ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ – Kannada News | Prabhas starrer Fauzi shooting halted after crew member dies in road accident
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರತಂಡದಲ್ಲಿ ಭಾರಿ ದುರಂತ ಸಂಭವಿಸಿದೆ. ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಸದಸ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಚಿತ್ರತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ವ್ಯಕ್ತಿ ಮೃತಪಟ್ಟ ಕಾರಣದಿಂದ ‘ಫೌಜಿ’ (Fauzi) ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಹೈದರಾಬಾದ್‌ನ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಗೆ ಚಿತ್ರೀಕರಣಕ್ಕಾಗಿ ತಂಡವು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಬ್ದುಲ್ಲಾಪುರಮೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು…