IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ – Kannada News | TATA IPL 2026 Playoffs Schedule
ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ಹಂತದ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿಯ ಟೂರ್ನಿಯ ಅಂತಿಮ ಹಣಾಹಣಿಯು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 31ರಂದು ನಡೆಯಲಿದೆ. ಈ ಹಿಂದೆ ಐಪಿಎಲ್ನ ಫೈನಲ್ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫೈನಲ್ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರ ಮಾಡಲಾಗಿದೆ. 3 ನಗರಗಳಲ್ಲಿ 4 ಮ್ಯಾಚ್: ಪ್ಲೇಆಫ್ ಹಂತದ ನಾಲ್ಕು ಪಂದ್ಯಗಳನ್ನು ಮೂರು…