ವಿವಾದ ಎಬ್ಬಿಸಿದ ಜೂ ಎನ್ಟಿಆರ್ ಹೊಸ ಸಿನಿಮಾ ಪೋಸ್ಟರ್ – Kannada News | Jr NTR and Trivikram Shrinivas’s movie poster dace criticism
ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿರುವ ಜೂ ಎನ್ಟಿಆರ್ (Jr NTR), ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾವನ್ನು ಅವರ ಆಪ್ತ ಗೆಳೆಯರಲ್ಲಿ ಒಬ್ಬರಾಗಿರುವ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಪೋಸ್ಟರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಯುದ್ಧಗಳ ದೇವತೆ ಎಂದು ಕರೆಯಲಾಗುವ ಮುರುಗನ್ ಅಥವಾ ಸುಬ್ರಹ್ಮಣ್ಯ ಸ್ವಾಮಿಯನ್ನು ಆಧರಿಸಿದ ಕತೆಯನ್ನು ಸಿನಿಮಾಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸಿನಿಮಾದ ಪೋಸ್ಟರ್ ಅನ್ನು ಸಹ ಇದೇ ವಿಷಯದ ಆಧಾರದ ಮೇಲೆ ಮಾಡಲಾಗಿದೆ. ಆದರೆ ಪೋಸ್ಟರ್ ಇದೀಗ…