‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಲಿ ಎಂದು ಆಶಿಸಿರೋ ಅವರು, ‘ಚುನಾವಣೆಯಲ್ಲಿ ಗೆದ್ದವರ ಜನಸೇವೆ ಉತ್ತಮವಾಗಿರಲಿ’  ಎಂದು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಪರಾಜಿಗಳ ಮೇಲೆ ರಣಬೀರ್ ಕಪೂರ್ ಕೆಂಡಾಮಂಡಲ; ವಿಡಿಯೋ ವೈರಲ್ – Kannada News | Ranbir Kapoor loses cool at Paparazzi with Alia Bhatt at Daadi Ki Shaadi screening

ಬಾಲಿವುಡ್‌ನ ಸ್ಟಾರ್ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಂಗಳವಾರ (ಮೇ 6) ಸಂಜೆ ಕುಟುಂಬದ ಜೊತೆ ಸಮಯ ಕಳೆಯಲು ಹೊರಬಂದಿದ್ದರು. ಆದರೆ, ಈ ವೇಳೆ ಪಾಪರಾಜಿಗಳ ವರ್ತನೆಯಿಂದ ರಣಬೀರ್ ಕಪೂರ್ (Ranbir Kapoor) ಅವರು ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ಮೊದಲು ಕೂಡ ರಣಬೀರ್ ಕಪೂರ್ ಅವರು ಇದೇ ರೀತಿ ಕೋಪ ಮಾಡಿಕೊಂಡಿದ್ದರು. ಆದರೂ ಕೂಡ ಪಾಪರಾಜಿಗಳ (Paparazzi) ವರ್ತನೆ ಸುಧಾರಿಸಿಲ್ಲ.

1. ಪಾಪರಾಜಿಗಳ ವರ್ತನೆ ಕಂಡು ತಾಳ್ಮೆ ಕಳೆದುಕೊಂಡ ರಣಬೀರ್ ಕಪೂರ್.

2. ‘ಹಿಂದಕ್ಕೆ ಸರಿಯಿರಿ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ ಬಾಲಿವುಡ್ ನಟ.

3. ಸೋಶಿಯಲ್ ಮೀಡಿಯಾದಲ್ಲಿ ರಣಬೀರ್ ಕಪೂರ್ ಅವರ ವಿಡಿಯೋ ವೈರಲ್.

ರಣಬೀರ್ ಅವರ ತಾಯಿ ನೀತು ಕಪೂರ್ ಮತ್ತು ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ನಟಿಸಿರುವ ‘ದಾದಿ ಕಿ ಶಾದಿ’ ಸಿನಿಮಾದ ವಿಶೇಷ ಪ್ರದರ್ಶನಕ್ಕಾಗಿ ದಂಪತಿ ಆಗಮಿಸಿದ್ದರು. ರಣಬೀರ್ ಮತ್ತು ಆಲಿಯಾ ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ, ಪಾಪರಾಜಿಗಳು ಅಕ್ಷರಶಃ ಅವರನ್ನು ಸುತ್ತುವರಿದು ಫೋಟೋ ತೆಗೆಯಲು ಮುಗಿಬಿದ್ದರು.

ಕಾರಿನ ಬಾಗಿಲಿನವರೆಗೂ ಕ್ಯಾಮೆರಾಗಳು ಬಂದಿದ್ದರಿಂದ ರಣಬೀರ್ ಅವರು ಕ್ಷಣಕಾಲ ತಾಳ್ಮೆ ಕಳೆದುಕೊಂಡರು. ವಿಡಿಯೋದಲ್ಲಿ ಕಂಡುಬಂದಂತೆ, ರಣಬೀರ್ ಅವರು ಪಾಪರಾಜಿಗಳನ್ನು ಹಿಂದಕ್ಕೆ ಸರಿಯುವಂತೆ ಕೇಳಿಕೊಂಡರು. ಅವರು ಗರಂ ಆಗಿಯೇ ಈ ಮಾತು ಹೇಳಿದರು. ‘ನಿಮಗೆ ಫೋಟೋ ಬೇಕಲ್ವಾ? ಬನ್ನಿ’ ಎಂದು ಹೇಳುತ್ತಾ ಸ್ವಲ್ಪ ದೂರ ಹೋಗಿ ಪೋಸ್ ನೀಡಲು ಸ್ಥಳಾವಕಾಶ ಮಾಡಿಕೊಡುವಂತೆ ಕೇಳಿದರು. ನಂತರ ಪಾಪರಾಜಿಗಳು ಕೂಡ ಒಬ್ಬರಿಗೊಬ್ಬರು ‘ಹಿಂದಕ್ಕೆ ಸರಿಯಿರಿ’ ಎಂದು ಹೇಳುತ್ತಾ ದಾರಿ ಮಾಡಿಕೊಟ್ಟರು.

ರಣಬೀರ್ ಕಪೂರ್ ವೈರಲ್ ವಿಡಿಯೋ:

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅನೇಕ ನೆಟ್ಟಿಗರು ರಣಬೀರ್ ಕಪೂರ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ‘ಸೆಲೆಬ್ರಿಟಿಗಳ ಖಾಸಗಿತನಕ್ಕೆ ಗೌರವ ನೀಡಬೇಕು. ಫೋಟೋ ತೆಗೆಯುವ ನೆಪದಲ್ಲಿ ಮುಖದ ಹತ್ತಿರ ಕ್ಯಾಮೆರಾ ಹಿಡಿಯುವುದು ಸರಿಯಲ್ಲ’ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಈ ರೀತಿಯ ಸನ್ನಿವೇಶಗಳು ಈ ಮೊದಲು ಬೇರೆ ಸೆಲೆಬ್ರಿಟಿಗಳಿಗೂ ಎದುರಾಗಿತ್ತು.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ

ಸಿನಿಮಾ ವಿಚಾರಕ್ಕೆ ಬರುವುದಾದರೆ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್ ಜೊತೆಯಾಗಿ ನಟಿಸುತ್ತಿದ್ದಾರೆ. ಅಲ್ಲದೇ, ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ನಟಿಸಿದ್ದು, ಆ ಸಿನಿಮಾದ ಬಿಡುಗಡೆಗೆ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ: 14 ಎಫ್​​ಐಆರ್​​ – Kannada News | Mandya Cracks Down on Child Labor: 40 Rescued, 14 FIRs in One Year

ಮಂಡ್ಯ, ಮೇ 06: ಸರ್ಕಾರದ ಸಾಕಷ್ಟು ಕಠಿಮ ನಿಯಮಗಳ ನಡುವೆಯೂ ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಗುರುತಿಸಿ, ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಒದಗಿಸುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ.

  • ಬಾಲ ಕಾರ್ಮಿಕರ ನಿರ್ಮೂಲನೆಗೆ ಮಂಡ್ಯದಲ್ಲಿ ದಿಟ್ಟ ಹೆಜ್ಜೆ
  • ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ, 14 ಎಫ್​​ಐಆರ್​​
  • ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರಿಂದ ಈ ಬಗ್ಗೆ ಮಾಹಿತಿ

ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ; ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

2025ರ ಏಪ್ರಿಲ್‌ನಿಂದ 2026ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 951 ತಪಾಸಣೆಗಳನ್ನು ನಡೆಸಲಾಗಿದ್ದು, ಈ ವೇಳೆ 40 ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಇವರಲ್ಲಿ 14 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದ್ದು, ಉಳಿದ 26 ಪ್ರಕರಣಗಳು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. ತಾಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಬಾಲಕಾರ್ಮಿಕರಿಗೆ ಸಲಹೆ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಇದೇ ವೇಳೆ ಸೂಚಿಸಿದ್ದಾರೆ. 2025-26ರಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ನಿರ್ಮೂಲನೆ ಕುರಿತು 9 ಬೀದಿ ನಾಟಕಗಳು, 7,000 ಪಾಂಪ್ಲೆಟ್​​ಗಳ ವಿತರಣೆ, 22 ಗೋಡೆ ಬರಹಗಳು ಹಾಗೂ 6 ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಸಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಕಾರ ಗಂಭೀರ ಅಪರಾಧವಾಗಿದೆ. ಹೀಗಾಗಿ ಮಾಲೀಕರಿಗೆ ಶಿಕ್ಷೆ ಆಗಲಿದ್ದು, 6 ತಿಂಗಳಿಂದ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಬಹುದಾಗಿದೆ. 20,000 ದಿಂದ 50,000 ವರೆಗೆ ದಂಡ ಕೂಡ ಬೀಳಲಿದೆ. ಅಥವಾ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ಎರಡನ್ನೂ ಒಟ್ಟಿಗೆ ವಿಧಿಸುವ ಅಧಿಕಾರ ಹೊಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ – Kannada News | Fuel Crisis in Bengaluru: Petrol and Diesel Shortage in HP and Bharat Petroleum Bunks Due to Supply Issues

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini

ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬಂಕ್‌ಗಳ ಮೇಲೆ ಒತ್ತಡ ಹೆಚ್ಚಾಗಿದ್ದು, ಪೂರೈಕೆ ಸರಪಳಿ ಕಡಿತಗೊಂಡಿದೆ.

ಪೆಟ್ರೋಲ್, ಡೀಸೆಲ್ ಅಭಾವದ ಮುಖ್ಯಾಂಶಗಳು

  • ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಸ್ಟಾಕ್ ಸಮಸ್ಯೆ ತೀವ್ರ.
  • ಶೆಲ್, ಜಿಯೋ ಮತ್ತು ನಯಾರಾ ಅಂತಹ ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕ ಬಂಕ್‌ಗಳತ್ತ ಮುಖ ಮಾಡಿದ ಜನ.
  • ತೈಲ ವ್ಯಾಪಾರಿಗಳು ಲಕ್ಷಾಂತರ ರೂಪಾಯಿ ಮುಂಗಡ ಹಣ ಪಾವತಿಸಿದರೂ ಡಿಪೋಗಳಿಂದ ಪೂರೈಕೆಯಾಗದ ಇಂಧನ.

ಎಲ್‌ಪಿಜಿ ಬಿಕ್ಕಟ್ಟಿನ ನೆನಪು

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಆಟೋ ಎಲ್‌ಪಿಜಿ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿ ದೊಡ್ಡ ಸಂಚಲನ ಮೂಡಿಸಿತ್ತು. ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಹೋಟೆಲ್ ದರ ಏರಿಕೆಯಾಗಿದ್ದರೆ, ಪಿಜಿ ಬಾಡಿಗೆಗಳು ಹೆಚ್ಚಾಗುವ ಭೀತಿಯೂ ಎದುರಾಗಿದೆ. ಅದರ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಸಿಗದೆ ಜನರು ಬಂಕ್‌ಗಳ ಮುಂದೆ ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಎಲ್‌ಪಿಜಿಗಾಗಿ ಸವಾರರು ಗಂಟೆಗಟ್ಟಲೆ ಕಾಯುತ್ತಿದ್ದ ದೃಶ್ಯಗಳು ಈಗ ಪೆಟ್ರೋಲ್ ಬಂಕ್‌ಗಳ ಮುಂದೆಯೂ ಮರುಕಳಿಸುವ ಆತಂಕ ಶುರುವಾಗಿದೆ.

ಡಿಪೋಗಳಿಂದ ಪೂರೈಕೆ ಸ್ಥಗಿತ

ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲ. ಇಂಡಿಯನ್ ಆಯಿಲ್ (Indian Oil) ಬಂಕ್‌ಗಳಲ್ಲಿ ಸದ್ಯಕ್ಕೆ ಪೂರೈಕೆ ಸುಗಮವಾಗಿದ್ದರೂ, ಎಚ್‌ಪಿ ಮತ್ತು ಭಾರತ್ ಬಂಕ್‌ಗಳಲ್ಲಿ ಮಾತ್ರ ಪರಿಸ್ಥಿತಿ ಬಿಗಡಾಯಿಸಿದೆ.

ಇದನ್ನೂ ಓದಿ: ಹೋಟೆಲ್, ಆಟೋ ಬೆನ್ನಲ್ಲೇ ಈಗ ಪಿಜಿ ಸರದಿ: ಬೆಂಗಳೂರಿನಲ್ಲಿ ಶೇ 10ರಷ್ಟು ದುಬಾರಿಯಾಗಲಿದೆ ಪಿಜಿ ಬಾಡಿಗೆ

ಕೆಲವು ಬಂಕ್‌ಗಳಲ್ಲಿ ಇಂದು ದಾಸ್ತಾನು ಬಂದಿದೆ ಎಂದು ಮಾಲೀಕರು ಹೇಳುತ್ತಿದ್ದಾರಾದರೂ, ಬೇಡಿಕೆಗೆ ತಕ್ಕಷ್ಟು ಇಂಧನ ಸಿಗುತ್ತಿಲ್ಲ. ಈ ಪೂರೈಕೆ ಕೊರತೆಯ ಬಗ್ಗೆ ತೈಲ ಕಂಪನಿಗಳಿಂದ ಬಂಕ್ ಮಾಲೀಕರಿಗೆ ಇನ್ನು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ. ಇದು ವಾಹನ ಸವಾರರ ಆತಂಕವನ್ನು ಇಮ್ಮಡಿಗೊಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟ! – Kannada News | Agniveer 2026 Exam Dates and Admit Card Out: Indian Army CEE Schedule and Physical Test Info

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15 ರಿಂದ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪ್ರವೇಶ ಪತ್ರಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ವಿತರಿಸಲಾಗುವುದು ಎಂದು ಸೇನೆಯು ತಿಳಿಸಿದೆ.

ಹುದ್ದೆಗಳ ವಿವರ:

ಈ ಬಾರಿ ಅಗ್ನಿವೀರ್ ಜನರಲ್ ಡ್ಯೂಟಿ, ಟೆಕ್ನಿಕಲ್, ಸ್ಟೋರ್‌ಕೀಪರ್ ಕ್ಲರ್ಕ್ ಮತ್ತು ಟ್ರೇಡ್ಸ್‌ಮನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅಷ್ಟೇ ಅಲ್ಲದೆ, ಧಾರ್ಮಿಕ ಶಿಕ್ಷಕ ಜೂನಿಯರ್ ಕಮಿಷನ್ಡ್ ಆಫೀಸರ್, ಹವಿಲ್ದಾರ್ ಶಿಕ್ಷಣ, ಸಿಪಾಯಿ ಫಾರ್ಮಾ ಮತ್ತು ಸೋಲ್ಜರ್ ಟೆಕ್ನಿಕಲ್ ಹುದ್ದೆಗಳಿಗೂ ಪ್ರವೇಶ ಪತ್ರಗಳು ಲಭ್ಯವಿರಲಿವೆ. ಅಗ್ನಿವೀರ್ ನೇಮಕಾತಿಯ ಸಾಮಾನ್ಯ ಪ್ರವೇಶ ಪರೀಕ್ಷೆಯು (CEE) ಜೂನ್ 1 ರಿಂದ ಜೂನ್ 15, 2026 ರವರೆಗೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಪರೀಕ್ಷೆಯನ್ನು ಅಭ್ಯರ್ಥಿಗಳು ಆರಿಸಿಕೊಂಡಿರುವ ಟ್ರೇಡ್‌ಗಳಿಗೆ ಅನುಗುಣವಾಗಿ ಪ್ರತ್ಯೇಕವಾಗಿ ನಡೆಸಲಾಗುತ್ತದೆ.

ದೈಹಿಕ ಪರೀಕ್ಷೆ:

ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಹಂತವಾದ ದೈಹಿಕ ಪರೀಕ್ಷೆಗೆ (Physical Test) ಅರ್ಹತೆ ಪಡೆಯಲಿದ್ದಾರೆ. ಈ ದೈಹಿಕ ಪರೀಕ್ಷೆಯನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ನಡೆಸಲಾಗುವುದು. ಎಲ್ಲಾ ಅಭ್ಯರ್ಥಿಗಳಿಗೆ 9 ಅಡಿ ಉದ್ದದ ಜಿಗಿತ ಮತ್ತು ಜಿಗ್-ಜಾಗ್ ಸಮತೋಲನ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ದೈಹಿಕ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುವಾಗ ಓಟ ಮತ್ತು ಪುಲ್-ಅಪ್‌ಗಳಿಗೆ ವಿಶೇಷ ಅಂಕಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ದೈಹಿಕ ಪರೀಕ್ಷೆಯ ಮೊದಲ ವಿಭಾಗದಲ್ಲಿ (Category 1) ಅಭ್ಯರ್ಥಿಗಳು 1.6 ಕಿ.ಮೀ ಓಟವನ್ನು 5:30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು, ಇದಕ್ಕೆ 60 ಅಂಕಗಳನ್ನು ನೀಡಲಾಗುತ್ತದೆ. ಜೊತೆಗೆ 10 ಪುಲ್-ಅಪ್‌ಗಳಿಗೆ 40 ಅಂಕಗಳು ಸೇರಿದಂತೆ ಒಟ್ಟು 100 ಅಂಕಗಳ ಮೆರಿಟ್ ಪಟ್ಟಿ ಇರುತ್ತದೆ. ಎರಡನೇ ವಿಭಾಗದಲ್ಲಿ (Category 2) 5:45 ನಿಮಿಷಗಳಲ್ಲಿ ಓಟ ಪೂರ್ಣಗೊಳಿಸಿದರೆ 48 ಅಂಕಗಳು ಮತ್ತು ಒಂಬತ್ತು ಪುಲ್-ಅಪ್‌ಗಳಿಗೆ 33 ಅಂಕಗಳು ಸಿಗಲಿವೆ. ಉಳಿದ ವಿಭಾಗಗಳಲ್ಲಿಯೂ ಸಮಯ ಮತ್ತು ಪುಲ್-ಅಪ್‌ಗಳ ಸಂಖ್ಯೆಗೆ ಅನುಗುಣವಾಗಿ ಅಂಕಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

Source link

IPL 2026: 6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​  (LSG) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಮೇ 6) ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ.

ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಬೌಲರ್​ಗಳಾಗಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್ ಕಾಣಿಸಿಕೊಳ್ಳುವುದು ಖಚಿತ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಸುಯಶ್ ಶರ್ಮಾ ಕೂಡ ಸೇರ್ಪಡೆಯಾಗಲಿದ್ದಾರೆ.

ಅಂದರೆ ಆರುಬ್ಯಾಟರ್​ಗಳು, ಇಬ್ಬರು ಆಲ್​ರೌಂಡರ್​ಗಳು ಮತ್ತು ನಾಲ್ವರು ಬೌಲರ್​ಗಳೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ವಿರಾಟ್ ಕೊಹ್ಲಿ
  • ಜೇಕಬ್ ಬೆಥೆಲ್
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಜಿತೇಶ್ ಶರ್ಮಾ
  • ರೊಮಾರಿಯೊ ಶೆಫರ್ಡ್​
  • ಕೃನಾಲ್ ಪಾಂಡ್ಯ
  • ಜೋಶ್ ಹೇಝಲ್​ವುಡ್​
  • ಭುವನೇಶ್ವರ್ ಕುಮಾರ್
  • ರಾಸಿಖ್ ದಾರ್
  • ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ಕಾಕ್ಸ್​ಗೆ ಸಿಗಲಿದೆಯಾ ಚಾನ್ಸ್​?

ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕಳೆದ ಮೂರು ಮ್ಯಾಚ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕಬ್ ಬೆಥೆಲ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಒಂದು ವೇಳೆ ಬೆಥೆಲ್ ಅವರನ್ನು ಆಡುವ ಬಳಗದಿಂದ ಕೈ ಬಿಟ್ಟರೆ, ಇಂಗ್ಲೆಂಡ್​ನ ಮತ್ತೋರ್ವ ಸ್ಫೋಟಕ ದಾಂಡಿಗ ಜೋರ್ಡನ್ ಕಾಕ್ಸ್​ಗೆ ಚಾನ್ಸ್ ಸಿಗಬಹುದು. ಇದರ ಹೊರತಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಇದನ್ನೂ ಓದಿ: IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

Source link

ಡಿ.ಕೆ. ಶಿವಕುಮಾರ್ ಜನ್ಮದಿನಕ್ಕೆ ಹೈಕಮಾಂಡ್‌ನಿಂದ ‘ಗಿಫ್ಟ್’? ಕುತೂಹಲ ಮೂಡಿಸಿದ ಡಿಕೆ ಸುರೇಶ್ ಹೇಳಿಕೆ – Kannada News | Karnataka Politics: DK Suresh Discusses Anticipated High Command Move for DK Shivakumars Birthday

ಬೆಂಗಳೂರು, ಮೇ.6: ಡಿಕೆ ಶಿವಕುಮಾರ್ ಅವರ 64ನೇ ಜನ್ಮದಿನದಂದು ಹೈಕಮಾಂಡ್‌ನಿಂದ ಮಹತ್ವದ “ಶುಭ ಸುದ್ದಿ”ಯ ನಿರೀಕ್ಷೆಯಿದೆ. ಈ ಕುರಿತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾತನಾಡಿ, ತಾವು ಕೂಡ ಈ ಶುಭ ಸುದ್ದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದು ಅವರು ಒತ್ತಿ ಹೇಳಿದರು. “ತಾಳಿದವನು ಬಾಳಿಯಾನು” ಎಂಬ ನುಡಿಯನ್ನು ಉಲ್ಲೇಖಿಸುತ್ತಾ, ಎಲ್ಲವಕ್ಕೂ ಒಂದು ಕಾಲ ಬರುತ್ತದೆ ಎಂದು ವಿವರಿಸಿದರು. ಸರ್ಕಾರ ಮತ್ತು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ, ಅಧಿಕಾರ ಹಂಚಿಕೆ ಕುರಿತ ನಿರ್ಧಾರಗಳು ಮುಖ್ಯಮಂತ್ರಿಗಳು, ಪಕ್ಷ ಮತ್ತು ಹೈಕಮಾಂಡ್‌ನ ನಡುವೆ ನಡೆಯುತ್ತವೆ ಎಂದು ಸುರೇಶ್ ಸ್ಪಷ್ಟಪಡಿಸಿದರು. ಎಲ್ಲರಿಗೂ ಸೂಕ್ತ ಕಾಲ ಬರುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

Source link

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ – Kannada News | TATA IPL 2026 Playoffs Schedule

ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ಹಂತದ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿಯ ಟೂರ್ನಿಯ ಅಂತಿಮ ಹಣಾಹಣಿಯು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 31ರಂದು ನಡೆಯಲಿದೆ. ಈ ಹಿಂದೆ ಐಪಿಎಲ್​ನ ಫೈನಲ್ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರ ಮಾಡಲಾಗಿದೆ.

3 ನಗರಗಳಲ್ಲಿ 4 ಮ್ಯಾಚ್​:

ಪ್ಲೇಆಫ್ ಹಂತದ ನಾಲ್ಕು ಪಂದ್ಯಗಳನ್ನು ಮೂರು ನಗರಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಧರ್ಮಶಾಲಾ, ಚಂಡೀಗಢ್ ಮತ್ತು ಅಹಮದಾಬಾದ್ ನಗರಗಳಲ್ಲಿ ದ್ವಿತೀಯ ಸುತ್ತಿನ ಪಂದ್ಯಗಳು ನಡೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯವು ಧರ್ಮಶಾಲಾದಲ್ಲಿ ನಡೆದರೆ, ಎಲಿಮಿನೇಟರ್ ಹಾಗೂ ಎರಡನೇ ಕ್ವಾಲಿಫೈಯರ್ ಪಂದ್ಯಗಳು ಚಂಡೀಗಢ್​ನಲ್ಲಿ ಜರುಗಲಿದೆ. ಇನ್ನು ಫೈನಲ್ ಪಂದ್ಯಕ್ಕೆ ಅಹಮದಾಬಾದ್​ ನಗರ ಆತಿಥ್ಯವಹಿಸಲಿದೆ.

  • ಕ್ವಾಲಿಫೈಯರ್ 1:  ಮೇ 26 (ಮಂಗಳವಾರ) | HPCA ಸ್ಟೇಡಿಯಂ | ಧರ್ಮಶಾಲಾ |
  • ಎಲಿಮಿನೇಟರ್: ಮೇ 27 (ಬುಧವಾರ) | ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ | ಚಂಡೀಗಢ್ |
  • ಕ್ವಾಲಿಫೈಯರ್ 2: ಮೇ 29 (ಶುಕ್ರವಾರ) | ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ | ಚಂಡೀಗಢ್ |
  • ಫೈನಲ್: ಮೇ 31 (ಭಾನುವಾರ) | ನರೇಂದ್ರ ಮೋದಿ ಸ್ಟೇಡಿಯಂ | ಅಹಮದಾಬಾದ್ |

ಬೆಂಗಳೂರಿನ ಅಭಿಮಾನಿಗಳಿಗೆ ನಿರಾಸೆ:

ಪೂರ್ವ ನಿಗದಿಯಂತೆ ಈ ಬಾರಿಯ ಐಪಿಎಲ್ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ, ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾರಣಗಳಿಂದಾಗಿ ಬಿಸಿಸಿಐ ಕೊನೆಯ ಕ್ಷಣದಲ್ಲಿ ಫೈನಲ್ ಪಂದ್ಯದ ಆತಿಥ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿದೆ. ಇದಕ್ಕೆ ಮುಖ್ಯ ಕಾರಣಗಳು ಈ ಕೆಳಗಿನಂತಿವೆ…

  •  ಶಾಸಕರ ಟಿಕೆಟ್ ಹಂಚಿಕೆ ವಿವಾದ: ಬಿಸಿಸಿಐನ ತನ್ನ ನಿರ್ಧಾರ ಬದಲಿಸಲು ಪ್ರಮುಖ ಕಾರಣವೆಂದರೆ ಸ್ಥಳೀಯ ಶಾಸಕರಿಗೆ ನೀಡಲಾಗುವ ಟಿಕೆಟ್‌ಗಳ ಹಂಚಿಕೆ. ವರದಿಗಳ ಪ್ರಕಾರ, ರಾಜ್ಯ ಸರ್ಕಾರ ಮತ್ತು ಕೆಎಸ್‌ಸಿಎ (KSCA) ನಡುವೆ ಟಿಕೆಟ್ ಕೋಟಾದ ಕುರಿತು ಭಿನ್ನಾಭಿಪ್ರಾಯಗಳು ಮೂಡಿವೆ. ಈ ರಾಜಕೀಯ ಹಸ್ತಕ್ಷೇಪ ಮತ್ತು ಟಿಕೆಟ್ ಗೊಂದಲಗಳು ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಫೈನಲ್ ಪಂದ್ಯವನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
  • ಭದ್ರತಾ ಲೋಪ ಮತ್ತು ಸಿಸಿಟಿವಿ ವಿವಾದ: ಇತ್ತೀಚೆಗೆ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ವೇಳೆ ನಡೆದ ಭದ್ರತಾ ಲೋಪವು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಸಿಸಿಟಿವಿ ವ್ಯವಸ್ಥೆ ಮಾಡಿದ್ದ ಕಂಪೆನಿಯ ಸಿಬ್ಬಂದಿಯೇ ಸುಮಾರು 240 ಕ್ಯಾಮೆರಾಗಳ ಸಂಪರ್ಕವನ್ನು ಕಡಿತಗೊಳಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಫೈನಲ್‌ನಂತಹ ಹೈ-ಪ್ರೊಫೈಲ್ ಪಂದ್ಯಕ್ಕೆ ಇಂತಹ ಭದ್ರತಾ ಲೋಪಗಳು ದೊಡ್ಡ ಹಿನ್ನಡೆಯಾಗಿವೆ.
  • ಕ್ರೀಡಾಂಗಣದ ಸುರಕ್ಷತೆ ಮತ್ತು ಮೂಲಸೌಕರ್ಯ: ಕಳೆದ ವರ್ಷ ಆರ್‌ಸಿಬಿ ಚಾಂಪಿಯನ್ ಆದಾಗ ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ನಡೆದ ನೂಕುನುಗ್ಗಲು ಮೈದಾನದ ಸುರಕ್ಷತೆಯ ಬಗ್ಗೆ ಪ್ರಶ್ನೆ ಎತ್ತಿತ್ತು. ನ್ಯಾ. ಜಾನ್ ಮೈಕೆಲ್ ಡಿಕುನ್ಹಾ ಅವರ ವರದಿಯು ಕ್ರೀಡಾಂಗಣದ ಕೆಲವು ವಿನ್ಯಾಸಗಳು “ಹೆಚ್ಚಿನ ಜನಸಂದಣಿಗೆ ಸುರಕ್ಷಿತವಲ್ಲ” ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ ಸುರಕ್ಷತೆಯೂ ಬಿಸಿಸಿಐನ ಪ್ರಮುಖ ಕಾಳಜಿಯಾಗಿದೆ.

ಇದನ್ನೂ ಓದಿ: DK ಕೋಚ್ ಆಗಲು ಇವರೇ ಕಾರಣ..!

ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್​ನ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ. ಅದರಂತೆ ಮೇ 31 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಜರುಗಲಿದೆ.

Published On – 1:15 pm, Wed, 6 May 26

Source link

Exit mobile version