ತಮಿಳುನಾಡಿನಲ್ಲಿ ಅಧಿಕಾರ ಹಸ್ತಾಂತರದ ಪರ್ವ: ಸಚಿವರ ಕೊಠಡಿಗಳು ಖಾಲಿ ಖಾಲಿ, ಬಿರುಸಿನ ಚಟುವಟಿಕೆ – Kannada News | Tamil Nadu Power Transition: Stalin Resigns, Secretariat Buzzes for New Govt

ಚೆನ್ನೈ, ಮೇ 05: ತಮಿಳುನಾಡು(Tamil Nadu) ರಾಜಕೀಯದಲ್ಲಿ ಒಂದು ಯುಗಾಂತ್ಯವಾಗಿದ್ದು, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್  ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಚೆನ್ನೈನ ಐತಿಹಾಸಿಕ ಫೋರ್ಟ್ ಸೇಂಟ್ ಜಾರ್ಜ್ ಸಚಿವಾಲಯದಲ್ಲಿ ಹೊಸ ಬದಲಾವಣೆಯ ಗಾಳಿ ಬೀಸುತ್ತಿದೆ.

ಸ್ಟಾಲಿನ್ ಅವರ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ, ಸಚಿವಾಲಯದ ಸಿಬ್ಬಂದಿಗಳು ಸಚಿವರ ಕೊಠಡಿಗಳನ್ನು ಖಾಲಿ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಸಚಿವರ ಕಚೇರಿಗಳನ್ನು ಅಲಂಕರಿಸಿದ್ದ ಸ್ಟಾಲಿನ್ ಹಾಗೂ ಇತರ ನಾಯಕರ ಭಾವಚಿತ್ರಗಳನ್ನು ಅಧಿಕಾರಿಗಳು ಗೌರವಪೂರ್ವಕವಾಗಿ ತೆಗೆಯುತ್ತಿದ್ದಾರೆ. ಸಚಿವರ ವೈಯಕ್ತಿಕ ಫೈಲ್‌ಗಳು, ಸ್ಮರಣಿಕೆಗಳು ಮತ್ತು ಇತರ ಸಾಮಗ್ರಿಗಳನ್ನು ಪ್ಯಾಕ್ ಮಾಡಿ ಅವರ ನಿವಾಸಗಳಿಗೆ ಕಳುಹಿಸುವ ಕೆಲಸ ಬಿರುಸಿನಿಂದ ಸಾಗುತ್ತಿದೆ.

ಸಚಿವಾಲಯದ ಕಾರಿಡಾರ್‌ಗಳಲ್ಲಿ ಈಗ ಕೇವಲ ಪೀಠೋಪಕರಣಗಳ ಸ್ಥಳಾಂತರದ ಸದ್ದು ಕೇಳಿಬರುತ್ತಿದೆ. ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಸರ್ಕಾರ ಮತ್ತು ಹೊಸ ಸಚಿವ ಸಂಪುಟದ ಸ್ವಾಗತಕ್ಕಾಗಿ ಇಡೀ ಸಚಿವಾಲಯವನ್ನು ಸಜ್ಜುಗೊಳಿಸಲಾಗುತ್ತಿದೆ. ನೂತನ ಮುಖ್ಯಮಂತ್ರಿಗಳ ನೇಮಕವಾದ ಕೂಡಲೇ ಅವರ ಆದ್ಯತೆಗೆ ಅನುಗುಣವಾಗಿ ಕಚೇರಿಗಳನ್ನು ಪುನರ್ ವ್ಯವಸ್ಥೆಗೊಳಿಸಲಾಗುತ್ತದೆ.

ಮತ್ತಷ್ಟು ಓದಿ: ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್

ಸ್ಟಾಲಿನ್ ಅವರ ರಾಜೀನಾಮೆಯು ತಮಿಳುನಾಡಿನಲ್ಲಿ ಅಧಿಕಾರ ಹಸ್ತಾಂತರದ ಅಧಿಕೃತ ಪ್ರಕ್ರಿಯೆಯನ್ನು ಸೂಚಿಸುತ್ತದೆ. ಸಚಿವಾಲಯದಿಂದ ಹೊರಬರುತ್ತಿರುವ ಟ್ರಕ್‌ಗಳು ಮತ್ತು ತೆರವಾಗುತ್ತಿರುವ ಕಚೇರಿಗಳು ರಾಜ್ಯದಲ್ಲಿ ಬದಲಾದ ರಾಜಕೀಯ ಸಮೀಕರಣಕ್ಕೆ ಸಾಕ್ಷಿಯಾಗಿವೆ.

ಸದ್ಯಕ್ಕೆ ಹಂಗಾಮಿ ವ್ಯವಸ್ಥೆಯಡಿ ಆಡಳಿತ ನಡೆಯುತ್ತಿದ್ದು, ಮುಂದಿನ ಕೆಲವೇ ಗಂಟೆಗಳಲ್ಲಿ ತಮಿಳುನಾಡಿನ ನೂತನ ಸಾರಥಿ ಯಾರೆಂಬುದು ಅಧಿಕೃತವಾಗಲಿದೆ. ಸಚಿವಾಲಯದ ಈ ದೃಶ್ಯಗಳು ಪ್ರಜಾಪ್ರಭುತ್ವದ ಸುಗಮ ಅಧಿಕಾರ ಹಸ್ತಾಂತರದ ಸಂಪ್ರದಾಯವನ್ನು ಬಿಂಬಿಸುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೊಸ ಹಾದಿ; ಮಂಜು ಮುಸುಕಿದರೂ ಇನ್ನು ವಿಮಾನ ಹಾರಾಟ ಫುಲ್ ಸೇಫ್! – Kannada News | KIA Airport Gets Smarter: New AI Safety System Enhances Airside Operations

ವಿಮಾನ ನಿಲ್ದಾಣ ಸುರಕ್ಷತೆ, AI ತಂತ್ರಜ್ಞಾನ

ಬೆಂಗಳೂರು, ಮೇ.6: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು ‘ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ.

ಅಪಾಯಕಾರಿ ಜಾಗದಲ್ಲಿ ಹೊಸ ಸುರಕ್ಷತಾ ವ್ಯವಸ್ಥೆ

ವಿಮಾನ ನಿಲ್ದಾಣದೊಳಗೆ ‘ಕ್ರಾಸ್ ಸರ್ವಿಸ್ ರಸ್ತೆ’ಗಳಿರುತ್ತವೆ. ಇಲ್ಲಿ ವಿಮಾನಗಳು ಮತ್ತು ಸಿಬ್ಬಂದಿಯ ವಾಹನಗಳು ಒಟ್ಟೊಟ್ಟಿಗೆ ಓಡಾಡುತ್ತಿರುತ್ತವೆ. ಹೀಗಾಗಿ ಇಲ್ಲಿ ಅಪಘಾತ ಆಗುವ ಸಾಧ್ಯತೆ ಇರುತ್ತದೆ. ಹಿಂದೆ, ಇಲ್ಲಿ ವಾಹನಗಳನ್ನು ನಿಯಂತ್ರಿಸುವ ಲೈಟ್‌ಗಳನ್ನು ಸಿಬ್ಬಂದಿಗಳೇ ಖುದ್ದಾಗಿ ಆನ್/ಆಫ್ ಮಾಡುತ್ತಿದ್ದರು. ಇದರಲ್ಲಿ ಕೆಲವೊಮ್ಮೆ ತಪ್ಪುಗಳಾಗಿ, ವಿಮಾನಗಳ ಹಾರಾಟ ತಡವಾಗುವ ಘಟನೆಗಳೂ ನಡೆಯುತ್ತಿದ್ದವು. ಇದನ್ನು ತಪ್ಪಿಸಲು ಈಗ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಎಐ ಕ್ಯಾಮೆರಾಗಳಿಂದ ನಿಗಾ

ಹೊಸ ವ್ಯವಸ್ಥೆಯು ಸ್ಮಾರ್ಟ್ ಕ್ಯಾಮೆರಾಗಳು ಮತ್ತು ಎಐ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಗುರುತಿಸಿ, ಏನಾದರೂ ಅಪಾಯ ಎದುರಾದರೆ ತಕ್ಷಣವೇ ಎಚ್ಚರಿಕೆ ನೀಡುತ್ತದೆ. ಯಾರಾದರೂ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕ್ಷಣಾರ್ಧದಲ್ಲಿ ಅಧಿಕಾರಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಅಲ್ಲದೆ, ಪ್ರತಿಯೊಂದು ಸಣ್ಣ ಅಂಶವೂ ಕಂಪ್ಯೂಟರ್‌ನಲ್ಲಿ ಡಿಜಿಟಲ್ ರೂಪದಲ್ಲಿ ದಾಖಲಾಗುತ್ತದೆ. ಇದರಿಂದ ವಿಮಾನ ನಿಲ್ದಾಣದೊಳಗಿನ ಟ್ರಾಫಿಕ್‌ ನಿರ್ವಹಣೆಯಲ್ಲಿ ಪಾರದರ್ಶಕತೆ ಹೆಚ್ಚಾಗಲಿದೆ. ಜೊತೆಗೆ ಕಾರ್ಯಕ್ಷಮತೆ ಹೆಚ್ಚಾಗಲಿದ್ದು, ನಿಖರ ಕಾರ್ಯಾಚರಣೆಯೂ ಸಾಧ್ಯವಾಗಲಿದೆ.

ಕತ್ತಲು, ಮಂಜಿನಲ್ಲೂ ವಿಮಾನ ನಿಲ್ದಾಣ ಫುಲ್‌ ಸೇಫ್‌!

ಈ ಹೊಸ ತಂತ್ರಜ್ಞಾನವು ವಿಮಾನ ಹಾಗೂ ವಾಹನಗಳ ನಡುವೆ ಒಂದು ಸುರಕ್ಷಿತ ಅಂತರವನ್ನು ನಿರ್ವಹಿಸುತ್ತದೆ. ಇದರಿಂದ ರಾತ್ರಿ ವೇಳೆ ಅಥವಾ ಮಂಜು ಮುಸುಕಿ ಕಡಿಮೆ ಗೋಚರತೆ ಇದ್ದಾಗ ಮನುಷ್ಯರಿಂದ ನಡೆಯುವ ತಪ್ಪುಗಳು ತಪ್ಪಲಿವೆ. ಟ್ರಾಫಿಕ್ ಜಾಮ್ ಇಲ್ಲದೆ ವಿಮಾನಗಳು ಸರಿಯಾದ ಸಮಯಕ್ಕೆ ಹಾರಾಟ ನಡೆಸಲು ಇದು ಸಹಾಯ ಮಾಡಲಿದೆ. ಮುಂದಿನ ದಿನಗಳಲ್ಲಿ ಈ ಮಾಹಿತಿಯನ್ನು ಬಳಸಿಕೊಂಡು ವಿಮಾನ ನಿಲ್ದಾಣದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲೂ ಯೋಜನೆ ರೂಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬಿಐಎಎಲ್‌ನಿಂದ ದಾಖಲೆ ಸಂಖ್ಯೆಯ ಪ್ರಯಾಣಿಕರಿಗೆ ಸೇವೆ

2024–25ನೇ ವರ್ಷದಲ್ಲಿ ಬಿಐಎಎಲ್‌ 4.18 ಕೋಟಿಗೂ ಹೆಚ್ಚು ಜನರಿಗೆ ಸೇವೆ ನೀಡಿದ್ದು, ದಕ್ಷಿಣ ಭಾರತದಲ್ಲಿ ಈ ಸಾಧನೆ ಮಾಡಿದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಐಎ ಮೂಲಕ ಈವರೆಗೆ 35 ಕೋಟಿಗೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ.

ಗ್ರಾಹಕರಿಗೆ ನೀಡುವ ಅತ್ಯುತ್ತಮ ಸೇವೆಗಾಗಿ ಜಾಗತಿಕ ಮಟ್ಟದ ಪ್ರತಿಷ್ಠಿತ ‘ಎಸಿಐ 5-ಸ್ಟಾರ್ ಏರ್‌ಪೋರ್ಟ್ ರೇಟಿಂಗ್’ ಅನ್ನು ಪಡೆದುಕೊಂಡಿರುವ ನಿಲ್ದಾಣವು, ಹಣ್ಣು, ತರಕಾರಿಯಂತಹ ಬೇಗ ಕೊಳೆಯುವ ವಸ್ತುಗಳ ಸಾಗಣೆಯಲ್ಲಿ ಸತತ 4ನೇ ವರ್ಷವೂ ಭಾರತದ ನಂ. 1 ವಿಮಾನ ನಿಲ್ದಾಣವಾಗಿ ಗುರುತಿಸಿಕೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:03 pm, Tue, 5 May 26

Source link

30 ಎಸೆತಗಳಲ್ಲಿ 95 ರನ್: ರಿಷಭ್ ಪಂತ್‌ ರುದ್ರತಾಂಡವ ಬಿಚ್ಚಿಟ್ಟ ಕೋಚ್! – Kannada News | 95 Off 30 Balls: LSG Coach Defends Pant’s Form

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ LSG ತಂಡದ ಭವಿಷ್ಯ ಮತ್ತು ನಾಯಕ ರಿಷಭ್ ಪಂತ್ ಅವರ ಫಾರ್ಮ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಯ ನಡುವೆ ತಂಡದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಸುದ್ದಿಗೋಷ್ಠಿಯಲ್ಲಿ ನೀಡಿದ ಒಂದು ಹೇಳಿಕೆ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಅಭ್ಯಾಸದ ವೇಳೆ ಪಂತ್ ಆರ್ಭಟ!

ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ ಕೇವಲ 15 ರನ್ ಗಳಿಸಿ ಔಟಾಗಿದ್ದರು. ಈ ಕಳಪೆ ಪ್ರದರ್ಶನದ ಹೊರತಾಗಿಯೂ ಎಲ್​ಎಸ್​ಜಿ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಪಂತ್ ಅವರ ಬೆನ್ನಿಗೆ ನಿಂತಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ 7ನೇ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಜಸ್ಟಿನ್ ಲ್ಯಾಂಗರ್​ಗೆ ಪಂತ್ ಅವರ ಫಾರ್ಮ್ ಹಾಗೂ ಬ್ಯಾಟಿಂಗ್ ಕ್ರಮಾಂಕದ​​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು.

ಈ ಪ್ರಶ್ನೆಗೆ ಉತ್ತರಿಸಿದ ಲ್ಯಾಂಗರ್, “ಪಂದ್ಯಕ್ಕೆ ಎರಡು ದಿನಗಳ ಮೊದಲು ನಡೆದ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಕೇವಲ 30 ರಿಂದ 40 ಎಸೆತಗಳಲ್ಲಿ 95 ರನ್ ಸಿಡಿಸಿದ್ದರು. ಅದು ಪಂತ್ ಅವರ ಅಸಲಿ ಆಟವಾಗಿತ್ತು. ಅಂತಹ ಅಮೋಘ ಬ್ಯಾಟಿಂಗ್ ನೋಡಿದ ಮೇಲೆಯೇ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಯಿತು ಎಂದು ತಿಳಿಸಿದ್ದಾರೆ.

ಇತ್ತ ಜಸ್ಟಿನ್ ಲ್ಯಾಂಗರ್ ನೀಡಿದ ಹೇಳಿಕೆಯು ಇದೀಗ ಸಾಕಷ್ಟು ಟ್ರೋಲ್ ಆಗಿದೆ. ಏಕೆಂದರೆ ಅಭ್ಯಾಸದ ವೇಳೆ ಪಂತ್ ಬ್ಯಾಟ್ ಬೀಸಿದ್ದು ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ವಿರುದ್ಧ. ಇಲ್ಲಿ ಅವರು ಪಂತ್​ ಅವರನ್ನು ಸಮರ್ಥಿಸಲು ಮುಂದಾಗಿ ಎಲ್​ಎಸ್​ಜಿ ಬೌಲರ್​ಗಳ ವೈಫಲ್ಯವನ್ನೂ ಸಹ ಎತ್ತಿ ತೋರಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯಲಾಗುತ್ತಿದೆ.

ಪಂತ್​ಗೆ ಬಹುಪರಾಕ್:

ಇನ್ನು ಇದೇ ಸುದ್ದಿಗೋಷ್ಠಿಯಲ್ಲಿ ರಿಷಭ್ ಪಂತ್ ಅವರ ನಾಯಕತ್ವದ ಗುಣವನ್ನು ಶ್ಲಾಘಿಸಿದ ಲ್ಯಾಂಗರ್, ನಿಕೋಲಸ್ ಪೂರನ್ ಅವರಿಗೆ ಹೆಚ್ಚಿನ ಅವಕಾಶ ನೀಡಲು ಪಂತ್ ಸ್ವತಃ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟು ಕೆಳಗಿನ ಕ್ರಮಾಂಕದಲ್ಲಿ ಆಡಿದ್ದರು. ತಂಡದ ಹಿತದೃಷ್ಟಿಯಿಂದ ಪಂತ್ ಈ ನಿರ್ಧಾರ ಕೈಗೊಂಡಿದ್ದರು. ಇದು ಒಬ್ಬ ಉತ್ತಮ ನಾಯಕನ ನಡೆ ಎಂದು ಶ್ಲಾಘಿಸಿದ್ದಾರೆ.

ಆದರೆ ಈ ಹೇಳಿಕೆಗೂ ಕೂಡ ಎಲ್​ಎಸ್​ಜಿ ಅಭಿಮಾನಿಗಳಿಂದ ಅಪಸ್ವರಗಳು ಕೇಳಿ ಬಂದಿವೆ. ಏಕೆಂದರೆ ಈ ಹಿಂದೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಪಂತ್ ಈ ಹಿಂದೆ ಶೂನ್ಯಕ್ಕೆ ಔಟಾಗಿದ್ದರು. ಅಲ್ಲದೆ ಕೆಕೆಆರ್ ವಿರುದ್ಧ ಗಳಿಸಿದ್ದು ಕೇವಲ 10 ರನ್​ ಮಾತ್ರ. ಆರ್​ಸಿಬಿ ವಿರುದ್ಧ 1 ರನ್​ಗೆ ಮುಗ್ಗರಿಸಿದ್ದರು. ಹೀಗಾಗಿಯೇ ಅವರು ಪೂರನ್​ಗೆ ಮೇಲಿನ ಕ್ರಮಾಂಕದಲ್ಲಿ ಅವಕಾಶ ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸುತ್ತಿದ್ದಾರೆ.

ಒಟ್ಟಿನಲ್ಲಿ ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರ (27 ಕೋಟಿ ರೂ.) ಎಂಬ ಹಣೆಪಟ್ಟಿಯೊಂದಿಗೆ ಕಣಕ್ಕಿಳಿಯುತ್ತಿರುವ ರಿಷಭ್ ಪಂತ್ ಅವರ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಅದರಲ್ಲೂ ಅವರ ನಾಯಕತ್ವದ ಯಾವುದೇ ಪರಿಣಾಮ ಬೀರುತ್ತಿಲ್ಲ. ಇದಕ್ಕೆ ಸಾಕ್ಷಿ ಮುಂಬೈ ಇಂಡಿಯನ್ಸ್ ವಿರುದ್ಧ  228 ರನ್​ಗಳಿಸಿದರೂ ಲಕ್ನೋ ಸೂಪರ್ ಜೈಂಟ್ಸ್​ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿರುವುದು.

ಇದನ್ನೂ ಓದಿ: ಜ್ವರದಿಂದ ಮಲಗಿದ್ದ ಆಟಗಾರನಿಗೆ ಪ್ರೈವೇಟ್ ಪ್ಲೇನ್ ಆಫರ್ ನೀಡಿದ್ದ IPL ಮಾಲೀಕ!

ಈ ಸೋಲುಗಳ ಹೊರತಾಗಿಯೂ ಲಕ್ನೋ ಸೂಪರ್ ಜೈಂಟ್ಸ್​ ತಂಡ ಇನ್ನೂ ಸಹ ಪ್ಲೇಆಫ್​ ರೇಸ್​ನಿಂದ ಹೊರಬಿದ್ದಿಲ್ಲ. ಆದರೆ ಪ್ಲೇಆಫ್​ಗೇರಲು ಎಲ್​ಎಸ್​ಜಿ ಪಡೆ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಜಯಗಳಿಸಬೇಕು. ಅದರ ಜೊತೆಗೆ ಅದೃಷ್ಟ ಕೂಡ ಕೈ ಹಿಡಿಯಬೇಕು. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಅದೃಷ್ಟದ ಆಧಾರದ ಮೇಲೆ ಪ್ಲೇಆಫ್​ಗೇರಲಿದೆಯಾ ಕಾದು ನೋಡಬೇಕಿದೆ.

Source link

‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು – Kannada News | Thalapathy Vijay CM: Jan Nayagan Release Marks New Political Cinema Era

ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆ. ಬೆಳವಣಿಗೆಯ ನಡುವೆ, ಅವರ ಅಂತಿಮ ಸಿನಿಮಾ ಎನ್ನಲಾದ ‘ಜನ ನಾಯಗನ್’ ಬಿಡುಗಡೆಯ ಕುರಿತು ಈಗ ಹೊಸ ಚರ್ಚೆಗಳು ಶುರುವಾಗಿವೆ.

ಚುನಾವಣಾ ದಿನಾಂಕ ಘೋಷಣೆಗೂ ಮೊದಲು ವಿಜಯ್​​ ಸಿನಿಮಾ ರಿಲೀಸ್ ಮಾಡಲು ಹಲವು ಅಡ್ಡಿ-ಆತಂಕಗಳು ಬಂದವು. ಈ ಕಾರಣದಿಂದ ಚುನಾವಣೆಗೂ ಮೊದಲು ಸಿನಿಮಾ ತೆರೆಗೆ ಬರಲಿಲ್ಲ. ಈಗ ಚುನಾವಣೆ ಪೂರ್ಣಗೊಂಡಿದ್ದು, ವಿಜಯ್ ಸಿಎಂ ಆಗೋದು ಬಹುತೇಕ ಖಚಿತವಾಗಿದೆ. ಸಿಎಂ ಆದ ಬಳಿಕ ಈ ಸಿನಿಮಾವನ್ನು ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆಯಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ವಿಜಯ್ ಅವರ ವೃತ್ತಿಜೀವನದ ಕೊನೆಯ ಸಿನಿಮಾ ಆಗಲಿದೆ. ಓರ್ವ ನಟ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಅವರ ಸಿನಿಮಾ ತೆರೆಗೆ ಬರುವುದು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಅಪರೂಪದ ವಿದ್ಯಮಾನವಾಗಲಿದೆ.

ಈ ಚಿತ್ರವನ್ನು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN) ಪ್ರೊಡಕ್ಷನ್ಸ್ ನಿರ್ಮಿಸಿದೆ. ಒಂದು ಕಡೆ ಅವರ ನಿರ್ಮಾಣದ ‘ಕೆಡಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದರೆ, ಮತ್ತೊಂದೆಡೆ ತಮ್ಮ ಸಿನಿಮಾದ ನಾಯಕನೇ ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವುದು ಸಂಸ್ಥೆಯ ಖುಷಿಯನ್ನು ಇಮ್ಮಡಿಗೊಳಿಸಿದೆ. ‘ಜನ ನಾಯಗನ್’ ಸಿನಿಮಾ ವಿಜಯ್ ಅವರ ರಾಜಕೀಯ ಸಿದ್ಧಾಂತಗಳನ್ನು ಒಳಗೊಂಡಿದೆ.

ಜೂನ್ 4ಕ್ಕೆ ರಿಲೀಸ್?

ಜೂನ್ 4ರಂದು ಕೆವಿಎನ್ ನಿರ್ಮಾಣದ ‘ಟಾಕ್ಸಿಕ್’ ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಮುಂದಕ್ಕೆ ಹೊಗಿದೆ. ಈಗ ಈ ಸ್ಲಾಟ್ ಅನ್ನು ವಿಜಯ್ ಅವರು ತಮ್ಮದಾಗಿಸಿಕೊಳ್ಳಬಹುದು ಎಂದು ಹೇಳಲಾಗುತ್ತಾ ಇದೆ. ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರವೇ ಈ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದ್ದು, ಬಾಕ್ಸ್ ಆಫೀಸ್‌ನಲ್ಲಿ ಎಲ್ಲಾ ದಾಖಲೆಗಳನ್ನು ಮುರಿಯುವ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ – Kannada News | Sringeri assembly constituency Result Row: BJP MLA Jeevaraj Talks about Vote Recounting

ಬೆಂಗಳೂರು, (ಮೇ 05): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಹುಡುಗ ಇಂದು ಅವರ ಪಕ್ಷವನ್ನೇ ಮುಗಿಸಿದ’: ಆರ್​ಜಿವಿ – Kannada News | Thalapathy Vijay TVK wins Tamil Nadu election Ram Gopal Varma reaction on DMK MK Stalin defeat

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಈ ಮೂಲಕ ಆರು ಬಾರಿ ತಮಿಳುನಾಡನ್ನು ಆಳಿದ್ದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಜಯ್ ಅವರ ಬಗ್ಗೆ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಪೋಸ್ಟ್ ಮಾಡಿದ್ದಾರೆ.

ದಳಪತಿ ವಿಜಯ್ ಅವರ ಈ ಸ್ಮರಣೀಯ ಗೆಲುವಿನ ಕುರಿತು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಡಿಎಂಕೆ ಮುಖಂಡ, ದಿವಂಗತ ಎಂ. ಕರುಣಾನಿಧಿ ಅವರ ಹಿಂದೆ ವಿಜಯ್ ನಿಂತಿರುವ ಹಳೆಯ ಫೋಟೋವೊಂದನ್ನು ವರ್ಮಾ ಹಂಚಿಕೊಂಡಿದ್ದಾರೆ.

ಇದಕ್ಕೆ ಕ್ಯಾಪ್ಷನ್ ನೀಡಿರುವ ರಾಮ್ ಗೋಪಾಲ್ ವರ್ಮಾ ಅವರು, ‘ತನ್ನ ಹಿಂದೆ ನಿಂತಿರುವ ಈ ಹುಡುಗ ಒಂದು ದಿನ ತಮ್ಮ ಪಕ್ಷವನ್ನೇ ನಾಶ ಮಾಡುತ್ತಾನೆ ಎಂದು ಕರುಣಾನಿಧಿ ಅವರು ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಡಿಎಂಕೆ ಭದ್ರಕೋಟೆಯನ್ನು ವಿಜಯ್ ತಲ್ಲಣಗೊಳಿಸಿರುವುದನ್ನು ವರ್ಮಾ ವ್ಯಂಗ್ಯವಾಗಿ ಶ್ಲಾಘಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ‘ನಾವು ನೋಡದ ಗೆಲುವಿಲ್ಲ, ನಾವು ಎದುರಿಸದ ಸೋಲು ಕೂಡ ಇಲ್ಲ’ ಎಂದು ಹೇಳುವ ಮೂಲಕ ಪರಾಜಯವನ್ನು ವಿನಮ್ರವಾಗಿ ಒಪ್ಪಿಕೊಂಡಿದ್ದಾರೆ. ರಾಜಕೀಯದಲ್ಲಿ ಮೊದಲ ಯತ್ನದಲ್ಲೇ ಭರ್ಜರಿ ಗೆಲುವು ದಾಖಲಿಸಿದ ವಿಜಯ್ ಅವರಿಗೆ ರಜನಿಕಾಂತ್, ಕಮಲ್ ಹಾಸನ್, ವಿಕ್ರಮ್, ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ, ಎ.ಆರ್. ರೆಹಮಾನ್, ಮೋಹನ್ ಲಾಲ್ ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ಚಿತ್ರತಾರೆಯರು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಜಯಭೇರಿ ಬಾರಿಸಿದ ಟಿವಿಕೆ: ದಳಪತಿ ವಿಜಯ್ ಮನೆ ಎದುರು ಪೊಲೀಸ್ ಬಿಗಿ ಭದ್ರತೆ

1992ರಲ್ಲಿ ‘ನಾಳಯ ತೀರ್ಪು’ ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ವಿಜಯ್, 34 ವರ್ಷಗಳ ಕಾಲ ಚಿತ್ರರಂಗವನ್ನು ಆಳಿದರು. 2024ರಲ್ಲಿ ಟಿವಿಕೆ ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದರು. ಅವರ ಅಭಿನಯದ ಕೊನೆಯ ಚಿತ್ರ ಎನ್ನಲಾದ ‘ಜನ ನಾಯಕನ್’ ಇನ್ನೂ ಬಿಡುಗಡೆಯಾಗಬೇಕಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Capital Inflow: ಚೀನಾವನ್ನು ಹಿಂದಿಕ್ಕಿದ ಭಾರತ; ಜಾಗತಿಕ ಹೂಡಿಕೆದಾರರ ಮೊದಲ ಆಯ್ಕೆ ‘ಇಂಡಿಯಾ’ – Kannada News | India Becomes Global Investment Magnet, Surpassing China in Attracting Foreign Capital during April

ನವದೆಹಲಿ, ಮೇ 5: ಜಾಗತಿಕ ಆರ್ಥಿಕ ಮಾರುಕಟ್ಟೆಯಲ್ಲಿ (Stock Market) ಭಾರತದ ಹವಾ ಜೋರಾಗಿದೆ. ಜಾಗತಿಕ ಹೂಡಿಕೆಯನ್ನು ಆಕರ್ಷಿಸುವ ರೇಸ್‌ನಲ್ಲಿ ಭಾರತವು ತನ್ನ ನೆರೆಯ ಬಲಿಷ್ಠ ದೇಶವಾದ ಚೀನಾವನ್ನು ಹಿಂದಿಕ್ಕಿ ಭಾರಿ ಪ್ರಮಾಣದ ವಿದೇಶಿ ಬಂಡವಾಳವನ್ನು ತನ್ನತ್ತ ಸೆಳೆಯುತ್ತಿದೆ ಎಂದು ಇತ್ತೀಚಿನ ಆರ್ಥಿಕ ವರದಿಗಳು ತಿಳಿಸಿವೆ. ಮಾರ್ಚ್ ತಿಂಗಳಿನ ಕುಸಿತದ ನಂತರ ಏಪ್ರಿಲ್‌ನಲ್ಲಿ ಜಾಗತಿಕ ಮಾರುಕಟ್ಟೆಗಳು ಚೇತರಿಸಿಕೊಂಡಿದ್ದು, ಹೂಡಿಕೆದಾರರು ಚೀನಾಕ್ಕಿಂತ ಭಾರತದ ಮಾರುಕಟ್ಟೆಯ ಮೇಲೆಯೇ ಹೆಚ್ಚು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಹೀಗೆಂದು ಕ್ವಾಂಟ್ ಮ್ಯೂಚುವಲ್ ಫಂಡ್​ನ ವಿಶ್ಲೇಷಣಾ ವರದಿಯಲ್ಲಿ ಹೇಳಲಾಗಿದೆ.

ಭಾರತದ ಜಿಡಿಪಿ ಮತ್ತು ಷೇರು ಮಾರುಕಟ್ಟೆ ಜಿಗಿತ

ವರದಿಯ ಪ್ರಕಾರ, ಭಾರತದ ನಾಮಮಾತ್ರದ ಜಿಡಿಪಿ (Nominal GDP) ಬೆಳವಣಿಗೆಯು ಚೀನಾ ದೇಶಕ್ಕಿಂತ ಹೆಚ್ಚಿನ ವೇಗದಲ್ಲಿ ಮುನ್ನುಗ್ಗುತ್ತಿದೆ. ಇದು ಜಾಗತಿಕ ಹೂಡಿಕೆದಾರರನ್ನು ಭಾರತದ ಕಡೆಗೆ ಆಕರ್ಷಿಸಲು ಪ್ರಮುಖ ಕಾರಣವಾಗಿದೆ. ಏಪ್ರಿಲ್​ನಲ್ಲಿ ಅಮೆರಿಕದ ಷೇರು ಮಾರುಕಟ್ಟೆ ಶೇ. 9 ರಷ್ಟು ಬೆಳವಣಿಗೆ ಕಂಡಿತು. ಈ ವೇಳೆ ಭಾರತದ ನಿಫ್ಟಿ (Nifty) ಶೇ. 6.7 ರಷ್ಟು ಬೆಳೆದಿದೆ. ಅಮೆರಿಕದ ಈಕ್ವಿಟಿಗಳಿಗೆ ಹೋಲಿಸಿದರೆ ಭಾರತದ ಈಕ್ವಿಟಿ ಬೆಳವಣಿಗೆ ಕಡಿಮೆ ಎನಿಸಿದರೂ ವಿಶ್ವದ ಹೆಚ್ಚಿನ ಮಾರುಕಟ್ಟೆಗಳಿಗಿಂತ ಹೆಚ್ಚು ಉಬ್ಬಿರುವುದು ವೇದ್ಯವಾಗಿದೆ. ಚೀನಾದ ಶಾಂಘೈ ಸೂಚ್ಯಂಕವು ಅತ್ಯಂತ ಸಾಧಾರಣ ಬೆಳವಣಿಗೆಯನ್ನು ಮಾತ್ರ ದಾಖಲಿಸಿದೆ.

ಇದನ್ನೂ ಓದಿ: ಲೈವ್ ವೆದರ್​ನಿಂದ ಹಿಡಿದು ವಿವಿಧ ಅಲರ್ಟ್​ಗಳವರೆಗೆ ಹಲವು ಫೀಚರ್​ಗಳನ್ನು ಹೊಂದಿರುವ ಮೌಸಮ್ ಆ್ಯಪ್

ಸ್ಥಿರತೆಗೆ ಮರಳಿದ ಭಾರತೀಯ ಮಾರುಕಟ್ಟೆ

ಕಳೆದ ಮಾರ್ಚ್ ತಿಂಗಳಿನಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ, ವಿಶೇಷವಾಗಿ ಸ್ಮಾಲ್-ಕ್ಯಾಪ್ (Smal-cap) ಮತ್ತು ಮಿಡ್-ಕ್ಯಾಪ್ ಷೇರುಗಳಲ್ಲಿ ಕಂಡುಬಂದಿದ್ದ ಮಾರ್ಕೆಟ್ ಕರೆಕ್ಷನ್ (Correction) ಅಥವಾ ಕುಸಿತವು ಈಗ ಸ್ಥಿರತೆಗೆ ಮರಳಿದೆ. ಕಂಪನಿಗಳ ಉತ್ತಮ ಆರ್ಥಿಕ ಗಳಿಕೆ (Corporate Earnings) ಮತ್ತು ದೇಶದ ಸದೃಢ ಆರ್ಥಿಕತೆಯು ಮಾರುಕಟ್ಟೆಯ ಮುಂದಿನ ಬೆಳವಣಿಗೆಗೆ ದಾರಿದೀಪವಾಗಿದೆ ಎಂದು ಕ್ವಾಂಟ್ ಮ್ಯೂಚುವಲ್ ಫಂಡ್‌ನ ವರದಿ ಎತ್ತಿ ತೋರಿಸಿದೆ.

ಹೂಡಿಕೆದಾರರ ನಂಬಿಕೆಗೆ ಕಾರಣಗಳೇನು?

  • ಸ್ಥಿರ ಹಣಕಾಸು ನೀತಿಗಳು: ಭಾರತ ಸರ್ಕಾರದ ಸ್ಥಿರವಾದ ಆರ್ಥಿಕ ಮತ್ತು ಹಣಕಾಸು ನೀತಿಗಳು ವಿದೇಶಿ ಹೂಡಿಕೆದಾರರಿಗೆ ಹೆಚ್ಚಿನ ಸುರಕ್ಷತೆಯನ್ನು ಒದಗಿಸುತ್ತಿವೆ.
  • ಸಾಲದ ವಿಸ್ತರಣೆ (Credit Expansion): ದೇಶದ ಬ್ಯಾಂಕಿಂಗ್ ವಲಯದಲ್ಲಿ ಸಾಲದ ವಿತರಣೆ ಮತ್ತು ವಿಸ್ತರಣೆ ಬಲವಾಗಿರುವುದು ಆರ್ಥಿಕ ಚಟುವಟಿಕೆಗಳು ವೇಗವಾಗಿ ನಡೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ.
  • ಲಾರ್ಜ್-ಕ್ಯಾಪ್ ಷೇರುಗಳಿಗೆ ಬೇಡಿಕೆ: ಜಾಗತಿಕ ಹೂಡಿಕೆದಾರರು ಸದ್ಯ ಭಾರತದ ಲಾರ್ಜ್-ಕ್ಯಾಪ್ (ದೊಡ್ಡ ಕಂಪನಿಗಳ) ಷೇರುಗಳ ಮೇಲೆ ಹೆಚ್ಚು ಒಲವು ತೋರುತ್ತಿದ್ದು, ಆಯ್ದ ಮಿಡ್ ಮತ್ತು ಸ್ಮಾಲ್-ಕ್ಯಾಪ್ ಕಂಪನಿಗಳಲ್ಲೂ ಹೂಡಿಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಎಐ ಹೆಸರಲ್ಲಿ ಲೇ ಆಫ್; ಉದ್ಯೋಗಿಗಳಿಗೆ ಆಶಾಕಿರಣವಾದ ಚೀನೀ ಕೋರ್ಟ್ ತೀರ್ಪು

ಮುಂಚೂಣಿಯಲ್ಲಿರುವ ಕ್ಷೇತ್ರಗಳು

ಭಾರತದ ಈ ಐತಿಹಾಸಿಕ ಆರ್ಥಿಕ ಬೆಳವಣಿಗೆಗೆ ಪ್ರಮುಖವಾಗಿ ಇಂಧನ (Energy), ಮೂಲಸೌಕರ್ಯ (Infrastructure), ಟೆಲಿಕಾಂ (Telecom) ಮತ್ತು ಫಾರ್ಮಾಸ್ಯುಟಿಕಲ್ಸ್ (Pharmaceuticals – ಔಷಧ ವಲಯ) ಕ್ಷೇತ್ರಗಳು ಭಾರಿ ಕೊಡುಗೆ ನೀಡುತ್ತಿವೆ. ಜಾಗತಿಕ ಮಟ್ಟದಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು (Geopolitical Tensions) ಸ್ವಲ್ಪ ಮಟ್ಟಿಗೆ ತಿಳಿಯಾಗುತ್ತಿರುವುದು ಸಹ ಮಾರುಕಟ್ಟೆಯ ಹೂಡಿಕೆಗೆ ಪೂರಕ ವಾತಾವರಣ ಸೃಷ್ಟಿಸಿದೆ.

ಒಟ್ಟಾರೆಯಾಗಿ ತಿಳಿಸುವುದಾದರೆ, ಏಷ್ಯಾದಲ್ಲಿ ಆರ್ಥಿಕ ಚೇತರಿಕೆಯ ರೇಸ್‌ನಲ್ಲಿ ಚೀನಾವನ್ನು ಮಣಿಸಿ ಭಾರತವು ಜಾಗತಿಕ ಹೂಡಿಕೆದಾರರ ಪಾಲಿಗೆ ಅತ್ಯಂತ ಸುರಕ್ಷಿತ ಮತ್ತು ಲಾಭದಾಯಕ ತಾಣವಾಗಿ ಹೊರಹೊಮ್ಮುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಐಷಾರಾಮಿ ಕಾರಿನಲ್ಲಿ ಬಂದ್ರು, ಬೀದಿಯಲ್ಲಿದ್ದ ಹಸುವನ್ನೇ ಕದ್ದುಕೊಂಡು ಹೋದ್ರು!

ಹುಬ್ಬಳ್ಳಿ, ಮೇ 05: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್‌ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – Kannada News | Mangaluru Weather Update: Rain Forecast Across Karnataka from May 6 7, Stay Safe

ಮಂಗಳೂರು, ಮೇ.5: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇದೇ ಸಮಯದಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸೋಮವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ.

ಸೋಮವಾರ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆಯಾಗಿರಲಿಲ್ಲ. ಆದರೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಈಗಾಗಲೇ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ. ಮೇ 6 ಮತ್ತು 7 ರಂದು ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಲಘು ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​

ಉತ್ತರ ಒಳನಾಡು (ಬೀದರ್, ಕಲಬುರಗಿ, ಯಾದಗಿರಿ) ಈ ಭಾಗದಲ್ಲಿ ಮೇ 7 ರಂದು ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ತಾಪಮಾನದಲ್ಲಿ ಸ್ಥಿರತೆ ಕಂಡುಬರಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದ್ದು, ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:34 pm, Tue, 5 May 26

Source link

ಪಶ್ಚಿಮ ಬಂಗಾಳದಿಂದ ಕೇರಳ ವರೆಗೆ… ಶಾಸಕರಾಗಿ ಆಯ್ಕೆಯಾದ ಮುಸ್ಲಿಮರೆಷ್ಟು ಗೊತ್ತೇ? ಅಚ್ಚರಿಯ ಅಂಕಿಅಂಖ್ಯೆ ಇಲ್ಲಿದೆ ನೋಡಿ – Kannada News | Assembly Election 2026: Statistics of Muslim MLAs Won in West Bengal, Assam, Kerala, and Tamil Nadu

ನವದೆಹಲಿ, ಮೇ 5: ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಣಮಿಸಿದ್ದ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Assembly Election Result 2026) ಹೊರಬಿದ್ದಿದೆ. ಈ ಬಾರಿಯ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ಶಾಸಕರ ಸಂಖ್ಯಾಬಲಕ್ಕೆ ಸಂಬಂಧಿಸಿದಂತೆ ಕುತೂಹಲಕಾರಿ ಅಂಕಿಅಂಖ್ಯೆಗಳು ಲಭ್ಯವಾಗಿವೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಶಾಸಕರ ಪ್ರಭಾವ ತಗ್ಗಿದರೆ, ಕೇರಳದಲ್ಲಿ ಅವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಬಂಗಾಳ ಮತ್ತು ಅಸ್ಸಾಂನಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಇಳಿಕೆ

ಜಮ್ಮು ಮತ್ತು ಕಾಶ್ಮೀರದ ನಂತರ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಈ ಬಾರಿ ಶಾಸಕರ ಸಂಖ್ಯೆ ಗಮನಾರ್ಹವಾಗಿ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ (ಒಟ್ಟು 294 ಸ್ಥಾನಗಳು) ಕಳೆದ ಬಾರಿ 42 ಮುಸ್ಲಿಂ ಶಾಸಕರಿದ್ದರೆ, ಈ ಬಾರಿ ಆ ಸಂಖ್ಯೆ 36ಕ್ಕೆ ಕುಸಿದಿದೆ. ಇವರಲ್ಲಿ 31 ಮಂದಿ ಟಿಎಂಸಿಯಿಂದ ಹಾಗೂ 5 ಮಂದಿ ಕಾಂಗ್ರೆಸ್-ಸಿಪಿಎಂ ಮೈತ್ರಿಯಿಂದ ಗೆದ್ದಿದ್ದಾರೆ.

ಅದೇ ರೀತಿ, ಅಸ್ಸಾಂನಲ್ಲಿ (ಒಟ್ಟು 126 ಸ್ಥಾನಗಳು) ಈ ಬಾರಿ 22 ಮುಸ್ಲಿಂ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಳೆದ ಬಾರಿಗೆ ಹೋಲಿಸಿದರೆ ಅಸ್ಸಾಂ ಮತ್ತು ಬಂಗಾಳದಲ್ಲಿ ಒಟ್ಟಾರೆಯಾಗಿ 15 ಮುಸ್ಲಿಂ ಶಾಸಕರು ಕಡಿಮೆಯಾಗಿದ್ದಾರೆ. ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ 18, ಬದ್ರುದ್ದೀನ್ ಅಜ್ಮಲ್ ಪಕ್ಷದಿಂದ 2 ಹಾಗೂ ಅಖಿಲ್ ಗೋಗೊಯ್ ಪಕ್ಷದಿಂದ ಒಬ್ಬರು ಗೆದ್ದಿದ್ದಾರೆ.

ಕೇರಳ, ತಮಿಳುನಾಡಿನಲ್ಲಿ ಹೇಗಿದೆ ಮುಸ್ಲಿಂ ಶಾಸಕಸ ಸಂಖ್ಯೆ?

ಬಂಗಾಳಕ್ಕೆ ವ್ಯತಿರಿಕ್ತವಾಗಿ ಕೇರಳದಲ್ಲಿ (ಒಟ್ಟು 140 ಸ್ಥಾನಗಳು) ಮುಸ್ಲಿಂ ಶಾಸಕರ ಸಂಖ್ಯೆ 32 ರಿಂದ 35ಕ್ಕೆ ಏರಿಕೆಯಾಗಿದೆ. ಇಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ನಿಂದ ಅತಿ ಹೆಚ್ಚು ಅಂದರೆ 22 ಶಾಸಕರು ಮತ್ತು ಕಾಂಗ್ರೆಸ್‌ನಿಂದ 8 ಶಾಸಕರು ಆಯ್ಕೆಯಾಗಿದ್ದಾರೆ. ತಮಿಳುನಾಡಿನಲ್ಲಿ ಈ ಬಾರಿ ಒಟ್ಟು 9 ಮುಸ್ಲಿಂ ಶಾಸಕರು ವಿಧಾನಸಭೆ ಪ್ರವೇಶಿಸಿದ್ದಾರೆ.

ಕಾಂಗ್ರೆಸ್ ಮೈತ್ರಿಕೂಟದಲ್ಲಿ ಮುಸ್ಲಿಂ ಅಭ್ಯರ್ಥಿಗಳ ಭರ್ಜರಿ ಯಶಸ್ಸು: ಅಂಕಿಅಂಖ್ಯೆಗಳು ಇಲ್ಲಿವೆ

  • ಅಸ್ಸಾಂ: ಅಸ್ಸಾಂನಲ್ಲಿ ಕಾಂಗ್ರೆಸ್ ಗೆದ್ದಿರುವ ಒಟ್ಟು 19 ಸ್ಥಾನಗಳ ಪೈಕಿ ಬರೋಬ್ಬರಿ 18 ಸ್ಥಾನಗಳಲ್ಲಿ ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಕಣಕ್ಕಿಳಿಸಿದ್ದ 20 ಮುಸ್ಲಿಂ ಅಭ್ಯರ್ಥಿಗಳಲ್ಲಿ 18 ಮಂದಿ ಗೆಲುವು ಸಾಧಿಸಿದ್ದಾರೆ. ಆದರೆ, ಕಾಂಗ್ರೆಸ್ ಟಿಕೆಟ್ ನೀಡಿದ್ದ ಇತರ 79 ಮುಸ್ಲಿಮೇತರ ಅಭ್ಯರ್ಥಿಗಳಲ್ಲಿ ಗೆದ್ದಿರುವುದು ಕೇವಲ ಒಬ್ಬರು ಮಾತ್ರ.
  • ರಾಯ್​ಜೋರ್ ದಳ: ಕಾಂಗ್ರೆಸ್ ಮಿತ್ರಪಕ್ಷವಾದ ರೈಜೋರ್ ದಳ 2 ಸ್ಥಾನಗಳನ್ನು ಗೆದ್ದಿದ್ದು, ಅದರಲ್ಲಿ ಒಬ್ಬರು ಮುಸ್ಲಿಂ ಅಭ್ಯರ್ಥಿ. ಮತ್ತೊಬ್ಬರು ಅಖಿಲ್ ಗೋಗೊಯ್.
  • ಕೇರಳ: ಕೇರಳ ವಿಧಾನಸಭೆಯ 140 ಸ್ಥಾನಗಳ ಪೈಕಿ ಈ ಬಾರಿ 35 ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದಾರೆ. ಇವರಲ್ಲಿ 30 ಶಾಸಕರು ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟದವರು. ಕಾಂಗ್ರೆಸ್‌ನ 8 ಮುಸ್ಲಿಂ ಶಾಸಕರು ಮತ್ತು ಮಿತ್ರಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ (IUML) ಎಲ್ಲಾ 22 ಶಾಸಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
  • ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಗೆದ್ದಿದ್ದು, ಇಬ್ಬರೂ ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರಗಳ ಮುಸ್ಲಿಂ ಅಭ್ಯರ್ಥಿಗಳಾಗಿದ್ದಾರೆ. ವಿಶೇಷವೆಂದರೆ, ಟಿಎಂಸಿ (47) ಗಿಂತಲೂ ಹೆಚ್ಚು, ಅಂದರೆ 63 ಮುಸ್ಲಿಂ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.
  • ತಮಿಳುನಾಡು: ತಮಿಳುನಾಡಿನಲ್ಲಿ ಕಾಂಗ್ರೆಸ್ ಇಬ್ಬರು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಅವರಲ್ಲಿ ಒಬ್ಬರು ಗೆದ್ದಿದ್ದಾರೆ.
  • ಗಮನಾರ್ಹ ಅಂಶ: ಕೇರಳ ಮತ್ತು ಅಸ್ಸಾಂ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮೈತ್ರಿಕೂಟದಿಂದ ಸ್ಪರ್ಧಿಸಿದ್ದ ಮುಸ್ಲಿಂ ಅಭ್ಯರ್ಥಿಗಳ ಗೆಲುವಿನ ಪ್ರಮಾಣ ಶೇಕಡಾ 80ಕ್ಕಿಂತ ಹೆಚ್ಚಿದೆ.

ಇದನ್ನೂ ಓದಿ: ಮನೆ ಕೆಲಸದಾಕೆ ಈಗ ಪಶ್ಚಿಮ ಬಂಗಾಳದ ಶಾಸಕಿ: ಅತ್ಯಾಚಾರ, ಕೊಲೆ ಸಂತ್ರಸ್ತೆಯ ತಾಯಿಯೂ ಆದ್ರು MLA!

ರಾಷ್ಟ್ರ ಮಟ್ಟದಲ್ಲಿ ಮುಸ್ಲಿಂ ಸಮುದಾಯದ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಬಾರಿಯ ವಿಧಾನಸಭಾ ಫಲಿತಾಂಶಗಳು ಮಿಶ್ರ ಪ್ರತಿಕ್ರಿಯೆಯನ್ನು ನೀಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version