ಸಂಜು ಸಿಡಿಲಬ್ಬರ: ಸಿಎಸ್ಕೆ ತಂಡಕ್ಕೆ ಭರ್ಜರಿ ಜಯ – Kannada News | IPL 2026: Delhi Capitals vs Chennai Super Kings Highlights
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆ್ಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡಿಸಿ ಪಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಆರಂಭಿಕರಾದ ಕೆಎಲ್ ರಾಹುಲ್ (12) ಹಾಗೂ ಪಾತುಮ್ ನಿಸ್ಸಂಕಾ (19) 36 ರನ್ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ…