ಪ್ರಯಾಣಿಕರ ಪವರ್ ಬ್ಯಾಂಕ್​ನಿಂದ ಬೆಂಕಿ; ಇಂಡಿಗೋ ವಿಮಾನದಲ್ಲಿ ತಪ್ಪಿದ ಭಾರೀ ದುರಂತ – Kannada News | IndiGo plane evacuated in Chandigarh Airport after passengers power bank catches fire

ಚಂಡೀಗಢ, ಮೇ 5: ಚಂಡೀಗಢಕ್ಕೆ ಬಂದಿಳಿದ ಇಂಡಿಗೋ (IndiGo) ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಇಂಡಿಗೋ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನದ ಸಿಬ್ಬಂದಿಗೆ ತಿಳಿಸಿದ ನಂತರ ತುರ್ತು ಸ್ಥಳಾಂತರಕ್ಕೆ ಆದೇಶಿಸಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ತುರ್ತು ಸ್ಲೈಡ್‌ಗಳನ್ನು ಸಹ ನಿಯೋಜಿಸಲಾಯಿತು.

ಸ್ಥಳಾಂತರಿಸುವ ಪ್ರಕ್ರಿಯೆಯ ಸಮಯದಲ್ಲಿ ಪ್ರಯಾಣಿಕರಲ್ಲಿ ಒಬ್ಬರು ಗಾಯಗೊಂಡರು. 198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಹೈದರಾಬಾದ್‌ನಿಂದ ಹೊರಟು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸುಮಾರು ಮಧ್ಯಾಹ್ನ 3.29ಕ್ಕೆ ಇಳಿಯಿತು. ಈ ವೇಳೆ ಹೊಗೆ ಕಾಣಿಸಿತು.

ಇದನ್ನೂ ಓದಿ: ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಪ್ರಯಾಣಿಕರ ಪವರ್ ಬ್ಯಾಂಕ್ ಬೆಂಕಿಗೆ ಆಹುತಿಯಾದ ನಂತರ ಇಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಳಾಂತರವನ್ನು ಪ್ರಾರಂಭಿಸಲಾಯಿತು. ಅಧಿಕಾರಿಗಳ ಪ್ರಕಾರ, ಹೈದರಾಬಾದ್‌ನಿಂದ ಚಂಡೀಗಢಕ್ಕೆ ಹೋಗುವ ಇಂಡಿಗೋ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ.

“ಸುರಕ್ಷತೆಯ ಹಿತದೃಷ್ಟಿಯಿಂದ ತಕ್ಷಣದ ಸ್ಥಳಾಂತರಿಸುವಿಕೆಯನ್ನು ಕೈಗೊಳ್ಳಲಾಯಿತು. ಎಲ್ಲ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿ ತಿಳಿಸಲಾಯಿತು. ಎಲ್ಲಾ ಗ್ರಾಹಕರನ್ನು ಸುರಕ್ಷಿತವಾಗಿ ಟರ್ಮಿನಲ್‌ಗೆ ಸ್ಥಳಾಂತರಿಸಲಾಗಿದೆ. ಇಂಡಿಗೋ ವಿಮಾನವು ಕಾರ್ಯಾಚರಣೆಯನ್ನು ಪುನರಾರಂಭಿಸುವ ಮೊದಲು ಅಗತ್ಯ ತಪಾಸಣೆಗಳಿಗೆ ಒಳಗಾಗುತ್ತದೆ. ಇಂಡಿಗೋದಲ್ಲಿ ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನದ ಎಕ್ಸಿಟ್ ಡೋರ್ ತೆರೆದು ಹಾರಿದ ಪ್ರಯಾಣಿಕ

ಬೆಂಕಿಯಿಂದಾಗಿ ವಿಮಾನದ ಕ್ಯಾಬಿನ್ ಹೊಗೆಯಿಂದ ತುಂಬಿತ್ತು ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಪವರ್ ಬ್ಯಾಂಕ್‌ಗಳನ್ನು ವಿಮಾನಗಳಲ್ಲಿ ಕ್ಯಾರಿ-ಆನ್ ಲಗೇಜ್‌ನಲ್ಲಿ ಮಾತ್ರ ಅನುಮತಿಸಲಾಗುತ್ತದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 2026ರಲ್ಲಿ ಹೊರಡಿಸಿದ ಹೊಸ ನಿಯಮಗಳ ಆಧಾರದ ಮೇಲೆ ಪ್ರಯಾಣಿಕರು ಫೋನ್‌ಗಳು ಮತ್ತು ಇತರ ಸಾಧನಗಳನ್ನು ಚಾರ್ಜ್ ಮಾಡಲು ವಿಮಾನಗಳಲ್ಲಿ ಪವರ್ ಬ್ಯಾಂಕ್‌ಗಳನ್ನು ಬಳಸಲು ಅನುಮತಿ ಇರುವುದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:31 pm, Tue, 5 May 26

Source link

ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: 15 ನಿಮಿಷ ನಿಂತಲ್ಲೇ ನಿಂತ ರೈಲುಗಳು – Kannada News | Namma Metro Disruption: Purple Line Service Halts, Technical Issues Affect Commuters

ಬೆಂಗಳೂರು, ಮೇ 05: ಇವತ್ತೂ ಕೂಡ ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 15 ನಿಮಿಷಗಳ ಕಾಲ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್​ನಲ್ಲಿ ಮೆಟ್ರೋ ರೈಲುಗಳು ನಿಂತಲ್ಲೇ ನಿಂತಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಬಿಎಂಆರ್​​ಸಿಎಲ್​​ ಈವರೆಗೂ ಮೆಟ್ರೋ ಸೇವೆಯಲ್ಲಿನ ವ್ಯತ್ಯಯದ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

  • ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ
  • 15 ನಿಮಿಷಗಳ ಕಾಲ ನಿಂತಲ್ಲೇ ನಿಂತ ಮೆಟ್ರೋ ರೈಲುಗಳು
  • ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಪ್ರಯಾಣಿಕರು

ಇದನ್ನೂ ಓದಿ: ತಾಂತ್ರಿಕ ದೋಷದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಬಂದ್ ಆಗಿ ಪ್ರಯಾಣಿಕರ ಪರದಾಟ

ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋ ಸೇವೆಯಲ್ಲಿನ ವ್ಯತ್ಯಯದ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಮಾಹಿತಿ ಹಂಚಿಕೊಂಡಿರುವ ಕೆಲ ಪ್ರಯಾಣಿಕರು ಈ ಬಗ್ಗೆ ಯಾವುದೇ ಮಾಹಿತಿಯನ್ನು ಸರಿಯಾಗಿ ನೀಡದ ಬಿಎಂಆರ್​​ಸಿಎಲ್​​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದ ವ್ಯತ್ಯಯ

ಸುಮಾರು 10-15 ನಿಮಿಷಗಳ ಕಾಲ ತಾಂತ್ರಿಕ ಕಾರಣದಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಆದರೆ
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರವೀಗ ಸಹಜಸ್ಥಿತಿಗೆ ಮರಳಿದೆ. ಸಮಸ್ಯೆ ಬಗೆಹರಿದಿರುವ ಕಾರಣ ಮೆಟ್ರೋ ರೈಲುಗಳ ಸಂಚಾರ ಪುನಾರಂಭ ಆಗಿದೆ.

ನಿನ್ನೆ ಕೆಲ ಕಾಲ ಬಂದ್​​ ಆಗಿದ್ದ ಕಬ್ಬನ್ ಪಾರ್ಕ್ ನಿಲ್ದಾಣ

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿರುವ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ನಿನ್ನೆ (ಮೇ 4) ಬೆಳಿಗ್ಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.ವಿದ್ಯುತ್ ವ್ಯತ್ಯಯದಿಂದಾಗಿ ಮೆಟ್ರೋ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿತ್ತು. ಆ ಬಳಿಕ ಬೆಳಿಗ್ಗೆ 11 ಗಂಟೆಯಿಂದ ಮೆಟ್ರೋ ಸೇವೆಗಳು ಪುರರಾರಂಭಗೊಂಡಿತ್ತು.

ವರದಿ: ಲಕ್ಷ್ಮೀ ನರಸಿಂಗ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:24 pm, Tue, 5 May 26

Source link

DC vs CSK Playing XI: ಧೋನಿ ಅಲಭ್ಯ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11 – Kannada News | DC vs CSK Playing XI Delhi Capitals vs Chennai Super Kings Today IPL 2026 match Confirmed playing 11 details with name in kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್​ಕೆ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕೂ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗಿದ್ದಾರೆ. ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಈ ಬಾರಿ ಸಿಎಸ್​ಕೆ ಆಡಿದ 10 ಪಂದ್ಯಗಳಲ್ಲೂ ಎಂಎಸ್​ಡಿ ಕಾಣಿಸಿಕೊಂಡಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಪಾತುಮ್ ನಿಸ್ಸಾಂಕ, ಕರುಣ್ ನಾಯರ್, ಟ್ರಿಸ್ಟನ್ ಸ್ಟಬ್ಸ್, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಟಿ ನಟರಾಜನ್.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್.

ಹೆಡ್ ಟು ಹೆಡ್​:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್​ಕೆ ತಂಡ ಬರೋಬ್ಬರಿ 20 ಪಂದ್ಯಗಳಲ್ಲಿ ಜಯಗಳಿಸಿದ್ದಾರೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿರುವುದು ಕೇವಲ 12 ಪಂದ್ಯಗಳಲ್ಲಿ ಮಾತ್ರ.

ಇದಾಗ್ಯೂ ಈ ಬಾರಿಯ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಪ್ರದರ್ಶನ ನೀಡಿದೆ. ಇದಾಗ್ಯೂ ಅಕ್ಷರ್ ಪಟೇಲ್ ಪಡೆ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಇತ್ತ ಸಿಎಸ್​ಕೆ ತಂಡ ಕೂಡ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅಂದರೆ ಇಂದಿನ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ) ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಇದನ್ನೂ ಓದಿ: RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.

Published On – 7:15 pm, Tue, 5 May 26

Source link

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ – Kannada News | Bs yediyurappa utsava in chitradurga on may 9 for BSY Completed 50 Years In Politics

ಚಿತ್ರದುರ್ಗ, (ಮೇ 05): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

TV9 Kannada News Live: ಬಂಗಾಳದಲ್ಲಿ ‘ದೀದಿ’ ಹಠ; ನಾನು ರಾಜೀನಾಮೆ ನೀಡುವುದಿಲ್ಲ: ಡಿ.ಎನ್. ಜೀವರಾಜ್ ಎಫ್‌ಐಆರ್‌ಗೆ ಹೈಕೋರ್ಟ್ ತಡೆ! – Kannada News | India and Karnataka News: Mamata Uproar, HC Ruling, Viral Gold Ring Snake May 5 Recap

ಬೆಂಗಳೂರು, ಮೇ.5: ದೇಶ ಹಾಗೂ ರಾಜ್ಯದಲ್ಲಿ ಇಂದು ಆಗಿರುವ ಪ್ರಮುಖ ಸುದ್ದಿಗಳೇನು ಎಂಬುದನ್ನು ಇಲ್ಲಿ ನೋಡುವ ಬನ್ನಿ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದೀಗ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದ ಕೂಡ ಭಾರೀ ಸುದ್ದಿಯಾಗುತ್ತಿದೆ. ಕಾಸರಗೋಡಿನ ಅಡೂರ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮನೆಯ ಡ್ರಾಯರ್‌ನಲ್ಲಿ ಸಿಕ್ಕಿದ ಕೇರೆ ಹಾವಿನ ಮೈಗೆ ಚಿನ್ನದ ಉಂಗುರ ಬಿಗಿಯಾಗಿ ಸಿಲುಕಿತ್ತು. ಇದು ಕೂಡ ಭಾರೀ ಸುದ್ದಿಯಾಗಿದೆ. ಇನ್ನು ಸಿನಿಮಾದಲ್ಲಿ ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.

ನಾವು ಸೋತಿಲ್ಲ, ರಾಜೀನಾಮೆ ನೀಡೋ ಮಾತೇ ಇಲ್ಲ; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿ, ಬಿಜೆಪಿ ಭರ್ಜರಿ ದಿಗ್ವಿಜಯ ಸಾಧಿಸಿದೆ. ಆದರೆ, ಈ ಫಲಿತಾಂಶವನ್ನು ಒಪ್ಪದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸುವ ಮೂಲಕ ಹೊಸ ರಾಜಕೀಯ ಸಮರಕ್ಕೆ ನಾಂದಿ ಹಾಡಿದ್ದಾರೆ. ಫಲಿತಾಂಶದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಈ ಚುನಾವಣೆಯಲ್ಲಿ ಬಿಜೆಪಿ ಅಕ್ರಮವಾಗಿ 100 ಸ್ಥಾನಗಳನ್ನು ಕದ್ದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. “ನಾವು ಚುನಾವಣೆಯಲ್ಲಿ ಸೋತಿಲ್ಲ, ಜನಾದೇಶವನ್ನು ಕದಿಯಲಾಗಿದೆ. ಹಾಗಾಗಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.

ಡಿ.ಎನ್. ಜೀವರಾಜ್ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವೇಳೆ ನಡೆದಿದೆ ಎನ್ನಲಾದ ಗಲಾಟೆ ಮತ್ತು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಸಮಾಧಾನ ನೀಡಿದೆ. ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ಪ್ರಕ್ರಿಯೆಗೆ ಕೋರ್ಟ್ ಈಗ ತಡೆ ನೀಡಿದೆ. ಡಿ.ಎನ್. ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡುವ ಮೂಲಕ ಕಾನೂನು ಹೋರಾಟದಲ್ಲಿ ಅವರಿಗೆ ಮೊದಲ ಜಯ ಸಿಕ್ಕಂತಾಗಿದೆ. ಕೇವಲ ರಾಜಕೀಯ ಒತ್ತಡಗಳಿಗೆ ಮಣಿದು ಎಫ್‌ಐಆರ್ ದಾಖಲಿಸಬಾರದು. ಇದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ನ್ಯಾಯಾಲಯವು ಗಂಭೀರವಾಗಿ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ

ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ!:

ದೈನಂದಿನ ಜೀವನದಲ್ಲಿ ಅನಿರೀಕ್ಷಿತ ಎಂಬಂತೆ ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಮೈನವಿರೇಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಕೇರೆ ಹಾವಿನ ದೇಹಕ್ಕೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದ್ದು, ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಮನೆಯ ಮಕ್ಕಳು ಆಟವಾಡುತ್ತಾ ಟೇಬಲ್‌ನ ಡ್ರಾಯರ್ ತೆರೆದಾಗ ಅದರೊಳಗೆ ಹಾವಿರುವುದನ್ನು ಕಂಡು ತಕ್ಷಣವೇ ದೊಡ್ಡವರಿಗೆ ವಿಷಯ ಮುಟ್ಟಿಸಿದ್ದಾರೆ. ಮಕ್ಕಳ ಈ ಸಮಯೋಚಿತ ನಿರ್ಧಾರದಿಂದ ದೊಡ್ಡ ಅಪಾಯವೊಂದು ತಪ್ಪಿದಂತಾಗಿದೆ. ಹಾವನ್ನು ಗಮನಿಸಿದಾಗ ಅದರ ದೇಹದ ಮಧ್ಯಭಾಗದಲ್ಲಿ ಚಿನ್ನದ ಉಂಗುರವೊಂದು ಸಿಲುಕಿಕೊಂಡಿರುವುದು ಕಂಡುಬಂದಿದೆ. ಬಹುಶಃ ಆಹಾರಕ್ಕಾಗಿ ಹುಡುಕಾಟ ನಡೆಸುತ್ತಾ ಸಣ್ಣ ಸೀಳಿನ ಮೂಲಕ ಡ್ರಾಯರ್ ಒಳಗೆ ಹೋಗುವಾಗ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಹೊಸ ಅಧ್ಯಾಯ ಬರೆದ ವಿಜಯ್ ಅವರಿಗೆ ಹೃತ್ಪೂರ್ವಕ ಅಭಿನಂದನೆ: ರಿಷಬ್ ಶೆಟ್ಟಿ

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ ವಿಜಯ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ. ವಿಜಯ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯಲಿ ಎಂದು ಅವರು ಹಾರೈಸಿದ್ದಾರೆ. ವಿಜಯ್ ಅವರ ಈ ಅಸಾಧಾರಣ ಸಾಧನೆಯು ಇನ್ನಷ್ಟು ಯುವ ಜನರಿಗೆ ಸ್ಫೂರ್ತಿಯಾಗಲಿ ಎಂದು ರಿಷಬ್ ಶೆಟ್ಟಿ ಅವರು ತಮ್ಮ ಪೋಸ್ಟ್‌ನಲ್ಲಿ ಆಶಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಲ್ಮಾನ್ ಖಾನ್ ಸೂಪರ್ ಹೀರೋ ಸಿನಿಮಾಗೆ ಸಮಂತಾ ಬದಲು ಕರೀನಾ ನಾಯಕಿ? – Kannada News | Salman Khan Raj DK superhero film Kareena Kapoor replaces Samantha

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan) ಮತ್ತು ಖ್ಯಾತ ನಿರ್ದೇಶಕರಾದ ರಾಜ್-ಡಿಕೆ (Raj-DK) ಅವರ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ಕುತೂಹಲ ಮನೆ ಮಾಡಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರಿಗೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೆ ಈಗ ಹೊಸದೊಂದು ಟ್ವಿಸ್ಟ್ ಸಿಕ್ಕಿದೆ. ಇಷ್ಟ ದಿನ ಸಮಂತಾ ರುತ್ ಪ್ರಭು ಹೆಸರು ಕೇಳಿಬರುತ್ತಿತ್ತು. ಆದರೆ ಈಗ ಈಗ ಕರೀನಾ ಕಪೂರ್ ಖಾನ್ (Kareena Kapoor) ಬಗ್ಗೆ ಸುದ್ದಿ ಹಬ್ಬಿದೆ.

1. ಸಲ್ಮಾನ್ ಖಾನ್ ಹೊಸ ಸಿನಿಮಾದಲ್ಲಿ ಇರಲಿದೆ ಸೂಪರ್ ಹೀರೋ ಕಥೆ.

2. ನಾಯಕಿಯ ಆಯ್ಕೆಯ ಬಗ್ಗೆ ಕೇಳಿಬರುತ್ತಿವೆ ಇಂಟರೆಸ್ಟಿಂಗ್ ವಿಷಯಗಳು.

3. ಸಮಂತಾ ರುತ್ ಪ್ರಭು ಬದಲಿಗೆ ಕರೀನಾ ಎಂಟ್ರಿ ನೀಡಿರುವ ಸಾಧ್ಯತೆ ಇದೆ.

ಆರಂಭದಲ್ಲಿ ಈ ಸಿನಿಮಾಗೆ ಸೌತ್ ಸುಂದರಿ ಸಮಂತಾ ರುತ್ ಪ್ರಭು ನಾಯಕಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ರಾಜ್ ಮತ್ತು ಡಿಕೆ ಅವರ ಜೊತೆ ಸಮಂತಾ ಈಗಾಗಲೇ ‘ಸಿಟಾಡೆಲ್’, ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ಕೆಲಸ ಮಾಡಿರುವುದರಿಂದ ಅವರೇ ಫೈನಲ್ ಎನ್ನಲಾಗಿತ್ತು. ಆದರೆ, ತಾಜಾ ವರದಿಗಳ ಪ್ರಕಾರ ಬಾಲಿವುಡ್ ನಟಿ ಕರೀನಾ ಕಪೂರ್ ಈ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಈ ಸಿನಿಮಾದ ಬಗ್ಗೆ ಸ್ವತಃ ಸಲ್ಮಾನ್ ಖಾನ್ ಅವರೇ ಕರೀನಾ ಕಪೂರ್ ಅವರಿಗೆ ಕರೆ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಕರೀನಾ ಕೂಡ ಈ ಪ್ರಾಜೆಕ್ಟ್ ಬಗ್ಗೆ ಆಸಕ್ತಿ ತೋರಿಸಿದ್ದು, ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಇದು ಅಧಿಕೃತವಾದರೆ, ಸಲ್ಮಾನ್ ಮತ್ತು ಕರೀನಾ ಜೋಡಿ ಐದನೇ ಬಾರಿಗೆ ಪರದೆಯ ಮೇಲೆ ಒಂದಾದಂತಾಗುತ್ತದೆ. ಈ ಹಿಂದೆ ಅವರು ‘ಬಜರಂಗಿ ಭಾಯಿಜಾನ್’, ‘ಬಾಡಿಗಾರ್ಡ್’, ‘ಕ್ಯೂಂಕಿ’ ಮತ್ತು ‘ಮೈ ಔರ್ ಮಿಸಸ್ ಖನ್ನಾ’ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು.

ವಿಶೇಷವೆಂದರೆ ರಾಜ್-ಡಿಕೆ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಯಸ್ಸಾದ ಒಬ್ಬ ಸೂಪರ್ ಹೀರೋ, ಅನಿವಾರ್ಯ ಕಾರಣಗಳಿಂದಾಗಿ ಮತ್ತೆ ಅಖಾಡಕ್ಕೆ ಇಳಿಯುವ ವಿಭಿನ್ನ ಕಥಾಹಂದರವನ್ನು ಈ ಚಿತ್ರ ಹೊಂದಿರಲಿದೆ ಎನ್ನಲಾಗಿದೆ. ಆದ್ದರಿಂದ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಆಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಸಿನಿಮಾಗೆ ಸಂಕಷ್ಟ: ಕಥೆ ಬದಲಾದರೂ ತಪ್ಪದ ‘ಮಾತೃಭೂಮಿ’ ವಿವಾದ

ಈ ಬಿಗ್ ಬಜೆಟ್ ಸಿನಿಮಾವನ್ನು ಅತುಲ್ ಅಗ್ನಿಹೋತ್ರಿ ಮತ್ತು ಮೈತ್ರಿ ಮೂವೀ ಮೇಕರ್ಸ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರನ್ನು ರಾಜ್-ಡಿಕೆ ಯಾವ ರೀತಿ ತೆರೆಯ ಮೇಲೆ ತೋರಿಸಲಿದ್ದಾರೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಸಮಂತಾ ಸದ್ಯಕ್ಕೆ ಬಾಲಿವುಡ್‌ನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸಲ್ಮಾನ್ ಚಿತ್ರದ ಆಫರ್ ಅವರಿಗೆ ನಿಜವಾಗಿಯೂ ಹೋಗಿತ್ತೇ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಸದ್ಯ ಅವರು ‘ಮಾ ಇಂಟಿ ಬಂಗಾರಂ’ ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? – Kannada News | Mamata banerjee refuses to resign as chief minister what happens next in west bengal

ಕೊಲ್ಕತ್ತಾ, ಮೇ 5: ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಬಿಜೆಪಿಯ ಗೆಲುವು ಅನೈತಿಕ ಎಂದು ಆರೋಪಿಸಿದ್ದಾರೆ. ಬಿಜೆಪಿ 100 ಸ್ಥಾನಗಳನ್ನು ಕದ್ದಿದೆ. ನೈತಿಕವಾಗಿ ನಾವೇ ಗೆದ್ದಿದ್ದೇವೆ. ಹೀಗಾಗಿ, ರಾಜಭವನಕ್ಕೆ ಹೋಗೋ ಮಾತೇ ಇಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿಗೆ ಹೊಸ ಶಾಕ್ ನೀಡಿದ್ದಾರೆ. ಹಾಗಾದರೆ, ಮಮತಾ ಬ್ಯಾನರ್ಜಿ ಅವರ ಈ ನಿರ್ಧಾರದಿಂದಾಗಿ ಪಶ್ಚಿಮ ಬಂಗಾಳದ (West Bengal) ರಾಜಕೀಯದಲ್ಲಿ ಏನಾಗಬಹುದು?

ಮಮತಾ ಬ್ಯಾನರ್ಜಿ ಅವರಿಗೆ ಈ ಬಾರಿಯ ಚುನಾವಣೆ ನೀಡಿರುವ ಏಟು ಅಂತಿಂಥದ್ದಲ್ಲ. 15 ವರ್ಷ ಅಧಿಕಾರದಲ್ಲಿದ್ದ ಪಕ್ಷವಾದ ಟಿಎಂಸಿ ಹೀನಾಯವಾಗಿ ಸೋತಿದೆ. ತಮ್ಮ ಭದ್ರಕೋಟೆಯಾಗಿದ್ದ ಭವಾನಿಪುರದಲ್ಲಿ ತಮ್ಮ ಸ್ಥಾನವನ್ನು ಕೂಡ ಉಳಿಸಿಕೊಳ್ಳಲು ದೀದಿಗೆ ಸಾಧ್ಯವಾಗಲಿಲ್ಲ. ತಮ್ಮ ಪಕ್ಷದ ಗೆಲುವು ಹಾಗಿರಲಿ ತಮ್ಮ ಕ್ಷೇತ್ರದಲ್ಲೇ ಸಿಎಂ ಮಮತಾ ಬ್ಯಾನರ್ಜಿ ಗೆಲ್ಲಲಾಗದೆ ಮುಖಭಂಗ ಅನುಭವಿಸಿದರು. ಮಮತಾ ಬ್ಯಾನರ್ಜಿ ಈಗ ಶಾಸಕಿಯೂ ಅಲ್ಲ, ಮುಖ್ಯಮಂತ್ರಿಯೂ ಅಲ್ಲ. ಸರ್ಕಾರದ ಪತನವಾದ ಕೂಡಲೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ಮಮತಾ ಬ್ಯಾನರ್ಜಿ ಮಾತ್ರ ಅದಕ್ಕೆ ಒಪ್ಪುತ್ತಿಲ್ಲ.

ಇದನ್ನೂ ಓದಿ: ನಾವು ಸೋತಿಲ್ಲ, ರಾಜೀನಾಮೆ ನೀಡೋ ಮಾತೇ ಇಲ್ಲ; ಹೊಸ ಬಾಂಬ್ ಸಿಡಿಸಿದ ಸಿಎಂ ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೂ ರಾಜ್ಯಪಾಲರು ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಯಾರಿಗೆ ಆಹ್ವಾನ ನೀಡಬೇಕೆಂಬುದರ ನಿರ್ಧಾರ ತೆಗೆದುಕೊಳ್ಳಬಹುದು. “ಸಂವಿಧಾನದ 164ನೇ ವಿಧಿಯು ರಾಜ್ಯಪಾಲರು ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಬೇಕು ಎಂದು ಹೇಳುತ್ತದೆ. ಈ ಸಂದರ್ಭದಲ್ಲಿ, ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ನಿರ್ಗಮಿತ ಸಚಿವ ಸಂಪುಟದ ಅವಧಿ ಕೊನೆಗೊಳ್ಳುತ್ತದೆ. ಸಂಪ್ರದಾಯದ ಪ್ರಕಾರ ಅವರು ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ ನಂತರ ನಿರ್ಗಮಿತ ಮುಖ್ಯಮಂತ್ರಿಯನ್ನು ಈ ಎರಡು ಅಥವಾ ಮೂರು ದಿನಗಳವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ನೇಮಿಸಲಾಗುತ್ತದೆ. ಆದರೆ, ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿದ್ದರೂ ಯಾವುದೇ ಸಮಸ್ಯೆ ಇಲ್ಲ. ರಾಜ್ಯಪಾಲರು ಮುಂದಿನ ನಿರ್ಧಾರ ತೆಗೆದುಕೊಳ್ಳಲು ಅವಕಾಶ ಇರುತ್ತದೆ” ಎಂದು ಮಾಜಿ ನ್ಯಾಯಮೂರ್ತಿ ದೇಬಾಶಿಶ್ ಕರ್ಗುಪ್ತ ಹೇಳಿದ್ದಾರೆ.

17ನೇ ಪಶ್ಚಿಮ ಬಂಗಾಳ ವಿಧಾನಸಭೆಯ ಅವಧಿ ಮೇ 7ರಂದು ಕೊನೆಗೊಳ್ಳುತ್ತದೆ. ಇದು 2021ರಲ್ಲಿ ಪ್ರಾರಂಭವಾದ ಮಮತಾ ಬ್ಯಾನರ್ಜಿ ಅವರ 5 ವರ್ಷಗಳ ಅಧಿಕಾರಾವಧಿಯ ಅಂತ್ಯವನ್ನು ಸೂಚಿಸುತ್ತದೆ. ಕಾನೂನಿನ ಪ್ರಕಾರ ಯಾವುದೇ ಸರ್ಕಾರ 5 ವರ್ಷಗಳಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿ ಇರಲು ಅಸಾಧ್ಯ. ಹೀಗಾಗಿ, ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿದ್ದರೂ ರಾಜ್ಯಪಾಲರಿಗೆ ಆ ಸರ್ಕಾರವನ್ನು ವಜಾಗೊಳಿಸಿ, ನೂತನ ಸರ್ಕಾರ ರಚನೆಗೆ ಅನುಮತಿ ನೀಡುವ ಅಧಿಕಾರವಿದೆ. ಹೀಗಾಗಿ, ದೀದಿಯ ಈ ನಿರ್ಧಾರದಿಂದ ಬಿಜೆಪಿ ಸರ್ಕಾರ ರಚನೆಗೆ ಯಾವುದೇ ಕಾನೂನು ತೊಡಕುಗಳು ಆಗುವ ಸಾಧ್ಯತೆ ಕಡಿಮೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ನಿವಾಸದ ಹೊರಗೆ ಬಿಜೆಪಿ ಬೆಂಬಲಿಗರಿಂದ ಜೈ ಶ್ರೀ ರಾಮ್ ಘೋಷಣೆ

ಏಕೆಂದರೆ, ಮುಖ್ಯಮಂತ್ರಿಯಾಗಿ ಅಧಿಕಾರವನ್ನು ಮುಂದುವರಿಸಲು, ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಬೇಕಾಗುತ್ತದೆ. ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದ್ದರೆ ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದಿದೆ. ಹೀಗಾಗಿ, ಟಿಎಂಸಿ ಮತ್ತೆ ಅಧಿಕಾರಕ್ಕೆ ಬರುವುದು ಅಸಾಧ್ಯವಾದ ಸಂಗತಿ.

ಈ ನಡುವೆ, ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲಿರುವ ಬಿಜೆಪಿ ಮುಂದಿನ ಮುಖ್ಯಮಂತ್ರಿ ಮತ್ತು ರಾಜ್ಯ ಕ್ಯಾಬಿನೆಟ್ ಸಚಿವರಿಗೆ ಪಶ್ಚಿಮ ಬಂಗಾಳದಲ್ಲಿ ಮೇ 9ರ ಶನಿವಾರ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಂದೇ ಪ್ರಮಾಣ ವಚನ ಸಮಾರಂಭವನ್ನು ಏರ್ಪಡಿಸಲು ನಿರ್ಧರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾದರೆ ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಉಂಟಾದರೆ ಶಿಶುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆಯೇ, ಯಾವ ರೀತಿ ಮೆನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಗುವಿನ ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಉಂಟಾದರೆ ಗರ್ಭದಲ್ಲಿರುವ ಶಿಶುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ದೇಹದ ಹೆಚ್ಚಿನ ತಾಪಮಾನವು ಕೋಶಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಮಕ್ಕಳಲ್ಲಿ ನ್ಯೂರೋಲಾಜಿಕಲ್ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಆದರೆ ಇದು ಎಲ್ಲ ಪ್ರಕರಣಗಳಲ್ಲೂ ಕಂಡುಬರುವುದಿಲ್ಲ. ದೀರ್ಘಕಾಲ ಬಿಸಿಲಿನಲ್ಲಿ ಕೆಲಸ ಮಾಡುವ ಅಥವಾ ಹೊರಗಡೆ ಹೆಚ್ಚು ಸಮಯ ಕಳೆಯುವ ಗರ್ಭಿಣಿಯರಲ್ಲಿ ಈ ಅಪಾಯ ಹೆಚ್ಚಾಗಿರುತ್ತದೆ. ಜೊತೆಗೆ ಈಗಾಗಲೇ ಆರೋಗ್ಯ ಸಮಸ್ಯೆ ಇರುವ ಮಹಿಳೆಯರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಡಿಹೈಡ್ರೇಶನ್‌ನಿಂದ ಆರಂಭವಾಗಿ ನಂತರ ಹೀಟ್ ಸ್ಟ್ರೋಕ್ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಳಿಗ್ಗೆ ಮಾತ್ರವಲ್ಲ ರಾತ್ರಿ ಸಮಯದಲ್ಲೂ ಹೀಟ್ ಸ್ಟ್ರೋಕ್ ಅಪಾಯ ತಪ್ಪಿದ್ದಲ್ಲ: ತಜ್ಞರಿಂದ ಎಚ್ಚರಿಕೆ

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ಗರ್ಭಿಣಿಯರು ದಿನಕ್ಕೆ ಕನಿಷ್ಠ 7– 8 ಗ್ಲಾಸ್ ನೀರು ಕುಡಿಯಬೇಕು. ಜೊತೆಗೆ ಎಳನೀರು, ಮಜ್ಜಿಗೆ ಮತ್ತು ಅಗತ್ಯವಿದ್ದರೆ ವೈದ್ಯರ ಸಲಹೆಯಂತೆ ಓಆರ್‌ಎಸ್ ಸೇವಿಸಬಹುದು. ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ, ಹಗುರವಾದ ಬಟ್ಟೆಗಳನ್ನು ಧರಿಸುವುದು ಉತ್ತಮ. ದೇಹವನ್ನು ತಣ್ಣಗಿರಿಸಲು ಸಾಕಷ್ಟು ವಿಶ್ರಾಂತಿ ಪಡೆಯುವುದು ಅಗತ್ಯ. ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯವನ್ನು ನಿರ್ಲಕ್ಷ್ಯ ಮಾಡಬಾರದು. ಸರಿಯಾದ ಜಾಗೃತಿ, ಹೈಡ್ರೇಶನ್ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು – Kannada News | Tibetan buddhist monk Murder Case: Accused Arrested By Dharwad Police

ಧಾರವಾಡ, (ಮೇ 05): ಧಾರವಾಡ ಬೈಪಾಸ್ ಬಳಿ ಏಪ್ರಿಲ್ 28ರಂದು ಟಿಬೆಟಿಯನ್ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ನಿಗೂಢ ಸಾವು ಪ್ರಕರಣವನ್ನು (Tibetan buddhist monk Murder Case) ಪೊಲೀಸರು ಭೇದಿಸಿದ್ದಾರೆ. ಸಣ್ಣ ಮಾಹಿತಿಯೂ ಇಲ್ಲದಿದ್ದರೂ ಪ್ರರಕಣದ ಬೆನ್ನು ಬಿದ್ದ ಧಾರವಾಡ (Dharwad)  ಗ್ರಾಮೀಣ ಪೊಲೀಸರು ಹಂತಕರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಹಣಕ್ಕಾಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರಂಭದಲ್ಲಿ ಅಪಘಾತದಿಂದ ಈ ಸಾವಾಗಿರಬಹುದು ಅಂದುಕೊಂಡ ಪೊಲೀಸರಿಗೆ ಮುಖದ ಮೇಲಿನ ಗಾಯದಿಂದ ಅನುಮಾನ ಮೇಲೆ ತನಿಖೆ ನಡೆಸಿದಾಗ ಕೊಲೆ ಎನ್ನುವುದು ಗೊತ್ತಾಗಿದ್ದು, ಇದೀಗ ಮೂವರನ್ನು ಬಂಧಿಸಿದ್ದಾರೆ. ಯಾದವ್(24), ವೈಭವ್ ಚವ್ಹಾಣ(30) ಮತ್ತು ಸಿದ್ಧೇಶ ಭೋಸ್ಲೆ(18) ಬಂಧಿತರು.

ಮುಂಡಗೋಡದಿಂದ ಧಾರವಾಡದ ಮೂಲಕ ಕೊಲ್ಹಾಪುರದ ಕಡೆಗೆ ಕಾರೊಂದು ಹೋಗಿರೋದು ಗೊತ್ತಾಗಿದ್ದು, ಒಂದೆರಡು ಕಡೆ ಸಿಸಿಟಿವಿ ಪರಿಶೀಲಿಸಿದಾಗ ಕಾರಿನ ನಂಬರ್ ಸ್ಪಷ್ಟವಾಗಿ ಕಂಡಿಲ್ಲ. ಆದರೆ ಮುಂಡಗೋಡದ ಬಳಿ ಬಂಕ್ ನಲ್ಲಿ ಸಿಎನ್​​ ಜಿ ತುಂಬಿಸಿಕೊಳ್ಳಲು ಕಾರಿನಿಂದ ಇಳಿದಾಗ ಹಂತಕರು ಸಿಸಿಟಿವಿಯಲ್ಲಿ ಸೆರೆಯಾಗಿದ್ದಾರೆ. ಇದರ ಜಾಡು ಹಿಡಿದು ಹೊರಟ ಪೊಲೀಸರು, ಹಂತಕರನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬಂಧಿಸಿದ್ದಾರೆ. ಕೊಲ್ಹಾಪುರ ಸಂಕೇತ ಯಾದವ್(24), ವೈಭವ್ ಚವ್ಹಾಣ(30) ಮತ್ತು ಸಿದ್ಧೇಶ ಭೋಸ್ಲೆ(18) ಅನ್ನೋ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಸಾವು: ಮೃತದೇಹ ಪತ್ತೆ

ಹಣಕ್ಕಾಗಿ ಅಪಹರಿಸಿ ಕೊಲೆ

ಅಷ್ಟಕ್ಕೂ ಈ ಕೊಲೆಗೆ ಕಾರಣ ಹಣ. ಬೌದ್ಧ ಸನ್ಯಾಸಿಗಳ ಬಳಿ ಸಾಕಷ್ಟು ಹಣವಿರುತ್ತೆ ಅಂದುಕೊಂಡಿದ್ದ ಹಂತಕರು ತಾಶಿ ಧೊಂದೂಪರನ್ನು ಅವರು ವಾಕಿಂಗ್ ಮಾಡೋ ಸಂದರ್ಭದಲ್ಲಿ ಮುಂಡಗೋಡದಲ್ಲಿಯೇ ಕಿಡ್ನಾಪ್ ಮಾಡಿದ್ದರು. ಬಳಿಕ ಅವರಿಗೆ ಸಾಕಷ್ಟು ಹಿಂಸೆ ಕೊಟ್ಟು ಹಣ ಕೊಡುವಂತೆ ಪೀಡಿಸಿದ್ದರು. ಆದ್ರೆ, ಹಣವಿಲ್ಲದಿದ್ದಾಗ ಕಾರಿನಲ್ಲಿಯೇ ಸನ್ಯಾಸಿ ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಸನ್ಯಾಸಿ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಶವವನ್ನು ಕಾರಿನಲ್ಲಿ ಇಟ್ಟುಕೊಂಡು ಕೊಲ್ಹಾಪುರದತ್ತ ತೆರಳಿದ್ದಾರೆ. ಆದ್ರೆ, ಅದೇನು ತಿಳಿತೋ ಏನೋ ಮಾರ್ಗ ಮಧ್ಯೆ ಧಾರವಾಡ ಬಳಿ ಶವವನ್ನು ಎಸೆದು ಪರಾರಿಯಾಗಿದ್ದರು.

ಮುಂಡಗೋಡದಿಂದ ಕೊಲ್ಹಾಪುರದವರೆಗೆ ವಾರದವರೆಗೆ ಓಡಾಡಿದ ಪೊಲೀಸರು ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಕೊನೆಗೂ ಹಂತಕರನ್ನು ಲಾಕ್ ಮಾಡಿದ್ದಾರೆ. ತ್ವರಿತಗತಿಯಲ್ಲಿ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಇದೀಗ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:10 pm, Tue, 5 May 26

Source link

DC vs CSK IPL 2026 Live Score: ಕ್ಯಾಪಿಟಲ್ಸ್​​ಗೆ ಸೂಪರ್ ಕಿಂಗ್ಸ್​ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್​ ರೇಸ್​ನಲ್ಲಿದ್ದು, ಇಂದಿನ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ.

ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದಿದೆ. ಇನ್ನು 12 ಮ್ಯಾಚ್​​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿದೆ. ಅಂದರೆ ಅಂಕಿ ಅಂಶಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್​ ಮೇಲುಗೈ ಹೊಂದಿದೆ. ಆದರೆ ಪ್ರಸ್ತುತ ಫಾರ್ಮ್​ ಗಮನಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ) ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್.

 

Source link

Exit mobile version