Headlines

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ – Kannada News | Massive Fire Accident in Vijayapura Car Service Center: Vehicles Worth Over R1 Crore Gutted

ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು…

Read More

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ಉತ್ತರ ಕನ್ನಡ: ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ! ಮುಚ್ಚುವ ಭೀತಿಯಲ್ಲಿ ಕನ್ನಡ ಮಾಧ್ಯಮ ಶಾಲೆಗಳು – Kannada News | Uttara Kannada Govt Schools Facing Closure After 35 Record Zero Admissions

ಉತ್ತರ ಕನ್ನಡ, ಜುಲೈ 22: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ದಿನದಿಂದ ದಿನಕ್ಕೆ ಚಿಂತಾಜನಕವಾಗುತ್ತಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024-25) ಉತ್ತರ ಕನ್ನಡ ಜಿಲ್ಲೆಯ ಸುಮಾರು 35 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಂದೇ ಒಂದು ಹೊಸ ವಿದ್ಯಾರ್ಥಿಯೂ ಸೇರ್ಪಡೆಯಾಗದೆ ‘ಶೂನ್ಯ ದಾಖಲಾತಿ’ (Zero Admissions) ದಾಖಲಾಗಿದೆ. ಈ ಘಟನೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಪ್ರೇಮಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಆತಂಕಕಾರಿ ಮಟ್ಟಕ್ಕೆ ಕುಸಿದ ವಿದ್ಯಾರ್ಥಿಗಳ ಸಂಖ್ಯೆ ಶಿಕ್ಷಣ ಇಲಾಖೆ ತಿಳಿಸುವಂತೆ ಉತ್ತರ ಕನ್ನಡ…

Read More

ಮೆಟ್ರೊ ಟಿಕೆಟ್ ದರ ಏರಿಕೆ ಬಗ್ಗೆ ಕೊನೆಗೂ ಮೌನಮುರಿದ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Bengaluru Metro Fare Hike: CM Siddaramaiah Assures Talks With Central Government

ಸಿಎಂ ಸಿದ್ದರಾಮಯ್ಯ, ಮೆಟ್ರೋ Image Credit source: tv9 kannada ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರ ಜೀವನಾಡಿ ಮೆಟ್ರೋ (Metro) ಪ್ರಯಾಣ ದರ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ಏರಿಕೆ ಆಗಲಿದೆ. ಜನರ ವಿರೋಧದ ನಡುವೆ ಟಿಕೆಟ್​​ ದರ ಹೆಚ್ಚಿಸಲಾಗಿದ್ದು, BMRCL ವಿರುದ್ಧ ಆಕ್ರೋಶದ ಕಟ್ಟೆಯೊಡಿದಿದೆ. ಸಾಮಾಜಿಕ ಜಾಲತಾಣದಲ್ಲಿ ಮೆಟ್ರೋ ಬಾಯ್ಕಾಟ್ ಕ್ಯಾಂಪೇನ್ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ಈ ವಿಚಾರ ರಾಜ್ಯ ಸರ್ಕಾರ ಮತ್ತು ಬಿಜೆಪಿ ಮಧ್ಯೆ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಕೇಂದ್ರ ಸರ್ಕಾರದ…

Read More

ಬಾಲಿವುಡ್ ಸ್ಟಾರ್ ನಿರ್ದೇಶಕನ ಚಿತ್ರಕ್ಕೆ ರವಿ ಬಸ್ರೂರು ಮ್ಯೂಸಿಕ್

ಮಲಯಾಳಂನಲ್ಲಿ ಸಿದ್ಧವಾದ ‘ದೃಶ್ಯಂ’  (Drishyam) ಸರಣಿ ಅದೇ ಹೆಸರಲ್ಲಿ ಹಿಂದಿಗೂ ರಿಮೇಕ್ ಆಗಿದೆ. ಈಗಾಗಲೇ ಎರಡು ಭಾಗ ತೆರೆಗೆ ಬಂದಿದ್ದು, ಮೂರನೇ ಭಾಗದ ಶೂಟಿಂಗ್ ಮುಕ್ತಾಯಗೊಂಡಿದೆ. ಈ ವರ್ಷದ ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಬಾರಿ ಈ ಚಿತ್ರದಲ್ಲಿ ಕನ್ನಡಿಗರು ಹೆಮ್ಮೆಪಡುವಂತಹ ದೊಡ್ಡ ಸುದ್ದಿಯೊಂದಿದೆ. ಹೌದು, ಭಾರತೀಯ ಚಿತ್ರರಂಗದ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್, ಕನ್ನಡಿಗ ರವಿ ಬಸ್ರೂರು ಅವರಿಗೆ ‘ದೃಶ್ಯಂ 3’ ಚಿತ್ರಕ್ಕೆ ಸಂಗೀತ ನೀಡುವ ಆಫರ್ ಸಿಕ್ಕಿದೆ. ವಿಶೇಷವೆಂದರೆ, ‘ದೃಶ್ಯಂ’ ಸರಣಿಯ…

Read More

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ; ತಿಂಗಳಿಗೆ 9,000ರೂ. ಸ್ಟೈಫಂಡ್‌ನೊಂದಿಗೆ ಬಂಪರ್ ಉದ್ಯೋಗಾವಕಾಶ! – Kannada News | Government Internship 2026: Paid Opportunities and Skill Development for Youth

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆImage Credit source: Pinterest ದೇಶದ ಯುವಜನತೆಗೆ ಉದ್ಯೋಗ ಕೌಶಲ್ಯ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ (PM Internship Scheme 2026) ಅನ್ನು ಮತ್ತಷ್ಟು ಆಕರ್ಷಕ ನಿಯಮಗಳೊಂದಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶದ ಪ್ರಮುಖ 500 ಕ್ಕೂ ಹೆಚ್ಚು ಕಂಪನಿಗಳಲ್ಲಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ (ತರಬೇತಿ) ಅವಕಾಶ ಸಿಗಲಿದ್ದು, ಪ್ರತಿ ತಿಂಗಳು ಭಾರಿ ಸ್ಟೈಫಂಡ್ ಕೂಡ ಲಭ್ಯವಾಗಲಿದೆ. ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ಹಾಗೂ ಪದವಿ…

Read More

Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು – Kannada News | Union Budget 2026 Expectations: Women Programmes Expected To Remain In Focus

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರೀಕ್ಷೆಗಳು ಮೂಡಿವೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಬಜೆಟ್ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಸುಧಾರಣೆಗಳ ಮೇಲೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಮಹಿಳೆಯರ ಪಾತ್ರ ನೀತಿ ನಿರೂಪಣೆಯಲ್ಲಿ ಹೆಚ್ಚಾಗಿದ್ದು, ಈ ಬಜೆಟ್ ಅನ್ನು ಮಹಿಳೆಯರ ಪಾಲಿಗೆ “ಭಾಗ್ಯದ ಪೆಟ್ಟಿಗೆ” ಎಂದು ಹೇಳಲಾಗುತ್ತಿದೆ. ಜನಧನ್ ಖಾತೆದಾರ ಮಹಿಳೆಯರಿಗೆ ಬ್ಯಾಂಕ್ ಸಾಲ, ವಿಮಾ ಯೋಜನೆಗಳು, ಕಸ್ಟಮೈಸ್ಡ್ ಕ್ರೆಡಿಟ್ ಕಾರ್ಡ್‌ಗಳು ಹಾಗೂ ಗ್ರಾಮೀಣ ಉದ್ಯಮಗಳು…

Read More

ನನ್ನ ಪರ್ಸ್​​ನಿಂದ ಹಾಲಿನ ದುಡ್ಡು ಕೊಡಿ; ನೋಟ್ ಬರೆದಿಟ್ಟು ಶಿಕ್ಷಕಿ ಸಾವು – Kannada News | Take money From My Purse for Milk leaving death note Bihar Teacher Dies By Suicide

ನವದೆಹಲಿ, ಜನವರಿ 27: ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ ಶಿಕ್ಷಕಿಯೊಬ್ಬರ ಮೃತದೇಹ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಮೂಡಿಸಿದೆ. ಆ ಶಿಕ್ಷಕಿಯ ರೂಂನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಖಾಜೆಚಂದ್ ಛಪ್ರಾ ಮಿಡಲ್ ಸ್ಕೂಲ್‌ನ ಶಿಕ್ಷಕಿ ಪ್ರಿಯಾ ಭಾರತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಆ ಮನೆಯ ಕಿಟಕಿಯಿಂದ ಒಳಗೆ ನೋಡಿದಾಗ ಆ ಶಿಕ್ಷಕಿ ತನ್ನ ರೂಂನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ….

Read More

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ಬೆಂಗಳೂರು, ಮಾರ್ಚ್​ 14: ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000 ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ. ಈ ಸಂಕಷ್ಟದಿಂದ ಹೋಟೆಲ್ ಮಾಲೀಕರು ತಮ್ಮ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಮತ್ತು ಗ್ರಾಹಕರಿಗೆ…

Read More

ಮದ್ರಾಸ್ ಹೈಕೋರ್ಟ್​​ನ ಗೋಹತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ – Kannada News | Cow Slaughter Ban: Tamil Nadu Government Moves Supreme Court Challenging Madras High Court’s Order

ನವದೆಹಲಿ/ಚೆನ್ನೈ, ಜುಲೈ 01: ರಾಜ್ಯದಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹತ್ಯೆ ನಡೆಯದಂತೆ…

Read More