ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು – Kannada News | Bengaluru PU Students Missing: Exam Fear Suspected, High Court Intervention

ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು

ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ

ಪರೀಕ್ಷೆ ಸಮೀಪಿಸುತ್ತಿದ್ದ ಹಿನ್ನೆಲೆ ಎಕ್ಸಾಮ್ ಭಯದಿಂದ ಸೀನಿಯರ್ ವಿದ್ಯಾರ್ಥಿನಿ ತನ್ನ ಜೂನಿಯರ್ ಸ್ನೇಹಿತೆಯನ್ನು ಕರೆದುಕೊಂಡು ಮನೆ ಬಿಟ್ಟು ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಪರೀಕ್ಷೆ ತಪ್ಪಿಸಿಕೊಳ್ಳಲು ತನಿಷ್ಕಾ ತನ್ನ ಕೈ ಕತ್ತರಿಸಿಕೊಂಡಿದ್ದಳೆಂದು ತಿಳಿದುಬಂದಿದೆ. ಹೀಗಾಗಿ ಈ ಬಾರಿ ಎಕ್ಸಾಮ್ ಬರೆಯಲು ಇಚ್ಚಿಸದೆ ಈ ನಿರ್ಧಾರ ಕೈಗೊಂಡಿರಬಹುದೆಂದು ಕುಟುಂಬಸ್ಥರು ಮತ್ತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಾಣೆಯಾಗಿರುವ ಈ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಫೋನ್‌ಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದು, ಎಟಿಎಂ ಕಾರ್ಡ್ ಸೇರಿದಂತೆ ಯಾವುದೇ ಹಣಕಾಸು ಕೊಂಡೊಯ್ದಿಲ್ಲವೆಂದು ಹೇಳಲಾಗಿದೆ. ಆಧಾರ್ ಕಾರ್ಡ್ ಹಾಗೂ ಕಾಲೇಜು ಬ್ಯಾಗ್ ಮಾತ್ರ ತೆಗೆದುಕೊಂಡು ನಾಪತ್ತೆಯಾಗಿರುವ ಇವರು, ಉಚಿತ ಬಸ್ ಪ್ರಯಾಣ ಸೌಲಭ್ಯ ಬಳಸಿಕೊಂಡಿರುವ ಶಂಕೆಯೂ ವ್ಯಕ್ತವಾಗಿದೆ.

ಇದನ್ನೂ ಓದಿ ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ

ಒಂದು ವಾರದ ಗಡುವು ನೀಡಿರುವ ಹೈ ಕೋರ್ಟ್​

ಕಳೆದ ಕೆಲ ದಿನಗಳ ಹಿಂದೆ ಸ್ನೇಹಿತರಿಗೆ ಕರೆ ಮಾಡಿ ಮಲೆ ಮಹಾದೇಶ್ವರ ಬೆಟ್ಟದಲ್ಲಿದ್ದೇವೆ ಎಂದು ತಿಳಿದಿದ್ದರಂತೆ. ಒಂದು ವಾರದಲ್ಲಿ ಮತ್ತೆ ಸಂಪರ್ಕಿಸುವುದಾಗಿಯೂ ಹೇಳಿದ್ದರು ಎನ್ನಲಾಗಿದೆ. ಆದರೆ ಅದಾದ ಬಳಿಕ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ಪೊಲೀಸರು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೈ ಕೋರ್ಟ್​ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಒಂದು ವಾರದ ಗಡುವು ನೀಡಿದೆ ಎಂದು ತಿಳಿದುಬಂದಿದೆ. ಒಂದು ತಿಂಗಳಿಂದ ಮಕ್ಕಳಿಗಾಗಿ ಕಣ್ಣೀರಿಡುತ್ತಿರುವ ಕುಟುಂಬಸ್ಥರು, ಸುರಕ್ಷಿತವಾಗಿ ಮರಳಿ ಬರುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ.

“ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ, ವಿಮಾನಯಾನ ಸಂಸ್ಥೆಗಳು ಅಗತ್ಯವಿರುವ ಕಡೆ ಹೆಚ್ಚುವರಿ ವಿಮಾನಗಳನ್ನು ನಿಯೋಜಿಸುತ್ತಿವೆ. ಈ ಅವಧಿಯಲ್ಲಿ ಟಿಕೆಟ್ ಬೆಲೆಗಳಲ್ಲಿ ಅನಗತ್ಯ ಏರಿಕೆಯಾಗದಂತೆ ನೋಡಿಕೊಳ್ಳಲು ವಿಮಾನ ದರಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ

ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದು ಇಂಡಿಗೋದಿಂದ 30 ಮತ್ತು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ 23 ಸೇರಿದಂತೆ 58 ವಿಮಾನಗಳನ್ನು ಗಲ್ಫ್ ರಾಷ್ಟ್ರಗಳಿಗೆ ಕಳುಹಿಸುತ್ತಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ ಸಿಲುಕಿರುವ ಭಾರತೀಯ ಪ್ರಯಾಣಿಕರನ್ನು ಮರಳಿ ಕರೆತರಲು ಸ್ಪೈಸ್‌ಜೆಟ್ ಇಂದು ಯುಎಇಯಿಂದ 8 ವಿಶೇಷ ವಿಮಾನಗಳನ್ನು ನಿರ್ವಹಿಸಲಿದೆ. ಇದರಲ್ಲಿ 4 ದೆಹಲಿಗೆ, 3 ಮುಂಬೈಗೆ ಮತ್ತು 1 ಕೊಚ್ಚಿಗೆ ಸೇರಿವೆ.

ಇದನ್ನೂ ಓದಿ: ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇಲ್ಲಿಯವರೆಗೆ, ಭಾರತೀಯ ವಿಮಾನಯಾನ ಸಂಸ್ಥೆಗಳ 1,221 ವಿಮಾನಗಳು ಮತ್ತು ವಿದೇಶಿ ವಿಮಾನಯಾನ ಸಂಸ್ಥೆಗಳ 388 ವಿಮಾನಗಳು ರದ್ದಾಗಿವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಫೆಬ್ರವರಿ 28ರಿಂದ ಸಚಿವಾಲಯ ಒದಗಿಸಿದ ಅಂಕಿ-ಅಂಶಗಳ ಪ್ರಕಾರ ಮಂಗಳವಾರ ಭಾರತೀಯ ವಿಮಾನಯಾನ ಸಂಸ್ಥೆಗಳು 104 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕಾರ್ಖಾನೆಗಳು ವಾಯುಮಾಲಿನ್ಯ ಕಡಿಮೆ ಮಾಡಬೇಕು: ಇಲ್ಲಾಂದ್ರೆ ಬಂದ್​​ ನಿಶ್ಚಿತ; ಶಾಸಕ ಎಚ್ಚರಿಕೆ – Kannada News | Koppal Hirebaganal Villagers Confront MLA Hitnal Over Factory Dust and Pollution Crisis

ಹಿರೇಬಗನಾಳ ಗ್ರಾಮಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಭೇಟಿImage Credit source: tv9 kannada

ಕೊಪ್ಪಳ, ಮಾರ್ಚ್​​ 04: ಕಳೆದ ಕೆಲ ದಿನಗಳಿಂದ ಬಲ್ಡೋಟಾ ಸ್ಟೀಲ್ ಫವರ್ ಲಿಮಿಟಿಡ್ (Baldota Factory) ಹೆಸರು ಬಹಳ ಚರ್ಚೆಯಲ್ಲಿದೆ. ಜಿಲ್ಲೆಯಲ್ಲಿ ವಿಸ್ತರಣೆಯಾಗಿರುವ ಈ ಕಾರ್ಖಾನೆಗೆ ಮೊದಲಿನಿಂದಲೂ ವಿರೋಧ ವ್ಯಕ್ತವಾಗುತ್ತಾ ಬಂದಿದೆ. ಒಂದು ಕಡೆ ವಾಯು ಮಾಲಿನ್ಯ ಕಡಿಮೆ ಮಾಡಲು ಶಾಸಕರು, ಮಾಜಿ ಸಂಸದರು ಸಭೆ ಮಾಡಿದ್ದರೆ, ಮತ್ತೊಂದು ಕಡೆ ಕಾರ್ಖಾನೆಗಳಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ರಾಘವೇಂದ್ರ ಹಿಟ್ನಾಳ್​​​, ತಂತ್ರಜ್ಞಾನ ಬಳಸಿಕೊಂಡು ವಾಯುಮಾಲಿನ್ಯ ಕಡಿಮೆ ಮಾಡಬೇಕು. ಇಲ್ಲವಾದರೆ ನೂರಕ್ಕೆ ನೂರರಷ್ಟು ಕಾರ್ಖಾನೆ ಬಂದ್ ಮಾಡಿಸೋದು ನಿಶ್ಚಿತ ಎಂದು  ಹೇಳಿದ್ದಾರೆ.

ಕೊಪ್ಪಳದಲಿಂದ ಕೂಗಳತೇ ದೂರದಲ್ಲಿರುವ ಗಿಣಗೇರಾ ಬಳಿ ಇರುವ ಕಾರ್ಖಾನೆಗಳಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿದೆ. ಬೆಳಗಿನ ಸಮಯದಲ್ಲಿ ಕಾರ್ಖಾನೆಗಳಿಂದ ಹೊರ ಹೋಗುವ ಅಪಾರ ಪ್ರಮಾಣದ ಹೊಗೆಗೆ ಜನರು ರೋಸಿ ಹೋಗಿದ್ದಾರೆ. ಹೊಗೆ ಕಡಿಮೆ‌ ಮಾಡಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು: ಸರ್ಕಾರದ ಶವಯಾತ್ರೆ, ಜನಪ್ರತಿನಿಧಿಗಳಿಗೆ ತರಾಟೆ

ಇನ್ನು ಇತ್ತೀಚಿಗೆ ಹಿರೇಬಗನಾಳ ಗ್ರಾಮಕ್ಕೆ ಹೋಗಿದ್ದ ವೇಳೆ ಧೂಳಿನ ಸಮಸ್ಯೆ ಬಗ್ಗೆ ಗ್ರಾಮದ ಯುವಕರು ಹೇಳಿಕೊಂಡಿದ್ದರು. ಈ ವೇಳೆ ಸಮಸ್ಯೆ ಆಲಿಸದೇ ಶಾಸಕ ಹಿಟ್ನಾಳ್​​ ವಾಪಸ್​ ಹೋಗಿದ್ದರು. ಈ ಬಗ್ಗೆ ಸಾಕಷ್ಟು  ವಿರೋಧ ಕೂಡ ವ್ಯಕ್ತವಾಗಿತ್ತು. ವಿರೋಧದ ಬೆನ್ನಲ್ಲೇ ಇಂದು ಹಿರೇಬಗನಾಳ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಹಿಟ್ನಾಳ್, ಗ್ರಾಮದಲ್ಲಿ ಸಂಚರಿಸಿ ಜನರ ಸಮಸ್ಯೆ ಆಲಿಸಿದ್ದಾರೆ. ಈ ವೇಳೆ ಇಲ್ಲಿ ನಾವು ಹೇಗೆ ಜೀವನ ಮಾಡಬೇಕು. ಗ್ರಾಮ ಸ್ಥಳಾಂತರ ಮಾಡುವಂತೆ ಗ್ರಾಮದ ಮಹಿಳೆಯ ಒತ್ತಾಯಿಸಿದ್ದಾರೆ.

ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಿಷ್ಟು

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ, ಶಾಸಕ ರಾಘವೇಂದ್ರ ಹಿಟ್ನಾಳ್​​​, ತಂತ್ರಜ್ಞಾನ ಬಳಸಿಕೊಂಡು ವಾಯುಮಾಲಿನ್ಯ ಕಡಿಮೆ ಮಾಡಬೇಕು. ಇಲ್ಲವಾದರೆ ನೂರಕ್ಕೆ ನೂರರಷ್ಟು ಕಾರ್ಖಾನೆ ಬಂದ್ ಮಾಡಿಸೋದು ನಿಶ್ಚಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ನಾನು ಮತ್ತೆ ಗ್ರಾಮಕ್ಕೆ ಭೇಟಿ ನೀಡುತ್ತೇನೆ, ಡಿಸಿ ಕೂಡ ಬರುತ್ತಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬರುತ್ತಾರೆ. ಕಾರ್ಖಾನೆ ಯಾರದ್ದಾದರೂ ಆಗಿರಲಿ ನಮಗೆ ಆರೋಗ್ಯ ಮುಖ್ಯ. ಮಾಲಿನ್ಯ ತಡೆ ಸಂಬಂಧ ತಜ್ಞರನ್ನ ಕರೆಸಿ ಚರ್ಚಿಸಲು ಚಿಂತನೆ ನಡೆಸಿದ್ದೇವೆ. ಮಧ್ಯಪ್ರದೇಶದ ಭೋಪಾಲ್​​ ನಗರದಲ್ಲೇ ಕಾರ್ಖಾನೆ ಇದೆ. ಅಲ್ಲಿ ಯಾವ ರೀತಿ ಕ್ರಮ ಇದೆಯೋ ಇಲ್ಲೂ ಅದೇ ರೀತಿ ಆಗಲಿ. ಕಿರ್ಲೋಸ್ಕರ್ ಕಾರ್ಖಾನೆಯಿಂದ ನಮ್ಮ ಮನೆ 2 ಕಿ.ಮೀ.ದೂರದಲ್ಲಿದೆ. ಅಲ್ಲಿ ಧೂಳು ಬರಲ್ಲ, ಆ ತರಹದ ತಂತ್ರಜ್ಞಾನ ಇಲ್ಲೂ ಬಳಸಲಿ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:53 am, Wed, 4 March 26

Source link

IPL 2026: RCB ಅಭಿಮಾನಿಗಳಿಗೆ 3 ಗುಡ್ ನ್ಯೂಸ್… ಒಂದು ಬ್ಯಾಡ್ ನ್ಯೂಸ್ – Kannada News | M. Chinnaswamy Stadium in Bengaluru To Host 3 Big Matches

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಖಚಿತತೆಯೊಂದಿಗೆ ಆರ್​ಸಿಬಿ ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಇದರ ಜೊತೆಗೆ ಒಂದು ಬ್ಯಾಡ್ ನ್ಯೂಸ್ ಕೂಡ ಇದೆ.

ಇಲ್ಲಿ ಗುಡ್ ನ್ಯೂಸ್ ಏನೆಂದರೆ… ಈ ಬಾರಿಯ ಐಪಿಎಲ್​ನ ಪ್ರಮುಖ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಖಚಿತಪಡಿಸಿದ್ದಾರೆ. ಅದರಂತೆ ಐಪಿಎಲ್​ 2026ರ ಮೂರು ಪ್ರಮುಖ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಆ ಪಂದ್ಯಗಳಾವುವು ಎಂದರೆ…

  • ಉದ್ಘಾಟನಾ ಪಂದ್ಯ: ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ಕೆಎಸ್​ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ತಿಳಿಸಿದ್ದಾರೆ. ಅಂದರೆ ಈ ಭಅರಿಯ ಐಪಿಎಲ್ ಶುರುವಾಗುವುದು ಬೆಂಗಳೂರಿನಲ್ಲಿ.
  • ಪ್ಲೇಆಫ್ ಪಂದ್ಯ: ಉದ್ಘಾಟನಾ ಪಂದ್ಯವಲ್ಲದೇ, ಪ್ಲೇಆಫ್ ಸುತ್ತಿನ ಒಂದು ಪಂದ್ಯ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ. ಅದು ಎಲಿಮಿನೇಟರ್ ಪಂದ್ಯ ಆಗಿರಬಹುದು ಇಲ್ಲಾ ಮೊದಲ ಕ್ವಾಲಿಫೈಯರ್ ಮ್ಯಾಚ್ ಆಗಿರಬಹುದು.
  • ಫೈನಲ್ ಪಂದ್ಯ: ಈ ಬಾರಿಯ ಐಪಿಎಲ್​ನ ಫೈನಲ್ ಪಂದ್ಯ ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಐಪಿಎಲ್ 2026ರ ಕೊನೆಯ ಪಂದ್ಯ ಕೂಡ ಬೆಂಗಳೂರಿನಲ್ಲೇ ನಡೆಯಲಿದೆ.

ಆರ್​ಸಿಬಿ ತಂಡದ 5 ಪಂದ್ಯಗಳೊಂದಿಗೆ ಈ ಬಾರಿ ಹೆಚ್ಚುವರಿ 2 ಮ್ಯಾಚ್​ಗಳೂ ಕೂಡ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು. ಇನ್ನು ಬ್ಯಾಡ್ ನ್ಯೂಸ್ ಯಾವುದು ಎಂದರೆ…

  • ಪ್ರೇಕ್ಷಕರ ಮಿತಿ: ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಮಿತಿ ಇರಲಿದೆ. ಅಂದರೆ ಕ್ರೀಡಾಂಗಣದ ಸುರಕ್ಷತೆಯ ದೃಷ್ಟಿಯಿಂದ ಪ್ರೇಕ್ಷಕರ ಸಂಖ್ಯೆಯನ್ನು 30 ರಿಂದ 35 ಸಾವಿರಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಅಂದರೆ ಈ ಬಾರಿ ಸಂಪೂರ್ಣ ಸೀಟಿಂಗ್ ಟಿಕೆಟ್​ಗಳನ್ನು ಮಾರಾಟ ಮಾಡುವುದಿಲ್ಲ. ಹೀಗಾಗಿ ಸೀಮಿತ ಪ್ರೇಕ್ಷಕರಿಗೆ ಮಾತ್ರ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸಲು ಅವಕಾಶ ದೊರೆಯಲಿದೆ ಎಂದು ತಿಳಿದು ಬಂದಿದೆ.

ಆರ್​ಸಿಬಿ 5+2 ಪಂದ್ಯ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ 2 ಹೋಮ್​ ಗ್ರೌಂಡ್​ನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಲೀಗ್ ಹಂತದ 7 ಪಂದ್ಯಗಳಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 5 ಮ್ಯಾಚ್​ಗಳನ್ನು ಮಾತ್ರ ಆಡಲಿದೆ.

ಇನ್ನುಳಿದ ಎರಡು ಪಂದ್ಯಗಳನ್ನು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಶಾಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡಲಿದೆ.

ಇದನ್ನೂ ಓದಿ: RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

ಇದಾಗ್ಯೂ ಪ್ಲೇಆಫ್ ಪಂದ್ಯ ಹಾಗೂ ಫೈನಲ್ ಪಂದ್ಯ ಬೆಂಗಳೂರಿನಲ್ಲೇ ಜರುಗುತ್ತಿರುವುದರಿಂದ ಆರ್​ಸಿಬಿ ಅಭಿಮಾನಿಗಳಿಗೆ ಒಟ್ಟು 7 ಪಂದ್ಯಗಳನ್ನು ವೀಕ್ಷಿಸಲು ಅವಕಾಶ ದೊರೆಯಲಿದೆ.

Source link

Gold Rates: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್​ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,50,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,451 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,080 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,338 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,451 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,080 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,080 ರೂ
  • ಚೆನ್ನೈ: 15,200 ರೂ
  • ಮುಂಬೈ: 15,080 ರೂ
  • ದೆಹಲಿ: 15,095 ರೂ
  • ಕೋಲ್ಕತಾ: 15,080 ರೂ
  • ಕೇರಳ: 15,080 ರೂ
  • ಅಹ್ಮದಾಬಾದ್: 15,085 ರೂ
  • ಜೈಪುರ್: 15,095 ರೂ
  • ಲಕ್ನೋ: 15,095 ರೂ
  • ಭುವನೇಶ್ವರ್: 15,080 ರೂ

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 645 ರಿಂಗಿಟ್ (15,062 ರುಪಾಯಿ)
  • ದುಬೈ: 568.75 ಡಿರಾಮ್ (14,273 ರುಪಾಯಿ)
  • ಅಮೆರಿಕ: 159.50 ಡಾಲರ್ (14,702 ರುಪಾಯಿ)
  • ಸಿಂಗಾಪುರ: 205.60 ಸಿಂಗಾಪುರ್ ಡಾಲರ್ (14,834 ರುಪಾಯಿ)
  • ಕತಾರ್: 560 ಕತಾರಿ ರಿಯಾಲ್ (14,151 ರೂ)
  • ಸೌದಿ ಅರೇಬಿಯಾ: 577 ಸೌದಿ ರಿಯಾಲ್ (14,171 ರುಪಾಯಿ)
  • ಓಮನ್: 60.10 ಒಮಾನಿ ರಿಯಾಲ್ (14,388 ರುಪಾಯಿ)
  • ಕುವೇತ್: 46.51 ಕುವೇತಿ ದಿನಾರ್ (14,009 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು – Kannada News | Bengaluru–Tirupati Journey Ends in Tragedy After Highway Crash in Chittoor

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ.

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರಿನ ವೇಗದಿಂದಾಗಿ ನಿಯಂತ್ರಣ ತಪ್ಪಿದ್ದನೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಲಿಪಶುವಿನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಮತ್ತಷ್ಟು ಓದಿ: ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವರ ವಿವರಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ  – Kannada News | Yash Starrer Toxic Movie Release date postponed due to On Going War Situation

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ.

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್ಸಿಕ್ ಮುಂದಕ್ಕೆ ಹಾಕಿರೋದಾಗಿ ತಂಡ ಮಾಹಿತಿ ಕೊಟ್ಟಿದೆ.

‘ಟಾಕ್ಸಿಕ್’ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿದ್ದವು. ಈ ಚಿತ್ರದ ಟ್ರೇಲರ್ ಮಾರ್ಚ್ 8ರಂದು ರಿಲೀಸ್ ಆಗಬೇಕಿತ್ತು. ಇದಕ್ಕೆ ಎಲ್ಲಾ ಸಿದ್ಧತೆಗಳು ಕೂಡ ನಡೆದಿದ್ದವು. ಆದರೆ, ಇಸ್ರೇಲ್-ಇರಾನ್ ಮಧ್ಯೆ ಸಮರ ನಡೆಯುತ್ತಿರುವುದರಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಗಲ್ಫ ರಾಷ್ಟ್ರಗಳಲ್ಲಿ ‘ಧುರಂಧರ್ 2’ ರಿಲೀಸ್ ಆಗುತ್ತಿಲ್ಲ. ಹೀಗಾಗಿ, ಈ ರಾಷ್ಟ್ರವನ್ನು ದೊಡ್ಡ ಮಾರುಕಟ್ಟೆ ಮಾಡಿಕೊಳ್ಳಬೇಕು ಎಂಬುದು ‘ಟಾಕ್ಸಿಕ್’ ಸಿನಿಮಾ ತಂಡದ ಪ್ಲ್ಯಾನ್ ಆಗಿತ್ತು. ಆದರೆ, ಇದು ಸಾಧ್ಯವಾಗುತ್ತಿಲ್ಲ. ಇದನ್ನು ತಂಡ ಗಮನದಲ್ಲಿ ಇಟ್ಟುಕೊಂಡಿದೆ.

ಇದನ್ನೂ ಓದಿ: ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ

‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಲು ‘ಧುರಂಧರ್ 2’ ಕಾರಣ ಎಂಬ ಚರ್ಚೆ ಕೂಡ ನಡೆದಿದೆ. ಆದರೆ, ತಂಡ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ನಮ್ಮ ಪಾಲುದಾರರನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿದೆ.

‘ಟಾಕ್ಸಿಕ್’ ಸಿನಿಮಾನ ‘ಕೆವಿಎನ್’ ಸಂಸ್ಥೆ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಯಶ್ ಕೂಡ ನಿರ್ಮಾಪಕ. ಗೀತು ಮೋಹನ್ ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:08 am, Wed, 4 March 26

Source link

SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..! – Kannada News | South Africa vs New Zealand semi final: Head To Head

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮಾ.4) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹೀಗಾಗಿಯೇ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳ ಈ ಹಿಂದಿನ ಮುಖಾಮುಖಿಯೇ ರೋಚಕತೆಯಿಂದೆ ಕೂಡಿದೆ.

  • ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಲಾ ಪಂದ್ಯಗಳಲ್ಲೂ ಸೌತ್ ಆಫ್ರಿಕಾ ತಂಡವೇ ಜಯ ಸಾಧಿಸಿದೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ಆಫ್ರಿಕಾ ಪಡೆ ವಿರುದ್ಧ ನ್ಯೂಝಿಲೆಂಡ್ ತಂಡ ಒಮ್ಮೆಯೂ ಗೆಲುವು ದಾಖಲಿಸಿಲ್ಲ.
  • ಐಸಿಸಿ ಟೂರ್ನಿಯ ನಾಕೌಟ್ ಪಂದ್ಯಗಳಲ್ಲಿ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡ ಕೂಡ ಗೆಲುವು ದಾಖಲಿಸಿಲ್ಲ. ಅಂದರೆ ಈ ಹಿಂದೆ ಐಸಿಸಿ ಟೂರ್ನಿಯ 3 ನಾಕೌಟ್ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿವೆ. ಈ ವೇಳೆ ಮೂರು ಪಂದ್ಯಗಳಲ್ಲೂ ನ್ಯೂಝಿಲೆಂಡ್ ತಂಡವೇ ಜಯ ಸಾಧಿಸಿದೆ.

ಅಂದರೆ ಐಸಿಸಿ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸುವಲ್ಲಿ ನ್ಯೂಝಿಲೆಂಡ್ ತಂಡ ಯಶಸ್ವಿಯಾಗುತ್ತಾ ಬಂದಿದೆ. ಇದೀಗ ಇದೇ ಮೊದಲ ಬಾರಿಗೆ ಉಭಯ ತಂಡಗಳು ಟಿ20 ವಿಶ್ವಕಪ್​ನ ನಾಕೌಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.

ಅತ್ತ ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡವು ಒಮ್ಮೆಯೂ ಸೋತಿಲ್ಲ. ಇತ್ತ ನ್ಯೂಝಿಲೆಂಡ್ ತಂಡವು ಸೌತ್ ಆಫ್ರಿಕಾ ವಿರುದ್ಧದ ಎಲ್ಲಾ ನಾಕೌಟ್​ ಪಂದ್ಯಗಳನ್ನು ಗೆದ್ದ ಇತಿಹಾಸವಿದೆ. ಹೀಗಾಗಿಯೇ ಇಂದಿನ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ನಡುವಣ ಕದನವು ವಿಶೇಷ ಪಂದ್ಯವಾಗಿ ಮಾರ್ಪಟ್ಟಿದೆ.

ಏಕೆಂದರೆ ಈ ಬಾರಿ ಸೌತ್ ಆಫ್ರಿಕಾ ವಿರುದ್ಧ  ನ್ಯೂಝಿಲೆಂಡ್ ತಂಡ ಗೆದ್ದರೆ, ಅದು ಟಿ20 ವಿಶ್ವಕಪ್​ನಲ್ಲಿ ಆಫ್ರಿಕಾ ವಿರುದ್ಧದ ಕಿವೀಸ್ ಪಡೆಯ ಮೊದಲ ಜಯವಾಗಿರಲಿದೆ. ಇದೇ ವೇಳೆ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ಅದು ನ್ಯೂಝಿಲೆಂಡ್ ವಿರುದ್ಧದ ಐಸಿಸಿ ನಾಕೌಟ್ ಪಂದ್ಯದಲ್ಲಿ ಆಫ್ರಿಕಾ ಪಡೆಯ ಮೊದಲ ಗೆಲುವುವಾಗಿರಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಈ ಪೈಪೋಟಿಯಲ್ಲಿ ಗೆಲ್ಲುವ ಮೂಲಕ ಮಾರ್ಚ್ 8 ರಂದು ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್​ಗೆ ಯಾವ ತಂಡ ಅರ್ಹತೆ ಪಡೆಯಲಿದೆ ಎಂಬುದನ್ನು ಕಾದು ನೋಡೋಣ.

ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಕ್ ನೋಕಿಯ.

ಇದನ್ನೂ ಓದಿ: RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಆಡಮ್ ಮಿಲ್ನ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ಸೈಫರ್ಟ್​, ಇಶ್ ಸೋಧಿ.

Published On – 10:21 am, Wed, 4 March 26

Source link

ಲಕ್ನೋ: ಬಿರಿಯಾನಿ ಅಂಗಡಿಯ ಫ್ರೀಜರ್​ನಲ್ಲಿ ವ್ಯಕ್ತಿಯ ಶವ ಪತ್ತೆ – Kannada News | Man’s Body Discovered Inside Freezer at Biryani Outlet in Lucknow

ಲಕ್ನೋ, ಮಾರ್ಚ್​ 04: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್​​ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಿಶನ್​ಪುರ್ ಮಾಜ್ರಾ ನಿವಾಸಿಯಾಗಿದ್ದರು.

ಅಂಗಡಿ ಮಾಲೀಕರಾದ ಶನಿ ರಾವತ್​ ಅವರ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅಂಗಡಿಯು ಕಳೆದ ನಾಲ್ಕು ದಿನಗಳಿಂದ ಮುಚ್ಚಿತ್ತು. ರಾವತ್ ಭಾನುವಾರ ಬೆಳಗ್ಗೆ ಔಟ್ಲೆಟ್ ಅನ್ನು ಮತ್ತೆ ತೆರೆಯಲು ರಾವತ್ ಬಂದಾಗ, ಫ್ರೀಜರ್ ಒಳಗೆ ಶವವನ್ನು ಕಂಡು ಆಘಾತಕ್ಕೊಳಗಾದರು. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಶವವನ್ನು ಫ್ರೀಜರ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ದಿನಗೂಲಿ ಕೆಲಸಗಾರ ವಿಜಯ್ ಪಾಲ್ ಐದು ವರ್ಷಗಳ ಹಿಂದೆ ತನ್ನ ಹೆಂಡತಿಯಿಂದ ಬೇರ್ಪಟ್ಟ ನಂತರ ಒಂಟಿಯಾಗಿ ವಾಸಿಸುತ್ತಿದ್ದರು ಮತ್ತು ಮದ್ಯದ ಚಟಕ್ಕೆ ಒಳಗಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಎಡಿಸಿಪಿ (ಉತ್ತರ ವಲಯ) ರಿಷಭ್ ರನ್ವಾಲ್ ಹೇಳಿದ್ದಾರೆ.

ಮತ್ತಷ್ಟು ಓದಿ: ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು?

ಮತ್ತೊಂದು ಘಟನೆ
ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ
ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ.

ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್ ಲೆಡಾ ಮನೆ ಕೆಲವೇ ಕೆಲವು ಮೀಟರ್ ದೂರದಲ್ಲಿತ್ತು. ಇಬ್ಬರ ಮನೆಗಳ ಮಧ್ಯೆ ಕೇವಲ ಎರಡು ಮನೆಗಳಿದ್ದವು.

ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಹೋಳಿಕಾ ದಹನ್ ದಿನ ರಾತ್ರಿ 11 ಗಂಟೆ ಸುಮಾರಿಗೆ ಪ್ರಭಾತ್ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ, ಅವರ ತಂದೆ ಬೈದಿದ್ದರು. ಬಳಿಕ ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಕೋಪದ ಭರದಲ್ಲಿ ಪ್ರಭಾತ್ ಮನೆಯೊಳಗೆ ಇಟ್ಟಿದ್ದ ಕೊಡಲಿಯನ್ನು ಎತ್ತಿಕೊಂಡು ತಂದೆಯ ತಲೆಗೆ ಹಲವು ಬಾರಿ ಹೊಡೆದಿದ್ದಾನೆ. ಪರಾಸ್​ಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿಯು ಶವವನ್ನು ಎಳೆದುಕೊಂಡು ಹೋಗಿ ಮನೆಯ ಪಕ್ಕದಲ್ಲಿರುವ ಸಣ್ಣ ನೀರಿನ ಟ್ಯಾಂಕ್​​ಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ. ಶವವನ್ನು ವಿಲೇವಾರಿ ಮಾಡಿದ ನಂತರ ಹತ್ತಿರದ ಅಂಗಡಿಗೆ ಹೋಗಿ ಬಿರಿಯಾನಿ ಕೊಂಡು ಮನೆಗೆ ಬಂದು ತಿಂದು ಕಂಬಳಿ ಹೊದ್ದು ನೆಮ್ಮದಿಯಿಂದ ನಿದ್ರಿಸಿದ್ದಾನೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ? – Kannada News | National Safety Day 2026: Do you know why National Safety Day is celebrated in India?

ರಾಷ್ಟ್ರೀಯ ಸುರಕ್ಷತಾ ದಿನImage Credit source: vecteezy

ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 4 ರಂದು ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ಸುರಕ್ಷತಾ ದಿನದ ಇತಿಹಾಸವೇನು?

ಸುರಕ್ಷತಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಹಾಗೂ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಕುರಿತು ಅರಿವು ಮೂಡಿಸುವ ಸಲುವಾಗಿ  ಭಾರತ ಸರ್ಕಾರದ ಕಾರ್ಮಿಕ ಸಚಿವಾಲಯವು ರಾಷ್ಟ್ರೀಯ ಸುರಕ್ಷತಾ ಮಂಡಳಿಯನ್ನು ಸ್ಥಾಪಿಸಿತು. ರಸ್ತೆ ಸುರಕ್ಷತೆ, ಕೆಲಸದ ಸ್ಥಳದಲ್ಲಿನ ಸುರಕ್ಷತೆ, ಮಾನವ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಈ ಮಂಡಳಿಯ ಗುರಿಯಾಗಿದೆ.  ಈ ರಾಷ್ಟ್ರೀಯ ಸುರಕ್ಷತಾ ಮಂಡಳಿ ಪ್ರಾರಂಭವಾದ ಸವಿನೆನಪಿಗಾಗಿ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ಮೊದಲ ರಾಷ್ಟ್ರೀಯ ಸುರಕ್ಷತಾ ದಿನವನ್ನು 1972 ರಲ್ಲಿ ಆಚರಿಸಲಾಯಿತು. ಕೈಗಾರಿಕಾ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಅಲ್ಲದೆ ಪ್ರತಿವರ್ಷವು ಮಾರ್ಚ್ 6ರಿಂದ 10ರ ವರೆಗೆ ರಾಷ್ಟ್ರದಾದ್ಯಂತ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಭದ್ರತಾ ದಿನದ ಉದ್ದೇಶವೇನು?

ಸುರಕ್ಷತೆಯ ಮಹತ್ವವನ್ನು ಉತ್ತೇಜಿಸಲು ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಜನರು ಕೆಲಸದ ಸ್ಥಳಗಳಲ್ಲಿ, ತಮ್ಮ ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಈ ದಿನ ಸುರಕ್ಷತಾ ರ್ಯಾಲಿಗಳು, ಸುರಕ್ಷತಾ ತರಬೇತಿ, ಜಾಗೃತಿ ಅಭಿಯಾನಗಳು ಮತ್ತು ಕೆಲಸದ ಸ್ಥಳದಲ್ಲಿ ಸುರಕ್ಷತಾ ಪ್ರಮಾಣಪತ್ರಗಳ ವಿತರಣೆಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ

ರಾಷ್ಟ್ರೀಯ ಭದ್ರತಾ ದಿನದ ಮಹತ್ವವೇನು?

  • ಎಲ್ಲಾ ವಲಯಗಳಲ್ಲಿ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಪಘಾತಗಳನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಸುರಕ್ಷತಾ ದಿನದ ಉದ್ದೇಶವಾಗಿದೆ.
  • ಕೈಗಾರಿಕಾ ಅಪಘಾತಗಳನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ದಿನವು ಕಾರ್ಮಿಕರು ಮತ್ತು ಉದ್ಯೋಗಿಗಳ ಜೀವಗಳನ್ನು ರಕ್ಷಿಸಲು ಕಾರ್ಖಾನೆಗಳು, ನಿರ್ಮಾಣ ಸ್ಥಳಗಳು ಮತ್ತು ಇತರ ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಕಾರ್ಮಿಕರಿಗೆ ನೆನಪಿಸುತ್ತದೆ.
  • ಯಾವುದೇ ವಲಯದಲ್ಲಿ ಕೆಲಸ ಮಾಡುವ ನಾಗರಿಕರ ಸುರಕ್ಷತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಸಪ್ತಾಹವನ್ನು ಸಹ ಆಚರಿಸಲಾಗುತ್ತದೆ. ಈ ಸಮಯದಲ್ಲಿ, ಪ್ರತಿಯೊಂದು ವಲಯದ ಕಾರ್ಮಿಕರಿಗೆ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮತ್ತು ಕೈಗಾರಿಕಾ ಅಪಘಾತಗಳನ್ನು ತಪ್ಪಿಸುವ ಮಾರ್ಗಗಳು ಮತ್ತು ಅವುಗಳಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿಸಲಾಗುತ್ತದೆ. ಇದಕ್ಕಾಗಿ, ಅನೇಕ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version