‘ಹೊಡೆದರು, ಸುಟ್ಟರು, ಕೊನೆಗೆ ‘ಶೂಟ್ ಮಾಡ್ಕೊಂಡು ಸಾಯ್ತೀನಿ’ ಎಂದ ದರ್ಶನ್’ – Kannada News | Renuka Swamy case, accused Pradosh said Darshan threatened him
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ದರ್ಶನ್ ಆಪ್ತನಾಗಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಸಹ ಆಗಿರುವ ಪ್ರದೋಷ್ ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ಪ್ರದೋಶ್, ತಾವು ಪ್ರಕರಣದ ಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಎದುರು ಹಂಚಿಕೊಳ್ಳುವುದಾಗಿ ಹೇಳಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಶ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ ಬಗ್ಗೆ ಕುತೂಹಲಕಾರಿ ವಿಷಯಗಳು ಹೊರಬಂದಿವೆ. ಪ್ರದೋಶ್ ಸಲ್ಲಿಸಿರುವ…