ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ – Kannada News | BJP Candidate Jeevaraj Win In Sringeri Postal Ballots Recount Says pralhad joshi

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ.

ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ ಮೂರು ವರ್ಷದಿಂದ ಶಾಸಕ ಸ್ಥಾನದಿಂದ ವಂಚಿತರಾಗಿದ್ದಾರೆ. ಫಲಿತಾಂಶ ಘೋಷಣೆಗೆ ಇನ್ನೂ ವಿಳಂಬ ಸಲ್ಲದು. ಚುನಾವಣಾಧಿಕಾರಿ ಯಾವುದೇ ಒತ್ತಡಕ್ಕೆ ಮಣಿಯದೆ ತತ್ ಕ್ಷಣವೇ ಅಂಚೆ ಮತ ಮರು ಎಣಿಕೆ ಫಲಿತಾಂಶವನ್ನು ಘೋಷಿಸಬೇಕು. ಮಾನ್ಯ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​

ಅಂಚೆ ಮತಗಳ ಮರು ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಚುನಾವಣಾಧಿಕಾರಿಯೇ (DEO) ಘೋಷಿಸಬೇಕೆಂದು ನ್ಯಾಯಾಲಯ ಸ್ಪಷ್ಟ ಆದೇಶ ನೀಡಿದೆ. ಅದರಂತೆ ಚುನಾವಣಾಧಿಕಾರಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕೆಂದು ಜೋಶಿ ಆಗ್ರಹಿಸಿದ್ದಾರೆ.

ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್

ಕಾಂಗ್ರೆಸ್​ನ ಹಾಲಿ ಶಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, ಅಂಚೆ ಮತ ಮರು ಎಣಿಕೆಯಲ್ಲಿ ಮತ್ತಷ್ಟು ಅಂತರ ಹೆಚ್ಚಿಸಿಕೊಳ್ಳುವ ನೀರಿಕ್ಷೆಯಲ್ಲಿದ್ದ ಶೃಂಗೇರಿ MLA ಟಿ.ಡಿ ರಾಜೇಗೌಡ ನಿರೀಕ್ಷೆ ಸಂಪೂರ್ಣ ತಲೆ ಕೆಳಗಾಗಿದೆ. ಕಾನೂನು ಹೋರಾಟದಲ್ಲಿ ಬಿಜೆಪಿಯ ಡಿಎನ್ ಜೀವರಾಜ್ ಜಯದ ಹೊಸ್ತಿಲಲ್ಲಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಇನ್ನು ಅಂಚೆ ಮತಪತ್ರಗಳ ಮರುಎಣಿಕೆ ನಂತರ ಫಲಿತಾಂಶ ವಿಳಂಬ ಆಗ್ತಿದೆ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಡಿ.ಎನ್.ಜೀವರಾಜ್ ಪರ ವಕೀಲೆ ಡಾ.ವಂದನಾ ಪಿ.ಎಲ್.ರಿಂದ ನೋಟಿಸ್ ಕೊಟ್ಟಿದ್ದಾರೆ.

Source link

ಟಿ20 ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಪ್ಯಾಟ್ ಕಮ್ಮಿನ್ಸ್ – Kannada News | Pat Cummins’ Costliest T20 Over: Finn Allen’s 27 Run Assault in KKR vs SRH IPL 2026

ಹೈದರಾಬಾದ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಐಪಿಎಲ್ 2026 ರ 45 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ನಾಲ್ಕನೇ ಓವರ್‌ನಲ್ಲಿ ಬರೋಬ್ಬರಿ 27 ರನ್ ಕಲೆಹಾಕಿದರು.

ಕಮ್ಮಿನ್ಸ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಎರಡನೇ ಓವರ್‌ನಲ್ಲಿ ದುಬಾರಿಯಾದರು. ಆ ಓವರ್ ವೈಡ್‌ನೊಂದಿಗೆ ಪ್ರಾರಂಭವಾಯಿತು, ಅದು ಬೌಂಡರಿಗೆ ಹೋಯಿತು. ಇದರಿಂದ ಐದು ರನ್‌ ಬಂತು. ನಂತರದ ಎಸೆತವನ್ನು ಅಲೆನ್ ಸಿಕ್ಸರ್​ಗಟ್ಟಿದರು. ನಂತರದ ಎಸೆತದಲ್ಲಿ ಎರಡು ರನ್‌ ಬಂದವು.

ನಂತರ ಮೂರನೇ ಎಸೆತದಲ್ಲಿ ಮತ್ತೊಂದು ಸಿಕ್ಸರ್ ಬಾರಿಸಿದ ಅಲೆನ್ ಮುಂದಿನ ಎರಡು ಎಸೆತಗಳಲ್ಲಿ ಸತತ 2 ಬೌಂಡರಿಗಳನ್ನು ಬಾರಿಸಿದರು. ಹೀಗಾಗಿ, ಪ್ಯಾಟ್ ಕಮ್ಮಿನ್ಸ್ ಅವರ ಈ ಓವರ್‌ನಲ್ಲಿ ಕೆಕೆಆರ್ ಒಟ್ಟು 27 ರನ್‌ ಕಲೆಹಾಕಿತು. ಇದು ಪ್ಯಾಟ್ ಕಮ್ಮಿನ್ಸ್ ಅವರ 15 ವರ್ಷಗಳ, 174 ಪಂದ್ಯಗಳ ಟಿ20 ವೃತ್ತಿಜೀವನದ ಅತ್ಯಂತ ದುಬಾರಿ ಓವರ್ ಎನಿಸಿಕೊಂಡಿತು.

Source link

ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’: ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್; ರೈತರು ಖುಷಿಯೋ ಖುಷಿ – Kannada News | Chikkaballapur Grapes: Dil Khush Variety Boosts Farmer Profits with High Demand

ಚಿಕ್ಕಬಳ್ಳಾಪುರ ಜಿಲ್ಲೆಯೂ ಹಣ್ಣು, ತರಕಾರಿ ಮತ್ತು ದ್ರಾಕ್ಷಿ ಬೆಳೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದೆ. ಈ ಬಾರಿ ಜಿಲ್ಲೆಯಾದ್ಯಂತ ಬರೋಬ್ಬರಿ 5,000 ಹೆಕ್ಟೇರ್ ಪ್ರದೇಶದಲ್ಲಿ ವೈವಿಧ್ಯಮಯ ದ್ರಾಕ್ಷಿ ಬೆಳೆಯಲಾಗುತ್ತಿದೆ. ದಿಲ್ ಖುಷ್​ ಎಂಬ ವಿಶೇಷ ತಳಿಗೆ ಸದ್ಯ ಭಾರೀ ಬೇಡಿಕೆ ಬಂದಿದೆ. ಹಾಗಾಗಿ ರೈತರು ಮಂದಹಾಸ ಬೀರಿದ್ದಾರೆ.

ರಣ ಬಿಸಿಲಿನ ನಡುವೆಯೂ, ವಿಶೇಷವಾಗಿ ‘ದಿಲ್ ಖುಷ್’ ತಳಿಯ ದ್ರಾಕ್ಷಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದೆ. ಸದ್ಯ ಈ ವಿಶಿಷ್ಟ ತಳಿಯ ದ್ರಾಕ್ಷಿಯು ಮಾರುಕಟ್ಟೆಯಲ್ಲಿ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ.

ದ್ರಾಕ್ಷಿ ಬೆಳೆಗಾರರಿಗೆ ಈ ವರ್ಷ ಉತ್ತಮ ಬೆಲೆ ಸಿಗುತ್ತಿದೆ. ವರ್ತಕರು ಸ್ವತಃ ತೋಟಗಳಿಗೆ ಬಂದು, ರೈತರಿಗೆ ಪ್ರತಿ ಕೆ.ಜಿ ದ್ರಾಕ್ಷಿಗೆ 50 ರೂಪಾಯಿಯಂತೆ ನೀಡಿ ನೇರವಾಗಿ ಖರೀದಿಸುತ್ತಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ ದ್ರಾಕ್ಷಿಯ ಇಳುವರಿ ಕಡಿಮೆಯಾಗಿರುವುದರಿಂದ, ಅಲ್ಲಿನ ದೊಡ್ಡ ದೊಡ್ಡ ವರ್ತಕರು ಇದೀಗ ಚಿಕ್ಕಬಳ್ಳಾಪುರದ ರೈತರತ್ತ ಮುಖ ಮಾಡಿದ್ದಾರೆ. ಇದು ಸ್ಥಳೀಯ ರೈತರಿಗೆ ವರದಾನವಾಗಿದ್ದು, ಜಣ ಜಣ ಕಾಂಚಣ ಎಣಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದ ಈ ದ್ರಾಕ್ಷಿಗೆ ಬಾಂಗ್ಲಾದೇಶ ಸೇರಿದಂತೆ ನೆರೆಯ ದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಹೀಗಾಗಿ ವ್ಯಾಪಾರಿಗಳು ರೈತರನ್ನು ಹುಡುಕಿಕೊಂಡು ಬಂದು ಮುಂಗಡ ಹಣ ನೀಡಿ ತೋಟದಲ್ಲೇ ದ್ರಾಕ್ಷಿಯನ್ನು ಖರೀದಿಸುತ್ತಿದ್ದಾರೆ.

ದ್ರಾಕ್ಷಿ ಬೆಳೆಗಾರರಾದ ವೆಂಕಟರೆಡ್ಡಿ ಮತ್ತು ಚಿಕ್ಕನಾಗವಳ್ಳಿ ಗ್ರಾಮದ ಕೊಂಡಪ್ಪನವರಂತಹ ಅನೇಕ ರೈತರು, ಈ ವರ್ಷ ತಮ್ಮ ಬೆಳೆಗೆ ಸಿಕ್ಕಿರುವ ಉತ್ತಮ ಬೆಲೆ ಮತ್ತು ಬೇಡಿಕೆಯನ್ನು ಕಂಡು ಸಂತಸಗೊಂಡಿದ್ದಾರೆ.

Published On – 8:07 pm, Sun, 3 May 26

Source link

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Delhi Fire Tragedy: PM Modi Announces Rs 2 Lakh Compensation for Vivek Vihar Victims

ನವದೆಹಲಿ, ಮೇ 3: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಬಹುಮಹಡಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire accident) ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಭಾನುವಾರ ಬೆಳಗಿನ ಜಾವ ನಡೆದ ಈ ದಾರುಣ ಘಟನೆಯಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಈ ಧನಸಹಾಯವನ್ನು ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನೂ ಪ್ರಧಾನಿ ಘೋಷಿಸಿದ್ದಾರೆ. ಘಟನೆಯ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮೋದಿ ಅವರು, “ದೆಹಲಿಯ ಅಗ್ನಿ ಅವಘಡ ಹೃದಯ ವಿದ್ರಾವಕವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ?

ಒಂದೇ ಕುಟುಂಬದ ಐವರು ಸಾವು

ವಿವೇಕ್ ವಿಹಾರ್‌ನ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಲ್ಲಿ ಒಂದೂವರೆ ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಎರಡನೇ ಮತ್ತು ಮೂರನೇ ಮಹಡಿಯಲ್ಲಿದ್ದ ಕುಟುಂಬಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ.

ಕಟ್ಟಡದ ಕಿಟಕಿಗಳಿಗೆ ಅಳವಡಿಸಲಾಗಿದ್ದ ಬಲಿಷ್ಠ ಕಬ್ಬಿಣದ ಗ್ರಿಲ್‌ಗಳು ಮತ್ತು ಮೆಟ್ಟಿಲುಗಳ ಬಾಗಿಲು ಲಾಕ್ ಆಗಿದ್ದರಿಂದ ಒಳಗಿದ್ದವರಿಗೆ ಹೊರಬರಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಸಿಬ್ಬಂದಿ ಗ್ರಿಲ್‌ಗಳನ್ನು ಕತ್ತರಿಸಿ ಒಳಪ್ರವೇಶಿಸುವಷ್ಟರಲ್ಲಿ ಹಲವರು ಉಸಿರುಗಟ್ಟಿ ಮೃತಪಟ್ಟಿದ್ದರು.

ಪ್ರಾಥಮಿಕ ತನಿಖೆಯ ಪ್ರಕಾರ, ಕಟ್ಟಡದ ಕೆಳಭಾಗದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ 14 ಅಗ್ನಿಶಾಮಕ ವಾಹನಗಳು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದವು.

ಇದನ್ನೂ ಓದಿ: ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಮೇ ಮಧ್ಯಭಾಗದಲ್ಲೇ ಮುಂಗಾರು ಎಂಟ್ರಿ!

ಬೆಂಕಿಯಿಂದ ರಕ್ಷಿಸಲ್ಪಟ್ಟ ಉಳಿದವರನ್ನು ಹತ್ತಿರದ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡದ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

SRH vs KKR: ಬಲಿಷ್ಠ ಸನ್‌ರೈಸರ್ಸ್​ಗೆ ಸೋಲುಣಿಸಿದ ಕೆಕೆಆರ್ – Kannada News | IPL 2026 Match 45: KKR Dominates SRH at Home, Secures Third Victory

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR)​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಅವರ ನೆಲದಲ್ಲೇ ಮಣಿಸಿದ ಕೆಕೆಆರ್ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಸತತ ಗೆಲುವುಗಳಿಂದ ಬೀಗುತ್ತಿದ್ದ ಸನ್‌ರೈಸರ್ಸ್ ಲೀಗ್​ನಲ್ಲಿ 4ನೇ ಸೋಲು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 165 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು 18.2 ಓವರ್​ಗಳಲ್ಲಿ ಜಯದ ನಗೆ ಬೀರಿತು.

ಸನ್‌ರೈಸರ್ಸ್​ಗೆ ಸ್ಫೋಟಕ ಆರಂಭ

ಈ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇದಕ್ಕೆ ಪೂರಕವಾಗಿ ತಂಡಕ್ಕೆ ಉತ್ತಮ ಆರಂಭವೂ ಸಿಕ್ಕಿತು. ಅಭಿಷೇಕ್ ಹಾಗೂ ಹೆಡ್ ಮೊದಲ ವಿಕೆಟ್​ಗೆ 44 ರನ್​​ಗಳ ಜೊತೆಯಾಟವನ್ನು ಹಂಚಿಕೊಂಡರು. ಆ ನಂತರ ಹೆಡ್ ಹಾಗೂ ಕಿಶನ್ ತಂಡವನ್ನು ಶತಕದ ಗಡಿಯನ್ನು ದಾಟಿಸಿದರು. ಆದರೆ ಇವರಿಬ್ಬರ ವಿಕೆಟ್ ಪತನದ ಬಳಿಕ ಸನ್‌ರೈಸರ್ಸ್ ತಂಡದ ಇನ್ನಿಂಗ್ಸ್ ಕುಸಿಯಿತು. ಇದರ ಪರಿಣಾಮವಾಗಿ ತಂಡವು 19 ಓವರ್‌ಗಳಲ್ಲಿ 165 ರನ್‌ಗಳಿಗೆ ಆಲೌಟ್ ಆಯಿತು. ತಂಡದ ಪರ ಅಭಿಷೇಕ್ ಶರ್ಮಾ ಕೇವಲ 15 ರನ್‌ಗಳಿಗೆ ಔಟಾದರೆ, ಟ್ರಾವಿಸ್ ಹೆಡ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ 28 ಎಸೆತಗಳಲ್ಲಿ 61 ರನ್ ಗಳಿಸಿದರು.

ಕೈಕೊಟ್ಟ ಮಧ್ಯಮ ಕ್ರಮಾಂಕ

ಆದರೆ ಹೆಡ್ ವಿಕೆಟ್ ಪತನದ ಬಳಿಕ ಪೆವಿಲಿಯನ್ ಪರೇಡ್ ಶುರುವಾಯಿತು. ಹೀಗಾಗಿ ಸನ್‌ರೈಸರ್ಸ್ ತಂಡವು ತನ್ನ ಕೊನೆಯ ಒಂಬತ್ತು ವಿಕೆಟ್‌ಗಳನ್ನು ಕೇವಲ 60 ರನ್‌ಗಳಿಗೆ ಕಳೆದುಕೊಂಡಿತು. ಕೋಲ್ಕತ್ತಾ ನೈಟ್ ರೈಡರ್ಸ್ ಪರ ವರುಣ್ ಚಕ್ರವರ್ತಿ ಮೂರು ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದರೆ, ಸುನಿಲ್ ನರೈನ್ ಮತ್ತು ಕಾರ್ತಿಕ್ ತ್ಯಾಗಿ ತಲಾ 2 ವಿಕೆಟ್ ಪಡೆದರು. ವೈಭವ್ ಅರೋರಾ, ಕ್ಯಾಮರೂನ್ ಗ್ರೀನ್ ಮತ್ತು ಅನುಕುಲ್ ರಾಯ್ ತಲಾ ಒಂದು ವಿಕೆಟ್ ಪಡೆದರು.

ಸುಲಭವಾಗಿ ಗೆದ್ದ ಕೆಕೆಆರ್

ಈ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಫಿನ್ ಅಲೆನ್ 13 ಎಸೆತಗಳಲ್ಲಿ 29 ರನ್ ಗಳಿಸಿದರು ಆದರೆ ಪ್ಯಾಟ್ ಕಮ್ಮಿನ್ಸ್ ಅವರನ್ನು ಔಟ್ ಮಾಡಿದರು. ನಂತರ ಅಜಿಂಕ್ಯ ರಹಾನೆ ಮತ್ತು ಅಂಗ್‌ಕ್ರಿಶ್ ರಘುವಂಶಿ ಎಚ್ಚರಿಕೆಯಿಂದ ಆಟವಾಡಿ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದರು. ರಹಾನೆ 36 ಎಸೆತಗಳಲ್ಲಿ 43 ರನ್ ಗಳಿಸಿದರೆ, ಅಂಗ್‌ಕ್ರಿಶ್ ರಘುವಂಶಿ 47 ಎಸೆತಗಳಲ್ಲಿ 59 ರನ್ ಗಳಿಸಿದರು. ರಿಂಕು ಸಿಂಗ್ ಕೂಡ 11 ಎಸೆತಗಳಲ್ಲಿ ಅಜೇಯ 22 ರನ್ ಗಳಿಸಿ ಕೆಕೆಆರ್ ತಂಡ 18.2 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿ ತಲುಪಲು ಸಹಾಯ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:13 pm, Sun, 3 May 26

Source link

ಕರ್ನಾಟಕ ಹವಾಮಾನ ವರದಿ: ಇಂದಿನಿಂದ ಮೇ 9ರವರೆಗೆ ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆ – Kannada News | Karnataka Rain Alert: IMD Forecasts Thunderstorms in Bengaluru, South Interior from May 3–9

ಬೆಂಗಳೂರು, ಮೇ 03: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪದ ನಡುವೆಯೇ ಹವಾಮಾನ ಇಲಾಖೆ ಮಳೆ (Rain) ಮುನ್ಸೂಚನೆ ನೀಡಿದೆ. ಮೇ 3ರಿಂದ 09ರವಗರೆ ಬೆಂಗಳೂರು (bangaluru) ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಮತ್ತು ಬಿರುಗಾಳಿ ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಗುಡುಗು-ಮಿಂಚಿನ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ!

ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರುವುದಿಲ್ಲ. ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಮೇ 5ರ ನಂತರ ಹವಾಮಾನದಲ್ಲಿ ಬದಲಾವಣೆ 

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯ ಒಣಹವೆ ಇದ್ದರೂ, ಮೇ 5ರಿಂದ ಪರಿಸ್ಥಿತಿಯಲ್ಲಿ ಬದಲಾವಣೆಯಾಗಲಿದೆ. ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

ಒಟ್ಟಾರೆಯಾಗಿ, ರಾಜ್ಯದಲ್ಲಿ ಮಳೆ ಮತ್ತು ಒಣಹವೆಯ ಮಿಶ್ರ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜನರು ಗುಡುಗು-ಮಿಂಚಿನ ಬಗ್ಗೆ ಜಾಗರೂಕರಾಗಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:18 pm, Sun, 3 May 26

Source link

ಪಶ್ಚಿಮ ಬಂಗಾಳದ ಈ ಒಂದು ಕ್ಷೇತ್ರಕ್ಕೆ ಮಾತ್ರ ಫಲಿತಾಂಶ ನಾಳೆ ಇಲ್ಲ; ಮೇ 21ಕ್ಕೆ ಮರುಮತದಾನ, ಮೇ 24ಕ್ಕೆ ಮತ ಎಣಿಕೆ – Kannada News | West Bengal Election Results: Falta Constituency Vote Count Delayed Due to Re polling

ಕೋಲ್ಕತಾ, ಮೇ 3: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಮ್ ಮತ್ತು ಪುದುಚೆರಿಯ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ ಸೋಮವಾರ (ಮೇ 4) ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಸಖತ್ ಜಿದ್ದಾಜಿದ್ದಿ ನಡೆಯಿತು. ಹಲವೆಡೆ ಹಿಂಸಾಚಾರಗಳಾದವು. ಹಲವು ಬೂತ್​ಗಳಲ್ಲಿ ಮರುಮತದಾನ ಕೂಡ ಮಾಡಲಾಗಿದೆ. ಆದರೂ ಕೂಡ ಮೇ 4ರಂದು ಪಶ್ಚಿಮ ಬಂಗಾಳದ ಎಲ್ಲಾ ಕ್ಷೇತ್ರಗಳಿಗೂ ಫಲಿತಾಂಶ ಪ್ರಕಟವಾಗುತ್ತಿಲ್ಲ. ಒಂದು ಕ್ಷೇತ್ರದ ಫಲಿತಾಂಶ ಬಾಕಿ ಉಳಿಯಲಿದೆ.

ಸೌತ್ 24 ಪರಗಣ ಜಿಲ್ಲೆಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ಮೇ 21ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮೇ 24ರಂದು ಫಲಿತಾಂಶ ಪ್ರಕಟವಾಗಲಿದೆ. ಬಂಗಾಳದ ಉಳಿದ 293 ಕ್ಷೇತ್ರಗಳಿಗೆ ಮೇ 4ರಂದು ಫಲಿತಾಂಶ ಪ್ರಕಟವಾಗಿ, ಮೂರು ವಾರಗಳ ನಂತರ ಫಾಲ್ಟಾದ ಫಲಿತಾಂಶ ಹೊರಬೀಳುತ್ತದೆ.

ಇದನ್ನೂ ಓದಿ: ಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ?

ಫಾಲ್ಟಾ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ಮತದಾನ ಆಗಿತ್ತು. ಅಂದು ಕ್ಷೇತ್ರದ ಹಲವೆಡೆ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಹಿಂಸಾಚಾರಗಳಾದ ವರದಿಯಾಗಿತ್ತು. ಈ ಕ್ಷೇತ್ರದಲ್ಲಿ ಟಿಎಂಸಿಯಿಂದ ಜಹಾಂಗೀರ್ ಖಾನ್, ಬಿಜೆಪಿಯಿಂದ ದೇಬಂಗಶು ಪಾಂಡ, ಕಾಂಗ್ರೆಸ್​ನಿಂದ ಅಬ್ದುರ್ ರಜಾಕ್ ಮೊಲ್ಲಾ ಮತ್ತು ಸಿಪಿಐಎಂನಿಂದ ಸಂಭುನಾಥ್ ಕುರ್ಮಿ ಮೊದಲಾದವರು ಸ್ಪರ್ಧಿಸಿದ್ದಾರೆ. ಪರಸ್ಪರ ಆರೋಪ, ಪ್ರತ್ಯಾರೋಪಗಳು ಜೋರಾಗಿ ನಡೆದಿವೆ.

ಕ್ಷೇತ್ರದ ಕೆಲ ಮತಗಟ್ಟೆಗಳಲ್ಲಿ ಇವಿಎಂ ಮೆಷೀನ್​ಗಳಲ್ಲಿ ಬಿಜೆಪಿ ಪಕ್ಷದ ಚಿಹ್ನೆಯನ್ನು ಟೇಪ್​ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಫಾಲ್ಟಾದ 144 ಮತ್ತು 189ನೇ ಮತಗಟ್ಟೆಯಲ್ಲಿ ಇದು ಆಗಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಪಾದಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ನಡೆಯಲಿಲ್ಲ ಬಿಜೆಪಿ ಕಮಾಲ್; ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ 

ಬಹಳ ಸೂಕ್ಷ್ಮವೆಂದು ಪರಿಗಣಿಸಲಾಗಿರುವ ಫಾಲ್ಟ ಕ್ಷೇತ್ರದಲ್ಲಿ ಮರುಮತದಾನಕ್ಕಾಗಿ ಎಲ್ಲಾ ರೀತಿಯಲ್ಲೂ ಸಜ್ಜಾಗಿರುವಂತೆ ಮತ್ತು ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಆದೇಶಿಸಿದೆ. ಬಂಗಾಳದ ಇನ್ನೂ ಕೆಲ ಕ್ಷೇತ್ರಗಳ ಕೆಲ ಬೂತ್​ಗಳಲ್ಲಿ ಮರುಮತದಾನಗಳಾಗಿವೆ. ಫಾಲ್ಟಾ ಹೊರತುಪಡಿಸಿ ಉಳಿದ 293 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗುತ್ತದೆ. ಅಸ್ಸಾಂ, ತಮಿಳುನಾಡು, ಕೇರಳ, ಪುದುಚೆರಿಯ ಎಲ್ಲಾ ಕ್ಷೇತ್ರಗಳಿಗೂ ನಾಳೆಯೇ ಫಲಿತಾಂಶ ಪ್ರಕಟವಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

GT vs PBKS IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಐಪಿಎಲ್ 19 ನೇ ಸೀಸನ್‌ನ ಡಬಲ್ ಹೆಡರ್‌ನ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್‌ಗೆ ಇದು ಒಂಬತ್ತನೇ ಪಂದ್ಯ ಮತ್ತು ಗುಜರಾತ್‌ಗೆ ಹತ್ತನೇ ಪಂದ್ಯವಾಗಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್, ಗುಜರಾತ್ ತಂಡವನ್ನು ಸೋಲಿಸಿತ್ತು. ಆದ್ದರಿಂದ, ಗುಜರಾತ್ ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ನೋಡುವುದು ಮುಖ್ಯವಾಗಿರುತ್ತದೆ.

Source link

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​ – Kannada News | BJP Candidate Jeevaraj advocate Sends Legal Notice to Election Officer Over Announce Sringeri assembly Re courting Result

ಬೆಂಗಳೂರು/ಚಿಕ್ಕಮಗಳೂರು) ಮೇ 03): ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (Sringeri assembly Re courting) ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. ಹೌದು.. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಅವರು ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಬಿಜೆಪಿಯ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಆದ್ರೆ, ಚುನಾವಣಾಧಿಕಾರಿ, ಫಲಿತಾಂಶವನ್ನು ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ತಕ್ಷಣ ಫಲಿತಾಂಶ ಘೋಷಣೆ ಕೋರಿ ಚುನಾವಣಾಧಿಕಾರಿಗೆ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಲೀಗಲ್​ ನೋಟಿಸ್ ನೀಡಿದ್ದಾರೆ.

ನ್ಯಾಯಾಂಗ ನಿಂದನೆ ಕೇಸ್ ಎಚ್ಚರಿಕೆ

ಕರ್ನಾಟಕ ಹೈಕೋರ್ಟ್ ಆದೇಶದಂತೆ ನಿನ್ನೆ (ಮೇ 02) ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ಮತ್ತೊಮ್ಮೆ ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಮಾತ್ರ ಪ್ರಕಟಿಸಿಲ್ಲ. ಇದರಿಂದ ತಕ್ಷಣ ಫಲಿತಾಂಶ ಘೋಷಣೆ ಕೋರಿ ಜೀವರಾಜ್ ಪರ ವಕೀಲೆ ಡಾ.ವಂದನಾ.ಪಿ.ಎಲ್‌ ಅವರು ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.​​ ಹೈಕೋರ್ಟ್ ಅಂಚೆ‌ ಮತಪತ್ರಗಳ ಎಣಿಕೆ ನಂತರ ಫಲಿತಾಂಶ ಘೋಷಿಸುವಂತೆ ಆದೇಶಿಸಿದೆ. ಆದರೆ ಫಲಿತಾಂಶ ಘೋಷಣೆ ವಿಳಂಬ ಮಾಡಲಾಗುತ್ತಿದೆ. ವಿಳಂಬ ಮಾಡಿದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಲೀಗಲ್ ನೋಟಿಸ್​​ ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ನೋಡಿ: ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ

ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾ

ಫಲಿತಾಂಶವೇ ಈಗ ಅದಲುಬದಲಾಗೋ ಲಕ್ಷಣ ಕಾಣಿಸುತ್ತಿಲ್ಲ. ಯಾಕಂದ್ರೆ, ಕಳೆದ ಬಾರಿಯ ಎಲೆಕ್ಷನ್​ನಲ್ಲಿ ಕಾಂಗ್ರೆಸ್​ನ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದುಬಿಗಿದ್ದರು. ಸ್ವಲ್ಪ ಮತಗಳ ಅಂತರದಿಂದ ಬಿಜೆಪಿಯ ಜೀವರಾಜ್ ಸೋತಿದ್ದರು. ಆದ್ರೆ ಅಂಚೆ ಮತಗಳಲ್ಲಿ ಹೆಚ್ಚು ಮತ ಪಡೆದಿದ್ದ ಜೀವರಾಜ್ ಅಸಿಂಧು ಆಗಿದ್ದ 279 ಮತಗಳನ್ನ ಮರು ಎಣಿಕೆ ಮಾಡುವಂತೆ ಪಟ್ಟು ಹಿಡಿದಿದ್ದರು. ಮನವಿಗೆ ಸ್ಪಂದಿಸದ ಅಂದಿನ ಚುನಾವಣಾಧಿಕಾರಿ ಫಲಿತಾಂಶ ಘೋಷಣೆ ಮಾಡಿದ್ರು. ಹೀಗಾಗಿ ಜೀವರಾಜ್ ಬೇರೆ ದಾರಿಯಿಲ್ಲದೆ ಕಾನೂನು ಹೋರಾಟ ನಡೆಸಿದ್ರು. ಸತತ ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಹೈ ಕೋರ್ಟ್ ಸೂಚನೆಯಂತೆ ನಿನ್ನೆ (ಮೇ 02) ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು. ಮತ ಎಣಿಕೆ ಆರಂಭವಾದಾಗಿನಿಂದ ಮುಗಿಯುವವರೆಗೂ ಸಾಕಷ್ಟು ಗೊಂದಲ ಹಾಗೂ ಹೈಡ್ರಾಮಾಗೆ ಎಡೆಮಾಡಿಕೊಟ್ಟಿತ್ತು. ಎರಡು ಪಕ್ಷಗಳ ನಾಯಕರು ತಾವೇ ಗೆದ್ದಿರೋದಾಗಿ ಘೋಷಿಸಿಕೊಂಡ್ರು.

ಆದ್ರೆ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ 201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್‌ಗೆ 52 ಮುನ್ನಡೆ ಸಿಕ್ಕಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮತಚೋರಿಯ ತಿರುಗುಬಾಣ ಬಿಟ್ಟಿದ್ದಾರೆ. ಮತಚೋರಿ ಅಂತಿದ್ದವರಿಂದ್ಲೇ ಮತಗಳ್ಳತನ ನಡೆದಿದೆ ಎಂದು ಕೇಸರಿ ಪಡೆ ಆರೋಪ ಮಾಡ್ತಿದೆ. ಜೊತೆಜೊತೆಗೆ ಶೃಂಗೇರಿಯ ಫಲಿತಾಂಶವನ್ನ ಪ್ರಕಟಿಸದಂತೆ ತಡೆಯಲಾಗ್ತಿದೆ ಎಂದು ಆರೋಪಿಸಿದೆ.

ಆದ್ರೆ ಕಾಂಗ್ರೆಸ್ ನಾಯಕರು, ಬಿಜೆಪಿ ವಿರುದ್ಧ ಪ್ರತ್ಯಾರೋಪ ಮಾಡಿದ್ದು, ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡು, ಅಪರಾಧ ಎಸಗಿದೆ. ಮತಗಳ ಟ್ಯಾಂಪರಿಂಗ್ ಆಗಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಫಲಿತಾಂಶ ಘೋಷಣೆ ಮಾಡದ ಸಂಬಂಧ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ, ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಲಾಗಿದೆ. ಆದ್ರೆ, ಫಲಿತಾಂಶ ಘೋಷಿಸುವಂತೆ ಆದೇಶದಲ್ಲಿ ಇಲ್ಲ. ಹೀಗಾಗಿ ಮರು ಮತ ಎಣಿಕೆ ವಿವರವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಸಮಾಜಾಷಿಯಿ ನೀಡಿದ್ದಾರೆ.

ಇನ್ನು ಅಂಚೆ ಮತಪತ್ರಗಳ ಮರುಎಣಿಕೆ ನಂತರ ಫಲಿತಾಂಶ ಘೋಷಿಸದ್ದಕ್ಕೆ ಚುನಾವಣಾಧಿಕಾರಿಗೆ ಲೀಗಲ್ ನೋಟಿಸ್ ನೀಡಲಾಗಿದ್ದು, ಮುಂದೆ ಏನಾಗಿದೆ ಎನ್ನುವುದ್ನು ಕಾದುನೋಡಬೇಕಿದೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಮನೀಷ್ ಪಾಂಡೆ

Source link

Exit mobile version