ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು? – Kannada News | Davanagere South Newly Congress MLA Samarth Talks about His marriage

ದಾವಣಗೆರೆ, (ಮೇ 06): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು. ಅದರಂತೆ ಇದೀಗ ಪುತ್ರ ಸಮರ್ಥ ಸಹ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ತಂದೆ ರೀತಿಯಲ್ಲೇ ಚಿಕ್ಕ ವಯಸ್ಸಿನಲ್ಲೇ ಅಂದರೆ 27ನೇ ವಯಸ್ಸಿಗೆ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಇನ್ನು ಇದೇ ಖುಷಿಯಲ್ಲಿ ಅವರು ತಮ್ಮ ಮದುವೆ (marriage) ಬಗ್ಗೆ ಮಾತನಾಡಿ, ಸದ್ಯಕ್ಕೆ ಮದ್ವೆ ಮಾಡಿಕೊಳ್ಳಲ್ಲ ಎಂದಿದ್ದಾರೆ.

ಇನ್ನು ಬೈ ಎಲೆಕ್ಷನ್​​ನಲ್ಲಿ ಗೆದ್ದು ಶಾಸಕರಾದ ಬಳಿಕ ಮೊದಲ ಬಾರಿಗೆ ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮರ್ಥ್ ಶಾಮನೂರು, ನಾನು‌ ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗುತ್ತೇನೆ. ಅದೇ ನನ್ನ ಉದ್ದೇಶ. ಜನತೆ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ನಮಗೆ ಅಭಿವೃದ್ಧಿ ಮಾಡುವ ಸಾಮರ್ಥ್ಯ ಇದೇ ಎಂಬ ಕಾರಣಕ್ಕಾಗಿಯೇ ನಮ್ಮನ್ನ ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಗೆಲ್ಲಿಸಿದ್ದಾರೆ. ನಮ್ಮ ಮನೆಗೆ ಯಾಗಲು ಬಂದರು ಬಾಗಿಲು ತೆರೆದಿರುತ್ತದೆ. ಜೊತೆಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರ ಜನ ಸಂಪರ್ಕ ಕಚೇರಿ ಆರಂಭಿಸುತ್ತೇವೆ ಎಂದರು.

ಇನ್ನು ಇದೇ ವೇಳೆ ಮದುವೆ ಬಗ್ಗೆ ಕೇಳಿದ ಪ್ರಶ್ನಿಗೆ ಪ್ರತಿಕ್ರಿಯಿಸಿದ ಸಮರ್ಥ್, ಸದ್ಯಕ್ಕೆ ಮದ್ವೆ ವಿಚಾರ ಇಲ್ಲ, ಜನರು ಈಗ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮದ್ವೆ ರೀತಿಯಲ್ಲಿ ಆಯ್ಕೆ ಮಾಡಿದ್ದಾರೆ. ಸದ್ಯಕ್ಕೆ ಮದುವೆ ಏನಿಲ್ಲ ಎಂದು ತಿಳಿಸಿದರು.

ಇದನ್ನೂ ನೋಡಿ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ

 

Source link

Divya Sasha: ನಟ ವಿಜಯ್ ಪುತ್ರಿ ದಿವ್ಯಾ ಸಾಶಾ ಬಗ್ಗೆ ನಿಮಗೆಷ್ಟು ಗೊತ್ತು? ಶೈಕ್ಷಣಿಕ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ – Kannada News | Thalapathy Vijay’s Daughter Divya Sasha: Education, Film Debut and Future Plans Amidst CM Buzz

ವಿಜಯ್ ಪುತ್ರಿ ದಿವ್ಯಾ ಸಾಶಾImage Credit source: Facebook

ಸುಮಾರು ಮೂರು ದಶಕಗಳಿಂದ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ದಳಪತಿ ವಿಜಯ್ ಅವರು ಆಕ್ಷನ್, ಡ್ಯಾನ್ಸ್ ಮತ್ತು ನಟನೆಯ ಮೂಲಕ ದಕ್ಷಿಣ ಭಾರತದಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಹಲವಾರು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿರುವ ಇವರು, ಇತ್ತೀಚೆಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಸದ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಬಹುತೇಕ ನಿಶ್ಚಿತವಾಗಿದೆ. ಈ ಐತಿಹಾಸಿಕ ಬದಲಾವಣೆಯ ನಡುವೆ ವಿಜಯ್ ಮತ್ತು ಸಂಗೀತಾ ದಂಪತಿಯ ಪುತ್ರಿ ದಿವ್ಯಾ ಸಾಶಾ ಅವರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಾಗಿದ್ದು, ಜನರು ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹುಡುಕುತ್ತಿದ್ದಾರೆ.

ವಿಜಯ್ ಪುತ್ರಿ ದಿವ್ಯಾ ಸಾಶಾ ಶೈಕ್ಷಣಿಕ ಹಿನ್ನೆಲೆ (Education):

2005 ರಲ್ಲಿ ಜನಿಸಿದ ದಿವ್ಯಾ, ಬಾಲ್ಯದಿಂದಲೇ ಶಿಸ್ತು ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುತ್ತಾ ಬೆಳೆದವರು. ಈಕೆ ಚೆನ್ನೈನ ಪ್ರತಿಷ್ಠಿತ ಅಮೇರಿಕನ್ ಇಂಟರ್ನ್ಯಾಷನಲ್ ಸ್ಕೂಲ್ (AISC) ನಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಪೂರೈಸಿದ್ದಾರೆ. ಕೇವಲ ಓದಿನಲ್ಲಿ ಮಾತ್ರವಲ್ಲದೆ, ಕ್ರೀಡೆಯಲ್ಲೂ ದಿವ್ಯಾ ಸೈ ಎನಿಸಿಕೊಂಡಿದ್ದಾರೆ. ಇವರು ಒಬ್ಬ ಅದ್ಭುತ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದು, ತಮ್ಮ ಶಾಲಾ ತಂಡವನ್ನು ಪ್ರತಿನಿಧಿಸಿ ಹಲವು ಪಂದ್ಯಾವಳಿಗಳಲ್ಲಿ ಜಯಗಳಿಸಿದ್ದಾರೆ.

ಇದನ್ನೂ ಓದಿ: ವಿಜಯದ ಬೆನ್ನಲ್ಲೇ ವಿಜಯ್​ ನಿವಾಸಕ್ಕೆ ನಟಿ ತ್ರಿಷಾ ಆಗಮನ

ಬೆಳ್ಳಿಪರದೆಗೆ ಪದಾರ್ಪಣೆ (Film Career):

ಅನೇಕ ಸ್ಟಾರ್ ಕಿಡ್‌ಗಳಂತೆ ದಿವ್ಯಾ ಕೂಡ ಅತಿ ಸಣ್ಣ ವಯಸ್ಸಿನಲ್ಲೇ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. 2016 ರಲ್ಲಿ ಬಿಡುಗಡೆಯಾದ ಸೂಪರ್ ಹಿಟ್ ಸಿನಿಮಾ ‘ತೆರಿ’ (Theri) ಈಕೆಯ ಮೊದಲ ಚಿತ್ರ. ಈ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ವಿಜಯ್ ಅವರ ಮಗಳ ಪಾತ್ರದಲ್ಲೇ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ಭವಿಷ್ಯದ ಯೋಜನೆಗಳು:

ತಂದೆ ವಿಜಯ್ ಚಿತ್ರರಂಗದ ದೊಡ್ಡ ನಟನಾಗಿದ್ದರೂ ಮತ್ತು ಸಹೋದರ ಜೇಸನ್ ಸಂಜಯ್ ಸಿನಿಮಾ ನಿರ್ದೇಶನದತ್ತ ಆಸಕ್ತಿ ತೋರಿದ್ದರೂ, ದಿವ್ಯಾ ಸಾಶಾ ಮಾತ್ರ ಪ್ರಸ್ತುತ ತಮ್ಮ ಉನ್ನತ ಶಿಕ್ಷಣದತ್ತ ಸಂಪೂರ್ಣ ಗಮನ ಹರಿಸಿದ್ದಾರೆ. ಅವರು ಪೂರ್ಣಪ್ರಮಾಣದ ನಾಯಕಿಯಾಗಿ ಚಿತ್ರರಂಗಕ್ಕೆ ಬರುತ್ತಾರೆಯೇ ಎಂಬುದು ಸದ್ಯಕ್ಕೆ ಕುತೂಹಲವಾಗಿಯೇ ಉಳಿದಿದೆ. ಸಾಮಾಜಿಕ ಜಾಲತಾಣಗಳಿಂದ ಮತ್ತು ಗಾಸಿಪ್‌ಗಳಿಂದ ದೂರವಿರುವ ದಿವ್ಯಾ, ತಮ್ಮ ಸರಳತೆಯಿಂದಲೇ ವಿಜಯ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:09 pm, Wed, 6 May 26

Source link

IPL 2026: ಆರ್​ಸಿಬಿ ಫ್ಯಾನ್ಸ್​ಗೆ ಬಿಗ್​ ಶಾಕ್; ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್ – Kannada News | BCCI Shifts IPL 2026 Final from Bengaluru to Ahmedabad: Ticket Demands Cited

ಎದುರಾಗಿದ್ದ ಅಡೆತಡೆಗಳೆಲ್ಲವನ್ನು ಮೆಟ್ಟಿ ನಿಂತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026 ರ ಐಪಿಎಲ್​ನ (IPL 2026) ಉದ್ಘಾಟನಾ ಪಂದ್ಯವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಆ ಬಳಿಕ ನಡೆದ ಉಳಿದ ನಾಲ್ಕು ಲೀಗ್ ಪಂದ್ಯಗಳು ಕೂಡ ಯಾವುದೇ ಲೋಪದೋಷಗಳಿಲ್ಲದೆ ಮುಗಿದಿದ್ದವು. ಹೀಗಾಗಿ ಈ ಮೊದಲು ವರದಿಯಾದ ಪ್ರಕಾರ, ಈ ಆವೃತ್ತಿಯ ಫೈನಲ್ ಪಂದ್ಯಕ್ಕೂ ಬೆಂಗಳೂರು ಆತಿಥ್ಯವಹಿಸುವುದು ಖಚಿತ ಎನ್ನಲಾಗುತಿತ್ತು. ಆದರೆ ಲೀಗ್ ಹಂತ ಮುಗಿಯುವ ಹಂತದಲ್ಲಿರುವಾಗ ಪ್ಲೇ ಆಫ್ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಸಿಸಿಐ, ಕನ್ನಡಿಗರಿಗೆ ಹಾಗೂ ಆರ್​ಸಿಬಿ ಫ್ಯಾನ್ಸ್​ಗೆ ಬಿಗ್ ಶಾಕ್ ನೀಡಿದೆ. ಐಪಿಎಲ್ ಫೈನಲ್ ಪಂದ್ಯವನ್ನು ಬೆಂಗಳೂರಿನ ಬದಲಿಗೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ (Narendra Modi Stadium Ahmedabad) ನಡೆಸಲು ತೀರ್ಮಾನಿಸಲಾಗಿದೆ. ತನ್ನ ನಿರ್ಧಾರದ ಹಿಂದಿರುವ ಕಾರಣವನ್ನು ಸಹ ಬಿಸಿಸಿಐ ಬಹಿರಂಗಪಡಿಸಿದೆ.

ಹೇಳಿಕೆ ಬಿಡುಗಡೆ ಮಾಡಿದ ಬಿಸಿಸಿಐ

ಪ್ಲೇಆಫ್ ಸುತ್ತಿನ ವೇಳಾಪಟ್ಟಿಯನ್ನು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಬಿಸಿಸಿಐ, 2026ರ ಐಪಿಎಲ್​ನ ಪ್ಲೇಆಫ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, 70 ಲೀಗ್ ಪಂದ್ಯಗಳು ಮುಗಿದ ಬಳಿಕ ಈ ಸುತ್ತು ಆರಂಭವಾಗಲಿದೆ. ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ತಂಡಗಳು ಮೇ 26 ರಂದು ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್​ಗೇರಲಿದೆ.

ಆ ನಂತರ ಮೇ 27 ರಂದು ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ಈ ಪಂದ್ಯ ನ್ಯೂ ಚಂಡೀಗಢದ ನ್ಯೂ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಇದೇ ಮೈದಾನದಲ್ಲಿ ಎಲಿಮಿನೇಟರ್ 2 ಪಂದ್ಯ ನಡೆಯಲಿದ್ದು, ಕ್ವಾಲಿಫೈಯರ್ 1ರಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್​ನಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 31 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕ್ವಾಲಿಫೈಯರ್ 1 ಗೆದ್ದ ತಂಡದೊಂದಿಗೆ ಪ್ರಶಸ್ತಿಗಾಗಿ ಸೆಣಸಲಿದೆ ಎಂದಿದೆ.

ಶಿಷ್ಟಾಚಾರದ ಉಲ್ಲಂಘನೆ

ಇದರ ಜೊತೆಗೆ ಫೈನಲ್ ಪಂದ್ಯವನ್ನು ಸ್ಥಳಾಂತರಿಸಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಿರುವ ಬಿಸಿಸಿಐ, ‘ಈ ಮೊದಲು ಬೆಂಗಳೂರಿನಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ಗೊತ್ತುಪಡಿಸಲಾಗಿತ್ತು. ಆದರೆ ಸ್ಥಳೀಯ ಸಂಘ ಮತ್ತು ಅಧಿಕಾರಿಗಳು ಬಿಸಿಸಿಐನ ಮಾರ್ಗಸೂಚಿಗಳು ಮತ್ತು ಶಿಷ್ಟಾಚಾರಗಳಿಗೆ ವಿರುದ್ಧವಾದ ಕೆಲವು ಅವಶ್ಯಕತೆಗಳನ್ನು ಹೊಂದಿದ್ದರು. ಆದ್ದರಿಂದ, ಫೈನಲ್ ಪಂದ್ಯವನ್ನು ಸ್ಥಳಾಂತರಿಸುವುದು ಏಕೈಕ ಆಯ್ಕೆಯಾಗಿತ್ತು’ ಎಂದಿದೆ.

LSG vs RCB Live Streaming: ವಾರದ ಬಳಿಕ ಕಣಕ್ಕಿಳಿಯುತ್ತಿದೆ ಆರ್​ಸಿಬಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಟಿಕೆಟ್​ಗಳಿಗಾಗಿ ಶಾಸಕರ ಬೇಡಿಕೆ

ವಾಸ್ತವವಾಗಿ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ನಡುವಿನ ಐಪಿಎಲ್ 2026 ರ ಉದ್ಘಾಟನಾ ಪಂದ್ಯಕ್ಕೂ ಮುನ್ನ, ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು, ಶಾಸಕರು ಸಾರ್ವಜನಿಕರಂತೆ ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಯೊಬ್ಬ ಶಾಸಕರಿಗೂ ಪಂದ್ಯಗಳಿಗೆ ಕನಿಷ್ಠ ಐದು ಟಿಕೆಟ್‌ಗಳನ್ನು ನೀಡಬೇಕೆಂಬ ಬೇಡಿಕೆಯನ್ನಿಟ್ಟಿದ್ದರು.

ಇದಾದ ನಂತರ, ಕೆಎಸ್​ಸಿಎ ಜೊತೆಗೆ ಸಭೆ ನಡೆಸಿದ್ದ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿ ಶಾಸಕರು ಮತ್ತು ಸಂಸದರಿಗೆ ಆರ್‌ಸಿಬಿ ಪಂದ್ಯಗಳಿಗೆ ಐದು ಟಿಕೆಟ್‌ಗಳ ಬದಲಿಗೆ ಮೂರು ಟಿಕೆಟ್‌ಗಳನ್ನು ನೀಡುವ ಒಪ್ಪಂದಕ್ಕೆ ಬರಲಾಗಿದೆ ಎಂದಿದ್ದರು. ಅದರಂತೆ ಬೆಂಗಳೂರಿನಲ್ಲಿ ನಡೆದ ಎಲ್ಲಾ ಪಂದ್ಯಗಳಿಗೂ ಶಾಸಕರು ಮತ್ತು ಸಂಸದರಿಗೆ ಮೂರು ಟಿಕೆಟ್‌ಗಳನ್ನು ನೀಡಲಾಗಿತ್ತು. ಇದನ್ನು ತನ್ನ ಹೇಳಿಕೆಯಲ್ಲಿ ಪರೋಕ್ಷವಾಗಿ ಉಲ್ಲೇಖಿಸಿರುವ ಬಿಸಿಸಿಐ ಐಪಿಎಲ್ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಸ್ಥಳಾಂತರಿಸಲು ಪ್ರಮುಖ ಕಾರಣ ಎಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:01 pm, Wed, 6 May 26

Source link

IPL 2026: ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್ ಮಾಡಿದ್ಯಾಕೆ? ಡಿಕೆಶಿ ಹೇಳಿದ್ದಿಷ್ಟು – Kannada News | DK Shivakumar Reacts On ipl 2026 final Match shifted to ahmedabad from Bengaluru

ಬೆಂಗಳೂರು, (ಮೇ 06): 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ (IPL Season 2026) ಲೀಗ್ ಹಂತವು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗ ಎಲ್ಲರೂ ಪ್ಲೇಆಫ್‌ಗಳು ಮತ್ತು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಫೈನಲ್ ಪಂದ್ಯವನ್ನು ಸಾಮಾನ್ಯವಾಗಿ (RCB) ಹಾಲಿ ಚಾಂಪಿಯನ್‌ನ ತವರು ಮೈದಾನದಲ್ಲಿ ಆಡಲಾಗುತ್ತದೆ, ಅದರಂತೆ ಈ ಬಾರಿಯ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ (Bengaluru)  ಅಹಮದಾಬಾದ್ ಗೆ ಸ್ಥಳಾಂತರಿಸಲಾಗಿದೆ. ಆ ಮೂಲಕ ಬಿಸಿಸಿಐ ಆರ್‌ಸಿಬಿ ಸೇರಿ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಬಿಗ್‌ಶಾಕ್ ನೀಡಿದೆ.

ಇನ್ನು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಶಾಸಕರಿಗೆ ಐಪಿಎಲ್ ಟಿಕೆಟ್​ಗೂ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ. ಬೇರೆ ಕಡೆ ಶೇಕಡಾ 50ರಷ್ಟು ಸೀಟ್ ಕೊಡ್ತಾರೆ. ಅವರೇನೋ ಇನ್ಫ್ಲ್ಯೂಯೆನ್ಸ್ ಮಾಡಿ ಗುಜರಾತ್​ಗೆ ಸ್ಥಳಾಂತರಿಸಿದ್ದಾರೆ. ದೊಡ್ಡ ಸ್ಟೇಡಿಯಂ ಒಂದು ಲಕ್ಷ ಜನ ಸೇರಬಹುದು ಅಂತ ಮಾಡಿರಬಹುದು ಅಷ್ಟೇ. ಟಿಕೆಟ್ ಗೂ ಅದಕ್ಕೂ ಸಂಬಂಧ ಇಲ್ಲ. ಯಾರ ಹೇಳಿದ್ದು ಟಿಕೆಟ್ ವಿಚಾರವಾಗಿ ಶಿಫ್ಟ್ ಮಾಡ್ತಿದ್ದಾರೆ ಅಂತ? ಬಿಸಿಸಿಐ ಅವರು ಹೇಳಿಕೆ ಕೊಡಲಿ ಅವರಿಗೆ ಆಮೇಲೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ

Source link

ಅಜ್ಜನಂತೆ ಅಜಾತಶತ್ರು ಆಗುವುದೇ ನನ್ನ ಗುರಿ: ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್​​ ಶಾಮನೂರು – Kannada News | Aim to Be an ‘Ajatashatru’ Like My Grandfather: Davanagere South MLA Samarth Shamanur

ದಾವಣಗೆರೆ, ಮೇ 06: ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯ ಇದೆ ಎಂದುನ ಜನರು ನನ್ನ ಗೆಲ್ಲಿಸಿದ್ದಾರೆಬ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಗುರಿ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ಓಪನ್​​ ಆಗಿರಲಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕ್ಲೋಡ್​ನ ಈ ಎಐ ಮಾಡಲ್​ಗೆ ಬೆಚ್ಚಿಬಿದ್ದ ಬ್ಯಾಂಕುಗಳು; ಉನ್ನತ ಮಟ್ಟದ ಸಭೆ ಕರೆದ ನಿರ್ಮಲಾ ಸೀತಾರಾಮನ್ – Kannada News | Claude Mythos AI: India’s Banks Face Unprecedented Cybersecurity Challenge from New Model

ನಿರ್ಮಲಾ ಸೀತಾರಾಮನ್ ಸಭೆಯ ಎಐ ಚಿತ್ರImage Credit source: AI/Mediaforge/TV9

ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನಗಳು ಜಗತ್ತನ್ನು ಬದಲಾಯಿಸುತ್ತಿರುವ ಬೆನ್ನಲ್ಲೇ, ಭಾರತದ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಕ್ಕೆ ಹೊಸದೊಂದು ಆತಂಕ ಶುರುವಾಗಿದೆ. ಅತ್ಯಂತ ಶಕ್ತಿಶಾಲಿ ಮತ್ತು ಅಪಾಯಕಾರಿ ಎನ್ನಲಾದ ‘ಕ್ಲೋಡ್ ಮಿಥೋಸ್’ (Claude Mythos) ಎಂಬ ಹೊಸ ಎಐ ಮಾಡಲ್​ನಿಂದ ಎದುರಾಗಬಹುದಾದ ಸೈಬರ್ ಸೆಕ್ಯೂರಿಟಿ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕಾರಿಗಳು ಮತ್ತು ವಿವಿಧ ವಾಣಿಜ್ಯ ಬ್ಯಾಂಕ್‌ಗಳ ಮುಖಂಡರು ಭಾಗವಹಿಸಿದ್ದರು.

ಏನಿದು ‘ಕ್ಲೋಡ್ ಮಿಥೋಸ್’ (Claude Mythos AI)?

  • ‘ಆಂಥ್ರೋಪಿಕ್’ (Anthropic) ಎಂಬ ಅಮೆರಿಕ ಮೂಲದ ಪ್ರಮುಖ ಎಐ ಸಂಸ್ಥೆಯು ಈ ‘ಕ್ಲೋಡ್ ಮಿಥೋಸ್ ಪ್ರಿವ್ಯೂ’ ಮಾಡಲ್ ಅನ್ನು ಅಭಿವೃದ್ಧಿಪಡಿಸಿದೆ.
  • ಕ್ಲೋಡ್ ಮಿಥೋಸ್ ಎಐ ಮಾಡಲ್ ಸಾಫ್ಟ್‌ವೇರ್ ಮತ್ತು ಡಿಜಿಟಲ್ ವ್ಯವಸ್ಥೆಗಳಲ್ಲಿರುವ ಅತ್ಯಂತ ಸೂಕ್ಷ್ಮ ದೋಷಗಳನ್ನು (Vulnerabilities) ಪತ್ತೆಹಚ್ಚುವಲ್ಲಿ ಮನುಷ್ಯರಿಗಿಂತಲೂ ವೇಗವಾಗಿ ಮತ್ತು ನಿಖರವಾಗಿ ಕೆಲಸ ಮಾಡುತ್ತದೆ.
  • ಪರೀಕ್ಷೆಗಳ ಸಮಯದಲ್ಲಿ, ಈ ಎಐ ಮಾದರಿಯು ಜಗತ್ತಿನ ಪ್ರಮುಖ ಆಪರೇಟಿಂಗ್ ಸಿಸ್ಟಮ್‌ಗಳು ಹಾಗೂ ವೆಬ್ ಬ್ರೌಸರ್‌ಗಳಲ್ಲಿ ಅಡಗಿದ್ದ ಸಾವಿರಾರು ಗಂಭೀರ ಭದ್ರತಾ ಲೋಪಗಳನ್ನು ಪತ್ತೆಹಚ್ಚಿದೆ. ಇದರಲ್ಲಿ 27 ವರ್ಷಗಳಷ್ಟು ಹಳೆಯದಾದ ಸಾಫ್ಟ್‌ವೇರ್ ದೋಷಗಳೂ ಸೇರಿವೆ.

ಇದನ್ನೂ ಓದಿ: ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ

ಬ್ಯಾಂಕ್ ಮತ್ತು ಸರ್ಕಾರದ ಆತಂಕಕ್ಕೆ ಕಾರಣವೇನು?

ಈ ಎಐ ಮಾದರಿಯು ಎಷ್ಟು ಶಕ್ತಿಶಾಲಿಯಾಗಿದೆ ಎಂದರೆ, ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದರೆ ಭೀಕರ ಸೈಬರ್ ದಾಳಿಗಳಿಗೆ (Hacking) ದಾರಿಯಾಗಬಹುದು ಎಂದು ಸ್ವತಃ ಆಂಥ್ರೋಪಿಕ್ ಸಂಸ್ಥೆಯೇ ಇದನ್ನು ಸದ್ಯಕ್ಕೆ ರಹಸ್ಯವಾಗಿಟ್ಟಿದೆ. ‘ಪ್ರಾಜೆಕ್ಟ್ ಗ್ಲಾಸ್‌ವಿಂಗ್’ ಅಡಿಯಲ್ಲಿ ವಿಶ್ವದ ಕೇವಲ 40 ಆಯ್ದ ಕಂಪನಿಗಳಿಗೆ (ಗೂಗಲ್, ಮೈಕ್ರೋಸಾಫ್ಟ್, ಆಪಲ್ ಇತ್ಯಾದಿ) ಮಾತ್ರ ಇದರ ಪ್ರವೇಶ ನೀಡಲಾಗಿದೆ.

ಆದರೆ, ಇತ್ತೀಚೆಗೆ ಈ ಅತ್ಯಂತ ಸುರಕ್ಷಿತ ಎಐ ಮಾದರಿಯನ್ನು ಕೆಲವರು ಅನಧಿಕೃತವಾಗಿ (Unauthorized access) ಪ್ರವೇಶಿಸಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಈ ಎಐ ತಂತ್ರಜ್ಞಾನವು ಹ್ಯಾಕರ್‌ಗಳು ಅಥವಾ ಸೈಬರ್ ಅಪರಾಧಿಗಳ ಕೈಗೆ ಸಿಕ್ಕರೆ, ಅವರು ಬ್ಯಾಂಕಿಂಗ್ ವ್ಯವಸ್ಥೆಯ ಡಿಜಿಟಲ್ ಭದ್ರತೆಯನ್ನು ಕ್ಷಣಮಾತ್ರದಲ್ಲಿ ಧ್ವಂಸಗೊಳಿಸಬಹುದು ಎಂಬ ಆತಂಕ ಜಾಗತಿಕವಾಗಿ ಎದುರಾಗಿದೆ.

ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ನೀಡಿದ ಎಚ್ಚರಿಕೆಗಳೇನು?

ಈ ಹೊಸ ಎಐ ಮಾದರಿಯಿಂದ ಎದುರಾಗಿರುವ ಸೈಬರ್ ಭದ್ರತೆಯ ಸವಾಲು ಈ ಹಿಂದೆಂದೂ ಕಾಣದಂತಹುದಾಗಿದೆ (Unprecedented). ಆದ್ದರಿಂದ ಬ್ಯಾಂಕುಗಳು ಅತ್ಯಂತ ಹೆಚ್ಚಿನ ಜಾಗರೂಕತೆ ಮತ್ತು ಸಿದ್ಧತೆಯನ್ನು ಹೊಂದಿರಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಬ್ಯಾಂಕುಗಳ ನಡುವೆ ಮತ್ತು ಭಾರತದ ಸೈಬರ್ ಭದ್ರತಾ ಏಜೆನ್ಸಿಯಾದ ‘ಸರ್ಟ್-ಇನ್’ (CERT-In) ಜೊತೆಗೆ ಸೈಬರ್ ಥ್ರೆಟ್​ಗಳ ಕುರಿತು ರಿಯಲ್ ಟೈಮ್​ನಲ್ಲಿ ಮಾಹಿತಿ ಹಂಚಿಕೆ ವ್ಯವಸ್ಥೆಯನ್ನು ರೂಪಿಸಬೇಕು ಎನ್ನುವ ಸಲಹೆಯು ಸಭೆಯಲ್ಲಿ ವ್ಯಕ್ತವಾಗಿದೆ. ಈ ಹೊಸ ಎಐ ತಂತ್ರಜ್ಞಾನದಿಂದ ಭಾರತೀಯ ಬ್ಯಾಂಕುಗಳಿಗೆ ಆಗಬಹುದಾದ ನಷ್ಟ ಮತ್ತು ಅಪಾಯಗಳನ್ನು ಅಧ್ಯಯನ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧ್ಯಕ್ಷ ಸಿ.ಎಸ್. ಶ್ರೀನಿವಾಸುಲು ಶೆಟ್ಟಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.

ಹಳೆಯ ತಂತ್ರಜ್ಞಾನದ ಭದ್ರತಾ ನಿಯಮಗಳು (SOPs) ಇಂದಿನ ಆಧುನಿಕ ಎಐ ದಾಳಿಗಳನ್ನು ತಡೆಯಲು ಸಾಧ್ಯವಿಲ್ಲ. ಹೀಗಾಗಿ ಗ್ರಾಹಕರ ಹಣ ಮತ್ತು ಡೇಟಾವನ್ನು ರಕ್ಷಿಸಲು ಬ್ಯಾಂಕುಗಳು ತಮ್ಮ ಐಟಿ (IT) ಮತ್ತು ಸೈಬರ್ ಸೆಕ್ಯೂರಿಟಿ ಬಜೆಟ್ ಅನ್ನು ಹೆಚ್ಚಿಸಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ

ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಆರ್‌ಬಿಐ ಮತ್ತು ಸರ್ಕಾರವು ಈ ಅಪಾಯದ ವ್ಯಾಪ್ತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ಸದ್ಯಕ್ಕೆ ಭಾರತದ ಬ್ಯಾಂಕಿಂಗ್ ಡಿಜಿಟಲ್ ವ್ಯವಸ್ಥೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಭವಿಷ್ಯದ ಸುರಕ್ಷತೆಯ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಈ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಜಕೀಯ ಎಂಟ್ರಿ ಯಾವಾಗ? ಉತ್ತರಿಸಿದ ‘ದುನಿಯಾ’ ವಿಜಯ್ – Kannada News | Duniya Vijay Says When He will Enter Politics

ದಳಪತಿ ವಿಜಯ್ ಅವರು ಟಿವಿಕೆ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಹಾಗೂ ರಾಜಕೀಯ ಎಂಟ್ರಿ ಬಗ್ಗೆ ವಿಜಯ್ ಮಾತನಾಡಿದ್ದಾರೆ. ‘ನನ್ನ ಹೆಸರೂ ವಿಜಯ್, ಅವರ ಹೆಸರೂ ವಿಜಯ್. ಈ ಕಾರಣಕ್ಕೆ ಖುಷಿ ಇದೆ. ತಮಿಳುನಾಡಿನಲ್ಲಿ ಆದ ಬದಲಾವಣೆ ಎಲ್ಲ ಕಡೆಗಳಲ್ಲೂ ಆಗಬೇಕು’ ಎಂದರು. ರಾಜಕೀಯ ಎಂಟ್ರಿ ಯಾವಾಗ ಎಂದು ವಿಜಯ್ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸಿದರು. ‘ಜೆಂಜಿಗಳು ಇದಕ್ಕೆ ಕಾರಣ. ಅವರು ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ’ ಎಂದರು. ರಾಜಕೀಯಕ್ಕೆ ಬರೋದಕ್ಕೆ ಈಗಲೇ ಆಲೋಚಿಸಿಲ್ಲ ಎಂದಿರೋ ಅವರು, ಟೈಮ್ ಬರಲಿ ಹೇಳುತ್ತೇನೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts

ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್​​ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್​​ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕೃತ್ಯದಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ಆದರೆ, ಡಿಜಿಪಿ ಗೌರವ್ ಮಾನ್ ಪಂಜಾಬ್​ ಅನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಪಾಕಿಸ್ತಾನ ಬೆಂಬಲಿತ ಐಎಸ್‌ಐ ಭಯೋತ್ಪಾದಕ ಸಂಘಟನೆ ಈ ಸಂಚನ್ನು ಮಾಡಿರಬಹುದು ಎಂದಿದ್ದಾರೆ. ಈ ಬಗ್ಗೆ ತನಿಖೆಗಳು ನಡೆಯುತ್ತಿದೆ. ಪೊಲೀಸ್ ಇಲಾಖೆ ಮತ್ತು ಸಿಎಂ ಅವರಿಂದ ಬಂದಿರುವ ಈ ವ್ಯತಿರಿಕ್ತ ಹೇಳಿಕೆಗಳು ಪಂಜಾಬ್‌ನಲ್ಲಿ ತೀವ್ರ ಭದ್ರತೆ ಮತ್ತು ರಾಜಕೀಯ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತವೆ.

ಇದನ್ನೂ ಓದಿ: ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಆಪರೇಷನ್ ಸಿಂಧೂರ್ ಬಗ್ಗೆ ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ

ಜಲಂಧರ್ ಮತ್ತು ಅಮೃತಸರದಲ್ಲಿನ ರಕ್ಷಣಾ ಸ್ಥಾಪನೆಗಳ ಬಳಿ ಅವಳಿ ಸ್ಫೋಟಗಳು ಸಂಭವಿಸಿದ ನಂತರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವುಗಳಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಹೇಳಿಕೊಂಡರೆ, ಪೊಲೀಸ್ ಮಹಾನಿರ್ದೇಶಕರು ಈ ಪ್ರದೇಶದಲ್ಲಿ ಅಶಾಂತಿ ಸೃಷ್ಟಿಸಲು ಪಾಕಿಸ್ತಾನ ಬೆಂಬಲಿತ ಸಂಚು ಎಂದಿದ್ದಾರೆ. ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ದೊಡ್ಡ ರಾಜಕೀಯ ಯೋಜನೆಯ ಭಾಗವಾಗಿ ಈ ಸ್ಫೋಟಗಳನ್ನು ನಡೆಸಲಾಗಿದೆ ಎಂದು ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

ಪಂಜಾಬ್ ಪೊಲೀಸರು, ಕೇಂದ್ರ ಸಂಸ್ಥೆಗಳೊಂದಿಗೆ, ತೀವ್ರ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅವಳಿ ಸ್ಫೋಟಗಳಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಇದನ್ನೂ ಓದಿ: ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ

“ಬಿಜೆಪಿ ಎಲ್ಲೆಲ್ಲಿ ಸ್ಪರ್ಧಿಸಲು ಬಯಸುತ್ತದೋ ಅಲ್ಲೆಲ್ಲಾ ಇಂತಹ ಘಟನೆಗಳು ಸಂಭವಿಸುತ್ತವೆ” ಎಂದು ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಅಶ್ವನಿ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಮುಖ್ಯಮಂತ್ರಿಯ ಮಾನಸಿಕ ಸ್ಥಿತಿ ಸ್ಥಿರವಾಗಿಲ್ಲ ಎಂದು ಅನಿಸುತ್ತಿದೆ. ಅವರು ರಾಜೀನಾಮೆ ನೀಡಬೇಕು ಮತ್ತು ಸರಿಯಾದ ಚಿಕಿತ್ಸೆ ಪಡೆಯಬೇಕು. ಪಂಜಾಬ್ ಗಡಿ ರಾಜ್ಯ. ಅವರು ಈ ರಾಜ್ಯವನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಬಿಜೆಪಿಯ ಮೇಲೆ ಕೆಸರು ಎರಚುವ ಮೂಲಕ, ಅವರು ಕೊಳಕು ರಾಜಕೀಯದಲ್ಲಿ ತೊಡಗಿದ್ದಾರೆ.” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ? – Kannada News | TV9 Kannada News Live: Petrol and Diesel Shortage Hits Bengaluru; Good News Expected for DK Shivakumar on His Birthday 

ಬೆಂಗಳೂರು, ಮೇ 06: ಆಟೋ ಎಲ್‌ಪಿಜಿ ಬಿಕ್ಕಟ್ಟಿನ ಬೆನ್ನಲ್ಲೇ ಬೆಂಗಳೂರಲ್ಲೀಗ (Bengaluru) ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಆ ಮೂಲಕ ವಾಹನ ಸವಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದೆ. ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲವಂತೆ. ಇಂಡಿಯನ್ ಆಯಿಲ್ ಬಂಕ್‌ಗಳಲ್ಲಿ ಸದ್ಯಕ್ಕೆ ಪೂರೈಕೆ ಸುಗಮವಾಗಿದ್ದರೂ, ಎಚ್‌ಪಿ ಮತ್ತು ಭಾರತ್ ಬಂಕ್‌ಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿರೋದು ಆತಂಕ ಹೆಚ್ಚಿಸಿದೆ.

ಜನ್ಮ ದಿನಕ್ಕೆ ಡಿಕೆಶಿಗೆ ಸಿಗುತ್ತಾ ಶುಭ ಸುದ್ದಿ?

ಪಂಚರಾಜ್ಯಗಳ ಚುನಾವಣೆ ಫಲಿತಾಂಸ ಹೊರಬಿದ್ದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದಂದು ಹೈಕಮಾಂಡ್‌ನಿಂದ ಶುಭ ಸುದ್ದಿ ಸಿಗಬಹುದೆಂಬ ನಿರೀಕ್ಷೆ ಬೆಂಬಲಿಗರಲ್ಲಿ ಹೆಚ್ಚಿದೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್ , ತಾವು ಕೂಡ ಈ ಶುಭ ಸುದ್ದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದ ಅವರು, ಎಲ್ಲದಕ್ಕೂ ಒಂದು ಕಾಲ ಬರುತ್ತದೆ ಎಂದು ಹೇಳಿರೋದು ಕುತೂಹಲ ಮೂಡಿಸಿದೆ. ಸರ್ಕಾರ ಮತ್ತು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ, ಅಧಿಕಾರ ಹಂಚಿಕೆ ಕುರಿತ ನಿರ್ಧಾರಗಳು ಮುಖ್ಯಮಂತ್ರಿಗಳು, ಪಕ್ಷ ಮತ್ತು ಹೈಕಮಾಂಡ್‌ನ ನಡುವೆ ನಡೆಯುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವಚನಾನಂದ ಶ್ರೀಗೆ ಜಾಮೀನು ಮಂಜೂರು; ಕಾಂಗ್ರೆಸ್​​ ಕೇರಳದಲ್ಲಿ ಗದ್ದುಗೆ, ತಮಿಳುನಾಡಿನಲ್ಲಿ ವಿಜಯ್ ಜೊತೆ ಮೈತ್ರಿ!

ಕಂಡ ಕಂಡಲ್ಲಿ ಮೂತ್ರ ಮಾಡುವ ಮುನ್ನ ಜೋಕೆ!

ಶೌಚಾಲಯಗಳಿಗೆ ತೆರಳುವ ಬದಲು ಪಟ್ಟಣದಲ್ಲಿನ ಖಾಲಿ ಜಾಗ, ಕಾಂಪೌಂಡ್​​ಗಳ ಸಮೀಪ ಮೂತ್ರ ಮಾಡುವವರಿಗೆ ಬ್ರೇಕ್​​ ಹಾಕಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ದಂಡಾಸ್ತ್ರಕ್ಕೂ ಜನ ಬಗ್ಗದ ಕಾರಣ, ಈ ಬಗ್ಗೆ ಗಂಭೀರ ಚಿಂತನೆ ನಡೆಸಿರುವ ಪಾಲಿಕೆ ಮಾಸ್ಟರ್​​ ಪ್ಲಾನ್​​ ಮಾಡಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಕಾಂಪೌಂಡ್ ಗೋಡೆಗೆ ಸ್ಟೇನ್ ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಇವು ಕನ್ನಡಿಯಂತೆ ಎದುರಿದ್ದವರನ್ನು ಪ್ರತಿಬಿಂಬಿಸಲಿವೆ. ಹೀಗಾಗಿ ಕಾಂಪೌಂಡ್​​ ಎಂದು ಅಲ್ಲಿ ಮೂತ್ರಮಾಡಲು ಹೋದರೆ ಮಾನ ಕಳೆದುಕೊಳ್ಳಬೇಕಾಗಬಹುದು ಜೋಕೆ!. ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡುವವರಿಗೆ ಮುಜುಗರ ಉಂಟು ಮಅಡುವ ಮೂಲಕ ಈ ಚಾಳಿಗೆ ಬ್ರೇಕ್​​ ಹಾಕಲು ಮೈಸೂರು ಪಾಲಿಕೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗ ಯಶಸ್ಸು ಕಾಣುತ್ತೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:23 pm, Wed, 6 May 26

Source link

ಕುತೂಹಲಕ್ಕೆ ಹೋಗಿ ನೋಡಿದಾಗ ಎದುರಾಗಿದ್ದು ಶಾಕ್​! ಬಾಲ್ಯ ವಿವಾಹ ತಡೆದ ಅಕ್ಕ ಪಡೆ – Kannada News | Belagavi Akka Pade Prevents Two Child Marriages in Two Days, Rescues Girls

ಬಾಲ್ಯ ವಿವಾಹ ತಡೆದ ಅಕ್ಕ ಪಡೆImage Credit source: tv9 kannada

ಬೆಳಗಾವಿ, ಮೇ 06: ನಗರದಲ್ಲಿ (Belagavi) ಅಕ್ಕ ಪಡೆ ಕಾರ್ಯಾಚರಣೆ ನಡೆಸಿ ಎರಡು ಬಾಲ್ಯ ವಿವಾಹವನ್ನು (child marriage) ತಡೆದಿರುವಂತಹ ಘಟನೆ ನಡೆದಿದೆ. ಬಾಲ್ಯ ವಿವಾಹ ಅಪರಾಧ ಅಂತಾ ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ ಬಾಲ್ಯ ವಿವಾಹವನ್ನು ನಿಲ್ಲಿಸಿ 13 ಮತ್ತು 17 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಿದ್ದಾರೆ. ಸದ್ಯ ಅಕ್ಕ ಪಡೆಯ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗಿದ್ದ ಪೋಷಕರು
  • ಕಾರ್ಯಾಚರಣೆ ನಡೆಸಿ ಬಾಲ್ಯ ವಿವಾಹ ತಡೆದ ಅಕ್ಕ ಪಡೆ
  • ಅಕ್ಕ ಪಡೆ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಮೆಚ್ಚುಗೆ
  • ಬೆಳಗಾವಿ ನಗರದಲ್ಲಿ‌ ಹೆಣ್ಣು ಮಕ್ಕಳ ರಕ್ಷಣೆಗೆ ಅಕ್ಕ ಪಡೆ ನಿಯೋಜನೆ

ನಡೆದಿದ್ದೇನು?

ಬೆಳಗಾವಿಯ ವಂಟಮೂರಿ ಕಾಲೋನಿಯಲ್ಲಿ ಪೋಷಕರು 17 ವರ್ಷದ ಬಾಲಕಿ ಮದುವೆ ಮಾಡುತ್ತಿದ್ದರು. ಕುತೂಹಲಕ್ಕೆ ಏನು ಕಾರ್ಯಕ್ರಮ ಅಂತಾ ಅಕ್ಕ ಪಡೆ ಹೋಗಿ ನೋಡಿದಾಗ ಬಾಲ್ಯ ವಿವಾಹ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು

ಇದೇ ರೀತಿಯಾಗಿ ಶಹಾಪುರದಲ್ಲಿ 13 ವರ್ಷದ ಬಾಲಕಿ ಮದುವೆ ಮಾಡುತ್ತಿರುವ ಮಾಹಿತಿ ಸಿಗುತ್ತಿದ್ದಂತೆ ಕೂಡಲೇ ಅಕ್ಕ ಪಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಾಲ್ಯ ವಿವಾಹ ತಡೆದಿದ್ದಾರೆ. ಸದ್ಯ ಎರಡು ಪ್ರಕರಣದಲ್ಲಿ ಬಾಲಕಿಯರ ತಂದೆ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಲಾಗಿದೆ. ಸದ್ಯ ಬಾಲ್ಯ ವಿವಾಹ ತಡೆದಿದ್ದಕ್ಕೆ ಅಕ್ಕ ಪಡೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಇನ್ನು ಬೆಳಗಾವಿ ನಗರದಲ್ಲಿ‌ ಪುಂಡ ಪೋಕರಿಗಳಿಂದ ಹೆಣ್ಣು ಮಕ್ಕಳ ರಕ್ಷಣೆಗೆ ಅಕ್ಕ ಪಡೆ ನಿಯೋಜನೆ ಮಾಡಲಾಗಿದ್ದು, ಶಾಲಾ-ಕಾಲೇಜು, ಬಸ್ ನಿಲ್ದಾಣ, ಮಾರುಕಟ್ಟೆ ಹೀಗೆ ಪ್ರಮುಖ ಸ್ಥಳಗಳಲ್ಲಿ ಅಕ್ಕ ಪಡೆ ಸುತ್ತಾಟ ನಡೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version