​ ಡಿಲೀಟ್​ಗೆ ಇದುವೇ ಕಾರಣ – Kannada News | Arjun Kapoor vs RR: Why Rajasthan Royals Deleted Controversial IPL Meme on Personality Rights

ಐಪಿಎಲ್ 2026ರ ಪ್ಲೇಆಫ್ ರೇಸ್‌ನಿಂದ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ಬೆನ್ನಲ್ಲೇ, ಸೋಶಿಯಲ್ ಮೀಡಿಯಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಕಿದ್ದ ಮೀಮ್ ಒಂದು ಚರ್ಚೆ ಹುಟ್ಟುಹಾಕಿತ್ತು. ಈ ಮೀಮ್ ಪಂಜಾಬ್ ಕಾಲೆಳೆಯಲು ಹಾಕಿದ್ದಾದರೂ ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಘನತೆಗೆ ಧಕ್ಕೆ ತರುವ ರೀತಿ ಇತ್ತು. ಈಗ ಈ ಮೀಮ್​ ಅನ್ನು ಡಿಲೀಟ್ ಮಾಡಲಾಗಿದೆ. ಅರ್ಜುನ್ ಕಪೂರ್ ಅವರು ಆರ್ಆರ್ ಫ್ರಾಂಚೈಸಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರ್​​ಆರ್​ ತಂಡದವರು ಈ ಪೋಸ್ಟ್​​ನ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ.

ಶನಿವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ ಗೆದ್ದಿದ್ದ ಪಂಜಾಬ್ ಕಿಂಗ್ಸ್ 15 ಅಂಕ ಪಡೆದು ಪ್ಲೇಆಫ್ ಆಶಯವನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 30 ರನ್‌ಗಳ ಭರ್ಜರಿ ಗೆಲುವು ಸಾಧಿಸಿ 16 ಅಂಕಗಳ ಮೂಲಕ ನಾಲ್ಕನೇ ತಂಡವಾಗಿ ಪ್ಲೇಆಫ್ ಪ್ರವೇಶಿಸಿತು. ಇದರಿಂದಾಗಿ ಪಂಜಾಬ್ ಕಿಂಗ್ಸ್ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಬೇಕಾಯಿತು.

ಲೀಗ್ ಹಂತದ ಆರಂಭದಲ್ಲಿ ಪಂಜಾಬ್ ಕಿಂಗ್ಸ್ ತಂಡ ವಿನಾಕಾರಣ ರಾಜಸ್ಥಾನ ರಾಯಲ್ಸ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಲೆಳೆದಿತ್ತು. ಇದಕ್ಕೆ ತಿರುಗೇಟು ನೀಡಲು ಕಾಯುತ್ತಿದ್ದ ರಾಜಸ್ಥಾನ ರಾಯಲ್ಸ್ ಅಡ್ಮಿನ್, ತಾವು ಪ್ಲೇಆಫ್ ತಲುಪಿದ ತಕ್ಷಣ ಟ್ವಿಟರ್ ಖಾತೆಯಲ್ಲಿ ಪಂಜಾಬ್ ಕಿಂಗ್ಸ್ ಅನ್ನು ಕೆಣಕುವಂತೆ ‘ಪಂಗಾ ನಾ ಲೋ’ ಎಂಬ ಶೀರ್ಷಿಕೆಯೊಂದಿಗೆ ಒಂದು ಮೀಮ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು.

ವಿಡಿಯೋದಲ್ಲೇನಿತ್ತು?

ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಮನೆಯಲ್ಲಿ ಕಾರ್ಯಕ್ರಮ ಒಂದು ನಡೆದಿತ್ತು. ಬಂದ ಅತಿಥಿಗಳನ್ನು ಅವರು ಮನೆಯ ಒಳಗೆ ಕಳುಹಿಸುತ್ತಾರೆ. ಕೊನೆಗೆ ಅವರನ್ನೇ ಹೊರಕ್ಕೆ ಇಟ್ಟು ಬಾಗಿಲು ಹಾಕಲಾಗುತ್ತದೆ. ಈ ವಿಡಿಯೋ ಪಾಪರಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿತ್ತು. ಪಂಜಾಬ್ ಕಿಂಗ್ಸ್‌ಗೆ ಪ್ಲೇಆಫ್ ಬಾಗಿಲು ಮುಚ್ಚಿದೆ ಎಂದು ಲೇವಡಿ ಮಾಡಲು ಅರ್ಜುನ್ ಕಪೂರ್ ಅವರ ವಿಡಿಯೋವನ್ನು ಬಳಸಿಕೊಳ್ಳಲಾಗಿತ್ತು. ಇದು ನಟನ ಘನತೆಗೆ ಕುಂದು ತರುವ ರೀತಿಯಲ್ಲಿ ಇತ್ತೆನ್ನಲಾಗಿದೆ.

ಪೋಸ್ಟ್ ಆದ 24 ಗಂಟೆಗಳ ಒಳಗಾಗಿ ರಾಜಸ್ಥಾನ ರಾಯಲ್ಸ್ ತಂಡ ಈ ವಿಡಿಯೋವನ್ನು ಡಿಲೀಟ್ ಮಾಡಿದೆ. ಅರ್ಜುನ್ ಕಪೂರ್ ಅವರು ರಾಜಸ್ಥಾನ ರಾಯಲ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಮತ್ತು ಅವರ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕಾಗಿ ನೋಟಿಸ್ ನೀಡಿದ್ದಾರೆ ಎಂಬ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಆದರೆ, ನಟನ ಕಡೆಯಿಂದಾಗಲಿ ಅಥವಾ ಅವರ ಕಾನೂನು ತಂಡದಿಂದಾಗಲಿ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಆರ್ಆರ್ ಪೋಸ್ಟ್ ಡಿಲೀಟ್ ಮಾಡಲು ಅಸಲಿ ಕಾರಣ ಇದಾ?

ಇತ್ತೀಚೆಗಷ್ಟೇ ನಟ ಅರ್ಜುನ್ ಕಪೂರ್ ಅವರು ದೆಹಲಿ ಹೈಕೋರ್ಟ್‌ನಿಂದ ತಮ್ಮ ‘ಪರ್ಸನಾಲಿಟಿ ರೈಟ್ಸ್’ ರಕ್ಷಣೆಗಾಗಿ ಮಧ್ಯಂತರ ಆದೇಶವನ್ನು ಪಡೆದುಕೊಂಡಿದ್ದಾರೆ. ಈ ಆದೇಶದ ಪ್ರಕಾರ, ಅರ್ಜುನ್ ಕಪೂರ್ ಅವರ ಅನುಮತಿಯಿಲ್ಲದೆ ಅವರ ಹೆಸರು, ಧ್ವನಿ, ಚಿತ್ರ ಅಥವಾ ವಿಡಿಯೋಗಳನ್ನು ಮಾರ್ಫ್ ಮಾಡಿ, ಎಐ ತಂತ್ರಜ್ಞಾನ ಬಳಸಿ ಅಥವಾ ತಪ್ಪು ಮಾಹಿತಿ ಹರಡುವ ಉದ್ದೇಶಕ್ಕೆ ಬಳಸುವಂತಿಲ್ಲ.

ಇದನ್ನೂ ಓದಿ:  ಸತತ 6 ಗೆಲುವು, ಅಗ್ರಸ್ಥಾನ; ಆರ್​ಸಿಬಿಯನ್ನು ಗೇಲಿ ಮಾಡಿ ಹಳಿತಪ್ಪಿದ ಪಂಜಾಬ್

ಸಾರ್ವಜನಿಕ ಕಾಮೆಂಟ್‌ಗಳಿಗೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದ್ದರೂ, ಯಾವುದೇ ಸೆಲೆಬ್ರಿಟಿಯ ವರ್ಚಸ್ಸಿಗೆ ಧಕ್ಕೆ ತರುವಂತೆ ಅಥವಾ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿರ್ಬಂಧಿಸಿದೆ. ಕೋರ್ಟ್‌ನ ಈ ಕಠಿಣ ಆದೇಶದ ಹಿನ್ನೆಲೆಯಲ್ಲಿ, ಮುಂದಾಗಬಹುದಾದ ಕಾನೂನು ಸಂಕಷ್ಟಗಳಿಂದ ಪಾರಾಗಲು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ತಕ್ಷಣವೇ ಎಚ್ಚೆತ್ತುಕೊಂಡು ಆ ವಿವಾದಾತ್ಮಕ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RCB ಪರ ಇನಿಂಗ್ಸ್ ಆರಂಭಿಸುವವರು ಯಾರು? – Kannada News | Virat Kohli’s Opening Partner: Iyer or Salt for IPL 2026: Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ.

ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಖಚಿತತೆ ನೀಡಿಲ್ಲ.

ಈ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಫಿಲ್ ಸಾಲ್ಟ್ ತಮ್ಮ ಬೆರಳಿನ ಗಾಯದಿಂದ ಚೇತರಿಸಿಕೊಂಡಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಅವರು ಇನ್ನು ಕೂಡ ವೈದ್ಯಕೀಯ ತಂಡದ ನಿಗಾದಲ್ಲಿದ್ದು, ಧರ್ಮಶಾಲಾ ಪಿಚ್ ನೋಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಅಂದರ ವಿರಾಟ್ ಕೊಹ್ಲಿ ಜೊತೆ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬುದನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಪಿಚ್​ ಮೇಲ್ಮೈ ನೋಡಿದ ಬಳಿಕವಷ್ಟೇ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಸೇರಿಸಿಕೊಳ್ಳಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸಲಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಈ ಹೇಳಿಕೆಯಿಂದಾಗಿಯೇ ಇದೀಗ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬ ಗೊಂದಲ ಸೃಷ್ಟಿಯಾಗಿದೆ. ಏಕೆಂದರೆ ಸಾಲ್ಟ್ ಅನುಪಸ್ಥಿತಿಯಲ್ಲಿ ಕೆಲ ಮ್ಯಾಚ್​ಗಳಲ್ಲಿ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅವರು ಕೂಡ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ.

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ. ಇತ್ತ ಜೇಕಬ್ ಬೆಥೆಲ್ ಗಾಯಗೊಂಡಿದ್ದ ಕಾರಣ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಅಯ್ಯರ್ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಫಿಲ್ ಸಾಲ್ಟ್​​ಗೆ ಅವಕಾಶ ನೀಡಬೇಕಿದ್ದರೆ ಇನ್​ಫಾರ್ಮ್​ನಲ್ಲಿರುವ ವೆಂಕಟೇಶ್ ಅಯ್ಯರ್ ಅವರನ್ನು ಕೈ ಬಿಡಬೇಕಾಗಿ ಬರಬಹುದು. ಇಲ್ಲಾ ಇಂಪ್ಯಾಕ್ಟ್ ಪ್ಲೇಯರ್ ಲಿಸ್ಟ್​ನಲ್ಲಿರಿಸಬೇಕಾಗುತ್ತದೆ. ಹೀಗಾಗಿಯೇ ಇದೀಗ ಆರ್​ಸಿಬಿ ಮ್ಯಾನೇಜ್ಮೆಂಟ್​ಗೆ ಆರಂಭಿಕನ ಆಯ್ಕೆಯೇ ಗೊಂದಲವಾಗಿ ಮಾರ್ಪಟ್ಟಿದೆ.

ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಆರಂಭಿಕ ಜೋಡಿಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಗಾಯದಿಂದ ಚೇತರಿಸಿಕೊಂಡಿರುವ ಸಾಲ್ಟ್​ಗೆ ಈ ಪಂದ್ಯದಲ್ಲಿ ಚಾನ್ಸ್ ನೀಡಲು ನಿರ್ಧರಿಸಿದರೆ, ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

ಇಲ್ಲದಿದ್ದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಮುಂದುವರೆಸಲಿದ್ದಾರೆ. ಅಂದರೆ ಇಲ್ಲಿ ಫಿಲ್ ಸಾಲ್ಟ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯ ಕಾರಣ ಆರಂಭಿಕನಾಗಿ ತಂಡದಲ್ಲಿರುವ ಮತ್ತೋರ್ವ ಆಟಗಾರ ಜೋರ್ಡನ್ ಕಾಕ್ಸ್ ಈ ಪಂದ್ಯದಲ್ಲೂ ಬೆಂಚ್ ಕಾಯಬೇಕಾಗಿ ಬರಬಹುದು.

Source link

Weather Report: ರಾಜ್ಯದ ಜನತೆಗೆ ಸಿಕ್ತು ಬಿಸಿಲಿನಿಂದ ಬಿಗ್ ರಿಲೀಫ್!; ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ – Kannada News | IMD Karnataka Rain Alert: Heavy Showers Expected May 26, Relief from Heat

ಮಳೆಯಲ್ಲಿ ಮಕ್ಕಳು ಆಟವಾಡುವ ಚಿತ್ರ Image Credit source: Tv9 kannada

ಬೆಂಗಳೂರು, ಮೇ,26 :  ತೀವ್ರ ಉಷ್ಣಾಂಶ ಹಾಗೂ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ವರುಣದೇವ ಕೊನೆಗೂ ತಂಪಾದ ಸುದ್ದಿ ನೀಡಿದ್ದಾನೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಚಂಡಮಾರುತದ ಪ್ರಸರಣ ಹಿನ್ನೆಲೆಯಲ್ಲಿ, ಇಂದು (ಮೇ 26) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವಾತಾವರಣ ಸಂಪೂರ್ಣವಾಗಿ ಮೋಡ ಕವಿದಿರಲಿದ್ದು, ಸಂಜೆಯ ವೇಳೆಗೆ ಭಾರಿ ಗುಡುಗು ಮತ್ತು ತೀಕ್ಷ್ಣ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಜೊತೆಗೆ ಮಳೆಯಾಗುವ ಮುನ್ಸೂಚನೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಆರಂಭವಾಗಿರುವ ಮಳೆಯ ಮುಂದುವರಿದ ಭಾಗವಾಗಿ ಇಂದೂ ಸಹ ಮಧ್ಯಾಹ್ನದ ನಂತರ ದಟ್ಟ ಮೋಡಗಳು ಆವರಿಸಲಿವೆ. ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ನಗರದಾದ್ಯಂತ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಮೂಲಕ ನಗರ ಕಂಪ್ಲೀಟ್ ಕೂಲ್ ಆಗಲಿದೆ.

ಇದನ್ನೂ ಓದಿ: ಉತ್ತರ ಮತ್ತು ದಕ್ಷಿಣ ಒಳನಾಡಿನ ಜನರೇ ಎಚ್ಚರ!: ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು

ಕರಾವಳಿಯ ಈ ಅವಳಿ ಜಿಲ್ಲೆಗಳಲ್ಲಿ ಇಂದು ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 27°C ದಾಖಲಾಗಲಿದೆ. ಕರಾವಳಿ ಭಾಗದಲ್ಲಿ ದಟ್ಟ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು, ತೀಕ್ಷ್ಣ ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ತಂಪಾದ ಪ್ರದೇಶವಾದ ಮಡಿಕೇರಿಯಲ್ಲಿ ಇಂದು ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 22°C ಇರಲಿದೆ. ಜಿಲ್ಲೆಯಾದ್ಯಂತ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 24°C ದಾಖಲಾಗುವ ನಿರೀಕ್ಷೆಯಿದೆ. ಮಧ್ಯಾಹ್ನದ ನಂತರ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಗಾಳಿಯ ರಭಸದೊಂದಿಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಪ್ರೀ-ಮಾನ್ಸೂನ್ (ಮುಂಗಾರು ಪೂರ್ವ) ಮಳೆಯಾಗಲಿದೆ. ಒಟ್ಟಾರೆಯಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನವು ಕೊಂಚ ತಂಪಾಗಿದ್ದು, ಗಾಳಿಯ ತೀವ್ರತೆ ಹೆಚ್ಚಿರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪೇಂದ್ರ ಅಣ್ಣನ ಮಗ ನಿರಂಜನ್ ಸುದಿಂದ್ರ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ

Source link

Exit mobile version