ವೈದ್ಯರ ಎಡವಟ್ಟು: ಹಲ್ಲು ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ ಕೋಮಾಕ್ಕೆ – Kannada News | Anesthesia Mishap: Kalaburagi Woman in Coma After Tooth Pain Treatment
ಕಲಬುರಗಿ ಫೆ.19: ಹಲ್ಲು ನೋವಿನ ಸಮಸ್ಯೆಯೆಂದು ಆಸ್ಪತ್ರೆಗೆ ಹೋದ ಮಹಿಳೆಯೊಬ್ಬರು ಇಂದು ಸಾವಿನೊಂದಿಗೆ ಹೋರಾಡುತ್ತಿದ್ದಾರೆ. ಅನೆಸ್ತೇಶಿಯಾ (Anesthesia) ಇಂಜೆಕ್ಷನ್ ನೀಡಿದ ಕೆಲವೇ ಸಮಯದಲ್ಲಿ ಮಹಿಳೆ ಕೋಮಾಗೆ ಜಾರಿದ್ದು, ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ನಿವಾಸಿ ನಾಜಿಯಾ ಬೇಗಂ ಅವರು ತೀವ್ರ ಹಲ್ಲು ನೋವಿನಿಂದ ಬಳಲುತ್ತಿದ್ದರು. ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಚಿಕಿತ್ಸೆಯ ಭಾಗವಾಗಿ ವೈದ್ಯರು ಅರಿವಳಿಕೆ ಇಂಜೆಕ್ಷನ್ ನೀಡಿದ್ದರು. ಆದರೆ, ಇಂಜೆಕ್ಷನ್ ನೀಡಿದ ಕೆಲವೇ ನಿಮಿಷಗಳಲ್ಲಿ ನಾಜಿಯಾ…