Headlines

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್  ಅಥವಾ  ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ. ಈ ನಿಷೇಧಕ್ಕೆ ಕಾರಣವೇನು? ಸ್ಮಾರ್ಟ್…

Read More

1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ – Kannada News | Hardik Pandya’s Generous Gifts to 1800km Cycle Fan Deepak from Odisha

ಒಡಿಶಾದ 18 ವರ್ಷದ ದೀಪಕ್ ಎಂಬ ಯುವಕನೊಬ್ಬ ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನೋಡುವ ಸಲುವಾಗಿ 1,800 ಕಿ.ಮೀ ಸೈಕಲ್ ಸವಾರಿ ಮಾಡಿ ಬೆಂಗಳೂರಿಗೆ ಬಂದಿದ್ದಾನೆ. ಈ ಅಭಿಮಾನಿಯ ಅಭಿಮಾನಕ್ಕೆ ಮನಸೋತ ಹಾರ್ದಿಕ್ ಯಾರೂ ನಿರೀಕ್ಷಿಸದ ಕೆಲವು ಅದ್ಭುತ ಉಡುಗೊರೆಗಳನ್ನು ನೀಡಿ ಆ ಯುವಕನ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಹಾರ್ದಿಕ್ ಆ ಯುವಕನ ಪ್ರಯಾಣ ವೆಚ್ಚ ಮತ್ತು ಭವಿಷ್ಯದ ಅಗತ್ಯಗಳಿಗಾಗಿ ಸುಮಾರು 1.5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಿದ್ದಾರೆ. ಇದಲ್ಲದೆ, ಅವರು ಸಹಿ ಮಾಡಿದ…

Read More

IND vs ENG: ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್‌; ವಿಶ್ವದಾಖಲೆ ಬರೆದ ಅಭಿಷೇಕ್ ಶರ್ಮಾ

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 4 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಸಿಕ್ಸರ್‌ಗಳ ಶತಕ ಪೂರೈಸಿದರು (PC-BCCI). ಈ ಪಂದ್ಯದಲ್ಲಿ 24 ಎಸೆತಗಳನ್ನು ಎದುರಿಸಿದ ಅಭಿಷೇಕ್ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 59 ರನ್ ಬಾರಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ 4…

Read More

ಎಂಜಿನ್​​ನಲ್ಲಿ ದೋಷ, 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​​ಜೆಟ್ ವಿಮಾನ ದೆಹಲಿಗೆ ವಾಪಸ್ – Kannada News | SpiceJet Emergency: Delhi Leh Flight Makes Safe Return After Engine Issue

ಸ್ಪೈಸ್​ಜೆಟ್-ಸಾಂದರ್ಭಿಕ ಚಿತ್ರ Image Credit source: Skytrax ನವದೆಹಲಿ, ಫೆಬ್ರವರಿ 24: ಎಂಜಿನ್​​ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​ಜೆಟ್(SpiceJet) ವಿಮಾನ ದೆಹಲಿಗೆ ಹಿಂದಿರುಗಿರುವ ಘಟನೆ ನಡೆದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು . SG121 ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು, ಆಗ ಸಿಬ್ಬಂದಿಗೆ ಒಂದು ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿತ್ತು. ಮುನ್ನೆಚ್ಚರಿಕೆಯಾಗಿ, ಪೈಲಟ್‌ಗಳು ವಿಮಾನವನ್ನು ತಿರುಗಿಸಿ…

Read More

ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಈ ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ – Kannada News | What are the benefits of eating fennel seeds?

ಭಾರತೀಯ ಅಡುಗೆ ಮನೆಗಳಲ್ಲಿ ಇರುವಂತಹ ಅನೇಕ ಮಸಾಲೆ ಪದಾರ್ಥಗಳು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿವೆ. ಅವುಗಳಲ್ಲಿ ಸೋಂಪು (fennel seeds) ಕೂಡ ಒಂದು. ಈ ಸೋಂಪು ಕಾಳುಗಳಲ್ಲಿ ವಿಟಮಿನ್‌, ಫೈಬರ್‌, ಕ್ಯಾಲ್ಸಿಯಂ, ಆಂಟಿ ಆಕ್ಸಿಡೆಂಟ್‌, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ ಫಂಗಲ್‌ ಗುಣಗಳಿದ್ದು, ಪ್ರತಿನಿತ್ಯ ಊಟದ ಬಳಿಕ ಸ್ವಲ್ಪ ಸೋಂಪು ತಿನ್ನುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹೌದು ಸೋಂಪು ಕಾಳು ಜಗಿಯುವುದರಿಂದ ಬಾಯಿಯ ವಾಸನೆ ನಿವಾರಣೆಯಾಗುವುದಲ್ಲದೆ, ಅನೇಕ ಆರೋಗ್ಯ…

Read More

T20 World Cup: ಆಸೀಸ್ ನಾಯಕ ಮಿಚೆಲ್ ಮಾರ್ಷ್​ಗೆ ಗಂಭೀರ ಗಾಯ; ಸ್ಟೀವ್ ಸ್ಮಿತ್​ಗೆ ಬುಲಾವ್

2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಪಂದ್ಯವನ್ನು ಇಂದು ಐರ್ಲೆಂಡ್ ವಿರುದ್ಧ ಆಡಿತು. ಆದರೆ ಈ ಪಂದ್ಯದಲ್ಲಿ ತಂಡದ ನಾಯಕ ಮಿಚೆಲ್ ಮಾರ್ಷ್ ಆಡಲಿಲ್ಲ. ಇದಕ್ಕೆ ಕಾರಣ ಗಾಯ. ವಾಸ್ತವವಾಗಿ ಆಸ್ಟ್ರೇಲಿಯಾ ತಂಡಕ್ಕೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಬೆಂಬಿಡದ ಭೂತದಂತೆ ಕಾಡುತ್ತಿದೆ. ಇದೆಲ್ಲದರ ನಡುವೆ ತಂಡದ ನಾಯಕ ಮಾರ್ಷ್​ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಆಸ್ಟ್ರೇಲಿಯಾ ತಂಡ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಇದೇ ಮೊದಲಲ್ಲ. ವಿಶ್ವಕಪ್ ಆರಂಭಕ್ಕೂ ಮುನ್ನವೇ ಪ್ಯಾಟ್ ಕಮ್ಮಿನ್ಸ್,…

Read More

ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ

ಚಾಮರಾಜನಗರ, ಮಾರ್ಚ್​​ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Congress Worker Shot Dead in Ballari, CM Siddaramaiah Reacts for the First Time, Here’s What He Said

ಬಳ್ಳಾರಿ, ಜನವರಿ 2: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಘಟನೆಯಲ್ಲಿ ಬಳಕೆಯಾದ ಬುಲೆಟ್‌ನ ಮೂಲದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದುನ ಅವರು ಹೇಳಿದ್ದಾರೆ. “ಯಾರ ಗನ್‌ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು. ಅದು ಬಿಜೆಪಿ ಅವರ ಗನ್‌ನಿಂದ ಬಂದಿದೆಯಾ? ಇಲ್ಲ ಕಾಂಗ್ರೆಸ್‌ನವರ ಗನ್‌ನಿಂದ ಬಂದಿದೆಯಾ?” ಎಂದು ಪತ್ತೆಹಚ್ಚಬೇಕಿದೆ ಎಂದು ಸಿಎಂ ಹೇಳಿದ್ದಾರೆ. ಬಳ್ಳಾರಿ ಪೊಲೀಸ್…

Read More

ಕಾವೇರಿ ವಿವಾದ: ಶೀಘ್ರದಲ್ಲೇ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ವಿಜಯ್ ಮಾತುಕತೆ ಸಾಧ್ಯತೆ – Kannada News | DK Shivakumar Invites Tamil Nadu CM Vijay for Cauvery Talks in Bengaluru, Mekedatu Project Likely on Agenda

ಶೀಘ್ರದಲ್ಲೇ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ವಿಜಯ್ ಮಾತುಕತೆ ಸಾಧ್ಯತೆImage Credit source: tv9 ಬೆಂಗಳೂರು, ಜುಲೈ 24: ಕಾವೇರಿ ನದಿ ನೀರು ಹಂಚಿಕೆ ವಿವಾದದ (Cauvery River Water Dispute) ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಬಂಧಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಕಾಣಿಸಿಕೊಂಡಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಮಾತುಕತೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು…

Read More

ಕ್ಯೂಆರ್ ಕೋಡ್ ಮೆನು ಬಳಸಿ ಫುಡ್​ ಆರ್ಡರ್​ ಮಾಡಿದ ಯುವತಿ; ಮಧ್ಯರಾತ್ರಿ ರೆಸ್ಟೋರೆಂಟ್ ಸಿಬ್ಬಂದಿಯಿಂದ ಮೆಸೇಜ್​ ಮೂಲಕ ಕಿರುಕುಳ! – Kannada News | Customer Data Security: Pune QR Code Scam and Digital Menu Privacy Concerns

ಯುವತಿಗೆ ಕಂಟಕವಾದ ಕ್ಯೂಆರ್ ಕೋಡ್Image Credit source: Pinterest ಪುಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಡಿಜಿಟಲ್ ಆರ್ಡರ್ ವ್ಯವಸ್ಥೆಯಲ್ಲಿ ಗ್ರಾಹಕರ ವೈಯಕ್ತಿಕ ಮಾಹಿತಿ (Data Privacy) ಎಷ್ಟು ಸುರಕ್ಷಿತವಾಗಿದೆ ಎಂಬ ಗಂಭೀರ ಪ್ರಶ್ನೆಯನ್ನು ಮೂಡಿಸಿದೆ. ರೆಸ್ಟೋರೆಂಟ್‌ನ ಕ್ಯೂಆರ್ ಕೋಡ್ ಆಧಾರಿತ ಮೆನು ಬಳಸಿ ಊಟ ಆರ್ಡರ್​​ ಮಾಡಿದ್ದ ಯುವತಿಯ ಫೋನ್ ನಂಬರ್ ಪಡೆದ ಸಿಬ್ಬಂದಿ, ಆಕೆಗೆ ಮಧ್ಯರಾತ್ರಿ ಅಸಭ್ಯವಾಗಿ ಮೆಸೇಜ್ ಮಾಡಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ…

Read More