Amarnath Yatra 2026: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ; ಭಕ್ತರ ಪ್ರವೇಶ ಬಂದ್ ಮಾಡಿದ ಆಡಳಿತ ಮಂಡಳಿ! – Kannada News | Amarnath Yatra Suspended: IMD Weather Warnings, Landslide Threat in Jambu and Kashmir from July 19
ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತImage Credit source: Getty Images ಭಾರತ ಹವಾಮಾನ ಇಲಾಖೆ (IMD) ನೀಡಿರುವ ತೀವ್ರ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳ ಜೀವ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಪಹಲ್ಗಾಮ್ ಮತ್ತು ಬಾಲ್ಟಾಲ್ ಎರಡೂ ಮಾರ್ಗಗಳ ಮೂಲಕ ಪವಿತ್ರ ಗುಹಾ ದೇಗುಲಕ್ಕೆ ತೆರಳುವ ಯಾತ್ರೆಯನ್ನು ಜುಲೈ 19 ರಿಂದ ತಡೆಹಿಡಿಯಲಾಗಿದೆ ಎಂದು ಜಮ್ಮು-ಕಾಶ್ಮೀರ ಆಡಳಿತದ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಲವೆಡೆ…